Tag: bjp highcommand

  • ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ – ಯತ್ನಾಳ್ ಕಿಡಿ

    ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ – ಯತ್ನಾಳ್ ಕಿಡಿ

    -ಬಿಎಸ್‌ವೈ ಜೀ ಆಪ್ ಚುಪ್ ಬೈಟೊ, ಆಪ್ ಕೀ ಪೋತಾ, ಪೋತಿಕೊ ಸಂಬಾಲೊ ಎಂದು ವ್ಯಂಗ್ಯ

    ನವದೆಹಲಿ: ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ. ಅದ್ರೆ ಸಿದ್ದರಾಮಯ್ಯ, ವಿಜಯೇಂದ್ರ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎಂದು ಕಿಡಿಕಾರಿದ್ದಾರೆ.

    ದೆಹಲಿಯಲ್ಲಿ (Delhi) ಮಾತನಾಡಿದ ಅವರು, ನಿನ್ನೆ ನಮ್ಮ ಕೆಲವು ನಾಯಕರು ಕೆಲವರನ್ನು ಭೇಟಿಯಾಗಿದ್ದಾರೆ. ಇಂದು ಲಿಂಗಾಯತ ನಾಯಕರು ಹೈಕಮಾಂಡ್ ಭೇಟಿ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲ ಲಿಂಗಾಯತರು ಬಿಎಸ್‌ವೈ (BS Yediyurappa) ಪರವಾಗಿಲ್ಲ. ಅವರು ಆ ಗೌರವ ಉಳಿಸಿಕೊಂಡಿಲ್ಲ. ವಿಜಯೇಂದ್ರನನ್ನು ಅಧ್ಯಕ್ಷ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇಬ್ಬರು, ಮೂವರು ಪೇಮೆಂಟ್ ಸ್ವಾಮಿಗಳು ಅವರ ಜೊತೆಗಿದ್ದಾರೆ ಅಷ್ಟೇ. ವಿಜಯೇಂದ್ರ (BY Vijayendra) ಬಿಎಸ್‌ವೈ ಅವರು ನಕಲಿ ಸಹಿ ಮಾಡಿದ್ದಾರೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರಿಗೆ ತನಿಖೆ ಮಾಡಲು ಏನು ಕಷ್ಟ. ಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್‌ ಕೊಟ್ಟ ಆಫರ್‌ ಏನು?

    ಬಹಳಷ್ಟು ಲಿಂಗಾಯತ ನಾಯಕರನ್ನು ಮುಗಿಸಿದ್ದಾರೆ. ಬಸವರಾಜ್ ಪಾಟೀಲ್ ಸೇಡಂ, ಬಿ.ವಿ ಶಿವಪ್ಪ, ಸಿದ್ದೇಶ್ವರ್, ಮಲ್ಲಿಕಾರ್ಜುನಯ್ಯ, ಜೊತೆಗೆ ನನ್ನನ್ನು ಸತತವಾಗಿ ಮುಗಿಸುವ ಪ್ರಯತ್ನ ಮಾಡಿದರು,. ರಮೇಶ್ ಜಾರಕಿಹೊಳಿ ರಸ್ತೆಗೆ ಬರಲು ಬಿಡಲ್ಲ ಅಂತಾರೆ. ಏನು ಗೂಂಡಾಗಿರಿ ಮಾಡ್ತಿದ್ದಾರಾ? ಮೂರು ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ ಮಾಡಬೇಕು. ಹಿಂದೂಗಳ ಹತ್ಯೆ ಆಯಿತು ಬಿಎಸ್‌ವೈ ಏನಾದರೂ ಮಾಡಿದ್ರಾ? ಶಿವಮೊಗ್ಗದಲ್ಲಿ ಔರಂಗಜೇಬನ ಫೋಟೋ ಹಾಕಿದ್ದಾಗ ಏನು ಮಾಡಿದ್ರು? ಜಮೀರ್ ಅಹಮದ್ ಖಾನ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಮ್ಮ ತಂಡದಲ್ಲಿ ಕುಟುಂಬ ರಾಜಕೀಯ ಇಲ್ಲ. ಸಿದ್ದೇಶ್ವರ್, ಲಿಂಬಾವಳಿ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಅವರ ಮನೆಯವರು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ. ಅದು ಡಿಕೆಶಿ ಅವರ ಆಶೀರ್ವಾದದಿಂದ ಆಗಿದ್ದಾರೆ. ಮೊದಲ ಬಾರಿ ಶಾಸಕರಾಗಿ ರಾಜ್ಯಾಧ್ಯಕ್ಷರಾಗಿದ್ದಾರೆ. ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರರಿಂದ ಸರ್ಕಾರ ಬಂತು, ಜಾರಕಿಹೊಳಿ ಪಕ್ಷ ಗಟ್ಟಿ ಮಾಡಲು ಬಂದವರು, ವಿಜಯೇಂದ್ರ ಮಾಡಿದ್ದೇನು? ನಕಲಿ ಸಹಿ ಮಾಡಿ ಭ್ರಷ್ಟಾಚಾರ ಮಾಡಿದರು. ಶ್ರೀರಾಮುಲು ನಿಮ್ಮ ಜೊತೆಗಿದ್ದೇನೆ ಎಂದು ಹೇಳಿದ್ದಾರೆ ಎಂದರು.

