Tag: BJP congress

  • ನಾರಿಶಕ್ತಿ ಅಪಮಾನಗೊಳಿಸುವ ʻಸ್ತ್ರೀ ದ್ವೇಷಿʼಗಳಿರುವುದು ಬೇಸರ – ಶಾಮನೂರು ಶಿವಶಂಕರಪ್ಪ ವಿರುದ್ಧ ಸೈನಾ ನೆಹ್ವಾಲ್‌ ಕಿಡಿ

    ನಾರಿಶಕ್ತಿ ಅಪಮಾನಗೊಳಿಸುವ ʻಸ್ತ್ರೀ ದ್ವೇಷಿʼಗಳಿರುವುದು ಬೇಸರ – ಶಾಮನೂರು ಶಿವಶಂಕರಪ್ಪ ವಿರುದ್ಧ ಸೈನಾ ನೆಹ್ವಾಲ್‌ ಕಿಡಿ

    ನವದೆಹಲಿ: `ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ’ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಹೇಳಿಕೆಗೆ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ (Saina Nehwal) ಕಿಡಿ ಕಾರಿದ್ದಾರೆ. ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು ಶಾಮನೂರು ಅವರನ್ನ ʻಸ್ತ್ರೀ ದ್ವೇಷಿʼ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಸೈನಾ ನೆಹ್ವಾಲ್‌ ಹೇಳಿದ್ದೇನು?
    ಮಹಿಳೆಯನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಬೇಕು ಅಂತಾ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಯಸಿದ್ದಾರೆ. ಆದ್ರೆ ಪ್ರತಿ ಮಹಿಳೆಯೂ ಹೋರಾಡುತ್ತಾಳೆ ಅನ್ನೋ ತತ್ವದಲ್ಲಿ ನಂಬಿಕೆಯಿಟ್ಟುರುವ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ (Gayatri Siddheshwara) ಅವರು ಕಣದಲ್ಲಿದ್ದಾರೆ. ಇದನ್ನೂ ಓದಿ: `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

    ನಾನು ಮೈದಾನದಲ್ಲಿ ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು? ಎಲ್ಲಾ ಹುಡುಗಿಯರು ಮತ್ತು ಮಹಿಳೆಯರು ತಮಗೆ ಇಷ್ಟವಾದ ಯಾವುದೇ ಕ್ಷೇತ್ರದಲ್ಲಿ ದೊಡ್ಡದನ್ನು ಸಾಧಿಸಬೇಕು ಎಂದು ಕನಸು ಕಾಣುತ್ತಿರುವಾಗ ಹಾಗೆ ಏಕೆ ಹೇಳಬೇಕು? ಒಂದೆಡೆ ನಾವು ನಾರಿ ಶಕ್ತಿ ಕೋ ವಂದನ್ (ನಾರಿ ಶಕ್ತಿಗೆ ವಂದನೆ) ಮಾಡುತ್ತಿದ್ದೇವೆ. ನಮ್ಮ ಪ್ರಧಾನಿ ಮೋದಿಯವರ (PM Modi) ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಇನ್ನೊಂದೆಡೆ, ನಾರಿ ಶಕ್ತಿಯನ್ನು ಅಪಮಾನಗೊಳಿಸುವ ಮತ್ತು ಸ್ತ್ರೀ ದ್ವೇಷದ ಜನ ಇರುವುದು ನಿಜಕ್ಕೂ ಅಸಮಾಧಾನ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

    ಶಾಮನೂರು ಹೇಳಿದ್ದೇನು?
    ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿ, ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ನಾಲಿಗೆ ಹರಿಬಿಟ್ಟಿದ್ದರು. ಇದೇ ವೇಳೆ ವಿರೋಧ ಪಕ್ಷದವರು ಮೋದಿ.. ಮೋದಿ ಅಂತಾರೆ. ಆದರೆ ಮೋದಿ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಸದ್ಯ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

  • ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    ವಿಜಯಪುರ: ಯಾರೇ ಮಾತಾಡಿದ್ರು ಜೈಲಿಗೆ (Jail) ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

