Tag: Birbhum Arson

  • ಬಿರ್ಭೊಮ್ ಹಿಂಸಾಚಾರ – ಪ್ರತಿಭಟನೆ ವೇಳೆ ಸುವೆಂದು ಅಧಿಕಾರಿಗೆ ಗಾಯ

    ಬಿರ್ಭೊಮ್ ಹಿಂಸಾಚಾರ – ಪ್ರತಿಭಟನೆ ವೇಳೆ ಸುವೆಂದು ಅಧಿಕಾರಿಗೆ ಗಾಯ

    ಕೋಲ್ಕತ್ತಾ: ಬಿರ್ಭೊಮ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೆಂದು ಅಧಿಕಾರಿಗೆ ಗಾಯವಾಗಿದೆ.

    ಪಶ್ಚಿಮ ಬಂಗಾಳದಲ್ಲಿ ಕೆಲದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮತ್ತು ಆರು ಮಂದಿ ಮಹಿಳೆಯರನ್ನು ಜೀವಂತ ಸುಟ್ಟು ಹಾಕಲಾಗಿತ್ತು. ಈ ಘಟನೆ ಬಳಿಕ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಪ್ರತಿಪಕ್ಷಗಳು ಕಿಡಿಕಾರಿದ್ದವು. ಈ ಬಗ್ಗೆ ಬಿಜೆಪಿ ಇಂದು ಬಿರ್ಭೊಮ್‍ನ ಬಿಡಿಒ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿತ್ತು. ಈ ವೇಳೆ ಬಿಡಿಒ ಕಚೇರಿಗೆ ಮುತ್ತಿಗೆ ಹಾಕಲು ಸುವಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಅಲ್ಲಿದ್ದ ಕಬ್ಬಿಣದ ಬ್ಯಾರಿಕೇಡ್ ಬಿದ್ದು ಸುವೆಂದು ಅಧಿಕಾರಿ ಕಾಲಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

    ಬ್ಯಾರಿಗೇಡ್ ಬಿದ್ದ ಕಾರಣ ಸುವೆಂದು ಅಧಿಕಾರಿ ಕಾಲಿಗೆ ಗಾಯವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಬಿಜೆಪಿ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪ.ಬಂಗಾಳ ಬದುಕಲು ಯೋಗ್ಯವಾಗಿಲ್ಲ – ಬಿರ್ಭೂಮ್ ಹಿಂಸಾಚಾರ ನೆನೆದು ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ

    ಏನಿದು ಬಿರ್ಭೊಮ್ ಹಿಂಸಾಚಾರ ಪ್ರಕರಣ:
    ಪಶ್ಚಿಮ ಬಂಗಾಳದ ಬಗುಟಿ ಗ್ರಾಮ ಪಂಚಾಯತ್ ಮುಖಂಡ ಭಾದು ಶೇಖ್ ಅವರ ಮೇಲೆ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.

    ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬಿರ್ಭೂಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದರು.

  • ಬಿರ್ಭೂಮ್ ಹತ್ಯಾ ಪ್ರಕರಣ – ನವದಂಪತಿ ಸಾವು

    ಬಿರ್ಭೂಮ್ ಹತ್ಯಾ ಪ್ರಕರಣ – ನವದಂಪತಿ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಂಪುರ್ ಹತ್ಯೆನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ನವ ವಿವಾಹಿತ ದಂಪತಿ ಮೃತಪಟ್ಟಿದ್ದಾರೆ.

    ಲಿಲಿ ಖಾತೂನ್ ಮತ್ತು ಖಾಜಿ ಸಾಜಿದುರ್ ಅವರು ಜನವರಿಯಲ್ಲಿ ವಿವಾಹವಾವಾಗಿದ್ದದರು. ಬಾಗ್ಟುಯಿ ಗ್ರಾಮದಲ್ಲಿರುವ ಲಿಲಿ ಖಾತೂನ್ ಅವರ ತಾಯಿಯ ಮನೆಗೆ ಭೇಟಿ ನೀಡುತ್ತಿದ್ದರು. ಈ ವೇಳೆ ಮಧ್ಯರಾತ್ರಿ ಸಾಜಿದುರ್ ಮತ್ತು ಅವರ ಪತ್ನಿ ಇರುವ ಮನೆಗೆ ಬೀಗ ಹಾಕಿದ್ದಾರೆ. ಇದನ್ನು ಕಂಡು ಗಾಬರಿಯಾದ ಸಾಜಿದುರ್ ತಮ್ಮ ಸ್ನೇಹಿತ ಮಜೀಮ್‍ಗೆ ಕರೆ ಮಾಡಿ ವಿಚಾರವನ್ನು ತಿಳಿಸಿ, ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಮೋಹಿನಿಯಾಟ್ಟಂ ನೃತ್ಯಕ್ಕೆ ಅರ್ಧದಲ್ಲೇ ತಡೆ – ಕೇರಳ ಜಡ್ಜ್‌ ಪಾಷಾ ವಿರುದ್ಧ ಖ್ಯಾತ ಕಲಾವಿದೆ ಆಕ್ರೋಶ

    ನಂತರ ಮಾಜೀಮ್ ಸಾಜಿದುರ್ ಅವರ ತಂದೆಗೆ ಕೂಡ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಾಜಿದುರ್ ಅವರನ್ನು ಸಂಪರ್ಕಿಸಲು ಅವರ ತಂದೆ ಪ್ರಯತ್ನಿಸಿದ್ದಾರೆ. ಆದರೆ ಎಲ್ಲ ಪ್ರಯತ್ನಗಳು ವಿಫಲವಾದವು. ಮರುದಿನ ಬೆಳಗ್ಗೆ ದಂಪತಿ ದೇಹ ಸುಟ್ಟು ಕರಕಲಾಗಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ

    ಮಂಗಳವಾರ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್‍ಪುರಹತ್ ಗ್ರಾಮದಲ್ಲಿ ಸುಮಾರು 12ಕ್ಕೂ ಹೆಚ್ಚು ಮನೆಗಳಿಗೆ ಕಿಡಿಕೇಡಿಗಳು ಬೆಂಕಿ ಹಚ್ಚಿದ್ದು, ಇಬ್ಬರು ಮಕ್ಕಳು ಸೇರಿದಂತೆ ಸುಮಾರು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಮಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಡಿಜಿ (ಸಿಐಡಿ) ಜ್ಞಾನವಂತ್ ಸಿಂಗ್ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಪಶ್ಚಿಮಬಂಗಾಳ ಸರ್ಕಾರಕ್ಕೆ ವರದಿ ಕೇಳಿದೆ. ಬಂಗಾಳ ಬಿಜೆಪಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಒತ್ತಾಯಿಸಿದೆ.