Tag: Biragi

  • ಶಿವರಾಜ್ ಕುಮಾರ್ 60 ನೇ ವರ್ಷದ ಹುಟ್ಟುಹಬ್ಬ: ಸಿಂಪಲ್ಲಾಗಿ ಮಾಡುವುದಕ್ಕೆ ನಿರ್ಧಾರ

    ಶಿವರಾಜ್ ಕುಮಾರ್ 60 ನೇ ವರ್ಷದ ಹುಟ್ಟುಹಬ್ಬ: ಸಿಂಪಲ್ಲಾಗಿ ಮಾಡುವುದಕ್ಕೆ ನಿರ್ಧಾರ

    ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು ಈ ಬಾರಿ ಅದ್ಧೂರಿ ಮತ್ತು ಸಡಗರದಿಂದ ಆಚರಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದರು. ಈ ವರ್ಷ ಅವರಿಗೆ 60 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ಗ್ರ್ಯಾಂಡ್ ಆಗಿಯೇ ಹುಟ್ಟು ಹಬ್ಬ ಆಚರಿಸಬೇಕೆಂದು ಅಭಿಮಾನಿಗಳು ಆಸೆ ಪಟ್ಟಿದ್ದರು. ಆದರೆ, ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ  ಸಿಂಪಲ್ಲಾಗಿ ಹುಟ್ಟು ಹಬ್ಬವನ್ನು ಆಚರಿಸಲು ನಿರ್ಧರಿಸಿದ್ದಾರೆ ಶಿವರಾಜ್ ಕುಮಾರ್.

    ಒಂದು ಬೈರಾಗಿ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ‘ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೇ, ಬೈರಾಗಿ ಸಿನಿಮಾ ಕುರಿತು ಹಲವು ಕಾರ್ಯಕ್ರಮಗಳನ್ನು ಹುಟ್ಟು ಹಬ್ಬಕ್ಕೂ ಮುನ್ನ ಚಿತ್ರತಂಡ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಶಿವರಾಜ್ ಕುಮಾರ್ ಹುಟ್ಟು ಹಬ್ಬಕ್ಕಾಗಿ ಹತ್ತು ದಿನ ಮೊದಲೇ ಬೈರಾಗಿ ಸಿನಿಮಾ ರಿಲೀಸ್ ಆಗುತ್ತಿದ್ದು, ಚಾಮರಾಜನಗರದಲ್ಲಿ ಪ್ರಿ ರಿಲೀಸ್ ಇವೆಂಟ್ ನಡೆಯಲಿದೆ. ಇದನ್ನೂ ಓದಿ: ಬಿಗ್‌ಬಿ ಮೊಮ್ಮಗಳ ಜೊತೆ `ಗಲ್ಲಿಬಾಯ್’ ನಟನ ಡೇಟಿಂಗ್ ಸ್ಟೋರಿ

    ಜೂ.25 ರಂದು ಚಾಮರಾಜ ನಗರದಲ್ಲಿ ಪ್ರೀ ಇವೆಂಟ್ ಕಾರ್ಯಕ್ರಮ ಆಯೋಜನೆಯಾಗಿದ್ದರೆ, 24 ರಂದು ರಾಮನಗರದಿಂದ ಮೈಸೂರುವರೆಗೆ ರೋಡ್ ಶೋ ನಡೆಯಲಿದೆ. 24 ರಂದು ರಾತ್ರಿ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ಮಾಡಿ, ಮರುದಿನವೇ ಈವೆಂಡ್ ನಡೆಯಲಿದೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಮತ್ತು ಹಾಡುಗಳಿಂದ ನಿರೀಕ್ಷೆ ಮೂಡಿಸಿದ್ದು, ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ.

  • ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

    ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

    ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ದಿನ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ. ‘ಜೇಮ್ಸ್’ ಬಿಡುಗಡೆಯಾಗುವ ಎಲ್ಲ ಸಿನಿಪರದೆಗಳಲ್ಲೂ ‘ಬೈರಾಗಿ’ ದರ್ಶನವಾಗಲಿದೆ ಎಂಬುದು ವಿಶೇಷ.

    After Puneeth Rajkumar's death, elder brother Shiva Rajkumar's Bhajrangi 2 shows cancelled - Movies News

    ಪುನೀತ್ ಅವರ ಸವಿನೆನಪಿಗಾಗಿ ಈ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ‘ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಮ್ಮ ತಂಡದ ಜತೆ ಅಪ್ಪು ಒಡನಾಟವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ‘ಬೈರಾಗಿ’ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಇದು ಪುನೀತ್ ಹಾಗೂ ಶಿವಣ್ಣನ ಅಭಿಮಾನಿಗಳಿಗೆ ಸಂತಸದ ವಿಷಯ’ ಎಂಬಿದು ಚಿತ್ರತಂಡದ ಅನಿಸಿಕೆ. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?

    ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ ‘ಕೃಷ್ಣ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ‘ಟಗರು’ ಬಳಿಕ ‘ಡಾಲಿ’ ಧನಂಜಯ್ ಈ ಸಿನಿಮಾದಲ್ಲಿ ಶಿವರಾಜ್‍ಕುಮಾರ್ ಜೊತೆ ನಟಿಸಿದ್ದಾರೆ. ಹಿರಿಯ ನಟ ಶಶಿಕುಮಾರ್, ಅಂಜಲಿ, ಯಶ್ ಶಿವಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ಕೂಡಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.