Tag: Bihar Elections 2025

  • Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!

    Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!

    ಪಾಟ್ನಾ: ಬಿಹಾರ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಉಭಯ ಮೈತ್ರಿಕೂಟಗಳ ಪ್ರಚಾರದ ಬಿರುಸು ಜೋರಾಗುತ್ತಿದೆ. ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿರುವ ಎನ್‌ಡಿಎ ಮೈತ್ರಿಕೂಟ ಅ.31 ರಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ.

    ಬೆಳಗ್ಗೆ 9:30ರ ಸುಮಾರಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮೈತ್ರಿಕೂಟದ ಎಲ್ಲಾ ನಾಯಕರ ಸಮ್ಮುಖದಲ್ಲಿ ಬಿಜೆಪಿ, ಜೆಡಿಯು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗುತ್ತದೆ.

    ಏನಿದೆ ನಿರೀಕ್ಷೆ?
    ವರದಿಗಳ ಪ್ರಕಾರ, ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆಯು ಶಿಕ್ಷಣ, ಆರೋಗ್ಯ ರಕ್ಷಣೆ, ಕೃಷಿ, ಉದ್ಯೋಗ, ಮಹಿಳಾ ಸಬಲೀಕರಣ ಮೇಲೆ ಕೇಂದ್ರೀಕೃತವಾಗಿದೆ. ಅಲ್ಲದೇ ಮೂಲ ಸೌಕರ್ಯ, ಗ್ರಾಮೀಣ ಅಭಿವೃದ್ಧಿಗಳಿಗೂ ವಿಶೇಷ ಒತ್ತು ನೀಡಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

    ಮಹಾಘಟಬಂಧನ್‌ ಭರವಸೆ ಏನಿದೆ?
    ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ‘ಬಿಹಾರ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯಡಿ ಈಗಾಗಲೇ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

    * ಸರ್ಕಾರ ರಚಿಸಿದ 20 ದಿನಗಳಲ್ಲಿ ರಾಜ್ಯದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ.
    * ‘ಮೈ-ಬೆಹಿಂ ಮಾನ್ ಯೋಜನೆ’ ಅಡಿಯಲ್ಲಿ, ಡಿಸೆಂಬರ್ 1 ರಿಂದಲೇ ಮಹಿಳೆಯರಿಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವು.
    * ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರುವ ಭರವಸೆ
    * ವಕ್ಫ್ (ತಿದ್ದುಪಡಿ) ಕಾಯ್ದೆ ಕಸದ ಬುಟ್ಟಿಗೆ
    * ಪಂಚಾಯಿತಿ ಪ್ರತಿನಿಧಿಗಳ ವಿಮೆ ಭತ್ಯೆ ಡಬಲ್‌ ಸೇರಿದಂತೆ ಹಲವು ಭರವಸೆಗಳನ್ನ ನೀಡಿದೆ.

    ಇದೇ ನವೆಂಬರ್‌ 6 ಮತ್ತು 11 ರಂದು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.

  • ನಿತೀಶ್ ಸಿಎಂ, ಮೋದಿನೇ ಪಿಎಂ – ಯಾವ್ದೇ ಹುದ್ದೆ ಖಾಲಿ ಇಲ್ಲ; ಗೊಂದಲಕ್ಕೆ ತೆರೆ ಎಳೆದ ಅಮಿತ್ ಶಾ

    ನಿತೀಶ್ ಸಿಎಂ, ಮೋದಿನೇ ಪಿಎಂ – ಯಾವ್ದೇ ಹುದ್ದೆ ಖಾಲಿ ಇಲ್ಲ; ಗೊಂದಲಕ್ಕೆ ತೆರೆ ಎಳೆದ ಅಮಿತ್ ಶಾ

    – ಬಿಹಾರಕ್ಕೆ ಮೋದಿಯ ಆಶೀರ್ವಾದ ಇದೆ ಎಂದ ಗೃಹಸಚಿವ

    ಪಾಟ್ನಾ: ಇಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಅಲ್ಲಿ ಪ್ರಧಾನಮಂತ್ರಿ ಹುದ್ದೆಯೂ ಖಾಲಿ ಇಲ್ಲ. ಇಲ್ಲಿ ನಿತೀಶ್ ಕುಮಾರ್ ಇದ್ದಾರೆ, ಅಲ್ಲಿ ಮೋದಿ ಇದ್ದಾರೆ. ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

    ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಯಾಗಿ ನರೇಂದ್ರ ಮೋದಿ, ಸಿಎಂ ಆಗಿ ನಿತೀಶ್‌ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವ ಮೂಲಕ ಬಿಹಾರದ ವರ್ಚಸ್ಸನ್ನು ಹೆಚ್ಚಿಸಿದ್ದಕ್ಕಾಗಿ ಮತ್ತು ರಾಜ್ಯದ ಪರಂಪರೆಯನ್ನು ಗೌರವಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಅಮಿತ್ ಶಾ, ಈ ನಿರ್ಧಾರ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಿಹಾರದ ಕೊಡುಗೆಗೆ ಕೇಂದ್ರದ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ಪಹಲ್ಗಾಮ್ ದಾಳಿಯ ನಂತರ, ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದರು, ಕೇಂದ್ರ ಸರ್ಕಾರವು ಪಿಎಫ್‌ಐ ನಿಷೇಧಿಸಿ ಅದರ ಸದಸ್ಯರನ್ನ ವಶಕ್ಕೆ ತೆಗೆದುಕೊಂಡಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ನಿರ್ಣಾಯಕ ಗೆಲುವು ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ರಾಮ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ ಶಾ, ವರ್ಷಗಳ ಕಾಲ ಶ್ರೀರಾಮನು ಒಂದು ಗುಡಾರದಲ್ಲಿ ವಾಸಿಸುತ್ತಿದ್ದನು. ಕಾಂಗ್ರೆಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೇವಾಲಯವನ್ನ ನಿರ್ಮಿಸಲು ಎಂದಿಗೂ ಅವಕಾಶ ನೀಡಲಿಲ್ಲ. ಆದರೆ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗ ಆ ಭರವಸೆಯನ್ನ ಈಡೇರಿಸಿದರು. ಈಗ, ನಾವು ಮಿಥಿಲಾದಲ್ಲಿ ಸೀತಾ ದೇವಿಗೆ ದೇವಾಲಯವನ್ನ ನಿರ್ಮಿಸುತ್ತೇವೆ ಅಂತ ತಿಳಿಸಿದ್ರು.

    ಶಾಂತಿಪುರದಲ್ಲಿ ಮತ್ತೊಂದು ರ‍್ಯಾಲಿ ಉದ್ದೇಶಿಸಿ ಮಾತನಾಡಿ ಅಮಿತ್ ಶಾ, ಬಿಹಾರವು ನಿತೀಶ್ ಕುಮಾರ್ ಮತ್ತು ಚಿರಾಗ್ ಪಾಸ್ವಾನ್ ಅವರ ನಾಯಕತ್ವವನ್ನು ಹೊಂದಿದೆ. ಮೋದಿಯವರ ಆಶೀರ್ವಾದ ಇದೆ. ಇದು ರಾಜ್ಯದಲ್ಲಿ ಎನ್‌ಡಿಎ ಸ್ಥಾನವನ್ನ ಬಲಪಡಿಸಲು ಸಹಾಯ ಮಾಡುತ್ತದೆ ಅಂತ ಶ್ಲಾಘಿಸಿದ್ರು. ಇದನ್ನೂ ಓದಿ: ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

  • ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    – ಮೋದಿ ಛತ್ ಪೂಜೆಗಾಗಿ ದೆಹಲಿಯಲ್ಲಿ ನಕಲಿ ಯಮುನೆಯ ಸೃಷ್ಟಿ ಮಾಡಿದ್ರು
    – ಚುನಾವಣಾ ಆಯೋಗದೊಂದಿಗೆ ಬಿಜೆಪಿ ಒಳಒಪ್ಪಂದ; ರಾಗಾ ಆರೋಪ

    ನವದೆಹಲಿ: ಮೋದಿ (Narendra Modi) ಮತಕ್ಕಾಗಿ ಡ್ಯಾನ್ಸು, ಡ್ರಾಮಾ ಮಾಡ್ತಾರೆ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ ಅಂತ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದರು.

