Tag: bjp activist

  • ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

    ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

    ಮಂಡ್ಯ: ಬಿಜೆಪಿ ಕಾರ್ಯಕರ್ತ ಮಂಜುನಾಥ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಜಿ ಸಂಸದೆ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ.

    ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನ ಆಡಿಕೊಂಡಂತೆ ಎಂಬ ಗಾದೆ ಮಾತು ಪಿಯುಸಿ ಮಾಡಿರುವ ಮಾಜಿ ಸಂಸದೆ ರಮ್ಯಾ ಎಂಎ ಮಾಡಿರುವ ನರೇಂದ್ರ ಮೋದಿ ಅವರನ್ನ ಆಡಿಕೊಂಡಿರುವುದಕ್ಕೆ ಉದಾಹರಣೆ ಕೊಡಬಹುದೆ ಅಂತ ಅರ್ಜಿಯಲ್ಲಿ ತಿಳಿಸಿದ್ದಾರೆ.

    ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಬಗ್ಗೆ ಆಡಿಕೊಂಡಿದ್ದರು. ಹೀಗಾಗಿ ಮಂಜುನಾಥ್ ಮೈಸೂರು ವಿಶ್ವವಿದ್ಯಾನಿಲಯದ ಜಾನಪದ ಮತ್ತು ಗಾದೆ ವಿಭಾಗಕ್ಕೆ ಮಾಹಿತಿ ಹಕ್ಕಿನ ಮೂಲಕ `ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನು ಆಡಿಕೊಂಡಂತೆ’ ಎಂಬ ಗಾದೆ ರಮ್ಯಾರಿಗೆ ಉದಾಹರಣೆ ಕೊಡಬಹುದೆ ಅಂತ ಅರ್ಜಿ ಸಲ್ಲಿಸುವ ಮೂಲಕ ರಮ್ಯಾಗೆ ಟಾಂಗ್ ನೀಡಿದ್ದಾರೆ.

    ರಮ್ಯಾ ಏನ್ ಹೇಳಿದ್ದರು?:
    ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಒಂದು ರಿಪೋರ್ಟ್ ಕಾರ್ಡ್ ಕೊಟ್ಟಿತ್ತು. ಈ ರಿಪೋರ್ಟ್ ಕಾರ್ಡ್ ಸಾಕಷ್ಟು ವಿವಾದಕ್ಕೆ ಗುರಿಯಾಗಿತ್ತು. ಶಾಲೆಯಲ್ಲಿ ಸಿಗೋ ಮಾರ್ಕ್ಸ್ ಕಾರ್ಡ್ ನಂತೆ ಮಾಡಿ ಅದರಲ್ಲಿ ವಿಷಯ, ರಿಮಾರ್ಕ್ ಮತ್ತು ದರ್ಜೆ ಅಂತ ರಿಪೋರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗಿತ್ತು.

    ಹೆಸರು -ಪ್ರಧಾನಿ ನರೇಂದ್ರ ಮೋದಿ
    ಅವಧಿ -2014ರಿಂದ ಇಲ್ಲಿಯವರೆಗೂ
    ರೋಲ್ ನಂಬರ್ -282 (ಲೋಕಸಭಾ ಸದಸ್ಯರ ಸಂಖ್ಯೆ)
    ಬ್ಲಡ್ ಗ್ರೂಪ್- ಬಿಜೆಪಿ
    ಉದ್ಯೋಗ ಸೃಷ್ಟಿ ಪರೀಕ್ಷೆಯಲ್ಲಿ- ಡಿ ಗ್ರೇಡ್

    ರಕ್ಷಣಾ ಪರೀಕ್ಷೆಯಲ್ಲಿ-ಸಿ ಗ್ರೇಡ್
    ಆರೋಗ್ಯ ಪರೀಕ್ಷೆಯಲ್ಲಿ -ಎಫ್ ಗ್ರೇಡ್
    ಆರ್ಥಿಕ ಪರೀಕ್ಷೆಯಲ್ಲಿ -ಎಫ್ ಗ್ರೇಡ್
    ಮಹಿಳಾ ಸುರಕ್ಷತೆ ಪರೀಕ್ಷೆಯಲ್ಲಿ- ಸಿ ಗ್ರೇಡ್

