ಹಾಸನ: ಸಮಸ್ಯೆಗೆ ಸ್ಪಂದಿಸದಿದ್ದರೆ ಸಭೆ, ಸಮಾರಂಭ ಯಾಕೆ ಮಾಡ್ತೀರಿ ಎಂದು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಗದ್ದಲ ಮಾಡಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸನ್ಮಾನ ಮಾಡಲು ಬೇಲೂರಿನಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬ್ಯಾದನೆ ಗ್ರಾಮದ ಬಿಜೆಪಿ ಕಾರ್ಯಕರ್ತರು ನಮ್ಮ ಗ್ರಾಮದ ವಸಂತ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಪ್ರೇರಣೆ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ಹಾಕಿದ್ದಾರೆ. ಉದ್ದೇಶಪೂರ್ವಕವಾಗಿ ಪೊಲೀಸರು ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ಈ ಬಗ್ಗೆ ಬಿಜೆಪಿ ಮುಖಂಡರ ಬಳಿ ಹೇಳಿಕೊಂಡರೆ ಯಾರೂ ನಮ್ಮ ಬೆಂಬಲಕ್ಕೆ ಬರುತ್ತಿಲ್ಲ. ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸದಿದ್ದ ಮೇಲೆ ಯಾಕೆ ಸಭೆ ಸಮಾರಂಭ ಮಾಡುತ್ತಿದ್ದೀರಿ. ಎಲ್ಲಿವರೆಗೂ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವುದಿಲ್ಲವೋ ಅಲ್ಲಿಯವರೆಗೂ ಯಾವುದೇ ಸಭೆ, ಸಮಾರಂಭ ಮಾಡಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ನವದೆಹಲಿ: ಹಿಂದಿನ ಸರ್ಕಾರಗಳು ರೈತರಿಗೆ ಮತ್ತು ಕಾರ್ಮಿಕರಿಗೆ ಅರ್ಥವಾಗದ ಭರವಸೆ ಮತ್ತು ಕಾನೂನುಗಳನ್ನು ರೂಪಿಸಿದೆ. ಅದನ್ನು ಬದಲಿಸಲು ಎನ್‍ಡಿಎ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕಿದ್ದು, ಬಿಜೆಪಿ ಕಾರ್ಯಕರ್ತರು ರೈತರ ಬಳಿ ಹೋಗಿ ಸುಲಭ ಭಾಷೆಯಲ್ಲಿ ಅರ್ಥೈಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಹಿನ್ನಲೆಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಎನ್‍ಡಿಎ ಸರ್ಕಾರ ರೈತ ಪರ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದೆ ಎಂದರು.
ಎನ್‍ಡಿಎ ಸರ್ಕಾರ ತನ್ನ ಅವಧಿಯಲ್ಲಿ ರೈತರನ್ನು ಬ್ಯಾಂಕುಗಳೊಂದಿಗೆ ಸಂಪರ್ಕಿಸಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಒಂದು ಲಕ್ಷ ಕೋಟಿ ನೆರವು ನೀಡಿದ್ದು, ಇದರಿಂದ 10 ಲಕ್ಷ ಕೋಟಿ ರೈತರಿಗೆ ನೆರವಾಗಿದೆ. ಜೊತೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ರೈತರಿಗೆ ಸುಲಭವಾಗಿ ಸಾಲ ಸಿಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಹೊಸ ನೀತಿಗಳು ಮಹತ್ವದ ಬದಲಾವಣೆ ತಂದಿದೆ ಕಾರ್ಮಿಕರ ಜೀವನವನ್ನು ಬದಲಿಸಿದೆ. ಈವರೆಗೂ 30% ಕಾರ್ಮಿಕರು ಕನಿಷ್ಠ ವೇತನದ ಅಡಿ ಇದ್ದರು ಹೊಸ ಕಾನೂನಿನ ಮೂಲಕ ಅಸಂಘಟಿತ ವರ್ಗ ಮತ್ತು ಎಲ್ಲ ಕೈಗಾರಿಕಾ ಕಾರ್ಮಿಕರನ್ನು ಈ ವ್ಯಾಪ್ತಿಗೆ ತರಲಾಗಿದೆ. ಸ್ವಾತಂತ್ರ್ಯದ ಬಳಿಕ ರೈತರು ಮತ್ತು ಕಾರ್ಮಿಕರಿಗೆ ದೊಡ್ಡ ಭರವಸೆಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ದೊಡ್ಡ ಪ್ರಣಾಳಿಕೆ ನೀಡಲಾಗಿತ್ತು. ಆದರೆ ಇದ್ಯಾವುದು ಜಾರಿಗೆ ಬಂದಿಲ್ಲ ಎಂದರು.
