Tag: bike rider

  • ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು

    ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು

    ಚಾಮರಾಜನಗರ: ಬೈಕ್ ಸವಾರನೊಬ್ಬ (Bike Rider) ಕಾಡಾನೆಗಳ ದಾಳಿಯಿಂದ (Wild Elephant Attack) ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಂಡೀಪುರದಲ್ಲಿ (Bandipur) ನಡೆದಿದೆ.

    ಬಂಡೀಪುರ – ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೆ ಕಾಡಾನೆ ಎದುರಾಗಿದ್ದು, ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಇದರಿಂದ ಗಾಬರಿಗೊಂಡ ಬೈಕ್ ಸವಾರ ಬೈಕ್ ಬಿಟ್ಟು ಕಾಡಿನತ್ತ ಓಡುವಾಗ ಮತ್ತೆ ಕಾಡಾನೆಗಳ ಹಿಂಡಿನೊಳಗೆ ಸಿಲುಕಿದ್ದಾನೆ. ಇದನ್ನೂ ಓದಿ: ಮಂಡ್ಯ To ಇಂಡಿಯಾ ಉದ್ಯೋಗ ಮೇಳ ಯಶಸ್ವಿ – 1,100 ಮಂದಿಗೆ ಉದ್ಯೋಗ

    ಅದೃಷ್ಟವಶಾತ್ ಕಾಡಾನೆಗಳು ದಾಳಿ ಮಾಡದೆ ಕಾಡಿನೊಳಗೆ ತೆರಳಿವೆ. ಈ ಎಲ್ಲಾ ದೃಶ್ಯಗಳನ್ನು ಸಮೀಪದಲ್ಲೇ ಇದ್ದ ವಾಹನ ಸವಾರರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: Jharkhand Election | 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಎಂಎಂ ಮೈತ್ರಿಕೂಟ ಸ್ಪರ್ಧೆ ಫಿಕ್ಸ್‌

  • ನಾನ್ ಹೆಲ್ಮೆಟ್ ಹಾಕಿಲ್ಲ ಅಂದ್ರೆ ನಿನ್ಗೇನ್ ಕಷ್ಟ – ಬೈಕ್ ಸವಾರನಿಗೆ ಪೊಲೀಸ್ ಅವಾಜ್

    ನಾನ್ ಹೆಲ್ಮೆಟ್ ಹಾಕಿಲ್ಲ ಅಂದ್ರೆ ನಿನ್ಗೇನ್ ಕಷ್ಟ – ಬೈಕ್ ಸವಾರನಿಗೆ ಪೊಲೀಸ್ ಅವಾಜ್

    ಚೆನ್ನೈ: ಹೆಲ್ಮೆಟ್ (Helmate) ಧರಿಸಿ ವಾಹನ ಚಲಾಯಿಸುವಂತೆ ಸಲಹೆ ನೀಡಿದ ಬೈಕ್ ಸವಾರನಿಗೆ ಪೊಲೀಸ್ ಒಬ್ಬರು ಅವಾಜ್ ಹಾಕಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಹೌದು, ಪೊಲೀಸ್ ಆಗಿರುವ ನಿಮಗೆ ಒಳ್ಳೆಯದಾಗಲಿ ಎಂದು ಹೇಳುತ್ತಿದ್ದೇನೆ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಿ ಗಾಡಿ ಓಡಿಸಿ ಎಂದು ಬೈಕ್ ಸವಾರಿ ತಿಳಿ ಹೇಳಿದ್ದಕ್ಕೆ ಪೊಲೀಸ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೋಬಿ ಮಂಚೂರಿಯಿಂದ ನಡೆದಿತ್ತು ವೃದ್ಧೆ ಶಾಂತಕುಮಾರಿ ಕೊಲೆ – 5 ವರ್ಷಗಳ ನಂತ್ರ ಆರೋಪಿಗಳು ಅರೆಸ್ಟ್