    ದುಡ್ಡಿನ ಅಹಂಕಾರದಿಂದ ಎಲ್ಲರನ್ನು ಖರೀದಿ ಮಾಡಬಹುದು ಅಂದುಕೊಂಡಿದ್ದಾರೆ. ಎಲ್ಲರನ್ನು ಎಲ್ಲ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ, ನಿನ್ನ ಬಳಿ ದುಡ್ಡು ಇರಬಹುದು, ಚಾರಿತ್ರ‍್ಯ ಇಲ್ಲ. ನಾನು ಅಧ್ಯಕ್ಷನಾಗಲು ಪ್ರಯತ್ನ ಮಾಡುತ್ತಿಲ್ಲ. ಯಾವುದೇ ಸಮುದಾಯದ ನಾಯಕರು ಅಧ್ಯಕ್ಷರಾಗಬಹುದು. ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೆ, ಅವರು ಹೇಳಿದ ತಕ್ಷಣ ನಿಮಗೆ ತಿಳಿಸುತ್ತೇವೆ. ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಹೈಕಮಾಂಡ್ ನಿರ್ಧಾರ ಬದಲಾವಣೆ ಮಾಡಿದ್ದರೆ ಮುಂದೆ ಏನು ಮಾಡುತ್ತೇವೆ ಎನ್ನುವ ಕುರಿತು ಹೇಳುತ್ತೇನೆ ಎಂದು ಹೇಳಿದರು.

    ಯಡಿಯೂರಪ್ಪ ಹೊಸ ನಾಟಕ ಕಂಪನಿ ತೆಗೆದಿದ್ದಾರೆ. ಹುಷಾರಿಲ್ಲ ಎಂದು ನಾಟಕ ಮಾಡುತ್ತಿದ್ದಾರೆ. ಹುಷಾರಿಲ್ಲದವರು ನಿನ್ನೆ ಸಿದ್ದರಾಮಯ್ಯರನ್ನು ಹೇಗೆ ಭೇಟಿ ಮಾಡಿದರು? ಎಲ್ಲರನ್ನು ಕರೆಸಿಕೊಂಡು ಸಿಂಪಥಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚು ಮೊಮ್ಮಕ್ಕಳಿದ್ದಾರೆ, ಆಟ ಆಡ್ತಾ ಕೂತರೆ ನೂರು ವರ್ಷ ಬದುಕಬಹುದು. ಯಡಿಯೂರಪ್ಪ ಜೀ ಆಪ್ ಚುಪ್ ಬೈಟೊ, ಆಪ್ ಕೀ ಪೋತಾ, ಪೋತಿಕೊ ಸಂಬಾಲೊ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು

     

  • Loksabha Elections: ಬಿಜೆಪಿ ರಾಜ್ಯವಾರು ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ

    Loksabha Elections: ಬಿಜೆಪಿ ರಾಜ್ಯವಾರು ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ

    ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Election) ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

    ಈ ಸಂಬಂಧ ಬಿಜೆಪಿ ಹೈಕಮಾಂಡ್‌ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಸಂಸದ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ (Radha Mohan Das Agarwal) ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ (Sudhakar Reddy) ಅವರನ್ನ ನೇಮಕ ಮಾಡಿದೆ.

    ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: I.N.D.I.A ಒಕ್ಕೂಟದಿಂದ ಜೆಡಿಯು ಔಟ್?- ಬಿಜೆಪಿ ಜೊತೆ ಸರ್ಕಾರ ರಚನೆ ಬಹುತೇಕ ಫಿಕ್ಸ್

    ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಉಸ್ತುವಾರಿಯಾಗಿ ತರುಣ್ ಚುಗ್ ಹಾಗೂ ಆಶಿಶ್ ಸೂದ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗೆ ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

  • ವಿಜಯೇಂದ್ರ ಆಯ್ಕೆ ಹಿಂದಿನ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನು?

    ವಿಜಯೇಂದ್ರ ಆಯ್ಕೆ ಹಿಂದಿನ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನು?

    ಬೆಂಗಳೂರು: ಅಸೆಂಬ್ಲಿ ಚುನಾವಣೆಯಲ್ಲಿ ಎದುರಾದ ಆಘಾತಕಾರಿ ಸೋಲಿನಿಂದ ನಿರಾಸೆಯ ಮಡುವಿನಲ್ಲಿ ಮುಳುಗಿದ್ದ ರಾಜ್ಯ ಬಿಜೆಪಿಗೆ ಬರೋಬ್ಬರಿ ಅರು ತಿಂಗಳ ಬಳಿಕ ಹೈಕಮಾಂಡ್ ಜೋಶ್ ತುಂಬುವ ರೀತಿಯ ಟಾನಿಕ್ ನೀಡಿದೆ. ಇದನ್ನು ಬೇಕಿದ್ರೆ ರಾಜ್ಯ ಬಿಜೆಪಿಗೆ (BJP) ದೀಪಾವಳಿ ಗಿಫ್ಟ್ ಎಂದರೂ ತಪ್ಪಾಗಲಿಕ್ಕಿಲ್ಲ.

