Tag: birthday

  • ವಿದೇಶದಲ್ಲಿ ರಶ್ಮಿಕಾ ಹುಟ್ಟು ಹಬ್ಬ: ವಿಜಯ್ ದೇವರಕೊಂಡ ಭಾಗಿ

    ವಿದೇಶದಲ್ಲಿ ರಶ್ಮಿಕಾ ಹುಟ್ಟು ಹಬ್ಬ: ವಿಜಯ್ ದೇವರಕೊಂಡ ಭಾಗಿ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈ ಬಾರಿಯ ಹುಟ್ಟು ಹಬ್ಬವನ್ನು ವಿದೇಶದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ಒಂದು ದಿನ ಅಬುಧಾಬಿಯಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ, ಹುಟ್ಟು ಹಬ್ಬದ ಪಾರ್ಟಿ ಯುಎಸ್‍ಎಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ವಿಜಯ್ ದೇವರಕೊಂಡ (Vijay Devarakonda) ಎನ್ನುವ ಮಾತೂ ಕೇಳಿ ಬಂದಿದೆ.

    ಇಂದು ವಿಜಯ್ ದೇವರಕೊಂಡ ನಟನೆಯ  ಫ್ಯಾಮಿಲಿ ಸ್ಟಾರ್ ಸಿನಿಮಾ ರಿಲೀಸ್ ಆಗುತ್ತಿದೆ. ಯುಎಸ್.ಎನಲ್ಲಿ ಅದರ ಸ್ಪೆಷಲ್ ಶೋ ಆಯೋಜನೆ ಆಗಿದೆ. ಅದರಲ್ಲಿ ವಿಜಯ್ ದೇವರಕೊಂಡ ಕೂಡ ಭಾಗಿಯಾಗಿದ್ದಾರೆ. ಹಾಗಾಗಿ ಹುಟ್ಟು ಹಬ್ಬವನ್ನು ಯುಎಸ್.ಎನಲ್ಲಿ ಆಚರಿಸಲಾಗುತ್ತಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ರಶ್ಮಿಕಾ ಪೋಸ್ಟ್ ಮಾಡಿದ ಪೋಸ್ಟರ್ ನಲ್ಲಿ ನವಿಲು ಇದೆ. ವಿಜಯ್ ದೇವರಕೊಂಡ ಹಾಕಿರೋ ಪೋಸ್ಟ್ ನಲ್ಲೂ ಅದೇ ನವಿಲಿದೆ. ಹಾಗಾಗಿ ಇಬ್ಬರೂ ಒಟ್ಟಿಗೆ ಇದ್ದಾರೆ ಎಂದು ಊಹಿಸಲಾಗಿದೆ.

    ಇಂದು ರಶ್ಮಿಕಾ ಮಂದಣ್ಣ (Rashmika Mandanna) ಅವರ ಹುಟ್ಟು ಹಬ್ಬ. ಈ ಬಾರಿಯ ಹುಟ್ಟು ಹಬ್ಬಕ್ಕೆ ಹಲವಾರು ಸರ್ ಪ್ರೈಸ್ ಗಳಿವೆ. ಈ ಎಲ್ಲ ಸರ್ ಪ್ರೈಸ್ ಗಳ ಮಧ್ಯೆ ರಶ್ಮಿಕಾ ವಿದೇಶದಲ್ಲಿದ್ದಾರೆ. ಇದು ರಶ್ಮಿಕಾ ಅವರ 28ನೇ ವರ್ಷದ ಹುಟ್ಟು ಹಬ್ಬವಾಗಿದೆ. ತಮ್ಮ ಬರ್ತ್‌ಡೇ (Birthday) ದಿನವೇ ಅವರ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್ ಸಿಗಲಿದೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಪುಷ್ಪ ಬೆಡಗಿಯ ಹೊಸ ಸಿನಿಮಾದ ಅಪ್‌ಡೇಟ್ ಸಿಗಲಿದೆ.