    ಚಕ್ರವರ್ತಿ ಸೂಲಿಬೆಲೆಗೆ (Chakravarti Sulibele) ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರವಾಗಿ ಟ್ವೀಟ್ ಮೂಲಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಇದು ತಾಲಿಬಾನ್ ಅಲ್ಲ ಕರ್ನಾಟಕ ಎಂದ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕೆ ಇದು ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು. ಎಫ್‌ಐಆರ್ ಮಾಡಿಸ್ತೀವಿ, ಜೈಲಿಗೆ ಕಳಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರಾ? ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಂತ್ರಿಗಳು iಟಿಣoಟeಡಿಚಿಟಿಣ ಆಗಬಾರದು ಎಂದು ಟ್ವೀಟ್ ಮಾಡುವ ಮೂಲಕ ಯತ್ನಾಳ್ ಕಾಂಗ್ರೆಸ್ ಸರ್ಕಾರದ ಮಂತ್ರಿಗಳ ಕಾಲೆಳೆದಿದ್ದಾರೆ. ಇದನ್ನೂ ಓದಿ: ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಆಟೋ ಚಾಲಕರಿಗೆ ಹೆಚ್ಚಾಯ್ತು ಆತಂಕ

  • ಕಂಡೀಷನ್‌ಗಳ ಮೂಲಕ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ: ಪ್ರಹ್ಲಾದ್ ಜೋಶಿ

    ಕಂಡೀಷನ್‌ಗಳ ಮೂಲಕ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ: ಪ್ರಹ್ಲಾದ್ ಜೋಶಿ

    ನವದೆಹಲಿ: ಕಂಡೀಷನ್‌ಗಳ (Conditions) ಬಗ್ಗೆ ಮೊದಲೇ ಹೇಳದ ಕಾಂಗ್ರೆಸ್ (Congress) ಈಗ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗ್ಯಾರಂಟಿಗಳ (Guarantee) ವಿಚಾರದಲ್ಲಿ ಷರತ್ತುಗಳನ್ನು ವಿಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನವದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ಕಂಡೀಷನ್ ಹಾಕುವ ಮೂಲಕ ಯೋಜನೆಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಹಿಂದೆ ಎಲ್ಲರಿಗೂ ಫ್ರೀ ಅಂದವರು ಈಗ ಕಂಡೀಷನ್ ಹಾಕುತ್ತಿದ್ದಾರೆ. ಯುವನಿಧಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ಕಂಡೀಷನ್ ಹಾಕಿದ್ದಾರೆ ಎಂದು ಕಿಡಿಕಾರಿದರು.

    ಎಲ್ಲ ಯೋಜನೆಗಳಿಗೂ ಆನ್‌ಲೈನ್ ಅರ್ಜಿ ಹಾಕುವುದು ಕಡ್ಡಾಯವಾಗಿದೆ. ಈ ಮೂಲಕ ವೆರಿಫಿಕೇಷನ್ ಹೆಸರಿನಲ್ಲಿ ಯೋಜನೆಯನ್ನು ಜನರಿಗೆ ಮತ್ತಷ್ಟು ವಿಳಂಬ ಮಾಡುವ ಲೆಕ್ಕಾಚಾರ ಕಾಂಗ್ರೆಸ್ ಹಾಕಿದೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ಗೆ ಜನರು ಉತ್ತರ ನೀಡಲಿದ್ದಾರೆ ಎಂದರು. ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

    ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಮತ್ತು ಆರ್‌ಎಸ್‌ಎಸ್ ನಿಷೇಧದ ಬಗ್ಗೆ ಮಾತನಾಡಿ, ಎಮ್ಮೆ ಹತ್ಯೆ ಮಾಡಿ ಎಂದು ನಾವು ಹೇಳಿಲ್ಲ. ಕೋಟ್ಯಂತರ ಜನರ ಮತ್ತು ಬಹುಸಂಖ್ಯಾತ ಜನರ ಭಾವನೆಗಳಿಗೆ ಧಕ್ಕೆಯಾಗಬಾರದು ಎನ್ನುವ ಕಾರಣಕ್ಕೆ ಗೋ ಹತ್ಯೆ ಬೇಡ ಎಂದು ಹೇಳಿದ್ದೇವೆ. ನಾವು ತಂದಿರುವ ಕಾನೂನು ಸೂಕ್ತವಾಗಿದೆ. ಅದನ್ನು ಅವರು ಮುಟ್ಟಬಾರದು ಎನ್ನುವುದು ನಮ್ಮ ಆಗ್ರಹ. ಆರ್‌ಎಸ್‌ಎಸ್ ಬ್ಯಾನ್ ಮಾಡುವ ಪ್ರಯತ್ನ ಅವರ ಮುತ್ತಾತ, ಅಜ್ಜಿ ಎಲ್ಲ ಮಾಡಿದ್ದಾರೆ ಅದಕ್ಕೆ ಪ್ರತಿಫಲ ಅನುಭವಿಸಿದ್ದಾರೆ. ಇವರು ಅನುಭವಿಸುತ್ತಾರೆ ಎಂದು ತಿರುಗೇಟು ನೀಡಿದರು.

