Tag: Bird flu

  • ಕೊರೊನಾ, ಕೆ.ಎಫ್.ಡಿ ಜೊತೆ ಕಾಫಿನಾಡಿಗರಿಗೆ ಹಕ್ಕಿಜ್ವರದ ಭೀತಿ

    ಕೊರೊನಾ, ಕೆ.ಎಫ್.ಡಿ ಜೊತೆ ಕಾಫಿನಾಡಿಗರಿಗೆ ಹಕ್ಕಿಜ್ವರದ ಭೀತಿ

    ಚಿಕ್ಕಮಗಳೂರು: ಕೊರೊನಾ ಭೀತಿಯ ಬೆನ್ನಲ್ಲೇ ಕಾಫಿನಾಡಲ್ಲಿ ಮಂಗನ ಖಾಯಿಲೆ ಹಾಗೂ ಹಕ್ಕಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಆತಂಕಕ್ಕೀಡು ಮಾಡಿವೆ.

    ಕಾಫಿನಾಡಿನಲ್ಲಿ ಒಂದೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೂ, ವೈರಸ್‍ಗೆ ಹೆದರಿ ಜನ ಮನೆಯಿಂದ ಆಚೆ ಬರುತ್ತಿಲ್ಲ. ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪು ತಾಲೂಕಿನ ಜನ ಕೊರೊನಾಗಿಂತ ಕೆಎಫ್‍ಡಿ (ಮಂಗನ ಖಾಯಿಲೆ)ಗೆ ಬೆಚ್ಚಿ ಬೀಳುತ್ತಿದ್ದಾರೆ. ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಈಗಾಗಲೇ ಆರೇಳು ಜನ ಬಳಲುತ್ತಿದ್ದಾರೆ.

    ಈ ಎರಡು ಖಾಯಿಲೆಗಳ ಭಯದ ನಡುವೆ ಇದೀಗ ಅಲ್ಲಲ್ಲಿ ಹಕ್ಕಿಗಳು ಸಾಯುತ್ತಿದ್ದು, ಚಿಕ್ಕಮಗಳೂರಿಗೆ ಹಕ್ಕಿ ಜ್ವರವೂ ಕಾಲಿಟ್ಟಿದ್ಯ ಎಂಬ ಆತಂಕ ಸ್ಥಳಿಯರನ್ನು ಕಾಡುತ್ತಿದೆ. ಗುರುವಾರ ನಗರದ ಕೋಟೆ ಬಡಾವಣೆಯಲ್ಲಿ ಎರಡು ಪಾರಿವಾಳಗಳು ಸಾವನ್ನಪ್ಪಿದ್ದವು. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೆ ಮುಂದೆ ಎರಡು ಮೈನಾ ಹಕ್ಕಿಗಳು ಸಾವನ್ನಪ್ಪಿವೆ. ಗುರುವಾರ ಎರಡು, ಇಂದು ಎರಡು ಹಕ್ಕಿಗಳು ಸಾವನ್ನಪ್ಪಿರುವುದರಿಂದ ಮೈಸೂರು, ದಾವಣಗೆರೆಯಲ್ಲಿದ್ದ ಹಕ್ಕಿಜ್ವರ ಕಾಫಿನಾಡಿಗೂ ಕಾಲಿಟ್ಟಿತೇ ಎಂದು ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ.

    ದೇಶದ ಜನ ಕೊರೊನಾ ಭಯದಲ್ಲಿ ಬದುಕುತ್ತಿದ್ದರೆ, ಮಲೆನಾಡಿಗರು ಕೊರೊನಾ ಜೊತೆಗೆ ಕೆಎಫ್‍ಡಿ ಹಾಗೂ ಹಕ್ಕಿಜ್ವರದ ಆತಂಕದಲ್ಲಿ ದಿನ ದೂಡುವಂತಾಗಿದೆ. ಹಕ್ಕಿಗಳು ಸಾವನ್ನಪ್ಪಿದ ನಂತರ ಸ್ಥಳ ಪರಿಶೀಲನೆ ನಡೆಸಿ ಹಕ್ಕಿಗಳ ಕಳೆಬರಹವನ್ನು ಶಿವಮೊಗ್ಗದ ಲ್ಯಾಬಿಗೆ ಕಳುಸಲಾಗಿದೆ. ವರದಿ ಬಂದ ಬಳಿಕ ಹಕ್ಕಿಗಳು ಯಾವ ಕಾರಣಕ್ಕೆ ಸಾವನ್ನಪ್ಪಿವೆ ಎಂಬುದನ್ನು ತಿಳಿಯಲಿದೆ.

