Tag: bjp

  • ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

    ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

    – ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ

    ಬೆಂಗಳೂರು: ಕ್ರಿಶ್ಚಿಯನ್ ಕುರುಬ (Christian Kuruba) ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ. ಅದಕ್ಕೆ ನಾವು ಏನು ಮಾಡಲು ಆಗುತ್ತೆ? ಯಾಕೆ ಬರೆಸಿದ್ದೀರೀ ಎಂದು ಪ್ರಶ್ನೆ ಮಾಡಲು ನಾವು ಬಿಜೆಪಿಯವರಲ್ಲ ಎಂದು ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಶ್ಚಿಯನ್ ಜೊತೆ ಸೇರಿದ ಜಾತಿಗಳ ಬಗ್ಗೆ ಚರ್ಚೆಯಾಗಿದೆ. ನಾವು ಆಯೋಗಕ್ಕೆ ಕೆಲವು ಸೂಚನೆ ಕೊಡಬಹುದು. ಆದರೆ ಆಯೋಗದ ಮೇಲೆ ಒತ್ತಡ ಹೇರುವುದಕ್ಕೆ ಆಗುವುದಿಲ್ಲ. ಸಿಎಂ ಕೂಡ ಹೀಗೆ ಮಾಡಿ ಎಂದು ಆಯೋಗದ ಮೇಲೆ ಒತ್ತಡಹಾಕಲು ಆಗಲ್ಲ. ಕೆಲವು ಸಾಧಕಬಾಧಕ ಬಗ್ಗೆ ಚರ್ಚೆಯಾಗಿದೆ, ಸಲಹೆ ನೀಡಲಾಗಿದೆ. ಜಾತಿ, ಜಾತಿ ಎಂದು ಯಾಕೆ ಹೇಳುತ್ತೀರಿ? ಜನರು ಹೇಳಿದ ಜಾತಿಯನ್ನು ಪಟ್ಟಿ ಮಾಡಲಾಗಿದೆ. ನಾನೋ, ಸಿಎಂ ಅಥವಾ ಡಿಕೆಶಿಯವರೋ ಪಟ್ಟಿ ಮಾಡಿ ಕೊಟ್ಟಿಲ್ಲ. ಆಯೋಗ ಪಟ್ಟಿ ಮಾಡಿಲ್ಲ, ಜನರು ಬರೆದಿದ್ದನ್ನು ಆಯೋಗ ಪಟ್ಟಿಯಲ್ಲಿ ಸೇರಿಸಿದೆ. ಜನರಲ್ಲಿ ಭಾವನೆ ಏನಿದೆಯೋ ಅದನ್ನು ಬರೆಯಲಿ ಎಂದರು. ಇದನ್ನೂ ಓದಿ: ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? – ಅಶೋಕ್ ಕಿಡಿ

    ಬಿಜೆಪಿಯವರಿಗೆ ಏನೋಗಿದೆಯೋ ಗೊತ್ತಿಲ್ಲ. ಬಿಜೆಪಿಯವರಿಗೆ ಜಾತಿ, ಮಸೀದಿ ಕಂಡರೆ ಪ್ರೀತಿ, ಮುಸ್ಲಿಂ ಕಂಡರೆ ಇನ್ನೂ ಜಾಸ್ತಿ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ. ಜಾತಿ ವಿಚಾರದಲ್ಲಿನಾವು ಹೇಳಿದ್ದು ಫೈನಲ್ ಅಲ್ಲ. ಆಯೋಗ ಮೊದಲು ವರದಿ ಕೊಡಲಿ. ಸರ್ಕಾರ ಸಂಪುಟದಲ್ಲಿ ತೀರ್ಮಾನ ಮಾಡುತ್ತದೆ. ಜನರು ಏನು ಬೇಕಾದರೂ ಬರೆಸಲಿ. ಎಲ್ಲಾ ಸಮಾಜದವರು ಸಭೆ ಮಾಡುತ್ತಿದ್ದಾರೆ. ಎಲ್ಲರೂ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಫೈನಲ್ ಆಗಿ ಜನರು ಏನು ಬರೆಸಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್

    ಆಯೋಗ ಸ್ವತಂತ್ರ ಸಂಸ್ಥೆ, ಅದರ ಮೇಲೆ ಒತ್ತಡ ಹೇರಲು ಆಗಲ್ಲ. ಯಾರೂ ಮಧ್ಯಪ್ರವೇಶ ಮಾಡಬಾರದು ಎಂದು ಸಿಎಂ ಹೇಳಿದ್ದಾರೆ. ಬಿಜೆಪಿಯವರಿಗೆ ಕೆಲಸ ಏನಿದೆ? ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿ. ಗ್ಯಾರಂಟಿ ಬಡಜನರಿಗೆ ತಲುಪುತ್ತಿಲ್ಲ ಅಂದರೆ ಹೇಳಲಿ. ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗೆ ಇಲ್ಲ. ಇಲ್ಲಿ ಮಸೀದಿ, ಧರ್ಮದ ಬಗ್ಗೆ ಮಾತನಾಡುತ್ತಾರೆ. ಜಾತಿಗಳ ಬಗ್ಗೆ ನಾವು ಚರ್ಚೆ ಮಾಡಬಾರದು. ಜಾತಿ ಬಗ್ಗೆ ಚರ್ಚೆ ಮಾಡಿದರೆ ದೇಶ ಅವನತಿಯತ್ತ ಸಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆ ಮಾಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    ನಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿ ಅಲ್ಲ. ಶೈಕಣಿಕ, ಆರ್ಥಿಕ ಸಮೀಕ್ಷೆಯನ್ನು ನಾವು ಮಾಡುತ್ತಿದ್ದೇವೆ. ನಮಗೆ ಜಾತಿಗಣತಿ ಮಾಡುವ ಪವರ್ ಇಲ್ಲ. ಕೇಂದ್ರ ಸರ್ಕಾರಕ್ಕೆ ಜಾತಿಗಣತಿ ಮಾಡುವ ಪವರ್ ಇದೆ. ನಾವು ಸ್ಪಷ್ಟವಾಗಿ ಆದೇಶ ಹೊರಡಿಸಿದ್ದೇವೆ. ಸೆ.22ರಿಂದ ಅಕ್ಟೋಬರ್ 7ರವರೆಗೆ ಸಮೀಕ್ಷೆ ನಡೆಯಲಿದೆ. ಮನೆಮನೆಗೆ ಹೋಗಿ ಸಮೀಕ್ಷೆ ಮಾಡುತ್ತಾರೆ. ದಯಮಾಡಿ ಬಂದವರಿಗೆ ಎಲ್ಲಾ ಮಾಹಿತಿ ನೀಡಿ. 60 ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರವನ್ನು ನೀಡಿ. ಯಾರ ಒತ್ತಡಕ್ಕೂ ಒಳಗಾಗದೆ ಉತ್ತರವನ್ನು ನೀಡಿ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?

