Tag: Birur

  • ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್!

    ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್!

    ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಬೀರೂರು (Birur) ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ (Mlaralingana Karnika) ನುಡಿ ಇಂದು (ಅ.3) ಬೆಳಗಿನ ಜಾವ ಹೊರಬಿದ್ದಿದೆ.

    ಬೀರೂರಿನ ಮಹಾನವಮಿ ಬಯಲಿನಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ. `ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ. ಧರ್ಮ – ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದಿರಬೇಕು ಪರಾಕ್ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ಪರಮೇಶ್ವರ್‌ಗೆ ಮುಖ್ಯಮಂತ್ರಿ ಭಾಗ್ಯ: ಹಾಲುಮತ ಗೊರವಯ್ಯರಿಂದ ಕಾರ್ಣಿಕ ಭವಿಷ್ಯ

    ಕಾರ್ಣಿಕದ ಸಂದೇಶ
    ಧರ್ಮ ಮತ್ತು ಅಧರ್ಮಗಳ ನಡುವಿನ ಸಂಘರ್ಷವು ಹೆಚ್ಚಾಗಿ ಜಾಗತಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಇದರೊಂದಿಗೆ, ಧರೆಗೆ ವರುಣನ ಆಗಮನವಾಯಿತು ಎಂಬ ನುಡಿಯು ಉತ್ತಮ ಮಳೆ ಮತ್ತು ಸುಭಿಕ್ಷತೆಯ ನಿರೀಕ್ಷೆಯನ್ನು ಹುಟ್ಟಿಸಿದೆ.

    ಇಲ್ಲಿ ನುಡಿಯುವ ಕಾರ್ಣಿಕವು ವರ್ಷದೊಳಗೆ ನೆರವೇರುತ್ತದೆ ಎಂಬ ನಂಬಿಕೆ ಈ ಪ್ರದೇಶದ ಜನರಲ್ಲಿದೆ. ದಶರಥ ಪೂಜಾರರು ದಸರಾದ 9-10 ದಿನಗಳ ಕಾಲ ಅತ್ಯಂತ ಮಡಿಯಿಂದಿದ ಇದ್ದು ಕಾರ್ಣಿಕ ನುಡಿಯುವ ಕೊನೆ ದಿನ ನೀರನ್ನೂ ಕುಡಿಯದೇ ಉಪವಾಸದಿಂದಿದ್ದು ಪೂಜೆ ಬಳಿಕ ಉಪಹಾರ ಸೇವಿಸುತ್ತಾರೆ. ಈ ಪ್ರಸಿದ್ಧ ಮೈಲಾರಲಿಂಗಸ್ವಾಮಿಯ ಕಾರ್ಣಿಕಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಇದನ್ನೂ ಓದಿ: ನ್ಯಾಯದ ತಕ್ಕಡಿ ಜರುಗಿತು, ಜೀವರಾಶಿ ಸಂಪಾದಲೆ ಪರಾಕ್ – ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

  • ಅಕ್ಕಮಹಾದೇವಿ ಮಹಿಳಾ ಸಮಾಜದ ಅಮೃತ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

    ಅಕ್ಕಮಹಾದೇವಿ ಮಹಿಳಾ ಸಮಾಜದ ಅಮೃತ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

    ಚಿಕ್ಕಮಗಳೂರು: ಜಿಲ್ಲೆಯ ಬೀರೂರಿನ ಅಕ್ಕಮಹಾದೇವಿ ಮಹಿಳಾ ಸಮಾಜದ (Akkamahadevi Mahila Samaja) ಅಮೃತ ಮಹೋತ್ಸವಕ್ಕೆ ಇಂದು (ಶುಕ್ರವಾರ) ಅದ್ಧೂರಿ ಚಾಲನೆ ಸಿಕ್ಕಿದೆ. ಅಕ್ಕಮಹಾದೇವಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 75ನೇ ವರ್ಷದ ಮಹೋತ್ಸವ ಸಮಾರಂಭ ನಡೆಯುತ್ತಿದೆ.

    ಇಂದು ಬೀರೂರಿನ (Birur) ಅಕ್ಕಮಹಾದೇವಿ ಮಹಿಳಾ ಸಮಾಜದ ಹಿರಿಯ ಸದಸ್ಯೆ ಎಂ.ವಿ.ನಾಗರತ್ನಮ್ಮ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳಗ್ಗೆ 10 ಗಂಟೆಗೆ ಶರಣ ಶರಣೆಯರ ಸ್ತಬ್ದಚಿತ್ರ ಮೆರವಣಿಗೆ ನಡೆಸಲಾಯಿತು. ಇದನ್ನೂ ಓದಿ: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

    ಶನಿವಾರ (ಫೆ.24) ಸಂಜೆ 6 ಗಂಟೆಗೆ ಬೀರೂರಿನ ಶಾಲಾ ಸಲಹಾ ಸಮಿತಿ ಅಧ್ಯಕ್ಷರಾದ ವಿಶಾಲಾ ಷಡಾಕ್ಷರಪ್ಪ ಅವರು 75ನೇ ವರ್ಷದ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಮೃತ ಮಹೋತ್ಸವದಲ್ಲಿ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಶೈಲಜಾ ಸದಾಶಿವನ್‌, ಕಾರ್ಯದರ್ಶಿ ಕೋಡಿಹಳ್ಳಿ ಉಷಾಸ್ವಾಮಿ, ಖಜಾಂಚಿ ಕಲ್ಪನ ಡಿ.ಪತ್ರೆ, ದಾವಣಗೆರೆಯ ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಗಾಯತ್ರಿ ವಸ್ತ್ರದ್‌ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ಬೀರೂರಿನ ಹಿರಿಯ ವಕೀಲರು ಮತ್ತು ನೋಟರಿ ಎಂ.ಹೆಚ್‌.ನಿರ್ಮಲಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಅಕ್ಕಮಹಾದೇವಿ ಮಹಿಳಾ ಸಮಾಜದ ಸದಸ್ಯೆ ಆಶಾ ಶಶಿಧರ್‌ ಅವರಿಂದ ಬಹುಮಾನ ವಿತರಣೆ ಕಾರ್ಯಕ್ರಮ ಇರಲಿದೆ. ಇದೇ ವೇಳೆ ‘ಶರಣ ಸಂಸ್ಕೃತಿ ಸಂಗಮ’ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಲಿದೆ. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