Tag: BJP leader

  • ವ್ಯಾಕ್ಸಿನೇಷನ್ ಪ್ರಮಾಣ ಪತ್ರದಲ್ಲಿ ಎಡವಟ್ಟು – ಕಿಡಿಗೇಡಿಗಳ ಕೃತ್ಯವೆಂದ ಅಧಿಕಾರಿಗಳು

    ವ್ಯಾಕ್ಸಿನೇಷನ್ ಪ್ರಮಾಣ ಪತ್ರದಲ್ಲಿ ಎಡವಟ್ಟು – ಕಿಡಿಗೇಡಿಗಳ ಕೃತ್ಯವೆಂದ ಅಧಿಕಾರಿಗಳು

    ಲಕ್ನೋ: ಬಿಜೆಪಿ ಸ್ಥಳೀಯ ನಾಯಕರೊಬ್ಬರಿಗೆ 5 ಡೋಸ್ ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ ಮತ್ತು ಆರನೇ ಡೋಸ್ ವ್ಯಾಕ್ಸಿನ್ ನೀಡಲು ದಿನಾಂಕವನ್ನು ನಿಗದಿ ಪಡಿಸಲಾಗಿದೆ ಎಂದು ವ್ಯಾಕ್ಸಿನೇಷನ್ ಪ್ರಮಾಣ ಪತ್ರದಲ್ಲಿ ತಪ್ಪಾಗಿ ಪ್ರಕಟಿಸಲಾಗಿದ್ದು, ಇದೊಂದು ಕಿಡಿಗೇಡಿತನ ಕೃತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಮ್‍ಪಾಲ್ ಸಿಂಗ್(73) ಬೂತ್ ನಂ79ರ ಬಿಜೆಪಿ ಅಧ್ಯಕ್ಷ ಮತ್ತು ಹಿಂದೂ ಯುವ ವಾಹಿನಿಯ ಸದಸ್ಯರಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸರ್ಧನ ಪ್ರದೇಶದಲ್ಲಿ ವರದಿಯಾಗಿದ್ದು, ತಮ್ಮ ವ್ಯಾಕ್ಸಿನೇಷನ್ ಪ್ರಮಾಣ ಪತ್ರದಲ್ಲಿ ಐದು ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ ಮತ್ತು ಆರನೇಯ ಡೋಸ್ ನೀಡಲು ದಿನಾಂಕ ನಿಗದಿ ಪಡಿಸಲಾಗಿದೆ ಎಂದು ನೀಡಲಾಗಿದೆ. ಇದು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಾಲಕಿ ಮೇಲೆ ಲೈಂಗಿಕ ಕಿರುಕುಳ ಪ್ರಕರಣ – ಠಾಣೆ ಬಳಿ ಓಡೋಡಿ ಬಂದಿದ್ದ ಶಾಸಕ ಬೈರತಿ ಸುರೇಶ್

    ರಾಮ್‍ಪಾಲ್ ಸಿಂಗ್‍ರವರು ತಮ್ಮ ಮೊದಲ ಲಸಿಕೆಯನ್ನು ಮಾರ್ಚ್ 16ರಂದು ಮತ್ತು ಎರಡನೇ ಲಸಿಕೆಯನ್ನು ಮೇ 8ರಂದು ಪಡೆದಿರುವುದಾಗಿ ತಿಳಿಸಿದ್ದಾರೆ. ಆದರೆ ಅಧಿಕೃತ ಪೋರ್ಟಲ್‍ನ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿದಾಗ, ಈಗಾಗಲೇ ಐದು ಡೋಸ್‍ಗಳನ್ನು ಸ್ವೀಕರಿಸಲಾಗಿದೆ ಮತ್ತು ಆರನೇಯ ಡೋಸ್ 2021 ಮತ್ತು ಜನವರಿ 2022ರ ನಡುವೆ ನೀಡಲಾಗುತ್ತದೆ ಎಂದು ಸೂಚಿಸಲಾಗಿದೆ. ಪ್ರಮಾಣ ಪತ್ರದಲ್ಲಿ ನನ್ನ ಮೊದಲ ಡೋಸ್‍ನನ್ನು ಮಾರ್ಚ್ 16ರಂದು, ಎರಡನೇಯ ಡೋಸ್‍ನ್ನು ಮೇ8 ರಂದು, ಮೂರನೇಯ ಡೋಸ್‍ನ್ನು ಮೇ 15ರಂದು ಮತ್ತು ನಾಲ್ಕನೇ, ಐದನೇ ಡೋಸ್‍ನ್ನು ಸೆಪ್ಟೆಂಬರ್ 15ರಂದು ಸ್ವೀಕರಿಸಿರುವುದಾಗಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಮುಖ್ಯ ವೈದ್ಯಕೀಯ ಅಧಿಕಾರಿ ಅಖಿಲೇಶ್ ಮೋಹನ್‍ರವರು, ಲಸಿಕೆಗಾಗಿ ಯಾರಾದರೂ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ನೋಂದಣಿಯಾಗಿರುವ ಮೊದಲ ಪ್ರಕರಣ ಇದಾಗಿದ್ದು, ಕೆಲವು ಕಿಡಿಗೇಡಿಗಳು ಚೇಷ್ಟೆ ಮಾಡಲು ಪೋರ್ಟಲ್‍ಗಳನ್ನು ಹ್ಯಾಕ್ ಮಾಡಿ ಈ ರೀತಿಯ ಕೃತ್ಯವೆಸಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಲಸಿಕೆ ಅಧಿಕಾರಿ ಪ್ರವೀಣ್ ಗೌತಮ್‍ಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ ಶುರು – ಬಿಜೆಪಿ, ಜೆಡಿಎಸ್ ಶಾಸಕರಿಗೆ ಡಿಕೆಶಿ ಗಾಳ..?

  • ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಉಗ್ರರು- ಬಲಿಯಾಗಿದ್ದು 3 ವರ್ಷದ ಕಂದಮ್ಮ

    ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಉಗ್ರರು- ಬಲಿಯಾಗಿದ್ದು 3 ವರ್ಷದ ಕಂದಮ್ಮ

    ಜಮ್ಮು ಕಾಶ್ಮೀರ: ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಭಯೋತ್ಪಾದಕರ ದಾಳಿಗೆ 3 ವರ್ಷದ ಕಂದ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿದೆ.

    ರಾಜೌರಿಯಲ್ಲಿ ಭಯೋತ್ಪಾದಕರು ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸವನ್ನು ಟಾರ್ಗೆಟ್ ಮಾಡಿ ನಿನ್ನೆ ರಾತ್ರಿ ಗ್ರೆನೇಡ್ ಎಸೆದಿದ್ದಾರೆ. ಈ ದಾಳಿಯ ಪರಿಣಾಮ ಜಸ್ಬೀರ್ ಸಿಂಗ್ ಅವರ ಕುಟುಂಬದ ಏಳು ಮಂದಿ ಸದಸ್ಯರಿಗೆ ಗಾಯಗಳಾಗಿವೆ. ಆದರೆ ವೀರ್(3) ಮಗುವಿನ ಸ್ಥಿತಿ ಗಂಭೀರವಾಗಿದ್ದು, ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೀರ್ ಸಾವನ್ನಪ್ಪಿದ್ದಾನೆ. ಮಗುವಿನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

    ಶ್ರೀ ಸಿಂಗ್ ಅವರಿಗೂ ಗಾಯಗಳಾಗಿದ್ದು, ಸರಿಯಾಗಿ ಅವರಿಗೆ ಭದ್ರತೆಯನ್ನು ಕೊಟ್ಟಿಲ್ಲ. ಅದಕ್ಕೆ ಈ ರೀತಿ ಕೃತ್ಯ ಸಂಭವಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದನ್ನೂ ಓದಿ: ತಾತನ ಮೃತದೇಹವನ್ನೇ ಫ್ರಿಡ್ಜ್‌ನಲ್ಲಿಟ್ಟ ಮೊಮ್ಮಗ – ಕಾರಣವೇನು ಗೊತ್ತಾ?

    ಬಿಜೆಪಿ ನಾಯಕರ ಮೇಲೆ ಭಯೋತ್ಪಾದಕ ದಾಳಿಗಳನ್ನು ಪಾಕಿಸ್ತಾನ ನಡೆಸುತ್ತಿದೆ. ಇದು ಹೇಡಿತನದ ಕೃತ್ಯ. ನಾವು ದಾಳಿಯನ್ನು ಖಂಡಿಸುತ್ತೇವೆ. ಅದಕ್ಕೆ ಕಾರಣರಾದ ಭಯೋತ್ಪಾದಕರನ್ನು ಪೊಲೀಸರು ತಕ್ಷಣವೇ ಬಂಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಆಗ್ರಹಿಸಿದ್ದಾರೆ.