    ಕನ್ನಡತಿ ರಶ್ಮಿಕಾ ಮಂದಣ್ಣ ತಮ್ಮ ಜನ್ಮದಿನದಂದು ತಾವು ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ದಿ ಗರ್ಲ್‌ಫ್ರೆಂಡ್’ (The Girlfriend) ಚಿತ್ರದ ಮೊದಲ ಟೀಸರ್ ರಿಲೀಸ್ ಆಗಲಿದೆ. ಈ ಚಿತ್ರದ ಕಥೆ ಏನು? ಇದು ಎಂತಹ ಸಿನಿಮಾ, ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾಡುತ್ತಿರುವ ಪಾತ್ರವಾದರೂ ಯಾವುದು ಎಂಬ ಕುತೂಹಲಕ್ಕೆ ಉತ್ತರ ಚಿತ್ರದ ಟೀಸರ್ ಮೂಲಕ ಸಿಗಲಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆಗೆ ಬರಲಿದೆ. ಎಲ್ಲಾ ಭಾಷೆಗಳಲ್ಲೂ ನಟಿ ರಶ್ಮಿಕಾನೇ ಧ್ವನಿ ನೀಡಿರೋದು ಮತ್ತೊಂದು ಹೈಲೆಟ್ ಆಗಿದೆ.

     

    ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಒಂದೇ ಅಲ್ಲ, ಇದರ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಕೂಡ ಆಗಲಿದೆ. ಈ ವರ್ಷ ಏನೆಲ್ಲಾ ಅಪ್‌ಡೇಟ್ ಸಿಗಲಿದೆ ಎಂಬುದನ್ನ ಕಾದುನೋಡಬೇಕಿದೆ. ಸದ್ಯ ಪುಷ್ಪ 2, ಅನಿಮಲ್ ಪಾರ್ಕ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್, ಚಾವಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ.

  • ಹುಟ್ಟುಹಬ್ಬ ಆಚರಿಸಿಕೊಳ್ಳಲು ಅಬುಧಾಬಿಗೆ ಹಾರಿದ ರಶ್ಮಿಕಾ

    ಹುಟ್ಟುಹಬ್ಬ ಆಚರಿಸಿಕೊಳ್ಳಲು ಅಬುಧಾಬಿಗೆ ಹಾರಿದ ರಶ್ಮಿಕಾ

    ನಾಳೆ ರಶ್ಮಿಕಾ ಮಂದಣ್ಣ (Rashmika Mandanna) ಹುಟ್ಟು ಹಬ್ಬ. ಈ ಬಾರಿಯ ಹುಟ್ಟು ಹಬ್ಬಕ್ಕೆ ಹಲವಾರು ಸರ್ ಪ್ರೈಸ್ ಗಳಿವೆ. ಈ ಎಲ್ಲ ಸರ್ ಪ್ರೈಸ್ ಗಳ ಮಧ್ಯೆ ರಶ್ಮಿಕಾ ಅಬು ಧಾಬಿಗೆ (Abu Dhabi) ಹಾರಿದ್ದಾರೆ. ಈ ಬಾರಿ ಅವರು ಅಲ್ಲಿಯೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದಾರಂತೆ. ಇದು ರಶ್ಮಿಕಾ ಅವರ 28ನೇ ವರ್ಷದ ಹುಟ್ಟು ಹಬ್ಬವಾಗಿದೆ.

    ತಮ್ಮ ಬರ್ತ್‌ಡೇ (Birthday) ದಿನವೇ ಅವರ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್ ಸಿಗಲಿದೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಪುಷ್ಪ ಬೆಡಗಿಯ ಹೊಸ ಸಿನಿಮಾದ ಅಪ್‌ಡೇಟ್ ಸಿಗಲಿದೆ.

