Tag: BJP leader

  • ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ: ಮೃತ ಬಿಜೆಪಿ ಮುಖಂಡನ ಸಹೋದರ ಆರೋಪ

    ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ: ಮೃತ ಬಿಜೆಪಿ ಮುಖಂಡನ ಸಹೋದರ ಆರೋಪ

    ಕಲಬುರಗಿ: ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಮೃತ ಬಿಜೆಪಿ ಮುಖಂಡ ಗರೀಶ್‌ ಚಕ್ರ ಸಹೋದರ ಸದಾಶಿವ ಚಕ್ರ ಕಿಡಿಕಾರಿದ್ದಾರೆ.

    ಕೊಲೆ ಸಂಬಂಧ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ನನ್ನ ತಮ್ಮ ರಾಜಕೀಯದಲ್ಲಿ ಬೆಳೆಯುವುದನ್ನು ನೋಡಲು ಆಗದೇ ಕೊಲೆ ಮಾಡಲಾಗಿದೆ. ಇದರಲ್ಲಿ‌ ನಮ್ಮ ಜಾತಿಯ ಕೆಲ ನಾಯಕರು ಸಹ ಭಾಗಿ ಆಗಿದ್ದಾರೆ ಎಂದು ಆರೋಪಿಸಿದ್ದಾರೆ.

    ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ. ರಾತ್ರಿ 10 ಗಂಟೆಗೆ ಸಚಿನ್ ಹಾಗೂ ಸ್ನೇಹಿತರು ಸನ್ಮಾನ‌ ಮಾಡುವುದಾಗಿ ಕರೆದುಕೊಂಡು ಹೋಗಿದ್ದರು. ಕೊಲೆಗೂ‌ ಮುನ್ನಾ ಸನ್ಮಾನ ಮಾಡಿ ನಂತರ ಅತನನ್ನು‌ ಕೊಲೆ ಮಾಡಲಾಗಿದೆ. ನನ್ನ ತಮ್ಮನ‌ ಕೊಲೆಗೆ ಸುಪಾರಿ ನೀಡಿದವರ ಹೆಸರು ಪೊಲೀಸರ ಮುಂದೆ ಹೇಳುತ್ತೇನೆ ಎಂದರು. ಇದನ್ನೂ ಓದಿ:  ಕಣ್ಣಿಗೆ ಖಾರದ ಪುಡಿ ಎರಚಿ ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

    ಪ್ರಕರಣ: ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿ.ಎಸ್ ಎನ್ ಎಲ್ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆ ಪಾರ್ಟಿ ಕೊಡುವುದಾಗಿ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿಗೆ ಕರೆಸಿ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಹತ್ಯೆಗೈಯಲಾಗಿದೆ ಎನ್ನಲಾಗಿದೆ.

    ಸಾಗನೂರ ಗ್ರಾಮದ ಸಚಿನ್&ಗ್ಯಾಂಗ್ ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

  • ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

    ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

    ಕಲಬುರಗಿ: ಹಿರಿಯ ಬಿಜೆಪಿ ಮುಖಂಡ (BJP Leader) ಮಹಾಂತಪ್ಪಾ ಆಲೂರೆ ಅವರನ್ನು ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದ ಬಳಿ ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸೋಲಾಪುರ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಸಾವನ್ನಪ್ಪಿದ್ದಾರೆ.

    ಗುರುವಾರ ಬೆಳಿಗ್ಗೆ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದಲ್ಲಿ ಏಕಾಏಕಿ ಮೂವರು ಅಪರಿಚಿತರು ಬಂದು ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ತಕ್ಷಣವೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಬಿಜೆಪಿ ಮುಖಂಡನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ್ ಘಟನೆ ಕುರಿತು ಮಾತನಾಡಿದ್ದಾರೆ. ಮಹಾಂತಪ್ಪ ಆಲೂರೆ ನಮ್ಮ ಕುಟುಂಬದ ಒಬ್ಬ ಸದಸ್ಯರಂತಿದ್ದರು. ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿತ್ವ, ಸಹಕಾರ ಸಂಘದ ಮೂಲಕ ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಬಂದೇ ಇಲ್ಲ – ಜಾತಿಗಣತಿ ಸ್ವೀಕಾರಕ್ಕೆ ಹೆಬ್ಬಾಳ್ಕರ್ ಆಕ್ಷೇಪ

