Tag: BJP Corporator

  • ಆನ್‌ಲೈನ್‌ನಲ್ಲೇ ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ

    ಆನ್‌ಲೈನ್‌ನಲ್ಲೇ ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ

    ಲಕ್ನೋ: ಬಿಜೆಪಿ ಕಾರ್ಪೊರೇಟರ್ (BJP Corporator) ಮಗ ಆನ್‌ಲೈನ್‌ನಲ್ಲಿ (Online) ಪಾಕಿಸ್ತಾನಿ (Pakistan) ಹುಡುಗಿಯನ್ನು ವರಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಜೌನ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

    ‘ನಿಕಾಹ್’ ಮೂಲಕ ಪಾಕ್ ಯುವತಿಯೊಂದಿಗೆ ವಿವಾಹ ನೆರವೇರಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್‌ಗೆ ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರೊಂದಿಗೆ ವಿವಾಹ ನಿಶ್ಚಯಿಸಿದ್ದರು. ಪಾಕಿಸ್ತಾನ ಮತ್ತು ಭಾರತದ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ವರನಿಗೆ ವೀಸಾ ಸಿಕ್ಕಿರಲಿಲ್ಲ. ಇದನ್ನೂ ಓದಿ: ಮುಡಾ ಮೇಲಿನ ಇ.ಡಿ ದಾಳಿ ಅಂತ್ಯ – ಸತತ 29 ಗಂಟೆ ಅಧಿಕಾರಿಗಳಿಗೆ ಡ್ರಿಲ್‌

    ಈ ಬೆನ್ನಲ್ಲೇ ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅನಾರೋಗ್ಯಕ್ಕೆ ಒಳಗಾಗಿ ಪಾಕಿಸ್ತಾನದ ಐಸಿಯುಗೆ ದಾಖಲಾದರು. ಈ ಹಿನ್ನೆಲೆ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದಾರೆ. ಲಾಹೋರ್‌ನ ವಧುವಿನ ಕುಟುಂಬದವರು ಹಾಗೂ ವರನ ಕುಟುಂಬಸ್ಥರು ‘ನಿಕಾಹ್’ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿ, ಇಸ್ಲಾಂನಲ್ಲಿ ‘ನಿಕಾಹ್’ಗೆ ಮಹಿಳೆಯ ಒಪ್ಪಿಗೆ ಅತ್ಯಗತ್ಯ. ಎರಡೂ ಕಡೆಯ ಮೌಲಾನಾಗಳು ಒಟ್ಟಾಗಿ ಸಮಾರಂಭವನ್ನು ನಡೆಸಿದಾಗ ಆನ್‌ಲೈನ್ ‘ನಿಕಾಹ್’ ಸಾಧ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಿಷೇಧಿತ ಡ್ರಗ್ಸ್‌ ಪತ್ತೆ – ಮಲಯಾಳಂ ನಟಿ ಬಂಧನ

  • ಪೊಲೀಸ್ ಠಾಣೆಯಲ್ಲೇ ಬಿಜೆಪಿ ಕಾರ್ಪೊರೇಟರ್ ಪತಿ ಮೇಲೆ ಪೌರಕಾರ್ಮಿಕರಿಂದ ಹಲ್ಲೆ

    ಪೊಲೀಸ್ ಠಾಣೆಯಲ್ಲೇ ಬಿಜೆಪಿ ಕಾರ್ಪೊರೇಟರ್ ಪತಿ ಮೇಲೆ ಪೌರಕಾರ್ಮಿಕರಿಂದ ಹಲ್ಲೆ

    ಭೋಪಾಲ್: ಪೌರ ಕಾರ್ಮಿಕರ (Civic Staff) ಗುಂಪೊಂದು ರಾವು (Rau) ಪುರಸಭೆಯ (Municipality) ಬಿಜೆಪಿ ಕಾರ್ಪೊರೇಟರ್ ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ (MadhyaPradesh) ನಡೆದಿದೆ.