ಭರವಸೆಗಳೆಲ್ಲ ಟೊಳ್ಳಾಗಿದೆ ರೈತರು ಸರ್ಕಾರದ ಹಳೆ ನೀತಿಗಳಿಗೆ ಕಾನೂನುಗಳಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಬೇಕಾದ ಕಡೆ ತಮ್ಮ ಉತ್ಪನ್ನ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಇದು ಇಳುವರಿ ಹೆಚ್ಚಿದರೂ ಹೆಚ್ಚು ಆದಾಯ ಬಾರದಂತಾಯಿತು. ಹೀಗಾಗಿ ರೈತರ ಸಾಲ ಹೆಚ್ಚಾಗಿದ್ದು ಹೊಸ ಕಾನೂನು ರೈತರ ಉತ್ಪನ್ನ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.
ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಹಾಗೂ ಕೇರಳ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರು ಬ್ಯಾರಿಕೇಡ್ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಗಡಿ ಸಂಪೂರ್ಣ ತೆರೆದಿದ್ದು, ಕೇರಳದಿಂದ ಮಂಗಳೂರಿಗೆ ಪ್ರವೇಶಿಸಲು ಅನುಮತಿ ಇದೆ. ಆದರೆ ಕೇರಳಕ್ಕೆ ಪ್ರವೇಶಿಸಲು ಪೊಲೀಸರು ತಡೆಯೊಡ್ಡುತ್ತಿದ್ದಾರೆ. ಕೇರಳ ಸರ್ಕಾರ ತಕ್ಷಣ ಎಲ್ಲಾ ಗಡಿಯನ್ನು ತೆರೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಏಸುಕ್ರಿಸ್ತನ ಪ್ರತಿಮೆ ವಿಚಾರವಾಗಿ ಈಗಾಗಲೇ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ದಿನನಿತ್ಯ ಬಿಜೆಪಿ ಸರ್ಕಾರದ ಸಚಿವರು, ನಾಯಕರು ಸಹ ಪ್ರತಿಮೆ ನಿರ್ಮಾಣದ ವಿಚಾರವಾಗಿ ಭೂಮಿ ಮಂಜೂರಾತಿ ಬಗ್ಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದೀಗ ಬಿಜೆಪಿ ಜಿಲ್ಲಾ ಮಟ್ಟದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಕಪಾಲ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಹಾರೋಬೆಲೆಯ ಕಪಾಲ ಬೆಟ್ಟಕ್ಕೆ ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ನೇತೃತ್ವದ ಸುಮಾರು 50 ಮುಖಂಡರು, ಕಾರ್ಯಕರ್ತರ ತಂಡ ಕಪಾಲ ಬೆಟ್ಟಕ್ಕೆ ಭೇಟಿ ನೀಡಿತ್ತು. ಕಪಾಲ ಬೆಟ್ಟದ ತಳಭಾಗದಿಂದಲೂ ಕೂಡಾ ನಡೆದುಕೊಂಡೇ ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದವರೆಗೆ ಬೆಟ್ಟದ ವೀಕ್ಷಣೆ ಹಾಗೂ ಈ ಹಿಂದಿನ ಕುರುಹುಗಳ ವೀಕ್ಷಣೆ ನಡೆಸುತ್ತಾ ಸಾಗಿದರು. ಅಲ್ಲದೇ ಬೆಟ್ಟದ ಮೇಲ್ಭಾಗದಲ್ಲಿನ ಶಿಲುಬೆಯ ತಳಭಾಗದಲ್ಲಿ ಇರುವ ಮುನೇಶ್ವರ ಸ್ವಾಮಿಯ ಕಲ್ಲುಗಳು ಹಾಗೂ ಮುನಿಸೇವೆ ಮಾಡುತ್ತಿದ್ದ ಕುರುಹುಗಳ ವೀಕ್ಷಣೆ ಮಾಡಿದ್ರು.
ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಏಸುಕ್ರಿಸ್ತನ ಪ್ರತಿಮೆಯ ಜಾಗವವನ್ನು ವೀಕ್ಷಣೆ ಮಾಡಿದರು. ಅಲ್ಲದೇ ಕಪಾಲ ಬೆಟ್ಟ ಈ ಹಿಂದೆ ಮುನೇಶ್ವರ ಬೆಟ್ಟವಾಗಿತ್ತು ಅದಕ್ಕೆ ಸಂಬಂಧಪಟ್ಟ ಕುರುಹುಗಳು ಶಿಲುಬೆಯಿರುವ ಜಾಗದಲ್ಲಿದೆ ಎಂದರು. ಕಪಾಲ ಬೆಟ್ಟ ಸಾಕಷ್ಟು ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಯಾವುದೇ ರೀತಿ ಘಟನೆ ನಡೆದರೂ ಇದೀಗ ಸಿಸಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಲಿದ್ದು, ಏಸುವಿನ ಮಾದರಿ ಪ್ರತಿಮೆ ಬಳಿ ಹಾಗೂ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ನಾಲ್ಕು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಕಪಾಲ ಬೆಟ್ಟದ ಭೇಟಿ ವಿಚಾರವಾಗಿ ಮಾತನಾಡಿದ ಬಿಜೆಪಿ ಜಿಲ್ಲಾದ್ಯಕ್ಷ ಎಂ.ರುದ್ರೇಶ್, ಪ್ರತಿಮೆ ನಿರ್ಮಾಣದ ಜಾಗದ ವಸ್ತುಸ್ಥಿತಿ ಹೇಗಿದೆ, ಪ್ರತಿಮೆ ನಿರ್ಮಾಣಕ್ಕು ಮುನ್ನ ಬೆಟ್ಟದ ವಸ್ತುಸ್ಥಿತಿ ಹೇಗಿತ್ತು ಎಂಬ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವರದಿ ಕೇಳಿದ್ದು ಜಾಗದ ವರದಿಯನ್ನ ನೀಡಲಿದ್ದೇವೆ. ಅದರ ಮುಂದಿನ ಕಾನೂನು ಕ್ರಮ ಏನಿದೆ ಅವರು ತೆಗೆದುಕೊಳ್ಳಲಿದ್ದಾರೆ. ಅಲ್ಲದೇ ಕೆಲವೇ ದಿನಗಳಲ್ಲಿ ಅವರು ಕೂಡಾ ಕಪಾಲ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಏಸುಕ್ರಿಸ್ತನ ಪ್ರತಿಮೆ ನಿರ್ಮಾಣದ ಬೆಟ್ಟದ ತುದಿಗೆ ತೆರಳಲು ಮಣ್ಣಿನ ರಸ್ತೆ ಹಲವಾರು ವರ್ಷಗಳಿಂದ ಇದೆ. ಇತ್ತೀಚೆಗೆ ಪ್ರತಿಮೆಯ ಶಿಲಾನ್ಯಾಸದ ವೇಳೆ ರಸ್ತೆಯನ್ನ ಜೆಸಿಬಿ ಬಳಸಿ ಅಲ್ಪಸ್ವಲ್ಪ ದುರಸ್ಥಿ ಕಾರ್ಯ ನಡೆಸಲಾಗಿತ್ತು. ಆದರೆ ನಿನ್ನೆ ಕೆಲವರು ದಾರಿಯಲ್ಲಿ ಕೆಲವು ಕಡೆಗಳಲ್ಲಿ ಗುಂಡಿಗಳನ್ನು ತೋಡಿದ್ದು ವಾಹನಗಳು ಓಡಾಡಂತೆ ಮಾಡಿದ್ದಾರೆ. ಸುಮಾರು ಎರಡ್ಮೂರು ಅಡಿಗಳಷ್ಟು ಆಳವಾಗಿ ನಾಲ್ಕು ಕಡೆಗಳಲ್ಲಿ ಗುಂಡಿಗಳನ್ನು ತೆಗೆದಿದ್ದು ವಾಹನಗಳು ಬೆಟ್ಟದ ಮೇಲ್ಭಾಗಕ್ಕೆ ತೆರಳದಂತೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಈ ರೀತಿ ಮಾಡಿ ಬೆಟ್ಟಕ್ಕೆ ಬರುವವರ ವಿರುದ್ಧ ಹಗೆತನ ಸಾಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದರು.
ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 69ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಶುಭದಿನದ ಅಂಗವಾಗಿ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಇಂದು ಮುಂಜಾನೆ ನಗರದ ವಿನೋಬನಗರ ಮಾರುಕಟ್ಟೆ ಆವರಣಕ್ಕೆ ಆಗಮಿಸಿದ ಸಚಿವರು, ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅವರ ಅಭಿಮಾನಿಗಳು ಒಟ್ಟಿಗೆ ಸೇರಿ ರಸ್ತೆ ಹಾಗು ಚರಂಡಿ ಸ್ವಚ್ಛತೆ ನಡೆಸಿದರು. ಈ ಮೂಲಕ ಮೋದಿ ಅವರು ಆರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಅಡಿ ಕೆಲಸ ಮಾಡಿದರು. ಈಶ್ವರಪ್ಪ, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪೊರಕೆ ಹಿಡಿದು ವಿನೋಬನಗರದ ರಸ್ತೆ, ಚರಂಡಿ ಸ್ವಚ್ಛಗೊಳಿಸಿ ತಮ್ಮ ನೆಚ್ಚಿನ ನಾಯಕನಿಗೆ ಶುಭಕೋರಿ, ನಮೋ ಜನ್ಮದಿನವನ್ನು ಆಚರಿಸಿದರು.
ಹಾಗೆಯೇ ಮೋದಿ ಅವರಿಗಾಗಿ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿದರು. ಈ ವೇಳೆ ಜಿ.ಟಿ ದೇವೇಗೌಡ ಸೇರಿದಂತೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.
ಜಿ.ಟಿ ದೇವೇಗೌಡ ಅವರು ಬಿಜೆಪಿ ನಾಯಕರ ಜೊತೆ ಪೂಜೆಯಲ್ಲಿ ಭಾಗಿಯಾದಲ್ಲದೆ ನರೇಂದ್ರ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಹೆಸರಿನಲ್ಲಿ ಅರ್ಚನೆ ಕೂಡ ಮಾಡಿಸಿದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಯಕರು ಮೋದಿಗೆ ಶುಭ ಹಾರೈಸಿದರು.
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದಾರೆ.
ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ವೀರಗಾಸೆ, ಡೊಳ್ಳು ಕುಣಿತದೊಂದಿಗೆ ನಳಿನ್ ಕುಮಾರ್ ಅವರನ್ನು ಸ್ವಾಗತಿಸಲಾಯಿತು.
ಈ ವೇಳೆ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ತಮ್ಮ ನೂತನ ರಾಜ್ಯಾಧ್ಯಕ್ಷರಿಗೆ ಸ್ವಾಗತ ಕೋರಿದರು. ಈ ವೇಳೆ ಇಡೀ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೇ ಬಿಜೆಪಿ ಮಯವಾಗಿತ್ತು. ಅಲ್ಲದೆ ಬಿಜೆಪಿ ಮಹಿಳಾ ಕಾರ್ಯಕರ್ತರು ಅವರಿಗೆ ಆರತಿ ಬೆಳಗಿ ಪ್ರೀತಿಯಿಂದ ಸ್ವಾಗತಿಸಿದರು. ತೆರೆದ ವಾಹನದಲ್ಲಿ ನಳಿನ್ ಕುಮಾರ್ ಅವರು ಮೆರವಣಿಗೆ ನಡೆಸಲಿದ್ದು, ಅವರಿಗೆ ಬಿಜೆಪಿ ಶಾಸಕರು ಹಾಗೂ ಸಂಸದರು ಸಾಥ್ ನೀಡಲಿದ್ದಾರೆ.
ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭ ಇಂದು ಬೆಳಗ್ಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನೂತನ ರಾಜ್ಯಾಧಕ್ಷರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಆಯ್ಕೆಯಾಗಿರುವ ಕಟೀಲ್ 12 ವರ್ಷಗಳ ಕಾಲ ಆರ್‍ಎಸ್‍ಎಸ್‍ನ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡಿದ್ದಾರೆ. ಭಾನುವಾರವೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಲ್ಲಿ ಅರ್ಚನೆ ಮಾಡಿಸಿದ ಕಾರ್ಯಕರ್ತರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಷ್ಟ ದಿಕ್ಕಿನಲ್ಲೂ ತಡೆ ಒಡೆದು ಗ್ರಹಗತಿಗಳಿಗೆ ಶಾಂತಿ ಮಾಡಿಸಿದರು. ಇದನ್ನು ಓದು: ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಸಿಎಂ ಎಚ್‍ಡಿಕೆ!
