Tag: BJP leader

  • ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ

    ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ

    ಜೈಪುರ: ಇಲ್ಲಿನ ಬಿಜೆಪಿ ನಾಯಕನೊಬ್ಬ ಪ್ರೇಯಸಿಯ ಒತ್ತಡಕ್ಕೆ ಮಣಿದು ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ರಾಜಸ್ಥಾನದ (Rajastan) ಅಜ್ಮೀರ್‌ನಲ್ಲಿ ನಡೆದಿದೆ.

    ಪತಿ ರೋಹಿತ್ ಸೈನಿ, ಆತನ ಪ್ರೇಯಸಿ (Lover) ರಿತು ಬಂಧಿತ ಆರೋಪಿಗಳು. ಆ.10ರಂದು ರೋಹಿತ್ ಸೈನಿ ಪತ್ನಿ ಸಂಜು ಸೈನಿ ಅನುಮಾನಾಸ್ಪವಾಗಿ ಶವವಾಗಿ ಪತ್ತೆಯಾಗಿದ್ದರು. ಇದನ್ನೂ ಓದಿ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ – ರಾಯರ ದರ್ಶನ ಪಡೆದು ವಾಪಸ್ಸಾಗ್ತಿದ್ದ ಇಬ್ಬರು ಸಾವು

    ಮೊದಲಿಗೆ ಆರೋಪಿ ರೋಹಿತ್, ದರೋಡೆಕೋರರು ಮನೆಗೆ ನುಗ್ಗಿ ತನ್ನ ಪತ್ನಿಯನ್ನು ಕೊಂದು ಬೆಲೆಬಾಳುವ ವಸ್ತುಗಳೊಂದಿಗೆ ದೋಚಿ ಪರಾರಿಯಾಗಿದ್ದಾರೆ ಕಥೆ ಕಟ್ಟಿದ್ದ. ಆರೋಪಿಯ ಹೇಳಿಕೆಯಿಂದ ಅನುಮಾನಗೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಕೊಲೆಯ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

    ಆರೋಪಿ ರೋಹಿತ್ ಮದುವೆಯಾಗಿದ್ದರೂ ರಿತು ಎಂಬ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಇವರಿಬ್ಬರ ಸಂಬಂಧಕ್ಕೆ ಪತ್ನಿ ಸಂಜು ಅಡ್ಡಿಯಾಗಿದ್ದಳು. ಹೀಗಾಗಿ ಪ್ರೇಯಸಿ ರಿತು ನಿನ್ನ ಪತ್ನಿ ಸಂಜುವನ್ನು ನಮ್ಮ ದಾರಿಯಿಂದ ತೆಗೆದು ಹಾಕು ಎಂದಿದ್ದಳು.

    ಪ್ರೇಯಸಿಯ ಒತ್ತಡಕ್ಕೆ ಮಣಿದು ರೋಹಿತ್, ಪತ್ನಿಯನ್ನೇ ಹತ್ಯೆಗೈದಿದ್ದ. ಬಳಿಕ ದರೋಡೆಕೋರರು ಮನೆಗೆ ನುಗ್ಗಿ ಚಿನ್ನಾಭರಣ ದೋಚಿ, ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿ ಪೊಲೀಸರ ದಾರಿ ತಪ್ಪಿಸಲು ಪ್ರಯತ್ನಿಸಿದ್ದರು.

    ಆರೋಪಿ ರೋಹಿತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಕೊಲೆ ರಹಸ್ಯವನ್ನು ಬಾಯಿಬಿಟ್ಟಿದ್ದಾನೆ. ಇದೀಗ ಪೊಲೀಸರು ಆರೋಪಿ ರೋಹಿತ್ ಸೈನಿ ಹಾಗೂ ಆತನ ಪ್ರೇಯಸಿ ರಿತುಳನ್ನು ಬಂಧಿಸಿದ್ದಾರೆ.

  • ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

    ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

    ಪಾಟ್ನಾ: ಬಿಹಾರದಲ್ಲಿ (Bihar) ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

    ಸುರೇಂದ್ರ ಕೆವತ್ (52) ಹತ್ಯೆಯಾದ ಬಿಜೆಪಿ ನಾಯಕ. ಸುರೇಂದ್ರ ಅವರು ಶೇಕ್‌ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಇದನ್ನೂ ಓದಿ: Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು

    ಸುರೇಂದ್ರ ಅವರಿಗೆ 4 ಗುಂಡುಗಳು ತಗುಲಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

    ಬಿಹಾರದಲ್ಲಿ 2 ವಾರದ ಅಂತರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ ಮಾಡಲಾಗಿದ್ದು, ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (Gopal Khemka) ಅವರನ್ನು ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ

    ಇದೀಗ ಸಿಎಂ ನಿತೀಶ್ ಕುಮಾರ್ ಆಡಳಿತದ ಬಗ್ಗೆ ವಿಪಕ್ಷಗಳು ಕಿಡಿಕಾರುತ್ತಿದ್ದು, ಮುಖ್ಯಮಂತ್ರಿಯವರ ಆರೋಗ್ಯದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇಬ್ಬರು ನಿಷ್ಪ್ರಯೋಜಕ ಬಿಜೆಪಿ ಉಪಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

  • ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

    ಪಾಟ್ನಾ: ಬಿಹಾರ (Bihar) ರಾಜಧಾನಿ ಪಾಟ್ನಾದ (Patna) ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋಪಾಲ್ ಖೇಮ್ಕಾ (Gopal Khemka) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಿಹಾರ ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.

    ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ಅಲಿಯಾಸ್ ರಾಜಾನನ್ನು ಪಾಟ್ನಾದ ಮಾಲ್ ಸಲಾಮಿ ಪ್ರದೇಶದಲ್ಲಿ ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರು ಆತನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ವಾಂಟೆಡ್ ಕ್ರಿಮಿನಲ್ ವಿಕಾಸ್‌ನನ್ನು ದಮೈಯಾ ಘಾಟ್ ಬಳಿ ನಸುಕಿನ ಜಾವ 2:45ರ ಸುಮಾರಿಗೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಘಟನಾ ಸ್ಥಳದಿಂದ ಒಂದು ಪಿಸ್ತೂಲ್, ಒಂದು ಗುಂಡು ಮತ್ತು ಒಂದು ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ಬಿಹಾರ ಪೊಲೀಸರು (Bihar Police) ಅಧಿಕೃತ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು| ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಸಾವು

    ಮೃತ ವಿಕಾಸ್, ಗೋಪಾಲ್ ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧಗಳನ್ನು ಪೂರೈಸಿದ್ದ. ಅಲ್ಲದೇ ಪ್ರಕರಣದ ಪ್ರಮುಖ ಶಂಕಿತ ಶೂಟರ್ ಉಮೇಶ್ ಜೊತೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 12ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಟ್ರಕ್, ಕಾರು ನಡುವೆ ಅಪಘಾತ – ಭಾರತ ಮೂಲದ ನಾಲ್ವರು ಸಜೀವ ದಹನ

    ಏನಿದು ಪ್ರಕರಣ?
    ಬಿಹಾರದ ಪಾಟ್ನಾದಲ್ಲಿ ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು. ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ಪನಾಚೆ ಹೋಟೆಲ್ ಪಕ್ಕದಲ್ಲಿರುವ `ಟ್ವಿನ್ ಟವರ್’ ಸೊಸೈಟಿಯಲ್ಲಿ ಖೆಮ್ಕಾ ಅವರು ವಾಸಿಸುತ್ತಿದ್ದರು. ಅವರು ಮನೆ ಕಡೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.

  • ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

    ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

    – ಯುವತಿಯನ್ನ ಗರ್ಭಿಣಿ ಮಾಡಿ ಕೈಕೊಟ್ಟಿದ್ದ ಆರೋಪಿ
    – ಈಗಾಗಲೇ ಗಂಡು ಮಗುವಿಗೆ ಜನ್ಮ ನೀಡಿರುವ ಸಂತ್ರಸ್ತೆ

    ಮಂಗಳೂರು: ಲವ್‌-ಸೆಕ್ಸ್‌ ದೋಖಾ ಪ್ರಕರಣದಲ್ಲಿ ಇಲ್ಲಿನ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆ ಪೊಲೀಸರು (Dakshina Kannada Women Police) ಬಂಧಿಸಿದ್ದಾರೆ.

    ಪುತ್ತೂರು (Puttur) ಬಿಜೆಪಿ ಘಟಕದ ಪ್ರಭಾವಿ ಮುಖಂಡನ (BJP Leader) ಮಗ ಕೃಷ್ಣ ಜೆ.ರಾವ್ (21) ಬಂಧಿತ ಆರೋಪಿ. ಮೈಸೂರಿನ ಟಿ. ನರಸೀಪುರದಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದನ್ನೂ ಓದಿ: ಮಂಗಳೂರು | ಹಿಂದೂ ಮುಖಂಡನ ಮೊಬೈಲ್‍ನಲ್ಲಿ ಕರಾವಳಿ ರಾಜಕಾರಣಿಯ 50 ಅಶ್ಲೀಲ ವಿಡಿಯೋ!