    ಇದೀಗ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮಧ್ಯಾಹ್ನ ಪೊಲೀಸ್ ಠಾಣೆಗೆ ಆಗಮಿಸಿದ ಪೌರಕಾರ್ಮಿಕರ ಗುಂಪು ಸಂದೀಪ್ ಚೋಹಾನ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಪೌರ ಕಾರ್ಮಿಕರಿಗೆ ದೂರವಾಣಿಯಲ್ಲಿ ನಿಂದಿಸಿದ ಆರೋಪದಡಿ ಸಂದೀಪ್ ಚೋಹಾನ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    ಸಂದೀಪ್ ಚೋಹನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಲ್ಲಿ ಕಾರ್ಪೊರೇಟರ್ ಆಗಿದ್ದಾರೆ. ಎರಡೂ ಗುಂಪುಗಳ ನಡುವೆ ರಾಜಿ ಸಂಧಾನ ಮಾಡಲು ಪೊಲೀಸರು ಸಂದೀಪ್ ಚೋಹನ್ ಹಾಗೂ ಪೌರ ಕಾರ್ಮಿಕರನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ಕೆಲವು ಮಂದಿ ಸಂದೀಪ್ ಚೋಹನ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ರೈಲ್ವೆ ನಿಲ್ದಾಣದಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ

    ರೈಲ್ವೆ ನಿಲ್ದಾಣದಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ

    ಲಕ್ನೋ: ಕಳೆದ ವಾರ ಮಥುರಾ ರೈಲ್ವೆ ನಿಲ್ದಾಣದಲ್ಲಿ ತಂದೆ-ತಾಯಿಯ ಪಕ್ಕದಿಂದ ಮಲಗಿದ್ದ ಏಳು ತಿಂಗಳ ಮಗು ಕಿಡ್ನ್ಯಾಪ್‌ ಆಗಿತ್ತು. ಇದೀಗ ಈ ಮಗು ಫಿರೋಜಾಬಾದ್‍ನ ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆಯಾಗಿದೆ. ಈ ಮೂಲಕ ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ.

    POLICE JEEP

    ಬಿಜೆಪಿಯ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಮಗು ಬೇಕು ಎಂಬ ಕಾರಣಕ್ಕೆ ಇಬ್ಬರು ವೈದ್ಯರಿಗೆ 1.8 ಲಕ್ಷ ರೂಪಾಯಿ ನೀಡಿ ಬಾಲಕನನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ. ಮಗುವನ್ನು ಪ್ಲಾಟ್‍ಫಾರ್ಮ್‍ನಿಂದ ಎತ್ತಿಕೊಂಡು ಹೋಗುವಾಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ ಮಥುರಾ ರೈಲ್ವೆ ಪೊಲೀಸರು, ನಂತರ ಮಗುವನ್ನು ತಾಯಿಗೆ ಹಸ್ತಾಂತರಿಸಿ, ಸಂತಸಗೊಂಡರು. ಮತ್ತೊಂದೆಡೆ 500 ರೂ. ನೋಟುಗಳ ಕಂತೆಯನ್ನು ಬಂಧಿತ ವೈದ್ಯರಿಂದ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಲಗಿದ್ದ ತಾಯಿಯ ಪಕ್ಕದಿಂದ ಮಗು ಕದ್ದು ಓಡಿದ – ಖತರ್ನಾಕ್ ಕಳ್ಳನ ವೀಡಿಯೋ ವೈರಲ್

    ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಅಪಹರಣವನ್ನು ನಡೆಸಿದೆ. ಮಗುವನ್ನು ಕದ್ದಿರುವ ವ್ಯಕ್ತಿ ದೀಪ್ ಕುಮಾರ್ ಎಂದು ತಿಳಿದುಬಂದಿದೆ. ಆತ ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‍ನ ಭಾಗವಾಗಿದ್ದಾನೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಸಹ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ.

