ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಮನವಿ ಸಲ್ಲಿಸಿದ್ದಾರೆ. ಆದ್ರೆ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಈಗ ಕಾಂಗ್ರೆಸ್ ಶಾಸಕರೇ (Congress MLA) ಕೌಂಟರ್ ಕೊಡುವ ಕೆಲಸ ಮಾಡಿದ್ದಾರೆ.
ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ (MY Patil) ಅನುದಾನಿತ ಶಾಲೆಯಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆದಿದೆ. ಅಫಜಲಪುರ್ ಪಟ್ಟಣದ ಬಸವೇಶ್ವರ ವೃತದ ಬಳಿಯಿರುವ ಶಾಸಕರ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ನಿನ್ನೆ (ಅ.12) ಸಂಜೆ ಆಕರ್ಷಕ ಆರ್‌ಎಸ್‌ಎಸ್ ಪಥಸಂಚಲನ ನಡೆಸಲಾಗಿದೆ.
ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಳಿಕ ಶಾಲಾ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ. ಇದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
ನಿಗಾ ಇಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ
ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಭಾನುವಾರ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.
ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.
ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಅ. 4ರಂದು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಶೀಲಿಸಿ ಕೂಡಲೆ ಅಗತ್ಯ ಕ್ರಮ ವಹಿಸಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ಗೂ ತಾಲಿಬಾನ್‌ಗೂ (Taliban) ಏನೂ ವ್ಯತ್ಯಾಸ ಇಲ್ಲ. ಸರ್ಕಾರಿ ಶಾಲೆಯಲ್ಲಿ ಬೈಠಕ್ ಆಗಬಾರದು. ನಮ್ಮದು ಬಸವ ತತ್ವದ ಮೇಲೆ ನಡೆಯುವ ಸರ್ಕಾರ ಅಂದಿದ್ದಾರೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 12, 2025
ನಿಗಾ ಇಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ
ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.
ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.
– ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ 29 ಸ್ಥಾನ ಹಂಚಿಕೆ
ಪಾಟ್ನಾ: ಬಿಹಾರ ಚುನಾವಣೆ ಘೋಷಣೆಯಾದ ದಿನದಿಂದಲೂ ಕಾಡುತ್ತಿದ್ದ ಸಮಸ್ಯೆ ಈಗ ಬಗೆಹರಿದಿದೆ. ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರದ ಮಿತ್ರ ಪಕ್ಷಗಳಲ್ಲಿ ತಲೆದೋರಿದ್ದ ಸೀಟು ಹಂಚಿಕೆ (Bihar Seat Share) ಕಗ್ಗಂಟು ಕಡೆಗೂ ಇತ್ಯರ್ಥವಾಗಿದೆ. ಅದರಂತೆ ಬಿಜೆಪಿ, ಎನ್‌ಡಿಎ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ (Chirag Paswan) ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
हम एनडीए के साथियों ने सौहार्दपूर्ण वातावरण में सीटों का वितरण पूर्ण किया।
ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಬಿಡುಗಡೆ ಮಾಡಿದ್ದಾರೆ. 243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರದಲ್ಲಿ ಎನ್‌ಡಿಎ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಯು ತಲಾ 101 ಸೀಟುಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ರಾಷ್ಟ್ರೀಯ ಲೋಕ ಮೋರ್ಚಾ ಹಾಗೂ ಜಿತನ್ ರಾಮ್ ಮಾಂಝಿಯವರ ಹಿಂದೂಸ್ತಾನ್ ಆವಮ್ ಮೋರ್ಚಾ ಪಕ್ಷಗಳು ತಲಾ 6 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬಗೆಹರಿದ ದುಗುಡ
ಲೋಕಜನಶಕ್ತಿ ಪಾರ್ಟಿಯ ಮುಖ್ಯಸ್ಥ ಚಿರಾಗ್ ಪಾಸ್ವಾನ್ 40-45 ಸ್ಥಾನಗಳಿಗೆ ಬೇಡಿಕೆಯಿಡುತ್ತಾ ಬಂದಿದ್ದರು. ಆದ್ರೆ ಬಿಜೆಪಿ 25 ಸ್ಥಾನಗಳನ್ನು ನೀಡಲು ಮಾತ್ರವೇ ಒಪ್ಪಿಕೊಂಡಿತ್ತು. ಈ ನಡುವೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರ ಜನ್ ಸೂರಜ್ ಪಕ್ಷ ಪಾಸ್ವಾನ್ ಅವರನ್ನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿತ್ತು. ಸೀಟು ಹಂಚಿಕೆ ಕುರಿತು ಎಲ್‌ಜೆಪಿ ತನ್ನ ನಿರ್ಧಾರ ಬದಲಾಯಿಸುವಂತೆ ಮನವೊಲಿಸಲು ಧರ್ಮೇಂದ್ರ ಪ್ರಧಾನ್ ಹಲವಾರು ಸುತ್ತಿನ ಸಭೆ ನಡೆಸಿದರು. ಕೊನೆಗೆ ಜೆಡಿಯು, ಬಿಜೆಪಿ ಒಮ್ಮತದ ಮೇರೆಗೆ 29 ಸ್ಥಾನಗಳನ್ನ ಹಂಚಿಕೆ ಮಾಡಲಾಯಿತು.
ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್ ಕುಮಾರ್ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. 2024ರಲ್ಲಿ ಮತ್ತೆ ನಿತೀಶ್ ಕುಮಾರ್ ಮಹಾಘಟಬಂಧನ್ ಜೊತೆಗಿನ ಸಂಬಂಧ ಕಡಿದುಕೊಂಡು ಎನ್‌ಡಿಎ ಜೊತೆಗೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.
ಬೆಂಗಳೂರು: ಡಿಸಿಎಂ ಡಿಕೆಶಿ ವರ್ಸಸ್ ಮುನಿರತ್ನ (DK Shivakumar Vs Munirathna) ನಡುವೆ ಮತ್ತೆ ಮಾತಿನ ಡಿಶುಂ ಡಿಶುಂ ಜೋರಾಗಿದೆ. ರಾಜಕೀಯ ಹಾದಿ ರಂಪ ಬೀದಿ ರಂಪ ಮಾಡಿಕೊಂಡಿದ್ದಾರೆ. ಕರಿ ಟೋಪಿ ಕಲಹ..! ಜಗಳ..ಜಟಾಪಟಿ ಜಿದ್ದಿಗೆ ಜೆ.ಪಿ.ಪಾರ್ಕ್ ಸಾಕ್ಷಿ ಆಯ್ತು. ಎಲ್ಲರೆದುರೇ ಹಗೆತನ ಪ್ರದರ್ಶನ ಆಗಿದ್ದು, ಡಿಕೆಶಿಗೆ ಸ್ಥಳದಲ್ಲೇ ಕೌಂಟರ್ ಕೊಟ್ಟಿದ್ದಾರೆ. ಹಾಗಾದ್ರೆ ಕಾಲು ಕೆರೆದು ಜಗಳ ತೆಗೆದ್ರಾ ಡಿಕೆಶಿ? ಏಯ್ ಕರಿ ಟೋಪಿ ಎಂಎಲ್‌ಎ ಎಂದು ಕರೆದಿದ್ದು ಏಕೆ? ಹಳೇ ದುಷ್ಮನಿಗಳ ನಯಾ ವಾರ್ ಸೀನ್ ಟು ಸೀನ್ ರೋಚಕ ಸ್ಟೋರಿ ಇಲ್ಲಿದೆ ನೋಡಿ.
ಗೇಲಿ.. ಅಪಹಾಸ್ಯ.. ಲೇವಡಿ.. ಕುಚೋದ್ಯ.. ಕಿಚಾಯಿಸಿದ ಡಿಕೆ.. ಕೋಪಗೊಂಡ ಮುನಿರತ್ನ.. ಬಹಿರಂಗ ವೇದಿಕೆಯಲ್ಲೇ ಡಿಕೆಶಿ ವರ್ಸಸ್ ಮುನಿ ಡೈಲಾಗ್ ವಾರ್. ಕುಂದು-ಕೊರತೆ ಆಲಿಸುವ ಸಭೆಯಲ್ಲಿ ಅತಿರಂಜನೆಯ ಪ್ರಹಸನ. ಇವತ್ತು ಬೆಂಗಳೂರಿನ ಜೆಪಿ ಪಾರ್ಕ್ ನಲ್ಲಿ (Bengaluru JP Park) ದೊಡ್ಡ ಹೈಡ್ರಾಮಾವೇ ನಡೆಯಿತು.
