Tag: BJP President

  • ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ಸಾರಥ್ಯ?

    ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ಸಾರಥ್ಯ?

    – ದಕ್ಷಿಣ ಭಾರತ ಮಹಿಳೆಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ; ಮಹಿಳಾ ನೇತೃತ್ವಕ್ಕೆ ಆರ್‌ಎಸ್‌ಎಸ್ ಸಮ್ಮತಿ

    ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನಕ್ಕೂ ರಾಷ್ಟ್ರೀಯ ಅಧ್ಯಕ್ಷರ (BJP President) ನೇಮಕಕ್ಕೆ ಬಿಜೆಪಿ ಕಸರತ್ತು ಆರಂಭಿಸಿದೆ. ಈ ಬಾರಿ ಮಹಿಳೆಯರಿಗೆ ನಾಯಕತ್ವ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಈ ಮೂಲಕ ಬಿಜೆಪಿ ಐತಿಹಾಸಿಕ ನಿರ್ಣಯಕ್ಕೆ ಮುಂದಾಗಿದೆ. ಇದಕ್ಕೆ ಆರ್‌ಎಸ್‌ಎಸ್ ಕೂಡಾ ಸಮ್ಮತಿ ಸೂಚಿಸಿದೆ ಎಂದು ಮೂಲಗಳು ಹೇಳಿವೆ.

    ಪಕ್ಷದ ಉನ್ನತ ಹುದ್ದೆಗೆ ನಿರ್ಮಲಾ ಸೀತಾರಾಮನ್ (Nirmala Sitharaman), ಡಿ ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಅವರಂತಹ ನಾಯಕಿಯರ ಹೆಸರುಗಳು ಮುನ್ನಲೆಗೆ ಬಂದಿವೆ. ಇದಕ್ಕೆ ಪೂರಕ ಎನ್ನುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದರು.

    ಸೀತಾರಾಮನ್ ಅವರನ್ನು ನೇಮಕ ಮಾಡಿದರೆ, ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆ ಗುರುತನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಅವರ ನಾಯಕತ್ವವು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯೊಂದಿಗೆ ಪಕ್ಷದ ಹೊಂದಾಣಿಕೆಯನ್ನು ಪ್ರತಿ ಬಿಂಬಿಸುತ್ತದೆ. ಸರ್ಕಾರದಲ್ಲಿ ಹಿರಿಯ ನಾಯಕಿಯಾಗಿರುವ ಸೀತಾರಾಮನ್ ಈ ಹಿಂದೆ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಪಕ್ಷದ ಸಂಘಟನೆಯಲ್ಲಿ ಆಳವಾದ ಬೇರುಗಳನ್ನು ಹೊಂದಿದ್ದಾರೆ.

    ಮತ್ತೊಂದು ಪ್ರಮುಖ ಹೆಸರು ಬಿಜೆಪಿಯ ಆಂಧ್ರಪ್ರದೇಶದ ಮಾಜಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿ. ಬಹುಭಾಷಾ ನಾಯಕಿಯಾಗಿರುವ ಪುರಂದೇಶ್ವರಿ ರಾಜಕೀಯ ವಲಯಗಳಲ್ಲಿ ವಿಶಿಷ್ಟ ವೃತ್ತಿಜೀವನವನ್ನು ಹೊಂದಿದ್ದಾರೆ.

    ವನತಿ ಶ್ರೀನಿವಾಸನ್ ಅವರನ್ನೂ ಈ ಹುದ್ದೆಗೆ ಪರಿಗಣಿಸಲಾಗುತ್ತಿದೆ. ತಮಿಳುನಾಡಿನ ವಕೀಲೆಯಿಂದ ರಾಜಕಾರಣಿಯಾಗಿ ಪರಿವರ್ತನೆಗೊಂಡ ಅವರು ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕೊಯಮತ್ತೂರು ದಕ್ಷಿಣವನ್ನು ಪ್ರತಿನಿಧಿಸುತ್ತಿದ್ದಾರೆ. 1993 ರಲ್ಲಿ ಬಿಜೆಪಿ ಸೇರಿದಾಗಿನಿಂದ, ವನತಿ ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡಿನ ಉಪಾಧ್ಯಕ್ಷರು ಸೇರಿದಂತೆ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

    2020 ರಲ್ಲಿ, ಪಕ್ಷವು ಅವರನ್ನು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಿತು. 2022 ರಲ್ಲಿ ಅವರು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾದರು. ಗಮನಾರ್ಹವಾಗಿ ಆ ಹುದ್ದೆಯಲ್ಲಿರುವ ಮೊದಲ ತಮಿಳು ಮಹಿಳೆಯಾಗಿದ್ದಾರೆ.