    ಏನಿದು ಪ್ರಕರಣ?
    ಆರೋಪಿ ಕೃಷ್ಣ ಜೆ.ರಾವ್ ಪುತ್ತೂರಿನ ಹೈಸ್ಕೂಲ್‌ವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಹುಡುಗಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಅದೇ ಪ್ರೀತಿ ಹಾಗೆಯೇ ಮುಂದುವರಿದಿತ್ತು. ಬಳಿಕ 2024ರ ಅ.11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯನ್ನ ಕರೆದುಕೊಂಡು ಹೋಗಿದ್ದ. ಈ ವೇಳೆ ಮದುವೆಯಾಗುತ್ತೇನೆ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಅದಾದ ಬಳಿಕ 2025ರ ಜನವರಿಂದಲೂ ಬಲವಂತವಾಗಿ ಯುವತಿ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ. ಕೆಲವು ಸಮಯದ ನಂತರ ಯುವತಿ ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿತ್ತು. ಆದ್ರೆ ಕೃಷ್ಣ ಮದುವೆಯಾಗಲು ನಿರಾಕರಿಸಿದ್ದ. ಇದನ್ನೂ ಓದಿ: ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್3

    ಇದಾದ ಬಳಿಕ ಇಬ್ಬರ ನಡುವೆ ರಾಜಿ ಪಂಚಾಯಿತಿ ನಡೆದಿತ್ತು. ಸಂಧಾನ ನಡೆದಿದ್ದ ಹಿನ್ನೆಲೆ ಆರೋಪಿ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿರಲಿಲ್ಲ. ಯುವಕನಿಗೆ 21 ವರ್ಷ ತುಂಬದ ಹಿನ್ನಲೆ ಮದುವೆಗೆ ಅಡ್ಡಿಪಡಿಸಲಾಗಿತ್ತು. ಆದ್ರೆ ಕಳೆದ ಜೂನ್‌ 23ಕ್ಕೆ 21 ವರ್ಷ ತುಂಬಿತ್ತು. ಆದಾಗ್ಯೂ ಮದುವೆಗೆ ಯುವಕ ಹಿಂದೇಟು ಹಾಕಿದ್ದ. ಹೀಗಾಗಿ ಮಂಗಳೂರಿನ ಖಾಸಗಿ ಕಾಲೇಜಿನ ಬಿ.ಎಸ್ಸಿ ಫಾರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

    ದೂರು ದಾಖಲಿಸುತ್ತಿದ್ದಂತೆ ಆರೋಪಿ ಎಸ್ಕೇಪ್‌ ಆಗಿದ್ದ. ಆದ್ರೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಸದ್ಯ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ಆರೋಪಿಯನ್ನ ಬಂಧಿಸಿ, ಮೆಡಿಕಲ್ ಟೆಸ್ಟ್ ಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ಶಿಶು ಮರಣ ತಗ್ಗಿಸಿದ ಅಮೃತ – ಜೀವ ಸಂಜೀವಿನಿಯಾಗಿ ಲೇಡಿಗೋಷನ್ ಹ್ಯೂಮನ್ ಮಿಲ್ಕ್ ಬ್ಯಾಂಕ್

  • ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ಡೆಹ್ರಾಡೂನ್‌ (ಹರಿದ್ವಾರ): ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರುತ್ತಾರೆ, ಆದ್ರೆ ಕೆಟ್ಟ ತಾಯಿ ಇರುವುದಿಲ್ಲ ಎಂಬ ಮಾತಿಗೆ ಅಪ ಚಾರವೆಂಬಂತೆ, ಉತ್ತರಾಖಂಡದ ಹರಿದ್ವಾರದಲ್ಲಿ (Haridwar) ಬಿಜೆಪಿ ನಾಯಕಿ (BJP Women Leader) ನಡೆದುಕೊಂಡಿದ್ದಾಳೆ. ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದಲೇ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹರಿದ್ವಾರದ ಬಿಜೆಪಿ ಮಹಿಳಾ ಮೋರ್ಚಾದ (BJP Mahila Morcha) ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ. ಘಟನೆ ಸಂಬಂಧ ಅನಾಮಿಕಾ, ಆಕೆಯ ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನ ಪೊಲೀಸರು (Haridwar Police) ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಬಿಜೆಪಿ ಆಕೆಯನ್ನ ಪಕ್ಷದಿಂದಲೇ ವಜಾ ಮಾಡಿದೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಏನಿದು ಘಟನೆ?
    ಅನಾಮಿಕಾ ಶರ್ಮಾ 2024ರ ವರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದಳು. ನಂತರ ಪಕ್ಷದ ಸದಸ್ಯೆ ಆಗಿ ಮುಂದುವರಿದಿದ್ದಳು. ಆಕೆ ತನ್ನ ಗಂಡನಿಂದ ಬೇರ್ಪಟ್ಟಿದ್ದಳು. ಆದ್ರೆ ಮಗಳು ಅಪ್ಪನೊಂದಿಗೆ ಉಳಿದುಕೊಂಡಿದ್ದಳು. ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು. ಈ ವೇಳೆ ಅನಾಮಿಕಾ, ಸುಮಿತ್‌ನ ಪ್ರೇಮ ಸಂಪಾದಿಸಿ ಆತನ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಜನವರಿಯಿಂದ ಮಾರ್ಚ್‌ ವೇಳೆ ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಮಗಳ ಮೇಲೆ ಸುಮಿತ್ ಹಾಗೂ ಆತನ ಸ್ನೇಹಿತ ಶುಭಂನಿಂದ ಅತ್ಯಾಚಾರ ಮಾಡಿಸಿದ್ದಳು. ಈ ವಿಷಯವನ್ನ ತಂದೆಗೆ ಹೇಳದಂತೆ ಬೆದರಿಕೆಯೂ ಹಾಕಿದ್ದಳು ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಮಂಗಳವಾರ ನಡೆದ ಘಟನೆ ಬಗ್ಗೆ ಅಪ್ರಾಪ್ತೆ ತನ್ನ ತಂದೆಗೆ ಮಾಹಿತಿ ನೀಡಿದ್ದಳು. ಪರಿಣಾಮ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆ ಸೇರಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

  • ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

    ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

    ಚಂಡೀಗಢ: ಪಂಜಾಬ್‌ನ (Punjab Blasts) ಜಲಂಧರ್‌ನಲ್ಲಿರುವ ಬಿಜೆಪಿ ನಾಯಕನ ಮನೆ ಮೇಲೆ ನಡೆದ ಗ್ರೆನೇಡ್‌ ದಾಳಿ ಸಂಚುಕೋರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಲಿಂಕ್‌ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ರೆನೇಡ್ ದಾಳಿಯ ಸಂಚುಕೋರ ಜೀಶನ್ ಅಖ್ತರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಚರ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ಪಾಕಿಸ್ತಾನದ ಐಎಸ್‌ಐ ಪಂಜಾಬ್‌ನಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಲು ಸಂಚು ರೂಪಿಸಿದೆ. ಬಿಜೆಪಿ ನಾಯಕನ ವಿರುದ್ಧದ ದಾಳಿಯನ್ನು ಗಡಿಯಾಚೆಯಿಂದ ಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮಾಜಿ ಸಚಿವ ಮತ್ತು ಮಾಜಿ ರಾಜ್ಯ ಬಿಜೆಪಿ ಮುಖ್ಯಸ್ಥರೂ ಆಗಿದ್ದ ಕಾಲಿಯಾ ಅವರ ಮನೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ಗೋಡೆಗೆ ಹಾನಿಯಾಗಿತ್ತು. ಅವರ ಮನೆ ಮತ್ತು ವಾಹನಗಳ ಗಾಜಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆ ಸಮಯದಲ್ಲಿ ಬಿಜೆಪಿ ಮುಖಂಡರೂ ಮನೆಯಲ್ಲಿದ್ದರು. ಇದನ್ನೂ ಓದಿ: ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್‌ ವಿರುದ್ಧ ಸುಪ್ರೀಂ ಆದೇಶ

    ಗ್ರೆನೇಡ್ ಎಸೆದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಲಾದ ಇ-ರಿಕ್ಷಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಹರ್ಯಾಣ| ಭೂ ವಿವಾದ; ಬಿಜೆಪಿ ಮಂಡಲ ಅಧ್ಯಕ್ಷನ ಭೀಕರ ಹತ್ಯೆ