    ಕನ್ನಡತಿ ರಶ್ಮಿಕಾ ಮಂದಣ್ಣ ತಮ್ಮ ಜನ್ಮದಿನದಂದು ತಾವು ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ದಿ ಗರ್ಲ್‌ಫ್ರೆಂಡ್’ (The Girlfriend) ಚಿತ್ರದ ಮೊದಲ ಟೀಸರ್ ರಿಲೀಸ್ ಆಗಲಿದೆ. ಈ ಚಿತ್ರದ ಕಥೆ ಏನು? ಇದು ಎಂತಹ ಸಿನಿಮಾ, ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾಡುತ್ತಿರುವ ಪಾತ್ರವಾದರೂ ಯಾವುದು ಎಂಬ ಕುತೂಹಲಕ್ಕೆ ಉತ್ತರ ಚಿತ್ರದ ಟೀಸರ್ ಮೂಲಕ ಸಿಗಲಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆಗೆ ಬರಲಿದೆ. ಎಲ್ಲಾ ಭಾಷೆಗಳಲ್ಲೂ ನಟಿ ರಶ್ಮಿಕಾನೇ ಧ್ವನಿ ನೀಡಿರೋದು ಮತ್ತೊಂದು ಹೈಲೆಟ್ ಆಗಿದೆ.

     

    ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಒಂದೇ ಅಲ್ಲ, ಇದರ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಕೂಡ ಆಗಲಿದೆ. ಈ ವರ್ಷ ಏನೆಲ್ಲಾ ಅಪ್‌ಡೇಟ್ ಸಿಗಲಿದೆ ಎಂಬುದನ್ನ ಕಾದುನೋಡಬೇಕಿದೆ. ಸದ್ಯ ಪುಷ್ಪ 2, ಅನಿಮಲ್ ಪಾರ್ಕ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್, ಚಾವಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ.

  • ಅಜಯ್ ದೇವಗನ್ ಹುಟ್ಟುಹಬ್ಬಕ್ಕೆ ‘ಮೈದಾನ್’ ಗಿಫ್ಟ್

    ಅಜಯ್ ದೇವಗನ್ ಹುಟ್ಟುಹಬ್ಬಕ್ಕೆ ‘ಮೈದಾನ್’ ಗಿಫ್ಟ್

    ಜಯ್ ದೇವಗನ್ (Ajay Devgan) ನಟನೆಯ  ಮೈದಾನ್ ಸಿನಿಮಾದ ಟ್ರೈಲರ್ ಅನ್ನು ಅವರ ಹುಟ್ಟು ಹಬ್ಬದ (Birthday) ದಿನದಂದ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಗೆ ದಿ ಫೈನಲ್ ಟ್ರೈಲರ್ ಎಂದು ಕರೆದಿದ್ದಾರೆ. ಮೈದಾನ ಸಿನಿಮಾದ ಟ್ರೈಲರ್ ಅನ್ನು ಅವರ ಅಭಿಮಾನಿಗಳು ಮೆಚ್ಚಿಕೊಂಡು ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

    ಈ ನಡುವೆ ಮೈದಾನ್ ಸಿನಿಮಾ ಮತ್ತೊಂದು ಭಾರೀ ಬಜೆಟ್ ಚಿತ್ರದೊಂದಿಗೆ ಪೈಪೋಟಿ ನೀಡಬೇಕಾಗಿದೆ. ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ಬಡೆ ಮಿಯಾ ಚೋಟೆ ಮಿಯಾ ಹಾಗೂ ಅಜಯ್ ದೇವಗನ್ ಅವರ ಮೈದಾನ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಹೀಗೆ ಈ ಕಲಾವಿದರ ಚಿತ್ರಗಳು ಒಂದೇ ದಿನಾಂಕದಂದು ರಿಲೀಸ್ ಆಗುತ್ತಿರುವುದು 9ನೇ ಬಾರಿ ಎನ್ನುವುದು ವಿಶೇಷ.

    ಮೊನ್ನೆಯಷ್ಟೇ ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ (Tiger Shroff) ನಟನೆಯ ಬಡೆ ಮಿಯಾ ಚೋಟೆ ಮಿಯಾ (bade miyan chote miyan)  ಸಿನಿಮಾದ ಟ್ರೈಲರ್ (Trailer) ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೈಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ.

     

    ಬಡೆ ಮಿಯಾ ಚೋಟೆ ಮಿಯಾ ಟ್ರೈಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

  • ದಿ. ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬಕ್ಕೆ ರಾಹುಲ್‌ ಗಾಂಧಿ ವಿಶ್‌

    ದಿ. ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬಕ್ಕೆ ರಾಹುಲ್‌ ಗಾಂಧಿ ವಿಶ್‌

    ನವದೆಹಲಿ: ಇಂದು ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ದಿವಂಗತ ಪುನೀತ್‌ ರಾಜ್‌ ಕುಮಾರ್‌ (Dr. Puneeth Rajkumar) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಶುಭಕೋರಿದ್ದಾರೆ.