    ಈ ಪ್ರಕರಣ ಕುರಿತು ಪರಿಣಾಮಕಾರಿಯಾಗಿ ತನಿಖೆ ಮಾಡುಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ಬಿಜೆಪಿ ಮುಖಂಡನ ಬರ್ಬರ ಹತ್ಯೆ- ಕಾರು ಸಮೇತ ಸುಟ್ಟು ಹಾಕಿದ್ರಾ ದುಷ್ಕರ್ಮಿಗಳು?

    ಬಿಜೆಪಿ ಮುಖಂಡನ ಬರ್ಬರ ಹತ್ಯೆ- ಕಾರು ಸಮೇತ ಸುಟ್ಟು ಹಾಕಿದ್ರಾ ದುಷ್ಕರ್ಮಿಗಳು?

    ಹೈದರಾಬಾದ್: ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಮೃತದೇಹ ಹೈದರಾಬಾದ್‍ನ ಮೇದಕ್‍ನಲ್ಲಿ ಪತ್ತೆಯಾಗಿದೆ.

    ಕಾರೂ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ:  ಗರ್ಭಿಣಿಯಾದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ: ಕರೀನಾ

    ಮೇದಕ್ ಜಿಲ್ಲೆಯ ಎಸ್‍ಪಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್ ಮೇಲೆ ಶ್ರೀನಿವಾಸ್ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

    ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ದೇವಸ್ಥಾನದಲ್ಲಿ ಬಿಜೆಪಿ ಮುಖಂಡನ ಮಗಳ ಅದ್ಧೂರಿ ವಿವಾಹ- ಜಿಲ್ಲಾಡಳಿತದಿಂದ ತಡೆ

    ದೇವಸ್ಥಾನದಲ್ಲಿ ಬಿಜೆಪಿ ಮುಖಂಡನ ಮಗಳ ಅದ್ಧೂರಿ ವಿವಾಹ- ಜಿಲ್ಲಾಡಳಿತದಿಂದ ತಡೆ

    ಮಂಗಳೂರು: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ಅದ್ಧೂರಿ ಮದುವೆ ಮಾಡುತ್ತಿದ್ದ ವೇಳೆ ಸಹಾಯಕ ಆಯುಕ್ತರ ತಂಡ ದಾಳಿ ನಡೆಸಿ ಮದುವೆ ನಿಲ್ಲಿಸಿದ ಘಟನೆ ನಗರದಲ್ಲಿ ನಡೆದಿದೆ.

    ಸರ್ಕಾರದ ಮಾರ್ಗಸೂಚಿ ಗಾಳಿಗೆ ತೂರಿ ಬಿಜೆಪಿ ಮುಖಂಡ, ಕಾರ್ಪೋರೇಟರ್ ಭಾಸ್ಕರ್ ಚಂದ್ರ ಶೆಟ್ಟಿ ತಮ್ಮ ಮಗಳ ಮದುವೆಯನ್ನು ಮಂಗಳೂರಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದರು. ಕೊರೊನಾ ಮಾರ್ಗಸೂಚಿಯಂತೆ ಮನೆಯ ಅಂಗಳದಲ್ಲೇ 20 ಜನರರೊಂದಿಗೆ ಮದುವೆ ಮಾಡಲು ಅವಕಾಶವಿದೆ. ಆದರೆ ಕೊರೊನಾ ನಿಯಮ ಗಾಳಿಗೆ ತೂರಿ ಜಿಲ್ಲಾಡಳಿತದ ಆದೇಶಕ್ಕೆ ಬೆಲೆ ಕೊಡದೆ, ವಿವಾಹ ನಡೆಸಿದ್ದು, ಮದುವೆ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಕಾರ್ ನಲ್ಲಿ ಬಂದ ನೂರಾರು ಜನ ಸೇರಿದ್ದರು.

    ಮದುವೆಯ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ದಾಳಿ ನಡೆಸಿ, ದೇವಸ್ಥಾನದ ಆಡಳಿತ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಒಂದೇ ಮುಹೂರ್ತದಲ್ಲಿ ನಾಲ್ಕು ಮದುವೆ ಎಂದು ಸಮಜಾಯಿಷಿ ನೀಡಿದ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

    ಅರ್ಧ ಗಂಟೆಯಲ್ಲಿ 4 ಮದುವೆಯನ್ನು ಹೇಗೆ ಮಾಡುತ್ತೀರಾ, ನಗರದಲ್ಲಿ ಈ 4 ಮದುವೆ ಮಾಡಲು ಯಾರು ನಿಮಗೆ ಅನುಮತಿ ಕೊಟ್ಟವರು ಎಂದು ಆಡಳಿತ ಮಂಡಳಿ ಸೇರಿ ಮದುವೆಗೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿದ್ದಾರೆ. ಅನುಮತಿ ಇರುವ ಗಾಡಿಗಳನ್ನು ಬಿಟ್ಟು ಉಳಿದ ಎಲ್ಲ ವಾಹನಗಳನ್ನು ಸೀಜ್ ಮಾಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಆಯೋಜಕ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ.