  • ಬಿಜೆಪಿ ಶಾಸಕ ಶ್ರೀವತ್ಸ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR

    ಬಿಜೆಪಿ ಶಾಸಕ ಶ್ರೀವತ್ಸ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR

    ಬೆಂಗಳೂರು: ಕುರುಬರ ಎಸ್ಟಿ ಮೀಸಲಾತಿಯ ಬಗ್ಗೆ ಮಾತನಾಡಿದ್ದ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಬೆಂಗಳೂರಿನ (Bengaluru) ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಪರಿಶಿಷ್ಟ ಪಂಗಡ ಮತ್ತು ವಾಲ್ಮೀಕಿ ಸಮುದಾಯದವರು ಕುರುಬ ಸಮುದಾಯದ ಬಗ್ಗೆ ದಂಗೆ ಏಳಬೇಕು ಅಂತ ಎಂಎಲ್‌ಸಿ ಹಾಗೂ ಶಾಸಕರು ಹೇಳಿಕೆ ಕೊಟ್ಟಿದ್ರು. ಈ ಸಂಬಂಧ ಕುರುಬ ಸಮುದಾಯದ ಮುಖಂಡ ಸಿದ್ದಣ್ಣ ತೇಜಿ, ಡಿಜಿ & ಐಜಿಪಿಗೆ ದೂರು‌ ನೀಡಿದ್ದರು. ಇದನ್ನೂ ಓದಿ: ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ

    ದೂರಿನ ಅನ್ವಯ ಬಿಎನ್‌ಎಸ್‌ 353(2) (ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಹೇಳಿಕೆ) ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

  • ಗುಂಡಿಯೂರು ಬಗ್ಗೆ ಉದ್ಯಮಿಗಳ ಆಕ್ಷೇಪಕ್ಕೆ ಡಿಕೆಶಿ ಡೋಂಟ್ ಕೇರ್ ಹೇಳಿಕೆ – ಬಿಜೆಪಿ ನಾಯಕರು ಕಿಡಿ

    ಗುಂಡಿಯೂರು ಬಗ್ಗೆ ಉದ್ಯಮಿಗಳ ಆಕ್ಷೇಪಕ್ಕೆ ಡಿಕೆಶಿ ಡೋಂಟ್ ಕೇರ್ ಹೇಳಿಕೆ – ಬಿಜೆಪಿ ನಾಯಕರು ಕಿಡಿ

    ಬೆಂಗಳೂರು: ಗುಂಡಿಗಳಿರುವ ರಸ್ತೆಗಳನ್ನು ಸರಿಪಡಿಸಿಕೊಡಿ ಎಂದ ಐಟಿ-ಬಿಟಿ ಕಂಪನಿಗಳ ಬಗ್ಗೆ ಹಗುರವಾಗಿ ಮಾತಾಡಿದ ಡಿಕೆಶಿ ವಿರುದ್ಧ ಬಿಜೆಪಿ (BJP) ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

    ಬೆಂಗಳೂರಿನಲ್ಲಿ (Bengaluru) ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ಕಾಂಗ್ರೆಸ್‌ನವರಿಗೆ ಅಧಿಕಾರ ತಲೆಗೆ ಹತ್ತಿಬಿಟ್ಟಿದೆ. ಉದ್ಯಮಿಗಳು ಬೆಂಗಳೂರಿನ ಕುಂದುಕೊರತೆ ಹೇಳಿದಾಗ ಅದನ್ನು ಸಹಿಸಲ್ಲ. ಇವರು ಕಂಪನಿಗಳು ಬೇಕಿದ್ರೆ ಇರಬಹುದು, ಇಲ್ಲದಿದ್ರೆ ಹೋಗಬಹುದು ಅಂತಾರೆ. ಈ ದುರಹಂಕಾರದ ಮಾತು ಏಕೆ? ನಾನು ಉದ್ಯಮಿಗಳನ್ನು ಕರೆದು ಮಾತಾಡಲ್ಲ ಅಂತ ಅಹಂಕಾರದಿಂದ ಹೇಳ್ತಾರೆ. ಇದೇನು ಜನರ ಸರ್ಕಾರವೋ? ಖಾಸಗಿ ಸರ್ಕಾರವೋ? ಈ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಿ. ಬೆಂಗಳೂರು ಬಗ್ಗೆ ನಕಾರಾತ್ಮಕ ಸಂದೇಶ ಜಗತ್ತಿಗೆ ಹೋದರೆ ಯಾರೂ ಉದ್ದಿಮೆ ಮಾಡಲು ಬರಲ್ಲ. ಇಲ್ಲಿ ಉದ್ಯಮ ಸ್ಥಾಪಿಸಲು ಇವರ ಧೋರಣೆಯಿಂದ ಯಾರೂ ಬರಲ್ಲ. ಇರುವ ಉದ್ಯಮಗಳೂ ಬಿಟ್ಟು ಹೋಗುತ್ತವೆ. ಬುರುಡೆ ಮಾತು, ದುರಹಂಕಾರದ ಮಾತು ಬಿಟ್ಟು ಮೊದಲು ರಸ್ತೆಗಳನ್ನು ಸರಿ ಮಾಡಿ. ರಿಂಗ್‌ರಸ್ತೆ ಹಾಳಾಗಿ ಹೋಗಿದೆ, ಲೂಟಿ ಬಿಟ್ಟು ಅಭಿವೃದ್ಧಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

