ಚಿಕ್ಕಬಳ್ಳಾಪುರ: ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ (Birthday) ಆಚರಣೆ ಮಾಡಿದ ಆಟೋ ಚಾಲಕನನ್ನು (Auto Driver) ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ತನ್ನ ಹುಟ್ಟು ಹಬ್ಬದಂದು ಕಿಂಗ್ ಎಂದು ಕೇಕ್ ಮಾಡಿಸಿ ಮಾರಕಾಸ್ತç ಲಾಂಗ್‌ನಲ್ಲಿ ಕಟ್ ಮಾಡಿ ಬರ್ತ್‌ಡೇ ಆಚರಿಸಿಕೊಂಡಿದ್ದ. ಬಳಿಕ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಇದನ್ನೂ ಓದಿ: ಏಕದಿನಕ್ಕೆ ಆಸೀಸ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್ ದಿಢೀರ್ ನಿವೃತ್ತಿ
ದಿವಂಗತ ಪುನೀತ್ ರಾಜ್‌ಕುಮಾರ್ (Puneeth Rajkumar) ಮೇಲಿನ ಅಭಿಮಾನಕ್ಕಾಗಿ ಬೆಂಗಳೂರಿನ ಪಬ್‌ವೊಂದರಲ್ಲಿ ವಿದೇಶಿ ಮಹಿಳೆ ಹಾಡು ಹಾಡಿದ್ದಾರೆ. ಅಪ್ಪುಗಾಗಿ ‘ನೀನೇ ರಾಜಕುಮಾರ’ ಹಾಡನ್ನು ಹಾಡಿ ಸೈ ಎನಿಸಿಕೊಂಡಿದ್ದಾರೆ. ಪುನೀತ್ ಮೇಲಿನ ವಿದೇಶಿ ಮಹಿಳೆಯ ಪ್ರೀತಿ ಕಂಡು ಫ್ಯಾನ್ಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:‘ಜೊತೆಯಲಿ ಇರುವೆನು ಹೀಗೆ ಎಂದು’ ಪತ್ನಿಗಾಗಿ ಹಾಡು ಹಾಡಿದ ಯಶ್
‘ನೀನೇ ರಾಜಕುಮಾರ’ ಹಾಡನ್ನ ಸ್ಟೈಲೀಶ್ ಆಗಿ ವಿದೇಶಿ ಮಹಿಳೆ ಹಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ವಿದೇಶಿ ಮಹಿಳೆ ಹಾಡುವಾಗ ಪಬ್‌ನಲ್ಲಿ ಸೇರಿದ್ದ ಜನರು ಕೂಡ ಹಾಡು ಕೇಳಿ ಎಂಜಾಯ್ ಮಾಡಿದ್ದಾರೆ. ಇನ್ನೂ ಮಾರ್ಚ್ 17ಕ್ಕೆ ಪುನೀತ್ ರಾಜ್‌ಕುಮಾರ್ 50ನೇ ವರ್ಷದ ಹುಟ್ಟುಹಬ್ಬ ಈ ಹಿನ್ನೆಲೆ ಈ ತಿಂಗಳು ಪೂರ್ತಿ ಅಪ್ಪು ಹಾಡುಗಳನ್ನು ಹಾಡುವ ಮೂಲಕ ಗೌರವ ಸಲ್ಲಿಸಲಿದ್ದಾರೆ.
ಅಂದಹಾಗೆ, ಇದೇ ಮಾರ್ಚ್ 14ರಂದು ಪುನೀತ್ ರಾಜ್‌ಕುಮಾರ್ ನಟಿಸಿದ್ದ ಅಪ್ಪು ಸಿನಿಮಾ ಮರುಬಿಡುಗಡೆ ಆಗುತ್ತಿದೆ. ನಟನ 50ನೇ ಹುಟ್ಟುಹಬ್ಬದ ಹಿನ್ನೆಲೆ ‘ಅಪ್ಪು’ ಸಿನಿಮಾ ರೀ ರಿಲೀಸ್ ಆಗಲಿದೆ.
ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರು ಬೆಳಕು, ಶೀಘ್ರದಲ್ಲಿ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
ಇಂದು ದರ್ಶನ್ ಅವರು 48ನೇ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ.
ಪ್ರೀತಿಯ ಸೆಲೆಬ್ರಿಟಿಸ್ ಗಳೇ ????????
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ಪ್ರತದಲ್ಲಿ ಏನಿದೆ?
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.
ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ (Darshan) ಫೆ.16ರಂದು ಹುಟ್ಟುಹಬ್ಬ. ಈ ಹಿನ್ನೆಲೆ ಫ್ಯಾನ್ಸ್‌ಗೆ ದಾಸ ದರ್ಶನ್ ಪ್ರೀತಿಯ ಮನವಿವೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ (Birthday) ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳಲಾ, ಥ್ಯಾಂಕ್ಸ್ ಹೇಳೋದಾ ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಅಂತ ಆಸೆ ಇತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಅಂತ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ನಿಂತುಕೊಂಡು ಎಲ್ಲರಿಗೂ ವಿಶ್ ಮಾಡೋಕೆ ನನ್ನ ಕೈಯಲ್ಲಿ ಆಗಲ್ಲ. ಒಂದು ಇಂಜೆಕ್ಷನ್ ತೆಗೆದುಕೊಂಡಾಗ ಒಂದು 15ರಿಂದ 20 ದಿನ ಆರಾಮ ಆಗಿರುತ್ತೇನೆ. ಅದರ ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಶುರುವಾಗುತ್ತದೆ. ಆಪರೇಷನ್ ಅನ್ನೋದು ಕಟ್ಟಿಟ್ಟ ಬುಟ್ಟಿ. ಅದು ನನಗೂ ಗೊತ್ತು. ಅದನ್ನು ಮುಂದೆ ಮಾಡಿಸಲೇಬೇಕು ನಾನು. ಈಗ ಇರೋ ಕೆಲಸಗಳಲ್ಲಿ ಈಗಾಗಲೇ ಒಪ್ಪಿಕೊಂಡಿರೋದನ್ನು ಮಾಡಬೇಕಿದೆ. ನನ್ನ ನಿರ್ಮಾಪಕರಿಗೆ ಥ್ಯಾಂಕ್ಯೂ ಹೇಳ್ತೀನಿ. ಯಾಕೆಂದರೆ ಇಷ್ಟು ದಿನ ನನಗಾಗಿ ಕಾದಿದ್ದಾರೆ. ಅವರಿಗೆ ನಾನು ಅನ್ಯಾಯ ಮಾಡಬಾರದು ಅಂತ ಎಷ್ಟು ದಿನ ಸಾಧ್ಯವಾಗುತ್ತದೋ ಅಷ್ಟು ದಿನ ಆಪರೇಷನ್ ಮುಂದಕ್ಕೆ ಹಾಕಲು ನೋಡ್ತಾ ಇದ್ದೀನಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ಮನವಿ ಮಾಡಿದ್ದಾರೆ.
ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. 101% ಹೌದು ನಾನು ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ದುಡ್ಡು ವಾಪಸ್ ಕೊಟ್ಟಿದ್ದೇನೆ. ನನ್ನ ಹತ್ತಿರ ಸಿನಿಮಾಗೆ ಬರುವಾಗಲೇ ಸಿಕ್ಕಾಪಟ್ಟೆ ಕಮಿಟ್‌ಮೆಂಟ್ ಇತ್ತು. ಹಾಗಾಗಿ ವಾಪಸ್ ಕೊಟ್ಟೆ. ಮುಂದೆ ನಾವಿಬ್ಬರೂ ಸಿನಿಮಾ ಮಾಡೇ ಮಾಡ್ತೀವಿ.
ಅದಷ್ಟೇ ಅಲ್ಲ, ಮುಂದೆ ನಾನು ಪ್ರೇಮ್ ಒಟ್ಟಾಗಿ ಸಿನಿಮಾ ಮಾಡೇ ಮಾಡುತ್ತೇವೆ. ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆಯ ಆಸೆ ಅದು. ಕೆವಿಎನ್ ಪ್ರೊಡಕ್ಷನ್‌ನವರು ಅವರು ಬೇರೆ ಸಿನಿಮಾ ಮಾಡ್ತಿದ್ದಾರೆ. ಮತ್ತೊಂದು ಪ್ರೊಡಕ್ಷನ್ ಅಂದಾಗ ಅವರಿಗೂ ಕಷ್ಟ ಆಗುತ್ತೆ. ಅದಕ್ಕೆ ಯಾರು ಯಾವುದೇ ಪ್ರೊಡಕ್ಷನ್ ಇಲ್ಲದೇ ಸುಮ್ಮನೆ ಇರತಾರಲ್ಲ ಅವರಿಗೆ ಅವಕಾಶ ಕೊಡೋಣ ಅಂತ ಎಂದಿದ್ದಾರೆ.