    ಸ್ಟೋರಿ ಟೆಲ್ಲಿಂಗ್‍ನಲ್ಲಿ -ಎ + +
    ಇತರೆ ವಿಭಾಗಗಳು- ಹಿಂಸೆ ? ಯೆಸ್, ಕೋಮುವಾದ-ಯೆಸ್
    ಫೈನಲ್ ಗ್ರೇಡ್ – ಡಿ ಗ್ರೇಡ್

    ಕೊನೆಯದಾಗಿ ಈ ಹುಡುಗ ಹಿಂಸಾತ್ಮಕವಾಗಿ ವರ್ತಿಸುತ್ತಾನೆ.. ಅಸಮರ್ಥ.. ಆದರೆ ಸುಳ್ಳು ಹೇಳುವುದರಲ್ಲಿ, ದ್ವೇಷ ಹರಡುವುದರಲ್ಲಿ ಪರಿಣಿತ ಅಂತ ಹೇಳಲಾಗಿತ್ತು. ಈ ರಿಪೋರ್ಟ್ ಕಾರ್ಡನ್ನು ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿ ಮೋದಿಯನ್ನು ಹೀಗಳೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನಿಂದ ಚಳುವಳಿ

    ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನಿಂದ ಚಳುವಳಿ

    ಮಂಡ್ಯ: ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಚಳುವಳಿ ಆರಂಭಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬವರೇ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಚಳುವಳಿ ಆರಂಭಿಸಿದ್ದಾರೆ. ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ನಿವಾಸಿಯಾಗಿರೋ ಶಿವಕುಮಾರ್ ಆರಾಧ್ಯ ಅವರು, ವಿಧಾನಸಭೆ ಮತ್ತು ಮಂಡ್ಯ ನಗರಸಭೆ ಚುನಾವಣೆಯಲ್ಲಿ ಮತದಾನ ಮಾಡದ ರಮ್ಯಾ ಅವರಿಗೆ ಯಾರೂ ಮತಹಾಕಬೇಡಿ ಎಂದು ಚಳುವಳಿಯ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕದವರು ಮತ ಕೇಳಲು ಅರ್ಹರಲ್ಲ: ರಮ್ಯಾ ವಿರುದ್ಧ ಕೈ ಕಾರ್ಯಕರ್ತರ ಕಿಡಿ

    ರಮ್ಯಾ ಮುಂದಿನ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಗಬಾರದು. ಮತ ಚಲಾಯಿಸದ ರಮ್ಯಾ ಅವರಿಗೆ ಯಾರೂ ಮತ ಹಾಕಬಾರದು ಎಂದು ಶಿವಕುಮಾರ್ ಅವರು ವಾಟ್ಸಪ್ ನಲ್ಲಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡದಿದ್ರೆ, ಸ್ಪರ್ಧೆ ಮಾಡುವಂತಿಲ್ಲ: ಮಂಡ್ಯ ಜನ

    ಒಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ರಮ್ಯಾ ವಿರುದ್ಧ ಆಕ್ರೋಶ ಹೊರಹಾಕಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗದಿದ್ದಕ್ಕೆ ಪೊಲೀಸರ ಮೇಲೆಯೇ ದಾಳಿ- ವಿಡಿಯೋ

    ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗದಿದ್ದಕ್ಕೆ ಪೊಲೀಸರ ಮೇಲೆಯೇ ದಾಳಿ- ವಿಡಿಯೋ

    ಕೋಲ್ಕತ್ತಾ: ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ್ ನಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ಖರ್ಗಾಪುರ ಚೌರಿಂಗಿಯಲ್ಲಿ ನಡೆದಿದ್ದು, ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಅಂತ ಸಿಟ್ಟುಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ.

