ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಟೀಕಿಸುವ ಭರದಲ್ಲಿ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ಹಿಂದೂ ಧರ್ಮದ ಆಚರಣೆ ಬಗ್ಗೆ ನಾಲಗೆ ಹರಿಬಿಟ್ಟಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ (Ganesh Chaturthi) ಡಿಜೆ ಹಾಕಿಕೊಂಡು, ಎಣ್ಣೆ ಹಾಕಿಕೊಳ್ಳುತ್ತಾರೆ. ಎಣ್ಣೆ ಹಾಕಿಕೊಂಡು ಮಸೀದಿ, ಚರ್ಚ್ ಮುಂದೆ ಡ್ಯಾನ್ಸ್ ಮಾಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಸೀದಿ, ಚರ್ಚ್ ಮುಂದೆ ಮಾಡುವ ಇದು ಯಾವ ಸಾಂಸ್ಕೃತಿಕ ಚಟುವಟಿಕೆ? ಇವರು ಮಾಡಲು ಹೊರಟಿರುವುದೇನು?, ಇದು ಯಾವ ದೇಶಭಕ್ತಿ? ದೇಶಭಕ್ತಿ ಎಂದರೆ ಏನು? ತ್ರಿವರ್ಣ ಧ್ವಜ, ರಾಷ್ಟ್ರ ಗೀತೆ, ಸಂವಿಧಾನಕ್ಕೆ ಕೊಡಬೇಕು. ಆದರೆ ಆರ್‌ಎಸ್‌ಎಸ್ ಯಾವತ್ತು ಗೌರವ ನೀಡಿಲ್ಲ ಎಂದು ದೂರಿದರು.
ಆರ್‌ಎಸ್‌ಎಸ್‌ನವರು ದೊಣ್ಣೆ ಹಿಡಿದು ಪಂಥಸಂಚಲನ ಯಾಕೆ ಮಾಡಬೇಕು? ದೊಣ್ಣೆ ಹಿಡಿಯದೇ ಪಂಥಸಂಚಲನ ಮಾಡಲಿ. ಬೇಡ ಎಂದು ಹೇಳಿದವರು ಯಾರು? ಆರ್‌ಎಸ್‌ಎಸ್ ನೋಂದಣಿಯಾಗಿರುವ ಸಂಸ್ಥೆಯಲ್ಲ. ಪಥಸಂಚಲನದಲ್ಲಿ ಏನಾದರೂ ಸಮಸ್ಯೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಪ್ರತಿಬಾರಿ ಆರ್‌ಎಸ್‌ಎಸ್ ಬ್ಯಾನ್ ಆದಾಗಲೂ ಕ್ಷಮೆ ಕೋರಿ ಬ್ಯಾನ್ ತೆಗೆಸಿಕೊಂಡಿದ್ದಾರೆ. ನೋಂದಣಿಯಾಗದೇ ಇದ್ದರೂ ಇವರಿಗೆ ಹಣ ಎಲ್ಲಿಂದ ಬಂತು. ಗುರು ದಕ್ಷಣೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಪಡೆಯುತ್ತಿದ್ದಾರೆ. ಕಪ್ಪು ಹಣ ಇಲ್ಲೇ ಇದೆ, ಈ ಹಣ ಏನಕ್ಕೆ ಬಳಕೆಯಾಗುತ್ತಿದೆ. ನೂರು ಕೋಟಿ ರೂ. ಮೌಲ್ಯದ ಆರ್‌ಎಸ್‌ಎಸ್ ಕಚೇರಿ ನಿರ್ಮಿಸಿದ್ದಾರೆ. ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಎಂದು ಕೇಳಿದರು.
ಸೇವಾದಳ ದೊಣ್ಣೆ ಹಿಡಿದು ಪಂಥಸಂಚಲನ ಮಾಡುತ್ತಾ? ಸೇವಾದಳ ತಪ್ಪು ಮಾಡಿದರೆ ಕಾಂಗ್ರೆಸ್ ಹೊಣೆ. ಆರ್‌ಎಸ್‌ಎಸ್ ತಪ್ಪು ಮಾಡಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್ ಕುಮಾರ್ (Ananth Kumar) ಪುತ್ರಿ ಐಶ್ವರ್ಯ ಟಕ್ಕರ್ ನೀಡಿದ್ದಾರೆ.
ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ (Congress) ಹಣ ಹೋಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಈ ಹಿಂದೆ ಯಡಿಯೂರಪ್ಪ- ಅನಂತ್ ಕುಮಾರ್ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ಕ್ಲಿಪ್ ಟ್ವೀಟ್ ಮಾಡಿ ಪ್ರಿಯಾಕ್ ಖರ್ಗೆ ತಿರುಗೇಟು ನೀಡಿದ್ದರು.
ಬಿಜೆಪಿ ಹೈಕಮಾಡ್‌ಗೆ 1,800 ಕೋಟಿ ರೂ. ಕಪ್ಪ ನೀಡಿದ್ದನ್ನು ಬಿಎಸ್‌ವೈ-ಅನಂತ್ ಕುಮಾರ್ ಮಾತಾಡಿಕೊಂಡಿದ್ದು ಯಾರೂ ಮರೆತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿದ್ದರು.
Shri @PriyankKharge avare, this is a new low even for you.
After your failed attempt to defame RSS you have now decided to come behind shri Ananthkumar ji, whose work for Karnataka, even your own party leaders have admired.
ಪ್ರಿಯಾಂಕ್ ಆರೋಪಕ್ಕೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ, ಇಬ್ಬರು ನಾಯಕರು ನಿಮ್ಮ ಪಕ್ಷದ ಡೈರಿಯಿಂದ ಬಂದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಸಂಭಾಷಣೆ ಮಾಡಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಐಶ್ವರ್ಯ ಪೋಸ್ಟ್‌ನಲ್ಲಿ ಏನಿದೆ?
ಇದು ನಿಮ್ಮ ಪಕ್ಷದ ನಾಯಕರ ಬುಡಕ್ಕೇ ಬರಬಹುದು . ಅಂದು ಯಡಿಯೂರಪ್ಪ – ಅನಂತ್ ಕುಮಾರ್ ಅವರರು 2017ರಲ್ಲಿ ಬೆಳಕಿಗೆ ಬಂದಿದ್ದ ಗೋವಿಂದರಾಜು ಅವರ ಡೈರಿಯಲ್ಲಿ ದಾಖಲಾಗಿದ್ದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಮಾತನಾಡಿದ್ದರು.
