Tag: BJP government

  • 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    – ವಿಶ್ವದ ಮುಂದೆ ನನ್ನ ನೋವು ಹೇಳಿಕೊಳ್ತಿರೋದು ಇದೇ ಮೊದಲು; ಭಾವುಕ

    ಬೆಂಗಳೂರು: 24 ಗಂಟೆಯಲ್ಲಿ 300 ಮಾವೋವಾದಿಗಳು (Maoists Surrendered) ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್‌ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್‌ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನಕ್ಸಲರ ಶರಣಾಗತಿ ಬಗ್ಗೆ ಹೇಳಿದರು.

    ಖಾಸಗಿ ಸುದ್ದಿವಾಹಿನಿಯ ಜಾಗತಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 24 ಗಂಟೆಗಳಲ್ಲಿ 300 ಮಾವೋವಾದಿಗಳು ಸೇರಿ 75 ಗಂಟೆಗಳಲ್ಲಿ ಒಟ್ಟು 303 ನಕ್ಷಲರು ಶರಣಾಗಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ನಕ್ಸಲ್‌ (Naxals) ಕಾರ್ಯಾಚರಣೆ ವಿರುದ್ಧ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

    ಇದೇ ಮೊದಲು ನನ್ನ ನೋವು ಹೇಳಿಕೊಳ್ತಿದ್ದೇನೆ
    ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಅಲ್ಲದೇ ಶಾಲೆಗಳನ್ನಾಗಲಿ, ಆಸ್ಪತ್ರೆಗಳನ್ನಾಗಲಿ ನಿರ್ಮಿಸಲು ಬಿಡಲಿಲ್ಲ. ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡ್ತಿದ್ದರು. ಮಾವೋವಾದಿಗಳ ಭಯೋತ್ಪಾದನೆಯಿಂದ ಯುವಜನರಿಗೆ ಅನ್ಯಾಯವಾಗಿತ್ತು. ಇದೆಲ್ಲದರಿಂದ ನಾನು ಬಹಳ ಕೋಪಗೊಂಡಿದ್ದೆ ಎನ್ನುತ್ತಾ. ಇದೇ ಮೊದಲಬಾರಿಗೆ ಜಗತ್ತಿನ ಮುಂದೆ ನನ್ನ ನೋವನ್ನ ಹೇಳಿಕೊಳ್ಳುತ್ತಿದ್ದೇನೆ ಎಂದು ಭಾವುಕರಾದರು.

    303 ಮಂದಿ ಶರಣಾಗತಿ
    ನಮ್ಮ ಸರ್ಕಾರ ಅನ್ಯಾಯಕ್ಕೆ ಒಳಗಾದ ಹಾಗೂ ದಾರಿ ತಪ್ಪಿದ ಯುವಜನರನ್ನ ತಲುಪಿ, ಮತ್ತೆ ಅವರನ್ನ ಮುಖ್ಯವಾಹಿನಿಗೆ ತರಲು ವಿಶೇಷ ಪ್ರಯತ್ನಗಳನ್ನ ನಡೆಸಿದೆ. ಇಡೀ ದೇಶ ಇಂದು ಈ ಪ್ರಯತ್ನಗಳ ಫಲಿತಾಂಶ ನೋಡುತ್ತಿದೆ. ಈಗ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು. ಈಗ ಅವರೇ ಮುಕ್ತವಾಗಿ ಶರಣಾಗಿದ್ದು, ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

    ಸಾಮೂಹಿಕ ಶರಣಾಗತಿಯ ಪರಿಣಾಮವಾಗಿ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದೆ 125 ಇದ್ದ ನಕ್ಸಲ್‌ ಪೀಡಿತ ಜಿಲ್ಲೆಗಳು ಈಗ 11ಕ್ಕೆ ಇಳಿಕೆಯಾಗಿದೆ. ನಕ್ಸಲ್‌ ಚಟುವಟಿಕೆಗಳನ್ನ ತಡೆಯುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ. ಈ ಹಿಂದೆ ಬಸ್ತಾರ್‌ನಲ್ಲಿ (ತೀವ್ರವಾಗಿ ಬಾಧಿತವಾದ ಜಿಲ್ಲೆ) ಮಾವೋಗಳು ವಾಹನಗಳನ್ನ ಸ್ಫೋಟಿಸಿ ಭದ್ರತಾ ಸಿಬ್ಬಂದಿಗಳನ್ನ ಹತ್ಯೆಗೈದಿದ್ದರು. ಇಂದು ಅಲ್ಲಿನ ಯುವಕರು ʻಬಸ್ತಾರ್‌ ಒಲಿಂಪಿಕ್ಸ್‌ʼ ಆಯೋಜಿಸುತ್ತಿದ್ದಾರೆ. ಇದು ಅತಿದೊಡ್ಡ ಬದಲಾವಣೆ. ಈಗ ಶಾಂತಿಯ ದೀಪಾವಳಿ ಆಚರಿಸಲು ಸಾಧ್ಯವಾಗುತ್ತದೆ ಎಂದು ಹರ್ಷವ್ಯಕ್ತಪಡಿಸಿದರು ಮೋದಿ.

    ಕಾಂಗ್ರೆಸ್‌ ಅವರನ್ನ ಗಮನಿಸಲಿಲ್ಲ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ, ಈ ಪರಿಸರ ವ್ಯವಸ್ಥೆಯ ಕುರಿತು ಚರ್ಚೆಸೋದನ್ನೇ ಸಂಪೂರ್ಣವಾಗಿ ನಿಗ್ರಹಿಸಲಾಗಿತ್ತು ಎಂದು ವಾಗ್ದಾಳಿ ನಡೆಸಿದರು.

  • ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲೂ ನಮ್ಮ ಪಾತ್ರ ಇಲ್ಲ ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ

    ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ (BJP And RSS) ನಡುವೆ ಕೆಲವು ಭಿನ್ನಾಭಿಪ್ರಾಯ ಇರಬಹುದು, ಆದ್ರೆ ಎಲ್ಲಿಯೂ ಸಂಘರ್ಷವಿಲ್ಲ, ದ್ವೇಷವೂ ಇಲ್ಲ. ನಮ್ಮಲ್ಲಿ ಪರಸ್ಪರ ನಂಬಿಕೆ ಇದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ (Mohan Bhagwat) ಹೇಳಿದ್ದಾರೆ.