    ಬೆಂಗಳೂರಿನ ಹಿತಕ್ಕಾಗಿ ಡಿಕೆಶಿ ಕೋಪ ತಡೆದುಕೊಳ್ಳೋದು ಒಳ್ಳೆಯದು. ಉದ್ಯಮಿಗಳ ಮೇಲೆ ಮನಬಂದಂತೆ ಮಾತಾಡಬೇಡಿ. ಬೆಂಗಳೂರಿನ ಮರ್ಯಾದೆ ಕಾಪಾಡಿ ಎಂದು ಟಾಂಗ್ ಕೊಟ್ಟರು.

    ಇನ್ನೂ ಶಾಸಕ ಎಸ್.ಆರ್ ವಿಶ್ವನಾಥ್ ಮಾತಾಡಿ, ಡಿಕೆಶಿ ಉದ್ಯಮಿಗಳಿಗೆ ಧಮಕಿ ಹಾಕ್ತಾರೆ. ಅವರಿಗೆ ಮನವೊಲಿಸುವುದು ಗೊತ್ತಿಲ್ಲ. ಅವರ ಈ ಧೋರಣೆ ಅವರಿಗೇ ತಿರುಗುಬಾಣ ಆಗುತ್ತೆ. ಅವರಿಗೆ ಧಮ್ಕಿ ಹಾಕೋರು ಬಂದಾಗ ಬಹುಶ: ಅವರಿಗೆ ಅರ್ಥ ಆಗಬಹುದು. ಈ ರೀತಿ ಉದ್ಯಮಿಗಳ ಬಗ್ಗೆ ಮಾತಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಶಾಸಕ ಸಿ.ಕೆ ರಾಮಮೂರ್ತಿ ಅವರು ಮಾತನಾಡಿ, ಇನ್ನು ನಮ್ಮ ಉದ್ಯಮಿಗಳಿಗೆ ಬೇರೆ ಬೇರೆ ರಾಜ್ಯದವರು ಕರೆಯುತ್ತಿದ್ದಾರೆ. ಇನ್ನಾದರೂ ಸರ್ಕಾರ ಒಳ್ಳೆಯ ಬುದ್ಧಿ ಕಲಿತು ಬೆಂಗಳೂರಿನ ಅಭಿವೃದ್ಧಿ ಮಾಡಬೇಕು. ಡಿ.ಕೆ ಶಿವಕುಮಾರ್ ದುರಹಂಕಾರದಿಂದ ಮಾತನಾಡುತ್ತಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಎಲ್ಲಾ ಸಾಫ್ಟ್ವೇರ್ ಕಂಪನಿಗಳನ್ನು ಕರೆದು ಮಾತನಾಡಿ ಎಂದು ಆಗ್ರಹಿಸಿದರು.

    ಶಾಸಕ ಅರವಿಂದ ಬೆಲ್ಲದ ಮಾತಾಡಿ, ಬ್ಲ್ಯಾಕ್‌ಬಕ್ ಕಂಪನಿ ಸಿಇಒ ಹೇಳಿದಾಗ ಎಚ್ಚೆತ್ತು ರಸ್ತೆಗಳ ಸುಧಾರಣೆ ಮಾಡಬೇಕಿತ್ತು. ಅದು ಬಿಟ್ಟು ಡಿಕೆಶಿಯವರು ತಿರಸ್ಕೃತ ರೀತಿಯಲ್ಲಿ ಅಹಂಕಾರದಿಂದ ಮಾತಾಡಿದ್ದಾರೆ. ಇದು ಒಳ್ಳೆಯದಲ್ಲ, ಬ್ಲ್ಯಾಕ್ ಬಕ್ ಕಂಪನಿಗೆ ಆಂಧ್ರ ಆಹ್ವಾನ ಕೊಟ್ಟಿದೆ. ಡಿಕೆಶಿ ಇರುವ ಕಂಪನಿಗಳನ್ನು ಉಳಿಸಿಕೊಂಡರೆ ಸಾಕು. ಹೊಸ ಕಂಪನಿಗಳನ್ನು ಅವರು ಕರೆದುಕೊಂಡು ಬರೋಕೆ ಆಗಲ್ಲ. ಇರುವುದನ್ನು ಉಳಿಸಿಕೊಳ್ಳಲಿ ಎಂದು ಕಿಡಿಕಾರಿದರು.ಇದನ್ನೂ ಓದಿ: ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು: ಸಿದ್ದರಾಮಯ್ಯ

  • ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    – 2008ರ ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ

    ನವದೆಹಲಿ: ಪಾಕಿಸ್ತಾನಕ್ಕೆ (Pakistan) ಹೋದ್ರೆ ನನಗೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಹೇಳುವ ಮೂಲಕ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ.

