Tag: Bims Hospital

  • ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಬೆಳಗಾವಿ: ಬಡವರಿಗೆ ಉಪಯೋಗವಾಗಲಿ ಅಂತ ಸರ್ಕಾರ ಕೊಟ್ಯಂತರ ರೂ. ಆಸ್ಪತ್ರೆಗಳ ಮೇಲೆ ಖರ್ಚು ಮಾಡ್ತಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಅಲ್ಲಿನ ಆಡಳಿತ ಮಂಡಳಿ ಹೇಗೆ ಕೆಲಸ ಮಾಡ್ತಿದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಬಿಮ್ಸ್‌ನಲ್ಲಿ (BIMS Hospital) 3 ತಿಂಗಳು ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೊಬ್ಬಳು ಯಾರಿಗೂ ಅನುಮಾನ ಬರದಂತೆ ಕೆಲಸ ಮಾಡಿದ್ದಾಳೆ.

    ಕಾರವಾರ (Karwar) ಮೂಲದ ಯುವತಿ ವೈದ್ಯರಿಗೆ ಗೊತ್ತಾಗದಂತೆ ಕಳೆದ ಮೂರು ತಿಂಗಳಿನಿಂದ ಇದೇ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾಳೆ. ಇದಕ್ಕೆ ಯಾರು ಅವಕಾಶ ಕೊಟ್ರು? ಬರೊಬ್ಬರಿ ಈಕೆ ಮೂರು ತಿಂಗಳು ಕೆಲಸ ಮಾಡಿದ್ರೂ ಸಹ ಆಸ್ಪತ್ರೆ ವೈದ್ಯರಾಗಲಿ ಅಥವಾ ಆಡಳಿತ ಮಂಡಳಿಯಾಗಲಿ ಈಕೆ ಯಾರು ಎಲ್ಲಿಂದ ಬಂದಿದ್ದಾಳೆ, ಎಂದು ಪರಿಶೀಲನೆ ನಡೆಸದೆ ಅಸಡ್ಡೆ ತೋರಿಸಿದ್ದಾರೆ. ಬಡವರ ಆಸ್ಪತ್ರೆಗೆ ವೈಟ್ ಎಪ್ರಾನ್ ಹಾಕಿಕೊಂಡು ಬರೋರೆಲ್ಲ ವೈದ್ಯರಾಗಿ ಬಿಡಬಹುದು ಎಂದು ಜನ ಮಾತನಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ನಕಲಿ ಐಎಎಸ್ ಅಧಿಕಾರಿ ಅರೆಸ್ಟ್‌ – ಐಷಾರಾಮಿ ಕಾರುಗಳು ಸೀಜ್‌

    ವೈದ್ಯ ವಿದ್ಯಾರ್ಥಿನಿಗೆ ಆಸ್ಪತ್ರೆ ಸಿಬ್ಬಂದಿ ಹಲವು ಬಾರಿ ಪ್ರಶ್ನಿಸಲು ಮುಂದಾಗಿದ್ದರಂತೆ. ಆಗೆಲ್ಲ ಆಕೆ ಬಿಮ್ಸ್ ನಿರ್ದೇಶಕ ಅಶೋಕ್ ಶೆಟ್ಟಿಯವರ ಹೆಸರು ಹೇಳಿ ಹೆದರಿಸುತ್ತಿದ್ದಳಂತೆ. ಗುರುವಾರ (ಸೆ.4) ಚಿಕಿತ್ಸೆ ನೀಡುವಾಗಲೇ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಳು. ಈ ಮಾಹಿತಿಯನ್ನು ವೈದ್ಯರಿಗೆ ತಿಳಿಸಿದ್ದರು. ಬಳಿಕ ವಿಚಾರಿಸಿದಾಗ ಆಕೆಯೊಬ್ಬ ವಿದ್ಯಾರ್ಥಿನಿ ಎಂಬುದು ತಿಳಿದುಬಂದಿದೆ.