  • ಮಕ್ಕಳಂತೆ ಸಾಕಿದ್ದೇನೆ – ಕೋಳಿಗಳಿಗಾಗಿ ಗೋಳಾಡಿದ ವೃದ್ಧೆ

    ಮಕ್ಕಳಂತೆ ಸಾಕಿದ್ದೇನೆ – ಕೋಳಿಗಳಿಗಾಗಿ ಗೋಳಾಡಿದ ವೃದ್ಧೆ

    – ದಮ್ಮಯ್ಯ ಎನ್ನುತ್ತೇನೆ ಕೋಳಿ ಬಿಡ್ರಪ್ಪ

    ದಾವಣಗೆರೆ: ಮಕ್ಕಳಂತೆ ಸಾಕಿದ್ದೇನೆ. ದಮ್ಮಯ್ಯ ಎನ್ನುತ್ತೇನೆ ಕೋಳಿ ಬಿಡ್ರಪ್ಪ ಎಂದು ವೃದ್ಧೆಯೊಬ್ಬರು ಗೋಳಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಪಕ್ಕದಲ್ಲೇ ಇರುವ ಅಭಿಷೇಕ್ ಎನ್ನುವರಿಗೆ ಸೇರಿದ ಕೋಳಿ ಫಾರಂನಲ್ಲಿ ಹಕ್ಕಿರೋಗ ಕಂಡುಬಂದಿದ್ದು, ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಗಳು ಕೂಡ ಫಾರಂನ ಒಂದು ಕಿಲೋಮೀಟರ್ ಸುತ್ತಳತೆಯಲ್ಲಿರುವ ಕೋಳಿಗಳನ್ನು ಹಾಗೂ ಸಾಕು ಪಕ್ಷಿಗಳನ್ನು ನಾಶ ಪಡಿಸಲು ಕಿಲ್ಲಿಂಗ್ ಆರ್ಡರ್ ನೀಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬನ್ನಿಕೋಡು ಗ್ರಾಮದಲ್ಲಿರುವ ಕೋಳಿಗಳನ್ನು ನಾಶಮಾಡಲು ರ‍್ಯಾಪಿಡ್ ಟೀಮ್ ರೆಡಿ ಮಾಡಿಕೊಂಡಿದ್ದಾರೆ.

    ಬನ್ನಿಕೋಡು ಗ್ರಾಮದಲ್ಲಿ 1,167 ಸಾಕು ಕೋಳಿಗಳಿದ್ದು,12 ಜನರ ರ‍್ಯಾಪಿಡ್ ರೆಸ್ಪಾನ್ಸ್ ಟೀಂನಿಂದ ಕಿಲ್ಲಿಂಗ್ ಅಪರೇಷನದ ಶುರು ಮಾಡಿದ್ದಾರೆ. ಗ್ರಾಮದಲ್ಲಿ ಇರುವ ಕೋಳಿಗಳನ್ನು ಹಾಗೂ ಸಾಕು ಪಕ್ಷಿಗಳನ್ನು ಹಿಡಿದು ನಾಶ ಮಾಡಿ ಗ್ರಾಮದ ಹೊರ ಭಾಗದಲ್ಲಿರುವ ಗುಂಡಿಯಲ್ಲಿ ಹಾಕಿ ಮುಚ್ಚಲು ಮುಂದಾಗಿದ್ದಾರೆ. ಆದರೆ ಗ್ರಾಮದ ವೃದ್ಧೆ ಸೀತಮ್ಮ ತಮ್ಮ ಕೋಳಿಗಳನ್ನು ಹಿಡಿದುಕೊಂಡು ಹೋಗಬೇಡಿ ಎಂದು ಗೋಳಾಡಿದ್ದಾಳೆ. ಕೋಳಿಗಳನ್ನು ಮಕ್ಕಳಂತೆ ಸಾಕಿದ್ದೇನೆ. ದಮ್ಮಯ್ಯ ಎನ್ನುತ್ತೇನೆ ನನ್ ಕೋಳಿ ಬಿಡ್ರಪ್ಪ. ಕೋಳಿ ಬದಲು ನನ್ನನ್ನು ಸಾಯಿಸಿ ಎಂದು ವೃದ್ಧೆ ಗೋಳಾಡಿದ್ದಾಳೆ.

    ವೃದ್ಧೆ ಸೀತಮ್ಮನ ಬಳಿ 9 ಕೋಳಿಗಳಿದ್ದು, ಆ ಕೋಳಿಗಳಿಂದಲೇ ಜೀವನ ನಡೆಸುತ್ತಿದ್ದಳು. ಈಗ ಕಿಲ್ಲಿಂಗ್ ಆದೇಶ ಬಂದಿದ್ದೇ ತಡ ಗ್ರಾಮಕ್ಕೆ ನುಗ್ಗಿದ ರ‍್ಯಾಪಿಡ್ ಟೀಮ್ ಒಂದು ಕೋಳಿಯನ್ನು ಬಿಡದೇ ಹಿಡಿದು ಗುಂಡಿಯಲ್ಲಿ ಹೂಳುತ್ತಿದ್ದಾರೆ. ಅದಕ್ಕೆ ವೃದ್ಧೆ ಸೀತಮ್ಮ ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೋಳಿಯನ್ನು ಸಾಯಿಸುವ ಬದಲು ನನ್ನನ್ನು ಸಾಯಿಸಿ ಎಂದು ಗೋಳಾಡಿದ್ದಾಳೆ. ಆದರೆ ಅಧಿಕಾರಿಗಳು ಮಾತ್ರ ಆದೇಶದಂತೆ ಕೋಳಿಯನ್ನು ಬಿಡದೆ ಗುಂಡಿಯಲ್ಲಿ ಮುಚ್ಚಿದ್ದಾರೆ. ಅಲ್ಲದೇ ವೃದ್ಧೆಗೆ ಸಮಾಧಾನ ಮಾಡಿ ನಿಮಗೆ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

    https://www.facebook.com/publictv/videos/792337247922752/

  • ‘ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಕಾಣೆಯಾಗಿದ್ದಾರೆ’ – 10 ದಿನಗಳಲ್ಲಿ ಹುಡುಕಿಕೊಡಿ ಎಂದ ಜೆಡಿಎಸ್ ಕಾರ್ಯಕರ್ತರು