    ಬಿಹಾರ ಚುನಾವಣೆಗೆ (Bihar Elections 2025) ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಎಲ್ಲಾ ಪಕ್ಷಗಳು ಬಿರುಸಿನ ಪ್ರವಾರ ಆರಂಭಿಸಿವೆ. ಈ ನಿಟ್ಟಿನಲ್ಲಿ ಮಹಾಘಟಬಂಧನ್‌ ಮೈತ್ರಿಕೂಟದ ವತಿಯಿಂದ ಇಂದು 2 ಕಡೆ ಆಯೋಜಿಸಿದ್ದ ರ‍್ಯಾಲಿಯಲ್ಲಿ (Bihar Rally) ನಾಯಕ ರಾಹುಲ್‌ ಗಾಂಧಿ ಪಾಲ್ಗೊಂಡು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಮುಜಾಫರ್‌ಪುರದಲ್ಲಿ ನಡೆದ ಜಂಟಿ ರ‍್ಯಾಲಿಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ವಿರುದ್ಧ ಲೇವಡಿ ಮಾಡಿದ್ದಾರೆ. ಮೋದಿ ಅವರು ಚುನಾವಣೆ ಗೆಲ್ಲಲು ಏನ್‌ ಬೇಕಾದ್ರೂ ಮಾಡ್ತಾರೆ ಅಂತ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಮೋದಿಗೆ ನಿಮ್ಮ ಮತ ಬೇಕಾಗಿದೆ, ಅದಕ್ಕಾಗಿ ನೀವು ಸ್ಟೇಜ್‌ ಮೇಲೆ ಕುಣೀರಿ ಅಂದ್ರೂ ಕುಣೀತಾರೆ. ಭರತನಾಟ್ಯ ಕೂಡ ಮಾಡ್ತಾರೆ ಅಂತ ತಿವಿದರು. ಇದನ್ನೂ ಓದಿ: ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    ಬಿಹಾರದ ಅತಿ ದೊಡ್ಡ ಹಬ್ಬವಾದ ಛತ್ ಪೂಜೆಯನ್ನು ಉಲ್ಲೇಖಿಸಿ, ದೆಹಲಿಯಲ್ಲಿ ಮಾಲಿನ್ಯಗೊಂಡ ಯಮುನಾ ನದಿಯಲ್ಲಿ ಭಕ್ತರು ಪೂಜೆ ಮಾಡುತ್ತಿದ್ದಾಗ, ಪ್ರಧಾನಿ ಅವರು ವಿಶೇಷವಾಗಿ ನಿರ್ಮಿಸಿದ ಕೊಳದಲ್ಲಿ ಸ್ನಾನ ಮಾಡಿದ್ದಾರೆ. ನರೇಂದ್ರ ಮೋದಿ ತಮ್ಮ ಈಜುಕೊಳದಲ್ಲಿ ಸ್ನಾನ ಮಾಡಲು ಹೋದರು. ಯಮುನಾ ನದಿಯೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಛತ್ ಪೂಜೆಯೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಅವರಿಗೆ ಬೇಕಾಗಿರುವುದು ನಿಮ್ಮ ಮತ ಮಾತ್ರ. ಅದಕ್ಕಾಗಿ ದೆಹಲಿಯಲ್ಲಿ ನಕಲಿ ಯಮುನೆಯ ಸೃಷ್ಟಿ ಮಾಡಿದ್ರು ಅಂತ ಆರೋಪ ಮಾಡಿದ್ರು.

    ಚುನಾವಣಾ ಆಯೋಗದೊಂದಿಗೆ ಒಳಒಪ್ಪಂದ:
    ಮುಂದುವರಿದು… ಬಿಜೆಪಿ ಮತದಾರರಿಗೆ ವಂಚನೆ ಮಾಡಲು ಹಾಗೂ ರಾಜ್ಯ ಚುನಾವಣೆಯ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಚುನಾವಣಾ ಯೋಗದೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಮತಗಳನ್ನ ಕದ್ದರು, ಹರಿಯಾಣದಲ್ಲಿ ಮತ ಕದ್ದರು ಈಗ ಬಿಹಾರದಲ್ಲಿ ಮತಗಳನ್ನ ಕದಿಯಲು ತಮ್ಮ ಕೈಲಾದಷ್ಟು ಪ್ರಯತ್ನ ಪಡ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

  • Bihar Election 2025 | ಪಂಚಾಯತ್ ಪ್ರತಿನಿಧಿಗಳಿಗೆ ಪಿಂಚಣಿ, 50 ಲಕ್ಷ ವಿಮೆ, 5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತೇಜಸ್ವಿ ಭರವಸೆ

    Bihar Election 2025 | ಪಂಚಾಯತ್ ಪ್ರತಿನಿಧಿಗಳಿಗೆ ಪಿಂಚಣಿ, 50 ಲಕ್ಷ ವಿಮೆ, 5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತೇಜಸ್ವಿ ಭರವಸೆ

    – ಅನುಕಂಪ ಆಧಾರದಲ್ಲಿ ಸರ್ಕಾರಿ ಉದ್ಯೋಗ – ವಯಸ್ಸಿನ ಮಿತಿ ರದ್ದು; ಭರವಸೆ

    ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ (Bihar Election 2025) ಇನ್ನೆರಡು ವಾರವಷ್ಟೇ ಬಾಕಿ ಉಳಿದಿದ್ದು, ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ಇಂದು ರಾಷ್ಟ್ರೀಯ ಜನತಾ ದಳ (RJD) ನಾಯಕಿ ತೇಜಸ್ವಿ ಯಾದವ್ (Tejashwi Yadav) ಮಹಾಘಟಬಂಧನ್ ಮೈತ್ರಿಕೂಟದ ಪರವಾಗಿ ಪ್ರಮುಖ ಚುನಾವಣಾ ಭರವಸೆಯನ್ನ ಪ್ರಕಟಿಸಿದ್ದಾರೆ.

    ಈಗಾಗಲೇ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಭರವಸೆ ನೀಡಿದ್ದಾರೆ. ಇಂದು ನಾಲ್ಕು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮೈತ್ರಿಕೂಟದ ಭರವಸೆ ಪ್ರಕಟಿಸಿದ್ದಾರೆ.

