Tag: Bihar Minister

  • ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ಪೊಲೀಸ್‌ ಸಾವು; ಇದೇನು ಹೊಸದಲ್ಲ ಎಂದ ಸಚಿವ

    ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ಪೊಲೀಸ್‌ ಸಾವು; ಇದೇನು ಹೊಸದಲ್ಲ ಎಂದ ಸಚಿವ

    ಪಾಟ್ನಾ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಸಚಿವರೊಬ್ಬರು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

    ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನಿಂದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಒಬ್ಬರನ್ನು ಹತ್ಯೆ ಮಾಡಲಾಯಿತು. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡಲ್ಲ: ಪ್ರಧಾನಿ

    ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಬಿಹಾರ ಸಚಿವ ಚಂದ್ರಶೇಖರ್, ಇಂತಹ ಘಟನೆಗಳು ಹೊಸದೇನಲ್ಲ. ಇವುಗಳು ನಡೆಯುತ್ತಲೇ ಇರುತ್ತವೆ. ಈ ಹಿಂದೆಯೂ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿವೆ ಎಂದು ಹೇಳಿಕೆ ನೀಡಿದ್ದಾರೆ.

    ಪ್ರಕರಣದ ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಜಮುಯಿಯ ಮಹುಲಿಯಾ ತಾಂಡ್ ಗ್ರಾಮದಲ್ಲಿ ಈ ಹತ್ಯೆ ಘಟನೆ ನಡೆದಿದೆ. ಮೃತರನ್ನು ಪ್ರಭಾತ್ ರಂಜನ್ ಎಂದು ಗುರುತಿಸಲಾಗಿದ್ದು, ಸಿವಾನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಗರ್ಹಿ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು

    ಪ್ರಭಾತ್ ರಂಜನ್ ಅವರು ನಾಲ್ಕು ವರ್ಷದ ಮಗಳು ಮತ್ತು ಆರು ತಿಂಗಳ ಗಂಡು ಮಗುವನ್ನು ಅಗಲಿದ್ದಾರೆ. ನವಜಾತ ಶಿಶುವಿಗೆ ಜನ್ಮ ನೀಡಿದ ನಂತರ ಅವರ ಪತ್ನಿ ಪ್ರಸ್ತುತ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಪೊಲೀಸರ ಇಡೀ ಕುಟುಂಬ ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದೆ.

    ಗಾಯಗೊಂಡ ಗೃಹರಕ್ಷಕನನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಜಮುಯಿಯಲ್ಲಿರುವ ಖಾಸಗಿ ಕ್ಲಿನಿಕ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಬಿಹಾರ ಶಿಕ್ಷಣ ಸಚಿವರ ನಾಲಿಗೆ ತಂದವರಿಗೆ 10 ಕೋಟಿ ಬಹುಮಾನ – ಅಯೋಧ್ಯೆ ಸ್ವಾಮೀಜಿ

    ಬಿಹಾರ ಶಿಕ್ಷಣ ಸಚಿವರ ನಾಲಿಗೆ ತಂದವರಿಗೆ 10 ಕೋಟಿ ಬಹುಮಾನ – ಅಯೋಧ್ಯೆ ಸ್ವಾಮೀಜಿ

    ಲಕ್ನೋ: ಹಿಂದೂ ಧಾರ್ಮಿಕ ಪಠ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ (Chandra Shekhar) ವಿರುದ್ಧ ಅಯೋಧ್ಯೆ ಸ್ವಾಮೀಜಿಗಳು, ಅರ್ಚಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್‌ ನಾಲಿಗೆ ತಂದವರಿಗೆ 10 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ತಪಸ್ವಿ ಚಾವ್ನಿಯ ಮಹಂತ ಪರಮಹಂಸ ದಾಸ್‌ (Mahant Paramhans Das) ತಿಳಿಸಿದ್ದಾರೆ.

