Tag: Bikkodu

  • ಬಂಧನದ ವೇಳೆ ಮಾರಕಾಸ್ತ್ರದಿಂದ ಹಲ್ಲೆ – ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್

    ಬಂಧನದ ವೇಳೆ ಮಾರಕಾಸ್ತ್ರದಿಂದ ಹಲ್ಲೆ – ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್

    ಹಾಸನ: ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದಕ್ಕೆ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ (Police Firing) ಮಾಡಿರುವ ಘಟನೆ ಜಿಲ್ಲೆಯ ಬೇಲೂರು (Belur) ತಾಲ್ಲೂಕಿನ ಬಿಕ್ಕೋಡು (Bikkodu) ಗ್ರಾಮದಲ್ಲಿ ನಡೆದಿದೆ.

    ರೌಡಿಶೀಟರ್ ಮಧು ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದು, ಬಂಧನದ ವೇಳೆ ಮಾರಕಾಸ್ತ್ರದಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ – ಎದೆಗೆ ಹೊಕ್ಕ ಕಬ್ಬಿಣದ ಪೈಪ್

    ಸೆ.14 ರಂದು ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಾಟರ್‌ಮ್ಯಾನ್ ಗಣೇಶ್‌ನನ್ನು ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ. ಇಂದು ಹಬ್ಬಕ್ಕೆಂದು ಅರೇಹಳ್ಳಿಗೆ ಆರೋಪಿ ಮಧು ಬರುವುದಾಗಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದರು. ಬಂಧನದ ವೇಳೆ ಡ್ರ‍್ಯಾಗನ್‌ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.

    ಒಂದು ಸುತ್ತು ಗುಂಡು ಹಾರಿಸಿ ಮಧುವನ್ನು ಶರಣಾಗುವಂತೆ ಇನ್ಸ್ಪೆಕ್ಟರ್ ವಿನಯ್ ತಿಳಿಸಿದ್ದರು. ಆದರೆ ಇದೇ ವೇಳೆ ಅರೇಹಳ್ಳಿ ಪೊಲೀಸ್ ಠಾಣೆ ಕಾನ್ಸ್ಟೇಬಲ್‌ಗಳಾದ ಶಶಿ ಹಾಗೂ ಅಶೋಕ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಬೇಲೂರು ಇನ್ಸ್ಪೆಕ್ಟರ್ ವಿನಯ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಹಿಂದೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ ಹೊಟ್ಟೆಗೆ ಚಾಕು ಇರಿದ ಯುವಕ

  • ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ದೈತ್ಯಾಕಾರದ ಒಂಟಿಸಲಗ: ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ

    ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ದೈತ್ಯಾಕಾರದ ಒಂಟಿಸಲಗ: ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ

    ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ದೈತ್ಯಾಕಾರದ ಒಂಟಿಸಲಗ ಓಡಾಡಿದರೆ, ಇನ್ನೊಂದು ಕಡೆ ಗ್ರಾಮದೊಳಗೆಲ್ಲಾ ಕಾಡಾನೆಗಳ ಹಿಂಡು ಓಡಾಡುತ್ತಿರುವ ಘಟನೆ ಜಿಲ್ಲೆಯ ಬೇಲೂರು (Beluru) ತಾಲ್ಲೂಕಿನ ಬಿಕ್ಕೋಡು (Bikkodu) ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಕೇಸ್

    ಬೇಲೂರು ತಾಲೂಕಿನಲ್ಲಿ ಬೀಟಮ್ಮ ಗ್ಯಾಂಗ್ (Beetamma And Gang) ಹಾವಳಿ ಹೆಚ್ಚಾಗಿದ್ದು, ಬೆಳಿಗ್ಗೆ, ಸಂಜೆಯಾದರೆ ಸಾಕು ಗಜಪಡೆ ಗ್ರಾಮದೊಳಗೆ ಬರುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಾನೆಗಳ ಕಾಟದಿಂದ ರೈತರು ಕಂಗಾಲಾಗಿದ್ದಾರೆ. ಇದರಿಂದ ಜಮೀನು, ಕಾಫಿ ತೋಟಕ್ಕೆ ತೆರಳಲು ರೈತರು ಹಾಗೂ ಕಾಫಿ ಬೆಳೆಗಾರರು ಭಯಪಡುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