  • ಬಿಜೆಪಿ ಮುಖಂಡನ ಪತ್ನಿ ಅಂತ ಹೇಳಿಕೊಂಡಿದ್ದ ಮಹಿಳೆ ಆತ್ಮಹತ್ಯೆ

    ಬಿಜೆಪಿ ಮುಖಂಡನ ಪತ್ನಿ ಅಂತ ಹೇಳಿಕೊಂಡಿದ್ದ ಮಹಿಳೆ ಆತ್ಮಹತ್ಯೆ

    ಹುಬ್ಬಳ್ಳಿ: ಕಲಘಟಗಿ ಬಿಜೆಪಿ ಮುಖಂಡ ಬಸವರಾಜ ಕೇಲಗಾರ ಪತ್ನಿ ಎಂದು ಹೇಳಿಕೊಂಡು ಹಣಕಾಸಿನ ವಿಚಾರವಾಗಿ ಬೀದಿ ಬೀದಿಯಲ್ಲಿ ಬಡಿದಾಡಿಕೊಂಡಿದ್ದ ಅನಿತಾ ರೇವಣಕರ್ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಹುಬ್ಬಳ್ಳಿಯ ಕೇಶ್ವಾಪುರದ ಸ್ವಾಗತ ಕಾಲೋನಿಯ ನಿವಾಸದಲ್ಲಿ ಅನಿತಾ ರೇವಣಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

    ಬಿಜೆಪಿ ಮುಖಂಡ ಬಸವರಾಜ ಕೇಲಗಾರ ತನಗೆ ಮದುವೆಯಾಗಿ ಮಕ್ಕಳು ಇದ್ದರು, ವಿಧವೆಯಾಗಿದ್ದ ತನನ್ನು ಮೋಸ ಮಾಡಿ ಮದುವೆಯಾಗಿದ್ದ. ಮದುವೆ ನಂತರ ನನ್ನ ಬಳಿ ಹಣ ಪಡೆದುಕೊಂಡು ವಂಚಿಸಿದ್ದ ಎಂದು ಮಹಿಳೆ ಆರೋಪಿಸಿದ್ದಳು. ಅಲ್ಲದೇ ಹಣಕಾಸಿನ ವಿಚಾರವಾಗಿ ಬಿಜೆಪಿ ಮುಖಂಡನ ಮನೆಗೆ ಹೋದ ವೇಳೆ ಮೃತ ಮಹಿಳೆಯ ಮೇಲೆ ಹಿಗ್ಗಾಮುಗ್ಗ ಥಳಿಸಿ ಹಲ್ಲೆ ಮಾಡಲಾಗಿತ್ತು ಎನ್ನಲಾಗಿದೆ.

    ಇದಲ್ಲದೇ ಮೃತ ಮಹಿಳೆ ಹಾಗೂ ಬಸವರಾಜ ಕೇಲಗಾರ ಮಧ್ಯದ ಹಣಕಾಸಿನ ವಿಚಾರವಾಗಿ ಅನೇಕ ಬಾರಿ ಬಡಿದಾಡಿಕೊಂಡಿದ್ದು, ಪೊಲೀಸ್ ಠಾಣೆಗಳಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇತ್ತೀಚೆಗೆ ಮಹಿಳೆ ತಾನೇ ತನ್ನ ತಲೆಗೆ ಹೊಡೆದುಕೊಂಡು ಬಿಜೆಪಿ ಮುಖಂಡನ ಮೇಲೆ ದೂರು ದಾಖಲಿಸಿದ್ದ ವೇಳೆ ಮಹಿಳೆಯ ಸಂಚು ಬಯಲಾಗಿತ್ತು. ಅಲ್ಲದೇ ಮಹಿಳೆ ಹಣಕ್ಕಾಗಿ ಬಿಜೆಪಿ ಮುಖಂಡನನ್ನ ಪೀಡಿಸುತ್ತಿರುವುದಾಗಿ ದೂರು ಸಹ ದಾಖಲಾಗಿತ್ತು.

