Tag: Birbhum violence

  • ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ – ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ ದಾಖಲು

    ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ – ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ ದಾಖಲು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಿರ್‌ಭೂಮ್‌ನಲ್ಲಿ (Birbhum Incident) ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಸಿಬಿಐ (CBI) ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು, ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ ದಾಖಲಿಸಿದ್ದಾರೆ.

    ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಈ ವರ್ಷದ ಆರಂಭದಲ್ಲಿ ನಡೆದಿದ್ದ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಲಾಲೋನ್ ಶೇಖ್ ಸೋಮವಾರ ಸಿಬಿಐ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕಸ್ಟಡಿ ಚಿತ್ರಹಿಂಸೆ ಆರೋಪದಡಿ ಲಾಲೋನ್ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಸಿಎಂ ಸ್ಟಾಲಿನ್ ಪುತ್ರ ತಮಿಳುನಾಡಿನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

    ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 10 ಮಂದಿಯನ್ನು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಇದಾದ ಎಂಟು ತಿಂಗಳ ನಂತರ ಲಾಲೋನ್ ಶೇಖ್‌ನನ್ನು ಡಿಸೆಂಬರ್ 4 ರಂದು ಜಾರ್ಖಂಡ್‌ನಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಸಿಬಿಐ ಸ್ಥಾಪಿಸಿದ್ದ ತಾತ್ಕಾಲಿಕ ಶಿಬಿರದಲ್ಲಿ ಆತನನ್ನು ಇರಿಸಲಾಗಿತ್ತು.

    ಸಿಬಿಐ ಅಧಿಕಾರಿಗಳು ತನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣದಿಂದ ಅವರ ಹೆಸರು ತೆಗೆಯಲು 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಲಾಲೋನ್ ಶೇಖ್ ಪತ್ನಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಕರಣದಲ್ಲಿ ಸಿಬಿಐ ಪಾತ್ರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಕೋಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಬೊಗ್ಟುಯಿಯಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಗಂಪಿನ ನೇತೃತ್ವವನ್ನು ಶೇಖ್ ನೇತೃತ್ವ ವಹಿಸಿದ್ದ ಎಂದು ಶಂಕಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಂಡಿದ್ದ 7 ಬಿಜೆಪಿ ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ.

    ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಮಾರ್ಚ್ 9ರಂದು ಸುದೀಪ್ ಮುಖೋಪಾಧ್ಯಾಯ, ಮಿಹಿರ್ ಗೋಸ್ವಾಮಿ ಹಾಗೂ ಮಾರ್ಚ್ 28ರಂದು ಸುವೆಂದು ಅಧಿಕಾರಿ, ಮನೋಜ್ ತಿಗ್ಗಾ, ನರಹರಿ ಮಹತೋ, ಮಿಹಿರ್ ಗೋಸ್ವಾಮಿ ಮತ್ತು ಶಂಕರ್ ಘೋಷ್ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    bjP

    ಬಿಜೆಪಿ ಶಾಸಕರು ತಮ್ಮ ಅಮಾನತು ಹಿಂಪಡೆಯಲು ಸ್ಪೀಕರ್ ಬಿಮನ್ ಬಂಧೋಪಾಧ್ಯಾಯ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ತಾಂತ್ರಿಕ ದೋಷದ ಕಾರಣ ಉಲ್ಲೇಖಿಸಿ ಸ್ಪೀಕರ್ ಅವರು ಮನವಿಯನ್ನು ಮರುಸಲ್ಲಿಸುವಂತೆ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು ವಿಧಾನಸಭೆಯ ಮುಂಭಾಗವೇ ಪ್ರತಿಭಟನೆ ನಡೆಸಿದ್ದರು. ಮಂಗಳವಾರ ಸುವೇಂದು ಅಧಿಕಾರಿ ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಷಯವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಮಾತನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ 

    ಏನಿದು ಘಟನೆ?
    ವಿಧಾನಸಭಾ ಅಧಿವೇಶನದಲ್ಲಿ ಪಶ್ಚಿಮ ಬಂಗಾಳದ ಬಿರ್ಭುಮ್ ಹಿಂಸಾಚಾರದ ಬಗ್ಗೆ ಚರ್ಚಿಸುವ ವೇಳೆ ಪ್ರತಿಪಕ್ಷಗಳ ಬೇಡಿಕೆಯ ನಂತರ ಉಂಟಾದ ಗದ್ದಲದಲ್ಲಿ ಭಾಗಿಯಾಗಿದ್ದಾರೆ ಶಾಸಕರು ಭಾಗಿಯಾಗಿದ್ದರು. ಹಾಗಾಗಿ ಅಶಿಸ್ತಿನ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿತ್ತು.

    Live Tv