    ಲೋಕಸಭಾ ಚುನಾವಣೆ (Loksabha Election) ದೃಷ್ಟಿಯಿಂದ ಇನ್ನು ತಡ ಮಾಡಿದ್ರೆ ಸರಿ ಹೋಗಲ್ಲ ಎಂಬ ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಸಾಕಷ್ಟು ಅಳೆದುತೂಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಪುತ್ರ, ಶಿಕಾರಿಪುರದ ಶಾಸಕ ಬಿವೈ ವಿಜಯೇಂದ್ರರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಕಟೀಲ್ ಸ್ಥಾನಕ್ಕೆ ಯಾರು ಎಂಬ ಕುತೂಹಲಕ್ಕೆ ಹೈಕಮಾಂಡ್ ತೆರೆ ಎಳೆದಿದೆ.

    ಬಿಜೆಪಿ ಹೈಕಮಾಂಡ್ (BJP HighCommand) ಈ ಆದೇಶ ಹೊರಡಿಸಿದ ಸಂದರ್ಭದಲ್ಲಿ ಧವಳಗಿರಿ ನಿವಾಸದಲ್ಲಿ ತಂದೆ ಯಡಿಯೂರಪ್ಪ ಜೊತೆಗೆ ವಿಜಯೇಂದ್ರ ಇದ್ದರು. ಹೈಕಮಾಂಡ್ ಆದೇಶ ನೋಡಿ ಇಬ್ಬರು ಫುಲ್ ಖುಷಿಯಾದ್ರು. ಒಳ್ಳೆಯದಾಗಲಿ ಎಂದು ಪುತ್ರನಿಗೆ ಯಡಿಯೂರಪ್ಪ ಹರಸಿದ್ರು. ಈ ಬೆನ್ನಲ್ಲೇ ವಿಜಯೇಂದ್ರಗೆ ಅಭಿನಂದನೆಗಳ ಮಹಾಪೂರವೇ ಹರಿದುಬರಲು ಶುರುವಾಯ್ತು.

    ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ವಿಜಯೇಂದ್ರ

    ಹಲವು ನಾಯಕರು ಮತ್ತೆ ಬಿಎಸ್‍ವೈ ಮನೆಯನ್ನು ಎಡತಾಕಿದ್ರು. ಶಿಕಾರಿಪುರದಲ್ಲಿ, ಯಾದಗಿರಿಯಲ್ಲಿ ವಿಜಯೇಂದ್ರ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ತಮ್ಮ ಮೇಲೆ ವಿಶ್ವಾಸವಿಟ್ಟು ಅತಿದೊಡ್ಡ ಜವಾಬ್ದಾರಿ ನೀಡಿದ ಹೈಕಮಾಂಡ್ ನಾಯಕರಿಗೆ ವಿಜಯೇಂದ್ರ ಧನ್ಯವಾದ ಹೇಳಿದ್ರು. ಸದ್ಯದಲ್ಲೇ ಎದುರಾಗಲಿರುವ ಲೋಕಸಭೆ ಚುನಾವಣೆ ಸವಾಲನ್ನು ಸಮರ್ಥವಾಗಿ ಎದುರಿಸಿ, ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಿಸಲು ಕೆಲಸ ಮಾಡೋದಾಗಿ ವಿಜಯೇಂದ್ರ ಪ್ರಕಟಿಸಿದ್ರು. ಮಾಜಿ ಮಂತ್ರಿ ಸೋಮಣ್ಣ ಆದಿಯಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುವುದಾಗಿ ವಿಜಯೇಂದ್ರ ಘೋಷಿಸಿದರು.

    ಹೈಕಮಾಂಡ್ ಲೆಕ್ಕಾಚಾರ ಏನು?: ರಾಜ್ಯದಲ್ಲಿ ಬಿಜೆಪಿಗೆ ಬಿಎಸ್‍ವೈ ಅನಿವಾರ್ಯವಾಗಿದ್ದಾರೆ. ಮುಂಬರುವ ಲೋಕಸಮರಕ್ಕೆ ಈ ಮೂಲಕ ಬಿಎಸ್‍ವೈ ಶಕ್ತಿ ಬಳಕೆ ತಂತ್ರ ರೂಪಿಸಲಾಗಿದೆ. ಜೊತೆಗೆ ಲಿಂಗಾಯತರನ್ನು ಕೈಬಿಟ್ಟಿಲ್ಲ ಎನ್ನುವ ಸಂದೇಶ ರವಾನಿಲಾಗಿದೆ.

