Tag: bjp meeting

  • ಯತ್ನಾಳ್ ಉಚ್ಛಾಟನೆಗೆ ಒಕ್ಕೊರಲ ಒತ್ತಾಯ – ಬಿಜೆಪಿ ಸರಣಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    ಯತ್ನಾಳ್ ಉಚ್ಛಾಟನೆಗೆ ಒಕ್ಕೊರಲ ಒತ್ತಾಯ – ಬಿಜೆಪಿ ಸರಣಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    – ಕಚೇರಿಯಲ್ಲಿ 4 ಗಂಟೆಗಳ ಮ್ಯಾರಥಾನ್ ಸಭೆ
    – ಯತ್ನಾಳ್ ವಿರುದ್ಧ ಕ್ರಮಕೈಗೊಂಡರೆ ಎಲ್ಲವೂ ಸರಿಯಾಗುತ್ತೆ

    ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ (Tarun Chugh) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯತ್ನಾಳ್ ಉಚ್ಛಾಟನೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

    ಕರ್ನಾಟಕ ಬಿಜೆಪಿ ಆಂತರಿಕ ಸಂಘರ್ಷಕ್ಕೆ ಮದ್ದು ಅರೆಯಲು ಕೇಂದ್ರ ನಾಯಕರು ಮುಂದಾಗಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಚುಗ್ ರಾಜ್ಯಕ್ಕೆ ಆಗಮಿಸಿದ್ದು, ಸರಣಿ ಸಭೆಗಳನ್ನು ನಡೆಸಿದರು. ಇಂದು (ಡಿ.03) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ, ಸಮಿತಿಗಳ ಸಭೆ ನಡೆಯಿತು.ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಿ ಪಕ್ಷ ಉಳಿಸಿ – ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಅನಾಮಧೇಯ ಪತ್ರ

    ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವಿದ್ಯಮಾನಗಳು, ಬೈ ಎಲೆಕ್ಷನ್ ಸೋಲು, ಪಕ್ಷ ಸಂಘಟೆ ಸಂಘಟನೆ ಮತ್ತಿತರ ವಿಚಾರಗಳ ಬಗ್ಗೆ 4 ಗಂಟೆಗಳ ಮ್ಯಾರಥಾನ್ ಸಭೆ ನಡೆದಿದೆ. ದೆಹಲಿಗೆ ತೆರಳಿರುವ ಚುಗ್ ಇಂದಿನ ಸಭೆ ಬಗ್ಗೆ ಪಕ್ಷದೊಳಗಿನ ಆಂತರಿಕ ಸಂಘರ್ಷದ ಬಗ್ಗೆ ವಿವರವಾಗಿ ಮಾಹಿತಿ ಸಂಗ್ರಹಿಸಿ, ಹೈಕಮಾಂಡ್‌ಗೆ (High Command) ರಿಪೋರ್ಟ್ ಸಲ್ಲಿಸಲಿದ್ದಾರೆ.

    ಇದಕ್ಕೂ ಮುನ್ನ ತರುಣ್ ಚುಗ್, ಸಕ್ರಿಯ ಸದಸ್ಯತ್ವ ಸಮಿತಿಗಳು, ಜಿಲ್ಲಾಧ್ಯಕ್ಷರು, ಮಂಡಲ, ಬೂತ್ ಸಮಿತಿಗಳ ಪ್ರಮುಖರ ಜೊತೆ ಸಭೆ ನಡೆಸಿದರು. ಯತ್ನಾಳ್ ವಿರುದ್ಧ ಕ್ರಮ ಕೈಗೊಂಡರೆ ಎಲ್ಲವೂ ಸರಿಹೋಗತ್ತದೆ ಎಂದು ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಒಕ್ಕೊರಲ ಒತ್ತಾಯ ಮಾಡಿದ್ದಾರೆ. ಆದರೆ ತರುಣ್ ಚುಗ್ ಮಾತ್ರ ಇವತ್ತು ಯತ್ನಾಳ್ ವಿಷಯ ಚರ್ಚಿಸದೆ ಕೇವಲ ಪಕ್ಷ ಸಂಘಟನೆ ಬಗ್ಗೆ ಮಾತ್ರ ಒತ್ತುಕೊಟ್ಟಿದ್ದಾರೆ. ಡಿಸೆಂಬರ್ 7ಕ್ಕೆ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಬರಲಿದ್ದಾರೆ.

