Tag: BJP Yuva Morcha

  • ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

    ‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

    – ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) `ಐ ಲವ್ ಮುಹಮ್ಮದ್’ (I Love Muhammad) ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ (BJP Yuva Morcha) ಟಕ್ಕರ್ ಕೊಡಲು `ಐ ಲವ್ ಯೋಗಿ ಆದಿತ್ಯನಾಥ್’ ಅಭಿಯಾನ ಪ್ರಾರಂಭಿಸಿದೆ.

    `ಐ ಲವ್ ಯೋಗಿ ಆದಿತ್ಯನಾಥ್’ (I Love Yogi Adityanath), ‘ಐ ಲವ್ ಬುಲ್ಡೋಜರ್’ (I Love Bulldozer) ಹೆಸರಿನಲ್ಲಿ ಬಿಜೆಪಿ ಯುವ ಮೋರ್ಚಾ ಅಭಿಯಾನ ಆರಂಭಿಸಿದ್ದು, ಲಕ್ನೋದ (Lucknow) ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಿಎಂ ಮತ್ತು ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡು ಬಿಜೆಪಿ ಯುವ ಮೋರ್ಚಾ ನಾಯಕರು ಫ್ಲೆಕ್ಸ್ ಅಳವಡಿಸಿದ್ದಾರೆ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಮಿತ್ ತ್ರಿಪಾಠಿ ನೇತೃತ್ವದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್‌

    ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್
    `ಐ ಲವ್ ಮುಹಮ್ಮದ್’ ಫ್ಲೆಕ್ಸ್ ವಿಚಾರವಾಗಿ ಕಾನ್ಪುರದಲ್ಲಿ ಮೊದಲು ವಿವಾದ ಆರಂಭವಾಗಿತ್ತು. ಶುಕ್ರವಾರ ಬರೇಲಿಯಲ್ಲಿ ನಡೆದ ಪ್ರತಿಭಟನೆ ಹಿಂಸತ್ಮಾಕ ಸ್ವರೂಪ ಪಡೆದುಕೊಂಡಿತ್ತು. ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್‌ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು 13 ವರ್ಷದ ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ

    ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

    ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು. ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

    ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್‌ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.

  • ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರವೀಣ್ ಕೊಲೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳು ನೀಡುತ್ತಿರುವ ರಾಜೀನಾಮೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡುವುದು ಹೇಡಿಗಳ ಲಕ್ಷಣ ಎಂದು ಹೇಳಿಕೆ ನೀಡಿದ್ದಾರೆ.

    ಶಿವಮೊಗ್ಗದಲ್ಲಿ ಹರ್ಷನ ಕೊಲೆ, ಮಂಗಳೂರಿನಲ್ಲಿ ಪ್ರವೀಣ್ ಕೊಲೆಯಾಗಿರಬಹುದು. ಆದರೆ ನಮ್ಮ ಸಿದ್ಧಾಂತವನ್ನು ಕೊಲ್ಲಲು ಆಗುವುದಿಲ್ಲ. ಇದನ್ನೇ ಕಾರಣವಾಗಿಟ್ಟುಕೊಂಡು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಡುತ್ತಿರುವುದು ಸರಿಯಲ್ಲ. ರಾಜೀನಾಮೆ ಕೊಡುವುದು ಹೇಡಿಗಳ ಲಕ್ಷಣ. ಈ ಕೂಡಲೇ ರಾಜೀನಾಮೆ ಹಿಂಪಡೆಯಿರಿ ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಅನೇಕ ಹಿರಿಯರು ಪ್ರಾಣ ತ್ಯಾಗ, ಬಲಿದಾನಗಳ ಮೂಲಕ ಕಟ್ಟಿದ್ದಾರೆ. ನಾವೆಲ್ಲಾ ಒಂದು ಸ್ಥಾನಮಾನದಲ್ಲಿ ಇದ್ದೇವೆ. ಯುವ ಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಈಗಲೇ ರಾಜೀನಾಮೆ ಕೊಡುತ್ತೇವೆ ಎಂದರೆ ಹೇಗೆ? ನೀವು ಪಕ್ಷಕ್ಕೆ ಕೊಟ್ಟಿರುವ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ

    ರಾಜೀನಾಮೆ ಕೊಡುವುದರಿಂದ ಹಿಂದುತ್ವ ಸಿದ್ಧಾಂತಕ್ಕೆ, ನಮ್ಮ ನಾಯಕರಿಗೆ ಅಪಮಾನ ಮಾಡಿದಂತೆ. ರಾಜೀನಾಮೆಯೇ ಉತ್ತರ ಅಲ್ಲ. ರಾಜೀನಾಮೆ ಕೊಟ್ಟಿರುವವರು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆ ಜಾಗಕ್ಕೆ ಬೇರೆಯವರು ಬರುತ್ತಾರೆ. ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವಾ? ರಾಜೀನಾಮೆ ಸಿಟ್ಟಿನಿಂದ ಕೊಟ್ಟಿದ್ದಾರೆ. ಜೊತೆಗೆ ನಮ್ಮ ಯುವಕರಿಗೆ ಸ್ವಲ್ಪ ಪ್ರಬುದ್ಧತೆ ಕಡಿಮೆ. ಅವರಿಗೆ ಸಮಾಧಾನ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 2 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ – ನಾಲ್ವರು ಸಾವು

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿ – ನಿಜವಾದ ಸುದ್ದಿ ಏನು?

    ಬಿಜೆಪಿ ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿ – ನಿಜವಾದ ಸುದ್ದಿ ಏನು?

    ಶಿಮ್ಲಾ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸುವ ವರದಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದೆ.

    ಬಿಸಿಸಿಐ ಮಾಧ್ಯಮ ಮ್ಯಾನೇಜರ್ ಮೌಲಿನ್ ಪಾರೀಖ್ ಪ್ರತಿಕ್ರಿಯಿಸಿ, ದ್ರಾವಿಡ್ ಭಾಗವಹಿಸುತ್ತಾರೆ ಎಂಬ ಸುದ್ದಿ ಸುಳ್ಳು ವರದಿ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

    ಧರ್ಮಶಾಲಾ ಕ್ಷೇತ್ರದ ಬಿಜೆಪಿ ಶಾಸಕ ವಿಶಾಲ್ ನಹೇರಿಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ದ್ರಾವಿಡ್ ಭಾಗವಹಿಸುವಿಕೆಯನ್ನು ಬಳಸಿಕೊಂಡು ಯುವಕರು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುನ್ನಡೆಯಬಹುದು ಎಂಬ ಸಂದೇಶವನ್ನು ರವಾನಿಸಿದ್ದರು.

    ಮೂರು ದಿನಗಳ ಅಧಿವೇಶನದಲ್ಲಿ ರಾಜ್ಯದ ಸಿಎಂ ಜೈ ರಾಮ್ ಠಾಕೂರ್ ಕೂಡ ಭಾಗವಹಿಸಲಿದ್ದಾರೆ. ದೇಶದಾದ್ಯಂತ 139 ಪ್ರತಿನಿಧಿಗಳು ಅಧಿವೇಶನದಲ್ಲಿ ತಮ್ಮ ಉಪಸ್ಥಿತಿಯನ್ನು ನೋಂದಾಯಿಸಲಿದ್ದಾರೆ. ಮೇ 12 ರಿಂದ 15ರವರೆಗೆ ಧರ್ಮಶಾಲಾದಲ್ಲಿ 4 ದಿನಗಳ ಕಾಲ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ ಎಂದು ತಿಳಿಸಿದ್ದರು.

    ಬಿಜೆಪಿಯ ರಾಷ್ಟ್ರೀಯ ನಾಯಕತ್ವ ಮತ್ತು ಹಿಮಾಚಲ ಪ್ರದೇಶದ ನಾಯಕತ್ವ ಭಾಗಿಯಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಸಚಿವರು, ಕೇಂದ್ರ ಸಚಿವರು ಕೂಡಾ ಭಾಗವಹಿಸಲಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

    ಈ ವರ್ಷ ನಡೆಯಲಿರುವ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಮುನ್ನ ಈ ಅಧಿವೇಶನ ನಡೆಯಲಿದೆ. 2017ರ ಅಸೆಂಬ್ಲಿ ಚುನಾವಣಾ ಫಲಿತಾಂಶದಲ್ಲಿ, ಬಿಜೆಪಿಯು 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.

  • ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

    ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

    ಶಿಮ್ಲಾ: ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪಾಲ್ಗೊಳ್ಳಲ್ಲಿದ್ದಾರೆ ಎಂದು ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ನೆಹ್ರಿಯಾ ಸೋಮವಾರ ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಮೂರು ದಿನಗಳ ಅಧಿವೇಶನದಲ್ಲಿ ರಾಜ್ಯದ ಸಿಎಂ ಜೈ ರಾಮ್ ಠಾಕೂರ್ ಕೂಡ ಭಾಗವಹಿಸಲಿದ್ದಾರೆ. ದೇಶದಾದ್ಯಂತ 139 ಪ್ರತಿನಿಧಿಗಳು ಅಧಿವೇಶನದಲ್ಲಿ ತಮ್ಮ ಉಪಸ್ಥಿತಿಯನ್ನು ನೋಂದಾಯಿಸಲಿದ್ದಾರೆ. ಮೇ 12 ರಿಂದ 15ರವರೆಗೆ ಧರ್ಮಶಾಲಾದಲ್ಲಿ 4 ದಿನಗಳ ಕಾಲ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

    ಬಿಜೆಪಿಯ ರಾಷ್ಟ್ರೀಯ ನಾಯಕತ್ವ ಮತ್ತು ಹಿಮಾಚಲ ಪ್ರದೇಶದ ನಾಯಕತ್ವ ಭಾಗಿಯಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಸಚಿವರು, ಕೇಂದ್ರ ಸಚಿವರು ಕೂಡಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ದ್ರಾವಿಡ್ ಅವರ ಉಪಸ್ಥಿತಿಯು ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಂದೇಶವನ್ನು ನೀಡುತ್ತದೆ. ಅವರ ಯಶಸ್ಸಿನಿಂದ ನಾವು ರಾಜಕೀಯದಲ್ಲಿ ಮಾತ್ರವಲ್ಲದೇ ಇತರ ಕ್ಷೇತ್ರಗಳಲ್ಲಿಯೂ ಮುಂದುವರಿಯಬಹುದು ಎಂಬ ಸಂದೇಶವನ್ನು ಯುವಕರಲ್ಲಿ ನೀಡಲಾಗುವುದು ಎಂದು ಹೇಳಿದರು.

    ಈ ವರ್ಷ ನಡೆಯಲಿರುವ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಮುನ್ನ ಈ ಅಧಿವೇಶನ ನಡೆಯಲಿದೆ. 2017ರ ಅಸೆಂಬ್ಲಿ ಚುನಾವಣಾ ಫಲಿತಾಂಶದಲ್ಲಿ, ಬಿಜೆಪಿಯು 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಮಾತ್ರವಲ್ಲ ಹೆಬ್ಬಾಳ್ಕರ್ ಕೂಡಾ ಸಾಲ ಉಳಿಸಿಕೊಂಡಿದ್ದಾರೆ : ಸೋಮಶೇಖರ್

  • ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಪದಗ್ರಹಣ

    ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಪದಗ್ರಹಣ

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಇಂದು ಪದಗ್ರಹಣ ಮಾಡಿದರು.

    ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷೆ ಪೂನಂ ಮಹಾಜನ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪ್ರದಗ್ರಹಣಕ್ಕೂ ಮುನ್ನ ರಾಷ್ಟ್ರೀಯ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿದ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಅಲ್ಲಿಂದ ಬಿಜೆಪಿ ಪ್ರಧಾನ ಕಚೇರಿಗೂ ರೋಡ್ ಶೋ ಮಾಡಿದರು.

