Tag: Bike Wheeling

  • ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಬೈಕ್ ವ್ಹೀಲಿಂಗ್ – ಪೊಲೀಸ್ ಸ್ಟೇಷನ್ ಮುಂದೆಯೇ ಸರ್ಕಸ್

    ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಬೈಕ್ ವ್ಹೀಲಿಂಗ್ – ಪೊಲೀಸ್ ಸ್ಟೇಷನ್ ಮುಂದೆಯೇ ಸರ್ಕಸ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಪುಂಡರ ಗುಂಪೊಂದು ಬೈಕ್ ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ.

    ನಗರದ ಕನ್ನಿಂಗ್ ಹ್ಯಾಮ್ ರಸ್ತೆಗೆ ಐದಾರು ಬೈಕ್ ಗಳಲ್ಲಿ ಯುವಕ ಗುಂಪು ಬಂದಿದ್ದು, ಯಾವುದೇ ಭಯವಿಲ್ಲದೇ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂಭಾಗವೇ ಬೈಕ್ ವ್ಹೀಲಿಂಗ್ ಮಾಡಿದ್ದಾರೆ.

    ಯುವಕರ ಗ್ಯಾಂಗ್ ಒಂದೇ ಬಾರಿ ಎಲ್ಲರೂ ವ್ಹೀಲಿಂಗ್ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ಗಾಬರಿ ಹುಟ್ಟಿಸಿದೆ. ಯುವಕರ ಗುಂಪು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂಭಾಗದಲ್ಲೇ ಯಾವುದೇ ಭಯವಿಲ್ಲದೇ ವ್ಹೀಲಿಂಗ್ ಮಾಡಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

  • ನಡುರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಚಾಕು ಇರಿತ!

    ನಡುರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಚಾಕು ಇರಿತ!

    ತುಮಕೂರು: ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಪುಂಡರ ಗುಂಪೊಂದು ಯುವಕನೋರ್ವನಿಗೆ ಚಾಕು ಇರಿದ ಘಟನೆ ನಡೆದಿದೆ.

    ಜಿಲ್ಲೆಯ ಪಾವಗಡ ಪಟ್ಟಣದ ಪೊಲೀಸ್ ಠಾಣೆ ಸಮೀಪ ಈ ಘಟನೆ ಸಂಭವಿಸಿದೆ. ದವಡಬೆಟ್ಟ ತಾಂಡಾದ ಯುವಕರು ಒಂದೇ ಸಮನೆ ಬೈಕ್ ವೀಲಿಂಗ್ ಮಾಡುತ್ತಿದ್ದರು. ಅದನ್ನು ಕಂಡ ಪಾದಾಚಾರಿ ಯುವಕ ತೇಜು ಪ್ರಶ್ನಿಸಿದ್ದಾನೆ.

    ತೇಜು ಪ್ರಶ್ನೆಯಿಂದ ಕೋಪಗೊಂಡ ಪುಂಡರ ತಂಡ ಯುವಕ ತೇಜು ಮೇಲೆ ಹಿಗ್ಗಾಮುಗ್ಗವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಚಾಕುವಿನಿಂದ ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ಇರಿದಿದ್ದಾರೆ. ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.

    ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳಾದ ಶ್ರೀನಿವಾಸದ ನಾಯ್ಕ್, ಧನಸಿಂಗ್ ನಾಯ್ಕ್, ರಾಜೇಶ್ ನಾಯ್ಕ್, ಹಾಗೂ ಶೇಖರ್ ನಾಯಕರನ್ನು ಪಾವಗಡ ಪೊಲೀಸರು ಬಂಧಿಸಿದ್ದಾರೆ.

  • ವಿಡಿಯೋ: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡಿ ಬೈಕ್, ಕಾರುಗಳಿಗೆ ಡಿಕ್ಕಿ – ಆಕ್ರೋಶಗೊಂಡ ಸ್ಥಳೀಯರಿಂದ ಗೂಸಾ

    ವಿಡಿಯೋ: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡಿ ಬೈಕ್, ಕಾರುಗಳಿಗೆ ಡಿಕ್ಕಿ – ಆಕ್ರೋಶಗೊಂಡ ಸ್ಥಳೀಯರಿಂದ ಗೂಸಾ

    ಬೆಂಗಳೂರು: ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

    ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುವಾಗ ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬೈಕ್ ಸವಾರರನ್ನ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ನೆಲಮಂಗಲ ಸಮೀಪದ ದೇವಣ್ಣನಪಾಳ್ಯ ಬಳಿ ಈ ಘಟನೆ ನಡೆದಿದ್ದು, ನಾಲ್ವರು ಯುವಕರು ವಿಲಿಂಗ್ ಮಾಡುತ್ತಿದ್ದ ವೇಳೆ ಒಂದು ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಇತರೆ ವಾಹನ ಸವಾರರು ಬೈಕ್ ಸವಾರರನ್ನು ಅಡ್ಡಗಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

    ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಸಾವಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಸುಮಾರು ಒಂದು ಕಿಲೋಮೀಟರ್ ನಿಂದ ಈ ಯುವಕರು ವೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ.

    https://www.youtube.com/watch?v=6sQ74zRnkeY

  • ಯುವಕರ ಬೈಕ್ ವ್ಹೀಲಿಂಗ್ ಹುಚ್ಚಿಗೆ 4 ವರ್ಷದ ಕಂದಮ್ಮ ಬಲಿಯಾಯ್ತು!

    ಯುವಕರ ಬೈಕ್ ವ್ಹೀಲಿಂಗ್ ಹುಚ್ಚಿಗೆ 4 ವರ್ಷದ ಕಂದಮ್ಮ ಬಲಿಯಾಯ್ತು!

    ಬೆಂಗಳೂರು: ಪೊಲೀಸರು ವ್ಹೀಲಿಂಗ್ ನಿಯಂತ್ರಣಕ್ಕೆ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಪದೇ ಪದೇ ಹೇಳುತ್ತಿದ್ದರೂ ವ್ಹೀಲಿಂಗ್ ಮಾಡುವವರಿಗೆ ಮಾತ್ರ ಇನ್ನೂ ಬುದ್ಧಿ ಬಂದಂತಿಲ್ಲ. ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ 4 ವರ್ಷದ ಮಗುವೊಂದು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಚಿಕ್ಕಜಾಲದ ಉತ್ನಳ್ಳಿ ಬಳಿ ಇಂದು ಸಂಜೆ 5.30ಕ್ಕೆ ಘಟನೆ ನಡೆದಿದ್ದು ರಾಜು ಅಲಿಯಾಸ್ ಬಂಗಾರಿ ಎಂಬಾತ ತನ್ನ ಸ್ನೇಹಿತನ ಜೊತೆ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮಗು ಸಹನಾಗೆ ಡಿಕ್ಕಿ ಹೊಡೆದಿದೆ. ಬೈಕ್ ಗುದಿದ್ದ ರಭಸಕ್ಕೆ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

    ಆದರೆ ಅಪಘಾತವಾಗುತ್ತಿದ್ದಂತೆ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. ಹಿಂಬದಿ ಕುಳಿತಿದ್ದ ಸವಾರ ಕೆಳಗೆ ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ಹೋಗಿ ಹಿಂಬದಿ ಸವಾರನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಚಿಕ್ಕಜಾಲ ಟ್ರಾಫಿಕ್ ಠಾಣೆಯ ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.