    ನಡೆದ ಸರಣಿ ಸಭೆಗಳ ಮೊದಲ ಸಭೆಯಲ್ಲಿಯೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಉಚ್ಛಾಟನೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸಭೆಯಲ್ಲಿದ್ದ ಶಾಸಕರು, ಮಾಜಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರುಗಳು ಒಕ್ಕೊರಲ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಯತ್ನಾಳ್ ಮತ್ತವರ ತಂಡದಿಂದ ಅಡ್ಡಿಯಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಂಡರೆ ಎಲ್ಲವೂ ಸರಿಯಾಗುತ್ತದೆ. ಕಳೆದ ಮೂರು ವರ್ಷಗಳಿಂದಲೂ ಯತ್ನಾಳ್ ಪಕ್ಷದ ಶಿಸ್ತು, ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಪಕ್ಷದ ನಾಯಕತ್ವ ವಿರುದ್ಧವೇ ಬಹಿರಂಗ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮೊದಲು ಯತ್ನಾಳ್ ಉಚ್ಛಾಟನೆ ಮಾಡಲೇಬೇಕೆಂದು ಪಟ್ಟು ಹಿಡಿದರು.

    ಯತ್ನಾಳ್ ತಂಡದಿಂದ ಜಿಲ್ಲಾಧ್ಯಕ್ಷರುಗಳಿಗೆ ತೊಂದರೆ ಆಗುತ್ತಿದೆ. ಈ ವೇಳೆ ಬಿಜೆಪಿಯ (BJP) 32 ಜಿಲ್ಲಾಧ್ಯಕ್ಷರ ಸಹಿ ಇರುವ ಪತ್ರ ತೋರಿಸಿ ಜೆಪಿ ನಡ್ಡಾಗೆ ಹೆಸರಿಗೆ ಪತ್ರ ಬರೆದಿದ್ದೇವೆ. ನೀವು ಅವರಿಗೆ ನೀಡಬೇಕು. ತಳಮಟ್ಟದ ಸಂಘಟನೆಯಲ್ಲಿ ಯತ್ನಾಳ್ ಗೊಂದಲ ಮೂಡಿಸುತ್ತಿದ್ದಾರೆ. ಇತ್ತೀಚಿನ ಪಕ್ಷದೊಳಗೆ ವಿದ್ಯಮಾನಗಳು ನಮಗೆ ಆಘಾತ ತಂದಿವೆ. ರಾಜ್ಯಾಧ್ಯಕ್ಷರ ಮೇಲೆ ಬಹಿರಂಗ ಹೇಳಿಕೆಗಳನ್ನು, ನಿತ್ಯ ಟೀಕೆ ಮಾಡುತ್ತಿದ್ದಾರೆ. ಬಿವೈವಿಯವರು ಉತ್ತಮವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ಅವರು ರಾಜ್ಯಾಧ್ಯಕ್ಷರಾದ ಬಳಿಕ 2023ರ ವಿಧಾನಸಭಾ ಚುನಾವಣೆ ಸೋಲಿನ ನಂತರ ಪಕ್ಷದಲ್ಲಿದ್ದ ನಿರಾಶೆಯ ಭಾವನೆಯಿಂದ ಹೊರಬರಲು ಎಲ್ಲರಿಗೂ ಸಾಧ್ಯವಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಯತ್ನಾಳ್ ಸಾರ್ವಜನಿಕವಾಗಿ ಪಕ್ಷದ ವರ್ಚಸ್ಸು, ವಿಶ್ವಾಸಾರ್ಹತೆ ಮತ್ತು ಪ್ರತಿಷ್ಠೆಗೆ ಪದೇ ಪದೇ ಘಾಸಿ ಮಾಡುತ್ತಿದ್ದಾರೆ. ಯತ್ನಾಳ್ ಮತ್ತು ಅವರ ತಂಡದ ವಿರುದ್ಧ ಕೇಂದ್ರ ನಾಯಕತ್ವ ಏಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ? ಬಹಿರಂಗ ಮಾಧ್ಯಮ ಹೇಳಿಕೆಗಳನ್ನು ನೀಡುವ ಮೂಲಕ ಸಾರ್ವಜನಿಕವಾಗಿ ಪಕ್ಷದ ಅಧ್ಯಕ್ಷರ ಪ್ರತಿಷ್ಠೆಯನ್ನು ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷದ ಘನತೆ, ವಿಶ್ವಾಸಾರ್ಹತೆ ಮತ್ತು ಹಿತದೃಷ್ಟಿಯಿಂದ ಕೂಡಲೇ ಮಧ್ಯಪ್ರವೇಶಿಸಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕಾಗಿ ವಿನಂತಿಕೊಳ್ಳುತ್ತೇವೆ. ಕಾರ್ಯಕರ್ತರ ನೈತಿಕ ಸ್ಥೈರ್ಯದ ಹಿತದೃಷ್ಟಿಯಿಂದ ಇದನ್ನು ತುರ್ತು ಆಧಾರದ ಮೇಲೆ ಪರಿಗಣಿಸಲು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ

    ಬಿಜೆಪಿ ನಾಯಕರ ಒತ್ತಾಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್‌ಗೆ ಶಾಕ್ ನೀಡಿದಂತಾಗಿದೆ. ನಿಮ್ಮ ಭಾವನೆಗಳನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ. ನಿಮ್ಮ ಅಭಿಪ್ರಾಯಗಳನ್ನು ವರಿಷ್ಠರ ಗಮನಕ್ಕೆ ತರುತ್ತೇನೆ. ಆದರೆ ಈಗ ನಾನು ಸಂಘಟನಾತ್ಮಕ ವಿಚಾರಕ್ಕಾಗಿ ಬಂದಿದ್ದೇನೆ. ಸಂಘಟನೆ, ಪಕ್ಷದ ಬಲವರ್ಧನೆ ಆಗಬೇಕು. ಇವತ್ತಿನ ಸಭೆಗಳು ಸಂಘಟನೆ ಪರ್ವ, ಸದಸ್ಯತ್ವ ಅಭಿಯಾನಕ್ಕೆ ಮಾತ್ರ ಸೀಮಿತಾವಗಿದೆ. ಹೀಗಾಗಿ ಈ ವೇದಿಕೆಯಲ್ಲಿ ಚರ್ಚೆ ಬೇಡ ಎಂದು ಮನವಿ ಮಾಡಿಕೊಂಡರು. ಜೆಪಿ ನಡ್ಡಾಗೆ ನೀಡಿದ ಪತ್ರವನ್ನು ಸ್ವೀಕರಿಸದೇ ಕೇವಲ ನಾಯಕರ ಮನವಿ ಆಲಿಸಿ ಹೈಕಮಾಂಡ್ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

    ಸಭೆಯಲ್ಲಿ ವಿಜಯೇಂದ್ರ (BY Vijayendra), ಸಿ.ಟಿ ರವಿ (CT Ravi), ಛಲವಾದಿ ನಾರಾಯಣಸ್ವಾಮಿ, (Chalavadi Narayanaswamy) ಆರ್.ಅಶೋಕ್ (R Ashok), ಸುನೀಲ್ ಕುಮಾರ್ (Sunil Kumar), ರಾಜ್ಯ ಪದಾಧಿಕಾರಿಗಳು ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.ಇದನ್ನೂ ಓದಿ: ಬಿಜೆಪಿಯನ್ನು ವಿಜಯೇಂದ್ರ ಚೇಲಾಗಳು ನಡೆಸ್ತಿದ್ದಾರೆ: ಬಿ.ಪಿ ಹರೀಶ್‌ ಕಿಡಿ

  • ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು – ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಏನಾಯ್ತು?

    ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು – ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಏನಾಯ್ತು?

    ಬೆಂಗಳೂರು: ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್‍ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.

    ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್‍ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್

    ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದ ಮಾಹಿತಿ ಪ್ರಕಾರ, ಮೂಲ ಪಕ್ಷದವರಿಗೆ ಪ್ರಣಾಳಿಕೆ ರಚನೆ ಹೊಣೆ ಕೊಡ ಬೇಕಿತ್ತು ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ. ಈ ಮೂಲಕ ಡಾ.ಕೆ.ಸುಧಾಕರ್ ಅವರಿಗೆ ಪ್ರಣಾಳಿಕೆ ಹೊಣೆ ನೀಡಿದ್ದಕ್ಕೆ ಕೆಲವರ ಅಸಮಧಾನ ಹೊರಹಾಕಿದ್ದಾರೆ.

    ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಅದು ಬಿಟ್ಟು ಬೇರೆ ಯಾವುದೋ ಜಿಲ್ಲೆಗೆ ಉಸ್ತುವಾರಿ ನೀಡಲಾಗಿತ್ತು ಎಂದು ಕೆಲವರು ಬೇಸರ ಹೊರಕಾಕಿದ್ದಾರೆ.

    ಬೇರೆ ಜಿಲ್ಲೆಗಳಿಗೆ ತೆರಳಿ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಾರೋಹಣ ಮಾಡಿ ಹೋದರೆ ಸಾಕಾಗುತ್ತದೆಯೇ? ಸ್ಥಳೀಯ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಬೇರೆಡೆಯ ಸಚಿವರ ಹಿಡಿತ ಹೇಗೆ ಸಾಧ್ಯ ಆಗುತ್ತದೆ ಎಂದು ಹೈಕಮಾಂಡ್ ನಿರ್ಧಾರಕ್ಕೆ ಕೆಲವರು ಪರೋಕ್ಷ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ಕೇಸ್‍ಗೆ ಟ್ವಿಸ್ಟ್ – ಪೋಕ್ಸೋ ಕೇಸ್ ದಾಖಲಿಸಿದ್ದ ಸಂತ್ರಸ್ತೆ ಅಪ್ರಾಪ್ತೆಯಲ್ಲ

  • ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

    ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

    ಬೆಳಗಾವಿ: ಗ್ರಾಮೀಣ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಧನಂಜಯ್ ಜಾಧವ್‌ಗೆ (Dhananjay Jadhav) ಕೈ ತಪ್ಪಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ (Iranna Kadadi) ಕಣ್ಣೀರು ಹಾಕಿದ್ದಾರೆ.

    ಬೆಳಗಾವಿ ಗ್ರಾಮೀಣ ಮಂಡಳ ಬಿಜೆಪಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಧನಂಜಯ ಜಾಧವ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ. ಧನಂಜಯ ಜಾಧವ್‌ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ್‌ನ್ನು ಯಾರು ಕ್ಷಮಿಸಲ್ಲ : ಬಿಎಸ್‍ವೈ ವಾಗ್ದಾಳಿ

     

    ರಮೇಶ್ ಜಾರಕಿಹೊಳಿ (Ramesh Jarkiholi) ಆಪ್ತ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ನಾವು ದುಡ್ಡು ಸಂಗ್ರಹಿಸಿ ಧನಂಜಯ್ ಜಾಧವ್ ಪರ ಪ್ರಚಾರ ಮಾಡಿದ್ದೇವೆ. ಆದರೆ ಈಗಷ್ಟೇ ಪಕ್ಷಕ್ಕೆ ಬಂದ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ನೀಡಿದ್ದೀರಿ ಎಂದು ಕಾರ್ಯಕರ್ತರು ಕಣ್ಣೀರು ಹಾಕಿದ್ದಾರೆ. ಕಾರ್ಯಕರ್ತರು ಕಣ್ಣೀರಿಡುತ್ತಿದ್ದಂತೆ ಈರಣ್ಣಾ ಕಡಾಡಿ ಸಹ ಕಣ್ಣೀರು ಹಾಕಿದ್ದಾರೆ.

  • ಪೊಲೀಸರ ಎಚ್ಚರಿಕೆಯನ್ನೇ ಧಿಕ್ಕರಿಸಿ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರ‍್ಯಾಲಿ!

    ಪೊಲೀಸರ ಎಚ್ಚರಿಕೆಯನ್ನೇ ಧಿಕ್ಕರಿಸಿ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರ‍್ಯಾಲಿ!