    ಆರ್‌ಎಸ್‌ಎಸ್‌ಗೆ (RSS) 100 ವರ್ಷಗಳ ಶತಮಾನೋತ್ಸವ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಹಕಾರದ ಕೊರತೆಯಿಂದ ಬಿಜೆಪಿ ಬಹಮತದಿಂದ ದೂರ ಉಳಿಯುತೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದರು. ಇದನ್ನೂ ಓದಿ: ಕೇಂದ್ರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಗಣೇಶ ಹಬ್ಬದ ಬಂಪರ್‌ ಗಿಫ್ಟ್‌ – ಪಿಎಂ ಸ್ವನಿಧಿ ಯೋಜನೆ 5 ವರ್ಷ ವಿಸ್ತರಣೆ

    ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ (BJP National President) ಆಯ್ಕೆ ಬಗ್ಗೆ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಎಲ್ಲವನ್ನೂ ನಿರ್ಧರಿಸುತ್ತದೆ ಅನ್ನೋದು ತಪ್ಪು. ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಆದ್ರೆ ನಾವು ಪರಸ್ಪರ ಸಲಹೆಗಳನ್ನಷ್ಟೇ ನೀಡಬಹುದು ಎಂದು ಹೇಳಿದರು. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಸರ್ಕಾರದೊಂದಿಗೆ ಸಂಘದ ಸಮನ್ವಯದ ಬಗ್ಗೆ ಮಾತನಾಡುತ್ತಾ, ಪ್ರಸ್ತುತ ಸರ್ಕಾರ ಮಾತ್ರವಲ್ಲ, ಪ್ರತಿಯೊಂದು ಸರ್ಕಾರದೊಂದಿಗೆ ನಮಗೆ ಉತ್ತಮ ಸಮನ್ವಯವಿದೆ ಎಲ್ಲಿಯೂ ಯಾವುದೇ ಜಗಳವಿಲ್ಲ ಎಂದರು. ಸಂಘವು ಬಿಜೆಪಿ ಹೊರತುಪಡಿಸಿ ಬೇರೆ ರಾಜಕೀಯ ಪಕ್ಷಗಳನ್ನು ಏಕೆ ಬೆಂಬಲಿಸುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿ, ಒಳ್ಳೆಯ ಕೆಲಸಕ್ಕಾಗಿ ನಮ್ಮಿಂದ ಸಹಾಯ ಕೇಳುವವರಿಗೆ ನಾವು ಸಹಾಯ ಮಾಡುತ್ತೇವೆ. ಓಡಿಹೋದವರಿಗೆ ಸಹಾಯ ಸಿಗುವುದಿಲ್ಲ ಎಂದರಲ್ಲದೇ ನಾವು ಪ್ರತಿಯೊಂದು ಸರ್ಕಾರದೊಂದಿಗೆ ಅಂದ್ರೆ ಕೇಂದ್ರ, ರಾಜ್ಯ ಸರ್ಕಾರಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ, ಆದರೆ ಕೆಲವು ವ್ಯವಸ್ಥೆಗಳು ಕೆಲವು ಆಂತರಿಕ ವಿರೋಧಾಭಾಸ ಹೊಂದಿವೆ ಎಂದರು.

    ತಂತ್ರಜ್ಞಾನ ಮತ್ತು ಆಧುನೀಕರಣದ ಯುಗದಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ಸವಾಲನ್ನು ಆರ್‌ಎಸ್‌ಎಸ್ ಹೇಗೆ ನೋಡುತ್ತದೆ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅವರು ತಂತ್ರಜ್ಞಾನ ಮತ್ತು ಆಧುನಿಕತೆಯು ಶಿಕ್ಷಣಕ್ಕೆ ವಿರುದ್ಧವಾಗಿಲ್ಲ. ಶಿಕ್ಷಣ ಕೇವಲ ಮಾಹಿತಿಯಲ್ಲ, ಮನುಷ್ಯ ಸುಸಂಸ್ಕೃತನಾಗಬೇಕು. ಹೊಸ ಶಿಕ್ಷಣ ನೀತಿಯಲ್ಲಿ ಪಂಚಕೋಶಿ ಶಿಕ್ಷಣದ ನಿಬಂಧನೆ ಇದೆ. ಜನರು ತಂತ್ರಜ್ಞಾನದ ಮಾಸ್ಟರ್‌ಗಳಾಗಿರಬೇಕು, ತಂತ್ರಜ್ಞಾನ ನಮ್ಮ ಮಾಸ್ಟರ್‌ಗಳಾಗಬಾರದು ಎಂದು ಹೇಳಿದರು. ಇದನ್ನೂ ಓದಿ: 2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

    ಶಿಕ್ಷಣ ಅಗತ್ಯ, ತಂತ್ರಜ್ಞಾನವು ಅವಿದ್ಯಾವಂತರ ಕೈಗೆ ಹೋದರೆ, ಅದು ವಿರುದ್ಧ ಪರಿಣಾಮವನ್ನು ಬೀರುತ್ತದೆ. ಶಿಕ್ಷಣ ಅಂದ್ರೆ ಕೇವಲ ಮಾಹಿತಿಯನ್ನು ನೆನಪಿಟ್ಟುಕೊಳ್ಳುವುದು ಎಂದಲ್ಲ. ನಮ್ಮ ಹಳೆಯ ಶಿಕ್ಷಣ ಕಣ್ಮರೆಯಾಯಿತು, ನಾವು ಗುಲಾಮರಾಗಿದ್ದಾಗ, ಹೊಸ ವ್ಯವಸ್ಥೆ ಬಂದಿತು. ಅವರು ವ್ಯವಸ್ಥೆಯನ್ನು ತಮ್ಮದೇ ಆದ ಪ್ರಕಾರ ಮಾಡಿದರು. ಆದರೆ ಈಗ ನಾವು ಸ್ವತಂತ್ರರಾಗಿದ್ದೇವೆ, ನಾವು ರಾಜ್ಯವನ್ನು ನಡೆಸಬೇಕು ಮಾತ್ರವಲ್ಲ, ಜನರು ಸಹ ಅದನ್ನು ಅನುಸರಿಸಬೇಕು. ನಾವು ಆ ದಿಕ್ಕಿನಲ್ಲಿ ಮುಂದುವರಿಯಬೇಕಾಗಿದೆ ಎಂದರು.

  • ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ನವದೆಹಲಿ: ವಾಯುಮಾಲಿನ್ಯ ನಿಯಂತ್ರಣ ಉದ್ದೇಶದಿಂದ ದೆಹಲಿಯಲ್ಲಿ (Delhi) ಅವಧಿ ಮೀರಿದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದೆಹಲಿಯ ಬಿಜೆಪಿ ಸರ್ಕಾರ (BJP Government) ಯೂಟರ್ನ್ ಹೊಡೆದಿದೆ. ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ.

