Tag: Bike Taxi

  • ಆಟೋ ಚಾಲಕರ ನಿರ್ಲಕ್ಷ್ಯ ಆರೋಪ- ಬೇಡಿಕೆಗಳ ಈಡೇರಿಕೆಗೆ ಬಂದ್ ಎಚ್ಚರಿಕೆ ಕೊಟ್ಟ ಒಕ್ಕೂಟ

    ಆಟೋ ಚಾಲಕರ ನಿರ್ಲಕ್ಷ್ಯ ಆರೋಪ- ಬೇಡಿಕೆಗಳ ಈಡೇರಿಕೆಗೆ ಬಂದ್ ಎಚ್ಚರಿಕೆ ಕೊಟ್ಟ ಒಕ್ಕೂಟ

    ಬೆಂಗಳೂರು: ಬಜೆಟ್‍ನಲ್ಲಿ (Budget) ಆಟೋ (Auto) ಚಾಲಕರನ್ನು ನಿರ್ಲಕ್ಷಿಸಲಾಗಿದೆ ಎಂದು ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಅಲ್ಲದೇ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈಡೇರಿಸುವಂತೆ ಆಗ್ರಹಿಸಿದೆ.

    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ, ಒಡಿಶಾಗಳಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೈಕ್ ಟ್ಯಾಕ್ಸಿಗಳನ್ನು (Bike Taxi) ನಿಷೇಧಿಸಬೇಕು. ಇಲ್ಲದಿದ್ದರೆ ಸರ್ಕಾರಿ ಸಾರಿಗೆ ಹೊರತುಪಡಿಸಿ ಉಳಿದೆಲ್ಲ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಯಮುನಾ ನದಿಯ ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರಕ್ಕೆ ಕೇಜ್ರಿವಾಲ್ ಸೂಚನೆ

    ಸರ್ಕಾರಕ್ಕೆ 7 ದಿನಗಳ ಡೆಡ್ ಲೈನ್ ನೀಡಿರುವ ಸಂಘಟನೆ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದೆ. ಇಲ್ಲವಾದಲ್ಲಿ ಜು.28 ರಿಂದ ಅನಿರ್ಧಿಷ್ಟವಾಧಿ ಹೋರಾಟ ನಡೆಸಲಾಗುತ್ತದೆ. ರಾಜ್ಯಾದ್ಯಂತ 3.20 ಲಕ್ಷ ಹಾಗೂ ಬೆಂಗಳೂರಲ್ಲಿ 2.10 ಲಕ್ಷ ಆಟೋಗಳಿವೆ ಎಲ್ಲಾ ಆಟೋ ಚಾಲಕರು ಕೂಡ ಅಂದು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಲ್ಲಿರುವ 21 ಆಟೋ ಸಂಘಟನೆಗಳು ಭಾಗಿಯಾಗಲಿವೆ. ಖಾಸಗಿ ಬಸ್ ಒಕ್ಕೂಟ, ಶಾಲಾ ವಾಹನಗಳ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಲಿವೆ ಎಂದಿದ್ದಾರೆ.

    ಅಕ್ರಮ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಬೇಕು. ಶಕ್ತಿ ಯೋಜನೆಯಿಂದ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಆಟೋ ಚಾಲಕನಿಗೆ ಪ್ರತಿ ತಿಂಗಳು 10,000 ರೂ. ಪರಿಹಾರ ನೀಡಬೇಕು. ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಆಟೋ ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ರೂ. ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೋಗಳನ್ನು ರ‍್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೊಂದಣಿ ಮಾಡುವುದರನ್ನ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ಸಿನೊಳಗೆ ನುಗ್ಗಿ, ಪೊಲೀಸರ ಮೇಲೆ ಖಾರದ ಪುಡಿ ಎರಚಿ ಆರೋಪಿಗೆ ಗುಂಡಿಟ್ಟು ಹತ್ಯೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸಂಚಾರಕ್ಕೆ ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ಸೋಮವಾರ ತಡೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತಿಮ ನೀತಿಯನ್ನು ರೂಪಿಸುವವರೆಗೆ ದೆಹಲಿಯ ರಸ್ತೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.