ನಿಮ್ಮ ಪ್ರೀತಿ, ಅಭಿಮಾನ, ಪ್ರೋತ್ಸಾಹ ನನ್ನ ಮೇಲೆ ಇರೋದಕ್ಕೆ ಯಾವಾಗಲೂ ಚಿರಋಣಿಯಾಗಿರುತ್ತೇನೆ. ಇದನ್ನು ನಾನೆಂದೂ ತೀರಿಸೋಕೆ ಆಗಲ್ಲ ಎಂದಿದ್ದಾರೆ. ಈ ವೇಳೆ, ನಾನು 3 ಜನರಿಗೆ ಥ್ಯಾಂಕ್ಸ್ ಹೇಳಬೇಕು. ಧನ್ವೀರ್ ಯಾವಾಗಲೂ ಪಾಪ ನನ್ನ ಜೊತೆಯಲಿಯೇ ಇರುತ್ತಿದ್ದರು. ನನ್ನ ದೊಡ್ಡ ಬೆಂಬಲವಾಗಿ ನಿಂತರು. ‘ಬುಲ್ ಬುಲ್’ ರಚಿತಾ ರಾಮ್‌ಗೂ ಥ್ಯಾಂಕ್ಯೂ. ನನ್ನ ಪ್ರಾಣ ಸ್ನೇಹಿತೆ ಆಗಿರುವ ರಕ್ಷಿತಾಗೂ ಥ್ಯಾಂಕ್ಸ್. ನನ್ನ ಎಲ್ಲಾ ಸೆಲೆಬ್ರಿಟಿಗಳು ಧನ್ಯವಾದಗಳು.
ಇದೇ ವೇಳೆ, ಬೇರೆ ಭಾಷೆಯಲ್ಲಿ ಸಿನಿಮಾ ಮಾಡೋ ಬಗ್ಗೆ ದರ್ಶನ್ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಅಂತಾ ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ. ಕಾವೇರಿ ಹುಟ್ಟಿರೋದು ಎಲ್ಲಿ ಅಂತ ಎಲ್ಲರಿಗೂ ಚೆನ್ನಾಗಿ ಗೊತ್ತು. ನಾನು ಕೂಡ ಇಲ್ಲೇ ಹುಟ್ಟಿರೋದು. ಕಾವೇರಿ ಎಲ್ಲಾ ಕಡೆ ಹರಿದುಕೊಂಡು ಬರುತ್ತಾಳೆ. ಆದರೆ ನನ್ನದು ಮೇಕೇದಾಟು ಮಾತ್ರ ಸೀಮಿತ. ನನ್ನ ಸಿನಿಮಾಳು ಡಬ್ ಆಗಿ ಬೇರೆಕಡೆ ಹೋದರೆ ಅದು ಬೇರೆ ಥರ ಆಗುತ್ತದೆ. ಯಾವಾಗಲೂ ನಾನು ಕನ್ನಡ ಸಿನಿಮಾನೇ ಮಾಡೋದು ಎಂದಿದ್ದಾರೆ.
ಇನ್ಸ್‌ಸ್ಟಾಗ್ರಾಂನಲ್ಲಿ ಪವಿತ್ರಾಗೌಡ ಮಗಳು ಖುಷಿ ಗೌಡ ವೀಡಿಯೋ ಹಂಚಿಕೊಂಡಿದ್ದು, ಕಳೆದ ವರ್ಷ ನಿನಗೆ ಬಹಳ ಕಷ್ಟದಾಯಕವಾಗಿತ್ತು ಅನ್ನೋದು ನನಗೆ ಗೊತ್ತಿದೆ. ಆದರೆ 2025 ನಿಮ್ಮ ಜೀವನದ ಹೊಸ ಹೆಜ್ಜೆಯಾಗಿ, ನಿಮ್ಮನ್ನ ಸಂಪೂರ್ಣವಾಗಿ ಬದಲಾಯಿಸುತ್ತದೆ. ನಾನು ಪ್ರಾಮಿಸ್ ಮಾಡ್ತೀನಿ. ಒಂದಿನ ನೀವು ಹೆಮ್ಮೆ ಪಡುವಂತೆ ನಾನು ಮಾಡ್ತೀನಿ. ಇವಳು ನನ್ನ ಮಗಳು ಎಂದು ಹೆಮ್ಮೆಯಿಂದ ಹೇಳುವಂತೆ ಮಾಡ್ತೀನಿ. ನಿನ್ನನ್ನು ಹೆಮ್ಮೆ ಪಡಿಸುವುದೇ ನನ್ನ ಜೀವನದ ಏಕೈಕ ಕನಸು ಅಮ್ಮ ಎಂದು ವಿಶ್ ಮಾಡಿದ್ದಾರೆ.
