Tag: Birth anniversary

  • ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ

    ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ

    ಸಾಹಸಸಿಂಹ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್‌ (Vishuvardhan) ಅವರ 75ನೇ ಜನ್ಮದಿನದ (ಸೆ.18) ಹಿನ್ನೆಲೆ ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಖಾಸಗಿ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಅಭಿಮಾನ್ ಸ್ಟುಡಿಯೋಗೆ ಪ್ರವೇಶ ನೀಡದ ಹಿನ್ನೆಲೆ ಪರ್ಯಾಯ ಜಾಗದಲ್ಲಿ ವಿಷ್ಣು ಜನ್ಮದಿನಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಬರ್ತ್‌ಡೇ ಸೆಲಬ್ರೇಷನ್‌ಗೆ ಸಿದ್ಧತೆ ನಡೆದಿದೆ. ಇದನ್ನೂ ಓದಿ: ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ

    ಮಂಟಪ ತಯಾರಿಸಿ ಪೂಜೆ ಮಾಡಿ ಅಮೃತ ಮಹೋತ್ಸವ ಆಚರಿಸಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ದಾದಾ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ, ರಕ್ತದಾನ ಸಮಾಜಮುಖಿ ಕಾರ್ಯಗಳು ನಡೆಯಲಿವೆ.

    ರಾಜ್ಯದ ವಿವಿಧ ಮೂಲೆಗಳಿಂದ ಅಭಿಮಾನಿಗಳು ಆಗಮಿಸಲಿದ್ದು, ಮೈಸೂರಿನ ಸ್ಮಾರಕದಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬದ ಆಚರಣೆ ನಡೆಯಲಿದೆ. ಕುಟುಂಬಸ್ಥರು ಮೈಸೂರಿಗೆ ತೆರಳಿ ಪೂಜೆ ಸಲ್ಲಿಸಿ ಅಮೃತ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಹೈಕೋರ್ಟ್ ಬ್ರೇಕ್

    ಪುಣ್ಯಭೂಮಿಯಲ್ಲಿ ವಿಷ್ಣು ಸಮಾಧಿ ತೆರವು ಹಿನ್ನೆಲೆ ಅಭಿಮಾನಿಗಳಲ್ಲಿ ಬೇಸರ ಮೂಡಿದೆ. 75ನೇ ವರ್ಷದ ಹುಟ್ಟುಹಬ್ಬ ಹಾಗೂ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆ ಅದ್ಧೂರಿ ಸಂಭ್ರಮಾಚರಣೆಯ ಸಿದ್ಧತೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

  • ಅಂಬೇಡ್ಕರ್‌ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

    ಅಂಬೇಡ್ಕರ್‌ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

    – ಬಾಬಾ ಸಾಹೇಬರ ಕಟ್ಟಾ ಅನುಯಾಯಿ ಪ್ರಧಾನಿ ಮೋದಿ ಅವರ ನಿರ್ಧಾರ ಇದು: ಕೇಂದ್ರ ಸಚಿವ ಪೋಸ್ಟ್

    ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ (Dr. B.R.Ambedkar) ಅವರು ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅಂಬೇಡ್ಕರರ ಜಯಂತಿ ದಿನದಂದು ಇನ್ಮುಂದೆ ರಾಷ್ಟ್ರೀಯ ರಜೆ ಇರಲಿದೆ.

    ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಘೋಷಣೆ ಮಾಡಿದ್ದಾರೆ. ‘ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಈಗ ಸಾರ್ವಜನಿಕ ರಜೆ ಇರುತ್ತದೆ. ಬಾಬಾ ಸಾಹೇಬರ ಕಟ್ಟಾ ಅನುಯಾಯಿ, ಗೌರವಾನ್ವಿತ ಪ್ರಧಾನಿ ಜಿ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ’ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

    ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಏಪ್ರಿಲ್ 14 ರ ಸೋಮವಾರದಂದು ಮುಚ್ಚಲಿವೆ. ಈ ನಿರ್ಧಾರದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.