    2-3 ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆ:
    ಇನ್ನು 2-3 ದಿನಗಳಲ್ಲಿ ವಿಪಕ್ಷ ನಾಯಕರು ಯಾರು ಎಂಬುದು ಗೊತ್ತಾಗಲಿದೆ. ನನ್ನ ಪ್ರಕಾರ ಇಷ್ಟೊತ್ತಿಗೆ ನಿರ್ಧಾರವಾಗಬೇಕಾಗಿತ್ತು. ಒಡಿಶಾದಲ್ಲಿ ರೈಲು ದುರ್ಘಟನೆ ಹಿನ್ನೆಲೆ ನಮ್ಮ ಕೇಂದ್ರ ನಾಯಕರು ಆ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಇನ್ನು 2-3 ದಿನದಲ್ಲಿ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ರಾಜ್ಯಾಧ್ಯಕ್ಷರ ಅವಧಿಯೂ ಈಗಾಗಲೇ ಮುಗಿದಿದೆ. ಪಕ್ಷ ಆ ವಿಚಾರದಲ್ಲೂ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜೋಶಿ ಹೇಳಿದರು. ಇದನ್ನೂ ಓದಿ: IAS ವರ್ಸಸ್‌ IPS: ರೂಪಾ ಮೌದ್ಗಿಲ್‌ಗೆ ಜಾಮೀನು

  • ಮಂಡ್ಯ ಜೆಡಿಎಸ್ ಕೋಟೆಯನ್ನು ಪುಡಿಗೈದ ಕಾಂಗ್ರೆಸ್

    ಮಂಡ್ಯ ಜೆಡಿಎಸ್ ಕೋಟೆಯನ್ನು ಪುಡಿಗೈದ ಕಾಂಗ್ರೆಸ್

    ಮಂಡ್ಯ: ಕಳೆದ ಬಾರಿ 7ಕ್ಕೆ 7 ಕ್ಷೇತ್ರಗಳನ್ನು ಗೆದ್ದಿದ್ದ ಜೆಡಿಎಸ್ ಈ ಬಾರಿ ಕೇವಲ 1 ಸ್ಥಾನವನ್ನು ಮಾತ್ರ ಗೆದ್ದುಕೊಂಡಿದೆ.

    ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಮತಗಳನ್ನು ವೃದ್ಧಿಸಿಕೊಂಡಿದ್ದು ಕಾಂಗ್ರೆಸ್ ಗೆಲುವಿಗೆ ಸಹಕಾರವಾಗಿದೆ. ಕಾಂಗ್ರೆಸ್ಸಿನ 5 ಮಂಂದಿ ಜೊತೆ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ. ಇದನ್ನೂ ಓದಿ: ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ

    ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಗೌಡ 60,845 ಮತಗಳನ್ನು ಗಳಿಸಿ ಜಯಗಳಿಸಿದ್ದಾರೆ. ಜೆಡಿಎಸ್ ಬಿ.ಆರ್ ರಾಮಚಂದ್ರ ಅವರು 58,996 ಮತಗಳನ್ನು ಗಳಿಸಿ ಸೋಲು ಕಂಡರು. ಬಿಜೆಪಿ ಅಶೋಕ್ ಜಯರಾಂ 30,240 ಮತ ಗಳಿಸಿ ಪೈಪೋಟಿ ನೀಡಿದ್ದಾರೆ. ಗಣಿಗ ರವಿಕುಮಾರ್ ಅವರು 1,849 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

    ಕೆ.ಆರ್.ಪೇಟೆ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ ಮಂಜು ಅವರು 79,844 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್ ದೇವರಾಜ್ ಅವರು 57,939 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆಸಿ ನಾರಾಯಣ ಗೌಡ 37,793 ಮತಗಳಿಸಿದ್ದಾರೆ. 21,905 ಮತಗಳ ಅಂತರದಲ್ಲಿ ಹೆಚ್ ಟಿ ಮಂಜು ಗೆಲುವು ಸಾಧಿಸಿದ್ದಾರೆ.