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:
    ಈ ಘಟನೆ ನೋಡಿದಾಗ ಆಳಂದ ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಏನೂ ಬೇಕಾಗಿಲ್ಲ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗದೇ ಕೊಲೆ ಮಾಡಿದ ರಾಕ್ಷಸರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ 20 ಭಾರತೀಯರು – ವಾಪಸ್‌ ಕರೆತರಲು ಹರಸಾಹಸ

  • ಕಾಲು ಕಳೆದುಕೊಂಡ ವ್ಯಕ್ತಿಯ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ ಆಧಾರ!

    ಕಾಲು ಕಳೆದುಕೊಂಡ ವ್ಯಕ್ತಿಯ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ ಆಧಾರ!

    ಕಲಬುರಗಿ: ನಿಮ್ಮ `ಪಬ್ಲಿಕ್ ಟಿವಿ’, `ಬೆಳಕು’ (Public TV Belaku) ಕಾರ್ಯಕ್ರಮದ ಮೂಲಕ ಸಮಾಜಮುಖಿ ಕೆಲಸಗಳನ್ನ ಮುಂದುವರಿಸಿದ್ದು, ನೊಂದ ಬಡ ಕುಟುಂಬಕ್ಕೆ ಆಧಾರವಾಗಿದೆ. ಕಲಬುರಗಿ (Kalaburagi) ಜಿಲ್ಲೆ ಆಳಂದ ತಾಲೂಕಿನ ದಣ್ಣೂರ ಗ್ರಾಮದ ಕುಟುಂಬದ ಕಥೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.

    ಹೌದು. ಆಳಂದ ತಾಲೂಕಿನ ದಣ್ಣೂರ ಗ್ರಾಮದ ಅಂಗವಿಕಲ ಕುಟುಂಬದ ಸಂಕಷ್ಟದ ಕುರಿತು ʻಪಬ್ಲಿಕ್ ಟಿವಿʼ ಬೆಳಕು ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ಕುಟುಂಬ ತನ್ನ ಕಷ್ಟವನ್ನು ನಾಡಿನ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. `ಪಬ್ಲಿಕ್’ ವರದಿಗೆ ಸ್ಪಂದಿಸಿದ ಬಿಜೆಪಿ ಮುಖಂಡ (BJP Leader), ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾನಂದ ಗುತ್ತೇದಾರ್ ನೊಂದ ಕುಟುಂಬಕ್ಕೆ ನೇರವಾಗಿದ್ದಾರೆ. ಚಿಕ್ಕದಾಗಿ ಕಿರಾಣಿ ಅಂಗಡಿಯೊಂದನ್ನ ಇಟ್ಟುಕೊಟ್ಟು, ನೊಂದ ಕುಟುಂಬಕ್ಕೆ ಆಸರೆಯಾಗಿದ್ದಾರೆ.

    ಕುಟುಂಬದ ಕಥೆ-ವ್ಯಥೆ:
    ದಣ್ಣೂರ ಗ್ರಾಮದ ನಿವಾಸಿ ಪ್ರಭು ಬೈಕ್ ಅಪಘಾತದಲ್ಲಿ (Bike Accident) ಕಾಲು ಕಳೆದುಕೊಂಡು ಜೀವನ ನಡೆಸಲಾರದಷ್ಟು ಸಮಸ್ಯೆಗೀಡಾಗಿದ್ದರು. ತಮ್ಮ ಪತ್ನಿ ಹಾಗೂ ಮೂರು ಮಕ್ಕಳ ಪ್ರತಿದಿನ ಕಷ್ಟದ ಕಣ್ಣಿರಿನಲ್ಲಿ ಕೈತೊಳೆಯುತ್ತಿದ್ದರು. ಈ ಬಗ್ಗೆ ನಿಮ್ಮ `ಪಬ್ಲಿಕ್ ಟಿವಿ’ ವರದಿ ಮಾಡಿತ್ತು. ಇದನ್ನೂ ಓದಿ: ಚೆನ್ನೈ ತಲುಪಿದ ಚಾಲಕ ರಹಿತ ಹಳದಿ ಮೆಟ್ರೋ- ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ರವಾನೆ