    ವೀಡಿಯೋದಲ್ಲಿ ಪೊಲೀಸ್ ಪೇದೆಯೊಬ್ಬರು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದುದನ್ನು ಕಂಡ ಬೈಕ್ ಸವಾರ ಹೆಲ್ಮೆಟ್ ಧರಿಸುವಂತೆ ಮನವಿ ಮಾಡುತ್ತಾನೆ. ಈ ವೇಳೆ ಬೈಕ್ ಸವಾರನಿಗೆ ಅಡ್ಡ ಹಾಕಿ, ನಾನು ಹೆಲ್ಮೆಟ್ ಧರಿಸದಿದ್ದರೆ ನಿನಗೇನು ಸಮಸ್ಯೆ? ನನಗೆ ಬಹಳಷ್ಟು ಸಮಸ್ಯೆ ಇದೆ. ನಿನ್ನ ಕೆಲಸ ನೀನು ನೋಡಿಕೋ ಎಂದು ಅವಾಚ್ಯ ಶಬ್ಧದಿಂದ ನಿಂದಿಸಿರುವುದನ್ನು ಕಾಣಬಹುದಾಗಿದೆ.

    ನಂತರ ಬೈಕ್ ಸವಾರ ನೀವು ಏನಾದರೂ ತಪ್ಪು ಮಾಡಿದ್ದೀರಾ ಎಂದಾಗ ಪೊಲೀಸ್ ಹೌದು ಮಾಡಿದ್ದೇನೆ. ನಿನಗೇನು ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ವರ್ತನೆಯ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಕುರುಪಾಂಡವರು ಕಾದಾಡಿ, ಧರ್ಮದ ಜ್ಯೋತಿ ಬೆಳಗಿದರು- ಮೈಲಾರಲಿಂಗನ ಕಾರ್ಣಿಕ ನುಡಿ

    Live Tv
    [brid partner=56869869 player=32851 video=960834 autoplay=true]

  • ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್

    ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್

    ಹೈದರಾಬಾದ್: ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಅಂಗಡಿಗೆ ನುಗ್ಗಿದ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಘಟನೆ ವೇಳೆ ಬಟ್ಟೆ ಅಂಗಡಿಯ ಕೌಂಟರ್ ಬಳಿ ನಿಂತಿದ್ದ ಮೂವರು ಗ್ರಾಹಕರು ಸಮಯಕ್ಕೆ ಸರಿಯಾಗಿ ಪಕ್ಕಕ್ಕೆ ಸರಿದ್ದರಿಂದ ಬಚಾವ್ ಆಗಿದ್ದಾರೆ. ಈ ಘಟನೆ ಸೋಮವಾರ ರಾತ್ರಿ 8.30ರ ಸುಮಾರಿಗೆ ತೆಲಂಗಾಣದ ಖಮ್ಮಂ ಜಿಲ್ಲೆಯ ರಾವಿಚೆಟ್ಟು ಬಜಾರ್‌ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 4 ಜನರು ಅಂಗಡಿಯೊಳಗೆ ಕುಳಿತುಕೊಂಡಿರುವುದನ್ನು ಕಾಣಬಹುದಾಗಿದೆ. ಇವರಲ್ಲಿ 3 ಗ್ರಾಹಕರಾಗಿದ್ದರೆ, ಓರ್ವ ಸಿಬ್ಬಂದಿಯಾಗಿದ್ದಾನೆ. ಇದನ್ನೂ ಓದಿ: ಡೆಸರ್ಟ್ ಸಫಾರಿಯನ್ನು ಎಂಜಾಯ್ ಮಾಡ್ತಿರೋ ಜಾನ್ವಿ, ಖುಷಿ ಕಪೂರ್

    Bike

    ಬ್ರೇಕ್ ಫೇಲ್ ಆಗಿದ್ದರ ಪರಿಣಾಮ ನಿಯಂತ್ರಣ ತಪ್ಪಿ ಬಜಾಜ್ ಪಲ್ಸರ್ ಬೈಕ್ ಅಂಗಡಿಯ ಒಳಗೆ ನುಗ್ಗಿದ್ದು, ವಾಹನ ಸವಾರ ಕೌಂಟರ್‍ಗೆ ಜಿಗಿದಿರುವುದನ್ನು ಕಾಣಬಹುದಾಗಿದೆ. ಅಷ್ಟು ಭಯಾಂಕರವಾದ ಅಪಘಾತ ಸಂಭವಿಸಿದ್ದರು. ಸದ್ಯ ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬೈಕ್ ಸವಾರನಿಗೂ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು

    ಕೊನೆಗೆ ಅಪಘಾತದ ಬಳಿಕ ಬೈಕ್ ಸವಾರ ಅಂಗಡಿ ಅವರಿಗೆ ಕ್ಷಮೆಯಾಚಿಸಿದ್ದಾನೆ. ಘಟನೆ ಕುರಿತಂತೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ರಾಜಧಾನಿಯಲ್ಲಿ ಶೂಟೌಟ್- ಬೈಕ್ ಸವಾರನ ಮೇಲೆ ಕಾರು ಚಾಲಕನಿಂದ ಗುಂಡಿನ ದಾಳಿ

    ರಾಜಧಾನಿಯಲ್ಲಿ ಶೂಟೌಟ್- ಬೈಕ್ ಸವಾರನ ಮೇಲೆ ಕಾರು ಚಾಲಕನಿಂದ ಗುಂಡಿನ ದಾಳಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಾರು ಚಾಲಕನೊಬ್ಬ ಬೈಕ್ ಸವಾರನ ಮೇಲೆ ಶೂಟೌಟ್ ಮಾಡಿದ್ದಾನೆ.

    ಈ ಘಟನೆ ರಾಮಯ್ಯ ಆಸ್ಪತ್ರೆಯ ಹಿಂಬದಿ ಗೇಟ್ ಬಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬೈಕ್ ಸವಾರನ ಮೇಲೆ ಈ ದಾಳಿ ನಡೆಸಲಾಗಿದೆ.

    ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರದ ಗಲಾಟೆ ತಾರಕಕ್ಕೇರಿ ಬೈಕ್ ವಾರನ ಮೇಲೆ ಕಾರು ಚಾಲಕ 2 ಸುತ್ತು ಗುಂಡಿನ ದಾಳಿ ನಡೆಸಿದ್ದಾನೆ.  ಇದನ್ನೂ ಓದಿ: ಮುಖವೇ ಇಲ್ಲದೆ ಹುಟ್ಟಿದ ಕುರಿಮರಿ!

    ಅನಿಲ್ ಎಂಬವರ ಮೇಲೆ ಗುಂಡಿನ ದಾಳಿ ಮಾಡಿ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್

  • ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಹಲ್ಲೆ

    ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಹಲ್ಲೆ

    ಮಂಗಳೂರು: ನಗರದ ಹೊರವಲಯದ ಕಿನ್ನಿಗೋಳಿ ಬಸ್ ನಿಲ್ದಾಣದ ಸಮೀಪದ ಮುಖ್ಯ ರಸ್ತೆಯ ಅಂಗಡಿಯೊಂದರ ಎದುರು ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಸವಾರನ ಮೇಲೆ ಹಲ್ಲೆ ನಡೆಸಲಾಗಿದೆ.

    ಮುಖ್ಯ ರಸ್ತೆಯ ಅನುಗ್ರಹ ಕಟ್ಟಡದ ಮುಂಭಾಗ ಯುವಕನೋರ್ವ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಅನುಗ್ರಹ ಕಟ್ಟಡ ಮಾಲಕರಾದ ರಘುರಾಮ ಮತ್ತು ಸಹೋದರರು ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರು ಹಲ್ಲೆಯ ದೃಶ್ಯಗಳನ್ನ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

    ಈ ಹಿಂದೆಯೂ ಅನೇಕ ಬಾರಿ ಇಂತಹ ಘಟನೆಗಳು ನಡೆದಿದ್ದು, ಇದೀಗ ಮತ್ತೆ ಮರುಕಳಿಸಿದ್ದು ಸಾರ್ವಜನಿಕರು ಕೆಂಡಾಮಂಡಲವಾಗಿದ್ದಾರೆ. ಈ ಜಾಗ ಲೋಕೋಪಯೋಗಿ ಇಲಾಖೆಗೆ ಸೇರಿದ್ದರೂ ಈ ಅನುಗ್ರಹ ಕಟ್ಟಡದ ಸಹೋದರರ ದಬ್ಬಾಳಿಕೆ ನಿರಂತರವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಲ್ಲೆ ಸಂಬಂಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ

  • ಮದ್ಯ ಸೇವಿಸಿ ಕಾರು ಚಾಲನೆ – ಸರಣಿ ಅಪಘಾತದಲ್ಲಿ ಯುವಕ ಸಾವು

    ಮದ್ಯ ಸೇವಿಸಿ ಕಾರು ಚಾಲನೆ – ಸರಣಿ ಅಪಘಾತದಲ್ಲಿ ಯುವಕ ಸಾವು

    ಬೆಂಗಳೂರು: ಮದ್ಯ ಸೇವಿಸಿ ಕಾರು ಚಾಲನೆ ಮಾಡಿ ಸರಣಿ ಅಪಘಾತ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ರಿಚ್ಮಂಡ್ ವೃತ್ತದಲ್ಲಿ ಗುರುವಾರ ರಾತ್ರಿ ನಡೆದಿದೆ.

    ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಆರೋಪಿಯನ್ನು ರೋಹಿತ್ ಕೇಡಿಯಾ ಎಂದು ಗುರುತಿಸಲಾಗಿದೆ. ಈ ಸರಣಿ ಅಪಘಾತದಲ್ಲಿ ಇನ್ಶೂರೆನ್ಸ್ ಕಂಪನಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ (23) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೋರ್ವ ಕಾರು ಚಾಲಕ ಶ್ರೀಕಾಂತ್‍ಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಧ್ಯರಾತ್ರಿ ರೋಹಿತ್ ಕೇಡಿಯಾ ಕಂಠಪೂರ್ತಿ ಕುಡಿದು ಕಾರು ಓಡಿಸಿಕೊಂಡು ಬಂದಿದ್ದಾನೆ. ನಂತರ ರಿಚ್ಮಂಡ್ ವೃತ್ತದ ಸಿಗ್ನಲ್ ಅಲ್ಲಿ ನಿಂತಿದ್ದ ಕಿರಣ್ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರು ನಿಯಂತ್ರಣಕ್ಕೆ ಸಿಗದೆ, ಮೊತ್ತೊಂದು ಕಾರಿಗೂ ಡಿಕ್ಕಿ ಆಗಿದೆ. ಅದರಲ್ಲಿದ್ದ ಡ್ರೈವರ್ ಶ್ರೀಕಾಂತ್‍ಗೆ ಗಂಭೀರವಾಗಿ ಗಾಯವಾಗಿದ್ದು, ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

    ಆರೋಪಿ ರೋಹಿತ್ ಕೇಡಿಯಾನನ್ನು ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶ ನೀಡಿದ್ದಾರೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಮದ್ಯದ ಜೊತೆಗೆ ಡ್ರಗ್ಸ್ ತೆಗೆದುಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪೊಲೀಸರು ರವಾನೆ ಮಾಡಿದ್ದಾರೆ.

  • ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು

    ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ.

    ಗಿರೀಶ್ ಬುಧವಂತ ನಾಯ್ಕ ಬಚಾವ್ ಆದ ಸವಾರ. ಬೃಹತ್ ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬೈಕ್ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದೆ.

    ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾರ್ಯವನ್ನ ಐಆರ್‌ಬಿ ಕಂಪನಿ ಮಾಡಿದ್ದು, ಕಳೆದ ಮಳೆಗಾಲದಲ್ಲೂ ಅವೈಜ್ಞಾನಿಕ ಕಾಮಗಾರಿಯಿಂದ ಅನೇಕ ಅವಘಡಗಳು ಹೆದ್ದಾರಿಯಲ್ಲಿ ಸಂಭವಿಸಿತ್ತು. ಈ ಬಾರಿ ಸಹ ಮಳೆಗಾಲ ಪ್ರಾರಂಭದಲ್ಲಿಯೇ ಅವಘಡ ಸಂಭವಿಸಿದ್ದು, ಮಳೆಯಿಂದ ಗುಡ್ಡಗಳು ಕುಸಿಯತೊಡಗಿವೆ.  ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಬೈಕಿಗೆ ಇನ್ನೋವಾ ಕಾರು ಡಿಕ್ಕಿ – 40 ಅಡಿ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

    ಬೈಕಿಗೆ ಇನ್ನೋವಾ ಕಾರು ಡಿಕ್ಕಿ – 40 ಅಡಿ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

    ಬೆಂಗಳೂರು: ಬೈಕಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸುಮಾರು 40 ಅಡಿ ಎತ್ತರದ ಫ್ಲೈಓವರ್ ರಸ್ತೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ನಡೆದಿದೆ.

    ಬೆಂಗಳೂರಿನಿಂದ ತುಮಕೂರು ಕಡೆ ಬರುವ ವೇಳೆ ವೇಗವಾಗಿ ಬಂದ ಇನ್ನೋವಾ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕಿನಲ್ಲಿದ್ದ ಆಂಧ್ರ ಮೂಲದ 25 ವರ್ಷದ ಸಂಜಯ್ ಕುಮಾರ್ ಫ್ಲೈಓವರ್ ರಸ್ತೆಯಿಂದ 40 ಅಡಿ ಕೆಳಗೆ ಬಿದ್ದ ವೇಳೆ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ನರಳಾಡಿ ಸಾವನ್ನಪ್ಪಿದ್ದಾನೆ.

    ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಬೈಕ್ ಸವಾರ ಸಂಜಯ್ ಕುಮಾರ್ ಕೆಳಗೆ ಬೀಳುವ ವೇಳೆ ಆತನ ಹೆಲ್ಮೆಟ್ ಕೆಳಗೆ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಅಪಘಾತದ ವೇಳೆ ಜನರು ಧಾವಿಸುವ ದೃಶ್ಯ ಕೂಡ ಸೆರೆಯಾಗಿದೆ. ಸದ್ಯ ಇನ್ನೋವಾ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಡ್ಡ ಬಂದ ಜಿಂಕೆಗೆ ಬೈಕ್ ಡಿಕ್ಕಿ – ಸವಾರ, ಜಿಂಕೆ ಸ್ಥಳದಲ್ಲೇ ಸಾವು

    ಅಡ್ಡ ಬಂದ ಜಿಂಕೆಗೆ ಬೈಕ್ ಡಿಕ್ಕಿ – ಸವಾರ, ಜಿಂಕೆ ಸ್ಥಳದಲ್ಲೇ ಸಾವು

    ಬೆಂಗಳೂರು: ಯುವಕನೊಬ್ಬ ಬೈಕಿನಲ್ಲಿ ತನ್ನ ಅಕ್ಕನನ್ನು ಬಸ್ ಹತ್ತಿಸಿ ವಾಪಸ್ ಬರುವಾಗ ಅಡ್ಡ ಬಂದ ಜಿಂಕೆಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಯುವಕ ಹಾಗೂ ಜಿಂಕೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿ ಬಳಿ ನಡೆದಿದೆ.

