Tag: Bihar Political Crisis

  • ನಿತೀಶ್ ಕುಮಾರ್ 2024ರ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ? – ಬಿಹಾರದಲ್ಲಿ ಇಂದು 2ನೇ ಇನ್ನಿಂಗ್ಸ್ ಆರಂಭ

    ನಿತೀಶ್ ಕುಮಾರ್ 2024ರ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ? – ಬಿಹಾರದಲ್ಲಿ ಇಂದು 2ನೇ ಇನ್ನಿಂಗ್ಸ್ ಆರಂಭ

    ಪಾಟ್ನಾ: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಆಗಿ 2ನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿ ಸರ್ಕಾರಕ್ಕೆ ನಿನ್ನೆ ನಿತೀಶ್ ಕುಮಾರ್ ಅಂತ್ಯ ಹಾಡಿದ್ದರು. ಇದೀಗ ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

    ಈ ಮೈತ್ರಿಯ ಹಿಂದಿನ ಅಸಲಿಯತ್ತಿನ ಬಗ್ಗೆ ಬಾರಿ ಚರ್ಚೆಯಾಗುತ್ತಿದೆ. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ನಿರ್ಧಾರಕ್ಕೆ 2024ರಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ಲೆಕ್ಕಾಚಾರವೂ ಇದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ 8ನೇ ಬಾರಿ ಬಿಹಾರದ ಸಿಎಂ ಆಗಿ ನಿತೀಶ್‌ ಗದ್ದುಗೆ ಏರಲಿದ್ದಾರೆ. ಮಹಾಘಟಬಂಧನ್ ಸರ್ಕಾರದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಹೊಂದಿರುವ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೊತೆಗೆ, ಗೃಹ ಮಂತ್ರಿ, ಸ್ಪೀಕರ್ ಹುದ್ದೆಗೆ ತೇಜಸ್ವಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ನಿತೀಶ್-ತೇಜಸ್ವಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದನ್ನೂ ಓದಿ: ಆ. 15ರವರೆಗೆ ಟಿಕೆಟ್ ಬುಕ್ ಆಗಿದ್ದವರಿಗೆ ಮಾತ್ರ ತಿರುಪತಿ ದರ್ಶನ

    243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ 122 ಸಂಖ್ಯೆ ಬೇಕು. ಸದ್ಯ ನಿತೀಶ್ ಕುಮಾರ್ ಬೆನ್ನಿಗೆ 7 ಪಕ್ಷಗಳ 164 ಶಾಸಕರು ನಿಂತಿದ್ದಾರೆ. 77 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಸದ್ಯ ಏಕಾಂಗಿಯಾಗಿದೆ.

    ಕಳೆದ ಕೆಲ ದಿನಗಳಿಂದ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡು, ಆರ್‌ಜೆಡಿ-ಕಾಂಗ್ರೆಸ್ ಸಂಪರ್ಕದಲ್ಲಿದ್ದ ನಿತೀಶ್ ಕುಮಾರ್ ನಿನ್ನೆ ಬೆಳಗ್ಗೆ ಶಾಸಕರ ಸಭೆ ನಡೆಸಿ ಬಿಜೆಪಿ ಮೈತ್ರಿಗೆ ಗುಡ್‌ಬೈ ಹೇಳುತ್ತಿರುವ ಬಗ್ಗೆ, ಆರ್‌ಜೆಡಿ-ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡರು. ನಿತೀಶ್ ಕುಮಾರ್ ನಿರ್ಧಾರಕ್ಕೆ ಇಡೀ ಸಭೆ ಸರ್ವಾನುಮತದಿಂದ ಬೆಂಬಲ ಸೂಚಿಸಿತ್ತು. ಸಂಜೆ ರಾಜ್ಯಪಾಲ ಫಾಗು ಚೌಹಾಣ್ ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಸ್ವಲ್ಪ ಹೊತ್ತಿನ ನಂತ್ರ ಆರ್‌ಜೆಡಿ-ಕಾಂಗ್ರೆಸ್ ಸೇರಿ ಇತರೆ ಪಕ್ಷಗಳೊಂದಿಗೆ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. 164 ಶಾಸಕರ ಬೆಂಬಲ ಪತ್ರ ಕೊಟ್ಟ ನಿತೀಶ್ ಕುಮಾರ್, ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಪಕ್ಷ ಒಡೆಯಲು ಬಿಜೆಪಿ ಮುಂದಾಗಿದ್ದರಿಂದ ಮೈತ್ರಿಕೂಟದಿಂದ ಹೊರಬರಬೇಕಾಯಿತು ಅಂತಾ ನಿತೀಶ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್‌ನೊಂದಿಗೆ ನಿತೀಶ್ ಹೊಸ ಸರ್ಕಾರ ಸ್ಥಾಪನೆ

    ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್‌ನೊಂದಿಗೆ ನಿತೀಶ್ ಹೊಸ ಸರ್ಕಾರ ಸ್ಥಾಪನೆ

    ಪಾಟ್ನಾ: ದೇಶದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಬಿಹಾರದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ. ಮೂರು ವರ್ಷಗಳಿಂದ ಬಿಜೆಪಿ ಜೊತೆಗೆ ಮೈತ್ರಿ ಸರ್ಕಾರ ನಡೆಸುತ್ತಿದ್ದ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದ್ದಾರೆ. ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದ್ದು, ಬಿಹಾರದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

    ಸಿಎಂ ನಿತೀಶ್ ಜೊತೆಗೆ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಳೆದ ಕೆಲ ದಿನಗಳಿಂದ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡು, ಆರ್‌ಜೆಡಿ-ಕಾಂಗ್ರೆಸ್ ಸಂಪರ್ಕದಲ್ಲಿದ್ದ ನಿತೀಶ್ ಕುಮಾರ್ ಇಂದು ಬೆಳಗ್ಗೆ ಶಾಸಕರ ಸಭೆ ನಡೆಸಿ ಬಿಜೆಪಿ ಮೈತ್ರಿಗೆ ಟಾಟಾ ಹೇಳುತ್ತಿರುವ ಬಗ್ಗೆ, ಆರ್‌ಜೆಡಿ-ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡರು.

    ನಿತೀಶ್ ಕುಮಾರ್ ನಿರ್ಧಾರಕ್ಕೆ ಇಡೀ ಸಭೆ ಸರ್ವಾನುಮತದಿಂದ ಬೆಂಬಲ ಸೂಚಿಸಿತು. ಸಂಜೆ ರಾಜ್ಯಪಾಲ ಫಾಗು ಚೌಹಾಣ್ ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಸ್ವಲ್ಪ ಹೊತ್ತಿನ ನಂತ್ರ ಆರ್‌ಜೆಡಿ-ಕಾಂಗ್ರೆಸ್ ಸೇರಿ ಇತರೆ ಪಕ್ಷಗಳೊಂದಿಗೆ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. 164 ಶಾಸಕರ ಬೆಂಬಲ ಪತ್ರ ಕೊಟ್ಟ ನಿತೀಶ್ ಕುಮಾರ್, ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಪಕ್ಷ ಒಡೆಯಲು ಬಿಜೆಪಿ ಮುಂದಾಗಿದ್ದರಿಂದ ಮೈತ್ರಿಕೂಟದಿಂದ ಹೊರಬರಬೇಕಾಯಿತು ಅಂತಾ ನಿತೀಶ್ ಹೇಳಿದ್ದಾರೆ.

    ಈ ಬೆಳವಣಿಗೆ ಬಿಜೆಪಿಗೆ ದೊಡ್ಡ ಹಿನ್ನಡೆ ಎಂದೇ ಪರಿಗಣಿಸಲಾಗುತ್ತಿದೆ. ಕೈಕೊಟ್ಟ ನಿತೀಶ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ನಿತೀಶ್ ಆರೋಪಗಳನ್ನು ತಳ್ಳಿ ಹಾಕಿದೆ. ನಿತೀಶ್ ಅವರನ್ನ ನಾವು ಕೇಂದ್ರ ಸಚಿವರನ್ನಾಗಿ ಮಾಡಿದ್ವಿ, ಮುಖ್ಯಮಂತ್ರಿ ಮಾಡಿದ್ವಿ. ಆದ್ರೂ ನಿತೀಶ್ ನಮಗೆ ನಂಬಿಕೆ ದ್ರೋಹ ಎಸಗಿದ್ದಾರೆ. ಜನಾದೇಶಕ್ಕೆ ನಿತೀಶ್ ಗೌರವ ನೀಡಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ಪಾಟ್ನಾ: ಬಿಹಾರದ ರಾಜ್ಯ ರಾಜಕೀಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಬಿಜೆಪಿ ಮೈತ್ರಿಯನ್ನು ನಿತೀಶ್ ಕುಮಾರ್ ತೊರೆದಿದ್ದಾರೆ. ವಿಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಲು ನಿತೀಶ್ ಮುಂದಾಗಿದ್ದಾರೆ.

    ದೇಶದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಬಿಹಾರದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ. ಕಳೆದ ಮೂರು ವರ್ಷಗಳಿಂದ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ನಡೆಸುತ್ತಿದ್ದ ಸಿಎಂ ನಿತೀಶ್ ಕುಮಾರ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಬಿಜೆಪಿ ಜೊತೆಗಿನ ಮೈತ್ರಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ

    ಆರ್‌ಜೆಡಿ, ಕಾಂಗ್ರೆಸ್ ಸಂಪರ್ಕದಲ್ಲಿದ್ದ ನಿತೀಶ್ ಕುಮಾರ್ ಇಂದು ಬೆಳಗ್ಗೆ ಶಾಸಕರ ಸಭೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ಮೈತ್ರಿ ತೊರೆಯುತ್ತಿದ್ದು, ವಿಪಕ್ಷಗಳ ಜೊತೆಗೆ ಸರ್ಕಾರ ರಚನೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನಿತೀಶ್ ಕುಮಾರ್ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಲಿದ್ದಾರೆ.

    ಬಿಹಾರದಲ್ಲಿ ಒಂದೊಮ್ಮೆ ಅತಿದೊಡ್ಡ ಪಕ್ಷವಾಗಿದ್ದ ಜೆಡಿಯು ಕಳೆದ ಚುನಾವಣೆಯಲ್ಲಿ 3ನೇ ಸ್ಥಾನಕ್ಕೆ ಕುಸಿದಿತ್ತು. ಬಿಜೆಪಿ ಅಧಿಕಾರವನ್ನು ಬಳಸಿಕೊಂಡು ತಳ ಮಟ್ಟದಲ್ಲಿ ಸಂಘಟನೆ ಮಾಡುತ್ತಿದ್ದು ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿಯೂ ಅಧಿಕಾರ ರಚನೆ ಮಾಡುವ ಸಾಧ್ಯತೆಗಳಿವೆ. ಹೀಗೆ ಆದರೆ ಬಿಜೆಪಿ ಜೆಡಿಯು ಅನ್ನು ಓವರ್ ಟೇಕ್ ಮಾಡಲಿದೆ ಎನ್ನುವ ಭೀತಿಯೂ ನಿತೀಶ್ ಕುಮಾರ್‌ಗೆ ಕಾಡುತ್ತಿದ್ದು ಪಕ್ಷವನ್ನು ಉಳಿಸಿಕೊಳ್ಳಲು ಮೈತ್ರಿಯಿಂದ ಹೊರ ಬಂದಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

    ನಿತೀಶ್ ಕುಮಾರ್ ಅವರ ಈ ನಿರ್ಧಾರ ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ಅವರ ಮುಂದಿನ ನಡೆಗಳು ಕುತೂಹಲ ಮೂಡಿಸಿದೆ. ಮುಂದೆ ಯಾವುದೇ ಆಯ್ಕೆ ಇಲ್ಲದ ಬಿಜೆಪಿ ಸದ್ಯಕ್ಕೆ ಬಿಹಾರ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದನ್ನೂ ಓದಿ: ಸಮಂತಾ ಮಾಜಿ ಪತಿ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

    ನಿತೀಶ್ ನಿರ್ಧಾರಕ್ಕೆ ಕಾರಣಗಳೇನು?

    • ಬಿಜೆಪಿ ಹೈಕಮಾಂಡ್ ಬಿಹಾರದ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ.
    • ಬಿಜೆಪಿಯು ತನ್ನ ಕಡೆಯಿಂದ ಆಯ್ಕೆ ಮಾಡಿ ಕಳಿಸುತ್ತಿರುವ ಸಚಿವರ ಕಾರ್ಯವೈಖರಿ ಸರಿಯಾಗಿಲ್ಲ.
    • ನಿತೀಶ್ ಕುಮಾರ್‌ಗೆ ಈ ಸಚಿವರು ಸುಗಮ ಸರ್ಕಾರ ನಡೆಸಲು ಅವಕಾಶ ಮಾಡಿಕೊಡುತ್ತಿಲ್ಲ.
    • ಬಿಹಾರ ವಿಧಾನಸಭೆಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಆದರೂ ಅವರನ್ನು ಬದಲಾವಣೆ ಮಾಡುತ್ತಿಲ್ಲ.
    • ಬಿಜೆಪಿ ನಾಯಕರು ಜೆಡಿಯು ಬಂಡಾಯ ನಾಯಕ ಆರ್‌ಸಿಪಿ ಸಿಂಗ್ ಜೊತೆಗೂಡಿ ಮಹಾರಾಷ್ಟ್ರ ಮಾದರಿಯಲ್ಲಿ ಪಕ್ಷವನ್ನು ಮುಳಿಗಿಸಲು ಸಂಚು ರೂಪಿಸಿದ್ದಾರೆ ಎನ್ನುವುದು ಎಲ್ಲದಕ್ಕಿಂತ ದೊಡ್ಡ ಆರೋಪ.

    Live Tv
    [brid partner=56869869 player=32851 video=960834 autoplay=true]