    ಲಿಂಗಾಯತ ಸಮುದಾಯದ ಮತಬ್ಯಾಂಕ್ ರಕ್ಷಣೆಯ ಪ್ಲಾನ್ ಇದಾಗಿದ್ದು, ಸಮುದಾಯದ ನಾಯಕರ ವಲಸೆಗೂ ತಡೆಯೊಡ್ಡುವ ತಂತ್ರವಾಗಿದೆ. ಆಪರೇಷನ್ ಹಸ್ತ ತಡೆಯಲು ವಿಜಯೇಂದ್ರ `ಶಕ್ತಿ’ ಬಳಕೆ ಮಾಡಲಾಗುತ್ತಿದೆ. ಯಾಕೆಂದರೆ ವಿಜಯೇಂದ್ರ ಅವರು ಯುವ ಮುಖ, ಮಾಸ್ ಫೇಸ್ ಆಗಿದ್ದಾರೆ. ಪಕ್ಷ ಸಂಘಟನೆಗೆ ದೀರ್ಘಾವಧಿ ನಾಯಕತ್ವದ ದೃಷ್ಟಿಯಿಂದಲೂ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಲಿಂಗಾಯತ ಹಾಗೂ ಒಕ್ಕಲಿಗ ನಾಯಕತ್ವ ಕಾಂಬಿನೇಶನ್‍ಗೆ ಪ್ಲಾನ್ ಮಾಡಲಾಗಿದೆ.

  • 50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

    50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

    ವಿಜಯಪುರ: ಕಾಂಗ್ರೆಸ್‌ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್‌ ಶಾಸಕರು ಬಿಜೆಪಿ ಹೈಕಮಾಂಡ್‌ (BJP HighCommand) ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ (Murugesh Nirani) ಹೊಸ ಬಾಂಬ್‌ ಸಿಡಿಸಿದ್ದಾರೆ.

    ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು‌, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆ: ಮೋದಿ ಘೋಷಣೆ

    ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು ಬಣ ಸೃಷ್ಟಿಯಾಗಿದೆ. 4 ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಸಿಎಂ ವಿಚಾರದಲ್ಲೂ ಗೊಂದಲ ಸೃಷ್ಟಿಯಾಗಿದೆ, ರಾಜ್ಯ ಸರ್ಕಾರವೇ (Government Of Karnataka) ಗೊಂದಲದಲ್ಲಿದೆ. ಈ ಸರ್ಕಾರ ಖಂಡಿತವಾಗಿಯೂ 5 ವರ್ಷ ಮುಂದುವರಿಯಲ್ಲ. 50 ಶಾಸಕರು ಬಿಜೆಪಿ ಹೈಕಮಾಂಡ್‌ ಸಂಪರ್ಕದಲ್ಲಿದ್ದಾರೆ. ಡಿಸಿಎಂ ಆಕಾಂಕ್ಷಿ ಸಚಿವರು, ಸಚಿವ ಸ್ಥಾನ ವಂಚಿತ ಶಾಸಕರು, ಅಸಮಾಧಾನಿತ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರೇ ಬಂದು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ನಾವು ಸರ್ಕಾರ ಕೆಡವಲ್ಲ, ತಾನಾಗಿಯೇ ಪತನವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

    ಮುಂದುವರಿದು, ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಇದೆಯಾ ಅನ್ನೋದು ಗೊತ್ತಿಲ್ಲ. ಗ್ಯಾರಂಟಿಗಳ ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ. ಫ್ರೀ ಕರೆಂಟ್‌ ಕೊಡ್ತೀವಿ ಅಂತ ಈಗ ಪವರ್‌ ಕಟ್‌ ಮಾಡ್ತಿದ್ದಾರೆ. ಮಹಿಳೆಯರಿಗೆ ಫ್ರಿ ಬಸ್‌ ಅಂತ ಹೇಳಿ ಬಸ್‌ ಕಡಿಮೆ ಮಾಡಿದ್ದಾರೆ. ಹಿಂದಿನ ಸರ್ಕಾರದ ಕಾಮಗಾರಿಗಳೂ ನಡೆಯುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸ ಮಾಡ್ತಿದ್ದಾರೆ. ಒಟ್ಟಿನಲ್ಲಿ ಈ ರಾಜ್ಯದ ಜನರಿಗೆ ಕಾಂಗ್ರೆಸ್‌ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ರಾಜ್ಯಾಧ್ಯಕ್ಷನಾಗುವ ಆಸೆಯಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ಅರ್ಹತೆಗೆ ಅನುಗುಣವಾಗಿ ಕೊಟ್ಟ ಕೆಲಸ ಮಾಡ್ತೇನೆ. ಟಿಕೆಟ್‌ ಕೊಡದೆ ಕಾರ್ಯಕರ್ತನಾಗಿ ಕೆಲಸ ಮಾಡು ಅಂದರೂ ಮಾಡ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

  • ಇಂದು ಹೈಕಮಾಂಡ್ ನಾಯಕರ ಭೇಟಿಯಾಗಲಿರೋ ಬೊಮ್ಮಾಯಿ- ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಹುದ್ದೆ ಚರ್ಚೆ

    ಇಂದು ಹೈಕಮಾಂಡ್ ನಾಯಕರ ಭೇಟಿಯಾಗಲಿರೋ ಬೊಮ್ಮಾಯಿ- ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಹುದ್ದೆ ಚರ್ಚೆ

    ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ದೆಹಲಿ ತೆರಳಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ.