    ನಾವು ಮಗುವನ್ನು ಯಾರ ಮನೆಯಲ್ಲಿರಿಸಿದ್ದಾರೆ ಎಂದು ವಿಚಾರಣೆ ನಡೆಸಿದಾಗ, ಕಾರ್ಪೋರೇಟರ್ ಮನೆಯಲ್ಲಿ ಪತ್ತೆಯಾಗಿದೆ. ಅವರು ನಮಗೆ ಒಬ್ಬಳೇ ಮಗಳು ಇರುವುದರಿಂದ ಒಬ್ಬ ಮಗ ಬೇಕು ಎಂದು ಕೇಳಿದ್ದಾರೆ. ಅದಕ್ಕಾಗಿ ಆರೋಪಿಗಳೊಂದಿಗೆ ವಿನಿತಾ ಅಗರ್ವಾಲ್ ದಂಪತಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿಫ್ಟ್ ನಿಂತಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್, ಲಿಫ್ಟ್ ಆಪರೇಟರ್‌ಗೆ ಕಪಾಳಕ್ಕೆ ಬಾರಿಸಿದ ಉದ್ಯಮಿ

    ಈ ಘಟನೆ ಹಾಗೂ ಬಂಧಿತ ಕಾರ್ಪೊರೇಟರ್ ಬಗ್ಗೆ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ 23ರಂದು ರಾತ್ರಿ ಮಥುರಾ ರೈಲು ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ವ್ಯಕ್ತಿಯೋರ್ವ ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಪರಾರಿಯಾಗಿದ್ದನು. ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡಿದ್ದಾನೆ. ನಂತರ ಮತ್ತೆ ಹಿಂದಿರುಗಿ ಬಂದು ಮಗುವನ್ನು ನಿಧನವಾಗಿ ಎತ್ತಿಕೊಂಡು ಅಲ್ಲಿಂದ ಓಡಿ ಹೋಗಿದ್ದನು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಕಾರ್ಪೋರೇಟರ್ ಸೇರಿ ಐವರ ಕೊಲೆ

    ಬಿಜೆಪಿ ಕಾರ್ಪೋರೇಟರ್ ಸೇರಿ ಐವರ ಕೊಲೆ

    – ಮನೆಯಲ್ಲಿದ್ದ 8 ಮಂದಿಗೆ ಗಾಯ

    ಮುಂಬೈ: ಬಿಜೆಪಿ ಕಾರ್ಪೋರೇಟರ್ ಸೇರಿದಂತೆ ಐವರನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಭುಸ್ವಾಲ್ ನಗರದಲ್ಲಿ ನಡೆದಿದೆ. ಐವರಲ್ಲಿ ಕಾರ್ಪೋರೇಟರ್ ಕುಟುಂಬದ ಮೂವರು ಕೊಲೆಯಾಗಿದ್ದು, ಎಂಟು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಚಾಕು ಸಹಿತ ನುಗ್ಗಿದ ಮೂವರು ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ನಡೆದ ಗಂಟೆಯೊಳಗೆ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ಬಿಜೆಪಿ ಕಾರ್ಪೋರೇಟರ್ ರವೀಂದ್ರ  ಖಾರಟ್ ಒಳಗೊಂಡಂತೆ ಇಬ್ಬರು ಮಕ್ಕಳು ಮತ್ತು ಹಿರಿಯ ಸೋದರ ಸುನಿಲ್ (55) ಹಾಗೂ ಓರ್ವ ಗೆಳೆಯ ಕೊಲೆಯಾದ ನತದೃಷ್ಟರು. ಇನ್ನು ಮನೆಯಲ್ಲಿದ್ದ ಎಂಟು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಕಾರ್ಪೋರೇಟರ್ ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

    ಒಟ್ಟು ಐವರು ಸಾವನ್ನಪ್ಪಿದ್ದು, ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಸಂಶಯದ ಮೇಲೆ ಈಗಾಗಲೇ ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸುಳಿವು ಸಿಕ್ಕಿದ್ದು, ಬಂಧಿತರು ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲ ಎಂಬುವುದು ಸದ್ಯಕ್ಕೆ ತಿಳಿದು ಬಂದಿದೆ. ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ದ್ವೇಷದಿಂದಲೇ ಕೊಲೆಗಳು ನಡೆದಿರಬಹುದು ಎಂಬ ಶಂಕೆಗಳು ವ್ಯಕ್ತವಾಗಿವೆ ಎಂದು ಜಲಗಾಂವ್ ಡಿವೈಎಸ್‍ಪಿ ತಿಳಿಸಿದ್ದಾರೆ.