    ಸರ್ಕಾರ ಜನಾಕ್ರೋಶದ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿತ್ತು.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

    ಪತ್ರದಲ್ಲಿ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ANPR) ಕ್ಯಾಮೆರಾಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದೆ ಹಾಗೂ ಸ್ಪೀಕರ್ ಕಾರ್ಯನಿರ್ವಹಿಸದಿರುವಂತಹ ಮುಂತಾದ ಸಮಸ್ಯೆಗಳಿವೆ. ಇನ್ನೂ ನೆರೆಯ ರಾಜ್ಯಗಳ ಪೆಟ್ರೋಲ್ ಪಂಪ್‌ಗಳಲ್ಲಿ ಎಎನ್‌ಪಿಆರ್ ವ್ಯವಸ್ಥೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಗಳಿಂದ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕಲು ಪತ್ರ ಬರೆದಿತ್ತು. ಸರ್ಕಾರದ ಪತ್ರದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ.

    ಸರ್ಕಾರದ ಬದಲಾದ ನಿರ್ಧಾರದಿಂದಾಗಿ 10 ವರ್ಷಕ್ಕಿಂತ ಹಳೆಯದಾದ (ಡೀಸೆಲ್) ಮತ್ತು 15 ವರ್ಷ ಹಳೆಯದಾದ (ಪೆಟ್ರೋಲ್) ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಬಹುದು. ಪೆಟ್ರೋಲ್ ಪಂಪ್‌ಗಳು ಇನ್ನು ಮುಂದೆ ಹಳೆಯ ವಾಹನಗಳನ್ನು ಅವುಗಳ ವರ್ಷದ ಆಧಾರದ ಮೇಲೆ ಸೇವೆಯನ್ನು ನಿರಾಕರಿಸುವಂತಿಲ್ಲ. ಪಂಪ್‌ಗಳಲ್ಲಿರುವ ಕ್ಯಾಮೆರಾಗಳು ದಾಖಲೆಗಾಗಿ ಕಾರ್ಯನಿರ್ವಹಿಸಿದರೂ, ಈ ಹಿಂದೆ ಘೋಷಿಸಲಾಗಿದ್ದ ಇಂಧನ ನಿಷೇಧವನ್ನು ಜಾರಿಗೊಳಿಸುವಂತಿಲ್ಲ ಎಂದು ತಿಳಿಸಿದೆ.

    ಈ ಕುರಿತು ಪರಿಸರ ಕಾರ್ಯಕರ್ತರು, ಸರ್ಕಾರವು ವಾಹನವನ್ನು ಅದರ ವರ್ಷಗಳ ಆಧಾರದ ಮೇಲೆ ಗುರುತಿಸುವುದಕ್ಕಿಂತ ಹೆಚ್ಚಾಗಿ ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವುದು ಒಳ್ಳೆಯದು ಹಾಗೂ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

  • ಕೋವಿಡ್ ಹಗರಣ ಆರೋಪ ಪ್ರಕರಣ – ಸಿಎಂ ಕೈ ಸೇರಿದ ತನಿಖಾ ಆಯೋಗದ ವರದಿ

    ಕೋವಿಡ್ ಹಗರಣ ಆರೋಪ ಪ್ರಕರಣ – ಸಿಎಂ ಕೈ ಸೇರಿದ ತನಿಖಾ ಆಯೋಗದ ವರದಿ

    – ಬಿಜೆಪಿ ಸರ್ಕಾರದ ಅವಧಿಯಲ್ಲಿ 2,000 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಅಂತ ಆರೋಪ

    ಬೆಂಗಳೂರು: ಬಿಜೆಪಿ ಸರ್ಕಾರದ (BJP government) ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ (Covid Scam Case) ವರದಿ ಸಲ್ಲಿಕೆ ಆಗಿದೆ.

    ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್‌ ಶಾಕ್‌ ಸಿಗುವ ಸಾಧ್ಯತೆಯಿದೆ. ಕೋವಿಡ್‌ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್‌ (Congress) ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸರಚಿವರು ಸಮಾಲೋಚನೆ ನಡೆಸಿದ್ದಾರೆ.

    ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ (John Michael DCunha) ನೇತೃತ್ವದ ಆಯೋಗ ತನಿಖಾ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: Paris Paralympics 2024 | ಭಾರತಕ್ಕೆ ಮತ್ತೊಂದು ಪದಕ – ಕಂಚಿಗೆ ರುಬಿನಾ ಶೂಟ್‌

    ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್‌ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು. ಇದನ್ನೂ ಓದಿ: ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ವರದಿ ಬಹಿರಂಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಆರೋಗ್ಯ ಇಲಾಖೆಯಿಂದಲೂ ವರದಿ ಸಲ್ಲಿಕೆ:
    ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ 2023ರ ಜುಲೈ 5ರಂದೇ ವರದಿ ಸಲ್ಲಿಸಿತ್ತು. ಇದನ್ನೂ ಓದಿ: ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಬಿಜೆಪಿ ಅವಧಿಯಲ್ಲಿ ಕೋವಿಡ್ (COVID 19) ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು? ವಿಭಾಗವಾರು ಯಾವುದಕ್ಕೆ ಎಲ್ಲಾ ಹಣ ಖರ್ಚಾಗಿದೆ? ಏನೆಲ್ಲಾ ಖರೀದಿ ಆಗಿದೆ? ಎನ್.ಹೆಚ್.ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್ ಗಳನ್ನ ಒಳಗೊಂಡ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.

    ಇದೀಗ ಆಯೋಗದ ತನಿಖಾ ವರದಿ ಬಳಿಕ ಅಂದಿನ ಸಿಎಂ, ಆರೋಗ್ಯ ಸಚಿವರಿಗೆ ಬಿಸಿ ತಟ್ಟುತ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ. ಸರ್ಕಾರದ ಮುಂದಿನ ಕ್ರಮದ ಬಗ್ಗೆ ಕಾದುನೋಡಬೇಕಿದೆ. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ನೀರಿನ ಒಳಹರಿವು – ಭರ್ತಿಗೆ ಕೇವಲ 10 ಟಿಎಂಸಿ ಬಾಕಿ

  • ಕೋವಿಡ್ ಹಗರಣ ಆರೋಪ ಪ್ರಕರಣ – ತನಿಖಾ ಆಯೋಗದಿಂದ ಶನಿವಾರ ಸಿಎಂಗೆ ವರದಿ ಸಲ್ಲಿಕೆ!

