Tag: Bike Taxi

  • ಸೆ.22ಕ್ಕೆ ಹೈಕೋರ್ಟ್‌ನಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?

    ಸೆ.22ಕ್ಕೆ ಹೈಕೋರ್ಟ್‌ನಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?

    ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆ ಹಾಗೂ ಬೈಕ್ ಟ್ಯಾಕ್ಸಿ (Bike Taxi) ಚಾಲಕರ ಜಟಾಪಟಿ ಮುಂದುವರೆದಿದ್ದು, ಇದೇ 22ಕ್ಕೆ ಬೈಕ್ ಟ್ಯಾಕ್ಸಿ ಭವಿಷ್ಯ ನಿರ್ಧಾರವಾಗಲಿದೆ.

    ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಕಾರ್ಯಾಚರಣೆ ಬಗ್ಗೆ ತನ್ನ ನಿಲುವು ತಿಳಿಸಲು ಹೈಕೋರ್ಟ್ ಸರ್ಕಾರಕ್ಕೆ (Karnataka government) ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸಾಧಕ-ಭಾದಕಗಳ ಬಗ್ಗೆ ವರದಿ ಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ಈ ಕಮಿಟಿಯನ್ನು ಸರ್ಕಾರದ ಸಾರಿಗೆ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಒಟ್ಟು 11 ಜನ ಈ ಕಮಿಟಿಯ ಸದಸ್ಯರಿದ್ದಾರೆ.

    ಉನ್ನತ ಮಟ್ಟದ ಕಮಿಟಿಯಲ್ಲಿ ಯಾರಿದ್ದಾರೆ?
    * ಬೆಂಗಳೂರು ನಗರ ಭೂ ಸಾರಿಗೆ ಅಭಿವೃದ್ಧಿ ಇಲಾಖೆ ಆಯುಕ್ತರು
    * ಕಾರ್ಮಿಕ ಇಲಾಖೆ ಆಯುಕ್ತರು
    * ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು
    * ಬಿಎಂಟಿಸಿ ಎಂಡಿ
    * ಬೆಂಗಳೂರು ಜಂಟಿ ಸಂಚಾರ ಪೋಲಿಸ್ ಆಯುಕ್ತರು
    * ಬೆಂಗಳೂರು ನಗರ ಜಂಟಿ ಪೋಲಿಸ್ ಆಯುಕ್ತರು
    * ಬಿಎಂಆರ್‌ಸಿಎಲ್‌ನ ಹಿರಿಯ ಪ್ರತಿನಿಧಿ
    * ಬೃಹತ್ ಬೆಂಗಳೂರು ಪ್ರಾಧಿಕಾರದ ಹಿರಿಯ ಪ್ರತಿನಿಧಿ
    * ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ
    * ಸಾರಿಗೆ ಇಲಾಖೆಯ ಆಯುಕ್ತರು ಹಾಗೂ ಕಾರ್ಯದರ್ಶಿಗಳು

    ಈ ಕಮಿಟಿಯಲ್ಲಿ ಬೆಂಗಳೂರು ನಗರ ಭೂಸಾರಿಗೆ ಅಭಿವೃದ್ಧಿ ಇಲಾಖೆ (ಡಲ್ಟ್)ನ ಆಯುಕ್ತರು, ಕಾರ್ಮಿಕ ಇಲಾಖೆ ಆಯುಕ್ತರು, ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು, ಬಿಎಂಟಿಸಿ ಎಂಡಿ, ಬೆಂಗಳೂರು ಜಂಟಿ ಸಂಚಾರ ಪೋಲಿಸ್ ಆಯುಕ್ತರು, ಬೆಂಗಳೂರು ನಗರ ಜಂಟಿ ಪೋಲಿಸ್ ಆಯುಕ್ತರು, ಬಿಎಂಆರ್‌ಸಿಎಲ್‌ನ ಹಿರಿಯ ಪ್ರತಿನಿಧಿ, ಬೃಹತ್ ಬೆಂಗಳೂರು ಪ್ರಾಧಿಕಾರದ ಹಿರಿಯ ಪ್ರತಿನಿಧಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ, ಸಾರಿಗೆ ಇಲಾಖೆಯ ಆಯುಕ್ತರು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 11 ಜನರ ಕಮಿಟಿ ರಚಿಸಲಾಗಿದೆ.