    ಈ ಸಂಬಂಧ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಅಪ್ಪು ಫೋಟೋದ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಒಬ್ಬ ಅದ್ಭುತ ಕಲಾವಿದ, ಸಿನಿಮಾದಲ್ಲಿನ ಅವರ ಕೆಲಸ ಮತ್ತು ಜನರ ಕಲ್ಯಾಣಕ್ಕಾಗಿ ಅವರು ನೀಡಿರುವ ಕೊಡುಗೆ ಇಂದಿಗೂ ಅನೇಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.

    ರಾಹುಲ್‌ ಗಾಂಧಿಯವರು (Rahul Gandhi) ಪುನೀತ್‌ ರಾಜ್‌ ಕುಮಾರ್‌ ಅವರು ನಿಧನರಾದ ಸಂದರ್ಭದಲ್ಲಿಯೂ ಟ್ವೀಟ್‌ ಮಾಡಿದ್ದರು. ಕನ್ನಡ ನಟ ಪುನೀತ್ ರಾಜ್​ಕುಮಾರ್ ಅವರ ಕುಟುಂಬ, ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದರು. ಅಲ್ಲದೇ ಕೆಲ ದಿನಗಳ ಬಳಿಕ ಪುನೀತ್‌ ಕುಟುಂಬ ಭೇಟಿಯಾಗಿ ಸಾಂತ್ವನ ಹೇಳಿದರು. ಇದೀಗ ನಟನ ಜನ್ಮದಿನವಾದ ಇಂದು ಕೂಡ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ನೆನಪಿನಲ್ಲಿ ಅಶ್ವಿನಿ- ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದ ಪತ್ನಿ

    ಪುನೀತ್ ರಾಜ್​ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಪುಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ಸೆಲೆಬ್ರಿಟಿಗಳವರೆಗೂ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಸಾಮಾಜಿಕ ಜಾತಲತಾಣಗಳಲ್ಲಿ ಅಪ್ಪು ಫೋಟೋ ಹಾಕಿ ವಿಶೇಷವಾಗಿ ಸಂಭ್ರಮಿಸುತ್ತಿದ್ದಾರೆ. ಇನ್ನೂ ಕೆಲವರು ಅಪ್ಪು ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ.

  • ಮಾರ್ಚ್ 17ರಂದು ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಆಚರಣೆ ಹೇಗಿರಲಿದೆ?

    ಮಾರ್ಚ್ 17ರಂದು ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಆಚರಣೆ ಹೇಗಿರಲಿದೆ?

    ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹುಟ್ಟುಹಬ್ಬಕ್ಕೆ (ಮಾ.17) ಕೌಂಟ್‌ಡೌನ್ ಶುರುವಾಗಿದೆ. ಅಪ್ಪು ನೆನಪಿಗಾಗಿ ಅಭಿಮಾನಿಗಳು ಅವರ ಹುಟ್ಟುಹಬ್ಬದಂದು ಅನ್ನಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇದನ್ನೂ ಓದಿ:ದುಬಾರಿ ನೆಕ್ಲೇಸ್ ಧರಿಸಿ ಮಿಂಚಿದ ಪ್ರಿಯಾಂಕಾ ಚೋಪ್ರಾ

    ನಾಳೆ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ. ಹೀಗಾಗಿ ಅಭಿಮಾನಿಗಳು ರಾತ್ರಿಯಿಂದಲೇ ಅಪ್ಪು ಹುಟ್ಟುಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಅಪ್ಪು ಇಲ್ಲದೇ 3ನೇ ವರ್ಷದ ಹುಟ್ಟುಹಬ್ಬ (Birthday) ಇದಾಗಿದೆ. ಅಗಲಿದ ಅರಸನಿಗೆ ಅಭಿಮಾನಿಗಳು ನಿತ್ಯವೂ ಕಣ್ಣೀರಾಭಿಷೇಕ ಮಾಡುತ್ತಿದ್ದಾರೆ. ಅಪ್ಪು ಪುಣ್ಯಭೂಮಿಯಲ್ಲಿ ಅಭಿಮಾನಿಗಳು ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸುತ್ತಾರೆ. ಇದನ್ನೂ ಓದಿ:ಪೊಲೀಸ್ ಅವತಾರದಲ್ಲಿ ತನಿಷಾ ಕುಪ್ಪಂಡ