    ಬುಧವಾರ ಕಾರ್ಯಕ್ರಮವೊಂದರಲ್ಲಿ ಸಚಿವ ಚಂದ್ರಶೇಖರ್‌, ಹಿಂದೂ ಗ್ರಂಥಗಳ ವಿರುದ್ಧ ಹೇಳಿಕೆ ನೀಡಿದ್ದರು. ರಾಮಚರಿತಮಾಸ (Ramcharitmanas) ಮತ್ತು ಮನುಸ್ಮೃತಿ (Manusmriti) ಸಮಾಜವನ್ನು ವಿಭಜಿಸುವ ಮತ್ತು ದ್ವೇಷವನ್ನು ಹರಡುವ ಗ್ರಂಥಗಳಾಗಿವೆ ಎಂದು ಚಂದ್ರಶೇಖರ್‌ ಮಾತನಾಡಿದ್ದರು. ಇದನ್ನೂ ಓದಿ: ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

    ಸಚಿವರ ಹೇಳಿಕೆಗೆ ಅಯೋಧ್ಯೆ ಸ್ವಾಮೀಜಿ ದಾಸ್‌ ಅವರು ಕಿಡಿ ಕಾರಿದ್ದಾರೆ. ಚಂದ್ರಶೇಖರ್ ಅವರ ನಾಲಿಗೆ ತಂದವರಿಗೆ 10 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರಲ್ಲದೇ, ಅಂತಹ ಸಚಿವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಚಿವರ ಹೇಳಿಕೆಗೆ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಯಾರೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 50 ದಿನ ಟ್ರಿಪ್‌, 27 ನದಿ ಮಾರ್ಗವಾಗಿ ಯಾನ, 5 ಸ್ಟಾರ್‌ ಹೋಟೆಲ್‌ ಸಿಸ್ಟಮ್‌ – ʼಎಂವಿ ಗಂಗಾ ವಿಲಾಸ್‌ʼ ವೈಶಿಷ್ಟ್ಯ ಗೊತ್ತಾ?

    ಜಗದ್ಗುರು ಪರಮಹಂಸ ಆಚಾರ್ಯ ಅವರು ಮಾತನಾಡಿ, ಚಂದ್ರಶೇಖರ್‌ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಸಚಿವರ ಹೇಳಿಕೆಯಿಂದ ಇಡೀ ದೇಶಕ್ಕೆ ನೋವಾಗಿದೆ ಎಂದು ಬೇಸರಿಸಿದ್ದಾರೆ. ಅಲ್ಲದೇ, ರಾಮಚರಿತಮಾನಸ ಗ್ರಂಥವು ಜನಪರ ಮತ್ತು ಮಾನವೀಯತೆ ಪ್ರತಿಪಾದಿಸುವ ಆಶಯಗಳನ್ನು ಒಳಗೊಂಡಿದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮ್ಮ ಇಲಾಖೆಯಲ್ಲಿ ಕಳ್ಳ ಅಧಿಕಾರಿಗಳಿದ್ದಾರೆ; ಅವರಿಗೆ ನಾನೇ ಸರ್ದಾರ – ಬಿಹಾರ ಸಚಿವ

    ನಮ್ಮ ಇಲಾಖೆಯಲ್ಲಿ ಕಳ್ಳ ಅಧಿಕಾರಿಗಳಿದ್ದಾರೆ; ಅವರಿಗೆ ನಾನೇ ಸರ್ದಾರ – ಬಿಹಾರ ಸಚಿವ

    ಪಾಟ್ನಾ: ನಮ್ಮ ಇಲಾಖೆಯಲ್ಲಿರುವ ಅಧಿಕಾರಿಗಳು, ನೌಕರರು ಕಳ್ಳರು. ಈ ಕಳ್ಳರಿಗೆ ನಾನೇ ಸರ್ದಾರ (ಮುಖ್ಯಸ್ಥ) ಎಂದು ಬಿಹಾರದ ಕೃಷಿ ಸಚಿವ ಸುಧಾಕರ್‌ ಸಿಂಗ್‌ ಹೇಳಿಕೊಂಡಿದ್ದಾರೆ.

