Tag: Bike Stand

  • ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ವಿದ್ಯಾರ್ಥಿ ದುರ್ಮರಣ

    ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ವಿದ್ಯಾರ್ಥಿ ದುರ್ಮರಣ

    ಮಂಗಳೂರು: ಸವಾರರಿಗೆ ಹೆಲ್ಮೆಟ್ ಎಷ್ಟು ಇಂಪಾರ್ಟೆಂಟೋ ಬೈಕ್ ಸ್ಟ್ಯಾಂಡ್ (Bike Stand) ತೆಗೆದು ಚಲಾಯಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಯಾಕೆಂದರೆ ಇಲ್ಲೊಬ್ಬ ವಿದ್ಯಾರ್ಥಿ ಬೈಕ್ ಸ್ಟ್ಯಾಂಡ್ ತೆಗೆಯದೇ ಚಲಾಯಿಸಿ ಭಾರೀ ಅನಾಹುತವೊಂದು ನಡೆದು ಹೋಗಿದೆ.

    ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆಯಲ್ಲಿ (Ujire) ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿಯಾಗಿರುವ ದೀಕ್ಷಿತ್, ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ದೀಕ್ಷಿತ್, ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ್ದಾನೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ದೀಕ್ಷಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು

    ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೈಕ್ ಸ್ಟ್ಯಾಂಡ್ ತೆಗೆಯದೇ ಗಾಡಿ ಚಲಾಯಿಸಿ ಆಯತಪ್ಪಿ ಬಿದ್ದ- ಲಾರಿ ಹರಿದು ಸವಾರ ಸಾವು

    ಬೈಕ್ ಸ್ಟ್ಯಾಂಡ್ ತೆಗೆಯದೇ ಗಾಡಿ ಚಲಾಯಿಸಿ ಆಯತಪ್ಪಿ ಬಿದ್ದ- ಲಾರಿ ಹರಿದು ಸವಾರ ಸಾವು

    ಮಂಗಳೂರು: ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ತೊಕ್ಕೊಟ್ಟಿನಲ್ಲಿ ನಡೆದಿದೆ.

    ತಲಪಾಡಿ ಕೆ.ಸಿ. ರೋಡ್ ನಿವಾಸಿ ಸಲೀಂ (30) ಮೃತ ದುರ್ದೈವಿ. ಸಲೀಂ ಅವರು ಬೈಕನ ಸ್ಟಾಂಡ್ ತೆಗೆಯದೇ ಚಲಾಯಿಸಿದ್ದರಿಂದ ಆಯತಪ್ಪಿ ರಸ್ತೆಗೆ ಉರುಳಿ ಬಿದ್ದಿದ್ದು, ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಲಾರಿ ಅವರ ಮೇಲೆ ಹರಿದು ಹೋಗಿದೆ.

    ಸಲೀಂ ತಲೆಯ ಭಾಗ ಜಜ್ಜಿ ಹೋಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಲೀಂ ಅವರ ಜೇಬಿನಲ್ಲಿ ಎರಡು ಪ್ಯಾಕೆಟ್ ಗಾಂಜಾ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈ ಸಂಬಂಧ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.