ಕನ್ನಡದ ‘ಬುಲ್ ಬುಲ್’ ನಟಿ ರಚಿತಾ ರಾಮ್‌ಗೆ (Rachita Ram) ಇಂದು (ಅ.3) ಹುಟ್ಟುಹಬ್ಬ ಸಂಭ್ರಮವಾಗಿದ್ದು, ನಟಿಗೆ ‘ಕಲ್ಟ್’ (Cult Film) ಚಿತ್ರತಂಡ ನೀಡಿದೆ. ಹುಟ್ಟುಹಬ್ಬ ಆಚರಣೆಯ ಸುಂದರ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್
2 ದಿನಗಳ ಹಿಂದೆಯೇ ತಾವು ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಎಂದಿನಂತೆ ಭಾನುವಾರ ಸಿಗೋಣ ಎಂದು ನಟಿ ಮಾಹಿತಿ ಹಂಚಿಕೊಂಡಿದ್ದರು. ಆದರೆ ಇದೀಗ ಚಿತ್ರತಂಡ ಒತ್ತಾಯಕ್ಕೆ ಮಣಿದು ರಚಿತಾ, ತಂಡದ ಜೊತೆ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.
‘ಕಲ್ಟ್’ ಚಿತ್ರದ ನಾಯಕ ಝೈದ್ ಖಾನ್ ಜೊತೆ ನಿಂತು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಒಬ್ಬರಿಗೊಬ್ಬರು ಕೇಕ್ ತಿನ್ನಿಸಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಚಿತಾ, ಝೈದ್ ಖಾನ್ ಜೊತೆ ಕ್ಯಾಮೆರಾ ಮ್ಯಾನ್ ಜೆ.ಎಸ್ ವಾಲಿ, ಆಲ್ ಓಕೆ, ಡೈರೆಕ್ಟರ್ ಅನಿಲ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಇನ್ನೂ ಕಳೆದ 20 ದಿನಗಳಿಂದ ‘ಕಲ್ಟ್’ ಸಿನಿಮಾದ ಶೂಟಿಂಗ್ ಬಿರುಸಿನಿಂದ ಉಡುಪಿಯಲ್ಲಿ ನಡೆಯುತ್ತಿದೆ. ಶೂಟಿಂಗ್ ಬಿಡುವಿನ ಮಧ್ಯೆ ರಚಿತಾ ಹುಟ್ಟುಹಬ್ಬ ಆಚರಿಸಿದ್ದಾರೆ.
ಇನ್ನೂ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ಮಲೈಕಾ ವಸುಪಾಲ್ ನಾಯಕಿಯರಾಗಿ ನಟಿಸುತ್ತಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆಯಾಗಿದೆ. ಸದ್ಯದಲ್ಲೇ ಸಿನಿಮಾದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲಿದೆ.
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ (Likhit Shetty) ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕಿ ತೇಜಸ್ವಿನಿ ಶರ್ಮ (Tejaswini) ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಬರ್ತ್ ಡೇ ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ತ್ರಿಕೋನ ಪ್ರೆಮಕಥೆ ಹೊಂದಿರುವ ಸಿನೆಮಾದಲ್ಲಿ ನಾಯಕ ಲಿಖಿತ್ ಶೆಟ್ಟಿ ನಾಯಕಿಯರಾದ ತೇಜಸ್ವಿನಿ ಶರ್ಮ ಮತ್ತು ಖುಷಿ ರವಿಯೊಟ್ಟಿಗಿರುವ ವಿಭಿನ್ನ ಭಂಗಿಯ, ಭಾವದ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.
ತೇಜಸ್ವಿನಿ ಶರ್ಮ ಚಿತ್ರದಲ್ಲಿ ಮೇಕಪ್ ಆರ್ಟಿಸ್ಟ್ ಪಾತ್ರವನ್ನು ಮಾಡಿದ್ದು, ಅವರ ಪಾತ್ರವನ್ನು ತೆರೆಯ ಮೇಲೆ ನೋಡಲು ಸಾಕಷ್ಟು ಕಾತುರರಾಗಿದ್ದಾರೆ.. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದಿದ್ದು, ಸಧ್ಯಕ್ಕೆ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿ ಚಿತ್ರತಂಡವಿದೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. . ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.