    ಪದಗ್ರಹಣದ ಬಳಿಕ ಮಾತನಾಡಿದ ಅವರು, ಹಿರಿಯರ ಆರ್ಶಿವಾದದಿಂದ ಅಧ್ಯಕ್ಷನಾಗಿ ನೇಮಕವಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದೇವೆ ವಿಶ್ವದ ದೊಡ್ಡ ಶಕ್ತಿ ಮಾಡಲು ಪ್ರಯತ್ನ ಮಾಡಿತ್ತೇವೆ. ಡಾ.ಬಿಆರ್ ಅಂಬೇಡ್ಕರ್ ಆರ್ಶಿವಾದ ಪಡೆದಿದ್ದೇನೆ ಸಮಾಜದ ಕಟ್ಟ ಕಡೆಯ ವರ್ಗವನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ ಎಂದರು. ಇದೇ ವೇಳೆ ಬೆಂಗಳೂರು ದಕ್ಷಿಣದ ಜನರಿಗೆ, ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ನಿರ್ಗಮಿತ ಅಧ್ಯಕ್ಷೆ ಪೂನಂ ಮಹಾಜನ್, ಯುವಮೋರ್ಚಾಗೆ ಕನ್ನಡಿಗರು ಅಧ್ಯಕ್ಷರಾಗುತ್ತಿರುವುದು ಇದೇ ಮೊದಲು. ನನ್ನ ತಮ್ಮನಂತಿರುವ ತೇಜಸ್ವಿಗೆ ಅಧಿಕಾರ ಹಸ್ತಾಂತರಿಸುವುದು ಖುಷಿ ಇದೆ. ಭವಿಷ್ಯದ ರಾಜಕಾರಣಕ್ಕೆ ಒಳಿತಾಗಲಿ ಎಂದು ಅಧಿಕಾರ ಹಸ್ತಾಂತರದ ಬಳಿಕ ಹೇಳಿದರು.

  • ಟಿಎಂಸಿ ಗೂಂಡಾಗಳಿಂದ ಕಂಟ್ರಿ ಬಾಂಬ್ ಎಸೆತ- ಪಶ್ಚಿಮ ಬಂಗಾಳದಲ್ಲಿ ತೇಜಸ್ವಿ ಸೂರ್ಯ ಗುಡುಗು

    ಟಿಎಂಸಿ ಗೂಂಡಾಗಳಿಂದ ಕಂಟ್ರಿ ಬಾಂಬ್ ಎಸೆತ- ಪಶ್ಚಿಮ ಬಂಗಾಳದಲ್ಲಿ ತೇಜಸ್ವಿ ಸೂರ್ಯ ಗುಡುಗು

    – ಬಿಜೆಪಿಯಿಂದ ಸಿಎಂ ಮಮತಾ ಬ್ಯಾನರ್ಜಿ ಕಚೇರಿಗೆ ಮುತ್ತಿಗೆ ಯತ್ನ
    – ಕಾರ್ಯಕರ್ತರು ಪೊಲೀಸರ ಮಧ್ಯೆ ಸಂಘರ್ಷ
    – ಜಲಫಿರಂಗಿ, ಲಾಠಿ ಚಾರ್ಜ್ ಮೂಲಕ ನಿಯಂತ್ರಣ
    – ಸಿಎಂ ಗೃಹ ಕಚೇರಿ ಬಳಿ ಪರಿಸ್ಥಿತಿ ಉದ್ವಿಗ್ನ

    ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರು ಹಾಗೂ ಪಶ್ಚಿಮ ಬಂಗಾಳ ಪೊಲೀಸರ ಮಧ್ಯೆ ಭಾರೀ ಪ್ರಮಾಣದ ಸಂಘರ್ಷ ನಡೆದಿದ್ದು, ಅಶ್ರುವಾಯು, ಜಲ ಫಿರಂಗಿ ಹಾಗೂ ಲಾಠಿ ಚಾರ್ಜ್ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಅಲ್ಲದೆ ರ‌್ಯಾಲಿ ವೇಳೆ ತೃಣಮೂಲ ಕಾಂಗ್ರೆಸ್‍ನವರು ಕಂಟ್ರಿ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳದ ಹೌರಾದ ಸಚಿವಾಲಯ ಕಚೇರಿ ‘ನಬಣ್ಣ’ ಬಳಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಬಿಜೆಪಿ ಆಯೋಜಿಸಿದ್ದ ‘ನಬಣ್ಣ ಚಲೋ ಜಾಥಾ’ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಸಂಘರ್ಷ ನಡೆದಿದೆ. ಪಶ್ಚಿಮ ಬಂಗಾಳದ ಸಚಿವಾಲಯ ‘ನಬಣ್ಣ’ ಕಡೆಗೆ ಮೆರವಣಿಗೆ ತೆರಳುತ್ತಿದ್ದಂತೆ ಪೊಲೀಸರು ಸಾವಿರಾರು ಕಾರ್ಯಕರ್ತರ ಕಡೆಗೆ ಅಶ್ರುವಾಯು ಹಾಗೂ ಜಲಫಿರಂಗಿ ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