    ಕಳೆದ ಎರಡು-ಮೂರು ತಿಂಗಳಲ್ಲಿ ಮೃತ ಮಹಿಳೆ ಹಾಗೂ ಬಿಜೆಪಿ ಮುಖಂಡನ ಮಧ್ಯೆ ಸಾಕಷ್ಟು ಗಲಾಟೆ ನಡೆದು ಪ್ರಕರಣ ಪೊಲೀಸ್ ಠಾಣೆಗಳ ಮೇಟ್ಟಿಲೇರಿತ್ತು. ಇದಾದ ಬೆನ್ನಲ್ಲೇ ಮಹಿಳೆ ಇದೀಗ ನೇಣಿಗೆ ಶರಣಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯ ಬಗ್ಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಮಗನ ಅದ್ಧೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ಧ ಎಫ್‍ಐಆರ್

    ಮಗನ ಅದ್ಧೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ಧ ಎಫ್‍ಐಆರ್

    ಚಿಕ್ಕೋಡಿ: ಕೊರೊನಾ ಮಾಹಾಮಾರಿಯಿಂದ ಜನರು ಸಾವನ್ನಪ್ಪುತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಮದುವೆ ಸಮಾರಂಭಗಳಿಗೆ ಹೆಚ್ಚು ಜನ ಸೇರುವುದಕ್ಕೆ ಸರ್ಕಾರ ನಿಷೇಧ ಹೇರಿದರೂ ಜನರು ನಿಯಮವನ್ನು ಪಾಲಿಸುತ್ತಿಲ್ಲ.

    ಈಗ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅದ್ಧೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನು ಪೊಲೀಸರು ರವಾನೆ ಮಾಡಿದ್ದಾರೆ.

    ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಗನ ಅದ್ಧೂರಿ ಮದುವೆ ಮಾಡಿದ್ದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಸೋಮವಾರ ಕೊವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಮಗನ ಮದುವೆ ಮಾಡಿದ್ದ ದಯಾನಂದ ವಂಟಮುರಿ, ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಮದುವೆ ಜೊತೆ ಸಂಜೆ ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದ ಮುಖಂಡನ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

    500ಕ್ಕೂ ಹೆಚ್ಚು ಜನರನ್ನು ಮದುವೆಯಲ್ಲಿ ಸೇರಿದ್ದು, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಮದಹಳ್ಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರು 4 ಕಿ.ಮೀ ಅಂತರದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಈ ರೀತಿ ಅದ್ಧೂರಿ ಮದುವೆ ಮಾಡಿದ್ದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ.

  • ಕಾಶ್ಮೀರದಲ್ಲಿ ಬಿಜೆಪಿ ನಾಯಕನ್ನು ಹತೈಗೈದ ಭಯೋತ್ಪಾದಕರು

    ಕಾಶ್ಮೀರದಲ್ಲಿ ಬಿಜೆಪಿ ನಾಯಕನ್ನು ಹತೈಗೈದ ಭಯೋತ್ಪಾದಕರು

    – ಘಟನೆಯಲ್ಲಿ ಕಮಲ ನಾಯಕನ ತಂದೆ, ತಮ್ಮ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಬಿಜೆಪಿ ನಾಯಕ ಶೇಖ್ ವಾಸಿಮ್ ಹಾಗೂ ಅವರ ತಂದೆ ಮತ್ತು ಸಹೋದರರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಬುಧವಾರ ಸಂಜೆ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.

    ಬಿಜೆಪಿ ಜಿಲ್ಲಾಧ್ಯಕ್ಷ ಶೇಖ್ ವಾಸಿಮ್ ಅವರ ಕುಟುಂಬದೊಂದಿಗೆ ಅಂಗಡಿಯಲ್ಲಿ ಕುಳಿತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ವಾಸಿಮ್ ಸೇರಿದಂತೆ ಅವರ ತಂದೆ ಮತ್ತು ತಮ್ಮ ಸೇರಿ ಮೂವರೂ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ.

    ಬಂಡಿಪೋರಾದಲ್ಲಿ ಬಿಜೆಪಿ ಕಾರ್ಯಕರ್ತ ವಾಸಿಮ್ ಅವರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ವಾಸೀಮ್ ಬ್ಯಾರಿ ಮತ್ತು ಅವರ ತಂದೆ ಬಶೀರ್ ಅಹ್ಮದ್ ಮತ್ತು ಸಹೋದರ ಉಮರ್ ಬಶೀರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೂವರೂ ಸಾವನ್ನಪ್ಪಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಭಾಗ್ ಸಿಂಗ್ ಅವರು, ಮೃತ ವಾಸಿಮ್ ಮತ್ತು ಅವರ ಕುಟುಂಬಕ್ಕೆ ಎಂಟು ಮಂದಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಆದರೆ ಘಟನೆ ನಡೆದ ಸ್ಥಳದಲ್ಲಿ ಒಬ್ಬರು ಸೆಕ್ಯೂರಿಟಿಗಳು ಇಲ್ಲದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕರ್ತವ್ಯ ಲೋಪ ಮಾಡಿದ ವಾಸಿಮ್ ಅವರ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ: ವಿಡಿಯೋ ವೈರಲ್

    ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ: ವಿಡಿಯೋ ವೈರಲ್

    – ಪರಸ್ಪರ ದೂರು ದಾಖಲು

    ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್‍ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ ಪರಿಶೀಲನೆಗೆ ಹೋಗಿದ್ದರು. ಆಗ ಸುಲ್ತಾನ್ ಸಿಂಗ್ ನಿಮ್ಮಂಥ ಸುಂದರ ಚೆಲುವೆ, ಸ್ಟಾರ್ ಬಿಸಿಲಿನಲ್ಲಿ ಹೀಗೆ ಮಂಡಿಗೆ ಬರಬಾರದು ಎಂದು ಹೇಳಿದ್ದರು ಎನ್ನಲಾಗಿದೆ.

    ಇದರಿಂದ ಕೋಪಗೊಂಡ ಫೋಗಟ್, ಸಿಂಗ್ ಜೊತೆ ತೀವ್ರವಾಗಿ ಮಾತುಕತೆ ನಡೆಸಿದ್ದಾರೆ. ನಂತರ ಚಪ್ಪಲಿ ತೆಗೆದುಕೊಂಡು ಥಳಿಸಿದ್ದಾರೆ. ಈ ವಿಡಿಯೋವನ್ನು ಸ್ಥಳದಲ್ಲಿದ್ದವರು ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. “ನಿಮ್ಮಂತಹ ಜನರಿಂದ ನಿಂದನೆಗಳನ್ನು ಕೇಳಲು ನಾನು ಕೆಲಸ ಮಾಡುತ್ತಿದ್ದೇನೆ? ಗೌರವಾನ್ವಿತವಾಗಿ ಬದುಕಲು ನನಗೆ ಹಕ್ಕಿಲ್ಲವೇ?” ಎಂದು ಫೋಗಟ್ ವೀಡಿಯೊದಲ್ಲಿ ಹೇಳಿದ್ದಾರೆ.

    ಪರಸ್ಪರ ಪೊಲೀಸರಿಗೆ ದೂರು:
    ಈ ಘಟನೆ ನಡೆದ ನಂತರ ಫೋಗಟ್ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ, ಸುಲ್ತಾನ್ ಸಿಂಗ್ ಅಸಭ್ಯವಾಗಿ ಮಾತನಾಡಿ ನನ್ನನ್ನು ಅವಮಾನಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇತ್ತ ಸುಲ್ತಾನ್ ಸಿಂಗ್ ಕೂಡ ಒಬ್ಬ ಸರ್ಕಾರಿ ಅಧಿಕಾರಿಯ ಮೇಲೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಫೋಗಟ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಸುಲ್ತಾನ್ ಸಿಂಗ್ ಮತ್ತು ಫೋಗಟ್ ಇಬ್ಬರು ಪರಸ್ಪರ ದೂರು ದಾಖಲಿಸಿದ್ದಾರೆ. ನಾವು ಇಬ್ಬರ ಹೇಳಿಕೆಗಳು ಮತ್ತು ವಿಡಿಯೋಗಳನ್ನು ಪರಿಶೀಲಿಸುತ್ತಿದ್ದೇವೆ. ನಂತರ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಫೋಗಟ್ ವಿರುದ್ಧ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಕೃತ್ಯಗಳನ್ನು ಬಿಜೆಪಿ ಮುಖಂಡೆ ಮಾಡಿದ್ದಾರೆ. ಸರ್ಕಾರಿ ಕೆಲಸ ಮಾಡುವುದು ಅಪರಾಧವೇ? ಸಿಎಂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಫೋಗಟ್ ವಿರುದ್ಧ ಕ್ರಮ ತೆಗೆದುಕೊಳ್ಳುವರೇ” ಎಂದು ಪ್ರಶ್ನೆ ಮಾಡಿದ್ದಾರೆ.

    ಕಳೆದ ವರ್ಷ ಅದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋನಾಲಿ ಫೋಗಟ್ ಸ್ಪರ್ಧಿಸಿದ್ದರು. ಆಗ ಕಾಂಗ್ರೆಸ್‍ನ ಕುಲದೀಪ್ ಬಿಶ್ನೋಯಿ ವಿರುದ್ಧ ಸೋತಿದ್ದರು.