    ನಾಗಮಂಗಲ: ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ 89,801 ಮತಗಳಿಸಿ ಜಯ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಅವರು 85,688 ಮತಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುಧಾ ಶಿವರಾಮ್ 7,683 ಮತ ಗಳಿಸಿದ್ದಾರೆ. 4,113 ಮತಗಳ ಅಂತರದಲ್ಲಿ ಚೆಲುವರಾಯಸ್ವಾಮಿ ಗೆಲುವು ಸಾಧಿಸಿದ್ದಾರೆ.

    ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ 90,387 ಮತಗಳಿಸಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿ.ಎಸ್ ಪುಟ್ಟರಾಜು ಅವರು 79,424 ಮತಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್ 6,378 ಮತಗಳಿಸಿದ್ದಾರೆ. 10,963 ಮತಗಳ ಅಂತರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಗೆಲುವು ಸಾಧಿಸಿದ್ದಾರೆ.

    ಮಳವಳ್ಳಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿಎಂ ನರೇಂದ್ರ ಸ್ವಾಮಿ ಗೆಲುವು ಸಾಧಿಸಿದ್ದಾರೆ. ಇವರಿಗೆ ಜೆಡಿಎಸ್ ಅಭ್ಯರ್ಥಿ ಡಾ.ಕೆ ಅನ್ನದಾನಿ ಪೈಪೋಟಿ ನೀಡಿದ್ದಾರೆ.

    ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡ 72,234 ಮತಗಳಿಸಿ ಜಯ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರು 61,273 ಮತಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಅವರು 42,079 ಮತಗಳಿಸಿದ್ದಾರೆ. ಕಾಂಗ್ರೆಸ್ 10,961 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?

  • ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

    ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

    ಹುಬ್ಬಳ್ಳಿ: ಯಡಿಯೂರಪ್ಪ (BS Yediyurappa) ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಆರೋಪ ಮಾಡಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು. ಆದರೆ ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ (BJP) ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್‌ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.

    ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ನೇರವಾಗಿ ಯುದ್ಧಕ್ಕೆ ಬರೋರು ನೀವೇ ಬನ್ನಿ, ಯಡಿಯೂರಪ್ಪರನ್ನು ಯಾಕೆ ನಡುವೆ ತರುತ್ತಿರಿ? 50-60 ಜನ ಲಿಂಗಾಯತರ ಜೊತೆಗೆ ಸೇರಿ ಸಭೆ ಮಾಡಿದರೆ ಇಡೀ ಲಿಂಗಾಯತ ಸಮುದಾಯದ ಸಭೆ ಆಗಲ್ಲ ಎಂದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

    ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ. ಇವರೆಲ್ಲರೂ ಸೇರಿ ಸೆಂಟ್ರಲ್ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಾನು ಬಿಜೆಪಿಗೆ ದ್ರೋಹ ಮಾಡಿದ್ದೆ ಎಂದು ಹೇಳುತ್ತಾರೆ. ಈ ಬಗ್ಗೆ ಮಾತನಾಡಲು ಯಾರಿಗೂ ನೈತಿಕತೆ ಇಲ್ಲ. ಜಗದೀಶ್ ಶೆಟ್ಟರ್ ಎಂದೂ ಪಕ್ಷ ದ್ರೋಹ ಮಾಡಿಲ್ಲ. ನಾನು ಎಂದೂ ಬಿಜೆಪಿಗೆ ಮೋಸ ಮಾಡಿಲ್ಲ ಎಂದರು.

    ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಹರಿಹಾಯ್ದ ಶೆಟ್ಟರ್, ಧರ್ಮೇಂದ್ರ ಪ್ರಧಾನ್ ಕರೆ ಮಾಡಿದ ವೇಳೆಯಲ್ಲಿ ಜೋಶಿ ಕರೆದು ಮಾತನಾಡಬೇಕಿತ್ತು. ಆದರೆ ಎಲ್ಲಾ ಮುಗಿದ ಮೇಲೆ ಈಗ ಯಾಕೆ ಮಾತನಾಡುತ್ತಿರಿ? ಜೋಶಿ ಅವರೇ ಇದು ಬಹಳ ದಿನ ನಡೆಯೋದಿಲ್ಲ ಈ ರೀತಿಯ ರಾಜಕಾರಣ ನಡೆಯೋದಿಲ್ಲ. ಈ ರಾಜಕಾರಣ ಬಿಡಿ ಎಂದು ಕಿಡಿಕಾರಿದರು.

