Tag: BJP Candidates

  • ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ – ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Polls) ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್‌ ಬವಾಂಕುಲೆ ಸೇರಿದಂತೆ 99 ಅಭ್ಯರ್ಥಿಗಳಿಗೆ (Candidates) ಟಿಕೆಟ್‌ ನೀಡಿದೆ.

    ನಾಗ್ಪುರ ನೈಋತ್ಯ (ಸೌತ್‌ವೆಸ್ಟ್‌) ಕ್ಷೇತ್ರದಿಂದ ದೇವೇಂದ್ರ ಫಡ್ನವಿಸ್ (Devendra Fadnavis), ಕಮ್ತಿ ಕ್ಷೇದ್ರದಿಂದ ಬವಾಂಕುಲೆ ಅವರನ್ನ ಕಣಕ್ಕಿಳಿಸಿದೆ. ಉಳಿದಂತೆ ಘಾಟ್‌ಕೋಪರ್ ಪಶ್ಚಿಮದಿಂದ ರಾಮ್ ಕದಮ್, ಚಿಕ್ಲಿಯಿಂದ ಶ್ವೇತಾ ಮಹಾಲೆ ಪಾಟೀಲ್, ಭೋಕರ್‌ನಿಂದ ಶ್ರೀಜಯಾ ಅಶೋಕ್ ಚವಾಣ್ ಮತ್ತು ಕಂಕಾವ್ಲಿಯಿಂದ ನಿತೀಶ್ ರಾಣೆ ಅವರನ್ನು ಕಣಕ್ಕಿಳಿಸಿದೆ.

    ಶ್ರೀಜಯಾ ಅಶೋಕ್‌ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿಯಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದನ್ನೂ ಓದಿ: ರಾಜಸ್ತಾನ| ಬಸ್-ರಿಕ್ಷಾ ನಡುವೆ ಭೀಕರ ಅಪಘಾತ; 8 ಮಕ್ಕಳು ಸೇರಿ 12 ಮಂದಿ ಸಾವು

    288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಹಾಲಿ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಶತಾಯಗತಾಯ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿದೆ. ಹರಿಯಾಣ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಬಾರಿಸಿರುವ ಬಿಜೆಪಿ ಇದೀಗ ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ತಯಾರಿ ನಡೆಸಿದೆ.

    4.97 ಕೋಟಿ ಮತದಾರರು ನೋಂದಣಿ:
    ಈ ಬಾರಿ ಮಹಾರಾಷ್ಟ್ರ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. 26 ಜಿಲ್ಲೆಗಳ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 4.97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 1,00,186 ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸೌಕರ್ಯಗಳನ್ನು ನಿರ್ಮಿಸಲಾಗುವುದು. ಮತದಾನದ ಲೈನ್‌ನಲ್ಲಿ ಕುರ್ಚಿ ಮತ್ತು ಟೇಬಲ್ ಹಾಕಲು ಸೂಚಿಸಲಾಗಿದೆ. ಇದು ವೃದ್ಧ ಮತದಾರರಿಗೆ ಅನುಕೂಲವಾಗಲಿದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿರಿಯರ ಮತ ಪಡೆಯುವ ರೂಟ್‌ಮ್ಯಾಪ್ ರಾಜಕೀಯ ಪಕ್ಷಗಳಿಗೆ ನೀಡಲಾಗುವುದು. ಮತದಾನದ ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಅಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

  • Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

  • ಮದಕರಿ ಡೈಲಾಗ್ ಹೇಳಿದ್ರೆ ಜಾತೀಯತೆ ಮಾಡ್ತೀನಿ ಅಂತಾರೆ ಏನ್ಮಾಡ್ಲಿ – ಕಿಚ್ಚ ಸುದೀಪ್

    ಮದಕರಿ ಡೈಲಾಗ್ ಹೇಳಿದ್ರೆ ಜಾತೀಯತೆ ಮಾಡ್ತೀನಿ ಅಂತಾರೆ ಏನ್ಮಾಡ್ಲಿ – ಕಿಚ್ಚ ಸುದೀಪ್

    ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ರಾಜಕೀಯ ಅಖಾಡಕ್ಕಿಳಿದಿರುವ ನಟ ಕಿಚ್ಚ ಸುದೀಪ್ (Kiccha Sudeep) ಸ್ಟಾರ್ ಪ್ರಚಾರಕರಾಗಿ ಬಿಜೆಪಿ ಅಭ್ಯರ್ಥಿಗಳ (BJP Candidates) ಪರ ಪ್ರಚಾರ ನಡೆಸುತ್ತಿದ್ದಾರೆ.