    ಸೋಮವಾರ ಇಡೀ ದಿನದ ಪ್ರಯತ್ನದ ಬಳಿಕವೂ ವರಿಷ್ಠರ ಸಮಯ ಸಿಗಲಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲಿ ಸಾಲು ಸಾಲು ಮಸೂದೆಗಳ ಮಂಡನೆ ಹಿನ್ನೆಲೆ ಹೈಕಮಾಂಡ್ ಬೊಮ್ಮಾಯಿಗೆ ಸಮಯ ನೀಡಿಲ್ಲ.

    ಇಂದು ಬೊಮ್ಮಾಯಿಯವರು ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಮಯ ಕೇಳಿದ್ದಾರೆ. ಇಂದು ವರಿಷ್ಠರಿಂದ ಸಮಯ ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾಷಣದಲ್ಲಿ ಮತದಾರರಿಗೆ ಆಮಿಷ – ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದು

    ಒಂದು ವೇಳೆ ನಾಯಕರ ಭೇಟಿ ಮಾಡಿದರೆ ವಿಪಕ್ಷ ನಾಯಕನ ಹುದ್ದೆ ಚರ್ಚೆ ಹಾಗೂ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡಲು ತಿರ್ಮಾನ ಮಾಡಿದ್ದಾರೆ. ಆದರೆ ವಿಪಕ್ಷ ನಾಯಕ ಹುದ್ದೆ ಕೇಳಲು ಬೊಮ್ಮಾಯಿ ಹಿಂದೇಟು ಹಾಕಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದೆ. ಹೀಗಾಗಿ ಈಗಾಗಲೇ ಅವರು ವರಿಷ್ಠರ ಮುಂದೆ ಸೋಲಿನ ಹೊಣೆ ಹೊತ್ತಿದ್ದಾರೆ. ಈ ಹಿನ್ನಲೆ ತಮಗೆ ಸ್ಥಾನ ಕೇಳುವ ಬದಲು, ಶೀಘ್ರ ವಿಪಕ್ಷ ನಾಯಕ ಆಯ್ಕೆಗೆ ಮನವಿ ಸಾಧ್ಯತೆ ಇದೆ.

    ಒಟ್ಟಿನಲ್ಲಿ ಹೈಕಮಾಂಡ್ ಖುದ್ದು ಅವಕಾಶ ನೀಡಿದ್ದಲ್ಲಿ ಮಾತ್ರ ಅಖಾಡಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

    ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

    ಮಂಡ್ಯ: ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಹೈಕಮಾಂಡ್ (BJP HighCommand) ಮಂಡ್ಯ ಉಸ್ತುವಾರಿ ವಿಚಾರಕ್ಕೆ ಎಡವಟ್ಟು ಮಾಡಿಕೊಂಡಂತಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲು ಸಚಿವರ ಹಿಂದೇಟು ಹಾಕುತ್ತಿದ್ದು, ಅನಿವಾರ್ಯವಾಗಿ ಅಶ್ವಥ್ ನಾರಾಯಣ್ (Ashwath Narayan) ಹೆಗಲಿಗೆ ಉಸ್ತುವಾರಿ ಹೊಣೆ ಬೀಳಲಿದೆ ಎನ್ನಲಾಗುತ್ತಿದೆ.

    ಕಳೆದ ತಿಂಗಳು ಗೋಪಾಲಯ್ಯ (Gopalaiah) ಬದಲು ಆರ್. ಅಶೋಕ್‍ (R Ashok) ಗೆ ಮಂಡ್ಯ ಉಸ್ತುವಾರಿ ವಹಿಸಲಾಗಿತ್ತು. ಆದರೆ ಗೋ ಬ್ಯಾಕ್ ಅಶೋಕ್ ಅಭಿಯಾನದ ಬಳಿಕ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಅಶೋಕ್ ಹೇಳುತ್ತಿದ್ದರೆ, ಇತ್ತ ಮಂಡ್ಯ ಉಸ್ತುವಾರಿ ವಹಿಸಿಕೊಳ್ಳಲು ಯಾವೊಬ್ಬ ಸಚಿವರು ಮುಂದೆ ಬರುತ್ತಿಲ್ಲ. ಹಿಂದೆ ಉಸ್ತುವಾರಿ ಆಗಿದ್ದ ನಾರಾಯಣಗೌಡ (Narayana Gowda), ಗೋಪಾಲಯ್ಯ ಸಹ ನಿರುತ್ಸಾಹ ತೋರಿದ್ದಾರೆ. ಇದನ್ನೂ ಓದಿ: ಹೆಚ್‍ಡಿಕೆ ಟಕ್ಕರ್ ಕೊಡಲು ಚನ್ನಪಟ್ಟಣದಿಂದ ಕಣಕ್ಕಿಳಿಯುತ್ತಾರಾ ರಮ್ಯಾ?