    ಬಿಜೆಪಿಗರೇ ಏನು ನಿಮ್ಮ ಐಡಿಯಾ? ನಿನ್ನೆ ಮೊನ್ನೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ಒಂದು ಸಣ್ಣ ಟಿಕೆಟ್ ನಮಗೆ ಕೊಡಿಸೋಕೆ ಆಗಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರು ನನ್ನ ಮಾತನಾಡಿಸಲಿಲ್ಲ. ನಾನು ರೆಬಲ್ ಆದಮೇಲೆ ರಾಜ್ಯಸಭಾ ಸದಸ್ಯ ಮಾಡುತ್ತೇವೆ, ಕೇಂದ್ರದಲ್ಲಿ ದೊಡ್ಡ ಹುದ್ದೆ ಕೊಡುತ್ತೇವೆ ಎಂದರು. ತತ್ವ ಮತ್ತು ಸಿದ್ಧಾಂತದ ಬಗ್ಗೆ ಮಾತನಾಡುವವರು, ಸಿಡಿ ಭಯದಿಂದ ಕೋರ್ಟ್‌ನಲ್ಲಿ ಸ್ಟೇ ತಂದೋರಿಗೆ, 80 ಪ್ರಕರಣಗಳಲ್ಲಿ ಭಾಗಿಯಾದವರಿಗೆ ಟಿಕೆಟ್ ನೀಡಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ, ಕರ್ನಾಟಕಕ್ಕೆ ದೇವ ರಾಮ- ಭಕ್ತ ಹನುಮರ ಸಂಬಂಧವಿದೆ – ಯೋಗಿ ಆದಿತ್ಯನಾಥ್

  • ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇ.ಡಿ ವಿಚಾರಣೆ ಒಳಪಡಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆ ವೇಳೆ ಪೊಲೀಸರು ಕಾಂಗ್ರೆಸ್ ನಾಯಕ ಪಿ.ಚಿದಂಬರಂರನ್ನು ತಳ್ಳಿದ ವೇಳೆ‌ ಎಡ ಪಕ್ಕೆಲುಬು ಮುರಿತಕ್ಕೊಳಗಾಗಿದ್ದಾರೆ ಎಂದು ಪಕ್ಷದ ವಕ್ತಾರ ರಣ್‍ದೀಪ್ ಸುರ್ಜೇವಾಲಾ ದೂರಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇ.ಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಎಐಸಿಸಿ ಕಚೇರಿಯಿಂದ ಇ.ಡಿ ಕಚೇರಿವರೆಗೂ ಪಾದಯಾತ್ರೆ ಮೂಲಕ ರಾಹುಲ್ ಗಾಂಧಿ ಇ.ಡಿ ಕಚೇರಿಗೆ ಆಗಮಿಸಿದರು. ಈ ವೇಳೆ ಪ್ರಿಯಾಂಕಾ ವಾದ್ರಾ, ಕೆ.ಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಪಿ.ಚಿದಂಬಂರಂ, ಸುರ್ಜೇವಾಲಾ, ಡಿ.ಕೆ ಸುರೇಶ್ ಅವರಿಗೆ ಸಾಥ್ ನೀಡಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ನಂತರ ಕೆ.ಸಿ ವೇಣುಗೋಲಾಲ್, ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಇ.ಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ಯುದ್ಧ, ನೂಕಾಟ ತಳ್ಳಾಟ ನಡೆಯಿತು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ಈ ವೇಳೆ ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾದ ಪ್ರಸಂಗವೂ ನಡೆದಿತ್ತು. ಇದನ್ನೂ ಓದಿ: ಪೊಲೀಸರನ್ನು ನೋಡುತ್ತಲೇ ಎದ್ನೋ ಬಿದ್ನೋ ಓಟಕ್ಕಿತ್ತ ಶ್ರೀನಿವಾಸ್ ಬಿವಿ

  • ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ ನಕಲಿ ಗಾಂಧಿಗಳಿಗೆ ED ನೋಟಿಸ್ ಕೊಟ್ಟಾಗ ಬೀದಿಗೆ ಬಂದಿದೆ: ಬಿಜೆಪಿ

    ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ ನಕಲಿ ಗಾಂಧಿಗಳಿಗೆ ED ನೋಟಿಸ್ ಕೊಟ್ಟಾಗ ಬೀದಿಗೆ ಬಂದಿದೆ: ಬಿಜೆಪಿ

    ಬೆಂಗಳೂರು: ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ ಇಡಿ ನೋಟಿಸ್ ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ ಎಂದು ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದೆ.