    ಮಂಗಳವಾರ ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ನಗರ ಹಾಗೂ ಬೀಳಗಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದರು. ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ, ರೋಡ್ ಶೋ ಆರಂಭಿಸಿದ ಕಿಚ್ಚ ಸುದೀಪ್, ನಗರದ ಕಟ್ಟೆ ಕೆರೆಯಿಂದ, ದೇಸಾಯಿ ಸರ್ಖ್ ವರೆಗೆ ರೋಡ್ ಶೋ ನಡೆಸಿದರು. ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿಯೂ ಪ್ರಚಾರ ನಡೆಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಕಿಚ್ಚ ಸುದೀಪ್ ಹೋದಲೆಲ್ಲಾ ರಸ್ತೆಯುದ್ದಕ್ಕೂ ಅಭಿಮಾನಿಗಳು ಕಿಕ್ಕಿರಿದಿದ್ದರು. ಬೀಳಗಿ ಕ್ಷೇತ್ರದ ಅಂಬೇಡ್ಕರ್ ವೃತ್ತದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಗಳ ಒತ್ತಾಯದ ಮೇರೆಗೆ `ಸಾವು ಅಂದ್ರೆ ಭಯಪಡೋದಕ್ಕೆ ಗಲ್‌ಗಲ್ಲಿ ತಿರ್ಗೋ ಕಂತ್ರಿ, ಕಜ್ಜಿ ಗೂಂಡಾ ರೌಡಿ ಅನ್ಕೊಂಡ್ರೆನೋ ನನ್ನನ್ನ, ಮದಕರಿ…. ವೀರ ಮದಕರಿ…’ ಚಿತ್ರದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಇದೇ ವೇಳೆ ಮಾತನಾಡಿ, ನೀವು ಮದಕರಿ ಡೈಲಾಗ್ ಕೇಳ್ತೀರಾ ಸರ್, ಆದ್ರೆ ನಾನು ಜಾತಿಯತೆ ಮಾಡ್ತೀನಿ ಅಂತಾರೆ, ಆದ್ರೆ ನಾವು ಸಿನೆಮಾರಂಗದವ್ರು. ಆದ್ರೆ ಮೂರು ಬಾರಿ ಗೆದ್ದಿರುವ ನಿರಾಣಿಯವರ ಮೇಲೆ ಜನರ ಪ್ರೀತಿ ಸಾಕಷ್ಟಿದೆ. 75 ಸಾವಿರ ಜನರಿಗೆ ನಿರಾಣಿಯವರು ಉದ್ಯೋಗ ನೀಡಿದ್ದಾರೆ. ಈ ಬಾರಿಯೂ ಬಹುಮತದಿಂದ ನಿರಾಣಿಯವರನ್ನ ಗೆಲ್ಲಿಸಿ ಅಂತಾ ಮನವಿ ಮಾಡಿದರು.

  • ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ

    ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ

    ನವದೆಹಲಿ: ಬಿಜೆಪಿ ಅಭ್ಯರ್ಥಿಗಳ (BJP Candidates) ಪಟ್ಟಿ ಬಿಡುಗಡೆ ಸಂಬಂಧ ಹಲವಾರು ಸುತ್ತಿನ ಮಾತುಕತೆಯಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. ದೊಡ್ಡ ಸಂಖ್ಯೆಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ (Amitshah) ಅವರು ದೆಹಲಿಗೆ ಬಂದ ಮೇಲೆ ಮತ್ತೊಮ್ಮೆ ಚರ್ಚೆ ಮಾಡಲಿದ್ದೇವೆ. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ನಿಮ್ಮ ಅನುಭವ ಬೇಕು ಅಂತಾ ಹೇಳಿದ್ದೆವು. ಆದರೆ ಅವರು ನಿರ್ಧಾರ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ತಿರ್ಮಾನ ಮಾಡ್ತಾರೆ. ರಾಜಕಾರಣದಲ್ಲಿ ಅವರು ಮುಂದುವರಿಯಬೇಕು. ಚುನಾವಣೆಗೆ ನಿಲ್ಲೋದು ಬಿಡೋದು ಪಕ್ಷ ತೀರ್ಮಾನ ಮಾಡುತ್ತೆ ಎಂದರು.

    ಕಾಂಗ್ರೆಸ್ ನಲ್ಲಿ 92 ವರ್ಷದವರಿಗೆ ಟಿಕೆಟ್ ನೀಡಿದೆ. ಅವರಿಗೂ ನಮ್ಮಗೂ ವ್ಯತಾಸ ಇದೆ. ನಮ್ಮ ನೇತೃತ್ವ ಮತ್ತು ಆದರ್ಶ ವಿಭಿನ್ನವಾಗಿವೆ. ಅದಕ್ಕಾಗಿ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತದೆ.

  • ಗುಜರಾತ್ ಗೆಲ್ಲಲು ‘ಯುವ’ ಸ್ಟ್ರಾಟರ್ಜಿ – ವಿದ್ಯಾವಂತ ಯುವಕರೇ ಬಿಜೆಪಿ ಅಭ್ಯರ್ಥಿಗಳು

    ಗುಜರಾತ್ ಗೆಲ್ಲಲು ‘ಯುವ’ ಸ್ಟ್ರಾಟರ್ಜಿ – ವಿದ್ಯಾವಂತ ಯುವಕರೇ ಬಿಜೆಪಿ ಅಭ್ಯರ್ಥಿಗಳು

    ಗಾಂಧೀನಗರ: ಏಳನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ (BJP), ಈ ಬಾರಿ ಟಿಕೆಟ್ ಹಂಚಿಕೆಯಲ್ಲಿ ಬಾರಿ ಲೆಕ್ಕಾಚಾರ ಹಾಕಿದೆ. ಇತ್ತೀಚೆಗೆ ಪ್ರಕಟಗೊಂಡ 160 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಲ್ಲಿ ಯುವಕರಿಗೆ ಆದ್ಯತೆ ನೀಡುವ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದೆ.