    ಹರೀಶ್ (21) ಮೃತಪಟ್ಟ ದುರ್ದೈವಿ. ಅಪ್ಪಗೊಂಡನಹಳ್ಳಿ ಗ್ರಾಮದ ನಿವಾಸಿಯಾಗಿರುವ ಹರೀಶ್ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದನು. ಬೆಳಗಿನ ಜಾವ ಸುಮಾರು 5.30ಕ್ಕೆ ಈ ಘಟನೆ ನಡೆದಿದ್ದು, ಬೆಳ್ಳಂಬೆಳಗ್ಗೆ ಮಂಜು ಮುಸುಕಿನ ಕಾರಣದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಈ ಘಟನೆಯಲ್ಲಿ ಕಾಡು ಪ್ರಾಣಿ ಜಿಂಕೆ ಕೂಡ ಸಾವುನ್ನಪ್ಪಿದೆ. ಬೈಕ್‍ನಿಂದ ಕೆಳಗೆ ಬಿದ್ದಾಗ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಹರೀಶ್ ಸಾವನ್ನಪ್ಪಿದ್ದಾನೆ. ನೆಲಮಂಗಲದ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇತ್ತ ಬಯಲು ಸೀಮೆ ಭಾಗದಲ್ಲಿ ಕಾಡು ಪ್ರಾಣಿಗಳು ಸಂಖ್ಯೆ ಹೆಚ್ಚಾಗಿದೆ. ಆದರೆ ಜಿಂಕೆ ಕಂಡಿರುವುದು ಇದೆ ಮೊದಲಾಗಿದೆ ಎಂದು ಹರೀಶ್ ಸಂಬಂಧಿಕರು ತಿಳಿಸಿದ್ದಾರೆ. ನೆಲಮಂಗಲ ಸಿಪಿಐ ಶಿವಣ್ಣ ತ್ಯಾಮಗೊಂಡ್ಲು ಪಿಎಸ್‍ಐ ಕೃಷ್ಣಕುಮಾರ್ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅಣ್ಣಾ ಅಂತ ಕರೆಯಲಿಲ್ಲವೆಂದು ಪಾದಾಚಾರಿಗೆ ಥಳಿಸಿದ ಬೈಕ್ ಸವಾರ

    ಅಣ್ಣಾ ಅಂತ ಕರೆಯಲಿಲ್ಲವೆಂದು ಪಾದಾಚಾರಿಗೆ ಥಳಿಸಿದ ಬೈಕ್ ಸವಾರ

    ಮಡಿಕೇರಿ: ತನ್ನನ್ನು ಅಣ್ಣ ಅಂತ ಕರೆಯಲಿಲ್ಲ ಎಂದು ಬೈಕ್ ಸವಾರನೊಬ್ಬ ದಾರಿಹೊಕನ ಮೇಲೆ ಕಿರಿಕ್ ಮಾಡಿ, ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ವಾಲ್ನೂರು-ತ್ಯಾಗತ್ತೂರು ಬಳಿ ಮಂಗಳವಾರ ರಾತ್ರಿ ನಡೆದಿದೆ.

    ಬೈಕ್ ಸವಾರ ಮದನ್, ಪಾದಾಚಾರಿ ಸುದೀಶ್ ಮೇಲೆ ಹಲ್ಲೆ ಮಾಡಿದ್ದಾನೆ. ರಸ್ತೆ ಸುದೀಶ್ ಹೇಗುತ್ತಿದ್ದಾಗ ಹಿಂಬದಿಯಿಂದ ಬೈಕ್‍ನಲ್ಲಿ ಬಂದು ಮದನ್ ಹಾರ್ನ್ ಮಾಡಿದ್ದಾನೆ. ಅಲ್ಲದೆ ದಾರಿಯಲ್ಲಿ ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿದ್ದ ಸುದೀಶ್ ಜೊತೆ ವಿನಾಕಾರಣ ಜಗಳ ತೆಗೆದಿದ್ದಾನೆ. ಈ ವೇಳೆ ಸುದೀಶ್ ಹಾಗೂ ಮದನ್ ಇಬ್ಬರ ನಡುವೆ ಜಗಳವಾಗಿದ್ದು, ನೀನು ನನ್ನನ್ನು ಅಣ್ಣ ಅಂತ ಕರೆಯಬೇಕು ಎಂದು ಮದನ್ ಸುದೀಶ್ ಮೇಲೆ ಕೂಗಾಡಿದ್ದಾನೆ. ಅದಕ್ಕೆ ಸುದೀಶ್ ಒಪ್ಪದಿದ್ದಾಗ ಮದನ್ ಆತನಿಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾನೆ.

    ಹಲ್ಲೆಯಲ್ಲಿ ಸುದೀಶ್‍ಗೆ ಗಂಭೀರ ಗಾಯಗಳಾಗಿದ್ದು, ಆತ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.