    ಮಹಾಘಟಬಂಧನ್‌ (Mahagathbandhan) ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ಪಂಚಾಯತ್‌ ರಾಜ್‌ ವ್ಯವಸ್ಥೆಯ ಪ್ರತಿನಿಧಿಗಳ ಭತ್ಯೆಯನ್ನು ಡಬಲ್‌ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಂದುವರಿದು ನಾವು ಮೂರು ಹಂತದ ಪಂಚಾಯತ್ ಪ್ರತಿನಿಧಿಗಳಿಗೆ (ತಾಲೂಕು, ಜಿಲ್ಲೆ, ಗ್ರಾಮ ಪಂಚಾಯಿತಿ) ಪಿಂಚಣಿ ಯೋಜನೆ ಜಾರಿಗೆ ತರುತ್ತೇವೆ. 50 ಲಕ್ಷ ರೂ.ವರೆಗೆ ವಿಮೆ ಸಹ ಒದಗಿಸಲಾಗುವುದು. ಪಿಡಿಎಸ್ ವಿತರಕರಿಗೆ ಗೌರವಧನ ನೀಡಲಾಗುವುದು ಹಾಗೂ ಪ್ರತಿ ಕ್ವಿಂಟಾಲ್‌ಗೆ ಮಾರ್ಜಿನ್ ಹಣ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಅಲ್ಲದೇ ಕುಂಬಾರರು, ಕಮ್ಮಾರರು ಮತ್ತು ಬಡಗಿಗಳಂತಹ ಶ್ರಮಜೀವಿಗಳಿಗೆ 5 ಲಕ್ಷ ರೂಪಾಯಿಗಳ ವರೆಗೆ ಆರ್ಥಿಕ ನೆರವು ನೀಡುವುದಾಗಿ ಅವರು ಘೋಷಿಸಿದರು. 5 ವರ್ಷದಲ್ಲಿ 5 ಲಕ್ಷ ರೂ. ಏಕಕಾಲಿಕ ನೆರವು, ಸರ್ಕಾರಿ ಉದ್ಯೋಗಗಳಿಗೆ ಅನುಕಂಪದ ನೇಮಕಾತಿಗಳಿಗೆ 58 ವರ್ಷ ವಯಸ್ಸಿನ ಮಿತಿ ತೆಗೆದುಹಾಕುವುದಾಗಿಯೂ ಭರವಸೆ ನೀಡಿದ್ದಾರೆ.

    ಮುಂದುವರಿದು ಮಾತನಾಡಿ, ಎನ್‌ಡಿಎ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಚಾರ ಶುರುವಾದಾಗಿನಿಂದ ಬಿಹಾರ ಬದಲಾವಣೆಗಾಗಿ ಕಾತರದಿಂದ ಕಾಯುತ್ತಿದೆ. ಎನ್‌ಡಿಎ ದೃಷ್ಟಿಹೀನ ಸರ್ಕಾರ, ಭ್ರಷ್ಟ ಸರ್ಕಾರ. ಈ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಬಜೆಟ್‌ನಲ್ಲಿ ಬಿಹಾರಕ್ಕೆ ಬರಬೇಕಾದ ಹಣ ಗುಜರಾತ್‌ಗೆ ಹೋಗ್ತಾ ಇದೆ ಎಂದು ಕಿಡಿ ಕಾರಿದರು.

    ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 6ರಂದು ಮೊದಲ ಹಂತ ನವೆಂಬರ್‌ 11ರಂದು 2ನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.

  • ಮಹಾಘಟಬಂಧನ್‌ನಲ್ಲಿ ಮುಂದುವರಿದ ಬಿಕ್ಕಟ್ಟು – 24 ಗಂಟೆಯಲ್ಲಿ ಸ್ಪಷ್ಟನೆ ಸಿಗುತ್ತೆ: ತೇಜಸ್ವಿ ಯಾದವ್

    ಮಹಾಘಟಬಂಧನ್‌ನಲ್ಲಿ ಮುಂದುವರಿದ ಬಿಕ್ಕಟ್ಟು – 24 ಗಂಟೆಯಲ್ಲಿ ಸ್ಪಷ್ಟನೆ ಸಿಗುತ್ತೆ: ತೇಜಸ್ವಿ ಯಾದವ್

    ಪಾಟ್ನಾ: ಬಿಹಾರ ಚುನಾವಣೆಗೆ (Bihar Elections 2025) ಇನ್ನೂ ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಎನ್‌ಡಿಎ ಒಕ್ಕೂಟ‌ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಹಂಚಿಕೆ ಮಾಡಿದ್ದು, ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಆದ್ರೆ ಮಹಾಘಟಬಂಧನ್‌ (Mahagathbandhan) ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು ಇನ್ನೂ ಅಂತಿಮಗೊಂಡಿಲ್ಲ. ಈ ನಡುವೆಯೇ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಘೋಷಿಸಿದ್ದು ಸಾಕಷ್ಟು ಗೊಂದಲ ಏರ್ಪಟ್ಟಿದೆ. ಇದರ ಬೆನ್ನಲೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ವೀಕ್ಷಕ ಅಶೋಕ್ ಗೆಹ್ಲೋಟ್ (Ashok Gehlot), ಬಿಹಾರ ಕಾಂಗ್ರೆಸ್ ಉಸ್ತುವಾರಿ ಕೃಷ್ಣ ಅಲ್ಲಾವರು ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