    ಹೆಚ್.ಆರ್ ರಂಗನಾಥ್ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಬೆಳಕು ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ಆಗ ಪ್ರಭು ಹಾಗು ಅವರ ಪತ್ನಿ ಮಲ್ಲಮ್ಮ ತಮ್ಮ ಕುಟುಂಬ ನಿರ್ವಹಣೆಗೆ ಗ್ರಾಮದಲ್ಲಿಯೇ ಒಂದು ಚಿಕ್ಕ ಕಿರಾಣಿ ಅಂಗಡಿ ಮಾಡಿಕೊಟ್ಟರೇ ಕುಟುಂಬದ ನಿರ್ವಹಣೆಗೆ ಸಹಾಯವಾಗುತ್ತದೆ. ದಾನಿಗಳು ಯಾರಾದರೂ ಸಹಾಯ ಮಾಡಿದ್ರೆ ತುತ್ತು ಅನ್ನ ಸಿಗುತ್ತದೆ ಅಂತಲೂ ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ: UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

    ಈ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರ ಮನವಿಗೆ ಆಳಂದ ತಾಲೂಕಿನ ಬಿಜೆಪಿ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾನಂದ ಗುತ್ತೇದಾರ್ ಅವರು ಪ್ರಭು ಅವರ ಕುಟುಂಬಕ್ಕೆ ನೇರವಿನ ಹಸ್ತ ಚಾಚಿದ್ದಾರೆ. ಪ್ರಭು ಅವರ ಕುಟುಂಬದ ಬೇಡಿಕೆಯಂತೆ 30 ಸಾವಿರ ರೂ. ವೆಚ್ಚದಲ್ಲಿ ಸಣ್ಣ ಕಿರಾಣಿ ಅಂಗಡಿಯೊಂದನ್ನ ಇಟ್ಟುಕೊಟ್ಟು ಜೀವನಕ್ಕೆ ನೆರವಾಗಿದ್ದಾರೆ. ಇದರಿಂದ ಸಂತಸಗೊಂಡಿರುವ ಕುಟುಂಬ `ಪಬ್ಲಿಕ್ ಟಿವಿ’ಗೆ ಧನ್ಯವಾದ ಹೇಳಿದೆ.