    ಬೈಕ್ ಟ್ಯಾಕ್ಸಿಗಳನ್ನು ನಡೆಸುವ ರ‍್ಯಾಪಿಡೋ (Rapido) ಮತ್ತು ಉಬರ್‌ಗಳಿಗೆ (Uber) ದೆಹಲಿಯಲ್ಲಿ ಕಾರ್ಯನಿರ್ವಹಿಸಲು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದೆಹಲಿ (Delhi) ಸರ್ಕಾರ ಸಲ್ಲಿಸಿದ ಎರಡು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠ ಈ ಮಧ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಮತ್ತೆ ಬೀದಿಗಿಳಿದ ರೈತರು- ದೆಹಲಿ, ಚಂಡೀಗಢ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ಸರ್ಕಾರ ಅಂತಿಮ ನೀತಿಯನ್ನು ಪ್ರಕಟಿಸುವವರೆಗೂ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಆಪ್ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

    ದೆಹಲಿ ಸರ್ಕಾರದ ಪರ ಹಿರಿಯ ವಕೀಲ ಮನೀಶ್ ವಶಿಷ್ಟ್ ವಾದ ಮಂಡಿಸಿದರು. ಈ ವೇಳೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಸರ್ಕಾರದ ನೋಟಿಸ್‍ಗೆ ತಡೆ ನೀಡುವ ಹೈಕೋರ್ಟ್‍ನ ನಿರ್ಧಾರ ರ‍್ಯಾಪಿಡೋ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಅನುಮತಿಸಿದಂತಿದೆ. ದೆಹಲಿ ಸರ್ಕಾರವು ಈ ವರ್ಷದ ಆರಂಭದಲ್ಲಿ ಬೈಕ್ ಟ್ಯಾಕ್ಸಿಗಳು ದೆಹಲಿಯಲ್ಲಿ ಸಂಚರಿಸದಂತೆ ಎಚ್ಚರಿಕೆ ನೀಡಿತ್ತು ಮತ್ತು ಉಲ್ಲಂಘಿಸಿದರೆ ಒಟ್ಟು 1 ಲಕ್ಷ ರೂ.ಗಳ ವರೆಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿತ್ತು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನೂ ಓದಿ: ಎಚ್ಚರಿಕೆಯ ನಡುವೆಯು ಪ್ರವಾಸಿಗರ ಹುಚ್ಚಾಟ – ಮುರುಡೇಶ್ವರದಲ್ಲಿ ಸಮುದ್ರದ ಪಾಲಾದ ಯುವಕ, ಇಬ್ಬರ ರಕ್ಷಣೆ

  • ಬೆಂಗಳೂರಿಗರೇ ಗಮನಿಸಿ, ಇಂದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಆಟೋ ಮುಷ್ಕರ

    ಬೆಂಗಳೂರಿಗರೇ ಗಮನಿಸಿ, ಇಂದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಆಟೋ ಮುಷ್ಕರ

    ಬೆಂಗಳೂರು: ನಗರದಲ್ಲಿ ಅಕ್ರಮ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು (Bike Taxi) ನಿಷೇಧಿಸುವಂತೆ ಪಟ್ಟು ಹಿಡಿದಿರುವ ಆಟೋ ಚಾಲಕರು (Autorickshaw Drivers) ಮತ್ತು ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆಯನ್ನು ಸ್ಥಗಿತಗೊಳಿಸಿ  ಮುಷ್ಕರ (Strike) ಆರಂಭಿಸಿದ್ದಾರೆ.

    ಸೋಮವಾರ ಮಧ್ಯರಾತ್ರಿಯವರೆಗೆ ಬೆಂಗಳೂರಿನಲ್ಲಿ (Bengaluru) ಆಟೋರಿಕ್ಷಾ ಬಂದ್‌ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ಬಂದ್‌ಗೆ ಬೆಂಬಲ ನೀಡಿವೆ. ಆಟೋ ಸೇವೆ ಬಂದ್‌ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್‌, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ, ಊಬರ್ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಇದನ್ನೂ ಓದಿ: Bengaluru Mysuru Expressway ಮಳೆಯ ಅವಾಂತರಕ್ಕೆ ಇದೇ ಕಾರಣ – ಕೇಂದ್ರ ಸಚಿವಾಲಯ ಸ್ಪಷ್ಟೀಕರಣ

    ಬೈಕ್ ಟ್ಯಾಕ್ಸಿಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಆಟೋ ಚಾಲಕರು ಕೊಟ್ಟ ಗಡುವು ಮುಗಿದಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆ ನಂತರ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯಿಂದ ಚಾಲಕರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

    ಆಟೋ ಚಾಲಕರ ಮುಷ್ಕರದ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಎಂಟಿಸಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚಿನ ಬಸ್ ಕಾರ್ಯಾಚರಣೆಗೆ ಮುಂದಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸೇವೆ ನೀಡಲು ತಯಾರಿ ನಡೆಸಿದೆ. ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಶಾಂತಿನಗರ, ಶಿವಾಜಿನಗರ, ಯಶವಂತಪುರ, ಸೇರಿ ಪ್ರಮುಖ ನಿಲ್ದಾಣಗಳಿಂದ ಹೆಚ್ಚಿನ ಕಾರ್ಯಾಚರಣೆಗೆ ಬಿಎಂಟಿಸಿ ಮುಂದಾಗಿದೆ.