    ಈ ಬಗ್ಗೆ ಬಿಮ್ಸ್‌ ನಿರ್ದೇಶಕ ಅಶೋಕ್ ಶೆಟ್ಟಿಯಾಗಲಿ, ಆಸ್ಪತ್ರೆಯ ಆರ್‌ಎಂಒ ಆಗಲಿ ಈವರೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿಲ್ಲ. ಪ್ರತಿಕ್ರಿಯಿಸಿಸಲು ನಿರಾಕರಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರು ಮೇಲೆ ಕ್ರಮ ಆಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಸಂಬಂಧ `ಪಬ್ಲಿಕ್ ಟಿವಿ’ ವರದಿ ಬಳಿಕ ಆಡಳಿತ ಮಂಡಳಿ ಮೂವರ ಸಮಿತಿ ರಚಿಸಿ ತನಿಖೆಗೆ ಸೂಚಿಸಿದೆ. ಇದನ್ನೂ ಓದಿ: ಹೈದರಾಬಾದ್‌ | ಬೃಹತ್‌ ಮಾದಕ ವಸ್ತು ಜಾಲ ಪತ್ತೆ – ಬೆಂಗ್ಳೂರಲ್ಲಿ ಖರೀದಿಸಿ ಡೇಟಿಂಗ್‌ ಆ್ಯಪ್‌ನಲ್ಲಿ ಸೇಲ್‌ ಮಾಡ್ತಿದ್ದ ಆರೋಪಿ

  • ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

    ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

    ಬೆಳಗಾವಿ: ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಬೆಳಗಾವಿ ತಾಲೂಕಿನ‌ ನಿಲಜಿ ಗ್ರಾಮದ ಅಂಜಲಿ ಪಾಟೀಲ್ ಸಾವನ್ನಪ್ಪಿದ ಬಾಣಂತಿ. ಮದುವೆಯಾಗಿ ಹನ್ನೆರಡು ವರ್ಷದ ಬಳಿಕ ಗರ್ಭವತಿಯಾಗಿದ್ದ ಅಂಜಲಿಯನ್ನು ಹೆರಿಗೆ ಮಾಡಿಸಲು ಸೋಮವಾರ ಬೀಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: Microfinance | ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

    ಹೆರಿಗೆಯಾದ ಸಂದರ್ಭದಲ್ಲಿ ಕ್ಷೇಮವಾಗಿಯೇ ಇದ್ದ ಅಂಜಲಿ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ವೈದ್ಯರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರೆ ವೈದ್ಯರ ನಿರ್ಲಕ್ಷದಿಂದಲೇ ಅಂಜಲಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

    ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

     

  • ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್‌ ಮುಂದೆ ಸಂಬಂಧಿಕರ ಪ್ರತಿಭಟನೆ

    ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್‌ ಮುಂದೆ ಸಂಬಂಧಿಕರ ಪ್ರತಿಭಟನೆ

    ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬೆಳಗಾವಿ ಬಿಮ್ಸ್ ಆಸ್ಪತ್ರೆ (Belagavi BIMS Hospital) ಎದುರು ದಿಢೀರ್ ಪ್ರತಿಭಟನೆ (Protest) ನಡೆಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ಅನಿಲ ಲಮಾಣಿ (26) ಮೃತ ಮಹಿಳೆ. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ಬಾಣಂತಿ ಕುಟುಂಬಸ್ಥರು ಮತ್ತು ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟಿಸಿದರು.

    ಮಂಗಳವಾರ ನಸುಕಿನ 2:30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಕಲ್ಪನಾ ಜನ್ಮ ನೀಡಿದ್ದರು. ಈ ವೇಳೆ ಮಗು ಮತ್ತು ತಾಯಿ ಆರೋಗ್ಯ ಇರುವುದಾಗಿ ವೈದ್ಯರು ಹೇಳಿದ್ದರಂತೆ. ಬೆಳಗ್ಗೆ 8:30ರವರೆಗೂ ಆರೋಗ್ಯವಾಗಿದ್ದ ಕಲ್ಪನಾ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿ ಸಾವುನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ. ಎರಡು ಬಾರಿ ಸಿಸೇರಿಯನ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ತಾಯಿ ಮೃತರಾಗಿದ್ದರೆ, ಹಸಗೂಸು ಆಸ್ಪತ್ರೆಯ ಐಸಿಯು ಘಟಕದಲ್ಲಿದೆ.

     

    ಆಪರೇಷನ್ ಸಂದರ್ಭದಲ್ಲಿ ಧರಿಸುವ ವಸ್ತ್ರ ಧರಿಸಿಲ್ಲ, ತರಾತುರಿಯಲ್ಲಿ ಸಿಸೇರಿಯನ್‌ ಮಾಡಿದ್ದಾರೆ. ಆರೋಗ್ಯದಲ್ಲಿ ಏರುಪೇರು ಆದಾಗ ಬೇರೆಡೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಕುಟುಂಬಸ್ಥರು ಮನವಿ ಮಾಡಿದರೂ, ಬೇರೆ ಆಸ್ಪತ್ರೆಗೆ ಕಳುಹಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ನಿರ್ಲಕ್ಷ್ಯ ತೋರಿದ ವೈದ್ಯರನ್ನು ಈ ಕೂಡಲೇ ವಜಾ ಮಾಡುವಂತೆ ಕಲ್ಪನಾ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಹೆರಿಗೆ ಶಾಸ್ತ್ರ ಮತ್ತು ಶಿಶುವೈದ್ಯಶಾಸ್ತ್ರ ವಿಭಾಗಕ್ಕೆ ಬಿಮ್ಸ್ ನಿರ್ದೇಶಕ ಡಾ. ಅಶೋಕ ಶೆಟ್ಟಿ ಆಗಮಿಸುತ್ತಿದ್ದಂತೆ ಆಸ್ಪತ್ರೆ ಬಾಗಿಲಿನಲ್ಲಿಯೇ ಅವರನ್ನು ಕಲ್ಪನಾ ಕುಟುಂಬಸ್ಥರು ಘೇರಾವ್ ಹಾಕಿದರು. ಮಗಳ ಸಾವಿಗೆ ನ್ಯಾಯ ಸಿಗಬೇಕು, ನಮಗೆ ಆದಂತಹ ಪರಿಸ್ಥಿತಿ ಯಾರಿಗೂ ಆಗಬಾರದು. ಈ ಕೂಡಲೇ ನಿರ್ಲಕ್ಷ್ಯ ತೋರಿದ ವೈದ್ಯರ ವಜಾ ಮಾಡುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ. ಅಶೋಕ ಶೆಟ್ಟಿ ಮೂವರು ಜನರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ಮಾಡಿಸುತ್ತೇನೆ. ತಪ್ಪಿತಸ್ಥ ವೈದ್ಯರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

    ಯಾವುದೇ ಅಹಿತಕರ ಘಟನೆ ಆಗದಂತೆ ಆಸ್ಪತ್ರೆ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

     

  • ಮತ್ತೊಂದು ಅದ್ವಾನ – ಮೂರು ತಿಂಗಳಿನಲ್ಲಿ 41 ಶಿಶುಗಳ ಸಾವು!

    ಮತ್ತೊಂದು ಅದ್ವಾನ – ಮೂರು ತಿಂಗಳಿನಲ್ಲಿ 41 ಶಿಶುಗಳ ಸಾವು!

    ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ (BIMS Hospital) ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ ಹೊಂದಿರುವುದು ಬೆಳಕಿಗೆ ಬಂದಿದೆ. ಏರ್ ಕಂಪ್ರೆಸರ್ ಕೆಟ್ಟು ಹೋಗಿ ಸಾಕಷ್ಟು ಮಕ್ಕಳು ಮೃತಪಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ ಹಲವು ಕಾರಣಗಳಿಂದ ಶಿಶು ಮರಣವಾಗಿದೆ ಎಂದು ಅಂತಾ ವೈದ್ಯರು ಸಬೂಬು ಹೇಳುತ್ತಿದ್ದಾರೆ.