    ತಮ್ಮ ಹೇಳಿಕೆಗಳಿಂದಲೇ ವಿವಾದ ಸೃಷ್ಟಿಸುವ ಸ್ಯಾಮ್‌ ಪಿತ್ರೋಡಾ ಅವರ ಪಟ್ಟಿಗೆ ಇದು ಹೊಸ ವಿವಾದವಾಗಿದೆ. ಸಂದರ್ಶನವೊಂದರಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧಗಳ ಕುರಿತು ಮಾತನಾಡುತ್ತಾ, ನೆರೆಹೊರೆಯಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯ ಸಮಸ್ಯೆಗಳ‌ ಹೊರತಾಗಿಯೂ ಭಾರತವು ಪಾಕಿಸ್ತಾನ (India Pakistan) ಮತ್ತು ಬಾಂಗ್ಲಾದೊಂದಿಗೆ ತೊಡಗಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ನಮ್ಮ ವಿದೇಶಾಂಗ ನೀತಿಯು ಮೊದಲು ನಮ್ಮ ನೆರೆಹೊರೆಯ ರಾಷ್ಟ್ರಗಳಿಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ನೆರೆಹೊರೆ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಸುಧಾರಿಸಬಹುದೇ? ಎಂಬುದರ ಬಗ್ಗೆ ಚಿಂತಿಸಬೇಕು. ನಾನು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಹೋಗಿದ್ದೇನೆ. ಈ ವೇಳೆ ನನಗೆ ನನ್ನ ತಾಯ್ನಾಡಿನಲ್ಲೇ ಇದ್ದೇನೆಂಬ ಭಾವನೆ ಮೂಡಿಸಿತ್ತು ಎಂದು ಹೇಳಿದ್ದಾರೆ.

    ಪಾಕ್‌, ಬಾಂಗ್ಲಾ ನನ್ನ ಮನೆಯಂತೆ ಭಾಸವಾಗುತ್ತೆ:
    ಮುಂದುವರಿದು… ಪಾಕಿಸ್ತಾನ, ಬಾಂಗ್ಲಾದೇಶ (Bangladesh) ಹಾಗೂ ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿಗೆ ಪ್ರವಾಸಕ್ಕೆ ಹೋದ ಸಮಯದಲ್ಲಿ ನನ್ನ ಮನೆಯಂತೆಯೇ ಭಾಸವಾಗುತ್ತಿತ್ತು. ಪಾಕಿಸ್ತಾನಕ್ಕೆ ಹೋದಾಗಲೂ ನಾನು ವಿದೇಶದಲ್ಲಿದ್ದೇನೆ ಅನ್ನಿಸಲೇ ಇಲ್ಲ ನನ್ನ ಮನೆಯಂತೆ ಭಾಸವಾಗಿತ್ತು. ಅವರು ನನ್ನ ಹಾಡುಗಳನ್ನು ಇಷ್ಟಪಡ್ತಾರೆ, ನನ್ನಂತೆಯೇ ಮಾತನಾಡ್ತಾರೆ, ನನ್ನ ಆಹಾರವನ್ನೇ ತಿನ್ನುತ್ತಾರೆ. ನಾವು ಅವರೊಂದಿಗೆ ಶಾಂತಿ ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದಿದ್ದಾರೆ. ಇದನ್ನೂ ಓದಿ: iPhone 17 ಖರೀದಿಗೆ ನೂಕುನುಗ್ಗಲು – ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು

    ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ
    ಇನ್ನೂ 2008ರ ಮುಂಬೈ ದಾಳಿ ಉಲ್ಲೇಖಿಸಿ ಸ್ಯಾಮ್‌ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

    ಈ ನಡುವೆ ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಕೆಎಲ್‌ಎಫ್ ಉಗ್ರ ಯಾಸಿನ್ ಮಲ್ಲಿಕ್, ಸ್ಫೋಟಕ ಹೇಳಿಕೆ ನೀಡಿದ್ದಾನೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೋಯ್ಬಾ ಹಫೀಜ್ ಸಯೀದ್‌ನನ್ನು ಭೇಟಿ ಮಾಡಿದ್ದಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ನನಗೆ ಧನ್ಯವಾದ ಅರ್ಪಿಸಿದ್ದರು ಎಂದಿದ್ದಾನೆ.

    ಯಾಸಿನ್ ಮಲಿಕ್ 2006ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ. ಮನಮೋಹನ್ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

  • ದುರಹಂಕಾರದ ಮಾತು ಬಿಟ್ಟು, ಜನಪರ ಕೆಲಸ ಮಾಡಿ – ಉದ್ಯಮಿಗಳ ಬಗ್ಗೆ ಡಿಕೆಶಿ ಹೇಳಿಕೆಗೆ ಅಶ್ವಥ್ ನಾರಾಯಣ್‌ ಖಂಡನೆ

    ದುರಹಂಕಾರದ ಮಾತು ಬಿಟ್ಟು, ಜನಪರ ಕೆಲಸ ಮಾಡಿ – ಉದ್ಯಮಿಗಳ ಬಗ್ಗೆ ಡಿಕೆಶಿ ಹೇಳಿಕೆಗೆ ಅಶ್ವಥ್ ನಾರಾಯಣ್‌ ಖಂಡನೆ

    ಬೆಂಗಳೂರು: ಹಲವು ವರ್ಷಗಳಿಂದ ಅನಾನುಕೂಲಗಳನ್ನು ಎದುರಿಸಿದ ಕಂಪನಿ ಬೆಂಗಳೂರಿನ (Bengaluru) ಕುಂದುಕೊರತೆ, ವಿಫಲತೆಗಳ ಕುರಿತು ಮಾತನಾಡಿದರೆ ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ್ (C.N Ashwath Narayan)  ಅವರು ಟೀಕಿಸಿದರು.

    ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಉದ್ಯಮಿಗಳ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌  (D.K Shivakumar) ಅವರ ಡೋಂಟ್ ಕೇರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇಂತಹ ಕಂಪನಿಗೆ ಬೇಕಿದ್ದರೆ ಇರಿ; ಇಲ್ಲದಿದ್ದರೆ ಹೋಗಿ ಎನ್ನುವುದಾದರೆ, ಇದ್ಯಾವ ಸಂಸ್ಕೃತಿ? ಇದು ಜನಪರ ಸರ್ಕಾರದ ಮಾತುಗಳೇ? ಈ ದುರಹಂಕಾರದ ಮಾತು ಬಿಟ್ಟು, ಜನಪರವಾಗಿ ಕೆಲಸ ಮಾಡಿ ವಿಶ್ವಾಸ ಮೂಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರ ಆದ್ರೆ ಮುಗೀತು, ಧರ್ಮದ ಜೊತೆ ಜಾತಿ ಸೇರಿಸುವಂತಿಲ್ಲ: ಸತೀಶ್ ಜಾರಕಿಹೊಳಿ

    ಸರ್ಕಾರ ಎಂಬುದು ಜನಪರವಾಗಿರಬೇಕು. ಆಡಳಿತದಲ್ಲಿ ಸೌಜನ್ಯ, ಜನಪರ ಕಾಳಜಿ ಇರಬೇಕು. ಆದರೆ, ಕಾಂಗ್ರೆಸ್ಸಿನ ರಾಜ್ಯ ಸರಕಾರಕ್ಕೆ ಅಧಿಕಾರ ತಲೆಗೆ ಹತ್ತಿದೆ. ದುರಹಂಕಾರದ ಮಾತು ಆಡುತ್ತಿದ್ದಾರೆ. ಅವರ ವೈಫಲ್ಯಗಳನ್ನು ಜನರು ಎತ್ತಿ ಹಿಡಿದಾಗ ಅದನ್ನು ಒಪ್ಪಿಕೊಳ್ಳುವ ಸೌಜನ್ಯ, ಸಂಸ್ಕೃತಿ ಅವರಲ್ಲಿಲ್ಲ ಎಂದು ದೂರಿದರು.

    ಬೆಂಗಳೂರು ವಿಶ್ವದಲ್ಲೇ ಮಾನ್ಯತೆ ಪಡೆದ ಹೆಮ್ಮೆಯ ನಗರವಾಗಿದೆ. ಉದ್ಯಮಶೀಲತೆ, ತಂತ್ರಜ್ಞಾನ, ಸ್ಟಾರ್ಟಪ್‍ಗೆ ಹೆಸರುವಾಸಿಯಾಗಿದೆ. ಎಲ್ಲ ಪ್ರಧಾನಮಂತ್ರಿಗಳು, ಮಾನ್ಯ ರಾಷ್ಟ್ರಪತಿಗಳು, ವಿಶ್ವ ನಾಯಕರು ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಾರೆ. ಬೆಂಗಳೂರಿನ ವೈಫಲ್ಯವನ್ನು ತಿಳಿಸಿ, ಕುಂದುಕೊರತೆ ಹೇಳಿದಾಗ ಅದನ್ನು ಇವರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್

  • ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ ಕರಂದ್ಲಾಜೆ

    ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ ಕರಂದ್ಲಾಜೆ

    ಬೀದರ್: ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ (Rahul Gandhi) ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮತದಾರರ ಹೆಸರು ಡಿಲೀಟ್, ರಾಹುಲ್ ಗಾಂಧಿ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಗೆ ಸಾಮಾನ್ಯಜ್ಞಾನ ಇಲ್ಲ. ಕಳ್ಳತನ ಮಾಡುವವರಿಗೆ ಕಳ್ಳತನದ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ (Vote Theft) ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ – 29 ದಿನಗಳಲ್ಲಿ 1.70 ಕೋಟಿ ಸಂಗ್ರಹ

    ಮಾಲೂರು ಕಾಂಗ್ರೆಸ್ (Congress) ಶಾಸಕರನ್ನ ಕೋರ್ಟ್ ಅಸಿಂಧೂಗೊಳಿಸಿದ್ದು ಯಾಕೆ? ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು. ಮೋಸ ಮಾಡಿದವರು ಯಾರು? ಕಾಂಗ್ರೆಸ್ ಮೋಸ ಮಾಡಿ 135 ಸ್ಥಾನ ಗೆದ್ದವರು. ಆಳಂದದಲ್ಲಿ ಕಾಂಗ್ರೆಸ್ ಅಭ್ಯರ್ಥಿನೇ ಗೆದ್ದಿದ್ದು. ಸಿದ್ದರಾಮಯ್ಯರ ಕ್ಷೇತ್ರದಲ್ಲೂ ಮನೆ ನಂ. ಸೊನ್ನೆ ಅಂತಲೇ ತೋರಿಸುತ್ತದೆ. 20-25ರ ಮತದಾರರ ಪಟ್ಟಿ ನೋಡಿದ್ರೆ ಈಗಲೂ ಸೊನ್ನೆ ಅಂತಲೇ ಮನೆ ನಂ. ಇದೆ. ಮಹದೇವಪುರದಲ್ಲೂ ರಾಹುಲ್ ಗಾಂಧಿ ಆರೋಪ ಮಾಡಿದರು. ಬಾಡಿಗೆ ಮನೆಯಲ್ಲಿ ಇದ್ದವರು, ಮನೆ ನಂಬರ್ ಎ,ಬಿ,ಸಿ,ಡಿ ಅಂತ ಮಾಡಿರುತ್ತಾರೆ. ಮನೆ ನಂಬರ್ ಸರಿಯಾಗಿ ಫೀಡ್ ಆಗಿರಲ್ಲ, ಡಾಟಾ ಆಪರೇಟರ್ ಸರಿಯಾಗಿ ಫೀಡ್ ಮಾಡಿರಲ್ಲ. ಮನೆ ನಂಬರ್ ಎಬಿಸಿಡಿ ಹಾಕಿದ್ರೆ ತೊಗೊಳಲ್ಲ. ಆಗ ಸೊನ್ನೆ ಹಾಕ್ತಾರೆ ಎಂದರು.

    ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಲೇವಡಿ ಮಾಡಿದರು.

    ಇನ್ನೂ ಜಾತಿಗಣತಿ ಮೂಲಕ ಸಿಎಂ ಹೊಡೆದಾಡುವ ನೀತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2013ರಲ್ಲಿ ಲಿಂಗಾಯತರು ಮತ್ತು ವೀರಶೈವರನ್ನ ಒಡೆಯುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದರು. ಈಗ ಮತ್ತೆ ಎಲ್ಲಾ ಜಾತಿ, ಉಪಜಾತಿಗಳನ್ನು ಒಡೆಯಲು ಹೊರಟಿದ್ದು, ಒಕ್ಕಲಿಗ, ಲಿಂಗಾಯತ, ಗಾಣಿಗ ಸೇರಿದಂತೆ ಎಲ್ಲವನ್ನು ಕ್ರಿಶ್ಚಿಯನ್ ಎಂದು ಬರೆಸುತ್ತಿದ್ದೀರಿ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ:‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?

  • ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಬೆಂಗಳೂರು: ಚುನಾವಣಾ ಆಯೋಗ (Election Commission of India) ಬಿಜೆಪಿ (BJP) ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwara Khandre) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕಾಂಗ್ರೆಸ್‌ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi)  ವೋಟ್ ಚೋರಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡ್ತೀವಿ. ಹಿಂಬಾಗಿಲಿನಿಂದ ಬಂದಿರೋ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

  • ನಾಳೆಯಿಂದ ಎರಡು ದಿನ ಬಿಜೆಪಿ ಚಿಂತನ ಮಂಥನ

    ನಾಳೆಯಿಂದ ಎರಡು ದಿನ ಬಿಜೆಪಿ ಚಿಂತನ ಮಂಥನ

    ಬೆಂಗಳೂರು: ನಾಳೆ ಮತ್ತು ನಾಡಿದ್ದು ಬಿಜೆಪಿಯ ಅಭ್ಯಾಸವರ್ಗ ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ (N.Ravikumar) ತಿಳಿಸಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭ್ಯಾಸವರ್ಗದ ಉದ್ಘಾಟನೆಗೆ ಕೇಂದ್ರ ಮಾನವ ಸಂಪನ್ಮೂಲ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇರಲಿದ್ದಾರೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ರಾಜ್ಯದ ಪ್ರಭಾರಿ ಡಾ.ರಾಧಾಮೋಹನ್ ಅಗರವಾಲ್ ಅವರೂ ಆಗಮಿಸುತ್ತಾರೆ ಎಂದು ವಿವರಿಸಿದರು.ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಡಿಸಿಎಂ ಡಿಕೆಶಿ

    ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ 75 ವರ್ಷ ತುಂಬಿದೆ. 2047ರ ವೇಳೆಗೆ ದೇಶವನ್ನು ವಿಕಸಿತ ಭಾರತವಾಗಿ ಮಾಡಲು, ಭಾರತವನ್ನು ನಂ.1 ದೇಶವಾಗಿ ಮಾಡಲು ಅತ್ಯಂತ ಉತ್ಸಾಹ, ಉಲ್ಲಾಸದಿಂದ ಕೆಲಸ ಮಾಡಿ ಅಭಿವೃದ್ಧಿ ಪಥದೆಡೆಗೆ ಒಯ್ಯುತ್ತಿದ್ದಾರೆ. ಅವರ ಹುಟ್ಟುಹಬ್ಬದ ನಿಮಿತ್ತವಾಗಿ ದೇಶಾದ್ಯಂತ ಸೇವಾ ಚಟುವಟಿಕೆಗಳನ್ನು ನಾವು ಮಾಡುತ್ತಿದ್ದೇವೆ ಎಂದರು.

    ಇವತ್ತು ರಾಜ್ಯಾದ್ಯಂತ ರಕ್ತದಾನ ಶಿಬಿರಗಳು, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಸ್ವಚ್ಛತಾ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ನೂರಾರು-ಸಾವಿರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು. ಮೋದಿಜೀ ಅವರು 25 ವರ್ಷದ ತರುಣರಂತೆ ಕೆಲಸ ಮಾಡುತ್ತಿದ್ದಾರೆ. ಅವರ ನಿವೃತ್ತಿಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿ ನಮ್ಮನ್ನು ತುಳಿಯುವ ಹುನ್ನಾರ: ಸಿಎಂ ವಿರುದ್ಧ ವಾಲ್ಮೀಕಿ ನಾಯಕ ಒಕ್ಕೂಟ ಆಕ್ರೋಶ

     

  • ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

    ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

    – ಯೋಜನೆಗಳಲ್ಲಿ ಹಣ ಉಳಿಸಲು ರೇಷನ್ ಕಾರ್ಡ್ ರದ್ದು

    ಬೆಂಗಳೂರು: ಹಿಂದಿನ ಯುಪಿಎ ಸರ್ಕಾರ ಕುಟುಂಬ ರಾಜಕಾರಣ ಮಾಡಿಕೊಂಡು ಭ್ರಷ್ಟ ಆಡಳಿತ ನೀಡಿತ್ತು. ನರೇಂದ್ರ ಮೋದಿ (Narendra Modi) ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಸ್ವಯಂಸೇವಕನಿಂದ ಆರಂಭವಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಬೆಳೆದಿದ್ದಾರೆ. ಕಾಂಗ್ರೆಸ್ ಕುಟುಂಬದಲ್ಲಿ ಹುಟ್ಟಿದರೆ ನೇರವಾಗಿ ಪಕ್ಷದ ಅಧ್ಯಕ್ಷ ಆಗಬಹುದು. ದೇಶವನ್ನು ಲೂಟಿ ಮಾಡಿದ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಎಲ್ಲ ಬಗೆಯ ಭ್ರಷ್ಟಾಚಾರ ಮಾಡಲಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದರು.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಅಸ್ತು

    ಈಗ ಕಾಂಗ್ರೆಸ್‌ನವರು ಪ್ರಧಾನಿ ಮೇಲೆ ಇವಿಎಂ ಕುರಿತು ಆಪಾದನೆ ಮಾಡಿದ್ದಾರೆ. ಗೆದ್ದಾಗ ಮಾತಾಡದೇ ಸೋತಾಗ ಮಾತಾಡುತ್ತಾರೆ. ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕನೇ ಅಕ್ರಮ ಮಾಡಿ ಗೆದ್ದಿದ್ದಾನೆ ಎಂದು ಕೋರ್ಟ್ ಹೇಳಿದೆ. ಬಿಹಾರದಲ್ಲಿ ಸೋಲುವ ಭಯದಿಂದ ಭ್ರಮನಿರಸನಾಗಿ ಇಂತಹ ಆರೋಪ ಮಾಡಿದ್ದಾರೆ. ಆದರೆ ಪ್ರಧಾನಿ ಮೋದಿ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ದೇಶಸೇವೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದೆಯೂ ಅಧಿಕಾರಕ್ಕೆ ಬಂದು ದೇಶವನ್ನು ನಂ.1 ಸ್ಥಾನಕ್ಕೆ ಏರಿಸಲಿದ್ದಾರೆ ಎಂದು ಹೇಳಿದರು.

    ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನ, ಸೇನಾಬಲದಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಪ್ರಪಂಚಕ್ಕೆ ಸವಾಲು ಹಾಕುವ ಚೀನಾ, ಅಮೆರಿಕ ಕೂಡ ಭಾರತದ ಸ್ನೇಹ ಬಯಸಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ. ವಯಸ್ಸಿನ ಆಧಾರದಲ್ಲಿ ಬಿಜೆಪಿಯಲ್ಲಿ ಯಾರನ್ನೂ ಮನೆಗೆ ಕಳುಹಿಸಿಲ್ಲ. ನಮ್ಮಲ್ಲಿ ಅನೇಕ ನಾಯಕರು ವಯಸ್ಸಾದರೂ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಮೋದಿಯವರು ಮುಂದೆಯೂ ಪ್ರಧಾನಿಯಾಗಲಿ ಎಂದು ತಿಳಿಸಿದರು.ಇದನ್ನೂ ಓದಿ: ಟ್ರೋಲ್‌ ಮಾಡಿದ ಕಿಡಿಗೇಡಿಗಳಿಗೆ ಮಾರ್ಮಿಕ ಉತ್ತರ ನೀಡಿದ ವಿಜಯಲಕ್ಷ್ಮಿ

    ರೇಷನ್ ಕಾರ್ಡ್ ರದ್ದು:
    ಕಾಂಗ್ರೆಸ್ ಸರ್ಕಾರ 13 ಲಕ್ಷ ರೇಷನ್ ಕಾರ್ಡ್ ರದ್ದು ಎಂದು ಹೇಳಿ ಒಳಗೊಳಗೆ 25 ಲಕ್ಷ ಕಾರ್ಡ್ ರದ್ದು ಮಾಡಲಿದೆ. ಇದರಿಂದಾಗಿ ಬಡವರಿಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಇದ್ದವರಿಗೆ ಔಷಧಿ, ಚಿಕಿತ್ಸೆ ಉಚಿತವಿದೆ. ಇಂತಹ ಚಿಕಿತ್ಸೆಗಳಲ್ಲಿ ಹಣ ಉಳಿತಾಯ ಮಾಡಬಹುದು. ಬಡವರಿಗೆ ಎಲ್ಲ ಸೌಲಭ್ಯಗಳು ಸ್ಥಗಿತಗೊಳ್ಳಲಿದೆ ಎಂದು ವಾಗ್ದಾಳಿ ನಡೆಸಿದರು.

    ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದೆ ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ರಿಂಗ್ ರಸ್ತೆಯಲ್ಲೂ ವಾಹನ ಚಲಾಯಿಸಲು ಆಗುವುದಿಲ್ಲ. ಬಿಎಂಟಿಸಿ ಬಸ್‌ಗಳು ಬಹಳ ನಿಧಾನವಾಗಿ ಚಲಿಸುವಂತಾಗಿದೆ. ಅನೇಕ ಐಟಿ ಕಂಪನಿಗಳು ಹೈದರಾಬಾದ್, ಚೆನ್ನೈಗೆ ಹೋಗಲು ಯತ್ನಿಸುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೂ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗ ಅನುದಾನವೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ದಿ ಬಿ.ಸರೋಜಾದೇವಿ ಹೆಸರಿನಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