    ಸುಮಾರು ಇಪ್ಪತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಗ್ರಾಮಕ್ಕೆ ಬರುತ್ತಿರುವುದು ಅಪಾಯ ಉಂಟು ಮಾಡುತ್ತಿದ್ದು, ಭತ್ತ, ಅಡಿಕೆ, ಬಾಳೆ, ಕಾಫಿ ಬೆಳೆಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆಯ (Forest Dapertment) ಇಟಿಎಫ್ (Elephant Task Force) ಸಿಬ್ಬಂದಿಗಳು ಸ್ಥಳಕ್ಕೆ ಮೊಕ್ಕಾಂ ಹೂಡಿದ್ದಾರೆ. ಮೈಕ್ ಮೂಲಕ ಪ್ರಕಟಣೆ ನೀಡುತ್ತಾ ಗ್ರಾಮಸ್ಥರು ಎಚ್ಚರಿಕೆಯಿಂದ ಓಡಾಡುವಂತೆ ಸೂಚನೆ ನೀಡುತ್ತಿದ್ದಾರೆ.ಇದನ್ನೂ ಓದಿ: ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ ಬೇಡ- ‘ಫೈರ್’ ಸಂಸ್ಥೆ ವಿರುದ್ಧ ಭಾವನಾ ಗರಂ

     

  • ಬೇಲೂರು ಬಿಕ್ಕೋಡಿನಲ್ಲಿ ಜಲಕ್ರೀಡೆಯಾಡಿದ 20ಕ್ಕೂ ಹೆಚ್ಚು ಕಾಡಾನೆಗಳು

    ಬೇಲೂರು ಬಿಕ್ಕೋಡಿನಲ್ಲಿ ಜಲಕ್ರೀಡೆಯಾಡಿದ 20ಕ್ಕೂ ಹೆಚ್ಚು ಕಾಡಾನೆಗಳು

    ಹಾಸನ: ಕಾಡಾನೆಗಳ (Wild Elephants) ಹಿಂಡು ಬೆಳಂಬೆಳಗ್ಗೆ ಬೇಲೂರು ತಾಲೂಕಿನ ಬಿಕ್ಕೋಡು (Bikkodu) ಗ್ರಾಮದ, ತಾವರೆಕೆರೆಯಲ್ಲಿ ಪ್ರತ್ಯಕ್ಷವಾಗಿ ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿವೆ.

    ಮರಿಗಳು ಸೇರಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಜಲಕ್ರೀಡೆ ಆಡುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ‌. ಕೆರೆಯಲ್ಲಿ ಈಜಾಡಿ ಬಳಿಕ ಕಾಫಿ ತೋಟದೊಳಗೆ ತೆರಳಿವೆ. ಇದನ್ನೂ ಓದಿ: ಬಹ್ರೈಚ್‌ನ ಭಯಾನಕ ನರಭಕ್ಷಕ – ತೋಳಗಳ ದಾಳಿ ಹಿಂದಿದೆ ಸೇಡಿನ ಕಥೆ; ದಾಳಿ ಹೆಚ್ಚಲು ಕಾರಣ ಏನು ಗೊತ್ತೇ?

    ಕಳೆದ ಮೂರ್ನಾಲ್ಕು ದಿನಗಳಿಂದ ಬಿಕ್ಕೋಡು ಗ್ರಾಮದ ಸುತ್ತಮುತ್ತ ಕಾಡಾನೆಗಳು ಸಂಚರಿಸುತ್ತಿದ್ದು ಕಾಫಿ, ಬಾಳೆ, ಭತ್ತ, ಶುಂಠಿ ಬೆಳೆಗಳನ್ನು ನಾಶ ಮಾಡಿವೆ‌.

    ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ (Forest Department) ಇಟಿಎಫ್ ಸಿಬ್ಬಂದಿ ಸೂಚನೆ ನೀಡಿದ್ದಾರೆ‌. ಇದನ್ನೂ ಓದಿ: ರೇಣುಕಾ ಮೃತಪಟ್ಟಿದ್ದು ಹೇಗೆ? ಚಾರ್ಜ್‌ಶೀಟ್‌ನಲ್ಲಿ ಏನಿದೆ?

    ಕಾಡಾನೆಗಳ ಭಯದಿಂದ ಕಾಫಿ ತೋಟಕ್ಕೆ ತೆರಳಲು ಕಾರ್ಮಿಕರು ಹಾಗೂ ಮಾಲೀಕರು ಹಿಂದೇಟು ಹಾಕುತ್ತಿದ್ದು ಸ್ಥಳದಲ್ಲೇ ಇಟಿಎಫ್ ಸಿಬ್ಬಂದಿ ಮೊಕ್ಕಾಂ ಹೂಡಿ ಗಜಪಡೆಯ ಚಲನವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡುತ್ತಿದ್ದಾರೆ.

    ಸದ್ಯ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ‌.