ಬಹು ಬೇಡಿಕೆಯ ಚಿತ್ರ ಮ್ಯಾಕ್ಸ್ ಇದೀಗ ತನ್ನ ಮೊದಲ ಗೀತೆ ಮ್ಯಾಕ್ಸಿಮಮ್ ಮಾಸ್ (Max)ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ಹುಟ್ಟುಹಬ್ಬದ ಅಂಗವಾಗಿ ಈ ಮಾಸ್ ಗೀತೆಯನ್ನು (Song) ಇಂದು ಬಿಡುಗಡೆ ಮಾಡಿ, ಎಲ್ಲೆಡೆ ಸದ್ದು ಮಾಡುತ್ತಿದೆ.
ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಹಾಡಿಗೆ, ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ರಚಿಸಿದ್ದು, ಚೇತನ್ ಗಂಧರ್ವ ಮತ್ತು ಎಂ.ಸಿ. ಬಿಜ್ಜು ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ. ಒಟ್ಟಾರೆ ಅಭಿಮಾನಿಗಳಿಗೆ ಈ ಮಾಸ್ ಗೀತೆಯು ರಸದೌತಣವನ್ನು ಉಣಬಡಿಸಿದೆ ಎಂದರೆ ಉತ್ಪ್ರೇಕ್ಷೆಯಲ್ಲ.
“ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ, ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.
ಲಂಡನ್: ಹುಟ್ಟುಹಬ್ಬದ (Birthday) ಸಲುವಾಗಿ 102 ವರ್ಷ ವಯಸ್ಸಿನ ಇಂಗ್ಲೆಂಡ್‍ನ ಬೆನ್‍ಹಾಲ್ ಗ್ರೀನ್‍ನ ವೃದ್ಧೆಯೊಬ್ಬರು 7,000 ಅಡಿಗಳ ಎತ್ತರದಿಂದ ಸ್ಕೈಡೈವಿಂಗ್ (Skydiver) ಮಾಡಿ ವಿಶೇಷ ದಾಖಲೆ ಮಾಡಿದ್ದಾರೆ. ಈ ಮೂಲಕ ವಯಸ್ಸು ಕೇವಲ ಒಂದು ಸಂಖ್ಯೆ ಎಂಬ ಮಾತನ್ನು ಮತ್ತೆ ಸಾಬೀತು ಮಾಡಿದ್ದಾರೆ.
ವಿಮಾನದ ಮೇಲಿಂದ ಇಷ್ಟು ಎತ್ತರದಿಂದ ಹೊರಗೆ ನಿರ್ಭೀತಿಯಿಂದ ಜಿಗಿದಿರುವ ಶತಾಯುಷಿ ಮ್ಯಾನೆಟ್ ಬೈಲಿಯವರು (Manette Baillie) 6,900 ಅಡಿಗಳನ್ನು ಪೂರ್ಣಗೊಳಿಸಿದ ಬ್ರಿಟನ್‍ನ ಅತ್ಯಂತ ಹಳೆಯ ಸ್ಕೈಡೈವರ್ ಎಂವ ಹೆಗ್ಗಳಿಕೆಗೆ ಪಾತ್ರರಾದರು.
Britain’s 102-Year-Old Woman Becomes Country’s Oldest Skydiver with Birthday Jump
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೃದ್ಧೆಯ ಸ್ಕೈಡೈವಿಂಗ್ ವೀಡಿಯೋದಲ್ಲಿ, ವೃದ್ಧೆ, ತರಬೇತಿದಾರನೊಂದಿಗೆ ವಿಮಾನದಿಂದ ಜಿಗಿಯುವುದನ್ನು ನೋಡಬಹುದಾಗಿದೆ. ಸ್ವಲ್ಪ ಸಮಯದ ನಂತರ, ಅವರು ಸುರಕ್ಷಿತವಾಗಿ ಇಳಿದು ಜನರೊಂದಿಗೆ ಸಂಭ್ರಮಿಸಿದ್ದಾರೆ. ತಮ್ಮ ಅನುಭವ ಅದ್ಭುತವಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.