    ಚುನಾವಣೆಗೆ ಕೇವಲ ಒಂದು ತಿಂಗಳಿದ್ದು, ಪಕ್ಷ ಸಂಘಟನೆ ಕಷ್ಟವಾಗಲಿದೆ. ಜಿಲ್ಲಾ ನಾಯಕತ್ವ ತೆಗೆದುಕೊಂಡರೆ ಜಿಲ್ಲೆ ಸುತ್ತಬೇಕು, ಸ್ವಕ್ಷೇತ್ರಕ್ಕೆ ಸಮಯ ಕೊಡಲು ಆಗಲ್ಲ. ತಮ್ಮ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ ಉಸ್ತುವಾರಿ ಬೇಡ ಎಂದು ಸಚಿವರು ಹೇಳುತ್ತಿದ್ದು, ಕಡೆಯದಾಗಿ ಸಚಿವ ಅಶ್ವಥ್ ನಾರಾಯಣ್‍ಗೆ ಪಟ್ಟ ಕಟ್ಟಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗ್ತಿದೆ.

    ಅಲ್ಲದೇ ಪ್ರಬಲ ಒಕ್ಕಲಿಗ ನಾಯಕ, ಡಿಕೆಶಿ (DK Shivakumar), ಹೆಚ್‍ಡಿಕೆ (H D Kumaraswamy) ಸರಿಸಮನಾಗಿ ಪೈಪೋಟಿ ನೀಡುವ ನಾಯಕ ಎನ್ನುವ ಉದ್ದೇಶದಿಂದ ಉಸ್ತುವಾರಿ ಜವಬ್ದಾರಿ ನೀಡಬಹುದಾಗಿದೆ. ಉಸ್ತುವಾರಿ ಚರ್ಚೆ ಬೆನ್ನಲ್ಲೇ ಅಶ್ವಥ್ ನಾರಾಯಣ್ ಇಂದು ಮಂಡ್ಯಗೆ ಭೇಟಿ ನೀಡಲಿದ್ದು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಡಿಯೂರಪ್ಪರನ್ನು ಬೈಬೇಡ ಅಂತ ಹೈಕಮಾಂಡ್‌ ಹೇಳಿದೆ!

    ಯಡಿಯೂರಪ್ಪರನ್ನು ಬೈಬೇಡ ಅಂತ ಹೈಕಮಾಂಡ್‌ ಹೇಳಿದೆ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಜೆಪಿ ಪಾಳಯಕ್ಕೆ ಸಿದ್ದು ಟಾರ್ಗೆಟ್- ಚಕ್ರವ್ಯೂಹ ರೂಪಿಸುವಂತೆ ಹೈಕಮಾಂಡ್‍ನಿಂದಲೇ ಸಂದೇಶ?

    ಬಿಜೆಪಿ ಪಾಳಯಕ್ಕೆ ಸಿದ್ದು ಟಾರ್ಗೆಟ್- ಚಕ್ರವ್ಯೂಹ ರೂಪಿಸುವಂತೆ ಹೈಕಮಾಂಡ್‍ನಿಂದಲೇ ಸಂದೇಶ?

    ಬೆಂಗಳೂರು: ಒಂದೆಡೆ ಕೆಪಿಸಿಸಿ ಅಧ್ಯಕ್ಷ (KPCC President) ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಟಾರ್ಗೆಟ್ ಮಾಡ್ತಿದ್ರೆ ಮತ್ತೊಂದೆಡೆ ಸಿದ್ದರಾಮಯ್ಯ ಟಾರ್ಗೆಟ್ ಆಗಿದ್ದಾರೆ. ಎರಡು ಅಸ್ತ್ರ, ಎರಡು ರಿಸಲ್ಟ್, ಬಿಜೆಪಿ (Bharatiya Janata Party) ನಡೆ ಕುತೂಹಲ ಮೂಡಿಸಿದೆ.

    ಇಬ್ಬರ ಮೇಲೆ ಪ್ರತ್ಯೇಕ ಚಕ್ರವ್ಯೂಹ ರೂಪಿಸಿದ್ದು ಹೈಕಮಾಂಡ್‍ನಿಂದಲೇ ಸಂದೇಶ ರವಾನೆ ಆಯ್ತಾ ಅನ್ನೋ ಪ್ರಶ್ನೆ ಎದ್ದಿದೆ. ಒಂದೆಡೆ ರಮೇಶ್ ಜಾರಕಿಹೊಳಿ (Ramesh Jarakiholi) ಯಿಂದ 2023ರ ಇಡೀ ಪ್ರಚಾರದಲ್ಲಿ ಡಿಕೆಶಿ ಪರ್ಸನಲ್ ಆಟ್ಯಾಕ್ ಆಗ್ತಿದೆ. ಇನ್ನೊಂದು ಕಡೆ ಸಿದ್ದರಾಮಯ್ಯ ವಿರುದ್ಧ ಹಳೇ ಶಿಷ್ಯರಿಂದಲೇ ದಾಳಿ ತಂತ್ರ ನಡೀತಿದೆ. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿ ಬಣ ಸಂಘರ್ಷ – ಕಚ್ಚಾಟಕ್ಕೆ ತೆರೆ ಎಳೆಯಲು ಅಮಿತ್ ಶಾ ಸೂತ್ರ