ಹಳೆ ದುಷ್ಮನಿ. ಹೊಸ ದಂಗಲ್ ಜೋರಾಗಿತ್ತು. ಬೇಕಂತಲೇ ಕೆಣಕಿದ ಡಿಕೆ. ಸೆಟೆದು ನಿಂತ ಮುನಿರತ್ನ. ಗಣವೇಷದಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದ ಮುನಿರತ್ನರನ್ನ `ಕರಿಟೋಪಿ ಎಂಎಲ್‌ಎ’ (Kari Topi MLA) ಬಾ ಎಂದು ಡಿಕೆಶಿ ಅಣಕಿಸಿದ್ರು. ಈ ವೇಳೆ ಕೋಪಗೊಂಡು ಮುನಿರತ್ನ ವೇದಿಕೆಗೆ ನುಗ್ಗಿದ್ರು. ಆಗ ಗಲಾಟೆ ಜೋರಾಯ್ತು.
ಯೆಸ್, ಜೆ.ಪಿ ಪಾರ್ಕ್‌ನಲ್ಲಿ ಇವತ್ತು ಡಿಕೆಶಿ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ರು. ಆದ್ರೆ ಸ್ಥಳೀಯ ಶಾಸಕ, ಸಂಸದರಿಗೆ ಆಹ್ವಾನ ಇಲ್ಲ ಎಂದು ಮುನಿರತ್ನ ಆಕ್ರೋಶ ಹೊರಹಾಕಿದ್ರು. ನಡಿಗೆ ಮುಗಿಸಿ ವೇದಿಕೆ ಕಾರ್ಯಕ್ರಮಕ್ಕೆ ಡಿಕೆಶಿ ಅಗಮಿಸಿದಾಗ ಮುನಿರತ್ನ ಪ್ರೋಟೋಕಾಲ್ ಪ್ರಶ್ನಿಸಿದ್ದಾರೆ. ಆಗ ಮೈಕ್ ಕಿತ್ತುಕೊಂಡು ಮುನಿರತ್ನ ಆಕ್ರೋಶ ಹೊರಹಾಕ್ತಾರೆ. ಆದ್ರೆ ಡಿಕೆಶಿ ಅಮೇಲೆ ಮಾತಾಡೋಣ ಎಂದಷ್ಟೇ ಹೇಳ್ತಾರೆ. ಅಲ್ಲಿ ನಡೆದಿದ್ದೇನು..?
ಮುನಿರತ್ನ: ಒಂದೇ ಒಂದು ನಿಮಿಷ ಮೈಕ್ ಕೊಡಿ ಡಿಕೆಶಿ: ಕೂತುಕೊಳ್ಳಿ, ಅಮೇಲೆ ಮಾತಾಡೋಣ ಮುನಿರತ್ನ: ನೀವ್ ಮೈಕ್ ಕೊಡಿ ನಾನ್ ಮಾತಾಡ್ತೀನಿ ಮುನಿರತ್ನ: ಎಲ್ಲ ಮತದಾರ ದೇವರುಗಳಿಗೆ ನಮಸ್ಕಾರ, ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇಲ್ಲ, ಆದರೂ ಬೆಂಗಳೂರಿನ ಓರ್ವ ಪ್ರಜೆಯಾಗಿ ಬಂದಿದ್ದೇನೆ, ನಿಮ್ಮ ಜೊತೆ ನಾನು ಕೂತುಕೊಳ್ತೇನೆ. ಮುನಿರತ್ನ: ಇದು ಕರ್ನಾಟಕ ರಾಜ್ಯ ಸರ್ಕಾರದ ಕಾರ್ಯಕ್ರಮ.. ಒಬ್ಬ ಶಾಸಕನಿಗೆ ಏನು ಗೌರವ ಕೊಡಬೇಕೋ ಕೊಟ್ಟಿದ್ದಾರೆ. ಅವರು ಆಹ್ವಾನ ಮಾಡಿದ್ದಾರೆ ಅದಕ್ಕೆ ಸಂತೋಷ. ಒಬ್ಬ ಸಂಸದರು ಇಲ್ಲಿ ಇಲ್ಲ. ಶಾಸಕರು ಇಲ್ಲ. ಇದು ಸಾರ್ವಜನಿಕರ ಕುಂದುಕೊರತೆ ಸಭೆನಾ ಅಂತಾ ನನಗೆ ಗೊತ್ತಿಲ್ಲ. ನೀವು ನನಗೆ ಅವಮಾನ ಮಾಡ್ತಿರೋದು ಮೊದಲನೇ ತಪ್ಪು. ಇದು ಸರ್ಕಾರದ ಕಾರ್ಯಕ್ರಮ. ಮುಖ್ಯ ಆಯುಕ್ತರೇ ಈವರೆಗೂ ನನಗೆ ಆಹ್ವಾನ ಕೊಟ್ಟಿಲ್ಲ. ನಿಮಗೆ ಗೊತ್ತಿರಲಿ. ರಾಜಕೀಯನ ಆಮೇಲೆ ಮಾತಾಡ್ರಿ. ಡಿಕೆಶಿ: ನಾವು ಆಮೇಲೆ ಮಾತಾಡೋಣ..