ಆಕಾಶದಲ್ಲಿ ತೇಲುವಾಗ ಉತ್ಸಾಹ ಮತ್ತು ಭಯ ಎರಡನ್ನೂ ಅಅನುಭವಿಸಿದೆ. ಈ ವೇಳೆ ನಾನು ನನ್ನ ಕಣ್ಣುಗಳನ್ನು ಗಟ್ಟಿಯಾಗಿ ಮುಚ್ಚಿದ್ದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಈ ಮುಲಕ ಬಹು ದಿನಗಳ ಕನಸನ್ನು ನಾನು ಈಡೇರಿಸಕೊಂಡಿದ್ದೇನೆ ಎಂದಿದ್ದಾರೆ.
ಜನರು ವಯಸ್ಸಾದ ಬಳಿಕ ಸಹ ತಮ್ಮ ಕನಸುಗಳನ್ನು ಮುಂದುವರಿಸಬಹುದು ಎಂದು ಬೈಲ್ಲಿ ಹೇಳಿದ್ದಾರೆ. ಈ ಮೂಲಕ ಯುವ ಜನತೆಗೆ ಸ್ಪೂರ್ತಿ ತುಂಬುವ ಕೆಲಸ ಮಾಡಿದ್ದಾರೆ.
ಡಾಲಿ ಪಿಕ್ಚರ್ಸ್ ಕನ್ನಡ ಚಿತ್ರಪ್ರೇಮಿಗಳಿಗೆ ಸದಾಭಿರುಚಿ ಸಿನಿಮಾಗಳನ್ನು ಉಣಬಡಿಸುತ್ತಿದೆ. ಕಳೆದ ವರ್ಷ ಟಗರು ಪಲ್ಯದಂತಹ ಫ್ಯಾಮಿಲಿ ಕಥೆಯನ್ನು ಪ್ರೇಕ್ಷಕರಿಗೆ ನೀಡಿದ್ದ ಈ ಸಂಸ್ಥೆ ಈಗ ವಿದ್ಯಾಪತಿ ಎಂಬ ಹೊಸ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿದ್ಯಾಪತಿಯ ಮೇಕಿಂಗ್, ಫೋಟೋಗಳು ಈಗಾಗಲೇ ನಿರೀಕ್ಷೆ ಹೆಚ್ಚಿಸಿವೆ. ಇದೀಗ ಚಿತ್ರತಂಡ ವಿದ್ಯಾಪತಿಯ ಕಿತಾಪತಿ ಝಲಕ್ ಬಿಟ್ಟು ಮತ್ತಷ್ಟು ಥ್ರಿಲ್ ಹೆಚ್ಚಿಸಿದೆ.
ವಿದ್ಯಾಪತಿಯಾಗಿ ಟಗರು ಪಲ್ಯ ನಾಯಕ ನಾಗಭೂಷಣ್ (Nagabhushan) ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ (Birthday) ವಿಶೇಷವಾಗಿ ಚಿತ್ರತಂಡ ವಿದ್ಯಾಪತಿ ಚಿತ್ರದ ಪ್ರೋಮೋ ಅನಾವರಣ ಮಾಡಿದೆ. ಜೇಬು ತುಂಬ ಕಾಸಿರೋನು ಕೊಟ್ಯಾಧಿಪತಿ..ನಿಮ್ಮನ್ನೆಲ್ಲ ಹೊಟ್ಟೆತುಂಬ ನಗಿಸುವವನೇ ನಮ್ಮ ‘ವಿದ್ಯಾಪತಿ’ ಅಂತಾ ಹೀರೋನನ್ನು ಪರಿಚಯಿಸಿದೆ. ಕರಾಟೆ ಕಿಂಗ್ ವೇಷ ತೊಟ್ಟಿರುವ ನಾಗಭೂಷಣ್ ಮಾಡುವ ಕಿತಾಪತಿ ತುಣುಕುವೊಂದನ್ನು ಬಿಡುಗಡೆ ಮಾಡಿದೆ. ಕರಾಟೆ ಕಲಿಯುವ ವೇಳೆ ವಿದ್ಯಾಪತಿ ಮಾಡುವ ಯಡವಟ್ಟು ಪ್ರೇಕ್ಷಕರಿಗೆ ಮುಖದ ಮೇಲೆ ಮಂದಹಾಸ ಮೂಡಿಸುತ್ತದೆ.
ಇಕ್ಕಟ್ ಸಿನಿಮಾ ಸೂತ್ರಧಾರರಾದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಧನಂಜಯ್ ಜೊತೆ ಕೈ ಜೋಡಿಸಿದ್ದಾರೆ.