    ಸೋಮವಾರ ಮಿಡ್ನಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಿತ್ತು. ಹೀಗಾಗಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ತೆರಳುತ್ತಿದ್ದರು. ಈ ವೇಳೆ ಕಾರ್ಯಕರ್ತರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಸಾಧ್ಯವಾಯಿತು. ಹೀಗಾಗಿ ಸಿಟ್ಟಗೊಂಡ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಅಲ್ಲಿಂದ ಪಲಾಯನ ಮಾಡಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಸಿಟ್ಟುಗೊಂಡ ಕಾರ್ಯಕರ್ತರು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸೋಮವಾರ ನಡೆದ ಮೋದಿ ಕಾರ್ಯಕ್ರಮದ ವೇಳೆ ಟೆಂಟ್ ಕುಸಿದು 90 ಮಂದಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಪ್ರಧಾನಿಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

  • ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಅನುಮಾನಾಸ್ಪದ ಸಾವು

    ಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಅನುಮಾನಾಸ್ಪದ ಸಾವು

    -ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

    ಕೋಲ್ಕತ್ತಾ: ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಯುವಕನ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಪುರುಲಿಯಾ ಜಿಲ್ಲೆಯ ಬಲರಾಮ್‍ಪುರ ಗ್ರಾಮ ಡಾಬ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ದೊರೆತಿದೆ. 32 ವರ್ಷದ ದುಲಾಲ್ ಕುಮಾರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ಬಿಜೆಪಿ ಸ್ಥಳೀಯ ಕಾರ್ಯಕರ್ತನಾಗಿದ್ದು, ಶುಕ್ರವಾರ ನಿಗೂಢವಾಗಿ ನಾಪತ್ತೆಯಾಗಿದ್ದರು.

    ಘಟನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀ, ಕಳೆದ ಬುಧವಾರ ನಡೆದ ತ್ರಿಲೋಚನ್ ಮೆಹಾಟೊ ಕೊಲೆಯ ಮಾದರಿಯಲ್ಲಿ ದುಲಾಲ್ ಕುಮಾರ್‍ನ ಕೊಲೆಯಾಗಿದೆ ಎಂದು ತಮ್ಮ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ.

    ಬುಧವಾರ 20 ವರ್ಷದ ತ್ರಿಲೋಚನ್ ಮೆಹಾಟೊ ಶವವು ಪುರುಲಿಯಾ ಜಿಲ್ಲೆಯ ಬಲರಾಮ್‍ಪುರದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಸಿಕ್ಕಿತ್ತು. ಟೀ ಶರ್ಟ್ ಮೇಲೆ ಬಿಜೆಪಿ ಪರ ಕೆಲಸ ಮಾಡುವ ಕಾರ್ಯಕರ್ತರಿಗೆ ಇದೇ ರೀತಿ ಶಿಕ್ಷೆ ಎಂದು ಬರೆಯಲಾಗಿತ್ತು. ಪತ್ರ ದೊರೆತ ಬಳಿಕ ಪಕ್ಷದಲ್ಲಿ ಇದ್ದಿದ್ದಕ್ಕೆ ಹತ್ಯೆ ನಡೆದಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತಂತೆ ರಾಜ್ಯದಲ್ಲಿ ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ.

    ಶುಕ್ರವಾರ ದುಲಾಲ್ ಕುಮಾರ್‍ನ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಇಲಾಖೆಯು ಕಾನೂನು ಸುವ್ಯವಸ್ಥೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಸುತ್ತ ಪ್ರತಿಭಟನೆ ಮಾಡಿದ್ದರು.

    https://twitter.com/ShobhaBJP/status/1002773233341362176

    ಈ ಕುರಿತಂತೆ ರಾಜ್ಯ ಬಿಜೆಪಿ ಮುಖ್ಯಸ್ಥ ದಿಲೀಪ್ ಗೋಶ್ ಮತನಾಡಿ, ತೃಣಮೂಲ ಕಾಂಗ್ರೆಸ್ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಳಿಕ, ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎದುರಾಳಿಗಳನ್ನು ಹತ್ತಿಕ್ಕಲು ಸರ್ಕಾರ ಈ ರೀತಿ ಕುತಂತ್ರ ನಡೆಸುತ್ತಿದೆ. ನಮ್ಮ ಪಕ್ಷವು ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

    ಪಂಚಾಯಿತಿ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದ್ರೆ ಚುನಾವಣೆಯಲ್ಲಿ ಟಿಎಂಸಿ 839ರಲ್ಲಿ 645 ಸೀಟ್ ಗಳಿಸಿತ್ತು. 38 ಜಿಲ್ಲಾ ಪಂಚಾಯಿತಿಗಳಲ್ಲಿ ಟಿಎಂಸಿ 26 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದರೆ, ಬಿಜೆಪಿ ಕೇವಲ 9 ರಲ್ಲಿ ಜಯಗಳಿಸಿತ್ತು.

  • ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಸಹೋದರಿ, ಆಕೆಯ ಪ್ರಿಯಕರನಿಂದಲೇ ಕೊಲೆ

    ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಸಹೋದರಿ, ಆಕೆಯ ಪ್ರಿಯಕರನಿಂದಲೇ ಕೊಲೆ

    ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಮಂಗಳೂರಿನ ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

    ಪ್ರಕರಣ ಸಂಬಂಧಿಸಿ ಎಸಿಪಿ ವೆಲೆಂಟೈನ್ ಡಿಸೋಜ ನೇತೃತ್ವದ ವಿಶೇಷ ತಂಡ ಇದೀಗ ಕಾರ್ತಿಕ್ ಸೋದರಿ ಕಾವ್ಯ ಮತ್ತು ಆಕೆಯ ಪ್ರಿಯಕರ ಗೌತಮ್ ಎಂಬಾತನನ್ನು ಬಂಧಿಸಿದೆ. ಕಾವ್ಯಗೆ ಮದುವೆಯಾಗಿದ್ದು ಗಂಡ ವಿದೇಶದಲ್ಲಿದ್ದ. ಆದರೆ ಕಾವ್ಯ ಈ ವೇಳೆ ಪ್ರಿಯಕರ ಗೌತಮ್ ಜೊತೆ ಅಫೇರ್ ಇಟ್ಟುಕೊಂಡಿದ್ದನ್ನು ತಿಳಿದ ಕಾರ್ತಿಕ್ ವಿರೋಧ ವ್ಯಕ್ತಪಡಿಸಿದ್ದ.

    ಇದೇ ಕಾರಣಕ್ಕೆ ಕಳೆದ ಅಕ್ಟೋಬರ್ 24 ರಂದು ಬೆಳಗ್ಗೆ ಕಾರ್ತಿಕ್ ಜಾಗಿಂಗ್ ಹೋಗುತ್ತಿದ್ದ ವೇಳೆ ಗೌತಮ್ ಮತ್ತು ಆತನ ತಮ್ಮ ಗೌರವ್ ಸೇರಿ ರಾಡ್‍ನಿಂದ ಬಡಿದು ಕೊಲೆಗೆ ಯತ್ನಿಸಿದ್ದರು. ಎರಡು ದಿನಗಳ ಬಳಿಕ ಕಾರ್ತಿಕ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದ ಕಾರ್ತಿಕ್ ಸಾವಿಗೂ ಕೆಲ ಸಮಯದ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದರು.

    ಆದರೆ ಕೊಣಾಜೆ ಠಾಣೆಯ ಮುಂಭಾಗದಲ್ಲೇ ಈ ಘಟನೆ ನಡೆದಿದ್ದರೂ ಪೊಲೀಸರು ಆರೋಪಿಗಳ ಪತ್ತೆ ಮಾಡದೇ ಇರುವುದು ಸಂಶಯಕ್ಕೆ ಕಾರಣವಾಗಿತ್ತು. ಹೀಗಾಗಿ ಯಾರೋ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಉದ್ದೇಶಪೂರ್ವಕವಾಗಿ ಕೊಲೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿತ್ತು. ಹೀಗಾಗಿ ತನಿಖೆಯನ್ನು ಪೊಲೀಸ್ ಕಮಿಷನರ್ ವಿಶೇಷ ತಂಡಕ್ಕೆ ವಹಿಸಿದ್ದರು.

    ಕಾರ್ತಿಕ್ ರಾಜ್ ಮಾಜಿ ತಾಪಂ ಉಪಾಧ್ಯಕ್ಷ ಉಮೇಶ್ ಗಾಣಿಗ ಎಂಬವರ ಪುತ್ರನಾಗಿದ್ದು ಕೊಲೆ ಪ್ರಕರಣ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.

