Tag: bilkis bano case

  • Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣದ (Bilkis Bano Case) ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಕ್ಕೆ ಗುಜರಾತ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಲ್ಲಿದ್ದ ಕಟು ಟೀಕೆಯನ್ನು ತೆಗೆದುಹಾಕಲು ನ್ಯಾಯಾಲಯ ನಿರಾಕರಿಸಿದೆ.

    2002ರ ಗುಜರಾತ್ ಗಲಭೆಯ ವೇಳೆ (Gujarat riots) ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬಸ್ಥರನ್ನು ಹತ್ಯೆಗೈದಿದ್ದ 11 ಮಂದಿ ಅಪರಾಧಿಗಳ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿತ್ತು. ಬಳಿಕ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಗುಜರಾತ್ ಸರ್ಕಾರ (Gujarat government) ಮನವಿ ಮಾಡಿತ್ತು. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    ಸುಪ್ರೀಂ ಕೋರ್ಟ್ (Supreme Court) ಅಪರಾಧಿಗಳ ಶಿಕ್ಷೆ ರದ್ದುಗೊಳಿಸುವ ವೇಳೆ ರಾಜ್ಯ ಸರ್ಕಾರ `ಅಪರಾಧಿಗಳೊಂದಿಗೆ ಸಹಕರಿಸಿ ಒಪ್ಪಂದದಿಂದ ವರ್ತಿಸಿದೆ’ ಎಂದು ಟೀಕಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರವು ಈ ಟೀಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ. ಅರ್ಜಿದಾರರ ವಿರುದ್ಧ ಪಕ್ಷಪಾತವಾಗಿದೆ ಎಂದು ವಾದಿಸಿತ್ತು.

    ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ಧ ದ್ವಿಸದಸ್ಯ ಪೀಠ ಗುಜರಾತ್ ಸರ್ಕಾರದ ವಾದವನ್ನು ಒಪ್ಪಲಿಲ್ಲ.

    ಈ ಪ್ರಕರಣದಲ್ಲಿ ಸನ್ನಡತೆ ಆಧಾರದ ಮೇಲೆ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.

    ಅಪರಾಧಿಗಳನ್ನು ವಿಚಾರಣೆ ನಡೆಸಿದ ರಾಜ್ಯದಿಂದ ಮಾತ್ರ ಬಿಡುಗಡೆ ಮಾಡಬಹುದು. ಈ ಸಂದರ್ಭದಲ್ಲಿ, ಮಹಾರಾಷ್ಟ್ರ ಈ ಪ್ರಕರಣದ ತನಿಖೆ ನಡೆಸಿದೆ. ಗುಜರಾತ್ ರಾಜ್ಯವು ಅಧಿಕಾರವನ್ನು ಚಲಾಯಿಸುವುದು, ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

    ಜುಲೈನಲ್ಲಿ ಸುಪ್ರೀಂ ಕೋರ್ಟ್, ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿತ್ತು.

    ಬಿಲ್ಕಿಸ್ ಬಾನೋ ಗುಜರಾತ್ ಕೋಮು ಗಲಭೆಯ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಗಲಭೆಯಲ್ಲಿ ಹತ್ಯೆಯಾದ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು. ಇದನ್ನೂ ಓದಿ: 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

  • ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಗಾಂಧಿನಗರ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ (Bilkis Bano Case) 11 ಅಪರಾಧಿಗಳಲ್ಲಿ ಒಬ್ಬನಾದ ಶೈಲೇಶ್ ಭಟ್ ಜೊತೆ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ (BJP MP) ಮತ್ತು ಸ್ಥಳೀಯ ಶಾಸಕ ವೇದಿಕೆ ಹಂಚಿಕೊಂಡಿರುವುದು ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ದಾಹೋದ್ ಜಿಲ್ಲೆಯ ಲಿಮ್ಖೇಡಾ, ಸಿಂಗ್ವಾಡ್ ಮತ್ತು ಝಲೋದ್ ತಾಲೂಕಿನ 64 ಹಳ್ಳಿಗಳಿಗೆ ಗುಜರಾತ್‌ನ (Gujarat) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ 101.88 ಕೋಟಿ ರೂ. ವೆಚ್ಚದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭದಲ್ಲಿ ಬಿಜೆಪಿ ಸಂಸದ ಜಸ್ವಂತ್ ಸಿಂಗ್ ಭಾಭೋರ್, ಬಿಜೆಪಿ ಶಾಸಕ ಶೈಲೇಶ್ ಭಾಭೋರ್ ಅವರೊಂದಿಗೆ ಅಪರಾಧಿ ಶೈಲೇಶ್ ಭಟ್ ಮೊದಲ ಸಾಲಿನಲ್ಲೇ ಕುಳಿತಿದ್ದ ವೀಡಿಯೊ ಮತ್ತು ಚಿತ್ರಗಳು ಚರ್ಚೆಯನ್ನು ಹುಟ್ಟುಹಾಕಿವೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (Mahua Moitra) ಟ್ವೀಟ್ ಮಾಡಿ, ಬಿಜೆಪಿಗರನ್ನು ರಾಕ್ಷಸರು ಎಂದು ಟೀಕಿಸಿದ್ದಾರೆ. ನಾನು ಈ ರಾಕ್ಷಸರನ್ನ ಮತ್ತೆ ಜೈಲಿನಲ್ಲಿ ನೋಡಬಯಸುತ್ತೇನೆ ಎಂದಿದ್ದಾರೆ. ಇದನ್ನೂಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