    ಇಡೀ ದಿನ ಅನ್ನಸಂತರ್ಪಣೆ-ರಕ್ತದಾನ ಶಿಬಿರ-ಆರೋಗ್ಯ ತಪಾಸಣೆಯಂಥಹ ಅನೇಕ ಕಾರ್ಯಗಳು ನಡೆಯುತ್ತೆ. ಅಪ್ಪು ಕುಟುಂಬಸ್ಥರು ಬೆಳಗ್ಗೆ 9 ಗಂಟೆಗೆ ಸಮಾಧಿಗೆ ಆಗಮಿಸಿ ಎಡೆಇಟ್ಟು ಪೂಜೆ ಮಾಡಲಿದ್ದಾರೆ.

    ಇನ್ನೂ ಪುನೀತ್ ರಾಜ್‌ಕುಮಾರ್, ಭಾವನಾ ಮೆನನ್ (Bhavana Menon) ನಟನೆಯ `ಜಾಕಿ’ ಸಿನಿಮಾ ರಿಲೀಸ್ ಆಗಿ 100 ಶೋ ಹೌಸ್‌ಫುಲ್ ಆಗಿದೆ. 1 ಕೋಟಿ ರೂ. ಗಳಿಕೆ ಮಾಡಿದೆ. ಈ ಸಿನಿಮಾ ಮೂಲಕ ಮತ್ತೆ ಅಪ್ಪುರನ್ನು ಅಭಿಮಾನಿಗಳು ಸ್ಮರಿಸುತ್ತಿದ್ದಾರೆ.

  • ನಿರ್ದೇಶಕರ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಮೇಕಿಂಗ್ ವಿಡಿಯೋ

    ಸಂಕಷ್ಟಕರ ಗಣಪತಿ,  ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ (Full Meals) ಚಿತ್ರದ ನಿರ್ದೇಶಕ ಎನ್ ವಿನಾಯಕ (N. Vinayak) ಹುಟ್ಟು ಹಬ್ಬದ (Birthday) ಅಂಗವಾಗಿ ಚಿತ್ರತಂಡ ಮೇಕಿಂಗ್ ವೀಡಿಯೋ  ಒಂದನ್ನು ಬಿಡುಗಡೆ ಮಾಡಿ ನಿರ್ದೇಶಕರಿಗೆ ಶುಭಾಶಯ ಕೋರಿದೆ.

    ಸಿನೆಮಾಗೆ ಕೊನೆಯ ಹಂತದ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು, ಆದಷ್ಟು ಶೀಘ್ರದಲ್ಲಿ ಸಿನೆಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ.  ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಎನ್.ವಿನಾಯಕ, ಈ ಹಿಂದೆ ಹಲವು ಕಿರುಚಿತ್ರ ಮತ್ತು ಮ್ಯೂಸಿಕ್ ವೀಡಿಯೋ ಗಳ ಮೂಲಕ ಸಾಕಷ್ಟು ಗುರುತಿಸಿಕೊಂಡಿದ್ದರು. ಹಾಗೆಯೇ ಕಿರುಚಿತ್ರ ಮತ್ತು ಮ್ಯೂಸಿಕ್ ವೀಡಿಯೋಗಳಿಗಾಗಿ ಹಲವು ಪ್ರಶಸ್ತಿಗಳನ್ನೂ ಪಡೆದಿದ್ದರು.