ಹಾಸನದ ಮೂರು ಗ್ರಹಗಳಾದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಇಬ್ಬರು ಮಕ್ಕಳಾದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಿಎಂ ಕುಮಾರಸ್ವಾಮಿ, ಕನಕಪುರದ ಎರಡು ಗ್ರಹಗಳಾದ ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಮೈಸೂರಿನ ಒಂದು ಗ್ರಹ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ. ಇದನ್ನು ಓದು: ಹುಡುಗಾಟಿಕೆ ಆಡ್ಬಿಟ್ರಿ ನೀವು- ಬಿಎಸ್‍ವೈ ಆಡಿಯೋಗೆ ಹೈಕಮಾಂಡ್ ಕೆಂಡಾಮಂಡಲ
ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಮುಕ್ತವಾಗಲಿ ಹಾಗೂ ಅವರು ಶೀಘ್ರದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.
ಮಂಡ್ಯ: ಗದ್ದೆಯಲ್ಲಿ ಕೃಷಿ ಕೆಲಸಕ್ಕೆ ಮುಂದಾದ ಮುಖ್ಯಮಂತ್ರಿಯನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಟೀಕಿಸಿದ್ದಾರೆ.
ಮುಖ್ಯಮಂತ್ರಿಗಳೇ ನೀವು ಬಣ್ಣ ಹಚ್ಚದೇ ನಾಟಕ ಮಾಡುತ್ತಿದ್ದೀರಾ? ಮುಖ್ಯಮಂತ್ರಿಗಳೇ ನಮಗೆ ಕೂಲಿ ಕೊಡುವ ಶಕ್ತಿಯಿಲ್ಲ. ನಮಗೆ ಮುಯ್ಯಾಳಿನ (ಕೆಲಸಗಾರರ) ಕೊರತೆಯಿದೆ. ನಮ್ಮ ಗದ್ದೆಗೂ ಬಂದು ನಾಟಿ ಕೆಲಸ ಮಾಡಿ.. ಮುಯ್ಯಾಳಿನ ರೀತಿ ಕೆಲಸ ಮಾಡಿ ಅಂತ ಕುಮಾರಸ್ವಾಮಿಯವರ ನಡೆಯನ್ನು ವ್ಯಂಗ್ಯವಾಡಿದ್ದಾರೆ.
ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯ ಎಂಬ ಬಿಜೆಪಿ ಕಾರ್ಯಕರ್ತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಈ ರೀತಿ ಟೀಕಿಸಿದ್ದಾರೆ. ಅಲ್ಲದೇ ಈ ಕುರಿತು ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಕೂಡ ಸಲ್ಲಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿರುವ ಮೈಷುಗರ್ ಕಾರ್ಖಾನೆ, ಕಬ್ಬಿನ ಬಾಕಿ ಹಣ ಸೇರಿ ಹಲವು ಸಮಸ್ಯೆಯಿದೆ. ಹೀಗಾಗಿ ಮೊದಲು ನಾಟಕ ಬಿಟ್ಟು ಮೊದಲು ಅವುಗಳನ್ನು ಬಗೆಹರಿಸಿ. ನಂತರ ನಾಟಿ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ಶಿವಕುಮಾರ್ ಅವರು ಕೆರಗೋಡು ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿದ್ದಾರೆ.