    ಎರಡು ರಾಜ್ಯಗಳ ಗಡಿ ಹಂಚಿಕೊಂಡಿರುವ ಬೆಳಗಾವಿ (Belagavi) ಜಿಲ್ಲಾಸ್ಪತ್ರೆ ಬಿಮ್ಸ್ ಎಂದೇ ಕರೆಯಲ್ಪಡುವ ಈ ಆಸ್ಪತ್ರೆಯಲ್ಲಿ ಇದೀಗ ಮತ್ತೊಂದು ಅದ್ವಾನ ನಡೆದು ಹೋಗಿದೆ. ಮಹಾರಾಷ್ಟ್ರದ ಕೆಲ ತಾಲೂಕುಗಳಿಂದ ಹಾಗೂ ಗೋವಾದ ಕೆಲ ಭಾಗದಿಂದ ಸಾಕಷ್ಟು ರೋಗಿಗಳು ಈ ಬಿಮ್ಸ್ ಆಸ್ಪತ್ರೆಗೆ ಬರುತ್ತಾರೆ. ಅಪಘಾತ, ಹೆರಿಗೆಗೆ ಹೆಚ್ಚಿನ ಪ್ರಮಾಣದಲ್ಲಿ ಚಿಕಿತ್ಸೆಗೆ ಜನ ದಾಖಲಾಗುತ್ತಾರೆ.

    ನಿತ್ಯ ಸಾವಿರಾರು ರೋಗಿಗಳು ಬಂದು ಹೋಗುವ ಈ ಆಸ್ಪತ್ರೆಯಲ್ಲಿ ಕಂದಮ್ಮಗಳು ಸಾವನ್ನಪ್ಪುತ್ತಿರುವ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿದೆ. ಅಧಿಕಾರಿಗಳು ಹಾಗೂ ಕೆಲ ವೈದ್ಯರ ಬೇಜವಾಬ್ದಾರಿಯಿಂದ ಬದುಕಿ ಬಾಳಬೇಕಿದ್ದ ಕಂದಮ್ಮಗಳು ಈಗ ಉಸಿರು ಚೆಲ್ಲುತ್ತಿವೆ. ಇದನ್ನೂ ಓದಿ: ಬಸ್‌ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು

     

    ಬಿಮ್ಸ್ ಆಸ್ಪತ್ರೆಯಲ್ಲಿ ನಿತ್ಯ ಸುಮಾರು ಇಪ್ಪತ್ತರಿಂದ ಮೂವತ್ತು ಹೆರಿಗೆಗಳು ತಿಂಗಳಿಗೆ 800 ಹೆರಿಗೆಗಳು ಇಲ್ಲಿ ಆಗುತ್ತಿವೆ. ಆದರೆ ಕಳೆದ 3 ತಿಂಗಳಿನಲ್ಲಿ 41 ಶಿಶುಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಖುದ್ದು ಸಾವಿನ ಕುರಿತು ಆಸ್ಪತ್ರೆಯ ಆಡಳಿತ ಮಂಡಳಿಯವರೇ ಒಪ್ಪಿಕೊಂಡಿದ್ದು ಹೀಗಾಗಿ ಜನರಿಗೆ ಸಾಕಷ್ಟು ಆತಂಕ ಹುಟ್ಟುವಂತೆ ಮಾಡಿದೆ.