    ವಿನಾಯಕ್ ಪ್ರತಿಭೆಯ ಮೇಲೆ ನಂಬಿಕೆ ಇಟ್ಟು ನಿರ್ದೇಶನದ ಜವಾಬ್ದಾರಿ ಕೊಟ್ಟಿದ್ದ ನಾಯಕ, ನಿರ್ಮಾಪಕ ‘ಲಿಖಿತ್ ಶೆಟ್ಟಿ’ ವಿನಾಯಕ್ ಅವರ ಕಾರ್ಯ ವೈಖರಿಯಿಂದ ಖುಷಿಯಾಗಿದ್ದಾರೆ. ಕನ್ನಡ ಮತ್ತೊಬ್ಬ ಭರವಸೆಯ ನಿರ್ದೇಶಕ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.  ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.  ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ.

  • ವರ್ತೂರು ಸಂತೋಷ್ ಹುಟ್ಟುಹಬ್ಬ: ನಾಲ್ಕು ಸಾವಿರ ಮಂದಿಗೆ ಊಟದ ವ್ಯವಸ್ಥೆ

    ನಿನ್ನೆ ರಾತ್ರಿಯಿಂದಲೇ ಬಿಗ್ ಬಾಸ್ (Bigg Boss) ಸ್ಪರ್ಧಿ ವರ್ತೂರು ಸಂತೋಷ್ (Varthur Santhosh) ಅವರ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸಂತೋಷ್ ಮನೆಮುಂದೆ ಮಧ್ಯೆ ರಾತ್ರಿಯಿಂದಲೇ ಅಭಿಮಾನಿಗಳು ಜಮಾಯಿಸಿದ್ದರು. ನೆಚ್ಚಿನ ಸ್ಪರ್ಧಿಯ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.

    ಸಂತೋಷ್ ಹುಟ್ಟು ಹಬ್ಬಕ್ಕೆಂದು ರಾಜ್ಯದ ನಾನಾ ಭಾಗಗಳಿಂದ ಅಭಿಮಾನಿಗಳು ಬಂದಿದ್ದು, ಅವರಿಗಾಗಿ ಊಟದ ವ್ಯವಸ್ಥೆಯನ್ನು ಸಂತೋಷ್ ಮಾಡಿದ್ದರು. ನಾಲ್ಕು ಬಗೆಯ ಆಹಾರವನ್ನು ನಾಲ್ಕು ಸಾವಿರ ಜನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಹಾರ, ತುರಾಯಿ ಹಿಡಿದುಕೊಂಡು ಬಂದಿದ್ದ ಅಭಿಮಾನಿಗಳು ಭರ್ಜರಿ ಊಟ ಸವಿದರು.

     

    ಬಿಗ್ ಬಾಸ್ ಸ್ಪರ್ಧಿಗಳು ಕೂಡ ವರ್ತೂರು ಸಂತೋಷ್ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಅನೇಕರು ಕರೆ ಮಾಡಿ ವಿಶ್ ಮಾಡಿದ್ದರೆ, ಇನ್ನೂ ಕೆಲವರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಕೆಲವರು ಇಂದು ನೇರವಾಗಿ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

  • ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ಹುಟ್ಟುಹಬ್ಬಕ್ಕೆ ‘ಜಾಕಿ’ ಸಿನಿಮಾ ಮರುಬಿಡುಗಡೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟು ಹಬ್ಬಕ್ಕೆ (Birthday) ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ. ಅಂದು ಅವರ ನಟನೆಯ ಜಾಕಿ (Jackie) ಸಿನಿಮಾವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದುನಿಯಾ ಸೂರಿ (Duniya Vijay)  ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ.

    ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.

    ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

    ಬರೀ ಸಿನಿಮಾ ಮಾತ್ರವಲ್ಲ ಎಂದಿನಂತೆ ಅವರ ಅಭಿಮಾನಿಗಳು ಅನ್ನ ಸಂತರ್ಪಣೆ, ಕಣ್ಣುದಾನ, ರಕ್ತದಾನದಂತಹ ಶಿಬಿರಗಳನ್ನು ಅಪ್ಪು ಸಮಾಧಿ ಬಳಿ ಮಾಡಲು ರೆಡಿ ಆಗುತ್ತಿದ್ದಾರೆ. ಅಂದು ಯುವ ಸಿನಿಮಾದ ಇವೆಂಟ್ ಕೂಡ ಇರಲಿದೆ.

  • ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಅಭಿಷೇಕ್ ಶೆಟ್ಟಿ

    ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಅಭಿಷೇಕ್ ಶೆಟ್ಟಿ

    ಬ್ಬ ನಟ ಅಭಿನಯದ ಮೇಲೆ‌ ಮಾತ್ರ ಗಮನಹರಿಸಬೇಕು. ಆದರೆ ನಿರ್ದೇಶಕನಾದವನು ಎಲ್ಲಾ ಜವಾಬ್ದಾರಿಯನ್ನು ತಮ್ಮ ಹೆಗಲಿಗೇರಿಸಿಕೊಂಡು ಸಾಗಬೇಕು. ಹಾಗ್ ನೋಡಿದರೆ ಏಕಕಾಲಕ್ಕೆ  ನಟನೆ ಹಾಗೂ ನಿರ್ದೇಶನ ಮಾಡುವುದು ಸುಲಭದ ಮಾತಲ್ಲ. ಅಂಥಹ ಪ್ರಯತ್ನದಲ್ಲಿ ಗೆದ್ದವರು ಕೆಲವೊಂದಿಷ್ಟು ಮಂದಿ. ಆ ಸಾಲಿನಲ್ಲಿ ಯುವ ನಿರ್ದೇಶಕ ಹಾಗೂ ಅಭಿಷೇಕ್ ಶೆಟ್ಟಿ (Abhishek Shetty)  ಸ್ಥಾನ ಪಡೆದಿದ್ದಾರೆ.

    ಅಭಿಷೇಕ್ ಶೆಟ್ಟಿ‌ ನಟನೆ ಜೊತೆಗೆ   ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದಾರೆ. ನಮ್ ಗಣಿ ಬಿ.ಕಾಂ‌ ಪಾಸ್ ಚಿತ್ರದ ಮೂಲಕ ನಟನಾಗಿ ಹಾಗೂ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟವರು. ಮೊದಲ ಚಿತ್ರದಲ್ಲಿಯೇ ಗಮನಸೆಳೆದ ಅವರು ಆ ನಂತರ ಗಜಾನನ ಅಂಡ್ ಗ್ಯಾಂಗ್ ಚಿತ್ರ ನಿರ್ದೇಶಿಸಿ ಸೈ ಎನಿಸಿಕೊಂಡರು. ಅನೀಶ್ ಗೆ  ಆರಾಮ್ ಅರವಿಂದ್ ಸ್ವಾಮಿ ಅಂತೇಳಿ ಕುಣಿಸಿರುವ ಅಭಿಷೇಕ್ ಶೆಟ್ಟಿ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

    ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರು ಅಭಿಷೇಕ್ ಶೆಟ್ಟಿ, ಈಗ ಹೊಸ ಚಿತ್ರ ಘೋಷಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ವಿಶೇಷ ಎಂದರೆ ಅಭಿಷೇಕ್ ಶೆಟ್ಟಿ ನಮ್ ಗಣಿ ಬಿ.ಕಾಂ ಪಾಸ್ ಸೀಕ್ವೆಲ್ ಗೆ ಮುನ್ನುಡಿ ಬರೆದಿದ್ದು, ಫಸ್ಟ್ ಲುಕ್ (First Look) ಕೂಡ ರಿವೀಲ್ ಮಾಡಿದ್ದಾರೆ. ಸೂಟ್ ಬೂಟ್ ತೊಟ್ಟು, ಕೈಯಲ್ಲಿ ಕಾಫಿ ಕಪ್ ಬನ್ ಹಿಡಿದು ದುಬಾರಿ ಕಾರಿನ ಮುಂದೆ ಸ್ಟೈಲೀಶ್ ಆಗಿ ಅಭಿ ಪೋಸ್ ಕೊಟ್ಟಿದ್ದಾರೆ.

