Tag: bigg bulletin
-

ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೂಡಬಿದಿರೆಯ ಆಳ್ವಾಸ್ನ 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ. ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕೆಂದು ಪಿಎಫ್ಐ ಕಾರ್ಯಕರ್ತರು ಮೂಡಬಿದ್ರೆಯಲ್ಲಿ ಪ್ರತಿಭಟನೆ ಮಾಡಿದ್ರೆ, ಡಿವೈಎಫ್ಐ ಮತ್ತು ಎಸ್ಎಫ್ಐ ಕಾರ್ಯಕರ್ತರು ಮಂಗಳೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ರು.
ಈ ಹಿನ್ನೆಲೆಯಲ್ಲಿ ಶನಿವಾರದ ಪಬ್ಲಿಕ್ ಟಿವಿ ಬಿಗ್ಬುಲೆಟಿನ್ನಲ್ಲಿ ಈ ಕುರಿತಂತೆ ಚರ್ಚೆ ನಡೀತು. ಪಬ್ಲಿಕ್ ಟಿವಿ ಪ್ರಶ್ನೆಗಳಿಗೆ ಉತ್ತರಿಸಿದ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮೋಹನ್ ಆಳ್ವ, ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ನಾನು ಕೂಡ ಆಗ್ರಹಿಸುತ್ತೇನೆ. ಅವರಿಗಷ್ಟೇ ಅಲ್ಲದೇ ನನ್ನ ಸಂಸ್ಥೆಗೂ ನ್ಯಾಯ ಬೇಕು ಅಂದ್ರು.
ಮೋಹನ್ ಆಳ್ವ ನೀಡಿದ ಉತ್ತರಕ್ಕೆ ಕಾವ್ಯಶ್ರೀಯ ತಾಯಿ ಕೂಡ ಸಹಮತ ವ್ಯಕ್ತಪಡಿಸಿದ್ರು. ನಮಗೆ ಪ್ರವೀಣ್ ಮೇಲೆ ಡೌಟ್ ಇದೆ. ತನಿಖೆ ನಡೆಯಬೇಕು ಅಂದ್ರು. ಇದೇ ವೇಳೆ ಮಾತಾಡಿದ ವಿದ್ಯಾರ್ಥಿ ಸಂಘಟನೆ ಮುಖಂಡ ದಿನಕರ್ ಶೆಟ್ಟಿ, ದೈಹಿಕ ಶಿಕ್ಷಕ ಪ್ರವೀಣ್ ರನ್ನು ಕೆಲಸದಿಂದ ತೆಗೆದುಹಾಕುವಂತೆ ಆಗ್ರಹಿಸಿದ್ರು. ಇದಕ್ಕೆ ಉತ್ತರಿಸಿದ ಆಳ್ವ, ಮೊನ್ನೆಯೇ ಆ ಕೆಲಸ ಮಾಡಿದ್ದೇನೆ ಅಂದ್ರು.
ಇದನ್ನೂ ಓದಿ: ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್ನ ಸಿಸಿಟಿವಿ ದೃಶ್ಯ ಬಿಡುಗಡೆ
https://www.youtube.com/watch?v=75vzrVm8Z6w
https://www.youtube.com/watch?v=O1dTEqQsZ80


ಇದನ್ನೂ ಒದಿ: ಕಾವ್ಯ ನಿಗೂಢ ಸಾವು- ಪೋಷಕರಿಗೆ ಸಂಸದ ಕಟೀಲ್ ಸಾಂತ್ವನ

ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

ಇದನ್ನೂ ಓದಿ: ಮಂಗ್ಳೂರಿನ ಆಳ್ವಾಸ್ ನಲ್ಲಿ SSLC ವಿದ್ಯಾರ್ಥಿನಿ ನಿಗೂಢ ಸಾವು- ಕೊಲೆ ಎಂದು ಪೋಷಕರ ಆರೋಪ