    ಕೈಮೂರ್‌ ಜಿಲ್ಲೆಯಲ್ಲಿ ರೈತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಅನೇಕ ಕಳ್ಳರಿದ್ದು, ಹಣವನ್ನು ದೋಚುತ್ತಿದ್ದಾರೆ. ನಾನು ಇಲಾಖೆಗೆ ಪ್ರಭಾರಿಯಾಗಿರುವುದರಿಂದ ಅವರಿಗೆ ಮುಖ್ಯಸ್ಥನಾಗುತ್ತೇನೆ. ನನಗಿಂತ ಮೇಲಿರುವ ಅನೇಕ ಮುಖ್ಯಸ್ಥರಿದ್ದಾರೆ. ಈ ಸರ್ಕಾರವು ಹಳೆಯದು. ಅದರ ಕಾರ್ಯಶೈಲಿಯೂ ಹಳೆಯದು. ಸರ್ಕಾರವನ್ನು ಎಚ್ಚರಿಸುವುದು ಸಾಮಾನ್ಯ ಜನರ ಕರ್ತವ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎರಡನೇ ಬಾರಿಗೆ ಅಟಾರ್ನಿ ಜನರಲ್ ಆಗಿ ಮುಕುಲ್ ರೊಹಟಗಿ ಆಯ್ಕೆ

    ನೀವು ಪ್ರತಿಕೃತಿಗಳನ್ನು ಸುಟ್ಟರೆ, ಏನೋ ತಪ್ಪಾಗಿದೆ ಎಂದು ನನಗೆ ಅರಿವಾಗುತ್ತದೆ. ಆದರೆ ನೀವು ಅದನ್ನು ಮಾಡದಿದ್ದರೆ, ಎಲ್ಲವೂ ಸರಿಯಾಗಿದೆ ಎಂದು ನಾನು ನಂಬುತ್ತೇನೆ ಎಂದು ರೈತರನ್ನು ಎಚ್ಚರಿಸಿದ್ದಾರೆ.

    ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಅವರ ಪುತ್ರ ಮತ್ತು ಕೈಮೂರ್‌ನ ರಾಮಗಢದ ಶಾಸಕ ಸುಧಾಕರ್ ಸಿಂಗ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಪ್ರಮುಖ ಖಾತೆಯನ್ನು ಹೊಂದಿದ್ದಾರೆ. ಇದನ್ನೂ ಓದಿ: ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ನರೇಂದ್ರ ಮೋದಿಯಿಂದಾಗಿ ನೀವೆಲ್ಲರೂ ಬದುಕಿದ್ದೀರಿ – ಲಸಿಕೆ ಪಡೆದ ಜನತೆಗೆ ಬಿಹಾರ ಸಚಿವ ಮಾತು

    ನರೇಂದ್ರ ಮೋದಿಯಿಂದಾಗಿ ನೀವೆಲ್ಲರೂ ಬದುಕಿದ್ದೀರಿ – ಲಸಿಕೆ ಪಡೆದ ಜನತೆಗೆ ಬಿಹಾರ ಸಚಿವ ಮಾತು

    ಪಾಟ್ನಾ: ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಡೆದ ಅತಿ ದೊಡ್ಡ ಲಸಿಕಾ ಅಭಿಯಾನವನ್ನು ಶ್ಲಾಘಿಸಿರುವ ಬಿಹಾರದ ಸಚಿವ ರಾಮ್ ಸೂರತ್ ರೈ, ಭಾರತೀಯರ ಜೀವ ಉಳಿಸಿದ ಶ್ರೇಯಸ್ಸನ್ನು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದಾರೆ.