    ಸರ್ಕಾರ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಸಮೀಕ್ಷೆಗೆ ಹಣ ಹಾಳು ಮಾಡದೆ ಮುಂದೂಡುವುದು ಉತ್ತಮ. ಹಬ್ಬ ಇರುವುದರಿಂದ ಸಮೀಕ್ಷೆಯನ್ನು ಮುಂದೂಡಬೇಕು. ಬೇರೆ ಯಾವುದೇ ಕೆಲಸ ನಡೆಯುತ್ತಿದೆ. ಆರ್ಥಿಕ ಸ್ಥಿತಿ ಹಾಳಾಗಿಹೋಗಿದೆ. ಬೆಳೆ ಹಾನಿ ಪರಿಹಾರಕ್ಕೆ ಹಣ ಕೊಡಲು ಗತಿ ಇಲ್ಲ. ಅನುದಾನ ನೀಡುವುದರಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಪ್ರತಿ ಕ್ಷೇತ್ರವನ್ನೂ ಪ್ರತ್ಯೇಕವಾಗಿ ನೋಡಿ ಅನುದಾನ ನೀಡಬೇಕಾಗುತ್ತದೆ. ಹಾಗಾದರೆ ಮಾತ್ರ ಅದನ್ನು ಅಭಿವೃದ್ಧಿಯ ಪಥ ಎನ್ನಬಹುದು ಎಂದರು.

    ಇದೇ ವೇಳೆ ಮುಡಾ ಹಗರಣ ಸಂಬಂಧ ಮಾತನಾಡಿ, ಮುಡಾ ಮಾಜಿ ಆಯುಕ್ತರನ್ನು ಇಡಿ ಬಂಧಿಸಿದೆ. ಮುಡಾ ಹಗರಣದಲ್ಲಿ ನಷ್ಟವಾದ ಎಲ್ಲ ಹಣ ವಾಪಸ್ ಬರಬೇಕು. ಎಲ್ಲ ರೀತಿಯ ತನಿಖೆಯಾಗಿ ತಪ್ಪಿತಸ್ಥರ ಬಂಧನವಾಗಬೇಕೆಂಬುದು ಬಿಜೆಪಿಯ ಆಗ್ರಹ ಎಂದು ತಿಳಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕುಲಗಳನ್ನು ರೂಪಿಸಿದ್ದಾರೆ. ಕುಲವೆಂದು ಹೊಡೆದಾಡಬೇಡಿ ಎಂದು ಕನಕದಾಸರು ಹೇಳಿದರೆ, ಸಿಎಂ ಸಿದ್ದರಾಮಯ್ಯ ಕುಲಗಳು ಹೊಡೆದಾಡಿ ಎನ್ನುವಂತೆ ಮಾಡಿದ್ದಾರೆ. ಕ್ರೈಸ್ತರಲ್ಲೂ ಹಿಂದೂ ಜಾತಿಗಳು ಬಂದಿವೆ. ಹಿಂದೆ ವೀರಶೈವ ಲಿಂಗಾಯತರನ್ನು ಒಡೆದಿದ್ದರು. ಈಗ ಅದನ್ನೇ ಮಾಡಲು ಹೋದರೆ ಕಾಂಗ್ರೆಸ್ ಪಕ್ಷವೇ ಒಡೆದುಹೋಗುತ್ತದೆ ಎಂದರು.ಇದನ್ನೂ ಓದಿ: ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

  • ಚಿತ್ರ ಪ್ರದರ್ಶನ, ರಕ್ತದಾನ ಶಿಬಿರ – ಸಮಾಜಸೇವಾ ಕಾರ್ಯಗಳೊಂದಿಗೆ ಮೋದಿ ಜನ್ಮದಿನಾಚರಣೆ

    ಚಿತ್ರ ಪ್ರದರ್ಶನ, ರಕ್ತದಾನ ಶಿಬಿರ – ಸಮಾಜಸೇವಾ ಕಾರ್ಯಗಳೊಂದಿಗೆ ಮೋದಿ ಜನ್ಮದಿನಾಚರಣೆ

    ಬೆಂಗಳೂರು: ಪ್ರಧಾನಿ ಮೋದಿ (PM Modi) ಜನ್ಮದಿನದ ಹಿನ್ನೆಲೆ ಬಿಜೆಪಿ (BJP) ನಾಯಕರು ಸಮಾಜಸೇವಾ ಕಾರ್ಯಗಳೊಂದಿಗೆ ಮೋದಿ ಹುಟ್ಟುಹಬ್ಬವನ್ನು ಆಚರಿಸಿದರು.

    ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಇಂದು (ಸೆ.17) ಜಯನಗರ (Jayanagar )ವಿಧಾನಸಭಾ ಕ್ಷೇತ್ರದಲ್ಲಿ ರಕ್ತದಾನ ಶಿಬಿರ, ಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೋದಿಯವರ ಜೀವನಾಧಾರಿತ ಚಿತ್ರದ ಪ್ರದರ್ಶನವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಉದ್ಘಾಟಿಸಿದರು. ಇದೇ ವೇಳೆ ರಕ್ತದಾನ ಶಿಬಿರಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಚಾಲನೆ ನೀಡಿದರು.ಇದನ್ನೂ ಓದಿ: ಮೋದಿ ನಿವೃತ್ತಿಯಾಗಲ್ಲ, ಅವರ ಸೇವೆ ಇನ್ನೂ ದೇಶಕ್ಕೆ ಬೇಕು: ಸೋಮಣ್ಣ

    ರಕ್ತದಾನ ಶಿಬಿರದಲ್ಲಿ ಸುಮಾರು 75 ಬಾಟಲ್ ರಕ್ತವನ್ನು ಸಂಗ್ರಹಿಸಲಾಯಿತು. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.