    ಸಿದ್ದರಾಮಯ್ಯ (Siddaramaiah) ಮೇಲೆ ಚಾರ್ಜ್ ಫ್ರೇಮ್ ಆಗ್ತಿಲ್ಲ, ಎಲೆಕ್ಷನ್ ಅಟ್ಯಾಕ್ ಕಠಿಣವಾಗಿರಬೇಕು. ಹಳೆಯ ಆರೋಪಗಳ ಬಗ್ಗೆ ಕಾಂಗ್ರೆಸ್ (Congress) ತಲೆ ಕೆಡಿಸಿಕೊಳ್ಳುವಂತೆ ಮಾಡಿ, ಹಳೆಯದನ್ನ ಕೆದಕಿ. ಹೀಗಂತ ಬಿಜೆಪಿ ಹೈಕಮಾಂಡ್‍ನಿಂದ ಸಂದೇಶ ರವಾನೆ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಸಿದ್ದರಾಮಯ್ಯ ಟಾರ್ಗೆಟ್ ಮಾಡಲು ಹಳೇ ಶಿಷ್ಯ ಸುಧಾಕರ್ (Dr. K Sudhakar) ಫಿಕ್ಸ್ ಮಾಡಲಾಗಿದೆಯಂತೆ. ಸುಧಾಕರ್ ಅಸ್ತ್ರಕ್ಕೆ ಸಿದ್ದರಾಮಯ್ಯ ತಲೆಕೆಡಿಸಿಕೊಂಡಿದ್ದು ಕಿಡಿಕಾರುತ್ತಿದ್ದಾರೆ.

    ಮೂಲ ಬಿಜೆಪಿ ಸಚಿವರು ಸೈಲೆಂಟ್: ಚುನಾವಣಾ ಅಖಾಡದಲ್ಲಿ ಒಬ್ಬೊಬ್ಬರು ಒಂದೊಂದು ತಂತ್ರ ರೂಪ್ತಿಸ್ತಿದ್ದಾರೆ. ಆದರೆ ಮೂಲ ಬಿಜೆಪಿ ಸಚಿವರು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಸಂಘಟನೆಯಲ್ಲೂ ಸದ್ದಿಲ್ಲ, ರಾಜಕೀಯ ಗುದ್ದಾಟದಲ್ಲೂ ಮುಂದಿಲ್ಲ. ವಲಸಿಗರಿಂದಲೇ ಸಿದ್ದು, ಡಿಕೆಶಿ ಮೇಲೆ ಬ್ರಹ್ಮಾಸ್ತ್ರ. ನಿತ್ಯ ಅವರದ್ದೇ ಕಾದಾಟ ನಡೆಯುತ್ತಿದೆ. ಮೂಲ ಬಿಜೆಪಿ ಸಚಿವರು ಸೈಲೆಂಟ್ ಆಗಿದ್ದು, ಎಲ್ಲಿಯೂ ಆಗ್ರೆಸೀಟ್ ಆಟ್ಯಾಕ್ ಇಲ್ಲ. ಮಾಧುಸ್ವಾಮಿ ಹೇಳಿದ್ದ ವಲಸಿಗರೇ ಮುಂಚೂಣಿ ಎಂಬ ಮಾತು ಪಕ್ಷದಲ್ಲಿ ಚರ್ಚೆ ಆಗ್ತಿದ್ಯಾ? ಸರ್ಕಾರದ ವಿರುದ್ಧ ತಿರುಗಿಬಿದ್ದಾಗಲೂ ಮೂಲ ಬಿಜೆಪಿ ಸಚಿವರು ದಂಡಾಗಿ ಮುಗಿಬೀಳಲ್ಲ. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವ ಅನಿವಾರ್ಯತೆಯಿಲ್ಲ: ಹೆಚ್‌ಡಿಕೆ

