Tag: bihar chief minister

  • ಸ್ವಗ್ರಾಮದಲ್ಲಿ ಬಿಹಾರ್ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆ

    ಸ್ವಗ್ರಾಮದಲ್ಲಿ ಬಿಹಾರ್ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆ

    ಪಟ್ನಾ: ಸ್ವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದೆ.

    ನಿತೀಶ್ ಕುಮಾರ್, ಸ್ವಗ್ರಾಮ ಭಕ್ತಿಯಾರ್‌ಪುರದಲ್ಲಿ ಸ್ಥಳೀಯ ಆಸ್ಪತ್ರೆಯ ಸಂಕೀರ್ಣದಲ್ಲಿದ್ದ ಬಿಹಾರ್ ಮೂಲದ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾದಾಗ ವ್ಯಕ್ತಿಯೋರ್ವ ಮುಖ್ಯಮಂತ್ರಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ನಿತೀಶ್ ಕುಮಾರ್ ಮಾಲಾರ್ಪಣೆ ಮಾಡಲು ಮುಂದಾಗುತ್ತಿದ್ದಂತೆ ಸಿಎಂಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಬಂದು ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಭದ್ರತಾ ಲೋಪ ಕಂಡುಬಂದಿದೆ.

    ಸಿಸಿಟಿವಿ ದೃಶ್ಯಗಳನ್ನು ಗಮನಿಸಿದಾಗ ಹಿಂದಿನಿಂದ ಬಂದ ವ್ಯಕ್ತಿ, ನಿತೀಶ್ ಕುಮಾರ್ ಅವರ ಬೆನ್ನಿಗೆ ಹೊಡೆಯುವ ಮೊದಲು ವೇದಿಕೆಯ ಮೇಲೆ ನಡೆದುಕೊಂಡು ಹೋಗಿರುವುದು ಕಂಡುಬಂದಿದೆ. ಸಿಎಂಗೆ ಹೊಡೆಯುತ್ತಿದ್ದಂತೆ ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಮೂಲಗಳ ಪ್ರಕಾರ ಹಲ್ಲೆ ಮಾಡಿದಾತನನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: 2 ಬಾರಿ ಮದುವೆ ದಿನವೇ ವರ ನಾಪತ್ತೆ- ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ವಧು ಕುಟುಂಬಸ್ಥರು

    ಕೆಲ ದಿನಗಳಿಂದ ನಿತೀಶ್ ಕುಮಾರ್ ಚುನಾವಣೆಗೆ ಸ್ಪರ್ಧಿಸಿದ ಬರ್ಹ್ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ. ಬರ್ಹ್ ಕ್ಷೇತ್ರದಿಂದ 5 ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ನಿತೀಶ್ ಕುಮಾರ್ ಈ ಹಿಂದೆ 2020ರಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಮಧುಬನಿಯಲ್ಲಿ ಹಲ್ಲೆ ನಡೆದಿತ್ತು.

  • ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

    ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

    ಪಾಟ್ನಾ: ಬಿಹಾರ್‌ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ 75.36 ಲಕ್ಷ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಹೊಂದಿದ್ದಾರೆ. ಆದರೆ ಅವರ ಪುತ್ರ ನಿಶಾಂತ್‌, ತಂದೆಗಿಂತಲೂ ಐದು ಪಟ್ಟು ಹೆಚ್ಚು ಶ್ರೀಮಂತರಾಗಿದ್ದಾರೆ.

    ಬಿಹಾರ್‌ ಸರ್ಕಾರದ ವೆಬ್‌ಸೈಟ್‌ನಲ್ಲಿ ಡಿ.31ರಂದು ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ನಿತಿಶ್‌ ಕುಮಾರ್‌ ಅವರು 29,385 ರೂ. ನಗದು ಹೊಂದಿದ್ದಾರೆ. 42,763 ರೂ. ಅನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದಾರೆ. ಅವರ ಪುತ್ರ 16,549 ರೂ. ನಗದು ಹೊಂದಿದ್ದು, 1.28 ಕೋಟಿ ರೂ. ಅನ್ನು ಬ್ಯಾಂಕ್‌ನಲ್ಲಿ ಎಫ್‌ಡಿ ಮಾಡಿಸಿದ್ದಾರೆ. ಜೊತೆಗೆ ಹಲವು ಬ್ಯಾಂಕ್‌ಗಳಲ್ಲಿ ಹಣವನ್ನು ಠೇವಣಿ ಕೂಡ ಇಟ್ಟಿದ್ದಾರೆ. ಇದನ್ನೂ ಓದಿ: ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್‌ಜಿತ್ ಸಿಂಗ್

    ಸಿಎಂ ನಿತೀಶ್‌ ಕುಮಾರ್‌ ಅವರು, 16.51 ಲಕ್ಷ ರೂ. ಚರ ಹಾಗೂ 58.85 ಲಕ್ಷ ರೂ. ಸ್ಥಿರ ಆಸ್ತಿ ಹೊಂದಿದ್ದಾರೆ. ಅವರ ಪುತ್ರ ನಿಶಾಂತ್‌ 1.63 ಕೋಟಿ ರೂ. ಚರ ಹಾಗೂ 1.98 ಕೋಟಿ ರೂ. ಸ್ಥಿರ ಆಸ್ತಿ ಹೊಂದಿದ್ದಾರೆ.

    ಬಿಹಾರ್‌ ಸಿಎಂ ನವದೆಹಲಿಯ ದ್ವಾರಕಾದಲ್ಲಿ ಸಹಕಾರಿ ಹೌಸಿಂಗ್‌ ಸೊಸೈಟಿಯಲ್ಲಿ ಒಂದು ಫ್ಲಾಟ್‌ ಹೊಂದಿದ್ದಾರೆ. ಅವರ ಪುತ್ರ ಕಲ್ಯಾಣ ಬಿಘಾ, ಹಕಿಕತ್‌ಪುರ, ಪಾಟ್ನಾದ ಕಂಕರ್‌ಬಾಗ್‌ನಲ್ಲಿ ಕೃಷಿ ಭೂಮಿ ನಿವಾಸಗಳನ್ನು ಹೊಂದಿದ್ದಾರೆ. ಇದನ್ನೂ ಓದಿ: Whatsapp – ಒಂದೇ ತಿಂಗಳಲ್ಲಿ ಭಾರತೀಯರ 17 ಲಕ್ಷ ಖಾತೆಗಳು ಬ್ಯಾನ್‌

    ನಿಶಾಂತ್‌ ತಮ್ಮ ಪೂರ್ವಜರ ಗ್ರಾಮ ಕಲ್ಯಾಣ ಬಿಘಾದಲ್ಲಿ ಕೃಷಿ ಭೂಮಿ ಹೊಂದಿದ್ದಾರೆ. ಇವರಿಗೆ ಗ್ರಾಮದಲ್ಲಿ ಕೃಷಿಯೇತರ ಭೂಮಿಯೂ ಇದೆ. 1.45 ಲಕ್ಷ ಮೌಲ್ಯದ 13 ಹಸುಗಳು ಮತ್ತು 9 ಕರುಗಳನ್ನು ಹೊಂದಿದ್ದಾರೆ.

    ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ವರ್ಷದ ಕೊನೆಯ ತಿಂಗಳು ಸಂಪುಟದ ಎಲ್ಲಾ ಸಚಿವರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಿತ್ತು.