    ಟ್ವೀಟ್‍ನಲ್ಲಿ ಏನಿದೆ?
    ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ ಇಡಿ ನೋಟಿಸ್ ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ. ಇದು ಸಂವಿಧಾನಕ್ಕೆಸಗುತ್ತಿರುವ ಅಪಚಾರವಲ್ಲವೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನಕಲಿ ಗಾಂಧಿ ಕುಟುಂಬದ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ತಪ್ಪು ಮಾಡದೇ ಇದ್ದರೆ ಭಯವೇಕೆ? ಸಹಾನುಭೂತಿ ಗಿಟ್ಟಿಸುವುದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆಯ ನಾಟಕ ಹೆಣೆಯುತ್ತಿದೆ. ಇದೊಂದು ಯೋಜಿತ ಸಂಚು ಅಷ್ಟೇ! ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಅಷ್ಟಕ್ಕೂ ತನಿಖೆ ಬೇಡ ಎನ್ನಲು, ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ ಕುಟುಂಬ ಈಗ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ! ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಇಡಿ ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇ.ಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ! ಕೇವಲ ಒಂದು ಇ.ಡಿ ನೋಟಿಸ್‍ಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಡಿಕೆಶಿ ಅವರೇ, ನೀವೇನು ಸೊಬಗ ಅಂದುಕೊಂಡಿದ್ದೀರಾ? ಒಂದೂವರೆ ತಿಂಗಳಿಗೂ ಹೆಚ್ಚು ತಿಹಾರ್ ಜೈಲಿನಲ್ಲಿ ಕಂಬಿ ಎಣಿಸಿದ್ದು ನ್ಯಾಷನಲ್ ಹೆರಾಲ್ಡ್ ರೀತಿಯ ಪ್ರಕರಣದಲ್ಲಿಯೇ ಎಂಬುದನ್ನೂ ಮರೆತಿರಾ? ತಮ್ಮ ಪ್ರತಿ ಭಾಷಣದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ‘ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ’ ಎಂಬುದನ್ನು ಪ್ರಸ್ತಾಪಿಸುತ್ತಾರೆ. ಅದೇ ಡಿಕೆಶಿ ಇಂದು ದೇಶದ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆ ನಕಲಿ ಗಾಂಧಿ ಕುಟುಂಬಕ್ಕೆ ನೀಡಿದ ನೋಟಿಸ್‍ಗೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವುದು ವಿಪರ್ಯಾಸ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ಬಾಲ ಮುದುರಿಕೊಂಡು ಕುಳಿತಿದ್ದ ನಗರ ನಕ್ಸಲರು, ಶಾಂತಿದೂತರು, ಸಿಎಎ ವಿರೋಧಿ ಹೋರಾಟಗಾರರು ಈಗ ಒಮ್ಮೆಲೇ ಎದ್ದು ನಿಂತಿದ್ದಾರೆ. ಇ.ಡಿ ನೋಟಿಸ್ ಬಳಿಕ ಈ ಘಟನೆ ನಡೆಯುತ್ತಿದೆ. ಹಾಗಾದರೆ ಇದು ಕಾಂಗ್ರೆಸ್ ಪ್ರೇರಿತ ರಾಷ್ಟ್ರ ವಿರೋಧಿ ಸಂಚಲ್ಲವೇ? ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ. ಅಕ್ರಮಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ ಇಡಿ ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

    ಸಚಿವರಾದ ಅಶ್ವಥ್ ನಾರಾಯಣ, ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಹಾಲಪ್ಪಾ ಆಚಾರ್, ಶ್ರೀರಾಮುಲು, ಸಿಸಿ ಪಾಟೀಲ್, ಬಿ.ಸಿ ನಾಗೇಶ್, ಸುನಿಲ್‌ ಕುಮಾರ್ ಸೇರಿದಂತೆ ಹಲವು ಸಚಿವರು ಟ್ವೀಟ್ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಿದ್ದಾರೆ.