  • ಮಣಿಪುರದಲ್ಲಿ ಮತ್ತೆ ಗುಂಡಿನ ಸುರಿಮಳೆ – ಇಬ್ಬರು ಸಾವು, ಓರ್ವ BJP ಮುಖಂಡನಿಗೆ ಗಂಭೀರ ಗಾಯ

    ಮಣಿಪುರದಲ್ಲಿ ಮತ್ತೆ ಗುಂಡಿನ ಸುರಿಮಳೆ – ಇಬ್ಬರು ಸಾವು, ಓರ್ವ BJP ಮುಖಂಡನಿಗೆ ಗಂಭೀರ ಗಾಯ

    – ಹಲವೆಡೆ ಗ್ರಾಮಸ್ಥರು ಪಲಾಯನ

    ಇಂಫಾಲ: ಮಣಿಪುರದಲ್ಲಿ (Manipur) 2024ರ ವರ್ಷಾರಂಭದ ಮೊದಲ ದಿನದಿಂದಲೇ ಹಿಂಸಾಚಾರ ಭುಗಿಲೆದ್ದಿದೆ. ಮಂಗಳವಾರ (ಜ.30) ಮತ್ತೆ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದ ಓರ್ವ ಬಿಜೆಪಿ ಮುಖಂಡ (BJP Leader) ಸೇರಿ ಐವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    2024ರ ವರ್ಷಾರಂಭದ ಮೊದಲ ದಿನವೇ ಮಣಿಪುರದಲ್ಲಿ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದರು. ಆ ನಂತರ ಇಲ್ಲಿನ ಭದ್ರತಾ ಪಡೆಗಳು ಹಾಗೂ ಬಂಡುಕೋರರ ನಡುವೆ ಗುಂಡಿನ ಚಮಮಕಿ ನಡೆದಿತ್ತು. ಇದಾದ ಕೆಲವೇ ದಿನಗಳಲ್ಲಿ ಮತ್ತೆ ಮಣಿಪುರದಲ್ಲಿ ಗುಂಡಿನ ಸುರಿಮಳೆಗೈದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭದ್ರತಾ ಪಡೆ-ಬಂಡುಕೋರರ ನಡುವೆ ಗುಂಡಿನ ಚಕಮಕಿ

    ಇಂಫಾಲದ ಪಶ್ಚಿಮ ಜಿಲ್ಲೆಯ ಕೌತ್ರುಕ್ ಗ್ರಾಮದಲ್ಲಿ ಗುಂಡಿನ ದಾಳಿ (Firing) ನಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಓಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

    ಗುಂಡಿನ ದಾಳಿ ವೇಳೆ ಇಲ್ಲಿನ ಬಿಜೆಪಿ ಯುವಘಟಕದ ಭಾಗವಾದ ಭಾರತೀಯ ಜನತಾ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಮನೋಹರ್ಮಯುಮ್ ಬರೀಶ್ ಶರ್ಮಾ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಹೊಸವರ್ಷದ ಮೊದಲ ದಿನವೇ ಹಿಂಸಾಚಾರ – ಗುಂಡಿನ ದಾಳಿಗೆ ನಾಲ್ವರು ಬಲಿ

    ಇದಲ್ಲದೇ ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿ ಎರಡು ಸಮುದಾಯಗಳ ಗ್ರಾಮ ಸ್ವಯಂಸೇವಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಹಿಂಸಾಚಾರದ ನಂತರ ಇಂಫಾಲ್ ಕಣಿವೆಯ ಕಡಂಗ್‌ಬಂಡ್, ಕೌಟ್ರುಕ್ ಮತ್ತು ಕಾಂಗ್‌ಚುಪ್ ಗ್ರಾಮಗಳಿಂದ ಹಲವು ನಿವಾಸಿಗಳು ಪಲಾಯನ ಮಾಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

  • 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

    6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

    ಯಾದಗಿರಿ: ಯಾದಗಿರಿ (Yagdiri) ಜಿಲ್ಲೆಯ ಶಹಾಪುರದ ಗೋದಾಮಿನಲ್ಲಿದ್ದ 6 ಸಾವಿರ ಕ್ವಿಂಟಾಲ್ ಪಡಿತರ ಅಕ್ಕಿ (Ration Rice) ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್ (Manikanta Rathod) ಅವರ ಸಹೋದರ ರಾಜು ರಾಠೋಡ್‌ನನ್ನ (Raju Rathod) ಬಂಧಿಸಲಾಗಿದೆ.

    ರಾಜು ರಾಠೋಡ್‌ಗೆ ಸೇರಿದ ಗುರುಮಠಕಲ್‌ನಲ್ಲಿನ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಗೋಡೌನ್‌ನಲ್ಲಿ 550 ಕ್ವಿಂಟಾಲ್ ಪಡಿತರ ಅಕ್ಕಿ ಸೀಜ್ ಮಾಡಿದ ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಹಾಗೂ ಸುರಪುರ ಸಿಪಿಐ ಎಸ್.ಎಂ ಪಾಟೀಲ್ ನೇತೃತ್ವದ ತಂಡ ತಡರಾತ್ರಿ ರಾಜು ರಾಠೋಡ್‌ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

    ಕಳೆದ 15 ದಿನಗಳ ಹಿಂದೆ ಇದೇ ರಾಜು ರಾಠೋಡ್ ಒಡೆತನದ ಲಕ್ಷ್ಮಿ ವೆಂಕಟೇಶ್ವರ ರೈಸ್ ಮಿಲ್‌ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿತ್ತು. ಈ ಘಟನೆಯ ನಂತರ ತಲೆ ಮರೆಸಿಕೊಂಡಿದ್ದ ರಾಜು ರಾಠೋಡ್ ವಾರದ ಹಿಂದೆ ಬೇಲ್ ಪಡೆದಿದ್ದ. ಶನಿವಾರ ತಡರಾತ್ರಿ ಮತ್ತೆ ದಾಳಿ ಮಾಡಿದ ಪೊಲೀಸರಿಗೆ ವೇರ್‌ಹೌಸ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿ ಪತ್ತೆಯಾಗಿದೆ. ಇದನ್ನೂ ಓದಿ: ಕಾರ್ಯಕ್ರಮದ ನಡುವೆ ಯತೀಂದ್ರ ಸಿದ್ದರಾಮಯ್ಯಗೆ ಅವಾಚ್ಯ ಶಬ್ದಗಳಿಂದ ನಿಂದನೆ – ವ್ಯಕ್ತಿ ಬಂಧನ

    ಈ ಹಿಂದೆ ಇದೇ ಅಕ್ಕಿ ಕಳ್ಳತನ ಕೇಸ್ ನಲ್ಲಿ ಶಹಾಪುರ ಪೊಲೀಸರು ತನ್ನನ್ನ ಬಂಧಿಸಿದ್ದಾರೆ ಎಂದು ದೆಹಲಿಯಿಂದಲೇ ಹೇಳಿಕೊಂಡಿದ್ದ ಮಣಿಕಂಠ ರಾಠೋಡ್ ತದನಂತರ ಬಂಧನಕ್ಕೆ ಒಳಗಾಗದೇ ನೇಪಾಳದ ಕಠ್ಮಂಡುವಿಗೆ ಪ್ರಯಾಣ ಬೆಳೆಸಿದ್ದ. ಇದೀಗ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ನನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲಿ ಸಿಕ್ಕ ಶಾಸನಕ್ಕೂ, ಕೋಲಾರಮ್ಮ ದೇವಾಲಯದ ಶಾಸನಕ್ಕೂ ಇದೆ ಲಿಂಕ್!

  • ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

    ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

    ಚಿಕ್ಕಬಳ್ಳಾಪುರ: ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡರೊಬ್ಬರಿಗೆ ಕೊರೊನಾ ಪಾಸಿಟಿವ್ (Coron Positive) ಧೃಡವಾಗಿದೆ.

    ಇತ್ತೀಚೆಗಷ್ಟೇ ದೆಹಲಿ ಹಾಗೂ ತಮಿಳುನಾಡಿಗೆ ಹೋಗಿ ಬಂದಿದ್ದ 69 ವರ್ಷದ ಬಿಜೆಪಿ ಮುಖಂಡನಿಗೆ ಜ್ವರ ಕಾಣಿಸಿಕೊಂಡಿತ್ತು. ಸತತ 5 ದಿನಗಳ ನಿರಂತರ ಜ್ವರ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

    ಕೊರೊನಾ ಟೆಸ್ಟ್ ನ ವರದಿ ಇಂದು ಬಂದಿದ್ದು ಪಾಸಿಟಿವ್ ಎಂಬುದು ಧೃಡವಾಗಿದೆ. ಸದ್ಯ ಬಿಜೆಪಿ ಮುಖಂಡ ಹೋಂ ಕ್ವಾರಂಟೈನಲ್ಲಿದ್ದಾರೆ.