    ‘ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಕಾಣೆಯಾಗಿದ್ದಾರೆ’ – 10 ದಿನಗಳಲ್ಲಿ ಹುಡುಕಿಕೊಡಿ ಎಂದ ಜೆಡಿಎಸ್ ಕಾರ್ಯಕರ್ತರು

    – ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ

    ಮಡಿಕೇರಿ: ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಬಾರದಿರುವ ಉಸ್ತುವಾರಿ ಸಚಿವರು ಮತ್ತು ಕೊಡಗು ಸಂಸದರನ್ನು ಹುಡುಕಿಕೊಡುವಂತೆ ಕೊಡಗು ಜೆಡಿಎಸ್ ಜಿಲ್ಲಾ ಘಟಕದ ಮುಖಂಡರು ಎಸ್‍ಪಿಗೆ ದೂರು ನೀಡಿದ್ದಾರೆ.

    ಉಸ್ತುವಾರಿ ಸಚಿವ ವಿ. ಸೋಮಣ್ಣ ಮತ್ತು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಆಗಮಿಸಿಲ್ಲ. ರಾಜ್ಯದಲ್ಲಿ ಕೊರೊನಾ ಆತಂಕ ತೀವ್ರವಾಗಿದ್ದು, ಜಿಲ್ಲೆಯಲ್ಲಿಯೂ ಈಗಾಗಲೇ ನಾಲ್ಕು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ ನೆರೆಯ ಕೇರಳದಲ್ಲಿ ಮತ್ತು ಪಕ್ಕದ ಜಿಲ್ಲೆ ಮೈಸೂರಿನಲ್ಲಿ ಹಕ್ಕಿ ಜ್ವರ ಕೂಡ ತೀವ್ರಗೊಂಡಿದೆ. ಇಷ್ಟೆಲ್ಲಾ ಆದರೂ ಉಸ್ತುವಾರಿ ಸಚಿವರು ಮತ್ತು ಸಂಸದರು ಕನಿಷ್ಠ ಸೌಜನ್ಯಕ್ಕಾದರೂ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕು ಎದುರಿಸುವುದಕ್ಕೆ ಅಗತ್ಯ ಔಷಧಿಗಳಿವೆಯಾ? ಅಥವಾ ಸೌಲಭ್ಯಗಳಿವೆಯಾ ಎಂದು ಪರಿಶೀಲನೆಯನ್ನೂ ಮಾಡಿಲ್ಲ. ಈ ಇಬ್ಬರನ್ನು ಯಾರಾದರೂ ಅಪಹರಣ ಮಾಡಿದ್ದಾರಾ? ಇಲ್ಲಾ ಕೊರೊನಾ ರೋಗವೇನಾದರೂ ಬಂದಿದೆಯಾ? ಇವೆಲ್ಲವನ್ನೂ ಪರಿಶೀಲಿಸಿ ಹುಡುಕಿಕೊಡಬೇಕು ಎಂದು ಎಸ್‍ಪಿಗೆ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. 10 ದಿನಗಳಲ್ಲಿ ಉಸ್ತವಾರಿ ಸಚಿವ ಹಾಗೂ ಸಂಸದರನ್ನು ಹುಡುಕಿಕೊಡಬೇಕು ಇಲ್ಲದಿದ್ದರೆ ರಾಜ್ಯ ಉಚ್ಛನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಸ್‍ಪಿ ಸುಮನ್ ಡಿ.ಪಿ ಅವರಿಗೆ ಕೊಟ್ಟ ದೂರಿನಲ್ಲಿ ಉಲ್ಲೇಖಿಸಲಾಗಿದೆ.

  • ಹಕ್ಕಿ ಜ್ವರದ ಎಫೆಕ್ಟ್ – 3 ಸಾವಿರ ಗಿಳಿಗಳ ಆರೈಕೆಗೆ ಮುಂದಾದ ಸ್ವಾಮೀಜಿ

    ಹಕ್ಕಿ ಜ್ವರದ ಎಫೆಕ್ಟ್ – 3 ಸಾವಿರ ಗಿಳಿಗಳ ಆರೈಕೆಗೆ ಮುಂದಾದ ಸ್ವಾಮೀಜಿ

    ಮೈಸೂರು: ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಶ್ರೀ ಗಣಪತಿ ಆಶ್ರಮದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳು 3 ಸಾವಿರ ಗಿಳಿಗಳ ಆರೈಕೆಗೆ ಇಳಿದಿದ್ದಾರೆ.

    ಆಶ್ರಮದ ಶುಕವನದಲ್ಲಿ ಸುಮಾರು 3 ಸಾವಿರ ಗಿಳಿಗಳಿದ್ದು, 450 ಪ್ರಭೇದದ ಗಿಳಿಗಳನ್ನ ಸಂರಕ್ಷಿಸಲಾಗಿದೆ. ಸ್ವತಃ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳೇ ಗಿಳಿಗಳ ಆರೈಕೆಯಲ್ಲಿ ತೊಡಗಿದ್ದು, ಸ್ವತಃ ತಾವೇ ನೀರು ಆಹಾರ ನೀಡಿ ಆರೈಕೆ ಮಾಡುತ್ತಿದ್ದಾರೆ. ಆಶ್ರಮಕ್ಕೆ ಹೊರಗಿನ ಹಕ್ಕಿಗಳು ಸಂಪರ್ಕ ಮಾಡದಂತೆ ಸುತ್ತಲೂ ಬಲೆ ಹಾಕಲಾಗಿದೆ. ಆಶ್ರಮದ ಸುತ್ತ ಮುತ್ತ ಕೋಳಿಗಳು,ಕೊಕ್ಕರೆಗಳು ಸುಳಿಯದಂತೆ ನೋಡಿಕೊಳ್ಳಲಾಗಿದೆ.

    ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್‍ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್‍ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದರಿಗಳು ಪಾಸಿಟಿವ್ ಬಂದಿದೆ.

    ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣವೇ ಸಾಕು ಪಕ್ಷಿಗಳ ಸರ್ವೆ ನಡೆಸಿ, ಮೂರ್ನಾಲ್ಕು ದಿನಗಳಲ್ಲಿ 6,436 ಪಕ್ಷಿಗಳನ್ನು ಕೊಲ್ಲಲು ರ್ನಿಧರಿಸಿದೆ. ಜೊತೆಗೆ ಹಕ್ಕಿಜ್ವರ ಪತ್ತೆಯಾದ ಮೈಸೂರಿನ ಕುಂಬಾರಕೊಪ್ಪಲಿನ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ. ಈವರೆಗೆ ಒಟ್ಟು 6,436 ಪಕ್ಷಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಹೀಗಾಗಿ ಕುಂಬಾರಕೊಪ್ಪಲಿನ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಲಾಗಿದೆ.

    ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿ ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.

  • ಹಕ್ಕಿ ಜ್ವರ ದೃಢ- ಮೈಸೂರಿನಲ್ಲಿ 6,436 ಪಕ್ಷಿಗಳ ವಧೆಗೆ ನಿರ್ಧಾರ

    ಹಕ್ಕಿ ಜ್ವರ ದೃಢ- ಮೈಸೂರಿನಲ್ಲಿ 6,436 ಪಕ್ಷಿಗಳ ವಧೆಗೆ ನಿರ್ಧಾರ

    ಮೈಸೂರು: ನಗರದಲ್ಲಿ ಹಕ್ಕಿ ಜ್ವರ ದೃಢವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪಕ್ಷಿ ಸರ್ವೆ ಕಾರ್ಯ ಆರಂಭಿಸಿದೆ.

    ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್‍ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್‍ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದವರಿಗಳು ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಹಕ್ಕಿ ಜ್ವರ ಖಾತ್ರಿ- ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ

    ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣವೇ ಸಾಕು ಪಕ್ಷಿಗಳ ಸರ್ವೆ ನಡೆಸಿ, ಮೂರ್ನಾಲ್ಕು ದಿನಗಳಲ್ಲಿ 6,436 ಪಕ್ಷಿಗಳನ್ನು ಕೊಲ್ಲಲು ರ್ನಿಧರಿಸಿದೆ. ಜೊತೆಗೆ ಹಕ್ಕಿಜ್ವರ ಪತ್ತೆಯಾದ ಮೈಸೂರಿನ ಕುಂಬಾರಕೊಪ್ಪಲಿನ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ. ಈವರೆಗೆ ಒಟ್ಟು 6,436 ಪಕ್ಷಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಹೀಗಾಗಿ ಕುಂಬಾರಕೊಪ್ಪಲಿನ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಲಾಗಿದೆ.

    ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿದ್ದು ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.

  • ಸಾಗರದಲ್ಲಿ ಮಾರ್ಚ್ 31ರವರೆಗೆ ಕೋಳಿ ಮಾಂಸ ಮಾರಾಟ ಬಂದ್

    ಸಾಗರದಲ್ಲಿ ಮಾರ್ಚ್ 31ರವರೆಗೆ ಕೋಳಿ ಮಾಂಸ ಮಾರಾಟ ಬಂದ್

    – ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ ಮಾರಾಟಗಾರರು

    ಶಿವಮೊಗ್ಗ: ಕೊರೊನಾ ಹಾಗೂ ಹಕ್ಕಿಜ್ವರ ಹಿನ್ನೆಲೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಾರ್ಚ್ 31ರವರೆಗೆ ಕೋಳಿ ಮಾಂಸ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ.

    ಇಂದಿನಿಂದ ಮಾರ್ಚ್ 31ರವರೆಗೆ ಸ್ವಯಂ ಪ್ರೇರಿತರಾಗಿ ಕೋಳಿ ಮಾಂಸ ಮಾರಾಟ ಸ್ಥಗಿತಗೊಳಿಸುತ್ತೇವೆ ಎಂದು ಮಾರಾಟಗಾರರು ಹೇಳಿದ್ದಾರೆ. ಕೊರೊನಾ ವೈರಸ್ ಈಗಾಗಲೇ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದು, ಇದರ ಜೊತೆಗೆ ಮೈಸೂರು ಹಾಗೂ ಹರಿಹರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಸಾಗರದ ಕೋಳಿ ಮಾಂಸ ಮಾರಾಟಗಾರರು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕೋಳಿ ಮಾಂಸ ಮಾರಾಟ ಬಂದ್ ಮಾಡಿದ್ದಾರೆ.