  • ಮಧ್ಯಪ್ರದೇಶದಲ್ಲಿ ಆಪರೇಷನ್ ‘ಕಮಲ್’ನಾಥ್ – ಬಹುಮತ ಇಲ್ಲವೆಂದ ದಿಗ್ವಿಜಯ್ ಸಿಂಗ್

    ಮಧ್ಯಪ್ರದೇಶದಲ್ಲಿ ಆಪರೇಷನ್ ‘ಕಮಲ್’ನಾಥ್ – ಬಹುಮತ ಇಲ್ಲವೆಂದ ದಿಗ್ವಿಜಯ್ ಸಿಂಗ್

    ಭೋಪಾಲ್: ಮಧ್ಯಪ್ರದೇಶದ ರಾಜಕೀಯ ಹೈಡ್ರಾಮಾಗೆ ಇಂದು ತೆರೆಬೀಳಲಿದ್ದು, ಸಿಎಂ ಕಮಲ್‍ನಾಥ್ ವಿಶ್ವಾಸಮತ ಸಾಬೀತಿಗೂ ಮುನ್ನ ಪದತ್ಯಾಗ ಮಾಡಲಿದ್ದಾರೆ ಎಂಬ ಸುಳಿವನ್ನು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನೀಡಿದ್ದಾರೆ.

    ಸುಪ್ರೀಂಕೋರ್ಟ್ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸೂಚನೆ ನೀಡಿತ್ತು. ಮ್ಯಾಜಿಕ್ ನಂಬರ್ ಇಲ್ಲದ ಕಾರಣ ಸಿಎಂ ಕಮಲನಾಥ್ ಪದತ್ಯಾಗ ಮಾಡಿದ್ದಾರೆ. ಈ ಕುರಿತು ಮಾತಾಡಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, 22 ಶಾಸಕರ ರಾಜೀನಾಮೆಯಿಂದಾಗಿ ನಮ್ಮ ಬಳಿ ಬಹುಮತ ಇಲ್ಲ. ಹಣ ಮತ್ತು ಅಧಿಕಾರ ಪ್ರಯೋಗದಿಂದಾಗಿ ಬಹುಮತದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಸಂಜೆಯೊಳಗೆ ಕಮಲ್‍ನಾಥ್ ಬಹುಮತ ಸಾಬೀತು ಮಾಡದಿದ್ದರೆ ಸರ್ಕಾರ ಪತನವಾಗೋದು ಖಚಿತವಾಗಲಿದೆ. ವಿಶ್ವಾಸಮತ ಸಾಬೀತಿಗೂ ಮುನ್ನವೇ ದಿಗ್ವಿಜಯ್ ಸಿಂಗ್ ತಮ್ಮ ಬಳಿ ಬಹುಮತವಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ದಿಗ್ವಿಜಯ್ ಸಿಂಗ್ ನಗರದ ಹೊರವಲಯದ ರೆಸಾರ್ಟಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶದ ಶಾಸಕರ ಭೇಟಿಗೆ ಮುಂದಾಗಿದ್ದರು. ಆದ್ರೆ ಪೊಲೀಸರು ಭೇಟಿಗೆ ಅವಕಾಶ ಕಲ್ಪಿಸಲಿಲ್ಲ.

  • ಸ್ಪೀಕರ್ ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸುತ್ತಿದ್ದಾರೆ: ಶೋಭಾ ಕರಂದ್ಲಾಜೆ

    ಸ್ಪೀಕರ್ ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸುತ್ತಿದ್ದಾರೆ: ಶೋಭಾ ಕರಂದ್ಲಾಜೆ

    ಬೆಂಗಳೂರು: ವಿಶ್ವಾಸಮತ ಮಂಡಿಸದೆ ಕಾಲಹರಣ ಮಾಡುವ ಮೂಲಕ ಸಿಎಂ ಹಾಗೂ ಸ್ಪೀಕರ್ ನಾಟಕವಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಶ್ವಾಸಮತಯಾಚನೆ ಮಾಡುತ್ತೇನೆಂದು ಅಧಿವೇಶನ ಆರಂಭಿಸಿದರು. ಆದರೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಕಾಲಹರಣ ಮಾಡುತ್ತಿದ್ದಾರೆ. ಈ ಮೂಲಕ ಸಮಯ ಮುಂದೂಡುವ ಕೆಲಸ ಮಾಡಿ, ಸದನದಲ್ಲಿ ಗಲಭೆ ಏಳುವಂತೆ ಮಾಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