    ಹೊಸ ತಳಿ ಜೆಎನ್.1 ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಸೂಚನೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಸಲ್ಲಿ ಹಳೆಯ ಆಸ್ಪತ್ರೆಯನ್ನ ಕೋವಿಡ್ 19 ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿದೆ. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಕೋವಿಡ್ ಆಸ್ಪತ್ರೆಗೆ ಮರುಚಾಲನೆ ನೀಡಲು ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಹಳೆಯ ಆಸ್ಪತ್ರೆಯಲ್ಲಿ 130 ಬೆಡ್ ಗಳನ್ನ ಸಿದ್ಧ ಮಾಡಿಕೊಳ್ಳಲಾಗುತ್ತಿದ್ದು, ಆಕ್ಸಿಜನ್ ವ್ಯವಸ್ಥೆ ಹಾಗೂ ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

  • ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

    ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

    ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

    ಮಣಿಕಂಠ ರಾಠೋಡ್ ಅವರು ಚಿತ್ತಾಪೂರ ಕ್ಷೇತ್ರದ ಬಿಜೆಪಿಯ (BJP Leader) ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಇವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ದಾಳಿ ಮಾಡಿದ್ದಾರೆ.

    ಮಣಿಕಂಠ ರಾಠೋಡ್ ವಾಹನ ತಡೆದು ಬಿಯರ್ ಬಾಟ್ಲಿಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ಘಟನೆಯಿಂದ ಮಣಿಕಂಠ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆಯಿಂದ ಇಶಾನಿ ಔಟ್- ‌ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್

  • ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳಲ್ಲಿ ಓರ್ವ ಬಿಜೆಪಿ ನಾಯಕನ ಮಗ!

    ಭೋಪಾಲ್: ಮಧ್ಯ ಪ್ರದೇಶದ (Madhya Pradesh) ದತಿಯಾ (Datia) ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ (Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ (BJP Leader) ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ.

    ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಸಂತ್ರಸ್ತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಸಿಟ್ಟಿನಿಂದ ಮಾವನನ್ನು ಗೋಡೆಗೆ ತಳ್ಳಿ ಕೊಂದ ಅಳಿಯ!

    ಸಂತ್ರಸ್ತ ವಿದ್ಯಾರ್ಥಿನಿಯರು ಅಲ್ಲದೇ ನಾಲ್ವರು ಆರೋಪಿಗಳು ಸಹ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ವಿಚ್ಛೇದನಕ್ಕೆ ಒಪ್ಪದ ಪತ್ನಿಯ ಕೊಲೆಗೆ ಸ್ಕೆಚ್- ಅಪಘಾತಕ್ಕೆ ಯತ್ನಿಸಿ ಸಿಕ್ಕಿಬಿದ್ದ ಪತಿ

    ಅತ್ಯಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂಗಿ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾಳೆ. ಆಕೆ ನೀಡಿದ ದೂರಿನಲ್ಲಿ, ನಾನು ಮತ್ತು ನನ್ನ ಅಕ್ಕನನ್ನು ನಾಲ್ವರು ಆರೋಪಿಗಳು ಅಪಹರಿಸಿ ಅವರ ಮನೆಗೆ ಕರೆದೊಯ್ದು ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    ಘಟನೆಯ ಬಳಿಕ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದು, ಅಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಆಕೆಯನ್ನು ನೆರೆಯ ಉತ್ತರ ಪ್ರದೇಶದ (Uttar Pradesh) ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತವರು ಮನೆ ಸೇರಿದ್ದ ಪತ್ನಿಯನ್ನು ಚುಚ್ಚಿ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

    ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

    ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್‌ನನ್ನು (Manikanth Rathod) ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿರುವ ಘಟನೆ ನಡೆದಿದೆ.

    ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಚಿತ್ತಾಪುರ ಪೊಲೀಸರು ಬಂಧಿಸಿದ್ದರು. ರಾತ್ರಿಯೇ ಸ್ಟೇಷನ್ ಬೇಲ್‌ ಮೇಲೆ ಮಣಿಕಂಠ ರಾಠೋಡ್‌ ಹೊರಬಂದಿದ್ದಾರೆ. ಇದನ್ನೂ ಓದಿ: ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ಕ್ಯಾಶ್‌ ಕೌಂಟರ್‌ನಿಂದ ಹಣ ಎತ್ಕೊಂಡು ಎಸ್ಕೇಪ್‌ ಆದ ಕಳ್ಳ

    ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಖರ್ಗೆ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಹೇಳಿದ್ದ ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

    ಇದೀಗ ಚಿತ್ತಾಪುರ ಪೊಲೀಸರು ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ರಾಠೋಡ್‌ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಅದಾಗ್ಯೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದನ್ನೂ ಓದಿ: ಟೆಸ್ಟಿಂಗ್‌ ವೇಳೆ ರಾಕೆಟ್‌ ಎಂಜಿನ್‌ ಸ್ಫೋಟ – ಜಪಾನ್‌ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ

    ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ರಾಠೋಡ್‌ ಸೋತಿದ್ದರು. ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದ ಮಣಿಕಂಠ ರಾಠೋಡಗೆ ಇದೀಗ ಸಂಕಷ್ಟ ಎದುರಾಗಿದೆ. ಚಿತ್ತಾಪುರದಲ್ಲಿ ಪ್ರಿಯಾಂಕ್ ವರ್ಸಸ್ ಮಣಿಕಂಠ ಪೊಲಿಟಿಕಲ್‌ ಫೈಟ್ ವಾರ್ ಶುರುವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ನವದೆಹಲಿ: ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಸಂಸದೀಯ ಸವಲತ್ತುಗಳನ್ನೂ ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ (Ordinary ParssPort) ಬಳಸಲು ದೆಹಲಿ ಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

    ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್‌ಗಾಂಧಿ ತಮ್ಮ ಪಾಸ್‌ಪೋರ್ಸ್‌ ಅನ್ನು ಒಪ್ಪಿಸಿದ್ದರು. ನಂತರ ಗಾಂಧಿ ಅವರು ನಿರಾಕ್ಷೇಪಣಾ ಪ್ರಮಾಣಪತ್ರಕ್ಕಾಗಿ (NOC) ಕೋರ್ಟ್‌ ಸಂಪರ್ಕಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದಾಗ ಅರ್ಜಿಯನ್ನು ಭಾಗಶಃ ಅನುಮತಿಸುವುದಾಗಿ ಕೋರ್ಟ್‌ ಹೇಳಿದೆ. ಆದ್ರೆ 10 ವರ್ಷಗಳು ಇರುವುದಿಲ್ಲ, ಕೇವಲ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಬಹುದಾಗಿ ತಿಳಿಸಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ರಾಹುಲ್ ಗಾಂಧಿ ಅವರು ಪಾಸ್‌ ಪೋರ್ಟ್ ಹೊಂದಲು ನ್ಯಾಯಾಲಯದ ಅನುಮತಿ ಬೇಕಿತ್ತು. ಏಕೆಂದರೆ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ (National Herald Case) ಆರೋಪಿಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಹಣಕಾಸು ದುರ್ಬಳಕೆ ಆರೋಪಗಳು ಅವರ ಮೇಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ

    ರಾಹುಲ್ ಗಾಂಧಿ ಅವರು ಪಾಸ್ ಪೋರ್ಟ್‌ ಹೊಂದಲು ನ್ಯಾಯಾಲಯದಿಂದ ನಿರಪೇಕ್ಷಣಾ ಪತ್ರ ಕೋರಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಕಳೆದ ಬುಧವಾರ ಸೂಚಿಸಿತ್ತು. ಶುಕ್ರವಾರದ ಒಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸ್ವಾಮಿ ಅವರಿಗೆ ನ್ಯಾಯಾಲಯ ಡೆಡ್ ಲೈನ್ ನೀಡಿತ್ತು. ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ವಿದೇಶಿ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.