    – ಜಿಲ್ಲಾಧಯಕ್ಷನಿಗೆ ನೋಟಿಸ್ ಕೊಟ್ರೂ ಡೋಂಟ್ ಕೇರ್

    ಮಂಡ್ಯ: ಕೊರೊನಾ ನಿಯಮಗಳು ಜನಸಾಮಾನ್ಯರಿಗಷ್ಟೇ ಸೀಮಿತವಾ ಎಂಬ ಪ್ರಶ್ನೆ ಮತ್ತೊಮ್ಮೆ ಮೂಡಿದೆ. ಈ ಹಿಂದೆಯೂ ಹಲವಾರು ಬಾರಿ ಬಿಜೆಪಿಯವರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಇದೀಗ ಮತ್ತೆ ಪೊಲೀಸರ ಎಚ್ಚರಿಕೆಯನ್ನು ಧಿಕ್ಕರಿಸಿ ಮಂಡ್ಯದಲ್ಲಿ ಬೃಹತ್ ರ‍್ಯಾಲಿ ಮಾಡುವ ಮೂಲಕ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

    ಹೌದು. ಮಂಡ್ಯ ಜಿಲ್ಲೆಯಲ್ಲಿ ಪೊಲೀಸರ ಆದೇಶಕ್ಕೆ ಕಿಮ್ಮತ್ತೇ ಇಲ್ವಾ ಅನ್ನೋ ಪ್ರಶ್ನೆ ಮೂಡಿದೆ. ಕಾರ್ಯಕ್ರಮ ನಡೆಸಲು ಅನುಮತಿ ಇಲ್ಲ ಎಂದು ಮಂಡ್ಯ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷನಿಗೆ ತಿಳಿಸಿದ್ದಾರೆ. ಆದರೆ ಇದೀಗ ಪೊಲೀಸರ ಎಚ್ಚರಿಕೆಗೆ ಕ್ಯಾರೇ ಎನ್ನದೇ ಬಿಜೆಪಿ ಮುಖಂಡರು ರಾಜ್ಯ ಮಟ್ಟದ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಬಿಜೆಪಿಯವರ ಈ ನಡೆ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ತಾಲಿಬಾನಿಗಳು ಹುಡುಕುತ್ತಾ ನನ್ನ ಮನೆಗೆ ಬಂದ್ರು: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್

    ಬೈಕ್ ರ‍್ಯಾಲಿ, ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಮಂಡ್ಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಭಾಗಿಯಾಗಿದ್ದಾರೆ. ಕಲ್ಯಾಣ ಮಂಟಪದಲ್ಲಿ ಮದುವೆಗೆ 100 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ನಿಯಮವಿದ್ದು, ಆದರೆ ಅಧಿಕಾರದಲ್ಲಿರುವ ಬಿಜೆಪಿ ನಾಯಕರಿಗೆ ಈ ನಿಯಮ ಅನ್ವಯಿಸಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

    ಜಿಲ್ಲಾಧ್ಯನಿಗೆ ನೋಟಿಸ್:
    ಸಭೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‍ಕುಮಾರ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕೊರೊನಾ ನಿಯಮಗಳನ್ನು ಪಾಲನೆ ಮಾಡದೇ ಸಭೆ ಮಾಡಲಾತ್ತಿದೆ. ನೂರಾರು ಜನರನ್ನು ಸೇರಿಸಿಕೊಂಡು ಬೈಕ್ ರ‍್ಯಾಲಿ ಮಾಡುತ್ತಿದ್ದೀರಿ. ಈ ರೀತಿಯ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ಪೊಲೀಸರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

    ಜಿಲ್ಲಾಧ್ಯಕ್ಷನಿಗೆ ನೋಟಿಸ್ ನೀಡಿದರೂ ಬಿಜೆಪಿ ಮುಖಂಡರು ಬೈಕ್ ರ‍್ಯಾಲಿ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ನಾರಾಯಣಗೌಡ, ಮಾಜಿ ಸಚಿವ ಎ.ಮಂಜು ಇತರರು ಜೀಪ್ ನಲ್ಲಿ ಮೆರವಣಿಗೆ ಮಾಡಿದ್ದಾರೆ. ರ‍್ಯಾಲಿಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಮಾಯವಾಗಿದೆ. ಇನ್ನು ಸಭೆಯಲ್ಲಿ ಕೂಡ ನೂರಾರು ಮಂದಿ ಭಾಗಿಯಾಗಿದ್ದಾರೆ.