  • ದೀಪ ಹಚ್ಚಿ ಅಂದ್ರೆ ಗುಂಡು ಹಾರಿಸಿದ ಬಿಜೆಪಿ ನಾಯಕಿ

    ದೀಪ ಹಚ್ಚಿ ಅಂದ್ರೆ ಗುಂಡು ಹಾರಿಸಿದ ಬಿಜೆಪಿ ನಾಯಕಿ

    ಲಕ್ನೋ: ಪ್ರಧಾನಿ ಮೋದಿ ಅವರು ಎಲ್ಲರೂ ಒಟ್ಟಾಗಿ ಸೇರಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಬೆಳಗಿಸಿ ಎಂದು ನಾಡಿನ ಜನತೆಗೆ ಕರೆ ಕೊಟ್ಟಿದ್ದರು. ಅದರಂತೆಯೇ ಜನರು ದೀಪ ಬೆಳಗಿಸಿದರು. ಆದರೆ ಉತ್ತರ ಪ್ರದೇಶದ ಬಿಜೆಪಿ ನಾಯಕಿಯೊಬ್ಬರು ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

    ಬಲರಾಂಪುರದ ಬಿಜೆಪಿ ಮಹಿಳಾ ಘಟಕದ ಸ್ಥಳೀಯ ನಾಯಕಿಯಾಗಿರುವ ಮಂಜು ತಿವಾರಿ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅಷ್ಟೇ ಅಲ್ಲದೇ ಗುಂಡು ಹಾರಿಸಿದ್ದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡು, ಅದನ್ನು ಫೇಸ್‍ಬುಕ್ ಪೇಜಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿ, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

    ಸಂಭ್ರಮಾಚರಣೆಯ ವೇಳೆ ಗಾಳಿಯಲ್ಲಿ ಗುಂಡು ಹಾರಿಸುವುದು ಕಾನೂನುಬಾಹಿರ. ಮಂಜು ತಿವಾರಿ ತಮ್ಮ ಪತಿ ಓಂ ಪ್ರಕಾಶ್ ಅವರ ರಿವಾಲ್ವರ್ ಅನ್ನು ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಂಜು ತಿವಾರಿ ಮೊದಲು ತಮ್ಮ ಮನೆಯ ಟೆರೆಸ್ ಮೇಲೆ ದೀಪಗಳನ್ನು ಬೆಳಗಿಸಿ ನಂತರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನು ಪತಿ ಓಂ ಪ್ರಕಾಶ್ ವಿಡಿಯೋ ರೆಕಾರ್ಡ್ ಮಾಡಿದ್ದಾರೆ.

    ‘ದೀಪ ಬೆಳಗಿಸೋಣ, ಕೊರೊನಾ ವೈರಸ್ ಓಡಿಸೋಣ’ ಎಂಬ ಕ್ಯಾಪ್ಶನ್ ಕೊಟ್ಟು, ಫೇಸ್‍ಬುಕ್‍ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ.

    ಇದೀಗ ಮಂಜು ತಿವಾರಿ ವಿರುದ್ಧ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಮಂಜು ತಿವಾರಿ ಗುಂಡು ಹಾರಿಸುವುದನ್ನು ಕಾಣಬಹುದು. ಹೀಗಾಗಿ ಕೊಟ್ವಾಲಿ ನಗರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ತನಿಖೆ ನಡೆಯುತ್ತಿದೆ” ಎಂದು ಎಸ್‍ಪಿ ಅರವಿಂದ್ ತಿವಾರಿ ತಿಳಿಸಿದ್ದಾರೆ.

  • ಬಿಜೆಪಿ ಮುಖಂಡನ ಹತ್ಯೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ

    ಬಿಜೆಪಿ ಮುಖಂಡನ ಹತ್ಯೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ

    – ಆರೋಪಿ ಅಕ್ಕನ ಬಗ್ಗೆ ಬಳಸಿದ ಪದವೇ ಕೊಲೆಗೆ ಕಾರಣ

    ಮೈಸೂರು: ಮೈಸೂರಿನಲ್ಲಿ ಮಾರ್ಚ್ 6 ರಂದು ಹುಟ್ಟುಹಬ್ಬದ ಪಾರ್ಟಿಯಲ್ಲೇ ನಡೆದಿದ್ದ ಬಿಜೆಪಿ ಮುಖಂಡ ಆನಂದ್ ಬರ್ಬರ ಹತ್ಯೆಗೆ ಅಸಲಿ ಕಾರಣ ಈಗ ಸ್ಪಷ್ಟವಾಗಿದೆ.