    ಕೋವಿಡ್ ಹಗರಣ ಆರೋಪ ಪ್ರಕರಣ – ತನಿಖಾ ಆಯೋಗದಿಂದ ಶನಿವಾರ ಸಿಎಂಗೆ ವರದಿ ಸಲ್ಲಿಕೆ!

    – ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪ
    – ಆಗಿನ ಸಿಎಂ, ಆರೋಗ್ಯ ಸಚಿವರಿಗೆ ಬಿಸಿ ತಟ್ಟುತ್ತಾ?

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಹಗರಣ (Covid Scam) ಆರೋಪ ಪ್ರಕರಣದ ತನಿಖಾ ವರದಿಯನ್ನು ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ (John Michael DCunha) ನೇತೃತ್ವದ ಆಯೋಗ ಶನಿವಾರ ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

    ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ಕೋವಿಡ್ ವೇಳೆ ಭಾರೀ ಹಗರಣ ನಡೆದಿದೆ ಎಂದು ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಆರೋಪಿಸಿತ್ತು. ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್‌ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ ಮತ್ತು ಅಕ್ರಮ ನಡೆದಿದೆ ಎಂದೂ ಸಹ ಆರೋಪಿಸಿತ್ತು. ಇದನ್ನೂ ಓದಿ: ಯುಜಿ ನೀಟ್ & ಯುಜಿ ಸಿಇಟಿ-24 | ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಆ.31 ರಿಂದ ʻಚಾಯ್ಸ್ʼ ಆಯ್ಕೆ!

    ಈ ಸಂಬಂಧ ತನಿಖೆ ನಡೆಸಲು 2023ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಡಿ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಿತ್ತು. ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚಿಸಿತ್ತು. ಕೆಲ ದಿನಗಳ ನಂತರದಲ್ಲಿ ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ ಮಾಡಿತ್ತು. ಸದ್ಯ ತನಿಖೆ ಪೂರ್ಣಗೊಂಡಿದ್ದು, ಕುನ್ಹಾ ನೇತೃತ್ವದ ಆಯೋಗ ವರದಿ ಸಲ್ಲಿಸಲು ಮುಂದಾಗಿದೆ. ಶನಿವಾರ (ಆ.31ರಂದು) ಸಿಎಂ ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಆರೋಗ್ಯ ಇಲಾಖೆಯಿಂದಲೂ ವರದಿ ಸಲ್ಲಿಕೆ:
    ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ 2023ರ ಜುಲೈ 5ರಂದೇ ವರದಿ ಸಲ್ಲಿಸಿತ್ತು. ಇದನ್ನೂ ಓದಿ: ಇಂದು ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರದವರೆಗೂ ಮೆಟ್ರೋ ಸೇವೆ ಸ್ಥಗಿತ

    ಬಿಜೆಪಿ ಅವಧಿಯಲ್ಲಿ ಕೋವಿಡ್ (COVID 19) ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು? ವಿಭಾಗವಾರು ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ? ಏನೆಲ್ಲಾ ಖರೀದಿ ಆಗಿದೆ? ಎನ್.ಹೆಚ್.ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್ ಗಳನ್ನ ಒಳಗೊಂಡ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.

    ಇದೀಗ ಆಯೋಗದ ತನಿಖಾ ವರದಿ ಬಳಿಕ ಅಂದಿನ ಸಿಎಂ, ಆರೋಗ್ಯ ಸಚಿವರಿಗೆ ಬಿಸಿ ತಟ್ಟುತ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ. ಸರ್ಕಾರದ ಮುಂದಿನ ಕ್ರಮದ ಬಗ್ಗೆ ಕಾದುನೋಡಬೇಕಿದೆ. ಇದನ್ನೂ ಓದಿ: ಕೋರ್ಟ್‍ಗೆ ಹಾಜರಾಗದೇ ಕಳ್ಳಾಟ – ಗೋವಾದಲ್ಲಿ ಲಾಯರ್ ಜಗದೀಶ್ ಅರೆಸ್ಟ್

  • ಮೋದಿ ಆಡಳಿತಕ್ಕೆ 9 ವರ್ಷ, ಕಾಂಗ್ರೆಸ್‌ನಿಂದ 9 ಪ್ರಶ್ನೆ – ಮೌನ ಮುರಿದು ಉತ್ತರಿಸುವಂತೆ ಒತ್ತಾಯ

    ಮೋದಿ ಆಡಳಿತಕ್ಕೆ 9 ವರ್ಷ, ಕಾಂಗ್ರೆಸ್‌ನಿಂದ 9 ಪ್ರಶ್ನೆ – ಮೌನ ಮುರಿದು ಉತ್ತರಿಸುವಂತೆ ಒತ್ತಾಯ

    * ಸಾರ್ವಜನಿಕ ಆಸ್ತಿಯನ್ನೇಕೆ ಮೋದಿಯವರ ಸ್ನೇಹಿತರಿಗೆ ಮಾರಾಟ ಮಾಡ್ತಿದ್ದಾರೆ
    * ಕಳೆದ 9 ವರ್ಷಗಳಲ್ಲಿ ರೈತರ ಆದಾಯ ಏಕೆ ದುಪ್ಪಟ್ಟಾಗಲಿಲ್ಲ?
    * ಕಳ್ಳರನ್ನು ತಪ್ಪಿಸಿಕೊಳ್ಳಲು ಏಕೆ ಬಿಡುತ್ತಿದ್ದೀರಿ? – ಕಾಂಗ್ರೆಸ್‌ ನಾಯಕರ ಪ್ರಶ್ನೆ

    ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ (Narendra Modi) 9 ವರ್ಷ ಆಡಳಿತ ಪೂರೈಸಿದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಕಾಂಗ್ರೆಸ್‌ 9 ಪ್ರಶ್ನೆಗಳನ್ನ (Congress 9 Question) ಪ್ರಧಾನಿ ಮೋದಿ ಅವರ ಮುಂದಿಟ್ಟಿದ್ದು, ಮೌನ ಮುರಿದು ಉತ್ತರಿಸುವಂತೆ ಒತ್ತಾಯಿಸಿದೆ. ಮಾತ್ರವಲ್ಲ, ಒಂಬತ್ತು ವರ್ಷ ಪೂರೈಸಿದ ದಿನವನ್ನು ʻಮಾಫಿ ದಿವಸʼ ಎಂದು ಆಚರಿಸಬೇಕು ಎಂದೂ ಕಾಂಗ್ರೆಸ್ ಒತ್ತಾಯಿಸಿದೆ.

    ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh), ಪವನ್ ಖೇರಾ, ಸುಪ್ರಿಯಾ ಶ್ರೀನೇತ ಮುಂತಾದವರು ‘ನೌ ಸಾಲ್, ನೌ ಸವಾಲ್’ (9 ವರ್ಷ, 9 ಪ್ರಶ್ನೆ) ಎಂಬ ಪುಸ್ತಕ ಬಿಡುಗಡೆ ಮಾಡಿ 9 ಪ್ರಶ್ನೆಗಳನ್ನ ಕೇಳಿದ್ದಾರೆ.

    ನಾವು ಉತ್ತರಕ್ಕಾಗಿ ಬೇಡಿಕೆ ಇಟ್ಟಾಗ 900 ವರ್ಷಗಳ ಹಿಂದೆ ಹೋಗಬೇಡಿ, ನೀವು ಒಂಬತ್ತು ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಪ್ರತಿಯೊಬ್ಬರೂ ತಿಳಿಯಲು ಬಯಸುತ್ತಿದ್ದಾರೆ. ಪ್ರಧಾನಿ ಮೋದಿ ಮೌನ ಮುರಿದು ಈ 9 ಪ್ರಶ್ನೆಗಳಿಗೆ ಉತ್ತರಿಸಬೇಕು ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ದ್ರೋಹಕ್ಕಾಗಿ ಕ್ಷಮೆಯಾಚಿಸಬೇಕು ಜೈರಾಮ್‌ ರಮೇಶ್ ಆಗ್ರಹಿಸಿದ್ದಾರೆ.

    9‌ ಪ್ರಶ್ನೆಗಳಿವು….

    1. ಭಾರತದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಏಕೆ ಗಗನಕ್ಕೇರುತ್ತಿದೆ? ಶ್ರೀಮಂತರು ಏಕೆ ಶ್ರೀಮಂತರಾಗಿದ್ದಾರೆ ಮತ್ತು ಬಡವರು ಬಡವರಾಗಿದ್ದಾರೆ? ಆರ್ಥಿಕ ಅಸಮಾನತೆಗಳು ಹೆಚ್ಚುತ್ತಿರುವಾಗ ಸಾರ್ವಜನಿಕ ಆಸ್ತಿಯನ್ನ ಪ್ರಧಾನಿ ಮೋದಿಯವರ ಸ್ನೇಹಿತರಿಗೆ ಏಕೆ ಮಾರಾಟ ಮಾಡಲಾಗುತ್ತಿದೆ?

    2. ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸುವಾಗ ರೈತರೊಂದಿಗೆ ಮಾಡಿದ ಒಪ್ಪಂದಗಳನ್ನ ಏಕೆ ಗೌರವಿಸಲಾಗಿಲ್ಲ? ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧವಾಗಿ ಏಕೆ ಖಾತ್ರಿಪಡಿಸಲಾಗಿಲ್ಲ? ಕಳೆದ 9 ವರ್ಷಗಳಲ್ಲಿ ರೈತರ ಆದಾಯ ಏಕೆ ದುಪ್ಪಟ್ಟಾಗಲಿಲ್ಲ?

    3. ಎಲ್ಐಸಿ ಮತ್ತು ಎಸ್‌ಬಿಐನಲ್ಲಿ ಜನರು ಕಷ್ಟಪಟ್ಟು ಸಂಪಾದಿಸಿದ ಉಳಿತಾಯವನ್ನ ಪ್ರಧಾನಿ ತಮ್ಮ “ಸ್ನೇಹಿತ” ಅದಾನಿಗೆ ಲಾಭವಾಗುವಂತೆ ಏಕೆ ಅಪಾಯಕ್ಕೆ ಸಿಲುಕಿಸುತ್ತಿದ್ದಾರೆ? ಕಳ್ಳರನ್ನು ತಪ್ಪಿಸಿಕೊಳ್ಳಲು ಏಕೆ ಬಿಡುತ್ತಿದ್ದೀರಿ? ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ ಮತ್ತು ಭಾರತೀಯರನ್ನು ತೊಂದರೆ ಅನುಭವಿಸಲು ಏಕೆ ಬಿಡುತ್ತಿದ್ದೀರಿ?

    4. 2020 ರಲ್ಲಿ ಚೀನಾಕ್ಕೆ ಕ್ಲೀನ್ ಚಿಟ್ ನೀಡಿದ ನಂತರವೂ ಅವರು ಭಾರತೀಯ ಭೂಪ್ರದೇಶವನ್ನು ಆಕ್ರಮಿಸುವುದನ್ನು ಏಕೆ ಮುಂದುವರಿಸಿದ್ದಾರೆ?

    5. ಚುನಾವಣಾ ಲಾಭಕ್ಕಾಗಿ ಉದ್ದೇಶಪೂರ್ವಕ ದ್ವೇಷದ ರಾಜಕೀಯವನ್ನು ಏಕೆ ಬಳಸಲಾಗುತ್ತಿದೆ ಮತ್ತು ಸಮಾಜದಲ್ಲಿ ಭಯದ ವಾತಾವರಣವನ್ನು ಉತ್ತೇಜಿಸಲಾಗುತ್ತಿದೆ?

    6. ಮಹಿಳೆಯರು, ದಲಿತರು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ? ಜಾತಿ ಜನಗಣತಿಯ ಬೇಡಿಕೆಯನ್ನು ನೀವು ಏಕೆ ನಿರ್ಲಕ್ಷಿಸುತ್ತಿದ್ದೀರಿ?

    7. ಬಡವರು, ನಿರ್ಗತಿಕರು ಮತ್ತು ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಅವರ ಬಜೆಟ್‌ಗಳನ್ನ ಕಡಿತಗೊಳಿಸುವ ಮೂಲಕ ಮತ್ತು ನಿರ್ಬಂಧಿತ ನಿಯಮಗಳನ್ನು ಮಾಡುವ ಮೂಲಕ ಸರ್ಕಾರವು ಯೋಜನೆಗಳನ್ನು ಏಕೆ ದುರ್ಬಲಗೊಳಿಸಿದೆ?

