ನವದೆಹಲಿ: ಭಾರತೀಯ ಚುನಾವಣಾ ಆಯೋಗ (Election Commission) ಶುಕ್ರವಾರ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejaswi Yadav) ಹೇಳಿದ್ದಾರೆ.
ಎಪಿಕ್ ಸಂಖ್ಯೆಯ ಮೂಲಕ ನನ್ನ ಹೆಸರನ್ನು ಹುಡುಕಿದಾಗ ಯಾವುದೇ ಡೇಟಾ ಕಂಡುಬಂದಿಲ್ಲ ಎಂದು ಆರೋಪಿಸಿದ್ದಾರೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ವೈಯಕ್ತಿಕವಾಗಿ ತಮ್ಮ ಭರ್ತಿ ಮಾಡಿದ ಫಾರ್ಮ್ ಅನ್ನು ಸಂಗ್ರಹಿಸಿದ್ದಾರೆ. ಆದರೆ, ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 20 ರಿಂದ 30 ಸಾವಿರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಒಟ್ಟು 65 ಲಕ್ಷ ಅಂದರೆ ಸುಮಾರು 8.5% ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಚುನಾವಣಾ ಆಯೋಗ ಜಾಹೀರಾತು ನೀಡಿದಾಗಲೆಲ್ಲಾ, ಎಷ್ಟೋ ಜನರು ಬೇರೆಡೆ ಸ್ಥಳಾಂತರಗೊಂಡಿದ್ದಾರೆ, ಎಷ್ಟೋ ಜನರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟೋ ಜನರು ನಕಲಿ ಹೆಸರುಗಳನ್ನು ಹೊಂದಿದ್ದಾರೆ ಎಂದು ಉಲ್ಲೇಖಿಸಲಾಗುತ್ತಿತ್ತು ಎಂದು ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಿಹಾರ ಕರಡು ಮತದಾರರ ಪಟ್ಟಿ ಔಟ್
ಆದರೆ, ಚುನಾವಣಾ ಆಯೋಗವು ನಮಗೆ ಒದಗಿಸಿದ ಪಟ್ಟಿಯಲ್ಲಿ, ಯಾವುದೇ ಮತದಾರರ ವಿಳಾಸ, ಬೂತ್ ಸಂಖ್ಯೆ ಮತ್ತು ಎಪಿಕ್ ಸಂಖ್ಯೆಯನ್ನು ನೀಡಿಲ್ಲ. ಆದ್ದರಿಂದ ಮತದಾರರ ಪಟ್ಟಿಯಿಂದ ಯಾರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬುದನ್ನು ನಾವು ಕಂಡುಹಿಡಿಯಲು ಸಾಧ್ಯವಿಲ್ಲ ಎಂದು ದೂರಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದ (Karnataka) ಒಂದು ಕ್ಷೇತ್ರದಲ್ಲಿ ವಂಚನೆ ನಡೆದಿದೆ ಎಂಬ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ANI ವರದಿ ಮಾಡಿವೆ.
ಹೈಕೋರ್ಟ್ ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪು ಬರೋವರೆಗೆ ಕಾಯಬೇಕು. ಆಧಾರ ರಹಿತ ಆರೋಪಗಳು ಯಾಕೆ ಮಾಡಲಾಗುತ್ತಿದೆ ಎಂದು ಆಯೋಗ ಪ್ರಶ್ನಿಸಿದೆ.
ರಾಹುಲ್ ಗಾಂಧಿ ಹೇಳಿದ್ದೇನು?
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಹೋರಾಟ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆ (Lok Sabha Election) ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ (Karnataka) ಕಳ್ಳಾಟವಾಗಿದೆ ಎಂದು ಆರೋಪಿಸಿದ್ದರು. ಇದನ್ನೂಓದಿ: ದರ್ಶನ್-ಪವಿತ್ರಾ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದೆವು. ಬೋಗಸ್ ವೋಟಿಂಗ್ ಬಗ್ಗೆ ಇಂಚಿಂಚು ಮಾಹಿತಿ ನಮಗೆ ಲಭ್ಯವಾಗಿದೆ. ಎಲ್ಲಾ ವಿಚಾರಗಳನ್ನು ಸದ್ಯದಲ್ಲೇ ಜನರ ಮುಂದೆ ಇಡಲಿದ್ದೇವೆ. ಎಲ್ಲಾ ಕಳ್ಳಾಟ ಸದ್ಯದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.
ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಲು 1 ತಿಂಗಳ ಅವಕಾಶ ನೀಡಲಾಗುತ್ತದೆ. ಈ ಅವಧಿಯೊಳಗಡೆ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ದರೆ ಅರ್ಹ ಮತದಾರರು ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.
