Tag: Bigg Boss Kannada 12

  • ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    – ಅರಣ್ಯ ಸಚಿವ ಈಶ್ವರ ಖಂಡ್ರೆ ಸಮರ್ಥನೆ ಏನು?

    ರಾಮನಗರ: ಜಿಲ್ಲೆಯ ಬಿಡದಿ (Bidadi) ಬಳಿಯಿರುವ ವೆಲ್ಸ್ ಸ್ಟುಡಿಯೋಸ್ & ಎಂಟರ್‌ಟೈನ್ಮೆಂಟ್ ಪ್ರೈ.ಲಿ. (Jollywood Studios) ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

    ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ (Bigg Boss Kannada 12) ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಇಲ್ಲಿ ಎಸ್‌ಟಿಪಿ ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ. ಜನರೇಟರ್ ಸೆಟ್‌ಗಳಿದ್ದು, ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ, ಮಂಡಳಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.

  • ಈ ಬಾರಿ ಬಿಗ್ ಬಾಸ್ ಮನೆಗೆ ಹೋಗುವ ಕಂಟೆಸ್ಟೆಂಟ್‌ ಯಾರ್ ಗೊತ್ತಾ? – ಇಲ್ಲಿದೆ ನೋಡಿ ಫೈನಲ್ ಲಿಸ್ಟ್

    ಈ ಬಾರಿ ಬಿಗ್ ಬಾಸ್ ಮನೆಗೆ ಹೋಗುವ ಕಂಟೆಸ್ಟೆಂಟ್‌ ಯಾರ್ ಗೊತ್ತಾ? – ಇಲ್ಲಿದೆ ನೋಡಿ ಫೈನಲ್ ಲಿಸ್ಟ್

    ನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12 (Bigg Boss 12) ಶುರು ಆಗೋಕೆ ಕೌಂಟ್‌ಡೌನ್ ಶುರುವಾಗಿದೆ. ಈ ಬಾರಿ ಬಿಗ್ ಬಾಸ್ ಮನೆಗೆ ಯಾರ್ ಹೋಗಬಹುದು ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿದೆ. ಕಿಚ್ಚ ಸುದೀಪ್ (Kichcha Sudeep) ನಿರೂಪಣೆಯಲ್ಲಿ ಮೂಡಿ ಬರ್ತಿರುವ ಬಿಗ್ ಬಾಸ್ ಮನೆಗೆ ಹೋಗುವ ಕೆಲವರ ಸಂಭಾವ್ಯ ಪಟ್ಟಿ ಸದ್ಯಕ್ಕೆ ಲಭ್ಯವಾಗಿದೆ.

    ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಓಪನಿಂಗ್‌ಗೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಬಾರಿಯ ಬಿಗ್ ಬಾಸ್ ಮನೆಗೆ ಹೋಗೋ 18 ಕಂಟೆಸ್ಟೆಂಟ್‌ಗಳು ಯಾರಿರಬಹುದು ಅನ್ನೋ ಕುತೂಹಲ ಮತ್ತಷ್ಟು ಜಾಸ್ತಿಯಾಗಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌

    ಬಿಗ್ ಬಾಸ್ ಸೀಸನ್ 12 ಸಂಭಾವ್ಯ ಪಟ್ಟಿಯಲ್ಲಿ ಖಳನಟ ಕಾಕ್ರೋಚ್ ಸುಧೀ ಹೆಸರು ಕೇಳಿಬಂದಿದೆ. ನಿರ್ಮಾಪಕ ಕೆ ಮಂಜು ಅವರ ಪುತ್ರ ನಟ ಶ್ರೇಯಸ್ ಕೆ. ಮಂಜು, ನಿರೂಪಕಿ ಹಾಗೂ ನಟಿ ಜಾಹ್ನವಿ ಕಾರ್ತಿಕ್, ರಿಯಾಲಿಟಿ ಶೋ ಮೂಲಕ ಗಮನ ಸೆಳೆದ ಹಾಸ್ಯನಟ ಗಿಲ್ಲಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರಂತೆ. ಇನ್ನು ಮನದ ಕಡಲು ನಟಿ ರಾಶಿಕ ಶೆಟ್ಟಿ, ಕರವೇ ರಾಜ್ಯ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ, ಕೊತ್ತಲವಾಡಿ ಸಿನಿಮಾದ ನಾಯಕಿ ಕಾವ್ಯ ಶೈವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ನಟಿ ಸ್ಪಂದನ ಸೋಮಣ್ಣ, ಆರ್.ಜೆ. ಅಮಿತ್, ನಟಿ ಮೌನ ಗುಡ್ಡೆಮನೆ, ಡಾಗ್ ಸತೀಶ್, ಮಂಜು ಭಾಷಿಣಿ ಕಿರುತೆರೆ ನಟಿ ಇನ್ನು ಮುಂತಾದ ಹೆಸರುಗಳು ಕೇಳಿಬಂದಿವೆ. ಆದರೆ, ಇದು ಅಧಿಕೃತ ಪಟ್ಟಿಯಲ್ಲ. ಈ ಪಟ್ಟಿಯಲ್ಲಿರುವ ಹೆಸರುಗಳು ಬಹುತೇಕ ಖಚಿತ ಎನ್ನಲಾಗ್ತಿದೆ. ಆದರೆ ಅಧಿಕೃತವಾಗಿ ಘೋಷಣೆಗೆ ಇನ್ನು ಕೆಲವು ಗಂಟೆಗಳು ಕಾಯಬೇಕಿದೆ.