    ಮೊದಲು ಇಬ್ಬರು ನಾಯಕರು ತೇಜಸ್ವಿ ಯಾದವ್ ಅವರನ್ನು ಭೇಟಿಯಾದರು, ಮೂವರು ನಾಯಕರು ಸುದೀರ್ಘ ಸಂಭಾಷಣೆ ನಡೆಸಿದರು. ತೇಜಸ್ವಿ ಇಬ್ಬರೂ ನಾಯಕರನ್ನ ಸುಮಾರು 54 ನಿಮಿಷಗಳ ಕಾಲ ಭೇಟಿಯಾದರು. ನಂತರ, ಅಶೋಕ್ ಗೆಹ್ಲೋಟ್, ಕೃಷ್ಣ ಅಲ್ಲಾವರು ಲಾಲು ಪ್ರಸಾದ್ ಅವರನ್ನು ರಾಬ್ರಿ ದೇವಿ ನಿವಾಸದಲ್ಲಿ ಭೇಟಿಯಾಗಿ 35 ನಿಮಿಷಗಳ ಚರ್ಚೆ ನಡೆಸಿದರು. ಈ ಸಭೆಯ ಬೆನ್ನಲ್ಲೇ ಮಹಾಮೈತ್ರಿಕೂಟದೊಳಗೆ ಎಲ್ಲವೂ ಸರಿಯಾಗಿದೆ. ಯಾವುದೇ ಸಮಸ್ಯೆಗಳಿಲ್ಲ. ಮುಂದಿನ 24 ಗಂಟೆಗಳಲ್ಲಿ ನಿಮಗೆ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತದೆ ಎಂದು ತೇಜಸ್ವಿ ಯಾದವ್ (Tejashwi Yadav) ಹೇಳಿದ್ದಾರೆ.

    ರಾಬ್ರಿ ದೇವಿ ಅವರ ನಿವಾಸದಿಂದ ಹೊರಬಂದ ನಂತರ ಮಾತನಾಡಿದ ಅಶೋಕ್ ಗೆಹ್ಲೋಟ್, ನಾವು ಲಾಲು ಪ್ರಸಾದ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇವೆ. ನಾಳೆ ಪತ್ರಿಕಾಗೋಷ್ಠಿ ನಿಗದಿಪಡಿಸಲಾಗಿದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗುತ್ತದೆ. ಮಹಾಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಹೋರಾಡುತ್ತಿದೆ. ಬಿಹಾರದಲ್ಲಿ 243 ಸ್ಥಾನಗಳಿವೆ ಮತ್ತು ಪರಸ್ಪರ ಒಪ್ಪಂದದ ಮೂಲಕ 5-10 ಸ್ಥಾನಗಳಲ್ಲಿ ಸ್ನೇಹಪರ ಹೋರಾಟ ನಡೆಸಬಹುದು. ನಾವು ಒಟ್ಟಾಗಿ ಪ್ರಚಾರ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    ಕಾಂಗ್ರೇಸ್ ಉಸ್ತುವಾರಿ ಕೃಷ್ಣ ಅಲ್ಲಾವರು ಮಾತನಾಡಿ, ಬಿಹಾರ ಚುನಾವಣೆಗೆ ನಮ್ಮ ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚಿಸಿದ್ದೇವೆ ಮತ್ತು ಸರ್ಕಾರ ರಚಿಸಿದ ನಂತರ ರಾಜ್ಯದ ಜನರಿಗೆ ನಾವು ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಮಾತನಾಡಿದ್ದೇವೆ ಎಂದು ಹೇಳಿದರು. ಕೆಲವು ಸ್ಥಾನಗಳ ಮೇಲಿನ ಸ್ನೇಹಪರ ಹೋರಾಟದ ಪ್ರಶ್ನೆಗೆ, ಎಲ್ಲಾ ರೀತಿಯ ಮಾಹಿತಿಯನ್ನು ನಾಳೆ ಅಂದ್ರೆ ಅಕ್ಟೋಬರ್ 23 ರಂದು ನೀಡಲಾಗುವುದು ಎಂದು ವಿವರಿಸಿದ್ದಾರೆ.