    ಈ ಕಮಿಟಿಯು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯ ಸಾಧಕ-ಭಾದಕಗಳ ಕುರಿತು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಈ ವರದಿಯ ಆಧಾರದ ಮೇಲೆ ಸಾರಿಗೆ ಇಲಾಖೆ ಅಥವಾ ಸರ್ಕಾರ ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಬಗ್ಗೆ ನಿಯಮ ರೂಪಿಸಿ ತನ್ನ ನಿಲುವು ಪ್ರಕಟಿಸಲಿದೆ.

    ಒಂದು ಅಂದಾಜಿನಂತೆ ಬೆಂಗಳೂರಲ್ಲಿ ಸುಮಾರು 1.20 ಲಕ್ಷ ಖಾಸಗಿ ಬೈಕ್ ಸವಾರರು ಬೈಕ್ ಟ್ಯಾಕ್ಸಿ ಮಾಡುತ್ತಿದ್ದಾರೆ.

  • ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ

    ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ

    ಬೆಂಗಳೂರು: ಒಂದು ತಿಂಗಳ ನಂತರ ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ (Bike Taxi) ಸೇವೆ ಆರಂಭವಾಗಿದೆ.ಇದನ್ನೂ ಓದಿ: ಯೂಟ್ಯೂಬರ್‌ ಸಮೀರ್‌ಗೆ ಜಾಮೀನು ಮಂಜೂರು

    ಕರ್ನಾಟಕ ಹೈಕೋರ್ಟ್ (High Court) ಏಕಸದಸ್ಯ ಪೀಠದ ಆಅದೇಶದಂತೆ ಜೂ.16ರಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸ್ಥಗಿತಗೊಂಡಿತ್ತು. ಈ ಕುರಿತಂತೆ ಹೈಕೋರ್ಟ್ ಸರ್ಕಾರಕ್ಕೆ ಒಂದು ತಿಂಗಳೊಳಗೆ ನಿರ್ಧಾರ ತಿಳಿಸುವಂತೆ ಸೂಚಿಸಿದೆ.

    ಈಗಾಗಲೇ ಎರಡು ಫ್ಲಾಟ್‌ಫಾರಂಗಳಲ್ಲಿ ಬುಕ್ಕಿಂಗ್ ಆಯ್ಕೆ ತೋರಿಸುತ್ತಿದ್ದು, ಓಲಾ ಹೊರತುಪಡಿಸಿ ರ‍್ಯಾಪಿಡೋ (Rapido) ಹಾಗೂ ಊಬರ್ (Uber) ಕಂಪನಿಗಳಿಂದ ಸೇವೆ ಆರಂಭವಾಗಿದೆ.ಇದನ್ನೂ ಓದಿ: ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

  • ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ತೀರ್ಮಾನ – ರಾಮಲಿಂಗಾ ರೆಡ್ಡಿ

    ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ತೀರ್ಮಾನ – ರಾಮಲಿಂಗಾ ರೆಡ್ಡಿ

    ಬೆಂಗಳೂರು: ಬೈಕ್ ಟ್ಯಾಕ್ಸಿ (Bike Taxi) ಸೇವೆ ಪುನರ್ ಸ್ಥಾಪನೆ ಬಗ್ಗೆ ಹೈಕೋರ್ಟ್ (High Court) ಆದೇಶವನ್ನ ಸರ್ಕಾರ ಪಾಲನೆ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸದಸ್ಯ ಡಿ.ಎಸ್. ಅರುಣ್ ಬೈಕ್ ಟ್ಯಾಕ್ಸಿ ಸ್ಥಗಿತ ಮಾಡಿರೋ ಬಗ್ಗೆ ಪ್ರಶ್ನೆ ಕೇಳಿದರು. ಬೆಂಗಳೂರಿನಲ್ಲಿ ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಮಾಡಲಾಗಿದೆ. ಸರ್ಕಾರದ ಕ್ರಮ ಸರಿಯಲ್ಲ. ಬೈಕ್ ಟ್ಯಾಕ್ಸಿಯಿಂದ ಯುವಕರಿಗೆ ಉದ್ಯೋಗ ಸೃಷ್ಟಿ ಆಗುತ್ತಿದೆ. ಬೈಕ್ ಟ್ಯಾಕ್ಸಿಯಿಂದ ಜನರಿಗೆ ಅನುಕೂಲ ಆಗುತ್ತಿದೆ. ಕೋರ್ಟ್ ಆದೇಶ ಮಾಡಿದೆ ಅಂತ ತಡೆ ಹಿಡಿಯೋದು ಸರಿಯಲ್ಲ. ಕೋರ್ಟ್ಗೆ ಮಾಹಿತಿ ಕೊಡಬೇಕು. ಬೈಕ್ ಟ್ಯಾಕ್ಸಿ ನಿಲ್ಲಿಸಿರುವುದರಿಂದ ಸಮಸ್ಯೆ ಆಗುತ್ತಿದೆ. 8 ಲಕ್ಷ ಜನರು ಗಿಗ್ ವರ್ಕರ್ ಇದ್ದಾರೆ. ಬೈಕ್ ಟ್ಯಾಕ್ಸಿ ಮತ್ತೆ ಪ್ರಾರಂಭ ಮಾಡಿ ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ

    ಇದಕ್ಕೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, 2018ರಲ್ಲಿ ಬೈಕ್ ಟ್ಯಾಕ್ಸಿ ಸಾಧಕಬಾಧಕದ ಬಗ್ಗೆ ಚರ್ಚೆ ಆಯಿತು. 2019ರಲ್ಲಿ ಬೈಕ್ ಟ್ಯಾಕ್ಸಿ ಯೋಜನೆ ಬೇಡ ಅಂತ ಮೆಟ್ರೋ ಎಂಡಿ ನೇತೃತ್ವದ ಸಮತಿ ವರದಿ ಕೊಟ್ಟಿದ್ದರು. ಆದರೂ 2021ರಲ್ಲಿ ಬ್ಯಾಟರಿ ವಾಹನಕ್ಕೆ ಅವಕಾಶ ಕೊಡಲಾಗಿತ್ತು. ಆದರೆ ಈಗ ಈ ಸೇವೆ ಕೊಡೋ ಕಂಪನಿಗಳು ನಿಯಮ ಉಲ್ಲಂಘನೆ ಮಾಡಲಾಗಿದೆ. ಅದಕ್ಕೆ ಸ್ಥಗಿತ ಮಾಡಲಾಗಿದೆ. ಬೈಕ್ ಟ್ಯಾಕ್ಸಿ ವಿಚಾರ ಕೋರ್ಟ್ನಲ್ಲಿ ಇದೆ. ಕೆಲವೇ ದಿನಗಳಲ್ಲಿ ತೀರ್ಪು ಬರುತ್ತದೆ. ಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಿ: ರೇಣುಕಾಚಾರ್ಯ

  • ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

    ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

    – ರಾಜ್ಯ ಸರ್ಕಾರ ಅನುಮತಿ ನೀಡಿದ್ರೆ ಮಾತ್ರ ಅಗ್ರಿಗೇಟರ್ ಸೇವೆ

    ನವದೆಹಲಿ: ರಾಜ್ಯ ಸರ್ಕಾರ (State Government) ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ (Bike Taxi) ಕೇಂದ್ರ ಸರ್ಕಾರ (Central Government) ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.

    ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.ಇದನ್ನೂ ಓದಿ: ಭಾರತೀಯ ರೈಲ್ವೆ ಇಲಾಖೆಯಿಂದ RailOne ಆಪ್‌ ಬಿಡುಗಡೆ- ಏನೆಲ್ಲಾ ಸೇವೆ ಲಭ್ಯವಿದೆ?

    ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    – ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
    – ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
    – ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
    – ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.ಇದನ್ನೂ ಓದಿ: ಈಡೇರಿದ ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು!