  • ʻಬಿಗ್ ಬಾಸ್ ಸೀಸನ್‌-12ʼನ ಬಿಗ್‌ ನ್ಯೂಸ್‌ – ಲಾಂಚ್‌ ಡೇಟ್‌ ಅನೌನ್ಸ್‌ ಮಾಡಿದ ಕಿಚ್ಚ ಸುದೀಪ್

    ʻಬಿಗ್ ಬಾಸ್ ಸೀಸನ್‌-12ʼನ ಬಿಗ್‌ ನ್ಯೂಸ್‌ – ಲಾಂಚ್‌ ಡೇಟ್‌ ಅನೌನ್ಸ್‌ ಮಾಡಿದ ಕಿಚ್ಚ ಸುದೀಪ್

    ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ʻಬಿಗ್‌ ಬಾಸ್‌ ಕನ್ನಡʼ ತನ್ನ 12ನೇ (Bigg Boss Kannada 12) ಆವೃತ್ತಿಗೆ ಸಜ್ಜಾಗಿದೆ. ಇತ್ತೀಚೆಗೆ ಲೋಗೋ ಲಾಂಚ್‌ ಆಗಿದ್ದು, ಈ ಸೀಸನ್‌ ಯಾವಾಗ ಶುರುವಾಗುತ್ತದೆ ಅನ್ನೋ ಕ್ಯೂರಿಯಾಸಿಟಿ ಪ್ರೇಕ್ಷಕರಲ್ಲಿ ಇದ್ದೇ ಇತ್ತು. ಈ ಹೊತ್ತಿನಲ್ಲೇ ಬಿಗ್‌ ಬಾಸ್‌ 12 ಪ್ರಾರಂಭದ ದಿನಾಂಕವನ್ನ ಖುದ್ದು ಕಿಚ್ಚ ಸುದೀಪ್‌ (Kichcha Sudeep) ಅವರೇ ಘೋಷಿಸಿದ್ದಾರೆ. ಯಾವಾಗ ಅಂತೀರಾ? ಮಾಹಿತಿ ಇಲ್ಲಿದೆ ನೋಡಿ..

    ಯೆಸ್‌. ಕಿಚ್ಚ ಸುದೀಪ್ ನಿರೂಪಣೆಯ ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12’ ರಿಯಾಲಿಟಿ ಶೋಗೆ ದಿನಗಣನೆ ಶುರುವಾಗಿದೆ. ಈ ಸೀಸನ್‌ ಅಭಿಮಾನಿಗಳಲ್ಲಿ ಅಪಾರ ಕುತೂಹಲವನ್ನ ಹುಟ್ಟುಹಾಕಿದೆ. ಹೊಸ ಥೀಮ್‌, ರೋಚಕ ಸ್ಪರ್ಧಿಗಳು ಮತ್ತು ಟ್ವಿಸ್ಟ್‌ಗಳೊಂದಿಗೆ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡುವ ನಿರೀಕ್ಷೆಯಿದೆ. ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್‌ ರಾಮ್‌ ಚರಣ್‌

    ನಿರ್ಮಾಪಕ ಸಂದೇಶ್‌ ನಾಗರಾಜ್‌ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್‌, ಅತೀ ಶೀಘ್ರದಲ್ಲೇ ಪರದೆ ಮೇಲೆ ಸಿಕ್ತೇನೆ. ಸೆಪ್ಟೆಂಬರ್‌ 28ರಿಂದ ನಿಮಗೆ ಟಿವಿಯಲ್ಲಿ ಸಿಗುತ್ತೇನೆ. ನಿಮ್ಮ ಪ್ರೀತಿಗೆ ಥ್ಯಾಂಕ್ಯೂ, ಲವ್‌ ಯೂ ಆಲ್ ಅಂತ ಹೇಳುವ ಮೂಲಕ ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12’ರ ಪ್ರಾರಂಭ ದಿನಾಂಕವನ್ನ ರಿವೀಲ್‌ ಮಾಡಿಬಿಟ್ರು. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಿರುತೆರೆ ನಟಿ ಪ್ರಿಯಾ ಮರಾಠೆ ನಿಧನ; 38ನೇ ವಯಸ್ಸಿಗೆ ನಟಿ ದುರಂತ ಅಂತ್ಯ

    ಸಾಮಾನ್ಯವಾಗಿ ಸಪ್ಟೆಂಬರ್ ಅಂತ್ಯದಲ್ಲೇ ಕನ್ನಡದ ಬಿಗ್‌ಬಾಸ್‌ಗೆ ಪ್ರತಿವರ್ಷ ಚಾಲನೆ ಸಿಗುತ್ತಿತ್ತು. ಅದರಂತೆ ಈ ಬಾರಿಯೂ ಸಪ್ಟೆಂಬರ್‌ ಅಂತ್ಯದಲ್ಲೇ ಶುರುವಾಗಲಿದೆ. ಸಪ್ಟೆಂಬರ್ 28ರ ಭಾನುವಾರ ಕನ್ನಡದ ಬಿಗ್‌ಬಾಸ್ ಸೀಸನ್‌ಕ್ಕೆ ಚಾಲನೆ ಸಿಗಲಿದೆ. ಈ ಬಾರಿ ಯಾರೆಲ್ಲ ಕಂಟೆಸ್ಟಂಟ್ಸ್‌ ಇರ್ತಾರೆ? ಎಷ್ಟು ಮಂದಿ ಸ್ಪರ್ಧೆಯಲ್ಲಿರ್ತಾರೆ? ಏನೆಲ್ಲಾ ಬದಲಾವಣೆ ಆಗಿದೆ? ಎಲ್ಲವನ್ನೂ ಅಂದೇ ತಿಳಿದುಕೊಳ್ಳಬಹುದು. ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್‌ ರಾಮ್‌ ಚರಣ್‌