    ಮಹಿಳಾ ನಾಯಕತ್ವದ ಸಾಂಕೇತಿಕ ಮತ್ತು ಕಾರ್ಯತಂತ್ರದ ಅನುಕೂಲಗಳನ್ನು ಗುರುತಿಸಿ, ಪಕ್ಷದ ಉನ್ನತ ಹುದ್ದೆಗೆ ಮಹಿಳೆಯನ್ನು ನೇಮಿಸುವ ಕಲ್ಪನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನುಮೋದಿಸಿದೆ ಎನ್ನಲಾಗಿದೆ. ಇತ್ತೀಚಿನ ಚುನಾವಣೆಗಳಲ್ಲಿ ವಿಶೇಷವಾಗಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿನ್ನೆಲೆ ಬಿಜೆಪಿ ಈ ಕಾರ್ಯತಂತ್ರಕ್ಕೆ ಮುಂದಾಗಿದೆ ಎನ್ನಲಾಗಿದೆ.

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ!

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ!

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರ ಪತ್ನಿಗೆ ಸೇರಿದ್ದ ಕಾರು ಕಳ್ಳತನವಾಗಿರುವ ಘಟನೆ ರಾಷ್ಟ್ರರಾಜಧಾನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಆಗ್ನೇಯ ದೆಹಲಿಯ (South East Delhi) ಗೋವಿಂದಪುರಿ ಪ್ರದೇಶದಿಂದ ಟೊಯೊಟಾ ಫಾರ್ಚೂನರ್ (Toyota Fortuner) ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ತಿಂಗಳ ಮಾರ್ಚ್‌ 19ರಂದು ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ಕಳ್ಳತನ ನಡೆದಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ವಾಣಿಜ್ಯೋದ್ಯಮಿ ಪಲ್ಲವಿ ಡೆಂಪೊಗೆ ಟಿಕೆಟ್‌ – ಗೋವಾ ಇತಿಹಾಸದಲ್ಲೇ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೊದಲ ಮಹಿಳೆ

    ಮಾಹಿತಿ ಪ್ರಕಾರ, ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನೀಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ, ಪ್ರಯತ್ನಗಳ ಹೊರತಾಗಿಯೂ, ವಾಹನದ ಯಾವುದೇ ಕುರುಹು ಇನ್ನೂ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಕಳ್ಳತನವಾದ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ ಎಂದು ಹೇಳಲಾಗಿದೆ.

    ಈ ಬಗ್ಗೆ ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು, ಕಾರನ್ನು ಶೋಧ ನಡೆಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆಟೋ ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಗಲಾಟೆ; ಪರಿಸ್ಥಿತಿ ಉದ್ವಿಗ್ನ – ಮೂವರು ಅರೆಸ್ಟ್

  • ಬಿಜೆಪಿ ರಾಜ್ಯಾಧ್ಯಕ್ಷರ ಸೊಸೆ ಅನುಮಾನಾಸ್ಪದವಾಗಿ ಸಾವು

    ಬಿಜೆಪಿ ರಾಜ್ಯಾಧ್ಯಕ್ಷರ ಸೊಸೆ ಅನುಮಾನಾಸ್ಪದವಾಗಿ ಸಾವು

    – ಪಾರ್ಟಿಯಲ್ಲಿ ಕುಸಿದು ಬಿದ್ದು ಸಾವು
    – ಪಾರ್ಟಿಯಲ್ಲಿ 1 ಗಂಟೆಗೂ ಹೆಚ್ಚು ಸಮಯ ಡ್ಯಾನ್ಸ್

    ಹೈದರಾಬಾದ್: ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಕನ್ನಾ ಲಕ್ಷ್ಮೀ ನಾರಾಯಣ ಅವರ ಸೊಸೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕನ್ನಾ ಲಕ್ಷ್ಮೀನಾರಾಯಣ ಅವರ ಸೊಸೆ 32 ವರ್ಷದ ಸುಹಾರಿಕಾ ಮೃತಪಟ್ಟಿದ್ದಾರೆ. ಸುಹಾರಿಕಾ ತನ್ನ ಸ್ನೇಹಿತರ ಪಾರ್ಟಿಯ ನಂತರ ಕುಸಿದು ಸಾವನ್ನಪ್ಪಿದ್ದಾರೆ. ಈ ಘಟನೆ ರಾಯದುರ್ಗ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಟವರ್ಸ್ ನಲ್ಲಿ ನಡೆದಿದೆ.