    ಹರ್ಯಾಣ| ಭೂ ವಿವಾದ; ಬಿಜೆಪಿ ಮಂಡಲ ಅಧ್ಯಕ್ಷನ ಭೀಕರ ಹತ್ಯೆ

    ಚಂಡೀಗಢ: ಬಿಜೆಪಿಯ ಮುಂಡ್ಲಾನಾ ಮಂಡಲ ಅಧ್ಯಕ್ಷ (BJP Mundlana Mandal President) ಮತ್ತು ಗ್ರಾಮ ಸಂಖ್ಯಾದಾರ ಸುರೇಂದ್ರ (Surendra Jawahar) ಅವರನ್ನು ಶುಕ್ರವಾರ ರಾತ್ರಿ ಹರ್ಯಾಣದ ಸೋನಿಪತ್‌ನ (Sonipat) ಜವಾಹರ ಗ್ರಾಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

    ಭೂ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣ ಸಂಬಂಧ ಮೋನು ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳೀಯ ಅಂಗಡಿಯಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿದೆ. ಶುಕ್ರವಾರ ರಾತ್ರಿ 9:15ರ ಸುಮಾರಿಗೆ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ದೃಶ್ಯದಲ್ಲಿ ಸುರೇಂದ್ರ ಮನೆಯ ಹೊರಗಿನ ಬೀದಿಯಲ್ಲಿ ನಿಂತಿದ್ದರು. ನೆರೆಮನೆಯ ಮೋನು ಸ್ಥಳಕ್ಕೆ ಬಂದು ಸುರೇಂದ್ರ ಮೇಲೆ ಗುಂಡು ಹಾರಿಸಿದ್ದಾನೆ. ಸುರೇಂದ್ರ ತಪ್ಪಿಸಿಕೊಂಡು ಹತ್ತಿರದ ದಿನಸಿ ಅಂಗಡಿಗೆ ನುಗ್ಗಿದ ವೇಳೆ ದಾಳಿಕೋರ ಒಳಗೆ ಹೋಗಿ ಎರಡನೇ ಗುಂಡು ಹಾರಿಸಿದ್ದಾನೆ. ದಾಳಿಕೋರ ಮೋನು ಹಣೆಗೆ ಒಂದು ಗುಂಡು, ಹೊಟ್ಟೆಗೆ ಎರಡನೇ ಗುಂಡು ಹಾರಿಸಿ ಪರಾರಿಯಾಗಿದ್ದ. ಇದನ್ನೂ ಓದಿ: 2 ವರ್ಷದಲ್ಲಿ ದುಬೈಗೆ 52 ಟ್ರಿಪ್‌ – ಈ ಪೈಕಿ 45 ಬಾರಿ ಒಂದೇ ದಿನದಲ್ಲಿ ಹೋಗಿ ಬಂದಿದ್ದ ರನ್ಯಾ

    ಮಂಡಲ ಅಧ್ಯಕ್ಷ ಸುರೇಂದ್ರ ಆರೋಪಿ ಮೋನುವಿನ ಚಿಕ್ಕಮ್ಮ ಮತ್ತು ಚಿಕ್ಕಪ್ಪನ ಜಮೀನನ್ನು ಖರೀದಿಸಿದ್ದರು. ಇದರಿಂದಾಗಿ ಸುರೇಂದ್ರನ ಮೇಲೆ ಮೋನು ದ್ವೇಷ ಇಟ್ಟುಕೊಂಡಿದ್ದ. ಸುರೇಂದ್ರನಿಗೆ ಖರೀದಿಸಿದ ಜಮೀನಿನಲ್ಲಿ ಕಾಲಿಡದಂತೆ ಮೋನು ಬೆದರಿಕೆ ಹಾಕಿದ್ದ. ಆದರೆ ಇದಕ್ಕೆ ಜಗ್ಗದ ಸುರೇಂದ್ರ ಭೂಮಿಯನ್ನು ಉಳುಮೆ ಮಾಡಿದ್ದ. ಇದರಿಂದ ಕೋಪಗೊಂಡ ಮೋನು ಕೊಲೆ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾ ರಾವ್‌ ಆಪ್ತ ವಶಕ್ಕೆ