    ಜಾಥಾ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಅಶ್ರುವಾಯುವನ್ನು ಸಹ ಸಿಡಿಸಿದ್ದಾರೆ. ಅಲ್ಲದೆ ಜಲಫಿರಂಗಿ ಮೂಲಕ ಗುಂಪನ್ನು ಚದುರಿಸಿದ್ದಾರೆ. ಇಂದು ಬೆಳಗ್ಗೆಯೇ ಪೊಲೀಸರು ಬಿಜೆಪಿ ರಾಜ್ಯ ಕಚೇರಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಜಾಥಾ ಪ್ರಾರಂಭಿಸಿದ ಬಿಜೆಪಿ ಯುವ ಕಾರ್ಯಕರ್ತರು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

    ಘಟನೆ ಕುರಿತು ಇತ್ತೀಚೆಗೆ ಆಯ್ಕೆಯಾಗಿರುವ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಸುಮ್ಮನೇ ಸಿಗುವುದಿಲ್ಲ. ಇದಕ್ಕಾಗಿ ಯಾರಾದರು ಬೆಲೆ ತೆರಬೇಕಾಗುತ್ತದೆ. ನಾಳಿನ ಪೀಳಿಗೆಯ ಬಂಗಾಳಿ ಯುವ ಸಮೂಹ ಕೃತಜ್ಞಾಪೂರ್ವಕವಾಗಿ ಇಂದಿನ ಯುವ ಮೋರ್ಚಾ ಕಾರ್ಯಕರ್ತರನ್ನು ಸ್ಮರಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ.

    ವಿಶೇಷವೆಂದರೆ ಪಶ್ಚಿಮ ಬಂಗಾಳ ಸರ್ಕಾರ ಬುಧವಾರ ಸಂಜೆ ಕಟ್ಟಡದ ಎಲ್ಲ ಕಚೇರಿಗಳನ್ನು ಎರಡು ದಿನಗಳ ವರೆಗೆ(ಗುರುವಾರ ಹಾಗೂ ಶುಕ್ರವಾರ) ಸ್ಯಾನಿಟೈಸ್ ಮಾಡುವ ಸಲುವಾಗಿ ಮುಚ್ಚಲಾಗುವುದು ಎಂದು ಘೋಷಿಸಿತ್ತು. ಕೋಲ್ಕತ್ತಾದ ಹಳೆಯ ಸಚಿವಾಲಯವಾದ ರೈಟರ್ಸ್ ಕಟ್ಟಡವನ್ನು ಸಹ ಮುಚ್ಚಲಾಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.

    ಯೋಜನೆ ರೂಪಿಸಿದಂತೆ ಕೋಲ್ಕತ್ತಾ ಹಾಗೂ ಹೌರಾದ ವಿವಿಧ ಭಾಗಗಳಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಂಘಟಿತರಾಗಿ ನಬಣ್ಣ ಚೆಲೋ ನಡೆಸಿದರು. ಸುಮಾರು 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಬಣ್ಣ ಚೆಲೋ ನಡೆಸುವುದಕ್ಕೂ ಮುನ್ನ ತೇಜಸ್ವಿ ಸೂರ್ಯ ಅವರು ಇಂದು ಬೆಳಗ್ಗೆ ಸ್ವಾಮಿ ವಿವೇಕಾನಂದರ ಮನೆಗೆ ಭೇಟಿ ನೀಡಿದ್ದರು.

    ಬುಧವಾರ ಸಹ ಸುದ್ದಿಗೋಷ್ಠಿ ನಡೆಸಿದ್ದ ತೇಜಸ್ವಿಸೂರ್ಯ, ಭಯಭೀತರಾಗಿ ನಬಣ್ಣ ಬಂದ್ ಮಾಡಲಾಗಿದೆ ಎಂದು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ ಮಮತಾ ದೀದಿ ಭಯಭೀತರಾಗಿದ್ದಾರೆ. ಹೀಗಾಗಿಯೇ ಅವರು ಸಿಎಂ ಕಚೇರಿಯನ್ನು ಮುಚ್ಚಿದ್ದಾರೆ ಎಂಬುದನ್ನು ನಾನು ತಿಳಿದುಕೊಂಡಿದ್ದೇನೆ. ಇದು ಬಂಗಾಳದಲ್ಲಿ ನಿಜವಾದ ಪರಿವರ್ತನೆಯ ಸಂಕೇತವಾಗಿದೆ. ಇದನ್ನು ರಾಜ್ಯದ ದೇಶಭಕ್ತ ಯುವಕರು ಮುನ್ನಡೆಸುತ್ತಿದ್ದಾರೆ. ಇಡೀ ದೇಶ ಅವರೊಂದಿಗೆ ಇದೆ ಎಂದು ಹೇಳಿದ್ದರು.

  • ಬಿಜೆಪಿ ಯುವಾ ಮೋರ್ಚಾದ ಬೈಕ್  ರ‍್ಯಾಲಿ  ದಕ್ಷಿಣ ಕನ್ನಡ ಪ್ರವೇಶಿಸುವಂತಿಲ್ಲ

    ಬಿಜೆಪಿ ಯುವಾ ಮೋರ್ಚಾದ ಬೈಕ್  ರ‍್ಯಾಲಿ  ದಕ್ಷಿಣ ಕನ್ನಡ ಪ್ರವೇಶಿಸುವಂತಿಲ್ಲ

    ಬೆಂಗಳೂರು: ಬಿಜೆಪಿ ಯುವಾ ಮೋರ್ಚಾ ಆಯೋಜಿಸಿದ್ದ ಮಂಗಳೂರು ಚಲೋ ಬೈಕ್ ರ‍್ಯಾಲಿಗೆ ದಕ್ಷಿಣ ಕನ್ನಡ ಪೊಲೀಸರು ತಡೆ ನೀಡಿದ್ದಾರೆ.

    ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಆದೇಶ ಹೊರಡಿಸಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಡೆ ನೀಡಲಾಗಿದ್ದು, ರ‍್ಯಾಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಬಾರದು ಎಂದು ಸೂಚಿಸಿದ್ದಾರೆ.

    ಮೈಸೂರು, ಮಡಿಕೇರಿ ಭಾಗದಿಂದ ಬೈಕ್ ರ‍್ಯಾಲಿ ಮೂಲಕ ಬರುವ ಕಾರ್ಯಕರ್ತರಿಗೆ ಸೆ.6ರಂದು ಸುಳ್ಯ ತಾಲೂಕಿನ ಕೇರ್ಪಳದ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಸುಳ್ಯ ಪೊಲೀಸರು ಹಾಲ್ ವ್ಯವಸ್ಥಾಪಕರಿಗೆ ನೋಟಿಸ್ ನೀಡಿದ್ದು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ:  ನಿಮ್ಮ ಯಾವುದೇ ಬೆದರಿಕೆಗೆ ನಾವು ಜಗ್ಗಲ್ಲ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕೆಂಡಾಮಂಡಲ

    ಏನಿದು ಮಂಗಳೂರು ಚಲೋ?
    ಆರೆಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆ ಭಾಗಿಯಾಗಿದ್ದು, ಇದನ್ನು ನಿಷೇಧಿಸುವ ಸಲುವಾಗಿ ಸೆಪ್ಟೆಂಬರ್ 7 ರಂದು ಬಿಜೆಪಿ ಯುವಾ ಮೋರ್ಚಾ ಮಂಗಳೂರು ಚಲೋವನ್ನು ಆಯೋಜಿಸಿದೆ. ಸೆಪ್ಟೆಂಬರ್ 5 ರಿಂದ ಬಿಜೆಪಿ ಬೈಕ್ ರ‍್ಯಾಲಿ ಆರಂಭವಾಗಲಿದ್ದು, ಬೆಂಗಳೂರು, ಹುಬ್ಬಳ್ಳಿಯಿಂದ ರ‍್ಯಾಲಿ ಹೊರಟರೆ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರಿನಿಂದ ಸೆಪ್ಟೆಂಬರ್ 6ರಂದು ರ‍್ಯಾಲಿ ಹೊರಡಲಿದೆ. ಕೆಎಫ್ ಡಿ, ಪಿಎಫ್‍ಐ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಲಿದ್ದು, ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ.