Tag: Bihar Polls

  • ಬಿಹಾರ ಚುನಾವಣೆಯಲ್ಲಿ 17 ಹೊಸ ಉಪಕ್ರಮ ಅಳವಡಿಸಿಕೊಂಡ ಚುನಾವಣಾ ಆಯೋಗ; ದೇಶದೆಲ್ಲೆಡೆ ಜಾರಿ

    ಬಿಹಾರ ಚುನಾವಣೆಯಲ್ಲಿ 17 ಹೊಸ ಉಪಕ್ರಮ ಅಳವಡಿಸಿಕೊಂಡ ಚುನಾವಣಾ ಆಯೋಗ; ದೇಶದೆಲ್ಲೆಡೆ ಜಾರಿ

    ಪಾಟ್ನಾ: ಬಿಹಾರ ಚುನಾವಣೆಗೆ (Bihar Polls) ದಿನಗಣನೆ ಶುರುವಾಗಿದೆ. ಚುನಾವಣಾ ಆಯೋಗವು (Election Commission) ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ 17 ಹೊಸ ಉಪಕ್ರಮಗಳನ್ನು ಜಾರಿಗೆ ತಂದಿದೆ.

    ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar), 17 ಹೊಸ ಉಪಕ್ರಮಗಳನ್ನು ದೇಶಾದ್ಯಂತ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ.15 ರಿಂದ ಹೊಸ ಟೋಲ್ ನಿಯಮ – ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರೀ ರಿಯಾಯಿತಿ

    ಮತದಾರರ ಪಟ್ಟಿ ಶುದ್ಧೀಕರಣ, ಬೂತ್ ಮಟ್ಟದ ಅಧಿಕಾರಿಗಳ ಗೌರವಧನ ದ್ವಿಗುಣಗೊಳಿಸುವುದು, ಮೊಬೈಲ್ ಫೋನ್ ಕೌಂಟರ್‌, ಹೆಚ್ಚುವರಿ ಬೂತ್‌ಗಳು, ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಫೋಟೋಗಳು ಮತ್ತು ಪ್ರತಿ ಬೂತ್‌ನಲ್ಲಿ ಶೇಕಡಾ ನೂರರಷ್ಟು ವೆಬ್‌ಕಾಸ್ಟಿಂಗ್ ಸೇರಿವೆ. ಇನ್ನು ನವೆಂಬರ್ 22ರ ಒಳಗೆ ಬಿಹಾರ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿಯಲಿದೆ ಎಂದಿದ್ದಾರೆ. ಬಿಹಾರದ ಎಲ್ಲಾ ಮತದಾರರು ತಮ್ಮ ಮತ ಚಲಾಯಿಸುವಂತೆ ಮತ್ತು ಛತ್‌ ಪೂಜಾ ಹಬ್ಬವನ್ನು ಆಚರಿಸುವಂತೆಯೇ ಚುನಾವಣಾ ದಿನವನ್ನು ಆಚರಿಸುವಂತೆ ಕರೆ ಕೊಟ್ಟರು. ಇದನ್ನೂ ಓದಿ: ಮಹಾರಾಷ್ಟ್ರದ ಶಿರೋಡಾ ಬೀಚ್‍ನಲ್ಲಿ ಅಲೆಯಬ್ಬರಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ

    ಬಿಹಾರ ಸೇರಿದಂತೆ ದೇಶಾದ್ಯಂತದ 7,000ಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಮೇಲ್ವಿಚಾರಕರಿಗೆ ದೆಹಲಿಯ IIIDEM ನಲ್ಲಿ ತರಬೇತಿ ನೀಡಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು, ಮತದಾನ/ಮತ ಎಣಿಕೆ ಸಿಬ್ಬಂದಿ, CAPF, ಮೇಲ್ವಿಚಾರಣಾ ತಂಡಗಳು ಮತ್ತು ಸೂಕ್ಷ್ಮ ವೀಕ್ಷಕರಿಗೆ ನೀಡುವ ಗೌರವಧನವನ್ನು ದ್ವಿಗುಣಗೊಳಿಸಲಾಗಿದೆ. ಮೊದಲ ಬಾರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಗೌರವಧನ ನೀಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಅವರಿಗೆ ನೀಡುವ ಉಪಹಾರದ ವ್ಯವಸ್ಥೆಯನ್ನೂ ಹೆಚ್ಚಿಸಲಾಗಿದೆ.

    ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿ
    EVM ಮತಪತ್ರಗಳನ್ನು ಹೆಚ್ಚು ಸ್ಪಷ್ಟವಾಗಿ ಓದಲು ಸಾಧ್ಯವಾಗುವಂತೆ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗಿದೆ. ಇದೇ ಮೊದಲ ಬಾರಿಗೆ EVM ಗಳಲ್ಲಿ ಅಭ್ಯರ್ಥಿಗಳ ಬಣ್ಣದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು ಎಂದು ಸಿಇಸಿ ತಿಳಿಸಿದರು. “ಬಿಹಾರ ಚುನಾವಣೆಗಳಲ್ಲಿ ಪ್ರತಿ ಬೂತ್‌ನಲ್ಲಿ 100% ರಷ್ಟು ವೆಬ್‌ಕಾಸ್ಟಿಂಗ್ ನಡೆಸಲಾಗುವುದು ಎಂದು ಅವರು ವಿವರಿಸಿದರು. ಬಹುನಿರೀಕ್ಷಿತ ಬಿಹಾರ ಚುನಾವಣೆಗೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ನವೆಂಬರ್‌ನಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ.

    ಅಂದ್ಹಾಗೆ ಬಿಹಾರದಲ್ಲಿ ಒಟ್ಟು ಮತದಾರರು 7.42 ಕೋಟಿ ಇದ್ದು, 3.66 ಲಕ್ಷ ಮತದಾರರನ್ನ ಡಿಲಿಟ್ ಮಾಡಲಾಗಿದೆ. 21.53 ಲಕ್ಷ ಹೊಸ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಮತದಾರ ಪರಿಷ್ಕರಣೆ ಬಗ್ಗೆ ರಾಜಕೀಯ ಪಕ್ಷಗಳು ಆಕ್ಷೇಪ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಹಾಗೇನೆ ಆಧಾರ್ ಕಾರ್ಡ್, ಜನ್ಮ ದಿನಾಂಕ ಅಥವಾ ಪೌರತ್ವಕ್ಕೆ ಪ್ರೂಫ್ ಅಲ್ಲ ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: Darjeeling Flood | 24/7 ಕಂಟ್ರೋಲ್‌ ರೂಮ್‌ ಓಪನ್‌ – ನಾಳೆ ಡಾರ್ಜಿಲಿಂಗ್‌ಗೆ ದೀದಿ ಭೇಟಿ

  • ಬಿಹಾರ ಸರ್ಕಾರದಿಂದ ಬಂಪರ್‌ ಗಿಫ್ಟ್‌ – ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಡಬಲ್‌

    ಬಿಹಾರ ಸರ್ಕಾರದಿಂದ ಬಂಪರ್‌ ಗಿಫ್ಟ್‌ – ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಡಬಲ್‌

    ಪಾಟ್ನಾ: ವಿದ್ಯುತ್‌ ಸೇರಿದಂತೆ ಈಗಾಗಲೇ ಹಲವು ಉಚಿತ ಭರವಸೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೇತೃತ್ವದ ಸರ್ಕಾರ ಚುನಾವಣೆಗೆ ಮುನ್ನ ಮತ್ತೊಂದು ಬಂಪರ್‌ ಕೊಡುಗೆ ಘೋಷಣೆ ಮಾಡಿದೆ. ಬಿಸಿಯೂಟ ತಯಾರಕರು, ರಾತ್ರಿ ಕಾವಲುಗಾರರು (Night Watchmen) ಹಾಗೂ ಗೌರವ ಧನವನ್ನ ಹೆಚ್ಚಳ ಮಾಡಿದೆ.

    ಹೌದು. ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು (ಬಿಸಿಯೂಟ ತಯಾರಕರು), ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಈ ಕಾರ್ಮಿಕರ ಗೌರವಧನವನ್ನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ನಿತೀಶ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್‌

    ನಿತೀಶ್‌ ಕುಮಾರ್‌ ಎಕ್ಸ್‌ನಲ್ಲಿ ಏನಿದೆ?
    2005ರ ನವೆಂಬರ್‌ನಲ್ಲಿ ನಮ್ಮ ಸರ್ಕಾರ ರಚನೆಯಾದಾಗಿನಿಂದ, ನಾವು ಶಿಕ್ಷಣ ವ್ಯವಸ್ಥೆಯನ್ನ ಸುಧಾರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. 2005 ರಲ್ಲಿ ಶಿಕ್ಷಣದ ಒಟ್ಟು ಬಜೆಟ್ 4,366 ಕೋಟಿ ರೂ.ಗಳಾಗಿದ್ದು, ಈಗ ಅದು 77,690 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಶಿಕ್ಷಕರ ನೇಮಕಾತಿ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಕಂಡುಬಂದಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್- ವಿಕಾಸ್ ಕುಮಾರ್ ಸಸ್ಪೆಂಡ್ ಆದೇಶ ವಾಪಸ್

    ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು, ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಗೌರವಧನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ. ಇದನ್ನೂ ಓದಿ: ಬೆಂಗಳೂರಿಗರಿಗೆ ಮತ್ತೊಂದು ಶಾಕ್ – ಇಂದಿನಿಂದ ಆಟೋ ದರ ಏರಿಕೆ

    ಶಿಕ್ಷಣ ಇಲಾಖೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೆಲಸ ಮಾಡುವ ಅಡುಗೆಯವರ ಗೌರವಧನವನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಬಿಸಿಯೂಟ ತಯಾರಕರ ಗೌರವಧನವನ್ನ 1,650 ರೂ.ಗಳಿಂದ 3,300 ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ಸಮಯದಲ್ಲಿ ಮಾಧ್ಯಮಿಕ/ಉನ್ನತ ಶಿಕ್ಷಣ ಶಾಲೆಯಲ್ಲಿ ಕೆಲಸ ಮಾಡುವ ರಾತ್ರಿ ಕಾವಲುಗಾರರ ಗೌರವಧನವನ್ನ 5000 ರಿಂದ 10,000 ರೂ.ಗಳಿಗೆ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಅಲ್ಲದೇ, ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರ ಗೌರವಧನವನ್ನ 8 ಸಾವಿರದಿಂದ 16,000 ರೂ. ಗಳಿಗೆ, ವಾರ್ಷಿಕ ವೇತನವನ್ನ 200 ರೂ.ಗಳಿಂದ 400 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು ಕಾರ್ಯನಿರತ ಸಿಬ್ಬಂದಿ ಮನೋಸ್ಥೈರ್ಯವನ್ನ ಹೆಚ್ಚಿಸುತ್ತದೆ ಎಂದು ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

  • ಬಿಹಾರ ಚುನಾವಣೆ ಹೊತ್ತಲ್ಲೇ ಸಿಎಂ ನಿತೀಶ್‌ ಕುಮಾರ್‌ ಮಹತ್ವದ ಘೋಷಣೆ – ಮಾಸಿಕ ಪಿಂಚಣಿ 1,100 ರೂ.ಗೆ ಹೆಚ್ಚಳ

    ಬಿಹಾರ ಚುನಾವಣೆ ಹೊತ್ತಲ್ಲೇ ಸಿಎಂ ನಿತೀಶ್‌ ಕುಮಾರ್‌ ಮಹತ್ವದ ಘೋಷಣೆ – ಮಾಸಿಕ ಪಿಂಚಣಿ 1,100 ರೂ.ಗೆ ಹೆಚ್ಚಳ

    – ವೃದ್ಧರು, ಅಂಗವಿಕಲರು, ವಿಧವೆಯರ ಪಿಂಚಣಿ 400ನಿಂದ 1,100 ರೂ.ಗೆ ಏರಿಕೆ

    ಪಾಟ್ನಾ: ಬಿಹಾರ ವಿಧಾನಸಭಾ (Bihar Polls) ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ಮಾಸಿಕ ಪಿಂಚಣಿಯನ್ನು 400 ರೂ.ನಿಂದ 1,100 ರೂ.ಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

    ಜುಲೈನಿಂದಲೇ ಈ ನಿರ್ಧಾರ ಜಾರಿಗೆ ಬರಲಿದೆ. ರಾಜ್ಯದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 1,09,69,255 ಫಲಾನುಭವಿಗಳಿಗೆ ಇದರಿಂದ ಅನುಕೂಲ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ: ಈಶ್ವರಪ್ಪ

    ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ, ಎಲ್ಲಾ ವೃದ್ಧರು, ಅಂಗವಿಕಲರು ಮತ್ತು ವಿಧವೆಯರು ಈಗ ಪ್ರತಿ ತಿಂಗಳು 400 ರೂ. ಬದಲಿಗೆ 1,100 ರೂ.ಗಳ ಪಿಂಚಣಿ ಪಡೆಯುತ್ತಾರೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳು ಹೆಚ್ಚಿದ ದರದಲ್ಲಿ ಪಿಂಚಣಿ ಪಡೆಯುತ್ತಾರೆ. ಈ ಮೊತ್ತವನ್ನು ತಿಂಗಳ 10 ನೇ ತಾರೀಖಿನಂದು ಎಲ್ಲಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಇದು 1.9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಸಹಾಯಕವಾಗಿದೆ ಎಂದು ಹೇಳಿದ್ದಾರೆ.

    ಹಿರಿಯರು ಸಮಾಜದ ಅಮೂಲ್ಯ ಭಾಗ. ಅವರ ಗೌರವಾನ್ವಿತ ಜೀವನ ಖಚಿತಪಡಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

    ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ. ಜನತಾದಳ (ಯುನೈಟೆಡ್) ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದಲ್ಲಿರುವ ಅದರ ಮಿತ್ರಪಕ್ಷಗಳು, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ವಿರುದ್ಧ ತಮ್ಮ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿವೆ.