Tag: Bitcoin Scam

  • ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

    ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

    ಬೆಂಗಳೂರು: ಬಿಜೆಪಿ ಕಾಲದ ಬಿಟ್ ಕಾಯಿನ್ ಹಗರಣದ (Bitcoin Scam) ವಿರುದ್ಧ ಮರು ತನಿಖೆ ನಡೆಸುವಂತೆ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ತನಿಖೆಗೆ ಎಸ್‍ಐಟಿ (SIT ) ರಚನೆ ಮಾಡಲಾಗಿದ್ದು, ತನಿಖೆ ಮಂಗಳವಾರದಿಂದಲೇ ಪ್ರಾರಂಭಗೊಳ್ಳಲಿದೆ.

    ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಈಗಾಗಲೇ ಎಸ್‍ಐಟಿಯನ್ನು ರಚನೆ ಮಾಡಲಾಗಿದೆ. ಸಿಐಡಿ ಸೈಬರ್ ಸೆಲ್‍ನ ಎಸ್ಪಿ ಶರತ್ ಪ್ರಕರಣದ ತನಿಖಾಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಿಟ್ ಕಾಯಿನ್ ಹಗರಣವನ್ನು ಈ ಹಿಂದೆ ಸಿಸಿಬಿ ತನಿಖೆ ಮಾಡಿತ್ತು. ಆಗ ತನಿಖೆಯಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ರಾಜಕಾರಣಿಗಳು ಹಣ ತನಿಖೆಯ ದಾರಿ ತಪ್ಪಿಸಿದ್ದಾರೆ ಎನ್ನಲಾಗಿತ್ತು. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್

    ಈ ಬಗ್ಗೆ ಸಿಐಡಿ ಡಿಜಿ ಸಲೀಂ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ್ದಾರೆ. ಎಸ್‍ಐಟಿ ಮುಖ್ಯಸ್ಥ ಮನೀಷ್ ಕರ್ಬೀಕರ್ ಜೊತೆ ಮಾತುಕತೆ ನಡೆಸಿದ ಅವರು, ತನಿಖೆಯ ರೂಪುರೇಷೆ, ಫೈಲ್ ವರ್ಗಾವಣೆ, ಕೆಳ ಹಂತದಲ್ಲಿ ಯಾವೆಲ್ಲ ಅಧಿಕಾರಿಗಳು ಟೀಂನಲ್ಲಿ ಇರಬೇಕು ಎಂಬುದನ್ನು ಚರ್ಚಿಸಿದ್ದಾರೆ. ಈ ಹಿಂದಿನ ತನಿಖೆಯಲ್ಲಿ ಸಿಸಿಬಿಯಿಂದ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಇದರಿಂದಾಗಿ ಎಸ್‍ಐಟಿ ತನಿಖೆ ನಡೆಸಲು ಕೋರ್ಟ್‍ನಿಂದ ಅನುಮತಿ ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ನಡೆಸಲಾಗಿದೆ.

    ಸಿಸಿಬಿಯಿಂದ ಫೈಲ್‍ಗಳ ವರ್ಗಾವಣೆ ಕೋರಿ ಪತ್ರ ಬರೆಯುವಂತೆ ಸಹ ಸೂಚಿಸಲಾಗಿದೆ. ಸಿಸಿಬಿಯ ತನಿಖಾ ಫೈಲ್ ಎಸ್‍ಐಟಿ ಕೈ ಸೇರಿದ ಬಳಿಕ ಮಂಗಳವಾರ ಅಥವಾ ಬುಧವಾರದಿಂದ ಅಧಿಕೃತವಾಗಿ ಎಸ್‍ಐಟಿ ತನಿಖೆ ಆರಂಭಿಸಲಿದೆ. ಇದನ್ನೂ ಓದಿ: ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

    ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

    ಬೆಂಗಳೂರು: ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

    ಬಿಟ್‌ ಕಾಯಿನ್‌ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಸಿಸಿಬಿ ನಿಷ್ಪಕ್ಷತವಾಗಿ ತನಿಖೆ ಮಾಡಿದ್ದು, ಸಿಸಿಬಿ ತನಿಖೆಯ ತಿರುಚಿದ ವರದಿಗಳು ಬಹಿರಂಗವಾಗುತ್ತಿದೆ. 2020ರ ಏಪ್ರಿಲ್‌ 11 ರಂದು ಡಾರ್ಕ್‌ನೆಟ್‌ ಮೂಲಕ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಒಬ್ಬನನ್ನು ವಶಕ್ಕೆ ಪಡೆಯಲಾಗುತ್ತದೆ.

    ಆರೋಪಿಯಿಂದ 500 ಗ್ರಾಂ ಗಾಂಜಾ ವಶಕ್ಕೆ ಪಡೆದ ಬಳಿಕ ನಾರ್ಕೋಟಿಕ್ಸ್ ಡ್ರಗ್ಸ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್‌) ಕಾಯ್ದೆ ಅಡಿ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ನಂತರ ಹೆಚ್ಚಿನ ತನಿಖೆಯ ವೇಳೆ ಶ್ರೀಕಿ ಸೇರಿದಂತೆ 10 ಜನರ ಬಂಧನ ಮಾಡಲಾಯಿತು. ವಿಚಾರಣೆ ಸಂಬಂಧ ಕ್ರಿಪ್ಟೋ ಕರೆನ್ಸಿ ವೆಬ್ ಸೈಟ್ ಗಳನ್ನ ಹ್ಯಾಕ್ ಮಾಡಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುತ್ತಾರೆ. ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲು ಮಾಡಲಾಗುತ್ತದೆ. ಇದನ್ನೂ ಓದಿ: ಬಾರ್ ವಿರುದ್ಧ ರೊಚ್ಚಿಗೆದ್ದ ಮಹಿಳಾ ಮಣಿಗಳು – ಕುರ್ಚಿಗಳು ಪೀಸ್ ಪೀಸ್

    ಶ್ರೀಕಿ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ. ಕಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ ಖಾತೆ ತೆರೆಯುವ ಅಗತ್ಯ ಇದ್ದ ಕಾರಣ ಸರ್ಕಾರದ ಅನುಮತಿ ಪಡೆದು ಖಾತೆಯನ್ನು ತೆರಯಲಾಗಿತ್ತು. ಬಿಟ್ ಕಾಯಿನ್ ಗುರುತಿಸುವ ವಶಪಡಿಸಿಕೊಳ್ಳುವ ಪಕ್ರಿಯೆ ಸಂದರ್ಭದಲ್ಲಿ ಶ್ರೀಕಿ ಬಿಟ್ ಕಾಯಿನ್ ವ್ಯಾಲೆಟ್ ತೋರಿಸಿದ್ದು ಅದರಲ್ಲಿ 31.8 ಬಿಟ್ ಕಾಯಿನ್ ಇದ್ದವು. ಸೈಬರ್ ತಜ್ಞರು ಹಾಗೂ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ

    ಬಿಟ್ ಕಾಯಿನ್ ಗಳನ್ನು ಪೊಲೀಸ್ ಖಾತೆಗೆ ವರ್ಗ ಮಾಡಿಕೊಳ್ಳಲು ನ್ಯಾಯಾಲಯದ ಅನುಮತಿ ಪಡೆದುಕೊಳ್ಳಲಾಗಿದೆ. ಶ್ರೀಕಿಯ ತನ್ನಲ್ಲಿದ್ದ ಎಲ್ಲ ವ್ಯಾಲೆಟ್‌ ತೋರಿಸಿದಾಗ 186.811 ಬಿಟ್ ಕಾಯಿನ್ ಪತ್ತೆ ಆಗಿದೆ. ವಿಚಾರಣೆ ವೇಳೆಯಲ್ಲಿ ಆರೋಪಿ ಇದು ನನ್ನ ವೈಯಕ್ತಿಕ ಖಾತೆ ಎಂದು ತಪ್ಪೊಪ್ಪಿಕೊಂಡಿದ್ದ. ಶ್ರೀಕಿ ಬಳಿ ಖಾಸಗಿ ಪಾಸ್‍ವರ್ಡ್ ಇರಲಿಲ್ಲ ಎಂದು ಸೈಬರ್ ತಜ್ಞರ ಸ್ಪಷ್ಟನೆ ನೀಡಿದ್ದು ಎಲ್ಲಾ ದಾಖಲೆಗಳನ್ನು ರೆಕಾರ್ಡ್‌ ಮಾಡಲಾಗಿದೆ. ನುರಿತ ಅಧಿಕಾರಿಗಳಿಂದ ತನಿಖೆ ಮಾಡಲಾಗಿದ್ದು, ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಮಾಹಿತಿಯನ್ನು ಸಿಬಿಐ, ಇಡಿಗೆ ಕಳಿಸಿಕೊಡಲಾಗಿದೆ. ವಿಚಾರಣೆ ಸಮಯದಲ್ಲಿ ಹಲವು ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿರುವುದಾಗಿ ಶ್ರೀಕಿ ಒಪ್ಪಿಕೊಂಡಿದ್ದಾನೆ. ಹೀಗಾಗಿ ಹೆಚ್ಚಿನ ತನಿಖೆಗೆಗಾಗಿ ಮಾಹಿತಿಯನ್ನು ಇಂಟರ್‌ಪೋಲ್‌ಗೆ ನೀಡಲಾಗಿದೆ.

    ಶ್ರೀಕಿಗೆ ಪೊಲೀಸ್ ಕಸ್ಟಡಿಯಲ್ಲಿ ಡ್ರಗ್ಸ್ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪವನ್ನು ತನಿಖಾಧಿಕಾರಿ ಅಲ್ಲಗೆಳೆದಿದ್ದರು. ಆದರೆ ನ್ಯಾಯಾಲಯ ಮೆಡಿಕಲ್ ಟೆಸ್ಟ್ ಮಾಡಿಸುವಂತೆ ಸೂಚನೆ ನೀಡಿತ್ತು. ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಾಗಿದ್ದರಿಂದ ಅಲ್ಲಿ ಪರೀಕ್ಷೆ ಮಾಡಲು ಆಗಿರಲಿಲ್ಲ. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್‍) ಕಳುಹಿಸಲಾಗಿತ್ತು. ಎಫ್‍ಎಸ್‍ಎಲ್ ಡ್ರಗ್ಸ್‌ ಸೇವಿಸಿಲ್ಲ ಎಂದು ನೆಗೆಟಿವ್ ರಿಪೋರ್ಟ್ ನೀಡಿತ್ತು. ಅಲ್ಲದೇ ಹೆಬಿಯಸ್ ಕಾರ್ಪಸ್ ಹಾಕಿದ್ದವರ ಮೇಲೂ ನ್ಯಾಯಾಲಯ 5 ಸಾವಿರ ರೂ. ದಂಡ ವಿಧಿಸಿದೆ. ಸದ್ಯಕ್ಕೆ ಮೂರು ಕೇಸ್ ಗಳ ವಿಚಾರಣೆ ನಡೆದಿದ್ದು ಎಲ್ಲಾ ಕೇಸ್ ಗಳು ಪಾರದರ್ಶಕವಾಗಿದೆ. ಶ್ರೀಕಿ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂರು ಪ್ರಕರಣಗಳನ್ನು ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ.

  • ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ

    ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ

    ಬೆಂಗಳೂರು: ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ ಎಂದು ಸಿದ್ದರಾಮಯ್ಯ ಟ್ಟಿಟ್ಟರ್ ಮೂಲಕ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ. ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ. ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ – ತನಿಖೆಗೆ ಇಡಿ, ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದ ಸರ್ಕಾರ

    ತನಿಖೆ ನಡೆಸಲು ಹಿಂಜರಿಕೆ ಯಾಕೆ?:
    ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ? ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ನೀವು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?. ಇದನ್ನೂ ಓದಿ: ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

  • ಬಿಟ್ ಕಾಯಿನ್ ಹಗರಣ – ತನಿಖೆಗೆ ಇಡಿ, ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದ ಸರ್ಕಾರ

    ಬಿಟ್ ಕಾಯಿನ್ ಹಗರಣ – ತನಿಖೆಗೆ ಇಡಿ, ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದ ಸರ್ಕಾರ

    ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕಿ ಅರೆಸ್ಟ್ ಆದ ಬಳಿಕ ರಾಜ್ಯ ಸರ್ಕಾರ ಹೆಚ್ಚಿನ ತನಿಖೆ ನಡೆಸಲು ಇಡಿ(ಜಾರಿ ನಿರ್ದೇಶನಾಲಯ) ಮತ್ತು ಇಂಟರ್‌ಪೋಲ್‌ಗೆ ಪತ್ರ ಬರೆದ ವಿಚಾರ ಈಗ ಬೆಳಕಿಗೆ ಬಂದಿದೆ.

    ಇದು ಅಂತಾರಾಷ್ಟ್ರೀಯ ಮಟ್ಟದ ಹಗರಣವಾದ ಕಾರಣ ಹೆಚ್ಚಿನ ತನಿಖೆ ನಡೆಸಲು ಕೋರಿ ಈ ವರ್ಷದ ಮಾರ್ಚ್ 3ರಂದು ಇಡಿಗೆ, ಏಪ್ರಿಲ್ 28ರಂದು ಇಂಟರ್‌ಪೋಲ್‌ಗೆ ರಾಜ್ಯ ಸರ್ಕಾರ ಪತ್ರ ಬರೆದಿತ್ತು.

    ಆರೋಪಿ ಶ್ರೀಕೃಷ್ಣನ ಜಾಲ ವಿದೇಶದಲ್ಲಿಯೂ ಹಬ್ಬಿದೆ. ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಮತ್ತು ಹ್ಯಾಕಿಂಗ್ ಪ್ರಕರಣದ ಬಗ್ಗೆ ಇಂಟರ್‌ಪೋಲ್‌ ಹೆಚ್ಚಿನ ತನಿಖೆ ನಡೆಸಬೇಕು ಅಥವಾ ಸೂಕ್ತ ಏಜೆನ್ಸಿ ಮೂಲಕ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಕೋರಿತ್ತು. ಇದನ್ನೂ ಓದಿ: ಐಪಿಎಲ್ ಬಿಡ್ಡಿಂಗ್‍ನಲ್ಲಿ ಈ ಇಬ್ಬರಿಗೆ ಭಾರೀ ಬೇಡಿಕೆ

    ತನಿಖೆಗೆ ಕೋರಿದ್ದ ಸಾಕ್ಷ್ಯ ಕೊಡಿ ಎಂದು ವಿಪಕ್ಷ ನಾಯಕರು ಕೇಳುತ್ತಿರುವ ಹೊತ್ತಲ್ಲಿಯೇ ಈ ದಾಖಲೆಗಳು ಬಿಡುಗಡೆ ಆಗಿವೆ. ಈ ಮಧ್ಯೆ, ಜೀವನ್‍ಭೀಮಾ ನಗರ ಪೊಲೀಸರು ಶ್ರೀಕಿಯ ಲ್ಯಾಪ್‍ಟಾಪ್ ತೆರೆಯಲು ಕಸರತ್ತು ಮುಂದುವರೆಸಿದ್ದಾರೆ.