ಅದು ನಿಮ್ಮ ಪಕ್ಷದ್ದೇ ವಿಚಾರ , ಅಂದಿನ ನಿಮ್ಮ ಪಕ್ಷದ ಸಿಎಂ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದ್ದ ಪಪ್ಪದ ಬಗ್ಗೆ ಇರುವ ಸಂಭಾಷಣೆ ಅದು. ಆರ್‌ಎಸ್‌ಎಸ್‌ಗೆ ಕಳಂಕ ಹಚ್ಚುವ ನಿಮ್ಮ ಪ್ರಯತ್ನ ವಿಫಲವಾಗಿದೆ. ಅದಕ್ಕಾಗಿ ಅನಂತ್ ಕುಮಾರ್ ಹಿಂದೆ ಬಿದ್ದಿದ್ದೀರಿ. ಅನಂತ್ ಕುಮಾರ್ ಬಗ್ಗೆ ನಿಮ್ಮ ಪಕ್ಷದವರೇ ಸಾಕಷ್ಟು ಮಂದಿ ಗೌರವ ಇಟ್ಕೊಂಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು: ಬಿಹಾರ ಚುನಾವಣೆಗೆ (Bihar Election 2025) ಹಣ ಕಲೆಕ್ಷನ್ ಮಾಡಿರೋದು ಬಿಜೆಪಿ. ಅವರು ಮಾಡುವ ಕೆಲಸವನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ಕರ್ನಾಟಕವನ್ನು ಎಟಿಎಂ ಆಗಿ ಬಳಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಚುನಾವಣೆಗೆ ಹಣ ಕಲೆಕ್ಷನ್ ಮಾಡಿರೋದು ಬಿಜೆಪಿ, ಅವರು ಮಾಡಿದ್ದನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದರು. ಇದನ್ನೂ ಓದಿ: ಬೇಗ ಮದ್ವೆ ಆಗಿ, ನಾವು ಕಾಯ್ತಿದ್ದೇವೆ – ರಾಹುಲ್ ಗಾಂಧಿಗೆ ಅಂಗಡಿ ಮಾಲೀಕ ಮನವಿ
ಇನ್ನೂ ಸರ್ಕಾರಿ ಜಾಗ, ಸಂಸ್ಥೆಗಳ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಅವರು 2013ರಲ್ಲಿ ಈ ಸುತ್ತೋಲೆ ಹೊರಡಿಸಿದ್ದರು. ಶಿಕ್ಷಣ ಇಲಾಖೆ ಮುಖಾಂತರ ಈ ಸುತ್ತೋಲೆ ಹೊರಡಿಸಲಾಗಿತ್ತು. ಯಾಕೆ ಸುತ್ತೋಲೆ ಹೊರಡಿಸಿದ್ದು? ನಾವು ಯಾವುದೇ ಆರ್ಗನೈಸೇಷನ್ ಹೆಸರು ಹೇಳಿಲ್ಲ. ನಾವು ಯಾವ ಆರ್ಗನೈಜೇಷನ್ ಹೆಸರು ಹೇಳಿದ್ದೇವೆ? ನಾವು ಆರ್‌ಎಸ್‌ಎಸ್ ಹೆಸರು ಹೇಳಿಲ್ಲ ಅವರು ಹೇಳಿದ್ದನ್ನೇ ನಾವು ರಿಪೀಟ್ ಮಾಡಿದ್ದೇವೆ ಎಂದು ಕುಟುಕಿದರು. ಇದನ್ನೂ ಓದಿ: ಸೈಟ್ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ
ಎನಿ ಆರ್ಗನೈಸೇಷನ್ ಅಂತ ಜಗದೀಶ್ ಶೆಟ್ಟರ್ ನಿನ್ನೆ ಹೇಳಿದ್ದಾರೆ ಅದು ಶಿಕ್ಷಣ ಇಲಾಖೆ ಮಾಡಿದ್ದು ಅಂತ. ಹಾಗಾದ್ರೆ ಅವರು ಮುಖ್ಯಮಂತ್ರಿ ಆಗಿರ್ಲಿಲ್ವಾ? ನಾವು ಹೇಳಿರೋದು ಪರ್ಮಿಷನ್ ತಕ್ಕೊಂಡು ಮಾಡ್ಲಿ ಅಂತ. ಆದ್ರೆ ಪರ್ಮಿಷನ್ ಕೊಡಲೇಬೇಕು ಅಂತ ಏನಿಲ್ಲ. ಕಾನೂನು ಸುವ್ಯವಸ್ಥೆ ನೋಡಿ ಅನುಮತಿ ಕೊಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ
ಬೆಂಗಳೂರು/ಹಾಸನ: ಜಾತಿ ಸಮೀಕ್ಷೆಗೆ (Caste Census) ಮಾಹಿತಿ ನೀಡದವರಿಗೆ ಕಾಂಗ್ರೆಸ್ (Congress) ಸರ್ಕಾರ ಧಮ್ಕಿ ಹಾಕುತ್ತಿದೆ. ಇದು ರೌಡಿಸಂ ಮಾಡುವ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದರು.
ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿಲ್ಲ. ಇನ್ಫೋಸಿಸ್ ಸುಧಾಮೂರ್ತಿ ಜಾತಿ ಸಮೀಕ್ಷೆಗೆ ಮಾಹಿತಿ ನೀಡಿಲ್ಲವೆಂದಾಕ್ಷಣ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ಧಮ್ಕಿ ಹಾಕಿದ್ದಾರೆ. ಸರ್ಕಾರವೇ ಇಲ್ಲಿ ರೌಡಿಸಂ ಮಾಡುತ್ತಿದೆ. ಮಾಹಿತಿ ನೀಡುವುದು ಜನರ ಇಚ್ಛೆ ಎಂದು ಹೈಕೋರ್ಟ್ ಹೇಳಿದ್ದರೂ ಸರ್ಕಾರ ಅದನ್ನು ಉಲ್ಲಂಘಿಸಿ ಗೂಂಡಾಗಿರಿ ತೋರುತ್ತಿದೆ. ಜಾತಿ ಸಮೀಕ್ಷೆ ಮಾಡುವುದೇ ಅಕ್ರಮವಾಗಿದ್ದು, ಈ ರೀತಿ ಬೆದರಿಕೆ ಹಾಕುವುದು ಮತ್ತೊಂದು ಅಕ್ರಮವಾಗಿದೆ ಎಂದರು.ಇದನ್ನೂ ಓದಿ: ದೀಪಾವಳಿ ಗಿಫ್ಟ್ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ
ಸುಧಾಮೂರ್ತಿ ಬರೆದುಕೊಟ್ಟಿದ್ದನ್ನು ಬಹಿರಂಗ ಮಾಡಿರುವುದು ತಪ್ಪು. ಯಾರದ್ದೇ ಮಾಹಿತಿಯನ್ನು ಬಹಿರಂಗ ಮಾಡಬಾರದು, ಗೌಪ್ಯತೆ ಕಾಪಾಡಬೇಕು ಎಂದು ಹೈಕೋರ್ಟ್ ಹೇಳಿದೆ. ಇದರ ಜೊತೆಗೆ ಶಿಕ್ಷಕರು, ಅಧಿಕಾರಿಗಳನ್ನೂ ಬೆದರಿಸುತ್ತಿದ್ದಾರೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಯಮಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ರಸ್ತೆ ಸರಿ ಇಲ್ಲ ಎಂದರೆ ನೀತಿಪಾಠ ಹೇಳುತ್ತಾರೆ. ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಮ್‌ದಾರ್ ಶಾ ಪ್ರಶ್ನೆ ಮಾಡಿದರೆ ಅದನ್ನು ಟೀಕೆ ಮಾಡಿದ್ದಾರೆ. ಬೆಂಗಳೂರಿಂದ ಎಲ್ಲವನ್ನೂ ಪಡೆದಿದ್ದಾರೆ ಎನ್ನಲು ಈ ನಗರವನ್ನು ಸಿಎಂ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಕಟ್ಟಿ ಬೆಳೆಸಿಲ್ಲ. ತೆರಿಗೆ ಕಟ್ಟುವವರಿಗೆ ಪ್ರಶ್ನೆ ಕೇಳುವ ಅಧಿಕಾರವೂ ಇದೆ. ಬಿಜೆಪಿ ಸರ್ಕಾರವಿದ್ದಾಗಲೂ ಇದೇ ಉದ್ಯಮಿಗಳು ಟ್ವೀಟ್ ಮಾಡಿ ಪ್ರಶ್ನೆ ಕೇಳಿದ್ದರು. ಆಗ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಕೂಡಲೇ ಹಣ ಬಿಡುಗಡೆ ಮಾಡಿ ರಸ್ತೆ ದುರಸ್ತಿ ಮಾಡಲಾಗಿತ್ತು. ಸಮಸ್ಯೆ ಬಂದಾಗ ತೆಗಳುವುದು ಬಿಟ್ಟು ಸಮಸ್ಯೆ ಬಗೆಹರಿಸಲಿ. ರಸ್ತೆಗುಂಡಿ ಮುಚ್ಚಲು 2,000 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದರೂ ಅದರ ಫಲಿತಾಂಶ ಕಾಣುತ್ತಿಲ್ಲ. ಈ ಹಣ ಎಲ್ಲಿ ಹೋಗಿದೆ ಎಂದು ಸರ್ಕಾರ ನೋಡಬೇಕಿದೆ ಎಂದು ಆಕ್ರೋಶ ಹೊರಹಾಕಿದರು.
ಗೂಗಲ್ ಕಂಪನಿ ಬೆಂಗಳೂರು ಬಿಟ್ಟು ಆಂಧ್ರಪ್ರದೇಶವನ್ನು ಆಯ್ಕೆ ಮಾಡಿಕೊಂಡಿದೆ. ಉದ್ಯಮಿಗಳನ್ನು ಓಡಿಸಿ ಇವರು ಯಾವ ರೀತಿಯ ಅಭಿವೃದ್ಧಿ ಮಾಡುತ್ತಾರೆ? ನಗರದಲ್ಲಿ ಮಳೆ ನಿಂತಿದೆ. ಆದರೂ ಮಳೆ ಬರುತ್ತಿದೆ ಎಂದು ಬೃಹಸ್ಪತಿ ಸಿದ್ದರಾಮಯ್ಯ ನೆಪ ಹೇಳುತ್ತಿದ್ದಾರೆ. ಮಳೆ ಬರುವ ಮುನ್ನವೇ ರಸ್ತೆ ಡಾಂಬರೀಕರಣ ಮಾಡಬೇಕಿತ್ತು. ಉದ್ಯಮಿಗಳೇ ರಸ್ತೆ ನಿರ್ಮಿಸುತ್ತೇವೆ ಎಂದಿದ್ದು, ಇದು ಸರ್ಕಾರಕ್ಕೆ ದೊರೆತ ಛೀಮಾರಿ ಎಂದು ಹೇಳಿದರು.
ಪ್ರವಾಹ ಬಂದಾಗ ಸರ್ವಪಕ್ಷ ಸಭೆ ಕರೆಯಬೇಕಿತ್ತು. ಸಭೆ ನಡೆಸದೆ, ಕೇಂದ್ರ ಸರ್ಕಾರದ ಬಳಿ ಹೋಗದೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ನಿಯಮದ ಅನುಸಾರ ಪರಿಹಾರ ಬಿಡುಗಡೆ ಮಾಡಿದೆ ಎಂದರು.
ಬಿಜೆಪಿ ಸರ್ಕಾರ ಆದೇಶ ಮಾಡಿಲ್ಲ:
ಶಾಲಾ ಆವರಣದಲ್ಲಿ ಹೊರಗಿನ ಸಂಘಟನೆಗಳಿಂದ ಕಾರ್ಯಕ್ರಮ ಮಾಡುವುದನ್ನು ನಿಷೇಧಿಸುವ ಬಗ್ಗೆ ಆಗಿನ ಸಿಎಂ ಜಗದೀಶ್ ಶೆಟ್ಟರ್ ಆದೇಶ ಮಾಡಿರುವುದಕ್ಕೆ ಸಾಕ್ಷಿ ಇಲ್ಲ. ಇದು ಅಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಿರಲಿಲ್ಲ. ಚಾಮರಾಜಪೇಟೆಯ ಒಂದು ಶಾಲೆಗೆ ಸಂಬಂಧಿಸಿದಂತೆ ಒಂದು ಆದೇಶವಾಗಿದೆ. ಇದನ್ನು ಎಲ್ಲಕ್ಕೂ ಅನ್ವಯಿಸಿ ಈಗಿನ ಸರ್ಕಾರ ಆದೇಶ ಮಾಡಿದೆ. ಜಗದೀಶ್ ಶೆಟ್ಟರ್ ಅಥವಾ ಅಂದಿನ ಸಚಿವರ ಸಹಿ ಇರುವ ಆದೇಶವಿದ್ದರೆ ಅದನ್ನು ಬಹಿರಂಗ ಮಾಡಲಿ ಎಂದು ಹೇಳಿದರು.