    ಬಾಬಾಸಾಹೇಬ್ ಅಂಬೇಡ್ಕರ್ ಎಂದೇ ಜನಪ್ರಿಯರಾಗಿರುವ ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು 1891 ರ ಏಪ್ರಿಲ್ 14 ರಂದು ಮಧ್ಯಪ್ರದೇಶದ ಮಾವ್‌ನಲ್ಲಿ ಜನಿಸಿದರು. ಸಾಮಾಜಿಕ ತಾರತಮ್ಯದ ವಿರುದ್ಧದ ಹೋರಾಟದಲ್ಲಿ ಪ್ರವರ್ತಕ ನಾಯಕರಾಗಿ ಗುರುತಿಸಿಕೊಂಡ ಅಂಬೇಡ್ಕರ್‌, ತಮ್ಮ ಇಡೀ ಜೀವನವನ್ನು ತುಳಿತಕ್ಕೊಳಗಾದ ಸಮುದಾಯಗಳ, ವಿಶೇಷವಾಗಿ ದಲಿತರ ಹಕ್ಕುಗಳಿಗಾಗಿ ಮುಡಿಪಾಗಿಟ್ಟರು.

    ಅಂಬೇಡ್ಕರ್ ಅವರು ಭಾರತೀಯ ಸಂವಿಧಾನ ರಚನೆಗೆ ನೀಡಿದ ಮಹತ್ವದ ಕೊಡುಗೆಯೊಂದಿಗೆ ಆಧುನಿಕ ಭಾರತವನ್ನು ರೂಪಿಸಿದರು. ಅರ್ಥಶಾಸ್ತ್ರಜ್ಞರು, ವಿದ್ವಾಂಸರು ಮತ್ತು ದೇಶದ ಮೊದಲ ಕಾನೂನು ಮತ್ತು ನ್ಯಾಯ ಸಚಿವರಾಗಿದ್ದರು. ಅವರ ಕೊಡುಗೆಗಳು ಭಾರತದ ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯ ಮೇಲೆ ಹೆಚ್ಚಿನ ಪ್ರಭಾವ ಬೀರಿದವು. ಒಂಬತ್ತು ಭಾಷೆಗಳನ್ನು ಮಾತನಾಡುವ ಬಹುಭಾಷಾ ಪಂಡಿತರಾಗಿದ್ದ ಅಂಬೇಡ್ಕರ್ ಶಿಕ್ಷಣ ಮತ್ತು ಆಡಳಿತದ ಮೇಲೆ ಪ್ರಭಾವ ಬೀರಿದ್ದರು. ಇದನ್ನೂ ಓದಿ: ಕೇತಗಾನಹಳ್ಳಿ‌ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ; ಹೆಚ್‌ಡಿಕೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ

  • ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ

    ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ

    ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದ್ದಾರೆ.

    ದೆಹಲಿಯ ರಾಜ್‍ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸತತ 53 ದಿನಗಳವರೆಗೆ ಸಂಪೂರ್ಣ ಭರ್ತಿ – 90 ವರ್ಷಗಳ ಇತಿಹಾಸದಲ್ಲೇ ದಾಖಲೆ

    ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಅಟಲ್ ಜಿ ಅವರು ತಮ್ಮ ಅಚಲವಾದ ತತ್ವಗಳು ಮತ್ತು ಅದ್ಭುತ ಭಕ್ತಿಯಿಂದ ದೇಶದಲ್ಲಿ ಅಂತ್ಯೋದಯ ಮತ್ತು ಉತ್ತಮ ಆಡಳಿತದ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮೂಲಕ ಭಾರತೀಯ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದರು. ಇಂತಹ ಅದ್ವಿತೀಯ ದೇಶಭಕ್ತ ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನಮನಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

  • ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ- ನಳಿನ್ ಕುಮಾರ್ ಗೌರವ

    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ- ನಳಿನ್ ಕುಮಾರ್ ಗೌರವ

    ಮಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

    ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ದೇಶದ ಅಭ್ಯುದಯಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಅವರ ಚಿಂತನೆಗಳು ರಾಷ್ಟ್ರಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿವೆ ಎಂದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರ ಜಪ್ಪಿನಮೊಗರು, ರೂಪಾ.ಡಿ.ಬಂಗೇರ, ಮಂಡಲ ಎಸ್.ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಭಾನುಮತಿ, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು ಮತ್ತಿತರರು ಉಪಸ್ಥಿತರಿದ್ದರು.