    ನಮ್ ಗಣಿ ಬಿ.ಕಾಂ ಪಾಸ್ 2 ಚಿತ್ರದ ಮೂಲಕ ಅಭಿಷೇಕ್ ಶೆಟ್ಟಿ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟು ಹೀರೋ ಆಗಿ ದಿಬ್ಬಣ ಹೊರಡಲಿದ್ದಾರೆ. ಅವರ ಹೊಸ‌ ಕನಸಿಗೆ ಬಿ ಎಸ್ ಪ್ರಶಾಂತ್ ಶೆಟ್ಟಿ ಶಕ್ತಿಯಾಗಿ ನಿಂತಿದ್ದಾರೆ.  ಅದ್ವಿ  ಕ್ರಿಯೇಷನ್ ನಡಿ ಪ್ರಶಾಂತ್ ಸೀಕ್ವೆಲ್ ಗೆ ಹಣ ಹಾಕುತ್ತಿದ್ದು, ಸುಮಂತ್ ಆಚಾರ್ಯ ಕ್ಯಾಮೆರಾ ಹಿಡಿಯಲಿದ್ದು, ಉಮೇಶ್ ಆರ್ ಬಿ ಕತ್ತರಿ ಕೆಲಸ, ಆನಂದ್ ರಾಜವಿಕ್ರಂ ಟ್ಯೂನ್ ಹಾಕಲಿದ್ದಾರೆ. ನಮ್ ಗಣಿ ಬಿ.ಕಾಂ ಪಾಸ್-2 ಸಿನಿಮಾದ ಕಥೆ ಬರವಣಿಗೆ ಹಂತದಲ್ಲಿದ್ದು, ಶೀಘ್ರದಲ್ಲೇ ಮತ್ತೊಂದು ಅಪ್ ಡೇಟ್ ನೊಂದಿಗೆ ಅಭಿಷೇಕ್ ಶೆಟ್ಟಿ ನಿಮ್ಮ ಮುಂದೆ ಹಾಜರಾಗಲಿದ್ದಾರೆ.

  • ಗಿಡನೆಟ್ಟು ಮಗಳ ಹುಟ್ಟು ಹಬ್ಬ ಆಚರಿಸಿದ ಪ್ರೇಮಲೋಕದ ನಟಿ

    ಗಿಡನೆಟ್ಟು ಮಗಳ ಹುಟ್ಟು ಹಬ್ಬ ಆಚರಿಸಿದ ಪ್ರೇಮಲೋಕದ ನಟಿ

    ವಿಚಂದ್ರನ್ ನಿರ್ದೇಶಿಸಿ, ನಟಿಸಿರುವ ಪ್ರೇಮಲೋಕ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ, ಬಾಲಿವುಡ್ ನಟಿ ಜೂಹಿ ಚಾವ್ಲಾ ನಾಡು ಮೆಚ್ಚುವಂಥ ಕೆಲಸ ಮಾಡಿದ್ದಾರೆ. ಪುತ್ರಿ ಜಾಹ್ನವಿಯ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿರುವ ಜೂಹಿ, ಸಾವಿರ ಗಿಡಗಳನ್ನು ನೆಡುವ ಮೂಲಕ ಮಗಳ ಹುಟ್ಟುಹಬ್ಬ ಆಚರಿಸಿದ್ದಾರೆ.

    ಜಾಹ್ನವಿಗೆ 23 ವರ್ಷದ ಹುಟ್ಟು ಹಬ್ಬ ಸಂಭ್ರಮ. ಇದಕ್ಕೆ ಉಡುಗೊರೆಯಾಗಿ ಸಾವಿರ ಸಸಿಗಳನ್ನು ಜೂಹಿ ನೀಡಿದ್ದಾರೆ. ಅವುಗಳನ್ನು ಬೆಳೆಸುವ ಗುರಿಯನ್ನೂ ಅವರು ಹೊಂದಿದ್ದಾರೆ. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲರೂ ಇದೇ ಮಾದರಿಯನ್ನು ಅನುಸರಿಸುವಂತೆ ಅಭಿಮಾನಿಗಳು ಹೇಳಿದ್ದಾರೆ.

    ಜೂಹಿ ಚಾವ್ಲಾ ಅದ್ಭುತ ನಟಿ. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಜೊತೆಗೆ ಬಾಲಿವುಡ್ ನ ಸಾಕಷ್ಟು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.