ಆರ್‌ಎಸ್‌ಎಸ್ ಆರಂಭವಾಗಿ 100 ವರ್ಷದ ಬಳಿಕ ಪಥಸಂಚಲನದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಬಂದಿದೆ. ಪ್ರತಿ ಶುಕ್ರವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಆಗುವುದಿಲ್ಲವೇ? ರಂಜಾನ್, ಈದ್ ಮಿಲಾದ್ ವೇಳೆ ರಸ್ತೆ ಬಂದ್ ಮಾಡುತ್ತಾರೆ. ಆಗ ಯಾರೂ ಅನುಮತಿ ಪಡೆದಿರುವುದಿಲ್ಲ. ಕೆಲವು ಕಡೆ ಮೆರವಣಿಗೆಯಲ್ಲಿ ಕತ್ತಿ ಹಿಡಿದು ಆಚರಣೆ ಮಾಡುತ್ತಾರೆ. ಅದನ್ನು ಶಸ್ತ್ರಾಸ್ತ್ರಗಳು ಎಂದು ಪರಿಗಣಿಸುವುದಿಲ್ಲ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಎಂದೂ ಯಾರಿಗೂ ಹಾನಿಯಾಗಿಲ್ಲ ಎಂದರು.ಇದನ್ನೂ ಓದಿ: ರಾಜ್ಯದ ಹಲವೆಡೆ ವರುಣಾರ್ಭಟ – ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನಡೆದ ಆರ್‌ಎಸ್‌ಎಸ್ (RSS) ವಿರುದ್ಧದ ಸಂಘರ್ಷ ಕಾಂಗ್ರೆಸ್‌ನಲ್ಲಿ (Congress) ಆಂತರಿಕ ಸಂಘರ್ಷ ಹುಟ್ಟು ಹಾಕಿತಾ ಎಂಬ ಪ್ರಶ್ನೆ ಈಗ ಎದ್ದಿದೆ.
ಹೌದು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿನಿಧಿಸುವ ಚಿತ್ತಾಪುರದ ಕ್ಷೇತ್ರದಲ್ಲಿ ಭಾನುವಾರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ಆದರೆ ಭಾನುವಾರ ರಾಜ್ಯದ ಹಲವಾರು ಜಿಲ್ಲೆಗಳ ನಗರಗಳಲ್ಲಿ ಯಾವುದೇ ವಿರೋಧ ಇಲ್ಲದೇ ಆರ್‌ಎಸ್‌ಎಸ್ ಪಥಸಂಚಲನ ನಡೆದಿದೆ.
ಸರ್ಕಾರಿ ಜಾಗಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆ ನಿಷೇಧಿಸಬೇಕೆಂಬ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಹಿರಿಯ ಸಚಿವರು ಸಿಎಂ ಸಿದ್ದರಾಮಯ್ಯ ಬಳಿ ಕಳೆದ ವಾರದ ಡಿನ್ನರ್ ಸಭೆಯ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಆರ್‌ಎಸ್‌ಎಸ್‌ಗೆ ನಾವು ನಿರ್ಬಂಧ ಹೇರಿದರೆ ಉಳಿದ ಧರ್ಮ, ಸಂಘಟನೆಗಳ ಕಾರ್ಯಕ್ರಮಗಳು ನಡೆಸಿದಾಗ ಅವುಗಳಿಗೆ ಹೇಗೆ ಅನುಮತಿ ನೀಡಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಇದರಿಂದ ಸರ್ಕಾರಿ ಅಧಿಕಾರಿಗಳಿಗೂ ದೊಡ್ಡ ತಲೆನೋವಾಗಲಿದೆ. ಕೋರ್ಟ್‌ಗಳಿಗೆ ಹೋದರೆ ಅದಕ್ಕೆ ಮತ್ತಷ್ಟು ಪ್ರಚಾರ ಸಿಗುತ್ತದೆ. ವಿವಾದವಾದರೆ ಮತ್ತೆ ಜಾಸ್ತಿ ಪ್ರಮಾಣದಲ್ಲಿ ಪೊಲೀಸ್ ಭದ್ರತೆ ನೀಡಬೇಕು. ಹೀಗಾಗಿ ಇಲ್ಲಿಯವರೆಗೆ ಹೇಗೆ ನಡೆದಿದಿಯೋ ಅದೇ ರೀತಿ ನಡೆಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕೆ ಬಹುತೇಕ ಸಚಿವರು ಸೈಲೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಚಿತ್ತಾಪುರ ಆಯ್ತು ಈಗ ಸೇಡಂ – ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಬ್ರೇಕ್
ಅದರಲ್ಲೂ ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಬಹಿರಂಗವಾಗಿಯೇ ಸರ್ಕಾರ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವಾಗ ರಸ್ತೆಯಲ್ಲೇ ನಮಾಜ್ ಮಾಡುತ್ತಾರೆ. ಹಾಗಾದರೆ ಅವರೆಲ್ಲ ಅನುಮತಿ ಪಡೆದು ನಮಾಜ್ ಮಾಡುತ್ತಾರಾ ಎಂದು ರಾಜಣ್ಣ ಪ್ರಶ್ನೆ ಮಾಡಿದ್ದಾರೆ.
ಸರ್ಕಾರಗಳು ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಬೆಳವಣಿಗೆ ನೋಡುವಾಗ ಬೇರೆ ಸಚಿವರಿಂದ ಬೆಂಬಲ ವ್ಯಕ್ತವಾಗದ ಕಾರಣ ಆರ್‌ಎಸ್‌ಎಸ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಏಕಾಂಗಿಯಾದ್ರಾ ಎಂಬ ಪ್ರಶ್ನೆ ಎದ್ದಿದೆ.