ಚುನಾವಣಾ ಸಮಯದಲ್ಲೇ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿಗೆ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ತಡೆ ನೀಡದೇ ಚುನಾವಣಾ ಆಯೋಗಕ್ಕೆ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಅನುಮತಿ ನೀಡಿತ್ತು.
– ಎನ್ಡಿಎ, ಇಂಡಿಯಾ ಒಕ್ಕೂಟಗಳ ನಡುವೆ ವಾಕ್ಸಮರ, ಜಟಾಪಟಿಗೆ ವೇದಿಕೆ ಸಜ್ಜು
ನವದೆಹಲಿ: ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ (Parliament Mansoon Session) ಆರಂಭವಾಗಲಿದೆ. ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಸಮರಕ್ಕೆ ಅಖಾಡ ಸಜ್ಜಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ನಡೆಯಲಿರುವ ಈ ಸಂಸತ್ ಅಧಿವೇಶನ ರಾಜಕೀಯ ಸಭೆಗೆ ವೇದಿಕೆಯಾಗಲಿದೆ.
ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್- ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಈ ಅಧಿವೇಶನವು ರಾಜಕೀಯ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳಾದ ಕಾಂಗ್ರೆಸ್, ಆರ್‌ಜೆಡಿ, ಮತ್ತು ಟಿಎಂಸಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಆಪರೇಷನ್ ಸಿಂಧೂರ, ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ, ಮತ್ತು ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಧ್ಯಸ್ಥಿಕೆಯ ಬಗ್ಗೆ ಆಡಳಿತ ಪಕ್ಷವನ್ನು ತೀವ್ರವಾಗಿ ಪ್ರಶ್ನಿಸಲು ಸಿದ್ಧವಾಗಿವೆ. ಇದರ ಜೊತೆಗೆ, ಪಹಲ್ಗಾಮ್‌ನ ಭಯೋತ್ಪಾದಕ ದಾಳಿ ಮತ್ತು ವಿದೇಶಾಂಗ ನೀತಿಯಂತಹ ವಿಷಯಗಳನ್ನು ಎತ್ತಿಹಿಡಿಯಲು ವಿರೋಧ ಪಕ್ಷಗಳು ತಯಾರಿ ನಡೆಸಿವೆ. ಇದನ್ನೂ ಓದಿ: ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು
ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ಈ ಆರೋಪಗಳಿಗೆ ತಿರುಗೇಟು ನೀಡಲು ಸಿದ್ಧವಾಗಿದ್ದು, ತನ್ನ ಸಾಧನೆಗಳನ್ನು ಮಂಡಿಸಿ ವಿರೋಧ ಪಕ್ಷಗಳ ವಿಮರ್ಶೆಗೆ ಉತ್ತರ ನೀಡಲು ಕಾರ್ಯತಂತ್ರ ರೂಪಿಸಿದೆ. ಈ ನಡುವೆ ಕೇಂದ್ರ ಸರ್ಕಾರ ಎಂಟು ಮಸೂದೆಗಳನ್ನು ಮಂಡಿಸುವ ಲೆಕ್ಕಚಾರದಲ್ಲಿದೆ. ಆದಾಯ ತೆರಿಗೆ ಮಸೂದೆ 2025 ಕೂಡ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಇದನ್ನು ಫೆಬ್ರವರಿಯಲ್ಲಿ ಲೋಕಸಭೆಯ ಆಯ್ದ ಸಮಿತಿಗೆ ಕಳುಹಿಸಲಾಗಿತ್ತು. ಈ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್ ರಿಜಿಜು