    ಈ ನಡುವೆ ಸುಗೌಲಿ ಕ್ಷೇತ್ರದ ಬಳಿಕ ಇಂಡಿಯಾ ಮಹಾ ಮೈತ್ರಿಕೂಟವು ಮೊಹಾನಿಯಾ ವಿಧಾನಸಭಾ ಸ್ಥಾನವನ್ನು ಕಳೆದುಕೊಂಡಿದೆ. ರಾಷ್ಟ್ರೀಯ ಜನತಾ ದಳ ಮಹಾ ಮೈತ್ರಿಕೂಟದ ಭಾಗವಾಗಿ ಈ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ತೇಜಸ್ವಿ ಯಾದವ್ ಈ ಸ್ಥಾನದಿಂದ ಶ್ವೇತಾ ಸುಮನ್ ಅವರಿಗೆ ಟಿಕೆಟ್ ನೀಡಿದ್ದರು, ಅವರು ತಮ್ಮ ನಾಮಪತ್ರ ಸಲ್ಲಿಸಿದರು, ಆದರೆ ಇಂದು ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಶ್ವೇತಾ ಸುಮನ್ ಈಗ ತಮ್ಮ ನಾಮಪತ್ರ ತಿರಸ್ಕೃತವಾಗಿದೆ ಎಂದು ಆರೋಪಿಸಿದ್ದಾರೆ, ಜನ ಸೂರಜ್ ಪಕ್ಷದ ಅಭ್ಯರ್ಥಿ ಗೀತಾ ಪಾಸಿ ಅವರ ನಾಮಪತ್ರವನ್ನು ಅಂಗೀಕರಿಸಲಾಗಿದೆ.

  • Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    ಪಾಟ್ನಾ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.

    ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 12 ಹಾಗೂ 3ನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂ‌ರ್ (Maithili Thakur)ರಿಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    pm modi road show bihar

    ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ 29, ಎಚ್‌ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಇದನ್ನೂ ಓದಿ: Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ಆರ್‌ಜೆಡಿ ಪಕ್ಷಗಳು ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳನ್ನ ಘೋಷಣೆ ಮಾಡಿಲ್ಲ. ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಿದೆ. ಆದ್ರೆ ಕಾಂಗ್ರೆಸ್‌ ಸೀಟು ಹಂಚಿಕೆಗೆ ಮುನ್ನವೇ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ ಎಂದು ತಿಳಿದುಬಂದಿದೆ.

    ಈ ಬಾರಿ ಬಿಹಾರದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್‌ 6ರಂದು ಮೊದಲ ಹಾಗೂ ನವೆಂಬರ್‌ 11 ರಂದು 2ನೇ ಹಂತದ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

  • Bihar Election Dates 2025 | ಬೂತ್ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಲು ಸಹಾಯವಾಣಿ

    Bihar Election Dates 2025 | ಬೂತ್ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಲು ಸಹಾಯವಾಣಿ

    – ಯಾವುದೇ ಗೊಂದಲಗಳಿದ್ದರೂ ಖುದ್ದು ಮತದಾರರೇ ಬಗೆಹರಿಸಿಕೊಳ್ಳಲು ಅನುವು

    ನವದೆಹಲಿ: ಬಿಹಾರ ಚುನಾವಣೆಯಿಂದಲೇ (Bihar Election 2025) ಮತದಾರರ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ 17 ಉಪಕ್ರಮಗಳನ್ನ ಅಳವಡಿಸಿಕೊಂಡಿದೆ. ಮತದಾರರ ಪಟ್ಟಿ (Voters List) ಶುದ್ಧೀಕರಣ, ಬೂತ್ ಮಟ್ಟದ ಅಧಿಕಾರಿಗಳ ಗೌರವಧನ ದ್ವಿಗುಣಗೊಳಿಸುವುದು, ಮೊಬೈಲ್ ಫೋನ್ ಕೌಂಟರ್‌, ಹೆಚ್ಚುವರಿ ಬೂತ್‌ಗಳು, ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಫೋಟೋಗಳು ಮತ್ತು ಪ್ರತಿ ಬೂತ್‌ನಲ್ಲಿ ಶೇ 100 ರಷ್ಟು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಮತದಾರರು ತಮ್ಮ ಬೂತ್‌ ಮಟ್ಟದ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿ ಗೊಂದಲ ಪರಿಹರಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇದು ದೇಶಾದ್ಯಂತ ಜಾರಿಗೆ ಬರಲಿದೆ.