    ಅಲ್ಲದೇ ಅಂಗಡಿ ಹಾಗೂ ಮಾಂಸದ ಮಾರುಕಟ್ಟೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಮಾರಾಟಗಾರರು ಸ್ವಯಂ ಪ್ರೇರಿತವಾಗಿ ಬಂದ್‍ಗೊಳಿಸಿದ್ದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಾರಾಟಗಾರರು ಈ ನಿರ್ಧಾರ ತೆಗೆದುಕೊಂಡಿರೋದು ಒಳ್ಳೆಯ ಕೆಲಸ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ಹಕ್ಕಿ ಜ್ವರ ಖಾತ್ರಿಯಾಗಿದೆ. ಕುಂಬಾರಕೊಪ್ಪಲಿನಲ್ಲಿ ಸಾಕಿದ ಕೋಳಿ ಹಾಗೂ ಕೊಕ್ಕರೆ ಸ್ಯಾಂಪಲ್‍ನಲ್ಲಿ ಜ್ವರ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದರು.

    ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಕ್ಕಿ ಜ್ವರದ ಬಗ್ಗೆ ಇದೇ ತಿಂಗಳು 12 ರಂದು ಸ್ಯಾಂಪಲ್ ಕಳುಹಿಸಲಾಗಿತ್ತು. ಇದೀಗ ಇಂದು ಹಕ್ಕಿ ಜ್ವರ ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕು ಬಂದಿರುವ ಸ್ಥಳದಲ್ಲಿ ಸಾಕಿರುವ ಹಕ್ಕಿಗಳನ್ನು ಸಾಯಿಸಬೇಕು. ಮನುಷ್ಯರಿಗೆ ಇದು ಹರಡುವುದಿಲ್ಲ. ಆದರೂ ಮುಂಜಾಗ್ರತವಾಗಿ ಹಕ್ಕಿಗಳನ್ನು ಸಾಯಿಸಬೇಕು ಎಂದು ತಿಳಿಸಿದ್ದರು.

    ಸೋಂಕು ಪತ್ತೆಯಾದ ಸ್ಥಳದ 10 ಕಿ.ಮೀ ವ್ಯಾಪ್ತಿಯಲ್ಲಿ ನಾಳೆಯಿಂದ ಕೋಳಿ ಹಾಗೂ ಯಾವುದೇ ಪಕ್ಷಿಗಳನ್ನ ಮಾರಾಟ ಮಾಡುವಂತಿಲ್ಲ. ಸೋಂಕು ಪತ್ತೆಯಾದ 1 ಕಿ.ಮೀ ವ್ಯಾಪ್ತಿಯಲ್ಲಿ ತಿನ್ನುವಂತ ಪಕ್ಷಿಗಳನ್ನು ಸೇವನೆ ಮಾಡಬಾರದು ಎಂದಿದ್ದರು.

    ಇತ್ತ ರಾಜ್ಯಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ 11 ಮಂದಿಗೆ ತಗುಲಿದ್ದು, ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧರನ್ನು ಬಲಿ ಪಡೆದಿದೆ. ಇತ್ತ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು, 39 ಮಂದಿಗೆ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಈವರೆಗೆ ವಿಶ್ವದಾದ್ಯಂತ ಬರೋಬ್ಬರಿ 7,171 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸುಮಾರು 1,82,605 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.

  • ಹಕ್ಕಿ ಜ್ವರ ಖಾತ್ರಿ-  ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ

    ಹಕ್ಕಿ ಜ್ವರ ಖಾತ್ರಿ- ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ

    ಮೈಸೂರು: ನಗರದಲ್ಲಿ ಹಕ್ಕಿ ಜ್ವರ ಖಾತ್ರಿಯಾಗಿದೆ. ಕುಂಬಾರಕೊಪ್ಪಲಿನಲ್ಲಿ ಸಾಕಿದ ಕೋಳಿ ಹಾಗೂ ಕೊಕ್ಕರೆ ಸ್ಯಾಂಪಲ್‍ನಲ್ಲಿ ಜ್ವರ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಕ್ಕಿ ಜ್ವರದ ಬಗ್ಗೆ ಇದೇ ತಿಂಗಳು 12 ರಂದು ಸ್ಯಾಂಪಲ್ ಕಳುಹಿಸಲಾಗಿತ್ತು. ಇದೀಗ ಇಂದು ಹಕ್ಕಿ ಜ್ವರ ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕು ಬಂದಿರುವ ಸ್ಥಳದಲ್ಲಿ ಸಾಕಿರುವ ಹಕ್ಕಿಗಳನ್ನು ಸಾಯಿಸಬೇಕು. ಮನುಷ್ಯರಿಗೆ ಇದು ಹರಡುವುದಿಲ್ಲ. ಆದರೂ ಮುಂಜಾಗ್ರತವಾಗಿ ಹಕ್ಕಿಗಳನ್ನು ಸಾಯಿಸಬೇಕು ಎಂದು ತಿಳಿಸಿದ್ದಾರೆ.

    ಸೋಂಕು ಪತ್ತೆಯಾದ ಸ್ಥಳದ 10 ಕಿ.ಮೀ ವ್ಯಾಪ್ತಿಯಲ್ಲಿ ನಾಳೆಯಿಂದ ಕೋಳಿ ಹಾಗೂ ಯಾವುದೇ ಪಕ್ಷಿಗಳನ್ನ ಮಾರಾಟ ಮಾಡುವಂತಿಲ್ಲ. ಸೋಂಕು ಪತ್ತೆಯಾದ 1 ಕಿ.ಮೀ ವ್ಯಾಪ್ತಿಯಲ್ಲಿ ತಿನ್ನುವಂತ ಪಕ್ಷಿಗಳನ್ನು ಸೇವನೆ ಮಾಡಬಾರದು ಎಂದಿದ್ದಾರೆ.

