Tag: BJP Mahila Morcha

  • ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

    ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

    ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗುವ ದೃಷ್ಟಿಯಿಂದ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. (Tailoring Machine Free Distribution)

    Mangaluru-BJP-Mahila-Morcha-Tailoring-Machine

    ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ಅವರು, ಮಹಿಳಾ ಮೋರ್ಚಾದವರು ದಾನಿಗಳ ಸಹಾಯದಿಂದ ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯವಾದುದು. ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳಲು ಹೊಲಿಗೆ ಯಂತ್ರದ ಕೊಡುಗೆ ಬಹಳ. ಅವರು ತಮ್ಮ ಮನೆಯ ನಿರ್ವಹಣೆಯಲ್ಲದೇ ಸಾಮಾಜಿಕವಾಗಿಯೂ ಹೆಚ್ಚು ಜವಾಬ್ದಾರಿ ಹಾಗೂ ಕಳಕಳಿ ಹೊಂದಿರುವವರು. ಕೋವಿಡ್ ಸಂಕಷ್ಟದ ಸಮಯದಲ್ಲಿ ನಮ್ಮ ಜಿಲ್ಲೆಯ ಇಂತಹದೇ ಮಹಿಳೆಯರು ಮನೆಯಲ್ಲೇ ಕೂತು ಕೋವಿಡ್ ವಾರಿಯರ್ ಗಳಿಗೆ ಸಾವಿರಾರು ಮಾಸ್ಕ್ ಗಳನ್ನು ತಯಾರಿಸಿ ಕೊಟ್ಟಿದ್ದರು. ಅವರ ಈ ಕಾರ್ಯವನ್ನು ನಾನಂತೂ ಎಂದಿಗೂ ಮರೆಯುವುದಿಲ್ಲ. ಇಂತಹ ಸ್ವಾವಲಂಬಿ ತಾಯಂದಿರ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ರಮೇಶ್ ಕಂಡೆಟ್ಟು, ಪೂರ್ಣಿಮಾ, ವಿಜಯ್ ಕುಮಾರ್ ಶೆಟ್ಟಿ, ಪೂರ್ಣಿಮಾ ರಾವ್, ರವಿಶಂಕರ್ ಮಿಜಾರ್, ಅಜಯ್ ಕುಲಶೇಖರ, ಹರೀಶ್ ರೈ, ಶಬರಿ, ಕಮಲಾಕ್ಷಿ, ಸಂಧ್ಯಾ ವೆಂಕಟೇಶ್ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ಜು.23 ರಂದು ʼಮೋದಿ 3.0ʼ ಬಜೆಟ್‌ ಮಂಡನೆ 

  • ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

    ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

    ನವದೆಹಲಿ: ಕೇಂದ್ರ ಸರ್ಕಾರದ ಮಹಿಳಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕದಿಂದ (BJP Mahila Morcha) ‘ಕಮಲ್ ಮಿತ್ರ’ (Kamal Mitra) ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದ್ದು, ಎಪ್ರಿಲ್‌ನಿಂದ ಇದು ಕಾರ್ಯಾರಂಭವಾಗಲಿದೆ. ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಶನಿವಾರ ಕಾರ್ಯಾಗಾರವನ್ನು ಉದ್ಘಾಟಿಸಿದರು.

    ಮಹಿಳಾ ಕೇಂದ್ರಿತ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೆಲಸ‌ ಮಾಡಲಿದ್ದು, ವಕೀಲರು, ವಿದ್ವಾಂಸರು, ಪ್ರಾಧ್ಯಾಪಕರು ಸೇರಿದಂತೆ ವಿವಿಧ ವಲಯಗಳ ವೃತ್ತಿಪರರು ಇಂದು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಮೋದಿ ಭದ್ರತೆಗೆ 2,000 ಪೊಲೀಸರ ನಿಯೋಜನೆ – ಐವರು ಎಸ್‌ಪಿಗಳು ಸ್ಥಳದಲ್ಲೇ ಮೊಕ್ಕಾಂ

    ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಮೋದಿ ಸರ್ಕಾರ ಮಹಿಳೆಯರಿಗಾಗಿ ಜಾರಿ ಮಾಡಿರುವ ಯೋಜನೆಗಳು, ಅದರ ಲಾಭಗಳನ್ನು ವಿವರಿಸಿ, ತಳಮಟ್ಟದ ಮಹಿಳೆಯರಿಗೆ ಜಾಗೃತಿ ಮೂಡಿಸುವ ಬಗ್ಗೆ ತಿಳಿಸಲಾಯಿತು.

    ಯೋಜನೆಯ ಲಾಭ ಪಡೆಯದ ಮಹಿಳೆಯರಿಗೆ ಅರ್ಜಿ ಸಲ್ಲಿಸಿ ಯೋಜನೆ ಲಾಭ ಪಡೆಯುವ ಬಗ್ಗೆ ತರಬೇತಿ ನೀಡಲು ಸಮಾಲೋಚನೆ ನಡೆಸಲಾಯಿತು. ಎಪ್ರಿಲ್‌‌ನಿಂದ ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕ, ರಾಜ್ಯ ಘಟಕಗಳ ಮೂಲಕ ಎಲ್ಲ ರಾಜ್ಯಗಳಲ್ಲೂ ಜಾಗೃತಿ ಆರಂಭಿಸಲಿದೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ಅಭಿಯಾನ ಆರಂಭಿಸಲಾಗಿದೆ. ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತದಿಂದ ಪ್ರಧಾನಿ ಮೋದಿಗೆ ತೊಟ್ಟಿಲು ಗಿಫ್ಟ್