  • ಗುಂಡ್ಲುಪೇಟೆ ಬೈ ಎಲೆಕ್ಷನ್: ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಸಿಕ್ತು ಕಂತೆ ಕಂತೆ ನೋಟುಗಳು!

    ಗುಂಡ್ಲುಪೇಟೆ ಬೈ ಎಲೆಕ್ಷನ್: ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಸಿಕ್ತು ಕಂತೆ ಕಂತೆ ನೋಟುಗಳು!

    – ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

    ಚಾಮರಾಜನಗರ: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಹಣವಿರುವುದುನ್ನು ಪತ್ತೆ ಮಾಡಿದ ಬಿಜೆಪಿ ಕಾರ್ಯಕರ್ತರು ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.

    ಮನೋಜ್ ಬಂಧಿತ ಆರೋಪಿ. ಗುಂಡ್ಲುಪೇಟೆಯ ಖಾಸಗಿ ಹೋಟೆಲ್ ಮುಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರ ಕಾರಿನಲ್ಲಿ ಹಣವಿರುವ ಕುರಿತು ಬಿಜೆಪಿ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿತ್ತು.

    ಕೂಡಲೇ ಕಾರ್ಯಕರ್ತರು ಕಾರಿನ ಬಳಿ ತೆರಳಿದಾಗ 2 ಸಾವಿರದ 20 ಕಂತೆ ಕಾರಿನಲ್ಲಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾರಿನಲ್ಲಿ ಒಟ್ಟು 4 ಜನ ಇದ್ರು. ಅದರಲ್ಲಿ ಮೂವರು ಓಡಿ ಹೋಗಿದ್ದಾರೆ. ಮನೋಜ್‍ನನ್ನು ಕಾರ್ಯಕರ್ತರು ಹಿಡಿದಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ನಗರ ಪೊಲೀಸರು ಕಾರನ್ನು ಬಚಾವ್ ಮಾಡಲು ಯತ್ನಿಸಿದ್ದಾರೆ. ಆದ್ರೆ ಬಿಜೆಪಿ ಕಾರ್ಯಕರ್ತರು ಮನೋಜ್‍ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದ್ರೆ ಈ ಹಣ ಕಾಂಗ್ರೆಸ್ ನವರದ್ದು ಅಂತಾ ಆರೋಪ ವ್ಯಕ್ತವಾಗುತ್ತಿದೆ.

    ಪೋಲಿಸರಿಂದ ಹಲ್ಲೆ: ಮನೋಜ್‍ನನ್ನು ಪೊಲೀಸರಿಗೆ ಹಿಡಿದು ಕೊಟ್ಟ ಬಿಜೆಪಿ ಕಾರ್ಯಕರ್ತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

    ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸ್ ಪೇದೆ ಮಲ್ಲು ಮತ್ತು ವೆಂಕಟೇಶ್ ಬಿಜೆಪಿ ಕಾರ್ಯಕರ್ತ ಚಂದ್ರು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರಿಗೆ ಹಿಡಿದು ಕೊಟ್ಟ ಬಳಿಕ ಪೊಲೀಸರು ಆರೋಪಿ ವಿರುದ್ಧ ನಾಲ್ಕೂವರೆ ಲಕ್ಷ ರೂ. ಬದಲು ಕೇವಲ 12, 500 ರೂ. ಅಂತಾ ಬರೆದುಕೊಂಡಿದ್ದರು. ಇದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಬ್ಬರು ಮೊಬೈಲ್ ಕಸಿದು ವೀಡಿಯೋ ಡಿಲಿಟ್ ಮಾಡಿ ಬಳಿಕ ಹಲ್ಲೆ ಮಾಡಿದ್ದಾರೆ. ಇದರಿಂದ ಕೆರಳಿದ ಕಾರ್ಯಕರ್ತರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗುರುವಾರ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ವಿಡಿಯೋ ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿತ್ತು.

    https://www.youtube.com/watch?v=WprObSX324k