    ನಾಳೆಯಿಂದ ಕಲ್ಲಿಂಗ್ ಆಪರೇಷನ್ ಮಾಡಲಾಗುವುದು. ಹೀಗಾಗಿ ವ್ಯಾಪ್ತಿಯಲ್ಲಿರುವ ಎಲ್ಲಾ ಹಕ್ಕಿಗಳನ್ನು ಗುಂಡಿ ತೆಗೆದು ಮುಚ್ಚಲಾಗುವುದು. ಈಗಾಗಲೇ ಸರ್ವೆ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

  • ಕೊರೊನಾ ಭೀತಿಗೆ ನೆಲಕಚ್ಚಿದ ಕುಕ್ಕುಟೋದ್ಯಮ – 4 ಸಾವಿರ ಜೀವಂತ ಕೋಳಿಮರಿಗಳನ್ನು ಹೂತ ಮಾಲೀಕ

    ಕೊರೊನಾ ಭೀತಿಗೆ ನೆಲಕಚ್ಚಿದ ಕುಕ್ಕುಟೋದ್ಯಮ – 4 ಸಾವಿರ ಜೀವಂತ ಕೋಳಿಮರಿಗಳನ್ನು ಹೂತ ಮಾಲೀಕ

    ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ. ಅದರಂತೆ ರಾಜ್ಯದಲ್ಲಿಯೂ ಕೊರೊನಾ ವೈರಸ್‍ನ ಪರಿಣಾಮ ಸಾಕಷ್ಟಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಕುಕ್ಕುಟೋದ್ಯಮ ನಷ್ಟ ಅನುಭವಿಸುತ್ತಿದೆ. ಶಿವಮೊಗ್ಗದ ಸಂತೆಕಡೂರಿನಲ್ಲಿ ಶ್ರೀನಿವಾಸ್ ಕೋಳಿ ಫಾರಂನ ಮಾಲೀಕರಾದ ಶ್ರೀನಿವಾಸ್ ನಷ್ಟ ಅನುಭವಿಸಿದ್ದು, ಸುಮಾರು 4 ಸಾವಿರ ಜೀವಂತ ಕೋಳಿಮರಿಗಳನ್ನು ಗುಂಡಿ ತೆಗೆದು ಹೂತಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ಜಗತ್ತಿನ ಹಲವು ದೇಶಗಳ ಆರ್ಥಿಕ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿದೆ. ಈ ನಡುವೆ ರಾಜ್ಯದಲ್ಲಿಯೂ ಕೊರೊನಾ ವೈರಸ್ ಭೀತಿಯ ಎಫೆಕ್ಟ್ ಬಹಳ ಜೋರಾಗಿದ್ದು, ಈಗಾಗಲೇ ರಾಜ್ಯದಲ್ಲಿ 4 ಮಂದಿಗೆ ಈ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಹಕ್ಕಿ ಜ್ವರದ ಭೀತಿ ಕೂಡ ಶುರುವಾಗಿದ್ದು, ಶಿವಮೊಗ್ಗದ ಕುಕ್ಕುಟೋದ್ಯಮದ ಮೇಲೆ ಭಾರೀ ಗಂಭೀರ ಪರಿಣಾಮ ಬೀರಿದೆ.

    ಶಿವಮೊಗ್ಗದ ಸಂತೆಕಡೂರು ಗ್ರಾಮದ ಶ್ರೀನಿವಾಸ್ ಕೋಳಿ ಫಾರಂನಲ್ಲಿದ್ದ 22 ದಿನಗಳ ಸುಮಾರು 4 ಸಾವಿರ ಕೋಳಿ ಮರಿಗಳನ್ನು ಗುಂಡಿ ತೆಗೆದು ಜೀವಂತವಾಗಿ ಹೂಳಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕೋಳಿ ಮಾಂಸ ಮಾರಾಟಗಾರರು ಕೋಳಿ ಖರೀದಿಗೆ ಹಿಂದೇಟು ಹಾಕಿದ್ದು, ಸುಮಾರು 170 ರೂ. ಇದ್ದ ಕೋಳಿ ಮಾಂಸದ ಬೆಲೆ ಕೇವಲ 70 ರೂ. ಗೆ ಇಳಿದಿದೆ. ಇದರಿಂದಾಗಿ ಭಾರೀ ನಷ್ಟವುಂಟಾಗಿದೆ. ಹೀಗಾಗಿ ಕೋಳಿ ಸಾಕಾಣಿಕೆದಾರರು ಕೂಡ ನಷ್ಟದ ಹಾದಿಯಲ್ಲಿದ್ದು, ತಾವು ಫಾರಂನಲ್ಲಿ ಬೆಳೆಸಲಾಗುತ್ತಿರುವ ಕೋಳಿಗಳಿಗೆ ಬೆಲೆ ಇಲ್ಲದಂತಾಗಿ ನಷ್ಟ ಅನುಭವಿಸುವ ಬದಲು ಜೀವಂತವಾಗಿ ಹೂತರೆ ಇನ್ನಷ್ಟು ನಷ್ಟವುಂಟಾಗುವುದು ತಪ್ಪುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