ಈ ಹಿಂದೆ 2023 ರಲ್ಲಿ ತಮಿಳುನಾಡು ಸರ್ಕಾರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಿರಲಿಲ್ಲ. ಕೊನೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬಳಿಕ ಆರ್‌ಎಸ್‌ಎಸ್ ಕಾರ್ಯಕರ್ತರು ಬಹಳ ವಿಜೃಂಭಣೆಯಿಂದ ಪಥ ಸಂಚಲನ ನಡೆಸುವ ಮೂಲಕ ತಮಿಳುನಾಡು ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.
ಉಡುಪಿ: ನಿಮ್ಮ ಮಕ್ಕಳನ್ನು ಆರ್‌ಎಸ್‌ಎಸ್‌ಗೆ ಸೇರಿಸಿದ್ದೀರಾ. ಅವರಿಗೆ ಲಾಠಿ, ಗನ್ ಟ್ರೈನಿಂಗ್ ಕೊಟ್ಟಿದ್ದೀರಾ ಎಂಬ ಕಾಂಗ್ರೆಸ್ ನಾಯಕರ ಟೀಕೆಗೆ ಬಿಜೆಪಿ ಶಾಸಕ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಗುಡುಗಿರುವ ಶಾಸಕ ಸುನಿಲ್ ಕುಮಾರ್, ನನ್ನ ತಂದೆ, ನಾನು ಮತ್ತು ನನ್ನ ಪುತ್ರ ಆರ್‌ಎಸ್‌ಎಸ್ ಸ್ವಯಂ ಸೇವಕರು. ನನ್ನ ತಂದೆ ಶಾಸಕ ಅಲ್ಲ, ನಾನು ನನ್ನ ಪುತ್ರನನ್ನು ಶಾಸಕ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟಿದ್ದಾರೆ. ಜೊತೆಗೆ ತಂದೆ ಮತ್ತು ಪುತ್ರ ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಬ್ಯಾನ್ ಮಾಡುವ ಸರ್ಕಾರದ ನಿರ್ಧಾರಕ್ಕೆ ಉಡುಪಿ ಜಿಲ್ಲೆಯ ಕಾರ್ಕಳದ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಸೆಡ್ಡು ಹೊಡೆದಿದ್ದಾರೆ. ಕಾರ್ಕಳ ಪೇಟೆಯಲ್ಲಿ ಇವತ್ತು RSS ಪಥಸಂಚಲನ ನಡೆದಿದೆ. ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಅನಂತಶಯನ ದೇವಸ್ಥಾನದವರೆಗೆ ಪರೇಡ್ ಮಾಡಿದರು. ಕಾರ್ಕಳ ಶಾಸಕ ಸುನಿಲ್ ಕುಮಾರ್, ಸಹಿತ ನೂರಾರು ಜನ ಭಾಗವಹಿಸಿದ್ದರು.
ರಾಯಚೂರು: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಪಿಡಿಓ (PDO) ಅಮಾನತು ಮಾಡಿದ್ದ ಸರ್ಕಾರದ ಕ್ರಮ ಖಂಡಿಸಿ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಹಾಗೂ ಕಾಂಗ್ರೆಸ್ ಜಟಾಪಟಿಯಲ್ಲಿ ಅಮಾನತಾಗಿರುವ ರಾಯಚೂರಿನ ಸಿರವಾರ ತಾಲೂಕಿನ ಪಿಡಿಓ ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಆಪ್ತ ಸಹಾಯಕ ಪ್ರವೀಣ ಕುಮಾರ್ ವಿಚಾರ ಈಗ ಅತ್ಯಂತ ಚರ್ಚೆಗೆ ಗ್ರಾಸವಾಗಿದೆ. ಲಿಂಗಸುಗೂರಿನಲ್ಲಿ ಪಿಡಿಓ ಪ್ರವೀಣ್ ಕುಟುಂಬ ಕಣ್ಣೀರಾಕಿ ಸರ್ಕಾರದ ಕ್ರಮಕ್ಕೆ ಅಸಮಧಾನ ವ್ಯಕ್ತಪಡಿಸಿದೆ.ಇದನ್ನೂ ಓದಿ: ಯಾದಗಿರಿ | ಅನ್ನಭಾಗ್ಯ ಅಕ್ಕಿ ಬಳಿಕ ಜೋಳ, ಅವಧಿ ಮೀರಿದ ಹಾಲಿನ ಪೌಡರ್ ಪ್ಯಾಕೆಟ್ ಸೇರಿ ಅಕ್ರಮ ಜಾಲ ಪತ್ತೆ
ಪ್ರವೀಣ್ ತಾಯಿ, ಪತ್ನಿ ನಮಗೆ ಅನ್ಯಾಯವಾಗಿದೆ ಅಂತ ಕಣ್ಣೀರಾಕಿದ್ದಾರೆ. ಪ್ರವೀಣ್ ಯಾವುದೇ ಅವ್ಯವಹಾರ ಮಾಡಿಲ್ಲ, ಪಥಸಂಚಲನಕ್ಕೆ ಹೋಗಿದ್ದೇ ದೊಡ್ಡ ತಪ್ಪಾ, ಈಗ ಮಾನಸಿಕವಾಗಿ ನೊಂದಿದ್ದಾನೆ. ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿಂದೆಯೂ ಪಥಸಂಚಲನದಲ್ಲಿ ಭಾಗವಹಿದ್ದರು ಅದರಲ್ಲಿ ತಪ್ಪೇನಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಪಥಸಂಚಲನ ಭಾಗವಹಿಸಿದ್ದಕ್ಕೆ ಕ್ರಮಾನಾ.. ಕೂಡಲೇ ಅಮಾನತು ಹಿಂಪಡೆಯಬೇಕು ಅಂತ ಪ್ರವೀಣ್ ತಾಯಿ ಸುರೇಖಾ ಪತ್ನಿ ಶ್ರೀದೇವಿ ಒತ್ತಾಯಿಸಿದ್ದಾರೆ.