    182 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituency) 160 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಗೊಂಡಿದ್ದು, ಇದರಲ್ಲಿ 11 ಮಂದಿ ಅಭ್ಯರ್ಥಿಗಳು 40 ವರ್ಷದೊಳಗೆ, 53 ಅಭ್ಯರ್ಥಿಗಳು 50 ವರ್ಷದೊಳಗಿನವರಾಗಿದ್ದಾರೆ. 2017ರ ಚುನಾವಣೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಬದಲಾವಣೆಯಾಗಿದ್ದು, ಕಳೆದ ಬಾರಿ 60 ವರ್ಷ ಚುನಾವಣೆಗೆ ವಯಸ್ಸಿನ ಮಾನದಂಡ ಇಡಲಾಗಿತ್ತು.

    ಆಡಳಿತ ವಿರೋಧಿ ಅಲೆಯನ್ನು ತಡೆಯಲು, ಶಾಸಕರ ಮೇಲಿನ ಅಸಮಾಧಾನದಿಂದ ಪಕ್ಷಕ್ಕೆ ಡ್ಯಾಮೇಜ್ ಆಗದ ಹಾಗೇ ನೋಡಿಕೊಳ್ಳುವ ದೃಷ್ಟಿಯಿಂದ ಯುವಕರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಚುನಾವಣೆಯಿಂದ ಹಿಂದೆ ಸರಿಯುವಂತೆ ಮಾಡಿದೆ. ಈ ಬಾರಿಯ ಚುನಾವಣೆ ಬಿಜೆಪಿ, ಕಾಂಗ್ರೆಸ್ ಮತ್ತು ಆಪ್ ನಡುವೆ ತ್ರಿಕೋನ ಸ್ಪರ್ಧೆಯಾಗಿದ್ದು, ಆಪ್ ಬಿಜೆಪಿ ಬಲಿಷ್ಠವಾಗಿರುವ ನಗರ ಪ್ರದೇಶಗಳಲ್ಲಿ ಯುವ ಮುಖಗಳಿಗೆ ಆದ್ಯತೆ ನೀಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಕೂಡಾ ತನ್ನ ತಂತ್ರ ಬದಲಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗುತ್ತಿದೆ.

    ಹಾರ್ದಿಕ್ ಪಟೇಲ್, ಅಲ್ಪೇಶ್ ಠಾಕೂರ್ ನಂತಹ ಯುವ ಮತ್ತು ಸಮುದಾಯ ನಾಯಕರನ್ನು ಬಳಸಿಕೊಂಡು ಜಾತಿ ಸಮೀಕರಣದಲ್ಲೂ ಬಿಜೆಪಿ ಮತ ಗಳಿಸಲು ತಂತ್ರರೂಪಿಸಿದೆ. ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ 49 ಒಬಿಸಿ ಮುಖಗಳಿದ್ದು, 17 ಕೋಲಿ ಮತ್ತು 14 ಠಾಕೋರ್‍ಗಳಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿಯಿಂದ 40 ಪಟೇಲ್ ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕಿಳಿದಿದ್ದು, 23 ಲೆಯುವಾ ಪಟೇಲ್ ಮತ್ತು 17 ಕಡ್ವಾ ಪಟೇಲ್‍ಗಳು ಕಣಕ್ಕಿಳಿದಿದ್ದಾರೆ. 37 ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು, 14 ಮಹಿಳಾ ಅಭ್ಯರ್ಥಿಗಳು ಮತ್ತು 17 ಕ್ಷತ್ರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

    ಆಡಳಿತವನ್ನು ಸುಧಾರಿಸಲು ಮತ್ತು ಯುವಕರಿಗೆ ಬಲವಾದ ಸಂದೇಶವನ್ನು ನೀಡಲು ಆಡಳಿತ ಪಕ್ಷವು ವಿದ್ಯಾವಂತ ವರ್ಗಕ್ಕೆ ಪ್ರಾಮುಖ್ಯತೆಯನ್ನು ನೀಡಿದೆ. ಬಿಜೆಪಿಯ ಅಭ್ಯರ್ಥಿಗಳ ಪೈಕಿ, 13 LLB, 1 LLM, 4 ವೈದ್ಯರು, 4 PHD, 11 ಇಂಜಿನಿಯರ್, 6 ಶಿಕ್ಷಕರು ಮತ್ತು 2 MBA ಪದವೀಧರರು ಒಳಗೊಂಡಿದ್ದಾರೆ.

    ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ. 182 ಸದಸ್ಯರ ರಾಜ್ಯ ಅಸೆಂಬ್ಲಿಯ ಅವಧಿಯು 2023ರ ಫೆಬ್ರವರಿ 18 ರಂದು ಅಂತ್ಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]