Tag: bjp highcommand

  • ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    bjP

    ಬೆಂಗಳೂರಿನಲ್ಲಿ ಲಾ ಅಂಡ್ ಆರ್ಡರ್ ಎಲ್ಲಿದೆ?
    ಇದೇ ವೇಳೆ ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

    ಪ್ರತಿ ಜಿಲ್ಲೆಗಳಿಗೂ ಮೃಗಾಲಯ?
    ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಮೃಗಾಲಯಗಳನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಸ್ಥಳವನ್ನು ಗುರುತು ಮಾಡುತ್ತಿದ್ದೇವೆ. ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ಕೇಂದ್ರದ ಅನುಮತಿ ಬಂದ ಮೇಲೆಯೇ ಈ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಸೋಮವಾರ ಮತ್ತೆ ದೆಹಲಿಗೆ ಸಿಎಂ- ಮುಂದಿನ ಬುಧವಾರ ಹೊಸ ಸಂಪುಟ ರಚನೆ ಸಾಧ್ಯತೆ

    ಸೋಮವಾರ ಮತ್ತೆ ದೆಹಲಿಗೆ ಸಿಎಂ- ಮುಂದಿನ ಬುಧವಾರ ಹೊಸ ಸಂಪುಟ ರಚನೆ ಸಾಧ್ಯತೆ

    – ಮೊದಲ ಹಂತದಲ್ಲಿ 20 ರಿಂದ 25 ಶಾಸಕರಿಗೆ ಚಾನ್ಸ್

    ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ಮೊದಲ ದೆಹಲಿ ಯಾತ್ರೆ ಮುಗಿಸಿದ್ದಾರೆ. ಆದರೆ ಈ ಯಾತ್ರೆಗಳು ಸದ್ಯಕ್ಕೆ ಮುಗಿಯುವುದಿಲ್ಲ. ಕಾರಣ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

    ಬೊಮ್ಮಾಯಿ ನೀಡಿದ 18 ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೇವಲ 6 ಹೆಸರಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಆರು ಹೆಸರುಗಳನ್ನು ಹೈಕಮಾಂಡ್ ತಿಳಿಸಿದೆ. ಹೊಸ ಪಟ್ಟಿಯೊಂದಿಗೆ ಮತ್ತೆ ದೆಹಲಿಗೆ ಬರುವಂತೆ ಬೊಮ್ಮಾಯಿಗೆ ಹೈಕಮಾಂಡ್ ಸೂಚಿಸಿದೆ. ಸೋಮವಾರ ಮತ್ತೊಮ್ಮೆ ಬೊಮ್ಮಾಯಿ ದೆಹಲಿಗೆ ಹೋಗುವ ಸಂಭವ ಇದೆ. ಮುಂದಿನ ಬುಧವಾರ ಸಂಪುಟ ರಚನೆಯಾಗಬಹುದು.

    ದೆಹಲಿ ಮೂಲಗಳ ಪ್ರಕಾರ, 2 ಹಂತಗಳಲ್ಲಿ ಸಂಪುಟ ರಚನೆಯಾಗುವ ಸಂಭವ ಇದೆ. ಮೊದಲ ಹಂತದಲ್ಲಿ 20ರಿಂದ 25 ಮಂದಿ ಸಂಪುಟ ಸೇರುವ ಸಾಧ್ಯತೆಗಳಿವೆ. 10ರಿಂದ 12 ಸಚಿವರನ್ನು ಕೈಬಿಡಲಿದ್ದು, ಇದರಲ್ಲಿ ಇಬ್ಬರಿಂದ ಮೂವರು ವಲಸಿಗರು ಇರಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೆಪಿಎಲ್‍ನಲ್ಲಿ ಆಡದಂತೆ ಬಿಸಿಸಿಐ ನನಗೆ ಬೆದರಿಕೆ ಹಾಕುತ್ತಿದೆ: ಹರ್ಷಲ್ ಗಿಬ್ಸ್ ಆರೋಪ

    ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಮುಂದುವರಿದಿದೆ. ಮಾಜಿ ಸಿಎಂ ಯಡಿಯೂರಪ್ಪರನ್ನು ಮುನಿರತ್ನ, ನಿರಾಣಿ, ರೇಣುಕಾಚಾರ್ಯ, ಪ್ರಭು ಚವ್ಹಾಣ್, ರಮೇಶ್ ಜಾರಕಿಹೊಳಿ ಸೇರಿ ಹಲವರು ಭೇಟಿ ಮಾಡಿದ್ರು. ಮುನಿರತ್ನಗೆ ಮಂತ್ರಿ ಸ್ಥಾನದ ಭರವಸೆಯನ್ನು ಯಡಿಯೂರಪ್ಪ ನೀಡಿದ್ದಾರೆ ಅಂತಾ ತಿಳಿದುಬಂದಿದೆ. ಮತ್ತೊಂದ್ಕಡೆ ಈಶ್ವರಪ್ಪ ಡಿಸಿಎಂ ಆಗಲು ಭಾರೀ ಕಸರತ್ತು ನಡೆಸಿದ್ದಾರೆ.

    ಇಂದು ಆರ್‍ಎಸ್‍ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಸಭೆ ನಡೆಸಿದ್ದಾರೆ. ಸ್ಪೀಕರ್ ಕಾಗೇರಿ, 2 ವರ್ಷದ ರಿಪೋರ್ಟ್ ರಿಲೀಸ್ ಮಾಡಿದ್ದಾರೆ. ಯಾಕೆ ಇದು.. ನೀವು ಮಂತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ರಾಂಗ್ ಅಡ್ರೆಸ್‍ನಲ್ಲಿ ಪ್ರಶ್ನೆ ಮಾಡ್ತಿದ್ದೀರಾ ಎಂದು ಉತ್ತರಿಸಿದ್ದಾರೆ. ಮೂಲ ನಾಯಕರ ಭೇಟಿ ಬಗ್ಗೆ ಕೇಳಿದಾಗ, ಸ್ಪೀಕರ್ ಅಂದ್ಮೇಲೆ ಹಲವರು ಭೇಟಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಕ್ಯಾಬಿನೆಟ್ ರಚನೆ ವಿಳಂಬವನ್ನು ಕಾಂಗ್ರೆಸ್ ಟೀಕಿಸಿದೆ.

  • 65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

    65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

    – ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ

    ದಾವಣಗೆರೆ: ಪಕ್ಷದಲ್ಲಿ ತಲೆ ಹರಟೆ ಮಾಡಿದವರನ್ನ ಉಚ್ಛಾಟಿಸಿ ಎಂದು 65 ಶಾಸಕರು ಸಹಿ ಮಾಡಿರುವ ನನ್ನ ಬಳಿಯಲ್ಲಿದೆ. ಯಾವುದೇ ಕಾರಣಕ್ಕೂ ಶಾಸಕಾಂಗ ಸಭೆ ಕರೆಯುವ ಅವಶ್ಯಕತೆ ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಸಕಾಂಗ ಸಭೆ ಅಗತ್ಯ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ, 65 ಶಾಸಕರ ಸಹಿ ಪತ್ರವನ್ನು ಅಗತ್ಯ ಬಿದ್ದಾಗ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರಿಗೆ ತಲುಪಿಸುತ್ತೇನೆ. ಬೇರೆ ಪಕ್ಷದಿಂದ ಬಂದು ಯಡಿಯೂರಪ್ಪನವರ ಆಶೀರ್ವಾದದಿಂದ ಶಾಸಕನಾಗಿ, ಸದಾನಂದಗೌಡರ ಅವಧಿಯಲ್ಲಿ ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದರು. ನಂತರ ನಮ್ಮ ಪಕ್ಷ ಬಿಟ್ಟು ಸೈಕಲ್ ಏರಿ ಮತ್ತೆ ಬಿಜೆಪಿ ಸೇರಿದರು. ಶಿವಾನಂದ ಸರ್ಕಲ್ ನಲ್ಲಿ ವಿಜಯೇಂದ್ರ, ಕಾವೇರಿ ಭವನದಲ್ಲಿ ಯಡಿಯೂರಪ್ಪನವರ ಕಾಲು ಹಿಡಿದಿದ್ದನ್ನು ನಾನೇ ನೋಡಿದ್ದೇನೆ. ನಮ್ಮಲ್ಲಿ ಸೋತವರು ಬಹಳಷ್ಟು ಜನ. ಸೋತವರಿದ್ದರೂ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಸಚಿವರಾದಿರಿ ಎಂದು ಸಿಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

    ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ: ನೀವು ಶಾಸಕಾಂಗ ಸಭೆ ಕರೆಯಿರಿ ಎಂದು ಹೇಳಲು ಏನು ನೈತಿಕತೆ ಇದೆ? ಇದು ಮೂರು ಭಾಗವಾದ ಸರ್ಕಾರ ಎಂದು ಹೇಳ್ತೀರಿ, ಯಡಿಯೂರಪ್ಪನವರ ಆಡಳಿತ ಮೆಚ್ವಿ ನೀವೇ ಐದು ವರ್ಷ ಸಿಎಂ ಎಂದು ಹೇಳಿದ್ದಾರೆ. ವಿನಾಕಾರಣ ಪ್ರಹ್ಲಾದ್ ಜೋಶಿ ಅವರ ಹೆಸರು ತರುವ ಕೆಲಸ ಮಾಡುತ್ತಿದ್ದೀರಿ. ದೆಹಲಿಗೆ ಹೋಗಿ ಲಾಬಿ ಮಾಡಿದರೆ ಏನು ಪ್ರಯೋಜನ? ನೀವು ದೆಹಲಿಯಲ್ಲಿ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಫೋಟೋ ತೆಗೆಸಿಕೊಂಡಿದ್ದೀರಿ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಸಿಪಿವೈಯನ್ನ ಬಂಧಿಸಿ: ಮೂರು ಭಾಗವಾದ ಬಿಜೆಪಿ ಎಂದು ಹೇಳ್ತಿರಲ್ಲಾ ನಿಮಗೇನಿದೆ ನೈತಿಕತೆ? ಇದರ ಬಗ್ಗೆ ನನಗೆ ಯಡಿಯೂರಪ್ಪ, ವಿಜಯೇಂದ್ರ ಹೇಳಿಲ್ಲ. ನನಗೆ ಸಿಕ್ಸರ್, ಬೌಂಡರಿ ಹೊಡೆಯುವುದು ಗೊತ್ತು. ತತಕ್ಷಣ ರಾಜೀನಾಮೆ ಕೊಡಬೇಕು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮೆಗಾಸಿಟಿ ಪ್ರಕರಣದಲ್ಲಿ ಯೋಗೇಶ್ವರ್ ಅವರನ್ನ ಬಂಧಿಸಬೇಕು. ಇಂತರಹವರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿಮ್ಮ ಸ್ವಾರ್ಥದ ಬಣ ಕಿತ್ತಾಟಕ್ಕೆ ಕಾಂಗ್ರೆಸ್ ಹೆಸ್ರು ಬಳಸಬೇಡಿ: ಸಿಪಿವೈ ಹೇಳಿಕೆಗೆ ತಿರುಗೇಟು

    ಪಂಥಾಹ್ವಾನ: ಅಖಾಡಕ್ಕೆ ಬಾ ನಮಗೆ ಹೇಗೆ ಪಟ್ಟು ಹಾಕಬೇಕು ಎಂದು ಗೊತ್ತಿದೆ. ನಾನು ನೇರಾನೇರ ಅಖಾಡಕ್ಕೆ ಬಾ. ಸಚಿವನಾಗಲು ಕಾಲು ಹಿಡಿದವನು ಈಗ ಅವರ ವಿರುದ್ಧ ಮಾತನಾಡ್ತೀಯಾ. ಯಡಿಯೂರಪ್ಪನವರು ಅವರನ್ನ ಸಚಿವರನ್ನಾಗಿ ಮಾಡಿದ್ದೇ ದೊಡ್ಡ ತಪ್ಪು. 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿಪಿ ಯೋಗೇಶ್ವರ್ ಅವರಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಖಾತೆ ಹಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಲು ಬಂದ್ರೆ ನಾವು ಸುಮ್ಮನಿರಲ್ಲ. ಜನರ ರಕ್ಷಣೆ ಮಾಡುವ ಬದಲು ಈ ರೀತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಯನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಚಿವ ಯೋಗೇಶ್ವರ್

  • ಸಂಪುಟದಿಂದ ಕೈ ಬಿಡೋ ಭೀತಿ – ಹೈಕಮಾಂಡ್ ನಾಯಕರ ಭೇಟಿಗೆ ಶಶಿಕಲಾ ಜೊಲ್ಲೆ ಪ್ರಯತ್ನ

    ಸಂಪುಟದಿಂದ ಕೈ ಬಿಡೋ ಭೀತಿ – ಹೈಕಮಾಂಡ್ ನಾಯಕರ ಭೇಟಿಗೆ ಶಶಿಕಲಾ ಜೊಲ್ಲೆ ಪ್ರಯತ್ನ

    ನವದೆಹಲಿ: ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಶಶಿಕಲಾ ಜೊಲ್ಲೆ ದಿಢೀರ್ ದೆಹಲಿಗೆ ಆಗಮಿಸಿದ್ದು ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಗೆ ಪ್ರಯತ್ನಿಸುತ್ತಿದ್ದು, ಸಚಿವ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶತ ಪ್ರಯತ್ನ ಮಾಡುತ್ತಿದ್ದಾರೆ.

    ಈ ಸಂಬಂಧ ದೆಹಲಿಯಲ್ಲಿ ಮಾತನಾಡಿದ ಅವರು, ಸಂಪುಟದಿಂದ ಕೈ ಬಿಡುವ ವಿಚಾರವನ್ನು ತಿರಸ್ಕರಿಸಿದರು. ಸಂಪುಟದಿಂದ ಕೈ ಬಿಡುವ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆ ರೀತಿಯ ಯಾವುದೇ ಮಾಹಿತಿ ನನಗೆ ಇಲ್ಲ. ಕಾಗೆ ಕೂರುವ ವೇಳೆ ರೆಂಬೆ ಮುರಿದಂತದಂತಾಗಿದೆ. ನಮ್ಮ ಇಲಾಖೆ ಕೆಲಸಗಳ ಹಿನ್ನೆಲೆ ದೆಹಲಿಗೆ ಬಂದಿದ್ದೇನೆ. ಇದು ಸಚಿವ ಸ್ಥಾನ ಉಳಿಸಿಕೊಳ್ಳಲು ದೆಹಲಿ ಭೇಟಿ ಎನ್ನುವಂತಾಗಿದೆ. ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದರು.

    ಕರ್ನಾಟಕ ಭವನದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೌರ್ಹದಯುತವಾಗಿ ಭೇಟಿಯಾಗಿದ್ದೆ. ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಕ್ಕರೆ ಭೇಟಿ ಮಾಡುವೆ. ಈ ವೇಳೆ ಸರ್ಕಾರಕ್ಕೆ ಒಂದು ವರ್ಷ ಪೂರ್ಣ ಹಿನ್ನೆಲೆ ಧನ್ಯವಾದ ಹೇಳಲಿದ್ದೇನೆ. ಸಂಪುಟ ವಿಸ್ತರಣೆ, ಪುನಾರಚನೆ ಎರಡಲ್ಲಿ ಒಂದು ಆಗಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ನಾನು ಅದಕ್ಕೆ ಬದ್ಧವಾಗಿದ್ದೇನೆ ಎಂದು ತಿಳಿಸಿದರು.