ಸಿಎಂ ಕಾರ್ಯಕ್ರಮ:
ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆ ಬಯಲಿಗೆ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಗದ್ದೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗ್ಗೆ ನಾಟಿ ಕೆಲಸ ಮಾಡಲಿದ್ದಾರೆ. ಸಿಡಿಎಸ್ ನಾಲೆ ಪಕ್ಕದಲ್ಲೇ ಇರುವ ವಿಶಾಲವಾದ ಗದ್ದೆ ಬಯಲಿನಲ್ಲಿ ಸುಮಾರು 5 ಎಕರೆಯಷ್ಟು ಜಾಗವನ್ನು ಮುಖ್ಯಮಂತ್ರಿಗಳ ನಾಟಿ ಕೆಲಸಕ್ಕೆಂದು ತಯಾರಿ ಮಾಡಲಾಗಿದೆ. ರೈತರಾದ ಮಹದೇವಮ್ಮ, ದೇವರಾಜು, ಮಹೇಶ, ಹೇಮಲತ, ಮಾಯಮ್ಮ ಅವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ರೈತರೂ ಕೂಡ ನಾಟಿ ಕೆಲಸಕ್ಕೆ ಸಾಥ್ ನೀಡಲಿದ್ದಾರೆ. ಸಿಎಂ ಕುಮಾರಸ್ವಾಮಿ ಅವರಿಗೆ 100 ಮಹಿಳೆಯರು ಮತ್ತು 50 ರೈತ ಪುರುಷರು ಸಾಥ್ ಕೊಡಲಿದ್ದಾರೆ. ಜೊತೆಗೆ 25 ಜೋಡಿ ಎತ್ತುಗಳು ಮೂಲಕ ನಾಟಿ ಕೆಲಸ ಮಾಡಲಾಗುತ್ತದೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಜಯನಗರದ ಶಾಕಂಬರಿ ನಗರ ವಾರ್ಡ್ ಕಾರ್ಯಕರ್ತ ಧೀರಜ್ ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಜಯನಗರ ಚುನಾವಣೆ ವೈಷಮ್ಯ ಹಿನ್ನೆಲೆಯಲ್ಲಿ ಹಲ್ಲೆ ನಡೆದಿರುವ ಸಾಧ್ಯತೆಯಿದ್ದು, ಗಾಯಾಳು ಧೀರಜ್ ಅವರನ್ನು ಸಾರಕ್ಕಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ದಕ್ಷಿಣ ವಲಯ ಡಿಸಿಪಿ ಶರಣಪ್ಪ ಭೇಟಿ ನೀಡಿ ಪ್ರತಿಭಟನಾರರನ್ನು ಸಮಧಾನಪಡಿಸಿದ್ರು. ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈಯಕ್ತಿಕ ಕಾರಣ ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಎಂಟು ದಿನಗಳ ಹಿಂದೆ ನಿಗೂಢ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ತಾಲೂಕಿನ ಶಂಭೂರಿನ ಎಎಂಆರ್ ಡ್ಯಾಮ್ ಬಳಿ ನದಿ ಕಿನಾರೆಯಲ್ಲಿ ಶವ ಸಿಕ್ಕಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ನಿವಾಸಿ, ಬಿಜೆಪಿ ಕಾರ್ಯಕರ್ತ ರಮೇಶ್ ಗೌಡ(45) ಕಳೆದ ಜೂನ್ 2ರ ಬಳಿಕ ನಾಪತ್ತೆಯಾಗಿದ್ದರು.
ಅಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಯಾರೋ ಆತ್ಮೀಯರು ಕರೆದಿದ್ದಾರೆಂದು ಹೇಳಿ ತುರ್ತಾಗಿ ಮನೆಯಿಂದ ತೆರಳಿದ್ದ ರಮೇಶ್ ಗೌಡ, ಆ ಬಳಿಕ ಕಾಣೆಯಾಗಿದ್ದರು. ಹೀಗಾಗಿ ಎರಡು ದಿನಗಳ ಬಳಿಕ ಅವರ ಪತ್ನಿ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಇದೀಗ ರಮೇಶ್ ಗೌಡರ ಶವ ಬಂಟ್ವಾಳ ಬಳಿಯ ಜಲಾಶಯ ಪಕ್ಕದಲ್ಲಿ ಪತ್ತೆಯಾಗಿದ್ದು, ಕೊಲೆಗೈದು ಬಿಸಾಕಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಶವದ ತಲೆಯ ಭಾಗಕ್ಕೆ ಗಾಯ ಆಗಿರುವುದು ರಮೇಶ್ ಕೊಲೆ ನಡೆದಿದೆಯೇ ಅನ್ನುವ ಬಗ್ಗೆ ಶಂಕೆಗೆ ಕಾರಣವಾಗಿದೆ. ಬಂಟ್ವಾಳ ಮತ್ತು ಉಪ್ಪಿನಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.