Tag: bilkis case

  • ಅತ್ಯಾಚಾರಿಗಳ ಬಿಡುಗಡೆ ಕ್ರಮ ಹಿಂಪಡೆಯಲಿ- ದ್ರೌಪದಿ ಮುರ್ಮುಗೆ ಪತ್ರ

    ಅತ್ಯಾಚಾರಿಗಳ ಬಿಡುಗಡೆ ಕ್ರಮ ಹಿಂಪಡೆಯಲಿ- ದ್ರೌಪದಿ ಮುರ್ಮುಗೆ ಪತ್ರ

    ಗಾಂಧಿನಗರ: 2002ರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ಗುಜರಾತ್‍ನ ಕಾಂಗ್ರೆಸ್‍ನ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

    ಮೂವರು ಶಾಸಕರಾದ ಗ್ಯಾಸುದ್ದೀನ್ ಶೇಖ್, ಇಮ್ರಾನ್ ಖೇದವಾಲಾ ಮತ್ತು ಜಾವೇದ್ ಪಿರ್ಜಾದಾ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎಂದು ಶೇಖ್ ತಿಳಿಸಿದ್ದಾರೆ.

    Congress

    ಈ ಪತ್ರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ ಗುಜರಾತ್ ಸರ್ಕಾರದ ನಿರ್ಧಾರವು ನಾಚಿಕೆಗೇಡು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕವಾದದ್ದಾಗಿದೆ ಎಂದು ಕಿಡಿಕಾರಿದ್ದಾರೆ.

    ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ, ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‍ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆಯನ್ನು ಪ್ರದರ್ಶಿಸಿದೆ. ಇದರಿಂದಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕ ನಿರ್ಧಾರವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಒಬ್ಬ ಮಹಿಳೆಯಾಗಿರುವುದರಿಂದ ರಾಷ್ಟ್ರಪತಿಗಳು ಮಹಿಳೆಯರ ನೋವುಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು!

    ಗುಜರಾತ್‌ನಲ್ಲಿ 2002ರಲ್ಲಿ ನಡೆದ ಬಿಲ್ಕಿಸ್‌ ಬಾನು ಮೇಲಿನ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಬಿಡುಗಡೆ ಮಾಡಲಾಗಿದೆ. ಆಗ ಬಿಲ್ಕಿಸ್‌ ಬಾನು ಅವರು 5 ತಿಂಗಳ ಗರ್ಭಿಣಿಯಾಗಿದ್ದರು. ಬಾನು ಅವರ ಮೂರು ವರ್ಷದ ಮಗು ಸೇರಿ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಕೆಲಸವಿಲ್ಲದೇ ಊಟಕ್ಕೂ ಗತಿಯಿಲ್ಲವೆಂದು 11 ತಿಂಗಳ ಮಗುವನ್ನು ಕಾಲುವೆಗೆ ಎಸೆದ

    Live Tv
    [brid partner=56869869 player=32851 video=960834 autoplay=true]