    ನೀವಿಂದು ಬದುಕಿದ್ದರೆ ಅದರ ಕ್ರೆಡಿಟ್ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಅವರು ಲಸಿಕೆಯನ್ನು ಅಭಿವೃದ್ಧಿಪಡಿಸಿ, ದೇಶದ ಜನರಿಗೆ ಉಚಿತವಾಗಿ ನೀಡಿದರು. ಅದರಿಂದಾಗಿಯೇ ನೀವೆಲ್ಲರೂ ಇಂದು ಬದುಕಿದ್ದೀರಿ ಎಂದು ಈಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,692 ಮಂದಿಗೆ ಕೊರೊನಾ ಸೋಂಕು – ಇಬ್ಬರು ಸಾವು

    ಕೊರೊನಾ ಕಾರಣದಿಂದಾಗಿ ಅನೇಕ ದೇಶಗಳು ಈಗಲೂ ಆರ್ಥಿಕ ಪರಿಸ್ಥಿತಿ ಎದುರು ಹೋರಾಡುತ್ತಿವೆ. ಆದರೆ ಭಾರತದಲ್ಲಿ ಆರ್ಥಿಕತೆ ಬಲಪಡಿಸುವ ನಿಟ್ಟಿನಲ್ಲಿ ಅತ್ಯಂತ ವೇಗವಾಗಿ ಕೆಲಸಗಳು ಸಾಗುತ್ತಿವೆ.

    ನರೇಂದ್ರ ಮೋದಿ ಅವರು ಲಸಿಕೆಯನ್ನು ತಂದುಕೊಡದೆ ಇದ್ದಿದ್ದರೇ ಮತ್ತು ಅದನ್ನು ಜನರಿಗೆ ಉಚಿತವಾಗಿ ನೀಡದೇ ಇದ್ದಿದ್ದರೆ ಪರಿಸ್ಥಿತಿ ಬಹಳ ಕೆಟ್ಟದಾಗಿರುತ್ತಿತ್ತು. ನಮ್ಮ ಕುಟುಂಬಗಳು ಮತ್ತು ಸ್ನೇಹಿತರ ನಡುವೆಯೂ ಕೋವಿಡ್ ಸಾವುಗಳನ್ನು ನಾವೆಲ್ಲ ಕಂಡಿದ್ದೇವೆ. ನಾನು ನನ್ನ ಬಾಮೈದುನನ್ನೂ ಕಳೆದುಕೊಂಡಿದ್ದೇನೆ ಎಂದು ನೆನೆದಿದ್ದಾರೆ. ಇದನ್ನೂ ಓದಿ: ಎನ್‌ಕೌಂಟರ್‌ ವೇಳೆ ಭಯೋತ್ಪಾದಕರ ಗುಂಡೇಟಿಗೆ ಮಡಿದ ಸೇನಾ ಶ್ವಾನ

    ಈ ವರ್ಷದ ಜುಲೈ 17ರಂದು ಭಾರತ 200 ಕೋಟಿ ಡೋಸ್ ಲಸಿಕೆ ನೀಡಿ ಮೈಲಿಗಲ್ಲಿಗೆ ಹೆಸರಾಗಿದೆ. ಲಸಿಕಾ ಅಭಿಯಾನ ಆರಂಭವಾದ 18 ತಿಂಗಳ ಬಳಿಕ ಈ ಸಾಧನೆ ಮಾಡಲಾಗಿದೆ. ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನ ಕೇಂದ್ರ ಸರ್ಕಾರವು `ಕೋವಿಡ್ ಲಸಿಕೆ ಅಮೃತ ಮಹೋತ್ಸವ’ದ ವಿಶೇಷ ಅಭಿಯಾನ ಘೋಷಿಸಿದೆ. ಜುಲೈ 15 ರಿಂದ ಸೆಪ್ಟೆಂಬರ್ 30ರ ವರೆಗೆ 18 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಸಹ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]