ಮುನಿರತ್ನ: ರೀ ಒಬ್ಬ ಎಂಪಿ ಫೋಟೋ ಇಲ್ಲ. ಒಬ್ಬ ಎಂಎಲ್‌ಎ ಫೋಟೋ ಇಲ್ಲದೆ ಇದು ಒಂದು ಪಬ್ಲಿಕ್ ಕಾರ್ಯಕ್ರಮನಾ… ಇದು ಸಾರ್ವಜನಿಕರ ಕುಂದುಕೊರತೆ ಕಾರ್ಯಕ್ರಮನಾ… ಅಥವಾ ಇದು ಕಾಂಗ್ರೆಸ್ ಕಾರ್ಯಕ್ರಮನಾ.. ಇದು ಹೆಂಗೇ ಸಾರ್ವಜನಿಕರ ಕಾರ್ಯಕ್ರಮ ಆಗುತ್ತೆ?
ಹೀಗೆ ಮುನಿರತ್ನ ವೇದಿಕೆಯ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಡಿಕೆಶಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ರು. ಆಗ ಮುನಿರತ್ನ ಅಲ್ಲೇ ಕುಳಿತು ಪ್ರತಿಭಟನೆ ನಡೆಸಲು ಮುಂದಾದ್ರು. ಆಗ ಡಿಕೆಶಿ ಬೆಂಬಲಿಗರು ನುಗ್ಗಲು ಯತ್ನಿಸಿದ್ರು. ತಕ್ಷಣ ಪೊಲೀಸರು ಮುನಿರತ್ನರನ್ನ ಹಿಡಿದುಕೊಂಡು ಕಾರ್ಯಕ್ರಮ ಸ್ಥಳದಿಂದ ಹೊರಗೆ ಬರಲು ಯತ್ನಿಸಿದ್ರು. ಆಗ ಒಂದ್ಕಡೆ ಡಿಕೆ ಡಿಕೆ ಘೋಷಣೆ ಮೊಳಗಿದ್ರೆ, ಇನ್ನೊಂದು ಕಡೆ ಆರ್‌ಎಸ್‌ಎಸ್ ವಿರೋಧಿ ಡಿಕೆ ಅಂತಾ ಘೋಷಣೆ ಕೂಗಿದ್ರು. ಆಗ ಪರಿಸ್ಥಿತಿ ಬಿಗಾಡಾಯಿಸಿತು.
ಒಟ್ನಲ್ಲಿ ಡಿಸಿಎಂ, ಎಂಎಲ್‌ಎ ನಡುವಿನ ವೈಯುಕ್ತಿಕ ವಾರ್ ಕರಿಟೋಪಿ ಕೂಗಿನತ್ತ ತಿರುಗಿದ್ದು, ಡಿಸಿಎಂ, ಮುನಿರತ್ನ ಗಲಾಟೆ ಟ್ವಿಸ್ಟ್ ಪಡೆದುಕೊಂಡಿದ್ದು ಸದ್ಯಕ್ಕೆ ಎಂಡ್ ಆಗುವ ಲಕ್ಷಣ ಇಲ್ಲ ಅನ್ಸುತ್ತೆ.
ಬೆಂಗಳೂರು: ಡಿಕೆಶಿ- ಮುನಿರತ್ನ ನಡುವೆ ಮುಗಿಯದ ರಾಜಕೀಯ ಕದನ. ಜೆ.ಪಿ.ಪಾರ್ಕ್‌ನಲ್ಲಿ (JP Park) ನಡೆದ ಕರಿಟೋಪಿ ಕಲಹಕ್ಕೆ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ಡಿಕೆಶಿ ವಿರುದ್ಧ ಮುನಿರತ್ನ (Munirathna) ಆಕ್ರೋಶ ಹೊರಹಾಕಿದ್ರೆ, ಗಲಾಟೆ ಮಾಡಲು ಬಂದಿದ್ದಾರೆ ಎಂದು ಡಿಕೆಶಿ (DK Shivakumar) ಟಾಂಗ್ ಕೊಟ್ಟಿದ್ದಾರೆ.