    ಆನಂದ್ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ ಬಸವರಾಜ್ ಕೊಲೆಗೆ ಕಾರಣ ಬಿಚ್ಚಿಟ್ಟಿದ್ದಾನೆ. ಆರೋಪಿ ಬಸವರಾಜ್ ನ ಅಕ್ಕನ ಬಗ್ಗೆ ಕೊಲೆಯಾದ ಆನಂದ್ ಕೆಟ್ಟದಾಗಿ ಮಾತನಾಡಿದ್ದೇ ಆತನ ಕೊಲೆಗೆ ಕಾರಣವಾಗಿದೆ. ಆರೋಪಿ ಬಸವರಾಜ್, ರಾ ಎಣ್ಣೆ ಕುಡಿದು ಅದೇ ಬಾಟಲ್‍ನಲ್ಲಿ ಆನಂದ್ ಬುರುಡೆ ಬಿಚ್ಚಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಾರ್ಚ್ 5ರ ಸಂಜೆ ಬಸವರಾಜ್‍ಗೆ ಕರೆ ಮಾಡಿ ಆನಂದ್ ಪಾರ್ಟಿಗೆ ಕರೆಸಿಕೊಂಡಿದ್ದ. ಮಧ್ಯರಾತ್ರಿಯವರೆಗೆ ಪಾರ್ಟಿ ಮಾಡಿದ್ದರು. ಕುಡಿದಾಗ ಬಾಸ್‍ನಂತೆ ವರ್ತಿಸುತ್ತಿದ್ದ ಬಿಜೆಪಿ ಮುಖಂಡ ಆನಂದ್, ತನ್ನ ಸುತ್ತಮುತ್ತ ಇದ್ದವರನ್ನು ನಿಂದಿಸುತ್ತ ತಾನು ಹೇಳಿದ ಕೆಲಸ ಮಾಡುವಂತೆ ಸೂಚಿಸುತ್ತಿದ್ದ. ಅಲ್ಲದೆ ಈ ಹಿಂದೆಯೂ ಪಾರ್ಟಿ ಕೊಡಿಸಿ ಬಸವರಾಜ್ ಮೇಲೆ ಆನಂದ್ ಹಲ್ಲೆ ಮಾಡಿದ್ದ.

    ಈ ಬಾರಿಯೂ ಹುಟ್ಟುಹಬ್ಬದ ದಿನ ಪಾರ್ಟಿಯಲ್ಲಿ ಮಧ್ಯರಾತ್ರಿ ಬಸವರಾಜ್ ಜೊತೆ ಆನಂದ್ ಕುಚೇಷ್ಠೆ ಮಾಡಿ, ಬಸವರಾಜ್ ತಲೆ ಮೇಲೆ ಹೊಡೆದು ಅವರ ಅಕ್ಕನ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ. ಆನಂದ್ ಮಾತಿನಿಂದ ಸಿಟ್ಟಿಗೆದ್ದ ಬಸವರಾಜ್ ಅರ್ಧ ಬಾಟೆಲ್ ರಾ ಎಣ್ಣೆಯನ್ನು ಕುಡಿದು, ಅದೇ ಬಾಟಲ್‍ನಿಂದಲೇ ಆನಂದ್ ತಲೆಗೆ ಹೊಡೆದಿದ್ದಾನೆ. ಒಂದೇ ಏಟಿಗೆ ಆನಂದ್ ತಲೆ ಹಾಗೂ ಬಾಟಲ್ ಎರಡು ಓಪನ್ ಆಗಿದೆ. ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದಾನೆ. ಆಗ ಜೇಬಿನಲ್ಲಿದ್ದ ಚಾಕುವಿನಿಂದ ಆನಂದ್‍ಗೆ ಹಿಗ್ಗಾಮುಗ್ಗ ಇರಿದು ಕೊಲೆ ಮಾಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಕೊಲೆ ನಂತರ ಅಪಾರ್ಟ್‌ಮೆಂಟ್‌ ನಿಂದ ಮನೆಗೆ ತೆರಳಿ ಹೆಂಡತಿಯನ್ನು ತವರು ಮನೆಗೆ ಬಿಟ್ಟು ಮಾರ್ಚ್ 6ರಂದೆ ಬೆಂಗಳೂರಿಗೆ ತೆರಳಿದ್ದಾನೆ. ನಂತರ ಸ್ನೇಹಿತರ ಸಲಹೆಯಂತೆ ತಾನೇ ಪೊಲೀಸರ ಮುಂದೆ ಬಂದು ಶರಣಾಗಿದ್ದಾನೆ.