    ಬಿಆರ್‌ಎಸ್ ಪಕ್ಷದ ಕೆಟಿಆರ್ ಅವರೂ ಕಿಡಿ ಕಾರಿದ್ದು, ಬಿಜೆಪಿಯನ್ನು ಬಲತ್ಕಾರ್ ಜಸ್ಟಿಫಿಕೇಷನ್ ಪಾರ್ಟಿ ಎಂದು ಜರೆದಿದ್ದಾರೆ. ಬಿಲ್ಕಿಸ್ ಬಾನೋ ರೇಪ್ ಪ್ರಕರಣದ ದೋಷಿಗಳ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರೋದು ಆ ಪಕ್ಷದವರ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ ಎಂದು ಟೀಕಿಸಿದ್ದಾರೆ. ಆದ್ರೆ, ವೇದಿಕೆ ಮೇಲೆ ಯಾರಿದ್ರೂ ಅನ್ನೋದು ನನಗೆ ಗೊತ್ತೇ ಇಲ್ಲ ಎಂದು ಹೇಳಿ ಬಿಜೆಪಿ ಶಾಸಕ ಶೈಲೇಶ್ ಜಾರಿಕೊಂಡಿದ್ದಾರೆ. ಇದನ್ನೂಓದಿ: ಗಾಂಧಿ ಕುಟುಂಬವನ್ನು ರಾಮನ ವಂಶಕ್ಕೆ ಹೋಲಿಸಿರುವುದು ಅಹಂಕಾರ : ಅನುರಾಗ್ ಠಾಕೂರ್

    ಅತ್ಯಾಚಾರ ದೋಷಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಅಂತಾ ಗೊತ್ತಿಲ್ಲ ಎಂದು ದಾಹೋದ್ ಜಿಲ್ಲಾಡಳಿತ ತಪ್ಪಿಸಿಕೊಳ್ಳಲು ನೋಡಿದೆ. ಈ ಬೆಳವಣಿಗೆ ನಡೆದಿರುವ ಹೊತ್ತಲ್ಲೇ, ಬಿಲ್ಕಿಸ್ ಬಾನೋ ಅತ್ಯಾಚಾರ ಅಪರಾಧಿಗಳನ್ನು ಯಾವ ಅಂಶಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದೀರಿ ಎಂಬ ಬಗ್ಗೆ ದಾಖಲೆಗಳನ್ನು ಒದಗಿಸಲು ಸಜ್ಜಾಗಿ ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

    2002ರ ಗುಜರಾತ್ ಗಲಭೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ಗುಜರಾತ್ ರಾಜ್ಯ ಮತ್ತು 11 ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

  • ಬಿಲ್ಕಿಸ್‌ ಬಾನು ಕೇಸ್‌ – ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    ಬಿಲ್ಕಿಸ್‌ ಬಾನು ಕೇಸ್‌ – ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಇತರ ಅರ್ಜಿದಾರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಎಸಿಬಿ ರದ್ದು – ಹೈ ಆದೇಶಕ್ಕೆ ತಡೆ ಕೋರಿ ಸುಪ್ರೀಂನಲ್ಲಿ ಅರ್ಜಿ

    ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಮತ್ತು ಅಪರ್ಣಾ ಭಟ್ ಅವರು ಮೇಲ್ಮನವಿ ಅರ್ಜಿ ಪ್ರಸ್ತಾಪ ಮಾಡಿದರು. ಈ ವೇಳೆ, ಪ್ರಕರಣ ಪರಿಶೀಲಿಸುವುದಾಗಿ ಪೀಠವು ತಿಳಿಸಿದೆ.

    ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ ಹನ್ನೊಂದು ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿದೆ. ಬೃಹತ್ ಪ್ರತಿಭಟನೆಯ ನಡುವೆಯೂ ಬಿಡುಗಡೆ ಮಾಡಲಾಯಿತು. ಅವರಿಗೆ ಹಾರ ಹಾಕಿ ಸಿಹಿ ಹಂಚಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ

    ಜನವರಿ 21, 2008 ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬಿಲ್ಕಿಸ್ ಬಾನು ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಸಾಮೂಹಿಕ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

    Live Tv
    [brid partner=56869869 player=32851 video=960834 autoplay=true]