  • ಉದ್ಯಮಿ ಮೋಹನ್ ದಾಸ್ ಪೈ ಮೇಲೆ FIR ಖಂಡನೀಯ – ಯಡಿಯೂರಪ್ಪ

    ಉದ್ಯಮಿ ಮೋಹನ್ ದಾಸ್ ಪೈ ಮೇಲೆ FIR ಖಂಡನೀಯ – ಯಡಿಯೂರಪ್ಪ

    ಬೆಂಗಳೂರು: ಉದ್ಯಮಿ ಮೋಹನ್ ದಾಸ್ ಪೈ (Mohan D ಮೇಲೆ ಎಫ್‌ಐಆರ್ ದಾಖಲಿಸಿರುವ ಸರ್ಕಾರದ ನಡೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖಂಡಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋಹನ್ ದಾಸ್ ಅಂತಹ ಹಿರಿಯರ ಮೇಲೆ ಸುಳ್ಳು ಕಾರಣ ಹೇಳಿ, ಎಫ್‌ಐಆರ್ ಹಾಕುವ ಧೈರ್ಯ ಈ ಸರ್ಕಾರ ಮಾಡುತ್ತಿದೆ. ರಾಜಕೀಯದಿಂದ ದೂರ ಇರುವವರು ಈ ಸರ್ಕಾರದ ಬಗ್ಗೆ ಮಾತನಾಡಬಾರದು ಎನ್ನೋದು ಈ ಸರ್ಕಾರದ ಧೋರಣೆ ಎಂದು ದೂರಿದ್ದಾರೆ.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಸರ್ಕಾರದ ಬಗ್ಗೆ ಭಯ ಹುಟ್ಟಿಸುವ ವಾತಾವರಣ ತರುವ ಪ್ರಯತ್ನ ಈ ಸರ್ಕಾರ, ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್ ಅವರು ಹೆಜ್ಜೆ ಹೆಜ್ಜೆಗೂ ಬೆಂಬಲ ಕೊಡುತ್ತಿದ್ದಾರೆ. ಇದನ್ನ ಖಂಡಿಸುತ್ತೇನೆ. ಈ ಎಲ್ಲಾ ಸಂಗತಿಗಳನ್ನು ಜನರಿಗೆ, ಕಾರ್ಯಕರ್ತರಿಗೆ ತಿಳಿಸಿ ರಾಜ್ಯಾದ್ಯಂತ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಸಂಬAಧ ಹೈಕೋರ್ಟ್ ಆದೇಶದ ಬಳಿಕ ಆರ್‌ಟಿಒ ಬೈಕ್ ಟ್ಯಾಕ್ಸಿ ವಿರುದ್ಧ ಸಮರ ಸಾರಿತ್ತು. ಆದರೆ ಬೈಕ್ ಟ್ಯಾಕ್ಸಿ ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿದ್ದು, ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ದೂರು ದಾಖಲಿಸಿತ್ತು.ಇದನ್ನೂ ಓದಿ: ದುಡ್ಡು ಕೊಟ್ಟರೆ ಮಾತ್ರ ವರ್ಕ್‌ ಆರ್ಡರ್‌: ಬಿಆರ್‌ ಪಾಟೀಲ್‌ ಬಳಿಕ ರಾಜು ಕಾಗೆ ದಂಗೆ

  • ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ನಿಷೇಧ ಸಂಬಂಧ ಹೈಕೋರ್ಟ್ ಆದೇಶದ ಬಳಿಕ ಆರ್‌ಟಿಒ ಬೈಕ್ ಟ್ಯಾಕ್ಸಿ ವಿರುದ್ಧ ಸಮರ ಸಾರಿದೆ. ಆದರೆ ಬೈಕ್ ಟ್ಯಾಕ್ಸಿ ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿದ್ದು, ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ (Mohan Das Pai) ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ದೂರು ದಾಖಲು ಮಾಡಿದೆ.

    ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಇಂದು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ, ಕಳೆದ ಏಪ್ರಿಲ್‌ನಲ್ಲಿ ಹೈಕೋರ್ಟ್ ಬೈಕ್ ಟ್ಯಾಕ್ಸಿ ರದ್ದು ಮಾಡಿ ಆದೇಶ ಮಾಡಿದೆ. ಆದರೂ ಉಲ್ಲಂಘನೆ ಮಾಡಿ ಪರೋಕ್ಷವಾಗಿ ಬೈಕ್ ಟ್ಯಾಕ್ಸಿ ನಡೆಸಲಾಗುತ್ತಿದೆ. ಈ ಮಧ್ಯೆ ಮೋಹನ್ ದಾಸ್ ಪೈ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಇವರಿಗೆ ಕಾನೂನಿನ ಕನಿಷ್ಠ ಜ್ಞಾನ ಇಲ್ಲವೇ? ನ್ಯಾಯಾಲಯದ ಆದೇಶ ಇದ್ದರೂ ಬೈಕ್ ಟ್ಯಾಕ್ಸಿ ಪರ ಟ್ವೀಟ್ ಮಾಡಿ ಪ್ರವೋಕ್ ಮಾಡಿದ್ದಾರೆ. ಬನ್ನಿ ಚರ್ಚೆ ಮಾಡೋಣ. ಬೈಕ್ ಟ್ಯಾಕ್ಸಿಯಿಂದ ಏನೆಲ್ಲಾ ಸಮಸ್ಯೆಗಳು ಆಗುತ್ತೆ ಎಂದು ಹೇಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

    ಇನ್ನೂ ಕೆಲವು ಬೈಕ್ ಟ್ಯಾಕ್ಸಿ ಚಾಲಕರು, ಫ್ರೀಡಂ ಪಾರ್ಕ್ ಬಿಟ್ಟು ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂಬುದು ಗೊತ್ತಿದ್ದರೂ, ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಟ್ವೀಟ್ ಮಾಡಿದ ಮೋಹನ್ ದಾಸ್ ಪೈ ಹಾಗೂ ಪ್ರತಿಭಟನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದ್ದೇನೆ. ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ

    ಬೈಕ್ ಟ್ಯಾಕ್ಸಿ ನಿಂತಮೇಲೆ ಆಟೋದವರು ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ರೀತಿ ಇದ್ದರೆ ರಿಯಾಲಿಟಿ ಚೆಕ್ ಆಗಲಿ, ಅವರ ವಿರುದ್ಧ ಕ್ರಮ ಆಗಲಿ. ದರ ನಿಗದಿ ಡ್ರೈವರ್‌ಗಳ ಕೈಯಲ್ಲಿ ಇಲ್ಲ. ಎಲ್ಲವೂ ಆಪ್ ಕಾರ್ಪೋರೇಟ್ ಕಂಪನಿಗಳ ಕೈಯಲ್ಲಿದೆ. ಸರ್ಕಾರದ ದರವನ್ನ ಆರ್‌ಟಿಒ ಜಾರಿ ಮಾಡಲಿ. ಅದರ ಉದ್ದೇಶ ನಿಜಕ್ಕೂ ಇದ್ದರೆ ಸಾರಿಗೆ ಇಲಾಖೆ ಕಾರ್ಪೋರೇಟ್ ಕಂಪನಿಗಳ ವಿರುದ್ಧ ದೂರು ನೀಡಲಿ. ಕಾನೂನು ವಿರುದ್ಧ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಆಗಬೇಕು. ನ್ಯಾಯಾಲಯದ ಆದೇಶ ಇರುವುದರಿಂದ ಯಾವ ಪ್ರತಿಭಟನೆ ಆಗಿಲ್ಲ. ಈಗ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಬೈಕ್ ಟ್ಯಾಕ್ಸಿಯವರು ಸುಪ್ರೀಂ ಕೋರ್ಟ್‌ಗೆ ಹೋಗಲಿ, ಅಲ್ಲಿ ಡಿಸೈಡ್ ಆಗಲಿ. ಆದರೆ ಕಾರ್ಪೋರೇಟ್ ಕಂಪನಿಯವರ ಮಾತು ಕೇಳಿ ಬೈಕ್ ಟ್ಯಾಕ್ಸಿ ಓಡಿಸೋರು ಪ್ರತಿಭಟನೆ ಮಾಡುತ್ತಿದ್ದಾರೆ. ಬೈಕ್ ಟ್ಯಾಕ್ಸಿ ಓಡಿಸುವವರು ಹುಷಾರಾಗಿರಿ. ಕಂಪನಿಯವರು ಪ್ರೇರಣೆ ಕೊಟ್ಟು ನಿಮ್ಮನ್ನು ಕ್ರಿಮಿನಲ್‌ಗಳನ್ನಾಗಿ ಮಾಡುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನ ಬೀದಿ-ಬೀದಿಗಳಲ್ಲಿ ಮಾತಾಡ್ತಿದ್ದಾರೆ: ಹೆಚ್‌ಡಿಕೆ

  • ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ಬೆಂಗಳೂರು: ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ  (Bike Taxi) ನಿಷೇಧದ ಬೆನ್ನಲ್ಲೇ ಇದೀಗ ಅಗ್ರಿಗೇಟರ್‌ ಕಂಪನಿಗಳ ಆಟೋ ಪ್ರಯಾಣದ ದರ ಏರಿಕೆಯಾಗಿದೆ.

    ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಿರುವುದನ್ನೇ ಬಂಡವಾಳ ಮಾಡಿಕೊಂಡು ಓಲಾ (Ola) ಸೇರಿದಂತೆ ಕೆಲವು ಅಗ್ರಿಗೇಟ್ ಆಟೋ ಕಂಪನಿಗಳು ಇದೀಗ ಅಟೋ ದರವನ್ನು ಬೇಕಾಬಿಟ್ಟಿಯಾಗಿ ಏರಿಸಿವೆ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ: ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ಉದಾಹರಣೆಗೆ ಟೌನ್‌ಹಾಲ್‌ನಿಂದ (Town Hall) ಮೆಜೆಸ್ಟಿಕ್ ಬಸ್ (Majestic) ನಿಲ್ದಾಣಕ್ಕಿರುವ ಅಂತರ 2.02 ಕಿ.ಮೀ. ನಿಯಮದ ಪ್ರಕಾರ 30-35 ರೂ. ತೆಗೆದುಕೊಳ್ಳಬೇಕು. ಆದರೆ ಓಲಾ 98 ರೂ. ತೆಗೆದುಕೊಳ್ಳುತ್ತಿದೆ. ಇದೇ ರೀತಿ ಹಲವೆಡೆ ಬೇಕಾಬಿಟ್ಟಿ ವಸೂಲಿ ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಮೀಟರ್ ಪ್ರಕಾರ ಹಣ ತೆಗೆದುಕೊಳ್ಳಿ. ಹೀಗೆ ಹಗಲು ದರೋಡೆ ಮಾಡುತ್ತಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    2021ರಿಂದ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆ ಜಾರಿಯಲ್ಲಿತ್ತು. ಇದು ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲಲ್ಲಿ ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ಸಹ ನಡೆದಿತ್ತು. ಈ ಬೆನ್ನಲ್ಲೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠವು, ಏ.2ರಂದು ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು 6 ವಾರದೊಳಗೆ ನಿಲ್ಲಿಸುವಂತೆ ಆದೇಶಿಸಿತ್ತು.

    ನ್ಯಾಯಾಲಯ ನೀಡಿದ್ದ 6 ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದಾಗ್ಯೂ, ರ‍್ಯಾಪಿಡೊ, ಓಲಾ ಮತ್ತು ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ನಿರ್ವಾಹಕರು ಆದೇಶ ವಿಸ್ತರಣೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದರು. ಈ ವಿನಂತಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಅಂತಿಮವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲು ಗಡುವನ್ನು ಜೂ.15ರವರೆಗೆ ವಿಸ್ತರಿಸಿದ್ದರು.ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್