ಇನ್ನೂ ಪಿಡಿಓ ಅಮಾನತನ್ನ ಶಾಸಕ ಮಾನಪ್ಪ ವಜ್ಜಲ್ ಖಂಡಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಗುಬ್ಬಿ ಮೇಲೆ ಬ್ರಹ್ಮಾಸ್ತç ಬಿಟ್ಟಿದ್ದಾರೆ. ಯಾವುದೇ ನೋಟಿಸ್ ಕೊಡದೇ ಬಿಜೆಪಿ ಶಾಸಕನ ಪಿಎ ಅಂತ ಪ್ರವೀಣನ್ನ ಅಮಾನತು ಮಾಡಲಾಗಿದೆ. ನಾಲ್ಕು ವೋಟು ಬರ್ತವೆ ಅಂದ್ರೆ ಆರ್‌ಎಸ್‌ಎಸ್‌ನವರನ್ನ ಕಾಂಗ್ರೆಸ್ ತನ್ನ ಪಕ್ಷಕ್ಕೆ ಸೆಳೆಯುತ್ತೆ. ಆರ್‌ಎಸ್‌ಎಸ್ ಕಾರ್ಯಕರ್ತ ಗೋವಿಂದ ನಾಯಕ್‌ನನ್ನ ಕಾಂಗ್ರೆಸ್‌ನವರು ಲಿಂಗಸುಗೂರು ತಾಲೂಕು ಅಧ್ಯಕ್ಷ ಮಾಡಿದ್ದಾರೆ. ಆದ್ರೆ ನನ್ನ ಆಪ್ತ ಸಹಾಯಕನನ್ನ ಅಮಾನತು ಮಾಡಿದ್ದಾರೆ. ಇನ್ನೂ ಎಂಟು ದಿನದಲ್ಲಿ ಅಮಾನತು ಆದೇಶ ವಾಪಸ್ ಪಡೆಯಬೇಕು ಅಂತ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ
ಮಂಗಳೂರು: ಆರ್‌ಎಸ್‌ಎಸ್ (RSS), ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ ಎಂದು ಶಾಸಕ ಮಂಜುನಾಥ ಭಂಡಾರಿ (Manjunath Bhandary) ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ (BJP) ಒಂದು ಪಾಕಿಸ್ತಾನ, ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರ್ಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಮೈದಾನ, ರಸ್ತೆ, ಶಾಲೆಗಳಲ್ಲಿ ಕಾರ್ಯಚಟುವಟಿಕೆ ನಡೆಸಲು ಅನುಮತಿ ಬೇಕು ಎಂದು ಅಷ್ಟೇ. ನಿಮಗೆ ಅನುಮತಿ ಪಡೆಯಲು ಏನು ಸಮಸ್ಯೆಯಿದೆ? ಆರೆಸ್ಸೆಸ್ ಸಂಘಟನೆಗೆ 100 ವರ್ಷಗಳು ಆಯ್ತು ಅಂತ ದೇಶಾದ್ಯಂತ ಪಥಸಂಚಲನ ನಡೆಸ್ತೀರಿ. ಇಷ್ಟು ವರ್ಷಗಳಲ್ಲಿ ಯಾಕೆ ಸಂಘಟನೆಯನ್ನು ನೋಂದಣಿ ಮಾಡಿಸಿಕೊಂಡಿಲ್ಲ? ನೋಂದಣಿ ಮಾಡಿಸಿಕೊಳ್ಳದ ಸಂಘಟನೆಗೆ ಎಲ್ಲಿಂದ ಹಣ ಬರುತ್ತದೆ? ಖಾತೆಯಲ್ಲಿ ಎಷ್ಟು ಹಣ ಇದೆ? ಇದರ ತರಬೇತಿ ಯಾವ ರೀತಿ ನಡೆಯುತ್ತೆ? ಅಂತ ಸಂವಿಧಾನದಲ್ಲಿ ಯಾಕೆ ಕೇಳಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ
ಆರೆಸ್ಸೆಸ್ ಒಂದು ಸಂಘಟನೆಯೇ ಅಲ್ಲ. ಅದೊಂದು ಸಂಘಟನೆ ಆಗಿದ್ದರೆ ಅದಕ್ಕೆ ಕೆಲವೊಂದು ಮಾನದಂಡಗಳಿವೆ. ಮುಖ್ಯವಾಗಿ ನೋಂದಣಿ ಮಾಡಿರಬೇಕು. ಅದ್ಯಾವುದೂ ಇಲ್ಲದ ಆರೆಸ್ಸೆಸ್ ಮತ್ತು ಇತರ ಖಾಸಗಿ ಸಂಘಟನೆಗಳಿಗೆ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸರ್ಕಾರ ನಿಷೇಧ ಹೇರಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ನಿರ್ಧಾರ ಸರಿಯಾಗಿಯೇ ಇದೆ. ಅದನ್ನು ನಾನು ಸಹಿತ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುತ್ತೇವೆ ಎಂದರು.