    ಸಾಂದರ್ಭಿಕ ಚಿತ್ರ

    ಸಾಂದರ್ಭಿಕ ಚಿತ್ರ

    ಪಕ್ಷದ ಬಗ್ಗೆ, ಆರ್ ಎಸ್‍ಎಸ್ (RSS) ಬಗ್ಗೆ ಮಾತನಾಡಿದಾಗಲೂ ಪೊಲಿಟಿಕಲ್ ಆಟ್ಯಾಕ್ ಮಾಡಲ್ಲ. ಬಹಳಷ್ಟು ಸಚಿವರು ಸರ್ಕಾರವನ್ನೂ ಸಮರ್ಥಿಸಲ್ಲ, ಪಕ್ಷವನ್ನೂ ಸಮರ್ಥಿಸಲ್ಲ ಎಂಬ ಆರೋಪವಿದೆ. ಪಕ್ಷದ ವೇದಿಕೆಯಲ್ಲೇ ಕೆಲ ಸಚಿವರ ನಡವಳಿಕೆಯ ವಿರುದ್ಧ ಅಸಮಾಧಾನ ವ್ಯಕ್ತವಾಗ್ತಿದೆಯಂತೆ. ವಾರ್ ಫೀಲ್ಡ್ ಸಮಯದಲ್ಲಿ ಸಪ್ಪೆಯಾದ್ರೆ ಪಕ್ಷಕ್ಕೆ ಡ್ಯಾಮೇಜ್ ಎಂಬುದು ಆಂತರಿಕ ಆಕ್ರೋಶಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಜೆಪಿಯ 20 ಶಾಸಕರಿಗೆ ಟಿಕೆಟ್ ಟೆನ್ಷನ್ – ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್

    ಬಿಜೆಪಿಯ 20 ಶಾಸಕರಿಗೆ ಟಿಕೆಟ್ ಟೆನ್ಷನ್ – ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್

    ಬೆಂಗಳೂರು: 20 ಹಾಲಿ ಬಿಜೆಪಿ (BJP) ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

    16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್ (BJP HighCommand) ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ ಶುರುವಾಗಿದ್ದು, ಬಿಜೆಪಿ ಟಿಕೆಟ್ (BJP Ticket) ನೀಡಿಕೆ ಮಾನದಂಡಗಳ ಬಗ್ಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಆಗುತ್ತಿದೆ. ಗುಜರಾತ್ ಮಾಡೆಲ್, ಉತ್ತರ ಪ್ರದೇಶ ಮಾಡೆಲ್‍ಗಳ ಪ್ರಯೋಗದ ಬಗ್ಗೆ ಆತಂಕ ವ್ಯಕ್ತವಾಗ್ತಿದೆ. ಬರೋಬ್ಬರಿ 20ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಕೈ ತಪ್ಪು ಆತಂಕವಿದೆ ಎನ್ನಲಾಗಿದೆ. 

    ನಾಲ್ಕು ಜಿಲ್ಲೆಗಳಲ್ಲಿ ತಲಾ ಇಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆ ಚರ್ಚೆ ಆಗುತ್ತಿದ್ದರೆ, 12 ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕ್ಷೇತ್ರಗಳಲ್ಲಿ ವೈಯುಕ್ತಿಕ ವರ್ಚಸ್ಸಿನ ಕುಸಿತ, ಆಡಳಿತ ವಿರೋಧಿ ಅಲೆಯ ಬಗ್ಗೆ ಹೈಕಮಾಂಡ್ ವರದಿ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮಂಡ್ಯ ಗೆಲ್ಲಲು ಬಿಜೆಪಿಯಿಂದ ಹಿಂದುತ್ವದ ಅಜೆಂಡಾ

    ಈಗಾಗಲೇ 20ಕ್ಕೂ ಹೆಚ್ಚು ಕ್ಷೇತ್ರಗಳ ವರದಿಯನ್ನ ಪಡೆದಿರುವ ಬಿಜೆಪಿ ಹೈಕಮಾಂಡ್, ಏನ್ ಮಾಡುತ್ತೆ ಅನ್ನೋ ಆತಂಕ ಇದೆ. ಅಲ್ಲದೆ ವಯಸ್ಸಿನ ಕಾರಣದಿಂದಾಗಿ ಯಡಿಯೂರಪ್ಪ ಮಾಡೆಲ್ ಅನುಸರಿಸುವ ಬಗ್ಗೆಯೂ ಸುಳಿವು ಸಿಕ್ಕಿದೆ ಎನ್ನಲಾಗ್ತಿದೆ. ಒಟ್ಟಾರೆ ಮೂರು ಅಂಶಗಳ ಮಾನದಂಡಗಳನ್ನಿಟ್ಟುಕೊಂಡು ಕೆಲ ಹಾಲಿ ಶಾಸಕರಿಗೆ ಗೇಟ್ ಪಾಸ್ ಸಾಧ್ಯತೆ ಇದ್ದು, ಫೆಬ್ರವರಿ ಎರಡನೇ ವಾರದ ಬಳಿಕ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಸ್ಪಷ್ಟವಾದ ಸುಳಿವು ಸಿಗಲಿದೆ. ಹಾಗಾದ್ರೆ ಯಾರಿಗೆಲ್ಲ ಲಾಸ್ಟ್ ಸ್ವೀಟ್…? ಯಾರಿಗೆಲ್ಲ ಕಡೆ ಗಳಿಗೆಯ ಕಹಿ…? ಎಂಬುದಕ್ಕೆ ಚಾಣಕ್ಯರ ನಡೆ ಬಗ್ಗೆ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k