  • ಬೈಕ್ ಟ್ಯಾಕ್ಸಿಗೆ ಬ್ರೇಕ್ – ಒಂದೇ ದಿನದಲ್ಲಿ 103 ವಾಹನಗಳು ಸೀಜ್

    ಬೈಕ್ ಟ್ಯಾಕ್ಸಿಗೆ ಬ್ರೇಕ್ – ಒಂದೇ ದಿನದಲ್ಲಿ 103 ವಾಹನಗಳು ಸೀಜ್

    ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಂಡ ಬೆನ್ನಲ್ಲೇ ಆರ್‌ಟಿಓ (RTO) ಅಧಿಕಾರಿಗಳು ಕಾರ್ಯಚರಣೆ ನಡೆಸಿದ್ದು, ಸೋಮವಾರ ಒಂದೇ ದಿನದಲ್ಲಿ 103 ಬೈಕ್‌ಗಳನ್ನು ಸೀಜ್ ಮಾಡಿದೆ.

    ಹೌದು, ಹೈಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಜೂ.16ರಿಂದ ಅನಧಿಕೃತ ಬೈಕ್ ಟ್ಯಾಕ್ಸಿಗಳು ಸ್ಥಗಿತಗೊಂಡಿವೆ. ಆದೇಶದ ಬೆನ್ನಲ್ಲೇ ಆರ್‌ಟಿಓ ಅಧಿಕಾರಿಗಳು ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು, ಸೋಮವಾರ ಒಂದೇ ದಿನದಲ್ಲಿ 103 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. 11 ಆರ್‌ಟಿಓ ವ್ಯಾಪ್ತಿಯಲ್ಲಿ ಚಲಾಯಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಲಾಗಿದೆ. ಇಂದು ಸಹ ಹಲವು ತಂಡಗಳನ್ನ ರಚಿಸಿ ಆರ್‌ಟಿಒ ಕಾರ್ಯಚರಣೆಗಿಳಿದಿದೆ.ಇದನ್ನೂ ಓದಿ: ಹೊಸ ಐಟಿ ನೀತಿ ಮಾರ್ಗದರ್ಶನಕ್ಕಾಗಿ ಸರ್ಕಾರದಿಂದ ಎಐ ಕೌಶಲ್ಯ ಕುರಿತು ಅಧ್ಯಯನ: ಪ್ರಿಯಾಂಕ್ ಖರ್ಗೆ

    ಕಚೇರಿ                   ಬೈಕ್ ಟ್ಯಾಕ್ಸಿಗಳ ಸಂಖ್ಯೆ
    1.ಆರ್‌ಟಿಓ ಸೆಂಟ್ರಲ್ –         8
    2.ಆರ್‌ಟಿಓ ವೆಸ್ಟ್ –            16
    3.ಆರ್‌ಟಿಓ ಈಸ್ಟ್ –            12
    4.ಆರ್‌ಟಿಓ ನಾರ್ತ್ –         10
    5.ಆರ್‌ಟಿಓ ಸೌತ್ –           10
    6.ಜ್ಞಾನಭಾರತಿ –               5
    7.ದೇವನಹಳ್ಳಿ –                5
    8.ಯಲಹಂಕ. –                4
    9.ಲೆಕ್ಟ್ರಾನಿಕ್ ಸಿಟಿ –          15
    10.ಕೆ.ಆರ್.ಪುರಂ –          13
    11.ಚಂದಾಪುರ –               5

    ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದದ್ದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ ಟ್ಯಾಕ್ಸಿ ಒಂದು ಹೆಜ್ಜೆ ಹಿಂದೆಯೇ ಉಳಿದುಕೊಂಡಿದೆ. ಇದೇ ಕಾರಣದಿಂದಾಗಿ ಬೈಕ್ ಟ್ಯಾಕ್ಸಿ ರಸ್ತೆಗೆ ಇಳಿಯುವ ಹಾಗಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ ಆರ್‌ಟಿಓ ಕೂಡ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಸೂಚಿಸಿತ್ತು.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

  • ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

    ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

    ಬೆಂಗಳೂರು: ರಾಜ್ಯದಲ್ಲಿ ಅನೇಕ ದಿನದಿಂದ ಆಟೋ ಚಾಲಕರು ವರ್ಸಸ್ ಬೈಕ್ ಟ್ಯಾಕ್ಸಿಯವರ (Bike Taxi) ನಡುವಿನ ಗುದ್ದಾಟ ನಡೆಯುತ್ತಿತ್ತು. ಸದ್ಯ ಈಗ ಇದಕ್ಕೆಲ್ಲಾ ಇಂದಿನಿಂದ ಬ್ರೇಕ್ ಬೀಳಲಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ.

    ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದದ್ದು, ಅಂದರೆ ಅದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್‌ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ ಟ್ಯಾಕ್ಸಿ ಒಂದು ಹೆಜ್ಜೆ ಹಿಂದೆಯೇ ಉಳಿದುಕೊಂಡಿದೆ. ಇದೇ ಕಾರಣಕ್ಕೆ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗೆ ಇಳಿಯುವ ಹಾಗಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರ್‌ಟಿಓ ಕೂಡ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಅಂಥವರ ವಿರುದ್ಧ ಕ್ರಮಕ್ಕೆ ಮುಂದಾಗಲಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

    ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ನಿಷೇಧ ಹೇರಬೇಕೆಂದು ಖಾಸಗಿ ಸಾರಿಗೆ ಒಕ್ಕೂಟ ಸೇರಿ ಅನೇಕ ಆಟೋ ಚಾಲಕರ ಹಲವು ವರ್ಷಗಳ ಬೇಡಿಕೆಯಾಗಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೋರ್ಟ್ ನೀಡಿದ್ದ ಗಡುವು ಇಂದಿಗೆ ಮುಕ್ತಾಯ ಆಗಿದೆ. ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

    ಇನ್ನೂ ನ್ಯಾಯಾಲಯದ ಆದೇಶ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಇಲಾಖೆ ತಂಡ ರೆಡಿ ಮಾಡಿದ್ದು, ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಸೀಜ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಚರಣೆಗೆ ಸಾರಿಗೆ ಇಲಾಖೆ 10 ರಿಂದ 15 ತಂಡಗಳ ರಚನೆ ಮಾಡಿದ್ದು, ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲು ಸಿದ್ಧತೆ ನಡೆಸಿದೆ.  ಇದನ್ನೂ ಓದಿ: ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

  • ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

    ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

    ಬೆಂಗಳೂರು: ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ (Transport Department) ಆದೇಶ ಹೊರಡಿಸಿದೆ.

    ಬೆಂಗಳೂರಿನಲ್ಲಿ (Bengaluru) ಎಲೆಕ್ಟ್ರಿಕ್ ಬೈಕ್‌, ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಿದ್ದರಿಂದ ಓಲಾ, ಉಬರ್, ರ‍್ಯಾಪಿಡೋಗಳಿಗೆ ತೀವ್ರ ಹಿನ್ನಡೆಯಾಗಿದೆ. ಇದನ್ನೂ ಓದಿ: PublicTV Explainer: ಬೆಂಗಳೂರಿಗೆ ಬಂತು ಮೊದಲ ಚಾಲಕ ರಹಿತ ಮೆಟ್ರೋ ರೈಲು – ವಿಶೇಷತೆಗಳು ನಿಮಗೆಷ್ಟು ಗೊತ್ತು?

    ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ 2021 ರಲ್ಲಿ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು. ಈಗಾಗಲೇ ಓಲಾ, ಉಬರ್, ರ‍್ಯಾಪಿಡೋದಿಂದ ಬೈಕ್ ಸೇವೆ ಇತ್ತು.

    ಆದರೆ ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದ್ವಿಚಕ್ರ ವಾಹನ ಸಾರಿಗೆ ಸೇವೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಮಹಿಳೆಯರಿಗೂ ಅಸುರಕ್ಷತೆಯ ದೃಷ್ಟಿಯಿಂದ ಈ ಸೇವೆಯನ್ನು ರದ್ದು ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ನಟಿ ಲಕ್ಷ್ಮಿ ಮೇಲೆ ಆಕ್ಸಿಡೆಂಟ್ ಮಾಡಿ ಯುವತಿ ಜೊತೆ ರಂಪಾಟ ಮಾಡಿದ ಆರೋಪ