    ಪೊಲೀಸರು ಶವವನ್ನು ಖಾನ್ಪುರ್ ಕಲಾನ್ ಗ್ರಾಮದಲ್ಲಿರುವ ಭಗತ್ ಫೂಲ್ ಸಿಂಗ್ ಸರ್ಕಾರಿ ಮಹಿಳಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತ ಸುರೇಂದ್ರ ಪತ್ನಿ ದೂರಿನ ಆಧರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿ ಕೆಲವೆ ಹೊತ್ತಿನಲ್ಲಿ ಮೋನುವನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಉಗ್ರವಾದದ ದಾಖಲೆ ಪ್ರಪಂಚದ ಮುಂದಿದೆ: ಕಾಶ್ಮೀರದ ಬಗ್ಗೆ ಮಾತನಾಡಿದ ಪಾಕ್‌ಗೆ ಭಾರತ ತಿರುಗೇಟು

  • ಬಿಜೆಪಿ ನಾಯಕನ ಅಜಾಗರೂಕತೆ ಕಾರು ಚಾಲನೆ – ಅಪಘಾತಕ್ಕೆ ಬೈಕ್‌ ಸವಾರ ಸಾವು

    ಬಿಜೆಪಿ ನಾಯಕನ ಅಜಾಗರೂಕತೆ ಕಾರು ಚಾಲನೆ – ಅಪಘಾತಕ್ಕೆ ಬೈಕ್‌ ಸವಾರ ಸಾವು

    – ಬಂಧಿಸಿದ ಕೆಲವೇ ಗಂಟೆಗಳಲ್ಲಿ ಜಾಮೀನಿನ ಮೇಲೆ ಹೊರಬಂದ ಆರೋಪಿ

    ಚಂಡೀಗಢ: ಬಿಜೆಪಿ ನಾಯಕನ ಅಜಾಗರೂಕತೆ ಕಾರು ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

    ಗಾಲ್ಫ್ ಕೋರ್ಸ್ ರಸ್ತೆಯ ಬೆಲ್ವೆಡೆರೆ ಪಾರ್ಕ್ ಬಳಿಯ ಹೈಸ್ಪೀಡ್ ಲೇನ್‌ನಲ್ಲಿ ಘಟನೆ ಸಂಭವಿಸಿದೆ. ಬಿಜೆಪಿ ನಾಯಕ ಕುಲದೀಪ್ ಠಾಕೂರ್ ಒನ್ ವೇಯಲ್ಲಿ ಚಲಿಸುತ್ತಿದ್ದ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ. ಈ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಅಕ್ಷತ್ ಗಾರ್ಗ್ ಸಾವನ್ನಪ್ಪಿದ್ದಾನೆ.

    ಅಪಘಾತದ ದೃಶ್ಯ ಬೈಕರ್ ಸ್ನೇಹಿತನ ಗೊಪ್ರೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮೃತನ ಸ್ನೇಹಿತ ಪ್ರದ್ಯುಮನ್ ದೂರು ನೀಡಿದ್ದಾನೆ. ದೂರಿನ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಮದ್ಯ ಅಥವಾ ಡ್ರಗ್ಸ್ ಸೇವನೆ ಪರೀಕ್ಷೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಜಾಮೀನು ನೀಡಿ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

    ಎಸ್‌ಯುವಿಯನ್ನು ವಶಪಡಿಸಿಕೊಳ್ಳಲಾಗಿದೆ. ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ), ಸೆಕ್ಷನ್ 281 (ಅತಿವೇಗದ ಚಾಲನೆ), ಸೆಕ್ಷನ್ 324(4) (20,000 ರೂ.ಗಿಂತ ಹೆಚ್ಚಿನ ಹಾನಿ ಉಂಟುಮಾಡುವ ದುಷ್ಕೃತ್ಯ) ಸೇರಿದಂತೆ ಮೋಟಾರು ವಾಹನ ಕಾಯ್ದೆಯ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

  • ವಯನಾಡು ಭೂಕುಸಿತಕ್ಕೆ ಗೋ ಹತ್ಯೆ ಕಾರಣ – ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

    ವಯನಾಡು ಭೂಕುಸಿತಕ್ಕೆ ಗೋ ಹತ್ಯೆ ಕಾರಣ – ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