    ಆಗಸ್ಟ್‌ನಲ್ಲಿ 12 ಮಕ್ಕಳು ಸೆಪ್ಟಂಬರ್‌ನಲ್ಲಿ 18 ಮತ್ತು ಅಕ್ಟೋಬರ್‌ನಲ್ಲಿ 11 ಶಿಶುಗಳು ಮೃತಪಟ್ಟಿವೆ. ಆಸ್ಪತ್ರೆಯಲ್ಲಿರುವ ಏರ್ ಕಂಪ್ರೆಸರ್ ಕೆಟ್ಟು ಹೋಗಿದ್ದರಿಂದ ಶಿಶುಗಳು ಸಾವನ್ನಪ್ಪುತ್ತಿವೆ. ಆಸ್ಪತ್ರೆಯಲ್ಲಿ ಎರಡು ಏರ್ ಕಂಪ್ರೆಸರ್ ಇದ್ದು ಎರಡರ ಪೈಕಿ ಒಂದು ಮೂರು ತಿಂಗಳ ಹಿಂದೆ ಕೆಟ್ಟು ಹೋಗಿದ್ದು ಅದನ್ನ ರಿಪೇರಿ ಕೂಡ ಮಾಡಿಲ್ಲ. ಇದರಿಂದ ಆಕ್ಸಿಜನ್ ಸರಿಯಾಗಿ ಸಿಗದೇ ಹೆಚ್ಚು ಕಂದಮ್ಮಗಳು ಸಾವಾಗುತ್ತಿವೆ ಎಂಬ ದೂರುಗಳು ಕೇಳಿ ಬಂದಿವೆ.

    ವೈದ್ಯರನ್ನು ನಂಬಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ದೇವರಾಗಬೇಕಿದ್ದ ಕೆಲವರ ನಿರ್ಲಕ್ಷ್ಯ ಹಲವು ಸಾವುಗಳಿಗೆ ಕಾರಣವಾಯ್ತಾ ಎಂಬ ಅನುಮಾನ ಇದ್ದು ಈ ಬಗ್ಗೆ ತನಿಖೆಯಿಂದಲೇ ಉತ್ತರ ಸಿಗಬೇಕಿದೆ.

     

  • ಸೋಂಕಿತ ಸತ್ತಿದ್ದಕ್ಕೆ ಅಂಬುಲೆನ್ಸ್‌ಗೆ ಬೆಂಕಿ, ಕಲ್ಲು ತೂರಾಟ – ವೈದ್ಯರ ಪಿಪಿಇ ಕಿಟ್, ಬಟ್ಟೆ ಹರಿದ ಕಿಡಿಗೇಡಿಗಳು

    ಸೋಂಕಿತ ಸತ್ತಿದ್ದಕ್ಕೆ ಅಂಬುಲೆನ್ಸ್‌ಗೆ ಬೆಂಕಿ, ಕಲ್ಲು ತೂರಾಟ – ವೈದ್ಯರ ಪಿಪಿಇ ಕಿಟ್, ಬಟ್ಟೆ ಹರಿದ ಕಿಡಿಗೇಡಿಗಳು

    – ಇದು ಪೂರ್ವ ನಿಯೋಜಿತ ಕೃತ್ಯ
    – ಚಿಕಿತ್ಸೆ ನೀಡಿದ ವೈದ್ಯರನ್ನು ತೋರಿಸಿ
    – ಪಟ್ಟು ಹಿಡಿದಿದ್ದ ಮೃತನ‌ ಸಂಬಂಧಿಕರು

    ಬೆಳಗಾವಿ: ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಸತ್ತಿದ್ದಕ್ಕೆ ಆತನ ಸಂಬಂಧಿಕರು ಅಂಬುಲೆನ್ಸ್‌ಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಮಾಡಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಬುಧವಾರ ರಾತ್ರಿ ಬಿಮ್ಸ್ ಆಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಸಾವನ್ನಪ್ಪಿದ್ದ. ಇದರಿಂದ ರೊಚ್ಚಿಗೆದ್ದ ಆತನ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ, ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಆಸ್ಪತ್ರೆ ಮುಂಭಾಗ ಕಲ್ಲು ತೂರಾಟ ಮಾಡಿದ್ದರು.