    ಇಂದು ಜೆಸಿಬಿ ಮೂಲಕ 12 ಅಡಿ ಆಳದ ಗುಂಡಿ ತೆಗೆದು ಜೀವಂತವಾಗಿ ಕೋಳಿ ಮರಿಗಳನ್ನು ಹೂತು ಹಾಕಿದ್ದಾರೆ. ಶ್ರೀನಿವಾಸ್ ಅವರಿಗೆ ಒಂದು ಕೆಜಿ ಕೋಳಿಗೆ ಕೇವಲ 8 ರೂ. ಮಾತ್ರ ಸಿಗುತ್ತಿದ್ದು, ಕೋಳಿ ಸಾಕಲು 16 ರೂ. ವರೆಗೂ ಖರ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎರಡೂವರೆ ಲಕ್ಷ ಖರ್ಚಾಗಿದ್ದು, ಇದನ್ನು ಮತ್ತೆ ಸಾಕಲು ಮುಂದಾದರೆ ಮತ್ತೆ ಲಕ್ಷಾಂತರ ರೂ. ನಷ್ಟ ಉಂಟಾಗುತ್ತದೆ. ಹೀಗಾಗಿ ಈಗಲೇ ಹೂತು ಹಾಕಿದರೇ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದಂತಾಗುತ್ತದೆ ಎಂಬ ನಿರ್ಧಾರಕ್ಕೆ ಶ್ರೀನಿವಾಸ್ ಬಂದಿದ್ದಾರೆ.

    ಆದ್ದರಿಂದ ಶ್ರೀನಿವಾಸ್ ಅವರು 4 ಸಾವಿರ ಕೋಳಿಗಳನ್ನು ಸಮಾಧಿ ಮಾಡುವ ತೀರ್ಮಾನಕ್ಕೆ ಬಂದಿದ್ದು, ಜೀವಂತ ಕೋಳಿಗಳನ್ನು ತಮ್ಮ ಫಾರಂನ ಆವರಣದಲ್ಲಿಯೇ ಹೂತಿದ್ದಾರೆ. ಕೊರೊನಾ ವೈರಸ್ ಭೀತಿಗೆ ಜನರು ಕೋಳಿ ಮಾಂಸ ಸೇವಿಸದೇ ಇರುವುದೇ ಈ ನಷ್ಟಕ್ಕೆ ಕಾರಣವಾಗಿದೆ. ಕೋಳಿ ಕೃಷಿ ಮಾಡುವವರು ಇದೀಗ ಬೀದಿಗೆ ಬರುವಂತಾಗಿದ್ದು, ಮಾಂಸ ಮಾರಾಟಗಾರರು ಕೂಡ ಮಾಂಸ ಮಾರಾಟ ಮಾಡಲಾಗದೇ, ಕೋಳಿಗಳನ್ನ ಖರೀದಿಸದೇ ಸುಮ್ಮನಾಗಿದ್ದಾರೆ.

    ಕೊರೊನಾ ವೈರಸ್ ಕೋಳಿಯಿಂದ ಬಾರಲ್ಲ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತೆದೆ. ಹೀಗಾಗಿ ಕೋಳಿ ತಿನ್ನುವುದರಲ್ಲಿ ಸಮಸ್ಯೆ ಇಲ್ಲ. ಕೋಳಿ ಮಾಂಸ ಖರೀದಿಸಿ, ನಮ್ಮನ್ನು ಉಳಿಸಿ ಎಂಬುದು ಕೋಳಿ ಫಾರಂ ಮಾಲೀಕರ ಅಳಲಾಗಿದೆ. ಅಲ್ಲದೇ ರಾಜ್ಯ ಸರ್ಕಾರ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋಳಿ ಫಾರಂ ಮಾಲೀಕರು ಮನವಿ ಮಾಡಿದ್ದಾರೆ.

    ಕೊರೊನಾ ವೈರಸ್ ಮತ್ತು ಹಕ್ಕಿ ಜ್ವರದ ಭೀತಿ ಪರಿಣಾಮದಿಂದಾಗಿ ಕುಕ್ಕುಟೋದ್ಯಮಕ್ಕೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಇದೀಗ ಜಿಲ್ಲೆಯಲ್ಲಿ ಪ್ರಥಮ ಕೋಳಿ ಫಾರಂ ಮುಚ್ಚಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಂಭವವಿದೆ. ಏನೇ ಆಗಲಿ ಕೊರೊನಾ ವೈರಸ್‍ನ ಭೀತಿಯಿಂದಾಗಿ ಜನರು ನಲುಗಿಹೋಗಿದ್ದು, ಇದನ್ನ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ.

  • ಹಕ್ಕಿ ಜ್ವರದ ಆತಂಕ- ಸೋಂಕು ಹೆಚ್ಚಾದ್ರೆ ಮೃಗಾಲಯ ಬಂದ್

    ಹಕ್ಕಿ ಜ್ವರದ ಆತಂಕ- ಸೋಂಕು ಹೆಚ್ಚಾದ್ರೆ ಮೃಗಾಲಯ ಬಂದ್

    ಮೈಸೂರು: ಮೈಸೂರು ಮೃಗಾಲಯಕ್ಕೆ ಮತ್ತೆ ಹಕ್ಕಿ ಜ್ವರದ ಆತಂಕ ಶುರುವಾಗಿದೆ. 2017ರಲ್ಲಿ ಬಂದಿದ್ದ ಹಕ್ಕಿ ಜ್ವರದಿಂದ ಮೈಸೂರು ಮೃಗಾಲಯದಲ್ಲಿ ಸಾಲು ಸಾಲು ಪಕ್ಷಿಗಳು ಸತ್ತಿದ್ದ ಕಾರಣ ಮೃಗಾಲಯವನ್ನು ಒಂದು ತಿಂಗಳು ಮುಚ್ಚಲಾಗಿತ್ತು. ಈಗ ಮೈಸೂರಿನ ಕುಕ್ಕರಹಳ್ಳಿಕೆರೆಯಲ್ಲಿ ಎರಡು ಪೆಲಿಕಾನ್ ಸಾವಿನಿಂದ ಮತ್ತೆ ಹಕ್ಕಿ ಜ್ವರ ಅಪ್ಪಳಿಸುವ ಆತಂಕ ಸೃಷ್ಟಿಯಾಗಿದೆ.