    ಗುರುವಾರ ಸುಹಾರಿಕಾ ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದನು. ಪಾರ್ಟಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಪಾರ್ಟಿ ನಂತರ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿಯೇ ಸುಹಾರಿಕಾ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಮಾಹಿತಿ ತಿಳಿದು ಪೊಲೀಸರು ಆಸ್ಪತ್ರೆಗೆ ಬಂದು ಪರಿಶೀಲನೆ ನಡೆಸಿದ್ದಾರೆ. ನಂತರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಈಗಾಗಲೇ ಸುಹಾರಿಕಾ ತಾಯಿ, ಪತಿ ಮತ್ತು ಇತರ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಸದ್ಯಕ್ಕೆ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಇನ್ಸ್ ಪೆಕ್ಟರ್ ಎಸ್. ರವೀಂದ್ರ ತಿಳಿಸಿದ್ದಾರೆ.

    ಮೃತ ಸುಹಾರಿಕಾ 10 ವರ್ಷಗಳ ಹಿಂದೆ ಕನ್ನಾ ಲಕ್ಷ್ಮೀನಾರಾಯಣ ಅವರ ಕಿರಿಯ ಪುತ್ರ ಫಣೀಂದ್ರ ಅವರನ್ನು ಮದುವೆಯಾಗಿದ್ದರು. ವಿವಾಹದ ನಂತರ ಪತಿ ಮತ್ತು ಪತ್ನಿ ಸೇರಿ ಸುನೀಂದ್ರ ಎಂಟರ್ ಪ್ರೈಸಸ್ ಎಂಬ ಉದ್ಯಮವನ್ನು ಹೈದರಾಬಾದ್‍ನಲ್ಲಿ ನಡೆಸುತ್ತಿದ್ದರು.

  • ಜೆಪಿ ನಡ್ಡಾಗೆ ಬಿಜೆಪಿಯ ಅಧ್ಯಕ್ಷ ಪಟ್ಟ – ಈ ಹುದ್ದೆ ಸಿಗಲು ಪ್ರಮುಖ ಕಾರಣ ಏನು?

    ಜೆಪಿ ನಡ್ಡಾಗೆ ಬಿಜೆಪಿಯ ಅಧ್ಯಕ್ಷ ಪಟ್ಟ – ಈ ಹುದ್ದೆ ಸಿಗಲು ಪ್ರಮುಖ ಕಾರಣ ಏನು?

    ನವದೆಹಲಿ: ಕಾರ್ಯಾಧ್ಯಕ್ಷರಾಗಿದ್ದ ಜಗತ್ ಪ್ರಕಾಶ್ ನಡ್ಡಾ(ಜೆಪಿ ನಡ್ಡಾ) ಅವಿರೋಧವಾಗಿ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

    ದೆಹಲಿಯಲ್ಲಿ ನಡೆದ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ನಡ್ಡಾ ಅವರು ಪಕ್ಷದ ಅಧಿಕಾರ ಸ್ವೀಕರಿಸಿದರು. ದೆಹಲಿ ಚುನಾವಣೆಗೂ ಕೆಲವೇ ದಿನಗಳ ಮುನ್ನ ಜೆಪಿ ನಡ್ಡಾ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತು ಬಿಜೆಪಿಯನ್ನು ಗೆಲ್ಲಿಸಿದ ಬಳಿಕ ಅಮಿತ್ ಶಾ ಜುಲೈ 9 ರಿಂದ ಇಲ್ಲಿಯವರೆಗೆ ಐದುವರೆ ವರ್ಷಗಳ ಕಾಲ ಬಿಜೆಪಿ ಅಧ್ಯಕ್ಷರಾಗಿದ್ದರು.

    2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಗೆದ್ದ ಬಳಿಕ ಅಮಿತ್ ಶಾ ಗೃಹ ಖಾತೆಯನ್ನು ವಹಿಸಿಕೊಂಡರು. ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಮತ್ತು ಅಧ್ಯಕ್ಷ ಸ್ಥಾನ ಎರಡು ಹುದ್ದೆಯನ್ನು ಒಬ್ಬರೇ ಹೊಂದುವಂತಿಲ್ಲ ಎನ್ನುವ ನಿಯಮ ಇರುವ ಹಿನ್ನೆಲೆಯಲ್ಲಿ ಕಳೆದ ವರ್ಷವೇ ಜೆಪಿ ನಡ್ಡಾ ಹೆಸರು ಅಧ್ಯಕ್ಷ ಸ್ಥಾನದ ಮುನ್ನೆಲೆಗೆ ಬಂದಿತ್ತು. ಈಗ ಅಧಿಕೃತವಾಗಿ ನಡ್ಡಾ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ನಡ್ಡಾ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದರು.

    ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ನಂಬುಗೆಯ ವ್ಯಕ್ತಿ ಆಗಿರುವ ಜೆಪಿ ನಡ್ಡಾ ಎಬಿವಿಪಿ, ಆರ್‌ಎಸ್‌ಎಸ್‌ ಮೂಲಕ ಮೇಲೆ ಬಂದಿದ್ದಾರೆ. ನಿತಿನ್ ಗಡ್ಕರಿ ಅವರ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬಂದ ನಡ್ಡಾ ಅವರು 2010ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದರು.

    1960ರ ಡಿಸೆಂಬರ್ 2 ರಂದು ಜನಿಸಿದ ನಡ್ಡಾ ಪಾಟ್ನಾ ವಿಶ್ವವಿದ್ಯಾಲಯದಿಂದಲೇ ಬಿ.ಎ ಪದವಿ ಪಡೆದಿದ್ದು ಹಿಮಾಚಲಪ್ರದೇಶದ ಶಿಮ್ಲಾ ವಿವಿಯಿಂದ ಕಾನೂನು ಶಾಸ್ತ್ರದಲ್ಲಿ ಪದವಿ ಓದಿದ್ದಾರೆ. ಉತ್ತಮ ಈಜುಪಟು ಆಗಿರುವ ನಡ್ಡಾ ಅವರು ರಾಷ್ಟ್ರೀಯ ಕಿರಿಯರ ಈಜು ಸ್ಪರ್ಧೆಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸಿದ್ದರು. 1991ರ ಡಿ. 11 ರಂದು ಮಲ್ಲಿಕಾ ಅವರನ್ನು ವರಿಸಿರುವ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ನಡ್ಡಾ ಅವರ ತಂದೆ ನಾರಾಯಣ್ ಲಾಲ್ ನಡ್ಡಾ ಪಟ್ನಾ ವಿಶ್ವವಿದ್ಯಾಲಯದ ಕುಲಪತಿ ಆಗಿದ್ದರು.

    2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಉಸ್ತುವಾರಿಯನ್ನು ಜೆಪಿ ನಡ್ಡಾ ಅವರಿಗೆ ಅಮಿತ್ ಶಾ ನೀಡಿದ್ದರು. 2014ರ ಯಾವುದೇ ಮೈತ್ರಿ ಇಲ್ಲದೇ 71 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ 2019ರಲ್ಲಿ ಮಹಾಮೈತ್ರಿ ಏರ್ಪಟ್ಟಿದ್ದರಿಂದ ಬಿಜೆಪಿ ಇಷ್ಟು ಸ್ಥಾನ ಗೆಲ್ಲುವುದು ಕಷ್ಟ ಎಂಬ ವಿಶ್ಲೇಷಣೆ ಕೇಳಿ ಬಂದಿತ್ತು. ಆದರೆ ಅಂತಿಮ ಫಲಿತಾಂಶ ಬಂದಾಗ ಬಿಜೆಪಿ 62 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಈ ಗೆಲುವಿನ ಹಿಂದೆ ನಡ್ಡಾ ಅವರ ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಿತ್ತು. ಸಂಘಟನಾ ಚಾತುರ್ಯ, ಮಾತುಗಾರಿಕೆ, ರಾಜಕೀಯ ಅನುಭವ, ದೆಹಲಿಯ ಹಿರಿಯ ನಾಯಕರ ಜೊತೆಗಿನ ಉತ್ತಮ ಸಂಬಂಧ ಇವುಗಳಿಂದಾಗಿ ಬಿಜೆಪಿಯ 11ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಆಯ್ಕೆ ಆಗಿದ್ದಾರೆ.

    2012ದಿಂದಲೂ ರಾಜ್ಯಸಭೆ ಸದಸ್ಯರಾಗಿರುವ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕುಟುಂಬ ಕಲ್ಯಾಣ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

  • ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿ ನೀಡಿದ್ದಾರೆ: ನಳಿನ್ ಕುಮಾರ್

    ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿ ನೀಡಿದ್ದಾರೆ: ನಳಿನ್ ಕುಮಾರ್

    ಬೆಂಗಳೂರು: ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ. ಆದರೆ ರಾಷ್ಟ್ರೀಯ ಅಧ್ಯಕ್ಷರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದರು

    ಕೆಐಎಎಲ್‍ನಲ್ಲಿ ಮಾತನಾಡಿದ ನಳಿನ್ ಕುಮಾರ್, ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ರಾಷ್ಟ್ರೀಯ ಅಧ್ಯಕ್ಷರು ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ಇಡೀ ರಾಷ್ಟ್ರದಲ್ಲಿ ಗುರುತಿಸುವಂತಹ ಪ್ರಧಾನಿ ಮೋದಿಯವರ ನೇತೃತ್ವವಿದೆ. ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ಮಾಡುವ ಯಡಿಯೂರಪ್ಪ ಅವರ ನೇತೃತ್ವವಿದೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರ ಜೊತೆಯಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದರು.

    ಇಂದು ನನಗೆ ಬಹಳ ಖುಷಿಯಾಗಿದೆ. ಕರ್ನಾಟಕದ ಬೆಂಗಳೂರು ನಗರವನ್ನು ಸಂವೃದ್ಧಿ ಮಾಡಿರುವ ಕೆಂಪೇಗೌಡರ ಪುಣ್ಯ ಭೂಮಿಯಲ್ಲಿ ಅವರ ಆಶೀರ್ವಾದ ಪಡೆಯುವ ಮೂಲಕ ಈ ಜವಾಬ್ದಾರಿಯನ್ನು ನಿರ್ವಹಿಸಲು ಹೋಗುತ್ತಿದ್ದೇನೆ ಎಂದು ತಮಗೆ ಸ್ವಾಗತ ಕೋರಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

    ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ. ಇದು ಕೇವಲ ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ ಸಾಧ್ಯ. ಶ್ರೇಷ್ಠವಾದ ಜವಾಬ್ದಾರಿ ನೀಡಿದ್ದಾರೆ. ಒಬ್ಬ ಕಾರ್ಯಕರ್ತನ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಬಿಜೆಪಿ ಸರ್ವ ವ್ಯಾಪಿ, ಸರ್ವ ಸ್ಪರ್ಶಿಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಬೆಳೆದಿದೆ. ಇದನ್ನ ಇನ್ನಷ್ಟು ಗಟ್ಟಿ ಮಾಡುತ್ತೀನಿ. ಯಡಿಯೂರಪ್ಪ ಅವರ ಜೊತೆ ಸಹಕಾರಿಯಾಗಿ ನಿಂತು ಕೆಲಸ ನಿರ್ವಹಿಸುತ್ತೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.

    ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದರು. ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ವೀರಗಾಸೆ, ಡೊಳ್ಳು ಕುಣಿತದೊಂದಿಗೆ ನಳಿನ್ ಕುಮಾರ್ ಅವರನ್ನು ಸ್ವಾಗತಿಸಲಾಗಿದೆ.

  • ನಳಿನ್ ಕುಮಾರ್ ಕಟೀಲ್‍ರಿಗೆ ಶುಭಕೋರಿದ ಪ್ರಿಯಾಂಕ್ ಖರ್ಗೆ

    ನಳಿನ್ ಕುಮಾರ್ ಕಟೀಲ್‍ರಿಗೆ ಶುಭಕೋರಿದ ಪ್ರಿಯಾಂಕ್ ಖರ್ಗೆ

    ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಶುಭಕೋರಿದ್ದಾರೆ.

    ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಹೊಸ ಸ್ಥಾನ ಪಡೆದಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಆಲ್ ದಿ ವೆರಿ ಬೆಸ್ಟ್ ಎಂದು ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ. ಈಗ ಬಿಜೆಪಿ ನಾಯಕನಿಗೆ ವಿರೋಧ ಪಕ್ಷದ ಶಾಸಕ ಶುಭಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.

    ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿಯ ಸಿದ್ಧಾಂತದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಲಾಗಿದೆ.

    ಇದೇ ಹಿನ್ನೆಲೆಯಲ್ಲಿ ಕೊಚ್ಚಿಯಿಂದ ಮಂಗಳೂರಿಗೆ ಬಂದಿಳಿದ ನಳಿನ್ ಕುಮಾರ್ ಅವರಿಗೆ ರೈಲು ನಿಲ್ದಾಣದಲ್ಲಿಯೇ ಹಾರ ಹಾಕಿ, ಶಾಲು ಹೊದಿಸಿ ಅಭಿಮಾನಿಗಳು ಭುಜದ ಮೇಲೆ ಹೊತ್ತು ಸಂಭ್ರಮಿಸಿದರು. ಈ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಉನ್ನತ ಸ್ಥಾನ ದೊರಕಿರುವ ಖುಷಿಯನ್ನು ವ್ಯಕ್ತಪಡಿಸಿದ್ದರು.