    2015ರ ಡಿಸೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಅವರ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಬೇಕೆನ್ನುವ ಬಿಜೆಪಿ ನಾಯಕನ ಮನವಿಯನ್ನು ನ್ಯಾಯಾಲಯ ತಿಸ್ಕರಿಸಿದೆ.

    2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರು ಭಾಷಣ ಮಾಡುತ್ತಾ ʻಮೋದಿʼ ಉಪನಾಮ ಬಳಸಿ ಟೀಕಿಸಿದ್ದರು. ಈ ಹಿನ್ನೆಲೆ ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿ ಸಂಸತ್‌ ಸದಸ್ಯತ್ವ ಸ್ಥಾನವನ್ನೂ ಕಳೆದುಕೊಂಡರು. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು’

    ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
    2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ಸುಬ್ರಮಣಿಯನ್ ಸ್ವಾಮಿ ಆರೋಪವೇನು?
    ಅಸೋಸಿಯೇಟೆಡ್ ಜರ್ನಲ್ಸ್(AGL) ಸಂಸ್ಥೆಯನ್ನು ಜವಹಾರ್ ಲಾಲ್ ನೆಹರು ಅವರು 1937ರ ನವೆಂಬರ್ 20 ರಂದು ಸ್ಥಾಪಿಸಿದ್ದರು. 5 ಸಾವಿರ ಸ್ವಾತಂತ್ರ್ಯ ಹೋರಾಟಗಾರರ ಸಹಕಾರದಿಂದ ಈ ಸಾರ್ವಜನಿಕ ಕಂಪನಿ ಸ್ಥಾಪನೆಯಾಗಿತ್ತು. ಎಜೆಎಲ್ ಸಂಸ್ಥೆಯ ಸ್ಥಾಪನೆ ಬಳಿಕ ಅಂದಿನ ಪ್ರಧಾನಿ ನೆಹರೂ ಅವರು, ನವದೆಹಲಿ, ಲಕ್ನೋ, ಭೋಪಾಲ್, ಮುಂಬೈ, ಇಂದೋರ್ ನಗರದಲ್ಲಿ ಸರ್ಕಾರದ ವತಿಯಿಂದ ಜಮೀನು ಮಂಜೂರು ಮಾಡಿದ್ದರು. ಅಲ್ಲದೇ ಅವರ ಅವಧಿಯಲ್ಲಿ ಸಂಸ್ಥೆಗೆ ಅಪಾರ ಪ್ರಮಾಣದ ದೇಣಿಗೆ ಹರಿದುಬಂದಿತ್ತು. ಎಜೆ ಸಂಸ್ಥೆ ಅಂದು ಉರ್ದು ಆವೃತ್ತಿಯ ‘ಕ್ವಾಮಿ ಆವಾಜ್’ ಹಾಗೂ ಇಂಗ್ಲಿಷ್ ಆವೃತ್ತಿಯ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗಳನ್ನು ಪ್ರಕಟಿಸುತಿತ್ತು.

    ಎಜೆಎಲ್ ಸಂಸ್ಥೆಗೆ ಕಾಂಗ್ರೆಸ್ ಪಕ್ಷ ಸಂಗ್ರಹಿಸಿದ್ದ ನಿಧಿಯಿಂದ 90 ಕೋಟಿ ರೂ. ಹಣವನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗಿತ್ತು. 2011ರಲ್ಲಿ ಎಜೆಎಲ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಮೋತಿ ಲಾಲ್ ವೋರಾ ತಮ್ಮ ಸಂಸ್ಥೆ ಸಾಲ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಸಂಸ್ಥೆ ಹಾಗೂ ಅದರ ಆಸ್ತಿಗಳನ್ನು ರಾಹುಲ್ ಗಾಂಧಿ ಕುಟುಂಬ ಒಡೆತನದಲ್ಲಿದ್ದ ಯಂಗ್ ಇಂಡಿಯನ್ ಸಂಸ್ಥೆಗೆ ವರ್ಗಾಯಿಸಲು ಸಮ್ಮತಿಸಿದ್ದರು.