    ಅಕ್ಟೋಬರ್ 25 ಹಾಗೂ ಅಕ್ಟೋಬರ್ 28ರಂದು ಎರಡು ಪೆಲಿಕಾನ್ ಪಕ್ಷಿಗಳು ಸಾವನ್ನಪ್ಪಿದ್ದವು. 2017ರಲ್ಲೂ ಮೊದಲು ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್‍ಗಳ ಸಾವು ಸಂಭವಿಸಿತ್ತು. ನಂತರ ಮೃಗಾಲಯದಲ್ಲಿನ ಪಕ್ಷಿಗಳಿಗೆ ಹಕ್ಕಿ ಜ್ವರ ಬಂದಿತ್ತು. ಪರಿಣಾಮವಾಗಿ ಒಂದು ತಿಂಗಳು ಮೃಗಾಲಯದ ಬಾಗಿಲು ಬಂದ್ ಮಾಡಲಾಗಿತ್ತು.

    ಇದೀಗ ಮತ್ತದೆ ಆತಂಕದಲ್ಲಿ ಮೈಸೂರು ಮೃಗಾಲಯವಿದೆ. ಈಗ ಹಕ್ಕಿಗಳ ವಲಸೆ ಸಮಯ. ದೇಶ ವಿದೇಶಗಳಿಂದ ಪಕ್ಷಿಗಳು ಕುಕ್ಕರಹಳ್ಳಿ ಕೆರೆ, ಕಾರಂಜಿ ಕೆರೆ ಹಾಗೂ ಮೃಗಾಲಯಕ್ಕೆ ವಲಸೆ ಬರುತ್ತವೆ. ಈ ವಲಸೆಯಿಂದ ಮತ್ತೆ ಹಕ್ಕಿ ಜ್ವರ ಸೊಂಕು ತಗುಲುವ ಭೀತಿ ಶುರುವಾಗಿದೆ. ಮುನ್ನಚ್ಚರಿಕಾ ಕ್ರಮವಾಗಿ ಮೃಗಾಲಯದಲ್ಲಿ ಪಕ್ಷಿ ಪ್ರಾಣಿಗಳ ಮೇಲೆ ನಿಗಾ ಇಡಲಾಗಿದೆ.

  • ಚಿಕನ್ ಪ್ರಿಯರೇ ಎಚ್ಚರ- ಸಿಲಿಕಾನ್ ಸಿಟಿಯಲ್ಲಿ ಕಾಣಿಸಿಕೊಂಡಿದೆ ಹಕ್ಕಿ ಜ್ವರ

    ಚಿಕನ್ ಪ್ರಿಯರೇ ಎಚ್ಚರ- ಸಿಲಿಕಾನ್ ಸಿಟಿಯಲ್ಲಿ ಕಾಣಿಸಿಕೊಂಡಿದೆ ಹಕ್ಕಿ ಜ್ವರ

    ಬೆಂಗಳೂರು: ಚಿಕನ್ ಪ್ರಿಯರೇ ಸ್ವಲ್ಪ ಎಚ್ಚರವಾಗಿರಿ. ಸಿಲಿಕಾನ್ ಸಿಟಿಯಲ್ಲಿ ಈಗ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಚಿಕನ್ ತಿನ್ನೋ ಮೊದಲು ಹುಷಾರಾಗಿರಿ.

    ಐಟಿ-ಬಿಟಿ ಮಂದಿ ಈಗಾಗಲೇ ಡೆಂಗ್ಯೂ, ಚಿಕೂನ್ ಗುನ್ಯ ಜ್ವರಗಳಿಂದ ಸಾವನ್ನಪ್ಪುತ್ತಿದ್ದಾರೆ. ಈ ಸಂದರ್ಭದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ದಾಸರಹಳ್ಳಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಕಳೆದ ವಾರ ತಮಿಳುನಾಡಿನ 15 ಕೋಳಿಯನ್ನ ನಗರದ ದಾಸರಹಳ್ಳಿಯ ಕೆಜಿಎನ್ ಕೋಳಿ ಅಂಗಡಿ ಮಾಲೀಕ ಖರಿದೀಸಿದ್ದರು. ಅದರಲ್ಲಿ ನಾಲ್ಕೈದು ಕೋಳಿಗಳು ಸಾವನ್ನಪಿದ್ದು, ಮೃತ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ.

    ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಿಬಿಎಂಪಿ ಎಚ್ಚೆತ್ತುಕೊಂಡು ಹೊರರಾಜ್ಯದ ಕೋಳಿಗಳನ್ನ ಖರೀದಿಸದಂತೆ ಚಿಕನ್ ಅಸೋಸಿಯೇಷನ್‍ಗೆ ತಿಳಿಸಿದೆ. ಅಷ್ಟೇ ಅಲ್ಲದೇ ಈ ಹಕ್ಕಿ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ತಿಳಿಸಿದ್ದಾರೆ.