    ಒಂದೆಡೆ ಸಂವಿಧಾನಾತ್ಮಕವಾಗಿ ಹಾಗೂ ನಿಯಮಬದ್ಧವಾಗಿ ನೀಡಿದ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ. ಇನ್ನೊಂದೆಡೆ ಸದನದಲ್ಲಿ ವಿಶ್ವಾಸಮತಯಾಚನೆಗೆ ಅವಕಾಶ ನೀಡದೆ, ಕಾಲಹರಣ ಮಾಡುತ್ತಿದ್ದಾರೆ. ಈ ಮೂಲಕ ಸ್ಪೀಕರ್ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

    ಸದನದಲ್ಲಿ ವಿಶ್ವಾಸಮತಯಾಚೆನೆಗೆ ಅವಕಾಶ ನೀಡದೆ, ಸ್ಪೀಕರ್ ಮುಖ್ಯಮಂತ್ರಿ ಸೇರಿ ನಾಟಕ ಆಡುತ್ತಿದ್ದಾರೆ. ಸ್ಪೀಕರ್ ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸುತ್ತಿದ್ದಾರೆ. ಸ್ಪೀಕರ್ ಪ್ರಮಾಣಿಕವಾಗಿ ಇಂದೇ ವಿಶ್ವಾಸಮತ ಸಾಬೀತು ಮಾಡಲು ನಿರ್ದೇಶನ ನೀಡಬೇಕು ಎಂದರು.

  • ಮೋದಿ ಮಾಸ್ಟರ್ ಹಿರಣ್ಣಯ್ಯಗಿಂತ ದೊಡ್ಡ ನಾಟಕಗಾರ: ಸಿದ್ದು ಲೇವಡಿ

    ಮೋದಿ ಮಾಸ್ಟರ್ ಹಿರಣ್ಣಯ್ಯಗಿಂತ ದೊಡ್ಡ ನಾಟಕಗಾರ: ಸಿದ್ದು ಲೇವಡಿ

    ಕಲಬುರಗಿ: ನಾಟಕ ಮಾಡುವುದರಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರಿಗಿಂತ ಪ್ರಧಾನಿ ನರೇಂದ್ರ ಮೋದಿ ದೊಡ್ಡ ನಾಟಕಗಾರ ಎಂದು ಚಿಂಚೋಳಿಯ ಐನೊಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

    ಚಿಂಚೋಳಿಯ ಐನೊಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡುತ್ತ ಸಿದ್ದರಾಮಯ್ಯ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಸುಳ್ಳು ಹೇಳುವುದರಲ್ಲಿ, ನಾಟಕ ಮಾಡುವುದರಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರನ್ನು ಮೋದಿ ಮೀರಿಸುತ್ತಾರೆ. ಮೋದಿ ಹೇಳುವುದೆಲ್ಲಾ ಬಂಡಲ್, ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದೇಶದಲ್ಲಿರುವ ಕಪ್ಪು ಹಣ ವಾಪಾಸ್ ತರುತ್ತೇನೆ ಎಂದು ಮೋದಿ ಹೇಳಿದ್ದರು. ಐದು ವರ್ಷದಲ್ಲಿ ಒಂದೇ ಒಂದು ರೂಪಾಯಿ ಕೂಡ ಕೊಟ್ಟಿಲ್ಲವಲ್ಲ, ಮೋದಿ ಮನೆ ಹಾಳಾಗ ಎಂದು ಕಿಡಿಕಾರಿದರು.

    ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಾತ್ರ. ಅಂಬೇಡ್ಕರ್ ಪ್ರತಿಮೆಗಳನ್ನ ಧ್ವಂಸ ಮಾಡಬೇಕು, ಸಂವಿಧಾನವನ್ನು ಸುಟ್ಟು ಹಾಕಬೇಕು ಎಂದು ತೇಜಸ್ವಿ ಸೂರ್ಯ ಹೇಳುತ್ತಾನೆ. ಅದಕ್ಕೆ ಅವನಿಗೆ ತೇಜಸ್ವಿ ಸೂರ್ಯ ಅಂತ ಕರೆಯಬಾರದು ಅಮವಾಸೆ ಸೂರ್ಯ ಅಂತ ಕರೆಯಬೇಕು ಎಂದು ಮತ್ತೊಮ್ಮೆ ಬಿಜೆಪಿ ಯುವ ಮೋರ್ಚಾದ ನಾಯಕ ತೇಜಸ್ವಿ ಸೂರ್ಯ ಅವರನ್ನು ಲೇವಡಿ ಮಾಡಿದರು.