ಕೊಲ್ಕತ್ತಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು (ಸೋಮವಾರ) ಪಶ್ಚಿಮ ಬಂಗಾಳದ (West Bengal) ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಬೀರ್ ಭೂಮ್‌ನ (Birbhum) ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಕಲ್ಲಿದ್ದಲು ಪುಡಿ ಮಾಡುವ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವಿಜಯೇಂದ್ರ ಏನು ಹೈಕಮಾಂಡಾ? – ಸಿಎಂ ರಾಜೀನಾಮೆ ಹೇಳಿಕೆಗೆ ಜಮೀರ್ ತಿರುಗೇಟು
ಕೋಲ್ಕತ್ತಾ: ಇತ್ತೀಚೆಗಷ್ಟೇ ಹಿಂಸಾಚಾರ ಕೃತ್ಯ ನಡೆದು, ತನಿಖೆ ಸಿಬಿಐ ಹಂತದಲ್ಲಿರುವಾಗಲೇ ಪಶ್ಚಿಮ ಬಂಗಳಾದ ಬೀರ್ಭುಮ್ ಜಿಲ್ಲೆಯಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 14ರ ರಾತ್ರಿ 15 ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ 14 ವರ್ಷದ ಇಬ್ಬರು ಹುಡುಗರು ಸೇರಿ ನಾಲ್ವರು ಆರೋಪಿಗಳನ್ನು ಬೀರ್ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆರೋಪಿಗಳು ಸ್ಥಳೀಯ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಲಕ್ಷ್ಮೀರಾಮ್ ಸೂರೇನ್ ಮತ್ತು ಸುನೀಲ್ ಇಬ್ಬರು ಯುವಕರನ್ನು ಭಾನುವಾರ ತಡರಾತ್ರಿ ಪರುಯಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಅಪ್ರಾಪ್ತ ಬಾಲಕರನ್ನೂ ಪತ್ತೆಹಚ್ಚಲಾಗಿದೆ ಎಂದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ತಂದೆಯನ್ನು ಕೊಂದ ಮಾನಸಿಕ ಅಸ್ವಸ್ಥೆ ಅರೆಸ್ಟ್
ಹುಡುಗಿಯು ಇಲ್ಲಿನ ಶಾಂತಿನಿಕೇತನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಸ್ಥಳೀಯ ಯುವಕನೊಂದಿಗೆ ಕುಳಿತಿದ್ದಾಗ, ಆತನನ್ನು ಗೆಳೆಯನೆಂದು ಭಾವಿಸಿ, ಕೆಲ ಯುವಕರು ಇಬ್ಬರ ಮೇಲೆ ಮೇಲೆ ಹಲ್ಲೆ ನಡೆಸಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಸ್ಥಳೀಯ ನ್ಯಾಯಾಲಯವು ಸೋಮವಾರ ಇಬ್ಬರು ಯುವಕರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಅಪ್ರಾಪ್ತ ಬಾಲಕರನ್ನು ರಿಮ್ಯಾಂಡ್ ರೂಂಗೆ ಕಳುಹಿಸಲಾಗಿದೆ. ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದಾರೆಯೇ ಇಲ್ಲವೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಬಿರ್ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಎಚ್‌ಟಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು
ಪಶ್ಚಿಮ ಬಂಗಾಳ ಮಹಿಳಾ ಆಯೋಗದ ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಅವರು ಬಾಲಕಿಯನ್ನು ಭೇಟಿಯಾಗಿ, ಆಕೆಯ ಕುಟುಂಬಸ್ಥರು ಹಾಗೂ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಂಪರ್‍ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಹತ್ತು ಮಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.
ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಈ ಹತ್ತು ಜನರನ್ನು ಕೆಲಸಕ್ಕೆ ಸೇರಿಸಿಕೊಳ್ಳುವಾಗ ಯಾವುದೇ ರೀತಿಯ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಬಿರ್ಭುಮ್ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಸೂಚಿಸಿದರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಮಾತನ್ನು ಉಳಿಸಿಕೊಂಡಿದ್ದೇನೆ. ಇಂದು ನಾನು 10 ಮಂದಿಗೆ ಡಿ ಗ್ರೂಪ್ ಉದ್ಯೋಗ ನೀಡುತ್ತಿದ್ದೇನೆ. ಆದರೆ ಬಿರ್ಭುಮ್ ಹಿಂಸಾಚಾರದಲ್ಲಿ ನಾವು ಕಳೆದುಕೊಂಡವರನ್ನು ಎಂದಿಗೂ ಹಿಂತಿರುಗಿಸಲಾಗುವುದಿಲ್ಲ, ಆದರೆ ಎಲ್ಲರೂ ಮುಂದಕ್ಕೆ ಸಾಗಿ, ಬದುಕು ನಡೆಸಬೇಕಾಗಿದೆ ಎಂದರು. ಇದನ್ನೂ ಓದಿ: ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಟಿಎಂಸಿ ನಾಯಕ ಬಹದ್ದೂರ್ ಶೇಖ್ ಅವರ ಹತ್ಯೆಯ ಬಳಿಕ ದುಷ್ಕರ್ಮಿಗಳ ಗುಂಪೊಂದು ಕಳೆದ ತಿಂಗಳು ಪಶ್ಚಿಮ ಬಂಗಾಳದ ಬಿರ್ಭೂಮ್‍ನ ರಾಮ್‍ಪುರಹತ್ ಪ್ರದೇಶದಲ್ಲಿ ಅನೇಕ ಗುಡಿಸಲುಗಳಿಗೆ ಬೆಂಕಿ ಹಚ್ಚಿದರು. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದರು.
ಕೋಲ್ಕತ್ತಾ: ಬೀರ್‌ಭುಮ್‍ನ ಹಿಂಸಾಚಾರಕ್ಕೆ ಸಂಬಂಧಿಸಿ ಇಂದು ಪಶ್ಚಿಮಬಂಗಾಳದ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಶಾಸಕರ ನಡುವೆ ನಡೆದ ಮಾರಾಮಾರಿಯಲ್ಲಿ ಐವರು ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸೋಮವಾರ ಟಿಎಂಸಿ ಮತ್ತು ಬಿಜೆಪಿ ಶಾಸಕರ ನಡುವೆ ಬೀರ್‌ಭುಮ್ ಹಿಂಸಾಚಾರದ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಚರ್ಚೆ ತಾರಕಕ್ಕೆ ಏರಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮಾರಾಮಾರಿ ನಡೆದಿದೆ.
ಈ ಬಗ್ಗೆ ಬಿಜೆಪಿ ಮುಖಂಡ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, ಬೀರ್‌ಭುಮ್‍ನಲ್ಲಿ ನಡೆದ ಹತ್ಯೆ ಬಗ್ಗೆ ಸದನದಲ್ಲಿ ಚರ್ಚೆ ನಡೆಯಿತು. ಇದರಿಂದಾಗಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸಂಪೂರ್ಣ ಕೋಲಾಹಲವಾಗಿದೆ. ಮನೋಜ್ ತಿಗ್ಗಾ ಸೇರಿದಂತೆ ಬಿಜೆಪಿ ಶಾಸಕರ ಮೇಲೆ ಟಿಎಂಸಿ ಶಾಸಕರು ಹಲ್ಲೆ ನಡೆಸಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿ ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ ಅವರು ವಿಧಾನಸಭೆಯ ಸದನದಲ್ಲಿ ಎರಡು ಪಕ್ಷದ ಶಾಸಕರ ಗುಂಪು ಪರಸ್ಪರ ತಳ್ಳಿಕೊಂಡು ಕೂಗಿತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
Absolute pandemonium in the West Bengal Assembly. After Bengal Governor, TMC MLAs now assault BJP MLAs, including Chief Whip Manoj Tigga, as they were demanding a discussion on the Rampurhat massacre on the floor of the house.
ಘಟನೆಯೇನು?: ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಇದನ್ನೂ ಓದಿ: ವಕೀಲರ ಕಚೇರಿಗಳಿಗೂ ವಿದ್ಯುತ್ ಸಬ್ಸಿಡಿ – ಬಜೆಟ್‍ನಲ್ಲಿ ಆಪ್ ಘೋಷಣೆ
ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್‌ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದಿದ್ದರು.
