Tag: BJP Karnatanaka

  • ಮೋದಿ ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪನಿ ವಿರುದ್ಧ ಅಲೋಕ್‌ ಕುಮಾರ್‌ ಗರಂ

    ಮೋದಿ ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪನಿ ವಿರುದ್ಧ ಅಲೋಕ್‌ ಕುಮಾರ್‌ ಗರಂ

    ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಮಾವೇಶ ನಡೆಯುವ ಬಂಗ್ರಕೂಳೂರಿನ ಗೋಲ್ಡ್ ಫಿಂಚ್‌ ಸಿಟಿ ಮೈದಾನಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

    ಮೈದಾನದಲ್ಲಿ ಸಿಸಿ ಕ್ಯಾಮೆರಾ ಇಲ್ಲದ್ದಕ್ಕೆ ಅಲೋಕ್ ಕುಮಾರ್ ಫುಲ್‌ ಗರಂ ಆಗಿದ್ದು, ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪನಿಗಳು ಹಾಗೂ ಕಾರ್ಯಕ್ರಮ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮೆರಾ ಹಾಕಿದ್ದೀರಿ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ತಾಕೀತು ಮಾಡಿದರು. ಇದನ್ನೂ ಓದಿ: 3,800 ಕೋಟಿ ರೂ. ಮೌಲ್ಯದ ಯೋಜನೆ – ಮಂಗಳೂರಿನಲ್ಲಿ ಯಾವ ಕಾಮಗಾರಿಗೆ ಶಂಕುಸ್ಥಾಪನೆ? ಏನು ಉದ್ಘಾಟನೆ?

    ಭದ್ರತೆಗೆ ನಿಯೋಜಿಸಿದ ಪೊಲೀಸರಿಗೂ ಖಡಕ್ ಎಚ್ಚರಿಕೆ ನೀಡಿದ ಎಡಿಜಿಪಿ, ಯಾರೂ ಮೊಬೈಲ್ ನಲ್ಲಿ ಫೋಟೋ ತೆಗೆಯಬೇಡಿ. ಸಮಾವೇಶಕ್ಕಾಗಿ ಮೈದಾನಕ್ಕೆ ಬರುವ ಪ್ರತಿಯೊಬ್ಬರ ಮೇಲೂ ಕಣ್ಣಿಡಬೇಕು, ಭಾಷಣ ಮಾಡುವ ಸಂದರ್ಭದಲ್ಲಿ ಭಾಷಣ ವೀಡಿಯೋ ಮಾಡೋದು ಅಥವಾ ಮೊಬೈಲ್‌ನಲ್ಲಿ ಫೋಟೋ ತೆಗೆಯೋದು ಮಾಡುವಂತಿಲ್ಲ ಎಂದು ಸೂಚಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

    ಕಾರ್ಯಕ್ರಮದಲ್ಲಿ ಬಂದವರ ಜೊತೆ ಕಿರಿಕ್ ಮಾಡಬಾರದು, ಒಂದು ವೇಳೆ ಗೊಂದಲ ಸೃಷ್ಟಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಬಾಯಿ ಮುಚ್ಚಿಸಿ ವ್ಯಾನ್ ಹತ್ತಿರ ಕರೆ ತನ್ನಿ. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು ಎಂದು ಪೊಲೀಸರಿಗೆ ಖಡಕ್‌ ಸೂಚನೆ ನೀಡಿದರು.

    Live Tv
    [brid partner=56869869 player=32851 video=960834 autoplay=true]