    ವಯನಾಡು/ಜೈಪುರ: ಭೀಕರ ಭೂಕುಸಿತಕ್ಕೆ (Wayanad Landslides) ದೇವರನಾಡೇ ನಲುಗಿ ಹೋಗಿದೆ. ಸಾವಿನ ಸುರಿʻಮಳೆʼಗೆ ವಯನಾಡಲ್ಲಿ ಮೃತರ ಸಂಖ್ಯೆ 350ರ ಗಡಿ ದಾಟಿದ್ದು, 6ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದೆ. ಘಟನಾ ಸ್ಥಳಗಳಲ್ಲಿ ಹೃದಯವಿದ್ರಾವಕ ದೃಶ್ಯಗಳು ಕಣ್ಣಿಗೆ ರಾಚುತ್ತಿವೆ. ಇಡೀ ದೇಶವನ್ನೇ ಈ ದೃಶ್ಯ ಕಂಡು ಕಂಬನಿ ಮಿಡಿದಿದೆ. ಆದ್ರೆ ರಾಜಸ್ಥಾನದ ಬಿಜೆಪಿ ನಾಯಕರೊಬ್ಬರು (Rajasthan BJP Leader) ನೀಡಿರುವ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಾಗಿರುವ ಬಿಜೆಪಿ ಮಾಜಿ ಸಂಸದರೂ ಆಗಿರುವ ನಾಯಕ ಜ್ಞಾನದೇವ್ ಅಹುಜಾ (Gyandev Ahuja), ವಯನಾಡು ದುರಂತಕ್ಕೆ ಕೇರಳದಲ್ಲಿನ ಗೋ ಹತ್ಯೆ ಚಟುವಟಿಕೆಗಳು ಕಾರಣ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಎಲ್ಲೆಲ್ಲಿ ಗೋಹತ್ಯೆಗಳು ನಡೆಯುತ್ತವೆಯೋ, ಅಂತಹ ಸ್ಥಳಗಳಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಮುಂದುವರಿಯುತ್ತದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.

    ಮುಂದುವರಿದು ಮಾತನಾಡಿರುವ ಅವರು, ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತ ದುರಂತಗಳು ಗೋಹತ್ಯೆಯ ನೇರ ಪರಿಣಾಮವಾಗಿದೆ. ಕೇರಳದಲ್ಲಿ ಗೋಹತ್ಯೆಯ ಚಟುವಟಿಕೆಗಳನ್ನು ನಿಲ್ಲಿಸದೇ ಹೋದಲ್ಲಿ ಇದೇ ರೀತಿಯ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಂತಹ ಭಾಗಗಳಲ್ಲಿ ಕೂಡ ಮೇಘ ಸ್ಫೋಟ ಹಾಗೂ ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಪದೇ ಪದೇ ಸಂಭವಿಸುತ್ತಲೇ ಇರುತ್ತವೆ. ಆದರೆ ಕೇರಳದಲ್ಲಿ ಸಂಭವಿಸಿದ ಘಟನೆಯಷ್ಟು ವಿನಾಶಕಾರಿ ಪರಿಣಾಮ ಅವು ಉಂಟುಮಾಡುವುದಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    2018ರಿಂದಲೂ, ಗೋ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವ ಪ್ರದೇಶಗಳಲ್ಲಿ ಅಂತಹ ದುರಂತ ಘಟನೆಗಳು ನಡೆಯುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಗೋ ಹತ್ಯೆ ತಡೆ ನಡೆಯದೇ ಹೋದರೆ, ಕೇರಳದಲ್ಲಿ ಇದೇ ರೀತಿಯ ಘಟನೆಗಳು ಮುಂದೆಯೂ ನಡೆಯುತ್ತಲೇ ಇರುತ್ತವೆ ಎಂದು ಅಹುಜಾ ಎಚ್ಚರಿಕೆ ನೀಡಿದ್ದಾರೆ.

  • ಬಿಜೆಪಿ ಹಿರಿಯ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ!

    ಬಿಜೆಪಿ ಹಿರಿಯ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ!

    ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ (BJP Leader) ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.

    ಮಾದಾವಾರದ ಗೋವಿಂದಪ್ಪ (Govindappa) ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು (Gold Seized) ವಶಕ್ಕೆ ಪಡೆದುಕೊಂಡಿದೆ. ಇದನ್ನೂ ಓದಿ: ಉದ್ಯಮಿ ಮನೆ ಮೇಲೆ ಐಟಿ ದಾಳಿ; ಸೀಕ್ರೆಟ್‌ ರೂಮಿನಲ್ಲಿದ್ದ 22 ಕೆಜಿ ಚಿನ್ನ, 6.50 ಕೋಟಿ ಹಣ ಜಪ್ತಿ!

    ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್‌ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್