Tag: BJP IT cell

  • ಧ್ರುವ್‌ ರಥೀ ವಿಡಿಯೋ ಪೋಸ್ಟ್‌ ಮಾಡಿ ತಪ್ಪು ಮಾಡಿದ್ದೇನೆ – ಸುಪ್ರೀಂನಲ್ಲಿ ಕೇಜ್ರಿವಾಲ್‌ ತಪ್ಪೊಪ್ಪಿಗೆ

    ಧ್ರುವ್‌ ರಥೀ ವಿಡಿಯೋ ಪೋಸ್ಟ್‌ ಮಾಡಿ ತಪ್ಪು ಮಾಡಿದ್ದೇನೆ – ಸುಪ್ರೀಂನಲ್ಲಿ ಕೇಜ್ರಿವಾಲ್‌ ತಪ್ಪೊಪ್ಪಿಗೆ

    ನವದೆಹಲಿ: ಬಿಜೆಪಿ ಐಟಿ ಸೆಲ್‌ಗೆ (BJP IT Cell) ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರಿಟ್ವೀಟ್‌ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ (Delhi CM Aravind Kejriwal) ಸುಪ್ರೀಂ ಕೋರ್ಟ್‌ನಲ್ಲಿ (Supreme Court)  ತಪ್ಪು  ಒಪ್ಪಿಕೊಂಡಿದ್ದಾರೆ.

    ಕೇಜ್ರಿವಾಲ್‌ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಕೇಜ್ರಿವಾಲ್‌ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ (Delhi Court) ನಡೆಯುತ್ತಿದ್ದ ಮಾನನಷ್ಟ ಕೇಸ್‌ ಅರ್ಜಿಯ ವಿಚಾರಣೆಗೆ ತಡೆ ನಡೆದಿದೆ.

    ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆಗೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ. ಕೇಜ್ರಿವಾಲ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.  ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ಏನಿದು ಪ್ರಕರಣ?
    ಯೂಟ್ಯೂಬರ್‌ ಧ್ರುವ್‌ ರಥೀ ಅವರು 2018ರಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದಂತೆ , ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಪೇಜ್‌ ಅಡ್ಮಿನ್‌ ‘ಬಿಜೆಪಿ ಐಟಿ ಸೆಲ್ ಭಾಗ-2’ ನಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಥೀ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ ಅನ್ನು ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದರು. ಕೇಜ್ರಿವಾಲ್‌ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಐ ಸಪೋರ್ಟ್‌ ನರೇಂದ್ರ ಮೋದಿ ಪೇಜ್‌ ಅಡ್ಮಿನ್‌ ಮಾನನಷ್ಟ ಕೇಸ್‌ ದಾಖಲಿಸಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ನ್ಯಾಯಾಲಯ 2019ರಲ್ಲಿ ಸಮನ್ಸ್‌ ಜಾರಿ ಮಾಡಿತ್ತು. ಈ ಸಮನ್ಸ್‌ ರದ್ದು ಪಡಿಸುವಂತೆ ಕೋರಿ ಕೇಜ್ರಿವಾಲ್‌ ನಂತರ ಸೆಶನ್ಸ್‌ ಕೋರ್ಟ್‌ ಮತ್ತು ಹೈಕೋರ್ಟ್‌ ಮೊರೆ ಹೋಗಿದ್ದರು.

    ದೆಹಲಿ ಹೈಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ ಸುಪ್ರೀಂ ಮೊರೆ ಹೋಗಿದ್ದರು.

  • ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

    ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ಅಮಿತ್ ವಿರುದ್ಧ ದೂರು ನಿಡಿದ ಹಿನ್ನೆಲೆಯಲ್ಲಿ ಇದೀಗ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಜನವರಿಯವರೆಗೆ ಬಿಜೆಪಿಯವರು ಗ್ಯಾರಂಟಿ ಬಗ್ಗೆ ಮಾತನಾಡಬಾರದು: ಕಿಮ್ಮನೆ ರತ್ನಾಕರ್