    ಹೌದು. ಮತದಾನ, ಮತಪಟ್ಟಿ, ಹೆಸರು, ವಿಳಾಸ, ಬೂತ್‌ ಹೀಗೆ ಯಾವುದೇ ಗೊಂದಲಗಳು ಇದ್ದಲ್ಲಿ ನೇರವಾಗಿ ಬೂತ್‌ ಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಬಗೆಹರಿಸಿಕೊಳ್ಳಲು ಅನುವುಮಾಡಿಕೊಟ್ಟಿದೆ. ಹೊಸದಾಗಿ ಪರಿಚಯಿಸಲಾದ ECINet ಅಪ್ಲಿಕೇಶನ್ ಮೂಲಕ ಹಾಗೂ ಮತದಾರರ ಸಹಾಯವಾಣಿ ಸಂಖ್ಯೆ 1950 ಮತ್ತು ಮತದಾರರ ಸೇವಾ ಪೋರ್ಟಲ್ ಮೂಲಕ ಈ ಸೇವೆ ಲಭ್ಯವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    69 ಲಕ್ಷ ಹೆಸರುಗಳು ಡಿಲೀಟ್‌
    ಇನ್ನೂ ಸಾವು, ಅಕ್ರಮ ವಲಸಿಗರು, ನಕಲಿ ವೋಟರ್‌ ಐಡಿ (Voters ID) ಹಾಗೂ ವಿಳಾಸ ಬದಲಾವಣೆ ಕಾರಣಗಳಿಂದ 69 ಲಕ್ಷ ಹೆಸರುಗಳನ್ನ ಮತಪಟ್ಟಿಯಿಂದ ಅಳಿಸಲಾಗಿದೆ. ಇದೇ ವೇಳೆ 21.5 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ ಎಂದು ತಿಳಿಸಿದರು.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

    ಬುರ್ಖಾಧಾರಿ ಮಹಿಳೆಯರ ಪರಿಶೀಲನೆ
    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

  • Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

    Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

    ನವದೆಹಲಿ: ಸಾವು, ಅಕ್ರಮ ವಲಸಿಗರು (Illegal Immigrants), ನಕಲಿ ವೋಟರ್‌ ಐಡಿ ಹಾಗೂ ವಿಳಾಸ ಬದಲಾವಣೆ ಕಾರಣಗಳಿಂದ ಈ ಬಾರಿ ಬಿಹಾರ ಮತದಾರರ ಪಟ್ಟಿಯಲ್ಲಿ 69 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಮಾಹಿತಿ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿವಿಧ ಕಾರಣಗಳಿಂದ 69 ಲಕ್ಷ ಹೆಸರುಗಳನ್ನ ಮತಪಟ್ಟಿಯಿಂದ ಅಳಿಸಲಾಗಿದೆ. ಇದೇ ವೇಳೆ 21.5 ಲಕ್ಷ ಹೊಸ ಮತದಾರರು (New Voters) ಸೇರ್ಪಡೆಯಾಗಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಹಾರ ಎಲೆಕ್ಷನ್‌ನಿಂದಾಗಿ ಕರ್ನಾಟಕದ ಕಾಂಗ್ರೆಸ್ & ಬಿಜೆಪಿ ನಾಯಕತ್ವ ಬದಲಾವಣೆ ವಿದ್ಯಮಾನಗಳಿಗೆ ಅಲ್ಪವಿರಾಮ ಬ್ರೇಕ್ ಬಿದ್ದಂತಾಗಿದೆ. ಇದನ್ನೂ ಓದಿ: Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    ಬುರ್ಖಾಧಾರಿ ಮಹಿಳೆಯರ ಪರಿಶೀಲನೆ
    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.  

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

  • Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    Bihar Election 2025 | ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತರ ನಿಯೋಜನೆ

    ನವದೆಹಲಿ: ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ 2 ಹಂತದಲ್ಲಿ ಚುನಾವಣೆ (Bihar Election Dates 2025) ನಡೆಯಲಿದೆ. ನವೆಂಬರ್ 6 ಹಾಗೂ ನವೆಂಬರ್ 11ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಅಂತ ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 121 ಹಾಗೂ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ.

    ಕಾಂಗ್ರೆಸ್‌ ನಾಯಕರಿಂದ ಮತಗಳ್ಳತನ (Vote Theft) ಆರೋಪಗಳು ಹೆಚ್ಚಾಗಿ ಕೇಳಿಬಂದ ಹಿನ್ನೆಲೆ ಈ ಬಾರಿ 100% ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬುರ್ಖಾಧಾರಿ ಮಹಿಳೆಯರ ಗುರುತು ಪರಿಶೀಲಿಸಲು ಪ್ರತಿ ಬೂತ್‌ನಲ್ಲಿ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತರನ್ನ ನಿಯೋಜಿಸಲಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರವೇ ಅವರು ಗುರುತು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. 7.43 ಕೋಟಿ ಮತದಾರರಿದ್ದು, 3.92 ಕೋಟಿ ಪುರುಷರು, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಬಿಹಾರದಲ್ಲಿ 22 ವರ್ಷಗಳ ಬಳಿಕ ಮತಪಟ್ಟಿಯ ಸಮಗ್ರ ಪರಿಷ್ಕರಣೆ ಬಳಿಕ ಚುನಾವಣೆ ನಡೆಯುತ್ತಿದ್ದು, 14 ಲಕ್ಷ ಪ್ರಥಮ ಬಾರಿಗೆ ಮತಚಲಾಯಿಸುವ ಮತದಾರರಿದ್ದಾರೆ. 68.5 ಲಕ್ಷ ವೋಟ್‌ ಡಿಲೀಟ್ ಆಗಿದ್ದು, 21.5 ಲಕ್ಷ ಮತದಾರರ ಹೊಸ ಸೇರ್ಪಡೆಯಾಗಿದೆ.