ವಿದ್ಯಾರ್ಥಿ ಜೀವನದಿಂದಲೇ ನಾನು ಆರೆಸ್ಸೆಸ್ ಬಿಜೆಪಿ ವಿರುದ್ಧ ಹೋರಾಟ ಮಾಡಿದವನು. ಯಡಿಯೂರಪ್ಪ ವಿರುದ್ಧ ಮಾತಾಡಿ ಎದುರು ಹಾಕಿಕೊಂಡವನು ನಾನು. ನಾವು ಕರಾವಳಿ ಕಾಂಗ್ರೆಸ್ಸಿಗರು ಪ್ರತಿಯೊಬ್ಬರೂ ಖರ್ಗೆ ಅವರ ಜೊತೆಗಿದ್ದೇವೆ. ಇಲ್ಲಿ ಆರೆಸ್ಸೆಸ್ ಬ್ಯಾನ್ ಆಗಿದೆ ಎಂದು ಬೊಬ್ಬೆ ಹೊಡೆಯುವವರು ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇಲ್ಲಿ ಆರೆಸ್ಸೆಸ್ ಮಾತ್ರವಲ್ಲ ಯಾವುದೇ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸುವುದಕ್ಕೆ ಅನುಮತಿ ಪಡೆಯಲೇಬೇಕಾಗಿದೆ. ಮಡಿಕೇರಿಯಲ್ಲಿ ಮಕ್ಕಳಿಗೆ ಗನ್ ತರಬೇತಿ ಕೊಟ್ಟಿದ್ದು, ನಾವೆಲ್ಲರೂ ನೋಡಿದ್ದೇವೆ. ಬಿಜೆಪಿ ಆರೆಸ್ಸೆಸ್ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಶಿಕ್ಷಣಕ್ಕೆ ಉದ್ಯೋಗಕ್ಕೆ ಕಳುಹಿಸಿ ಇಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಸ್ತ್ರ ಕೊಟ್ಟು ಪ್ರಚೋದನೆ ಮಾಡುವುದು ಎಲ್ಲಿಯ ನ್ಯಾಯ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್, ಬಂಟಿಂಗ್ ತೆರವು
ದಿನೇಶ್ ಅಮೀನ್ ಮಟ್ಟು ಆರೋಪ ಮಾಡಿರುವಂತೆ ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್‌ನ ಯಾವುದೇ ರೀತಿಯ ಕಾರ್ಯಕ್ರಮ ಇಲ್ಲಿನವರೆಗೆ ನಡೆದಿಲ್ಲ. ಸೃಷ್ಟಿ ಅಂತ ಒಂದು ಪ್ರಾಜೆಕ್ಟ್ ಕಾರ್ಯಕ್ರಮ ನಡೆದಿತ್ತು. ಅದು ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಒಟ್ಟು ಸೇರುವಿಕೆಯಲ್ಲಿ ನಡೆದಿದ್ದ ವಿಜ್ಞಾನ ಮಾಡೆಲ್ ಕಾರ್ಯಕ್ರಮ. ಅದರಲ್ಲಿ ಎಬಿವಿಪಿ ಕೂಡ ಪಾಲು ಪಡೆದಿತ್ತು. ಅಂದಿನ ಮುಖ್ಯಮಂತ್ರಿ ಸದಾನಂದ ಗೌಡ ಅದರಲ್ಲಿ ಪಾಲ್ಗೊಂಡ ಕಾರಣ ನಾನು ಭಾಗವಹಿಸಿದ್ದೆ. ಎಬಿವಿಪಿ ಸಮ್ಮೇಳನ, ಬೈಠಕ್ ನಡೆದಿದೆ ಎನ್ನುವವರು ಅದಕ್ಕೆ ಆಧಾರ ತೋರಿಸಲಿ. ಹೀಗೆ ಹೇಳುವವರು ಯಾವ ನೈತಿಕ ಆಧಾರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದ್ರು? ಇಂದಿರಾ ಗಾಂಧಿ ಬಗ್ಗೆ ಬರೆದ್ರು, ರಾಜೀವ್ ಗಾಂಧಿ ಬಗ್ಗೆ ಬರೆದ್ರು ಆದ್ರೂ ಸಿದ್ಧಾಂತ ಗೊತ್ತಿಲ್ಲದೇ ಎಂಎಲ್‌ಸಿ ಟಿಕೆಟ್ ಕೊಡಿ ಅಂತ ಕೇಳಿದ್ರು? ಮುಂದೆ ಇಂತಹ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಿಳಾ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ವಿಕಾಸ್ ಶೆಟ್ಟಿ, ನೀರಜ್ ಪಾಲ್, ಆರ್.ಪದ್ಮರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಬಾಗಲಕೋಟೆ: ಮುಂದಿನ ಸಿಎಂ ಸತೀಶಣ್ಣನೇ (Satish Jarkiholi) ಆಗ್ಲಿ ಎಂದು ಬಿಜೆಪಿ (BJP) ಮಾಜಿ ಸಚಿವ ರಾಜು ಗೌಡ (Raju Gowda) ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.
ಮುಧೋಳ ನಗರದಲ್ಲಿ ವೀರ ಜಡಗಣ್ಣ ಬಾಲಣ್ಣ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ಈ ವೇಳೆ, ಸ್ವತಂತ್ರ ವೀರ ಯೋಧ ಜಡಗಣ್ಣ ಬಾಲಣ್ಣಗೆ ಜಾರಕಿಹೊಳಿಯವರನ್ನು ಹೋಲಿಸಿ, ಹಾಡಿ ಹೊಗಳಿದ್ದಾರೆ. ನಮ್ಮ ಸಮಾಜಕ್ಕೆ ಸತೀಶಣ್ಣ (ಸತೀಶ್ ಜಾರಕಿಹೊಳಿ) ಜಡಗಣ್ಣ ಬಾಲಣ್ಣ ಇದ್ದಂತೆ. ಮಾತು ಕಡಿಮೆ ಆದ್ರೆ ಪ್ಲ್ಯಾನ್ ಹಾಕಿದ್ರೆ ಕರೆಕ್ಟ್ ಏಟು ಹಾಕ್ತಾನೆ ನಮ್ಮಣ್ಣ. ವೀರ ಯೋಧ ಜಡಗಣ್ಣ ಬಾಲಣ್ಣ ಅವ್ರು ಬ್ರಿಟೀಷರ ಎದುರು ಶಸ್ತ್ರತ್ಯಾಗ ಮಾಡಿರಲಿಲ್ಲ. ನೀನು ಶಸ್ತ್ರ ತ್ಯಾಗ ಮಾಡಬೇಡ ಎಂದಿದ್ದಾರೆ. ಇದನ್ನೂ ಓದಿ: ಪಕ್ಷ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ
ಈ ಬಾರಿ ನನಗೆ ಮುಖ್ಯಮಂತ್ರಿ ಆಸೆ ಇಲ್ಲ, ಮುಂದಿನ ಸಾರಿ ಆಗ್ತೇನೆ ಎಂದು ಹೇಳುತ್ತಿದ್ದೀಯ. ಅದೆಲ್ಲ ಬೇಡ ಇದೇ ಡಿಸೆಂಬರ್‍ನಲ್ಲಿ ಮುಖ್ಯಮಂತ್ರಿ ಆಗು. ನಿಮ್ಮನ್ನು ಮುಖ್ಯಮಂತ್ರಿ ಆಗಿ ನೋಡಬೇಕೆಂಬ ಆಸೆ ನಮ್ಮದು. ನಾವು ನಿಮ್ಮ ರಕ್ತವನ್ನೇ ಹಂಚಕೊಂಡು ಹುಟ್ಟೀವಿ, ನಾವೇನು ಹಗುರಿಲ್ಲ ಸುರಪುರ ಬ್ಯಾಡ್ರು. ಹಿಂದೆ ಬ್ರಿಟೀಷರನ್ನೂ ಬಿಟ್ಟಿಲ್ಲ, ಔರಂಗಜೇಬನನ್ನೂ ಬಿಟ್ಟಿಲ್ಲ ಎಂದಿದ್ದಾರೆ.
– ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮುನಿರತ್ನ; ವೇದಿಕೆಯಲ್ಲೇ ಕಿಚಾಯಿಸಿದ ಸಿದ್ರಾಮಯ್ಯ
– ಗನ್‌ಮ್ಯಾನ್ ಕೊಡುವಂತೆ ಶಾಸಕರ ಬೇಡಿಕೆ
ಬೆಂಗಳೂರು: ಇಲ್ಲಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ನಡೆದ ʻಕನಕ ಕಾವ್ಯ ದೀವಿಗೆ ಕನ್ನಡ ನಾಡ ನುಡಿ ಉತ್ಸವʼ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಸಂತೋಷದಿಂದಲೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ, ಸಿಎಂ ಜೊತೆಗೆ ಆಪ್ತ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಾಗ ಮುನಿರತ್ನ ಅವರು ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಬಳಿಕ ವೇದಿಕೆಯಲ್ಲಿ ಮಾತನಾಡಿದ ಶಾಸಕರು, ಭಾಷಣದ ಆರಂಭದಲ್ಲಿ ನೆಚ್ಚಿನ ಸಿಎಂ ಸಿದ್ದರಾಮಯ್ಯ ಎಂದು ಸಂಬೋಧನೆ ಮಾಡಿದರು. ಅಣ್ಣನ ನೋಡಬೇಕು ಎಂದು 5 ಗಂಟೆಗೆ ಬಂದಿದ್ದೆ ಎಂದು ಸಿದ್ದರಾಮಯ್ಯ ಅವರನ್ನುದ್ದೇಶಿಸಿ ಮಾತನಾಡಿದ್ರು.
ಗನ್ ಮ್ಯಾನ್‌ಗೆ ಬೇಡಿಕೆ
ಮುಂದುವರಿದು… ಜ್ಯೋತಿ ಹೊರತಾಗಿ ಬೆಂಕಿಯ ಜೊತೆ ಬದುಕೊಕಾಗಲ್ಲ. ಇವತ್ತು ಜ್ಯೋತಿಗೆ ನಾವು ಎಣ್ಣೆ ಹಾಕ್ತೇವೆ. ಆದ್ರೆ ಬೆಂಕಿಗೆ ಫೈರ್ ಇಂಜಿನ್ ತರ್ತೇವೆ. ಸಿದ್ದರಾಮಯ್ಯನವಬರೇ ನೀವು ಜ್ಯೋತಿ ಇದ್ದಂತೆ ಯಾವಾಗಲೂ ಬೆಳಗುತ್ತಿರಬೇಕು, ಒಳ್ಳೆಯ ಕೆಲಸ ಮಾಡ್ತಿದ್ದೀರಿ. ನನಗೆ ಸಂತಾಪ ಸೂಚಿಸಿದಾಗ ಸಿದ್ದರಾಮಯ್ಯ ಜೊತೆ ಇದ್ರು ಎಂದು ಹೇಳ್ತಾರಲ್ಲ. ಅಂತಹ ಒಳ್ಳೆಯ ನಾಯಕರೊಂದಿಗೆ ಇದ್ದಿದ್ದಕ್ಕೆ ನನಗೆ ಸಂತೋಷ ಇದೆ. ಅಣ್ಣ ನಮ್ಮ ಕ್ಷೇತ್ರದಲ್ಲಿ ಹಲವು ಕೆಲಸ ನಿಂತೋಗಿದೆ. ನನ್ನ ಕ್ಷೇತ್ರದ ಕೆಲವು ಕೆಲಸ ನಿಂತು ಹೋಗಿದೆ. ನನ್ನ ಕ್ಷೇತ್ರಕ್ಕೆ ಸಹಾಯ ಮಾಡಿ, ನನ್ನ ಕ್ಷೇತ್ರಕ್ಕೆ ಅನುದಾನ ಕೊಡಿ. ಗನ್ ಮ್ಯಾನ್ ಕೊಟ್ಟಿಲ್ಲ ನನಗೆ, ನಾನು ಓಡಾಡಬಾರದು ಎಂದು ಗನ್ ಮ್ಯಾನ್ ಕೊಟ್ಟಿಲ್ಲ. ಮನೆಲಿ ಇರಲಿ, ಹೊರಗೆ ಬಂದ್ರೆ ಮೊಟ್ಟೆಯಲ್ಲಿ ಹೊಡಿಬಹುದು ಎಂದು ಹೀಗೆ ಮಾಡಿದ್ದಾರೆ. ಪ್ರಜಾಪ್ರಭುತ್ವ ರಾಜ್ಯ ಇದು ನನಗೆ ಗನ್ ಮ್ಯಾನ್ ಕೊಡಿ ಎಂದು ಬೇಡಿಕೆಯಿಟ್ಟರು.
ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಏಯ್ ಮುನಿರತ್ನ, ವೃಷಭಾವತಿ ಪ್ರೊಡಕ್ಷನ್, ಮುನಿರತ್ನ 2013-18ರ ತನಕ ಒಳ್ಳೆಯವನಾಗಿದ್ದ ಎನ್ನುತ್ತಿದ್ದಂತೆ ಬೆಂಬಲಿಗರೂ ಈಗಲೂ ಒಳ್ಳೆಯವರೇ ಎಂದರು. ಅದಕ್ಕೆ ಸಿಎಂ ನಗುತ್ತಲೇ ಓಹೋ ಈಗಲೂ ಒಳ್ಳೆಯವನಾ..? ಆಯ್ತು. ಆಗ ನಾನು ಸಹಾಯ ಮಾಡಿದ್ದೆ.. ನೀನು ಅದನ್ನ ಹೇಳೋದೇ ಇಲ್ಲ. ನಮ್ಮನ್ನ ಬಿಟ್ಟು ಅಲ್ಲಿಗೆ ಹೋಗ್ಬಿಟ್ಟ ಎಂದು ಕಿಚಾಯಿಸಿದರು.