ಮಣಿಪುರದಲ್ಲಿ ಫೆಬ್ರವರಿ 13ರಂದು ಜಾರಿಗೊಂಡ ರಾಷ್ಟ್ರಪತಿ ಆಳ್ವಿಕೆಯ ವಿಸ್ತರಣೆಗೆ ಸಂಸತ್‌ನ ಅನುಮೋದನೆಯನ್ನು ಸರ್ಕಾರ ಕೋರಲಿದೆ. ಈ ವಿಷಯವು ವಿರೋಧ ಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಗಲಿದೆ. ಸಂಸತ್‌ನ ಈ ಮುಂಗಾರು ಅಧಿವೇಶನವು ಒಟ್ಟು 21 ಕಲಾಪಗಳನ್ನು ಒಳಗೊಂಡಿದ್ದು, ಆಗಸ್ಟ್ 12ರಿಂದ 18ರವರೆಗೆ ರಕ್ಷಾಬಂಧನ ಮತ್ತು ಸ್ವಾತಂತ್ರ‍್ಯ ದಿನಾಚರಣೆಗಾಗಿ ವಿರಾಮ ಘೋಷಿಸಲಾಗಿದೆ. ಈ ಅವಧಿಯಲ್ಲಿ, ಗೋವಾದ ಶಾಸಕಾಂಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಗಳ ಪ್ರಾತಿನಿಧ್ಯದ ಮರುಹೊಂದಾಣಿಕೆ ಮಸೂದೆ 2024, ವಾಣಿಜ್ಯ ನೌಕಾಯಾನ ಮಸೂದೆ 2024, ಮತ್ತು ಭಾರತೀಯ ಬಂದರು ಮಸೂದೆ 2025 ಕೂಡ ಲೋಕಸಭೆಯಲ್ಲಿ ಅನುಮೋದನೆಗೆ ಕಾಯುತ್ತಿವೆ. ಇದನ್ನೂ ಓದಿ: ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ – ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್ ವಿಚಾರಕ್ಕೆ ಸಿಎಂ ರಿಯಾಕ್ಷನ್
ಪ್ರಮುಖ ಮಸೂದೆಗಳು:
*ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2025: ರಾಜ್ಯದ ಜಿಎಸ್‌ಟಿ ಕಾನೂನನ್ನು ಕೇಂದ್ರ ಕಾನೂನಿಗೆ ಸಮನ್ವಯಗೊಳಿಸುವ ಗುರಿ.
*ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ, 2025: ವ್ಯಾಪಾರ ಸುಗಮಗೊಳಿಸುವಿಕೆ ಮತ್ತು ನಿಯಂತ್ರಣ ಅನುಸರಣೆಯನ್ನು ಸುಧಾರಿಸುವ ಉದ್ದೇಶ.
*ಭಾರತೀಯ ನಿರ್ವಹಣಾ ಸಂಸ್ಥೆ (ತಿದ್ದುಪಡಿ) ಮಸೂದೆ, 2025: ಐಐಎಂ ಗುವಾಹಟಿಯನ್ನು ಐಐಎಂ ಕಾಯ್ದೆಯ ಅಡಿಯಲ್ಲಿ ಔಪಚಾರಿಕವಾಗಿ ಒಳಗೊಳ್ಳುವ ಗುರಿ.
*ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2025: ತೆರಿಗೆ ಕಾನೂನುಗಳ ಸರಳೀಕರಣಕ್ಕೆ ಒತ್ತು.
*ಭೂ ಪರಂಪರೆ ತಾಣಗಳು ಮತ್ತು ಭೂಅವಶೇಷಗಳ (ಸಂರಕ್ಷಣೆ ಮತ್ತು ನಿರ್ವಹಣೆ) ಮಸೂದೆ; ಭೂವೈಜ್ಞಾನಿಕ ತಾಣಗಳ ಸಂರಕ್ಷಣೆ.
*ಕಲ್ಲುಗಣಿ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ: ಗಣಿಗಾರಿಕೆ ಕ್ಷೇತ್ರದಲ್ಲಿ ಸುಧಾರಣೆ.
*ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ: ಕ್ರೀಡಾ ಆಡಳಿತದಲ್ಲಿ ಸುಧಾರಣೆಗೆ ಒತ್ತು.
*ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ: ಕ್ರೀಡೆಯಲ್ಲಿ ಡೋಪಿಂಗ್ ನಿಯಂತ್ರಣಕ್ಕೆ ಕ್ರಮ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ( Bihar Assembly Elections) ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ (Chirag Paswan) ಅವರಿಗೆ ಜೀವ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ.
ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ವಿಷಯದ ಗಂಭೀರತೆಯನ್ನು ತಕ್ಷಣವೇ ಅರಿತುಕೊಂಡು ತ್ವರಿತ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು
ಪಾಟ್ನಾ: ಬಿಹಾರ (Bihar) ಮತದಾರರ ಪಟ್ಟಿ ನವೀಕರಣ ಪ್ರಕ್ರಿಯೆಗೆ ಮಧ್ಯಂತರ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪಟ್ಟಿ ನವೀಕರಣ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ (Supreme Court) ಸಮ್ಮತಿ ಸೂಚಿಸಿದೆ.
ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಸಂಸದ ಮನೋಜ್ ಝಾ, ಪೋಲ್ ವಾಚ್‌ಡಾಗ್ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಹಕ್ಕುಗಳ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್, ಕಾರ್ಯಕರ್ತ ಯೋಗೇಂದ್ರ ಯಾದವ್, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಾಜಿ ಶಾಸಕ ಮುಜಾಹಿದ್ ಆಲಂ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಶಾದನ್ ಫರಾಸತ್ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ತುರ್ತು ವಿಚಾರಣೆಯನ್ನು ಕೋರಿದರು. ಪರಿಷ್ಕರಣೆ ಕಾರ್ಯವು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ತೆಗೆದುಹಾಕಲು ಕಾರಣವಾಗುತ್ತದೆ. ಮಹಿಳೆಯರು ಮತ್ತು ಹಿಂದುಳಿದವರು ಹೆಚ್ಚು ತೊಂದರೆಗೊಳಗಾಗುತ್ತಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ, ಕಾಂಗ್ರೆಸ್ ಪಕ್ಷವು ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ (Rahul Gandhi) ಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ. ಆದರೆ, ಈ ಕಾರ್ಯಕ್ರಮವು ಭಾರೀ ವಿವಾದಕ್ಕೆ ಕಾರಣವಾಗಿದೆ.
`ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, ಬಿಹಾರದಲ್ಲಿ (Bihar) 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಈ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಈ ಯೋಜನೆಯು ಋತುಸ್ರಾವದ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷವು ಹೇಳಿಕೊಂಡಿದೆ. ಇದನ್ನೂ ಓದಿ: ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ರಾಹುಲ್ ಗಾಂಧಿ ಅವರ ಚಿತ್ರದ ಜೊತೆಗೆ, ಕಾಂಗ್ರೆಸ್‌ನ ಚುನಾವಣಾ ಭರವಸೆಯಾದ `ಮಾಯಿ ಬೆಹನ್ ಮಾನ್ ಯೋಜನಾ’ ಅಡಿಯಲ್ಲಿ ಅಗತ್ಯವಿರುವ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ಆರ್ಥಿಕ ನೆರವು ನೀಡುವ ಘೋಷಣೆಯೂ ಇದೆ. ಈ ಯೋಜನೆಯನ್ನು ಅಕ್ಷಯ್ ಕುಮಾರ್ ಅಭಿನಯದ `ಪ್ಯಾಡ್‌ಮ್ಯಾನ್’ ಚಿತ್ರದಿಂದ ಸ್ಫೂರ್ತಿಗೊಂಡಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ
ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ಮುದ್ರಿಸಿರುವುದನ್ನು ಬಿಜೆಪಿ ಮತ್ತು ಜೆಡಿಯು ತೀವ್ರವಾಗಿ ಖಂಡಿಸಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, `ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಮುದ್ರಿಸುವುದು ಬಿಹಾರದ ಮಹಿಳೆಯರಿಗೆ ಅವಮಾನವಾಗಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಪಕ್ಷವಾಗಿದೆ. ಬಿಹಾರದ ಮಹಿಳೆಯರು ಕಾಂಗ್ರೆಸ್ ಮತ್ತು ಆರ್‌ಜೆಡಿಗೆ ಪಾಠ ಕಲಿಸಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಮತ್ತು ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಕೂಡ ಈ ನಿರ್ಧಾರವನ್ನು ಖಂಡಿಸಿದ್ದಾರೆ. ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವುದು ಒಳ್ಳೆಯ ಕಾರ್ಯವಾಗಿದೆ. ಆದರೆ ಅದರ ಮೇಲೆ ರಾಹುಲ್ ಗಾಂಧಿ ಅವರ ಚಿತ್ರವನ್ನು ಮುದ್ರಿಸಿರುವುದು ಸಂಪೂರ್ಣವಾಗಿ ಅನುಚಿತವಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ
ಆಧುನಿಕ ಯುಗದಲ್ಲಿ ಸವಾಲು ರಾಹುಲ್ ಗಾಂಧಿ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಏಕೆ ಮುದ್ರಿಸಲಾಯಿತು ಎಂಬುದಲ್ಲ. ಬಿಹಾರದಲ್ಲಿ ಇಂದಿಗೂ ಮಹಿಳೆಯರು ಋತುಸ್ರಾವದ ಸಮಯದಲ್ಲಿ ಬಟ್ಟೆಯನ್ನು ಬಳಸಿಕೊಂಡು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವುದೇ ಮೂಲ ಸಮಸ್ಯೆಯಾಗಿದೆ. ಬಿಜೆಪಿಯ ಚಿಂತನೆ ಯಾವಾಗಲೂ ಮಹಿಳಾ ವಿರೋಧಿಯಾಗಿದೆ ಎಂದು ಕಾಂಗ್ರೆಸ್‌ನ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ ಎಕ್ಸ್ನಲ್ಲಿ ಬರೆದುಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ
ನವದೆಹಲಿ: ಚುನಾವಣೆ ಅಖಾಡದಲ್ಲಿ ಎನ್‍ಡಿಎ ಕೂಟದ ಸಿಎಂ ಅಭ್ಯರ್ಥಿ ಎಂದು ನಿತೀಶ್ ಕುಮಾರ್ ಬಿಂಬಿತರಾಗಿದ್ದರು. ಅದೇ ರೀತಿ ನಾಲ್ಕನೇ ಬಾರಿಗೆ ಸಿಎಂ ಗದ್ದುಗೆ ಏರುವ ಕನಸು ಕಂಡಿದ್ದು 69 ವರ್ಷದ ನಿತೀಶ್ ಕುಮಾರ್ ಪಟ್ಟಾಭಿಷೇಕಕ್ಕೆ ಕೆಲ ಅಡ್ಡಿಗಳು ಉಂಟಾಗಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ಬಿಹಾರದ ಸಿಎಂ ಯಾರು ಆಗಬೇಕೆಂದು ಎನ್‍ಡಿಎ ನಿರ್ಧರಿಸಲಿದ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕೊರೊನಾ ಸಮಯದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ಮಾಡಿತ್ತು. ಅದೇ ರೀತಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕ್ರೈಂ ರೇಟ್ ಪಟ್ಟಿಯಲ್ಲಿ ಬಿಹಾರ 21ನೇ ಸ್ಥಾನದಲ್ಲಿದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಎಲ್‍ಜೆಪಿಯ ಚಿರಾಗ್ ಪಾಸ್ವಾನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ನಿತೀಶ್ ಕುಮಾರ್, ಮತ ವಿಭಜಕರ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ.
ಸುದ್ದಿಗೋಷ್ಠಿಗೂ ಮುನ್ನ ಪಕ್ಷದ ಕಚೇರಿಗೆ ತೆರಳಿದ್ದ ನಿತೀಶ್ ಕುಮಾರ್ ಗೆದ್ದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು. ಅದರ ಜೊತೆಗೆ ಜೆಡಿಯು ಕಳಪೆ ಪ್ರದರ್ಶನದ ಕುರಿತು ಸಭೆ ನಡೆಸಿದರು. 50:50 ಅನುಪಾತದಲ್ಲಿ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡಿದ್ದ ನಿತೀಶ್ ಕುಮಾರ್ ಕೇವಲ 43 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ 74ರಲ್ಲಿ ವಿಜಯ ಪತಾಕೆ ಹಾರಿಸಿದ್ದು, ಎನ್‍ಡಿಎ ಕೂಟದ ವಿಐಪಿ ಮತ್ತು ಹೆಚ್‍ಎಎಂ ತಲಾ ನಾಲ್ಕರಲ್ಲಿ ಗೆದ್ದಿವೆ. 243ರ ಪೈಕಿ ಎನ್‍ಡಿಎ 125 ಸ್ಥಾನಗಳನ್ನ ಗೆಲ್ಲುವ ಮೂಲಕ ಬಹುಮತವನ್ನ ಪಡೆದುಕೊಂಡಿದೆ.
ಮಹಾಘಟಬಂಧನದ ಆರ್ ಜೆಡಿ 75, ಕಾಂಗ್ರೆಸ್ 19, ಸಿಪಿಐ ಎಂಎಲ್ 12, ಸಿಪಿಐ ಮತ್ತು ಸಿಪಿಎಂ ತಲಾ ಎರಡರಲ್ಲಿ ಗೆದ್ದಿವೆ. ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 5 ಮತ್ತು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‍ಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದಿದೆ.
– ಮಹಾರಾಷ್ಟ್ರದಲ್ಲಿ ನೀವು ಶಿವಸೇನೆಯ ತೊಡೆಯ ಮೇಲೆ ಕುಳಿತುಕೊಳ್ಳಬಹುದು
– ನಾವು ಏಕಾಂಗಿಯಾಗಿ ಸ್ಪರ್ಧಿಸಿದರೆ ನಿಮಗೆ ಏನು ಕಷ್ಟ?
ಹೈದರಾಬಾದ್: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿ ಕೂಟ ಬಹುಮತ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದೆ. ಆದರೆ ಅಸಾದುದ್ದಿನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 5 ಸ್ಥಾನಗಳಲ್ಲಿ ಜಯಗಳಿಸಿ ಕಾಂಗ್ರೆಸ್ ನಾಯಕರ ಹುಬ್ಬೇರುವಂತೆ ಮಾಡಿದೆ.
ಬಿಹಾರ ಯಶಸ್ಸಿನ ಹಿನ್ನೆಲೆಯಲ್ಲಿ ಮಾತನಾಡಿರುವ ಓವೈಸಿ, ಮುಂದೆ ದೇಶದ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸಲು ನಾವು ತೀರ್ಮಾನಿಸಿದ್ದೇವೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ತಿಳಿಸಿದ್ದಾರೆ.
ಈ ಕುರಿತು ಅಸಾದುದ್ದಿನ್ ಓವೈಸಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಿಹಾರದ ಸೀಮಾಂಚಲ್ ಪ್ರದೇಶದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಐಎಂಐಎಂ ಪಕ್ಷ ಬಿಜೆಪಿ ವಿರೋಧಿ ಮತಗಳನ್ನು ಒಡೆದಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ರಾಜಕೀಯ ಪಕ್ಷವನ್ನು ನಡೆಸುತ್ತಿದ್ದೇವೆ. ಹೀಗಾಗಿ ನಮ್ಮ ಸ್ವಂತ ಬಲದಿಂದ ಚುನಾವಣೆಯನ್ನು ಎದುರಿಸುವುದೇ ಸರಿ ಎಂದು ಅಸಾದುದ್ದೀನ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಎನ್‍ಡಿಎ ಮೈತ್ರಿಕೂಟಕ್ಕೆ ಮತ್ತೆ ಬಿಹಾರ – ನಿತೀಶ್‍ಗೆ ಒಲಿದ ಸಿಎಂ ಪಟ್ಟ
ನೀವು ಮಹಾರಾಷ್ಟ್ರದಲ್ಲಿ ಶಿವಸೇನೆ ತೊಡೆಯ ಮೇಲೆ ಹೋಗಿ ಕುಳಿತುಕೊಳ್ಳಬಹುದು. ಆದರೆ ನಾವು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಬಾರದೆ ಎಂದು ಕಾಂಗ್ರೆಸ್‍ನ್ನು ಪ್ರಶ್ನಿಸಿದ್ದಾರೆ. ಚುನಾವಣೆಯಲ್ಲಿ ನೀವು ಯಾಕೆ ಸ್ಪರ್ಧಿಸುತ್ತೀರಿ ಎಂದು ಯಾರಾದರೂ ಕೇಳಿದಿರಾ, ಇಲ್ಲ. ನಾವು ಪಶ್ಚಿಮ ಬಂಗಾಳದಲ್ಲೂ ಸ್ಪರ್ಧಿಸುತ್ತೇವೆ. ಉತ್ತರ ಪ್ರದೇಶದಲ್ಲೂ ಸ್ಪರ್ಧಿಸುತ್ತೇವೆ. ಅಲ್ಲದೆ ದೇಶದ ಪ್ರತಿ ಚುನಾವಣೆಯಲ್ಲಿಯೂ ನಾವು ಸ್ಪರ್ಧೆ ಮಾಡುತ್ತೇವೆ ಎಂದು ಓವೈಸಿ ತಿಳಿಸಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸಲು ಯಾರದ್ದಾದರೂ ಅಪ್ಪಣೆ ಪಡೆಯಬೇಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಇತರ ರಾಜ್ಯಗಳಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿರಾ ಅಥವಾ ಕೇವಲ ನಿಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸಲಿದೆ. ಯಾರ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂಬುದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ಮಹಿಳೆಯರಿಂದ ಬಿಹಾರ ಲೆಕ್ಕಾಚಾರ ಉಲ್ಟಾ – ಮತ್ತೆ ಅಧಿಕಾರಕ್ಕೆ ಎನ್‍ಡಿಎ
ಎಐಎಂಐಎಂ ಬಿಹಾರ ಚುನಾವಣೆಯಲ್ಲಿ ‘ವೋಟ್ ಕಟ್ಟರ್’ ಆಗಿದೆ ಎಂದು ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆಗೆ ತಿರುಗೇಟು ನೀಡಿದ ಓವೈಸಿ, ಮುಸ್ಲಿಮರ ಕಲ್ಯಾಣಕ್ಕಾಗಿ ನಿಮ್ಮ ಕ್ಷೇತ್ರದಲ್ಲಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಅಧೀರ್ ರಂಜನ್ ಚೌಧರಿ, ನನ್ನ ಕ್ಷೇತ್ರದಲ್ಲಿನ ಮುಸ್ಲಿಮರ ಸ್ಥಿತಿ ಏನಾಗಿದೆ, ಚೆನ್ನಾಗಿಯೇ ಇದೆ ಎಂದು ಉತ್ತರಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಅಸಾದುದ್ದೀನ್ ಹಾಗೂ ಎಐಎಂಐಎಂ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿವೆ. ಬಿಹಾರ ಚುನಾವಣೆಗಳಲ್ಲಿ ಆರ್‍ಜೆಡಿ ನೇತೃತ್ವದ ಮಹಾಘಟಬಂಧನ್ ಮತಗಳನ್ನು ಕಡಿತಗೊಳಿಸಿದೆ ಎಂದು ಕಿಡಿಕಾರಿವೆ. ಬಿಹಾರ ಚುನಾವಣೆಯಲ್ಲಿ ಒಟ್ಟು 20 ಕ್ಷೇತ್ರಗಳಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಇದರಲ್ಲಿ ಐದು ಸ್ಥಾನಗಳಲ್ಲಿ ಪಕ್ಷ ಜಯಗಳಿಸಿದ್ದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿದೆ.
ಮುಂಬೈ: ಇಂದು ಬಿಹಾರ ಚುನಾವಣೆಯ ಮೊದಲ ಹಂತದ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಬಾಲಿವುಡ್ ನಟ ಸೋನು ಸೂದ್ ಮತದಾರರಿಗೆ ಸಲಹೆ ನೀಡಿದ್ದಾರೆ. ಇವಿಎಂ ಯಂತ್ರದ ಬಟನ್ ಕೇವಲ ಬೆರಳಿನಿಂದ ಒತ್ತದೇ, ಯೋಚಿಕೆ ಬುದ್ಧಿವಂತಿಕೆ ಒತ್ತಿ ಎಂದು ಹೇಳಿದ್ದಾರೆ.
ನಮ್ಮ ಬಿಹಾರಿ ಸೋದರರರು ಮನೆ ತೊರೆದು ಬೇರೆ ರಾಜ್ಯಕ್ಕೆ ಹೋಗುವುದು ನಿಲ್ಲಬೇಕು. ಬೇರೆ ರಾಜ್ಯದ ಜನತೆ ಕೆಲಸ ಅರಸಿ ಬಿಹಾರಕ್ಕೆ ಬರುವಂತಾದ ದಿನವೇ ದೇಶದ ಗೆಲುವು. ವೋಟ್ ಹಾಕುವಾಗ ಎಚ್ಚರಿಕೆ ಮತ್ತು ಯೋಚಿಸಿ ಬಟ್‍ನ್ ಒತ್ತಿ ಎಂದು ಸೋನು ಸೂದ್ ಟ್ವೀಟ್ ಮಾಡಿದ್ದಾರೆ. ಸೋನು ಸೂದ್ ನೀಡಿರುವ ಸಂದೇಶ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
जिस दिन हमारे बिहारी भाइयों को घर छोड़ कर दूसरे राज्य नहीं जाना पड़ेगा।
जिस दिन दूसरे राज्य के लोग बिहार में काम ढूँढने आएँगे। उस दिन देश की जीत होगी।
वोट के लिए बटन उँगली से नहीं दिमाग़ से लगाना 🙏#biharelections
ಕೊರೊನಾ ಮತ್ತು ಲಾಕ್‍ಡೌನ್ ವೇಳೆ ಕೆಲಸ ಕಳೆದುಕೊಂಡು ಊರಿಗೆ ತೆರಳಲಾಗದೇ ಸಂಕಷ್ಟದಲ್ಲಿದ್ದ ಬಿಹಾರ ಜನರಿಗೆ ಸೋನು ಸೂದ್ ಮರಭೂಮಿಯಲ್ಲಿ ಸಿಕ್ಕ ಸಂಜೀವಿನಿ ಆಗಿದ್ದರು. ಮುಂಬೈನಲ್ಲಿದ್ದ ಬಿಹಾರದ ಜನರನ್ನ ಸೋನು ಸೂದ್ ಊರುಗಳಿಗೆ ತಲುಪಿಸುವ ಕೆಲಸ ಮಾಡಿದ್ದರು. ಈ ಹಿನ್ನೆಲೆ ಬಿಹಾರ ಪ್ರವಾಸಿ ಕಾರ್ಮಿಕರ ಕಷ್ಟ ಅರಿತಿರುವ ಸೋನು ಸೂದ್, ಉತ್ತಮ ಜನಪ್ರತಿನಿಧಿಯನ್ನ ಆಯ್ಕೆ ಮಾಡಿಕೊಳ್ಳುವ ಸಮಯ ಬಂದಿದೆ ಎಂದು ಮತದಾನದ ಜಾಗೃತಿ ಮೂಡಿಸಿದ್ದಾರೆ.
16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಕೊರೊನಾ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಮಾಡಲಾಗಿದೆ. ನಕ್ಸಲ್ ಹಾವಳಿ ಇರುವ ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆಡಳಿತ ರೂಢ ಎನ್‍ಡಿಎ ಹಾಗೂ ಮಹಾ ಮೈತ್ರಿಕೂಟಕ್ಕೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.
ಇಂದಿನ ಮತದಾನದಲ್ಲಿ ಎನ್‍ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರಾಗಿರುವ ಕೃಷ್ಣನಂದನ್ ವರ್ಮ, ಪ್ರೇಮ್ ಕುಮಾರ್, ಜೈ ಕುಮಾರ್ ಸಿಂಗ್, ಸಂತೋಷ್ ಕುಮಾರ್ ನಿರಾಲ, ವಿಜಯ ಸಿನ್ಹಾ ಮತ್ತು ರಾಮ್‍ನಾರಾಯಣ್ ಮಂಡಲ್ ಕ್ಷೇತ್ರಗಳು ಒಳಗೊಂಡಿದ್ದು, ಸಂಜೆ ವೇಳೆಗೆ 1,066 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮೊದಲ ಹಂತ ಚುನಾವಣೆಗಾಗಿ ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿತ್ತು.
ಪಾಟ್ನಾ: ಅಕ್ಟೋಬರ್ 28 ರಂದು ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಈ ಮಧ್ಯೆ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದ್ದು ಎನ್‍ಡಿಎ ಮೈತ್ರಿಕೂಟಕ್ಕೆ ಭರ್ಜರಿ ಸಾಧಿಸಿಲಿದೆ ಎಂದು ಸಿ-ವೋಟರ್ ಸಮೀಕ್ಷೆ ಹೇಳಿದೆ
ಕೊರೊನಾ ಬಿಕ್ಕಟ್ಟಿನಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆಯಾಗಿದ್ದು, ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲು ನಿತೀಶ್ ಕುಮಾರ್ ಹರಸಾಹಸ ಪಡುತ್ತಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಬಿಜೆಪಿ ಸಾಥ್ ನೀಡಿದೆ. ಬಿಜೆಪಿ – ಜೆಡಿಯು ಪಕ್ಷಗಳು ಸಮನಾಗಿ ಸೀಟು ಹಂಚಿಕೊಂಡು ಅಖಾಡಕ್ಕಿಳಿದಿವೆ. ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಒಟ್ಟಾಗಿ ಹೋರಾಟಕ್ಕಿಳಿದೆ. ಇದನ್ನೂ ಓದಿ:ಬಿಹಾರ ಚುನಾವಣೆ- ಮತದಾನದಲ್ಲಿ ಹೆಣ್ಮಕ್ಳೇ ಸ್ಟ್ರಾಂಗು
ಮೊದಲ ಹಂತದ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಯು ಮೈತ್ರಿಕೂಟ ಸರಳ ಬಹುಮತ ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ನಡೆಸಿದ ಸಮೀಕ್ಷೆ ತಿಳಿಸಿದೆ. 243 ವಿಧಾನಸಭಾ ಸ್ಥಾನಗಳ ಪೈಕಿ, ಆರ್‍ಜೆಡಿ, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದಿಂದ ದೂರ ಉಳಿಯಲಿದೆ ಎಂದು ಭವಿಷ್ಯ ನುಡಿದಿದೆ. ಎನ್ ಡಿಎ 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ಹೇಳಿದೆ. ಇದನ್ನೂ ಓದಿ:ರಾಮ ಮಂದಿರಕ್ಕಿಂತ ದೊಡ್ಡದಾದ ಸೀತಾ ಮಂದಿರ ನಿರ್ಮಿಸುತ್ತೇವೆ – ಎಲ್‌ಜೆಪಿ ಘೋಷಣೆ
ಎನ್‍ಡಿಎಗೆ ಶೇ.43, ಮಹಾಮೈತ್ರಿಕೂಟಕ್ಕೆ ಶೇ.35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ.4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಜೆಡಿಯು 59 ರಿಂದ 67 ಸ್ಥಾನಗಳು ಮತ್ತು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿ ಮೂರರಿಂದ ಏಳು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಆರ್ ಜೆಡಿ 56 ರಿಂದ 64 ಸ್ಥಾನಗಳು, ಕಾಂಗ್ರೆಸ್ 12 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ. ಇದನ್ನೂ ಓದಿ: ಗುಂಡಿಟ್ಟು ಬಿಹಾರದ ಪಕ್ಷೇತರ ಅಭ್ಯರ್ಥಿಯನ್ನು ಹತ್ಯೆಗೈದ ದುಷ್ಕರ್ಮಿಗಳು