    ಏನಿದು ಪ್ರಕರಣ..?: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ರಮೇಶ್ ಬಾಬು ಹೈ ಗ್ರೌಂಡ್ಸ್ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದರು. ಇದೀಗ ದೂರು ಸ್ವೀಕರಿಸಿಕೊಂಡ ಪೊಲೀಸರು ಅಮಿತ್ ಮಾಳವೀಯಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ಪೋಸ್ಟ್ ನಲ್ಲಿ ಏನಿತ್ತು..?: ಅಮಿತ್ ಮಾಳವಿಯಾ ಪೋಸ್ಟ್ ಮಾಡಿರುವ ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖ ಮಾಡಲಾಗಿತ್ತು. ರಾಹುಲ್ ಗಾಂಧಿ (Rahul Gandhi) ವಿರುದ್ಧದ ವೀಡಿಯೋ ಪೋಸ್ಟ್ ಹಿನ್ನೆಲೆಯಲ್ಲಿ ಹೈಗ್ರೌಂಡ್ ಸ್ಟೇಷನ್ ನಲ್ಲಿ ಕಾಂಗ್ರೆಸ್ ದೂರು ಸಲ್ಲಿಕೆ ಮಾಡಿತ್ತು.

    ದೂರಿನಲ್ಲೇನಿದೆ..?: ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹರಡಲೆಂದೇ ಬಳಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ಸುಳ್ಳು ಜನಾಭಿಪ್ರಾಯ ಸೃಷ್ಠಿಸಲು ನೆಲದ ಕಾನೂನಿನ ಬಗ್ಗೆ ಗೌರವವೇ ಇಲ್ಲದಂತೆ ಟ್ವಿಟ್ಟರ್ ನಲ್ಲಿ ಸುಳ್ಳು ವೀಡಿಯೋವನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಹರಿಬಿಟ್ಟಿದ್ದಾರೆ ಎಂದು ಜೂನ್ 17ರಂದು ಸಚಿವ ಪ್ರಿಯಾಂಕ್ ಖರ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ವಿವಾದಕ್ಕೆ ಕಾರಣವಾಯ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಮಾಳವೀಯ ಟ್ವೀಟ್

    ವಿವಾದಕ್ಕೆ ಕಾರಣವಾಯ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಮಾಳವೀಯ ಟ್ವೀಟ್

    ನವದೆಹಲಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಚುನಾವಣೆಯ ದಿನಾಂಕನ್ನು ಆಯೋಗ ಪ್ರಕಟಿಸುವ ಮೊದಲೇ ಟ್ವೀಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

    ಮಾಳವೀಯ ಮೇ 12 ರಂದು ಚುನಾವಣೆ ನಡೆದರೆ, ಮೇ 18 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಇಂದು ಬೆಳಗ್ಗೆ 11 ಗಂಟೆ 8 ನಿಮಿಷಕ್ಕೆ ಟ್ವೀಟ್ ಮಾಡಿದ್ದರು. ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲೇ ಮಾಳವೀಯ ದಿನಾಂಕವನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.

    ಮಾಳವೀಯ ಟ್ವೀಟ್ ವಿಚಾರವನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯುಕ್ತ ರಾವತ್ ಅವರನ್ನು ವರದಿಗಾರರು ಪ್ರಶ್ನೆ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವುದಾಗಿ ತಿಳಿಸಿದ ರಾವತ್ ಮಾಹಿತಿ ಸೋರಿಕೆ ಎಲ್ಲಿ ಆಗಿದೆ ಎನ್ನುವುದನ್ನು ಪತ್ತೆ ಹಚ್ಚುತ್ತೇವೆ ಎಂದು ತಿಳಿಸಿದರು.

    ವಿವಾದ ಜೋರಾಗುತ್ತಿದ್ದಂತೆ ಮಾಳವೀಯ ಈ ಹಿಂದೆ ಮಾಡಿದ್ದ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಕರ್ನಾಟಕ ಚುನಾವಣೆ ಮೇ 12 ರಂದು ಒಂದೇ ಹಂತದಲ್ಲಿ ನಡೆದರೆ ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.  ಇದನ್ನೂ ಓದಿ: ಮೇ 12ರಂದು ಕರ್ನಾಟಕ ಚುನಾವಣೆ- ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