    ಈ ಘಟನೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆ ವೈದ್ಯರು ದೂರು ನೀಡಿದ್ದು, ಈಗ ಮೃತನ 8 ಸಂಬಂಧಿಕರು ಸೇರಿ ಇತರೆ 15 ಜನರ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಘಟನೆಯನ್ನು ಖಂಡಿಸಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದು, ನಾವು ನಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತೇವೆ. ಆದರೆ ನಮ್ಮ ಮೇಲೆ ಹಲ್ಲೆ ಮಾಡಲು ಕೆಲವರು ಮುಂದಾಗಿದ್ದಾರೆ. ಅವರಿಗೆ ಶಿಕ್ಷೆ ಆಗಬೇಕು. ಇಲ್ಲವಾದರೆ ನಾವು ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.

    ನಿನ್ನೆ ರಾತ್ರಿ ಸೋಂಕಿತ ಮೃತಪಡುತ್ತಿದಂತೆ ಆಸ್ಪತ್ರೆಗೆ ಬಂದ ಸಂಬಂಧಿಕರು, ನಮಗೆ ಚಿಕಿತ್ಸೆ ಮಾಡಿದ ವೈದ್ಯರನ್ನು ತೋರಿಸಿ, ಆತ ನಮಗೆ ಬೇಕು ಎಂದು ಗಲಾಟೆ ಮಾಡಿದ್ದಾರೆ. ಜೊತೆಗೆ ಮೂವರು ವೈದ್ಯರು, ಇಬ್ಬರು ನರ್ಸ್ ಸೇರಿ ಐದು ಜನರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಜೊತೆಗೆ ಪಿಪಿಇ ಕಿಟ್, ಬಟ್ಟೆ ಹರಿದು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಜೀವ ಉಳಿಸಿಕೊಳ್ಳಲು ಕೊರೊನಾ ವಾರಿಯರ್ಸ್ ಓಡಿ ಹೋಗಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಜುಲೈ 19ರಂದು ರೋಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ನಿನ್ನೆ ಹೆಚ್ಚಿನ ಚಿಕಿತ್ಸೆಗೆಂದು ಐಸಿಯುಗೆ ಶಿಫ್ಟ್ ಮಾಡಿದಾಗ ರೋಗಿ ಸಾವನ್ನಪ್ಪಿದ್ದಾರೆ. ಜೀವದ ಹಂಗು ತೊರೆದು ಡಾಕ್ಟರ್ ಮತ್ತು ನರ್ಸ್ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ರೀತಿ ಕೃತ್ಯಕ್ಕೆ ಯಾರು ಇಳಿಯಬಾರದು. ವೈದ್ಯರು ಹೆದರಿಬಿಟ್ಟಿದ್ದರು ಅವರನ್ನು ಕರೆದು ಮಾತಾಡಿದ್ದೇನೆ. ಡಿಎಚ್‍ಓ ಕೇಸ್ ದಾಖಲಿಸುತ್ತಿದ್ದಾರೆ. ಕೃತ್ಯ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಜೊತೆಗೆ ಆಸ್ಪತ್ರೆಯ ಸುತ್ತಮುತ್ತ 144 ಸೆಕ್ಷನ್ ಅನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಜಾರಿ ಮಾಡುತ್ತೇವೆ ಎಂದಿದ್ದಾರೆ.

    ನಿನ್ನೆ ರಾತ್ರಿ ನಡೆದ ಕೃತ್ಯ ಪೂರ್ವನಿಯೋಜಿತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ರೋಗಿಯ ಸಂಬಂಧಿಕರು ಗಲಾಟೆ ಮಾಡಬೇಕು ಎಂದೇ ಜನರನ್ನು ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಒಂದು ಕೊರೊನಾ ಅಂಬುಲೆನ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಜೊತೆಗೆ ಜೈಲು ವಾಹನ ಸೇರಿ 5ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.