    ಎನ್‌ಡಿಎನ ಮೋದಿ-ನಿತೀಶ್-ಚಿರಾಗ್ ಪಾಸ್ವಾನ್ ಹಾಗೂ ಇಂಡಿ ಕೂಟದ ರಾಹುಲ್-ತೇಜಸ್ವಿಯಾದವ್ ಹಾಗೂ ಜನಸುರಾಜ್ ಪಕ್ಷ ಸ್ಥಾಪಿಸಿರುವ ಪ್ರಶಾಂತ್ ಕಿಶೋರ್ ಅಧಿಕಾರದ ಚುಕ್ಕಾಣಿ ಸೆಣಸಲಿದ್ದಾರೆ.

    ಎಲ್ಲೆಲ್ಲಿ ಉಪಚುನಾವಣೆ?
    ಇನ್ನು, ಜಮ್ಮು & ಕಾಶ್ಮೀರ 2 ಹಾಗೂ ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ, ಒಡಿಶಾದಲ್ಲಿ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಹಾರ ಎಲೆಕ್ಷನ್‌ನಿಂದಾಗಿ ಕರ್ನಾಟಕದ ಕಾಂಗ್ರೆಸ್ & ಬಿಜೆಪಿ ನಾಯಕತ್ವ ಬದಲಾವಣೆ ವಿದ್ಯಮಾನಗಳಿಗೆ ಅಲ್ಪವಿರಾಮ ಬ್ರೇಕ್ ಬಿದ್ದಂತಾಗಿದೆ.

  • Bihar | ಮಹಿಳೆಯರಿಗೆ ಬಂಪರ್‌ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆಗಿಂದು ಪ್ರಧಾನಿ ಮೋದಿ ಚಾಲನೆ

    Bihar | ಮಹಿಳೆಯರಿಗೆ ಬಂಪರ್‌ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆಗಿಂದು ಪ್ರಧಾನಿ ಮೋದಿ ಚಾಲನೆ

    – 75 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ತಲಾ 10,000 ರೂ. ನೇರ ವರ್ಗಾವಣೆ

    ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್‌ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆಗೆ (Mukhyamantri Mahila Rojgar Yojana) ಚಾಲನೆ ನೀಡಲಿದ್ದಾರೆ.

    ವಿಡಿಯೋ ಕಾನ್ಫರೆನ್ಸ್‌ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದು, ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ತಲಾ 10,000 ರೂ.ಗಳಂತೆ ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ. ಇದನ್ನೂ ಓದಿ: ಲಡಾಖ್‌ ಹಿಂಸಾಚಾರ – ಸೋನಮ್ ವಾಂಗ್‌ಚುಕ್ NGO ಪರವಾನಗಿ ರದ್ದು

    ಬಿಹಾರ ಸರ್ಕಾರದ ಉಪಕ್ರಮವಾದ ಈ ಯೋಜನೆಯು ಮಹಿಳೆಯರನ್ನು (Bihar Womens) ಆತ್ಮನಿರ್ಭರನ್ನಾಗಿ ಮಾಡುವ ಮತ್ತು ಸ್ವಯಂ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣಗೊಳಿಸುವ ಗುರಿ ಹೊಂದಿದೆ. ಇದು ರಾಜ್ಯದ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಆರ್ಥಿಕ ನೆರವು ನೀಡುತ್ತದೆ. ಈ ಮೂಲಕ ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆ ಪ್ರಾರಂಭಿಸಲು ಅನುಕೂಲವಾಗುತ್ತದೆ.

    ಯೋಜನೆಯಡಿಯಲ್ಲಿ, ಪ್ರತಿ ಫಲಾನುಭವಿಯ ಬ್ಯಾಂಕ್‌ ಖಾತೆಗೆ ತಲಾ 10,000 ರೂ. ನೇರವಾಗಿ ವರ್ಗಾವಣೆಯಾಗಲಿದೆ. ನಂತರದ ಹಂತಗಳಲ್ಲಿ 2 ಲಕ್ಷ ರೂ.ಗಳ ವರೆಗೆ ಹೆಚ್ಚುವರಿ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ನೆರವನ್ನು ಫಲಾನುಭವಿಗಳು ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್‌, ನೇಯ್ಗೆ ಮತ್ತು ಇತರ ಸಣ್ಣ ಪ್ರಮಾಣದ ಉದ್ಯಮ ಸೇರಿದಂತೆ ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ಬಳಸಿಕೊಳ್ಳಬಹುದು ಎಂದು ಸರ್ಕಾರ ಸಲಹೆ ನೀಡಿದೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?