ಕೋಲ್ಕತ್ತಾ: ಬಿರ್‌ಭುಮ್‌ನಲ್ಲಿ ನಡೆದ ಘಟನೆಯನ್ನು ಸಿಬಿಐ ವಹಿಸಿಕೊಂಡಿದೆ. ಇದು ಒಳ್ಳೆಯ ನಿರ್ಧಾರ. ಆದರೆ ಬಿಜೆಪಿ ನಿರ್ದೇಶನಗಳನ್ನು ಅವರು ಅನುಸರಿಸಿದರೆ ನಾವು ಪ್ರತಿಭಟನೆಗೆ ಸಿದ್ಧ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿರ್‌ಭುಮ್ ಘಟನೆಯನ್ನು ಸಿಬಿಐ ವಹಿಸಿಕೊಂಡಿದೆ. ಇದು ಒಳ್ಳೆಯ ನಿರ್ಧಾರ. ಆದರೆ ಬಿರ್‌ಭುಮ್ ಹತ್ಯೆಯ ಹಿಂದೆ ಪಿತೂರಿ ಇದೆ ಎಂದು ನಾನು ಈಗಲೂ ಭಾವಿಸುತ್ತೇನೆ ಎಂದು ತಿಳಿಸಿದರು.
ತೃಣಮೂಲ ಕಾರ್ಯಕರ್ತನನ್ನು ಮತ್ತೊಂದು ಪಕ್ಷದ ಕಾರ್ಯಕರ್ತ ಕೊಂದಿದ್ದಾನೆ. ಆದರೆ ಟಿಎಂಸಿಯನ್ನು ಮಾತ್ರ ಎಲ್ಲೆಡೆ ಟೀಕೆ ಮಾಡಲಾಗುತ್ತಿದೆ. ರಾಮ್‍ಪುರಹತ್ ಘಟನೆಯ ಮೂಲ ಕಾರಣವನ್ನು ತಿಳಿಯಲು ತನಿಖೆ ಕೈಗೊಂಡಿದ್ದು, ಅನೇಕ ಕ್ರಮಗಳನ್ನು ಅನುಸರಿಸುತ್ತಿದ್ದೇವೆ ಎಂದರು.
ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ. ಆಗ ನಮ್ಮ ಪಕ್ಷದ ಕಾರ್ಯಕರ್ತರಿಗೆ ಘಟನಾ ಸ್ಥಳಕ್ಕೆ ಬರಲು ಅವಕಾಶ ನೀಡಲಿಲ್ಲ. ಆದರೆ ಬಿರ್‌ಭುಮ್‌ನಲ್ಲಿ ನಾವು ಯಾವುದೇ ಪಕ್ಷವನ್ನು ತಡೆದಿಲ್ಲ ಎಂದರು. ಇದನ್ನೂ ಓದಿ:ಮಹಿಳಾ ದಿನಾಚರಣೆ – ಪತ್ನಿ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಶಾಸಕ
ಏನಿದು ಪ್ರಕರಣ?: ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು.
ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬಿರ್‌ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳನ್ನು ಸಿಬಿಐ ಹೆಸರಿಸಿದೆ. ಇದನ್ನೂ ಓದಿ:ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್ ಜಿಲ್ಲೆಯಲ್ಲಿ ನಡೆದ 8 ಜನರನ್ನು ಹತ್ಯೆ ಮಾಡಿದವರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿರ್‌ಭುಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಶಿಕ್ಷೆಯಾಗಲಿದೆ ಎಂದರು.
ಘಟನೆಯೇನು?: ಪಶ್ಚಿಮ ಬಂಗಾಳದ ಬಿರ್‌ಭುಮ್ ಜಿಲ್ಲೆಯ ರಾಮ್‍ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಸಜಿವ ದಹನರಾಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ.
ಈ ಘಟನೆಗೆ ಮುನ್ನ, ಸ್ಥಳೀಯ ಪಂಚಾಯಿತಿ ಮುಖಂಡನ ಹತ್ಯೆಯಾಗಿತ್ತು ಎಂದು ಡಿಜಿಪಿ ಮನೋಜ್ ಮಾಳವೀಯ ಅವರು ಹೇಳಿದ್ದಾರೆ. ಪಂಚಾಯಿತಿ ಮುಖಂಡ ಟಿಎಂಸಿ ಪಕ್ಷದವರು. ಟಿಎಂಸಿಯ ಎರಡು ಗುಂಪುಗಳ ನಡುವಣ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆದರೆ, ಇದನ್ನು ಪೊಲೀಸರು ದೃಢಪಡಿಸಿಲ್ಲ. ಇದನ್ನೂ ಓದಿ:ಬೈಕ್‍ಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ನಾಲ್ವರು ಸಾವು