    8. ಕಳೆದ ಒಂಬತ್ತು ವರ್ಷಗಳಲ್ಲಿ ನಮ್ಮ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಏಕೆ ದುರ್ಬಲಗೊಳಿಸಲಾಗಿದೆ? ನೀವು ವಿರೋಧ ಪಕ್ಷಗಳು ಮತ್ತು ನಾಯಕರ ವಿರುದ್ಧ ಸೇಡಿನ ರಾಜಕೀಯವನ್ನು ಏಕೆ ಮಾಡುತ್ತಿದ್ದೀರಿ ಮತ್ತು ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಅಸ್ಥಿರಗೊಳಿಸಲು ನೀವು ಹಣದ ಶಕ್ತಿಯನ್ನು ಏಕೆ ಬಳಸುತ್ತಿದ್ದೀರಿ?

    9. ಕೋವಿಡ್ -19ನಿಂದಾಗಿ 40 ಲಕ್ಷಕ್ಕೂ ಹೆಚ್ಚು ಜನರು ದುರಂತ ಸಾವಿಗೀಡಾದರೂ, ಮೋದಿ ಸರ್ಕಾರ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಏಕೆ ನಿರಾಕರಿಸಿದೆ? ನೀವು ಇದ್ದಕ್ಕಿದ್ದಂತೆ ಲಾಕ್​ಡೌನ್​ ಏಕೆ ವಿಧಿಸಿದಿರಿ, ಅದು ಲಕ್ಷಾಂತರ ಕಾರ್ಮಿಕರನ್ನು ಮನೆಗೆ ಮರಳುವಂತೆ ಮಾಡಿತು ಮತ್ತು ಯಾವುದೇ ಸಹಾಯವನ್ನೂ ಮಾಡಲಿಲ್ಲ? ಇದಕ್ಕೆಲ್ಲಾ ನೀವು ಮೌನ ಮುರಿದು ಉತ್ತರಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

  • ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ಹಂಚಿದ್ದಾರೆ: ನಂಜಾವಧೂತ ಶ್ರೀ ಕಿಡಿ

    ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ಹಂಚಿದ್ದಾರೆ: ನಂಜಾವಧೂತ ಶ್ರೀ ಕಿಡಿ

    ಮಂಡ್ಯ: ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು (Okkaliga Reservation) ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ (Nanjavadhootha Swamiji) ಅಸಾಮಾಧಾನ ಹೊರಹಾಕಿದ್ದಾರೆ.

    ಒಕ್ಕಲಿಗರಿಗೆ ಶೇ.4 ರಿಂದ ಶೇ.6 ಗೆ ಮೀಸಲಾತಿ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ನಾವು ಕೇಳಿದ್ದು ಶೇ.4 ರಿಂದ ಶೇ.16 ಗೆ ಮೀಸಲಾತಿ ಹೆಚ್ಚಳ ಮಾಡಿ ಅಂತ. ಆದರೆ ಯಾರದ್ದೋ ಶೇ.2 ಕಿತ್ತು ಶೇ.6 ಗೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ ಎಂದರು.

    ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗೋದು. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗ್ತಿದ್ದಾರೆ. ಶೇ.6 ಗೆ ಮೀಸಲಾತಿ ಏರಿಸಿದ್ರು ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಪ್ರಸ್ತುತ ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ನಂಜಾವಧೂತ ಸ್ವಾಮೀಜಿ ಬೇಸರ ವ್ಯಕ್ತಪಡಿಸಿ, ಹಲವು ರಾಜ್ಯಗಳ ಸರ್ಕಾರಗಳನ್ನ ನೋಡ್ತಿದ್ದೇವೆ. ಚೀಪ್ ಪಾಪ್ಯುಲಾರಿಟಿ ಪ್ರೋಗ್ರಾಂಗಳನ್ನ ಕೊಡ್ತಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು. ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬಿಳ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನ ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು ಎಂದು ಸ್ವಾಮೀಜಿ ಹೇಳಿದರು.

  • ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ

    ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ

    ಬೆಂಗಳೂರು: ಒಂದೆಡೆ ಪ್ರಧಾನಿ ಮೋದಿ (Narendra Modi) ಹೋದಲ್ಲಿ ಬಂದಲ್ಲಿ, ರಾಜಕೀಯ ಪಕ್ಷಗಳು ಎಗ್ಗಿಲ್ಲದೇ ಘೋಷಿಸ್ತಿರೋ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಗೆ ಹೊಡೆತ ಬೀಳುತ್ತೆ ಅಂತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ (Congress) ಮತದಾರರನ್ನ ಸೆಳೆಯಲು ನಿರಂತರವಾಗಿ ಒಂದಾದ ಮೇಲೊಂದರಂತೆ ಉಚಿತ ಕೊಡುಗೆಗಳ ಘೋಷಣೆ ಮಾಡುತ್ತಿದೆ. ಇದಕ್ಕೆ ಬಿಜೆಪಿ ಸಹ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷದ ಈ ಉಚಿತ ಭರವಸೆಗಳನ್ನು ಈಡೇರಿಸಲು ಆಗಲ್ಲ ಎಂದು ಕಿಡಿ ಕಾರಿದೆ.

    ಬಿಜೆಪಿ ನಾಯಕರ ಪ್ರಕಾರ, ಕಾಂಗ್ರೆಸ್‌ ಘೋಷಣೆ ಮಾಡಿರುವ ನಾಲ್ಕು ಗ್ಯಾರಂಟಿಗಳಿಗೆ 60 ರಿಂದ 65 ಸಾವಿರ ಕೋಟಿ ಬೇಕಾಗುತ್ತೆ. ಅಷ್ಟೊಂದು ದುಡ್ಡು ಒದಗಿಸಿ, ಈ ಭರವಸೆ ಈಡೇರಿಸಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿತರಣೆ ಮಾಡುವ ನೆಪದಲ್ಲಿ ಮತದಾರರ ದತ್ತಾಂಶ ಸಂಗ್ರಹ ಮಾಡ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇದನ್ನೂ ಓದಿ: ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

    ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಉಚಿತ ಯೋಜನೆಗಳ ಆಮಿಷ ಒಡ್ಡುವ ಕೆಲಸ ಮಾಡ್ತಿದ್ದಾರೆ. ಮತದಾರರ ವೋಟರ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಕಲೆಕ್ಟ್ ಮಾಡ್ತಿದ್ದಾರೆ. ಫೋನ್ ಪೇ, ಗೂಗಲ್ ಪೇ ನಂಬರ್ಸ್ ಕಲೆಕ್ಟ್ ಮಾಡುತ್ತಿದ್ದಾರೆ. ಇದನ್ನು ತಡೆದು, ಕಾಂಗ್ರೆಸ್ ವಿರುದ್ಧ ಕ್ರಮ ತಗೋಬೇಕು ಎಂದು ಮನವಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಕಾಂಗ್ರೆಸ್‌ ಯುವಕ್ರಾಂತಿ ಸಮಾವೇಶದಲ್ಲಿ 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ (Unemployment) ಪದವೀಧರರಿಗೆ 3 ಸಾವಿರ ರೂ. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ `ಯುವನಿಧಿ’ (YuvaNidhi) ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಈವರೆಗೆ ನೀಡಿರುವ ಭರವಸೆಗಳಿಗೆ ಎಷ್ಟು ವೆಚ್ಚ ಆಗಬಹುದು? ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಎಷ್ಟಿದೆ? ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಕೊಟ್ಟಿದ್ದ ಭರವಸೆಗಳು ಏನಾಗಿವೆ ಎಂಬುದನ್ನ ದಾಖಲೆ ಸಮೇತ ಮುಂದಿಟ್ಟಿದೆ.

    ಕಾಂಗ್ರೆಸ್ (Punjab) ಗ್ಯಾರಂಟಿಗೆ ಬಿಜೆಪಿ ಕಿಡಿ: ಪಂಜಾಬ್‌ನಲ್ಲಿ ಕಾಂಗ್ರೆಸ್‌ 2017ರಲ್ಲಿ ನೀಡಿದಂತೆ ನಿರುದ್ಯೋಗಿಗಳಿಗೆ 2000 ರೂ. ಭತ್ಯೆ ನೀಡುವ ಭರವಸೆ ಈಡೇರಿಸಿಲ್ಲ. 2018ರಲ್ಲಿ ರಾಜಸ್ಥಾನದಲ್ಲಿ‌ ನಿರುದ್ಯೋಗಿಗಳಿಗೆ 3,500 ರೂ. ಭತ್ಯೆ ಭರವಸೆಯನ್ನೂ ಭಾಗಶಃ ಈಡೇರಿಸಿಲ್ಲ (ಎರಡೂವರೆ ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬಗಳನ್ನು ಕಾಂಗ್ರೆಸ್ ಈ ಯೋಜನೆಯಿಂದ ಹೊರಗಿಟ್ಟಿದೆ.. 18 ಲಕ್ಷ ನಿರುದ್ಯೋಗಿಗಳಿದ್ದಾರೆ). 2018ರಲ್ಲಿ ಛತ್ತೀಸ್‌ಘಡ ಸರ್ಕಾರ ಹೇಳಿದಂತೆ ನಿರುದ್ಯೋಗಿಗಳಿಗೆ 2,500 ರೂ. ಭತ್ಯೆ ಭರವಸೆಯನ್ನು ಈಡೇರಿಸಿಲ್ಲ (ಎರಡೂವರೆ ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬಗಳನ್ನು ಕಾಂಗ್ರೆಸ್ ಈ ಯೋಜನೆಯಿಂದ ಹೊರಗಿಟ್ಟಿದೆ.. 3000 ಕೋಟಿ ಬೇಕಿದ್ದ ಜಾಗದಲ್ಲಿ 250 ಕೋಟಿ ಮೀಸಲಿಟ್ಟಿದೆ). ಹಿಮಾಚಲ ಪ್ರದೇಶದಲ್ಲಿ 1 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಭರವಸೆಯಯನ್ನೂ ಕಾಂಗ್ರೆಸ್ ಈಡೇರಿಸಿಲ್ಲ. ಈ ಪಟ್ಟಿಯಲ್ಲಿ ಇದೊಂದು ಸುಳ್ಳಿನ ಗ್ಯಾರಂಟಿ ಕಾರ್ಡ್‌ ಸೇರಿದೆ ಎಂದು ಬಿಜೆಪಿ ಕಿಡಿ ಕಾರಿದೆ.

    ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ (ಸಿಎಂಐಇ ಪ್ರಕಾರ): ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇದೆ ಎಂದು ಸಿಎಂಐಇ ಹೇಳಿದೆ. ಜನವರಿ ತಿಂಗಳಲ್ಲಿ ರಾಜ್ಯದಲ್ಲಿದ್ದ ನಿರುದ್ಯೋಗ ಪ್ರಮಾಣ ಶೇ.2.5 (ರಾಜಸ್ಥಾನದಲ್ಲಿ ಶೇ.28, ದೆಹಲಿಯಲ್ಲಿ ಶೇ.20ರಷ್ಟಿದೆ), ಫೆಬ್ರವರಿ ತಿಂಗಳಲ್ಲಿ ರಾಜ್ಯದ ನಿರುದ್ಯೋಗ ಪ್ರಮಾಣ ಶೇ. 1.8ಕ್ಕೆ ಇಳಿಕೆಯಾಗಿದೆ ಎಂದು ಹೇಳಲಾಗಿದೆ.

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಬೆಳಗಾವಿ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ್ರೆ ಮುಂದಿನ 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗಾವಕಾಶ (Employment) ನೀಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭರವಸೆ ನೀಡಿದರು.

    ಬೆಳಗಾವಿಯಲ್ಲಿ (Belagavi) ನಡೆದ `ಯುವಕ್ರಾಂತಿ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಿದೆ. ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ 2.5 ಲಕ್ಷ  ಉದ್ಯೋಗವನ್ನು ರಾಜ್ಯದ ಯುವಜನರಿಗೆ ಸಿಗುವಂತೆ ಮಾಡಲಿದೆ ಎಂದು ಘೋಷಣೆ ಮಾಡಿದರು.

    ಮುಂದುವರಿದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ದನ್ನೂ ಓದಿ: ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ.: ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆ

    ಕೆಲ ತಿಂಗಳ ಹಿಂದೆ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಸಲಾಯಿತು. ಅದಕ್ಕೆ ರಾಜ್ಯದಿಂದಲೂ ಜನರು ಅಪಾರ ಬೆಂಬಲ ಕೊಟ್ಟಿದ್ದರು. ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ರಾಜ್ಯದಲ್ಲಿ ಭಾರತ್ ಜೋಡೊ ಯಾತ್ರೆ ಕೈಗೊಂಡ ಸಂದರ್ಭದಲ್ಲಿ ಯುವಕರು ನಮಗೆ ಕೆಲ ಸಂದೇಶ ಕೊಟ್ಟರು. ಯಾವುದೇ ಪದವೀಧರರಿಗೂ ಕರ್ನಾಟಕ ಸರ್ಕಾರ ಉದ್ಯೋಗ ಕೊಡುತ್ತಿಲ್ಲ, ಯಾವುದೇ ಕೆಲಸ ಆಗಬೇಕು ಅಂದರೂ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ. ಇಡೀ ದೇಶದಲ್ಲೇ ಕರ್ನಾಟಕ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬ ಸಂದೇಶಗಳನ್ನ ನೀಡಿದರು. ಯುವಕರಿಗೆ ನಿರುದ್ಯೋಗದಿಂದ ಸಮಸ್ಯೆಗಳಾಗುತ್ತಿವೆ. ಸಾಕಷ್ಟು ಮುಜುಗರ ಎದುರಿಸುತ್ತಿದ್ದಾರೆ. ಇದೆಲ್ಲವನ್ನು ಮನಗಂಡು ನಮ್ಮ ಸರ್ಕಾರ `ಯುವನಿಧಿ’ಯನ್ನ ಘೋಷಣೆ ಮಾಡಿದೆ ಎಂದು ಹೇಳಿದರು.

    ದೇಶದಲ್ಲಿ ಎಲ್ಲ ಕೈಗಾರಿಕೆಗಳನ್ನ ಅದಾನಿ ಕೈಗೆ ಕೊಡುತ್ತಿದ್ದಾರೆ. ರಸ್ತೆ ಏರ್‌ಪೋರ್ಟ್‌ಗಳನ್ನ ಅವರಿಗೇ ಬಿಟ್ಟುಕೊಡಲಾಗುತ್ತಿದೆ. ಬಿಜೆಪಿ ಸರ್ಕಾರದಿಂದ ತಮ್ಮ ಗೆಳೆಯರಿಗೆ ಮಾತ್ರ ಲಾಭವಾಗುತ್ತಿದೆ. ಇದರಿಂದಲೇ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದೆಲ್ಲವನ್ನೂ ಕಾಂಗ್ರೆಸ್ ಯುವಕರಿಗೆ ತಿಳಿಸುವ ಕೆಲಸ ಮಾಡಿದೆ ಎಂದು ತಿಳಿಸಿದರು.

  • ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು

    ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು

    ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ (BJP Government) ಕ್ಕೆ ಭಾರೀ ಮುಜುಗರ ತಂದಿದ್ದ ಜೊತೆಗೆ ತಲೆನೋವೂ ಆಗಿದ್ದ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾನೆ. ಬಂಧಿತ ಸ್ಯಾಂಟ್ರೋ ರವಿಯನ್ನು ಪೊಲೀಸರು ದೂರದ ಗುಜರಾತ್‍ನಿಂದ ರಾಜ್ಯಕ್ಕೆ ಕರೆತಂದಿದ್ದಾರೆ. ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ಗೃಹ ಇಲಾಖೆಗೆ ಸೂಚಿಸಲಾಗಿದೆ. ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರಕ್ಕೂ, ವೈಯಕ್ತಿಕವಾಗಿ ತಮಗೂ ಮುಜುಗರ ಆಗಿರೋದ್ರಿಂದ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯಲ್ಲಿ ಆಸಕ್ತಿ ವಹಿಸಿದ್ದಾರೆ.

    ಸ್ಯಾಂಟ್ರೋ ರವಿ ಮೇಲೆ 1995 ರಿಂದಲೂ ವಿವಿಧ ಕ್ರಿಮಿನಲ್ ಕೇಸ್ ಗಳಿವೆ ಎನ್ನಲಾಗಿದೆ. ಮೈಸೂರು, ಬೆಂಗಳೂರುಗಳಲ್ಲೇ ಹೆಚ್ಚಿನ ಕೇಸ್‍ಗಳು ದಾಖಲಾಗಿವೆ. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದಲೂ ಆತನ ಮೇಲಿರುವ ಎಲ್ಲ ಕೇಸ್‍ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಎಲ್ಲರ ಕಣ್ತಪ್ಪಿಸಿ ಸ್ಯಾಂಟ್ರೋ ರವಿ ಶಿಫ್ಟ್ – ವಿಐಪಿ ಗೇಟ್‍ನಲ್ಲಿ ಕರೆದೊಯ್ದ ಬಗ್ಗೆ ಹೆಚ್‍ಡಿಕೆ ಕಿಡಿ

    ಸ್ಯಾಂಟ್ರೊ ರವಿ ಏನೇನು ಮಾಡಿದ್ದಾನೆ, ಯಾವ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 20 ವರ್ಷಗಳಲ್ಲಿ ಯಾರ್ಯಾರ ಸಂಪರ್ಕದಲ್ಲಿದ್ದಾನೆ. ಯಾವ್ಯಾವ ಸರ್ಕಾರಗಳ ಅವಧಿಯಲ್ಲಿ ಏನೇನು ಡೀಲ್ ಗಳನ್ನು ನಡೆಸಿದ್ದಾನೆ, ಯಾರ್ಯಾರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ, ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ನಿಖರವಾಗಿ, ಕರಾರುವಕ್ಕಾಗಿ ತನಿಖೆ ಮಾಡುವಂತೆ ಎಂದು ಪೊಲೀಸರಿಗೆ ಸಿಎಂ ಸೂಚಿಸಿದ್ದದಾರೆ. ಒಟ್ಟಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಇರುವ ಪ್ರಕರಣಗಳನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ.

    ಒಟ್ಟಿನಲ್ಲಿ ಸ್ಯಾಂಟ್ರೋ ರವಿಯ ವಿರುದ್ಧ ಸಮಗ್ರ ತನಿಖೆ ನಡೆಸಿ ಪುರಾವೆಗಳನ್ನು ಸಂಗ್ರಹಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಸ್ಯಾಂಟ್ರೋ ರವಿಯ ಸುಳಿಯಲ್ಲಿ ಯಾರಿದ್ದಾರೆ..? ಯಾರಿಲ್ಲ..? ಯಾರು ಸಿಕ್ಕಿ ಹಾಕ್ಕೋಳ್ತಾರೆ..?, ಯಾರು ಬಚಾವ್ ಆಗ್ತಾರೆ..? ಯಾರ್ಯಾರ ಬಣ್ಣ ಬಣ್ಣ ಬಯಲಾಗುತ್ತೆ..? ಅನ್ನೋದು ತನಿಖೆ ನಂತರವೇ ಗೊತ್ತಾಗುತ್ತೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k