ಜೆ.ಪಿ.ಪಾರ್ಕ್‌ನಲ್ಲಿ ನಡೆದ ಕರಿಟೋಪಿ ಕಲಹ ಘಟನೆಗೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. ವೇದಿಕೆಯಲ್ಲಿ ಡಿಕೆಶಿ ಕೈಯಿಂದಲೇ ಮೈಕ್ ಕಿತ್ತುಕೊಂಡು ಆಕ್ರೋಶ ಹೊರಹಾಕಿದ ಮುನಿರತ್ನ ವಿರುದ್ಧ ಡಿಕೆಶಿ ಮಾತನಾಡಿದ್ದಾರೆ. ಸ್ಥಳೀಯ ಎಂಎಲ್‌ಎಗೆ ತಾಳ್ಮೆ ಕಡಿಮೆ. ಈ ಕಾರ್ಯಕ್ರಮ ಹಾಳು ಮಾಡೋಕೆ ಬಂದಿದ್ದಾರೆ. ಇಂಥವರನ್ನ ಗೆಲ್ಲಿಸಿದ್ದೀರಲ್ಲ ನಿಮ್ಮ ತಪ್ಪು. ಮುಂದೆ ಹೀಗೆ ಮಾಡಬೇಡಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಎಲ್ಲಾ ಚಟುವಟಿಕೆ ಬ್ಯಾನ್?
ಇದೇ ವೇಳೆ ರಾಜರಾಜೇಶ್ವರಿನಗರದ ಪರಾಜಿತ ಅಭ್ಯರ್ಥಿ ಕುಸುಮಾ ಮಾತನಾಡಿ, ಕಾರ್ಯಕ್ರಮಕ್ಕೆ ಶಾಸಕರು ಗಲಾಟೆ ಮಾಡಲೆಂದೇ ಬಂದಿದ್ದಾರೆ. ಗಲಾಟೆ ಅನ್ನೋದು ಶಾಸಕರಿಗೆ ಅಭ್ಯಾಸ ಆಗಿದೆ. ಅವಮಾನ ಮಾಡೋ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. ರಾಯಚೂರಿನಲ್ಲಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಡಿಕೆಶಿ ಪರ ಬ್ಯಾಟಿಂಗ್ ನಡೆಸಿದ್ದು, ಕರಿಟೋಪಿ ಎಂದು ಕರೆದಿರೋದು ಸಲಿಗೆ ಅಂತಾ ಟಾಂಗ್ ಕೊಟ್ಟರು. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ
ಇದೆಲ್ಲದರ ನಡುವೆ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿ, ನನ್ನ ಕರಿ ಟೋಪಿಯನ್ನ ಕಿತ್ತುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಚನ್ನಪಟ್ಟಣ, ಕನಕಪುರದಿಂದ ರೌಡಿಶೀಟರ್‌ಗಳನ್ನು ಕರೆಸಿದ್ದಾರೆ ಎಂದು ಮುನಿರತ್ನ ಗಂಭೀರವಾಗಿ ಆರೋಪಿಸಿದರು. ಇದು ಕಾಂಗ್ರೆಸ್ ಫಂಕ್ಷನ್. ಏಯ್ ಟೋಪಿ ಬಾರೋ ಇಲ್ಲಿ ಅಂತಾ ಅವಮಾನ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೀನಿ ಅಂದ್ರೆ ಪೊಲೀಸರೇ ಕಾರಣ ಎಂದರು. ಡಿಕೆಶಿ ಹೊರಡುವ ತನಕ ಜೆ.ಪಿ.ಪಾರ್ಕ್‌ನಲ್ಲೇ ಇದ್ದ ಮುನಿರತ್ನ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ
ಇದೇ ವೇಳೆ ಮುನಿರತ್ನ ಬೆಂಬಲಕ್ಕೆ ಬಿಜೆಪಿ ನಾಯಕರು ನಿಂತಿದ್ದು, ಕರಿಟೋಪಿ ಕೂಗಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಮುಸ್ಲಿಂ ಟೋಪಿಗೆ ಜಾಲರಿ ಟೋಪಿ ಅಂತಾ ಕರೀರಿ ಅಂತಾ ಜೋಷಿ ಟಕ್ಕರ್ ಕೊಟ್ರೆ, ಡಿಕೆಶಿಗೆ ಮದ ಅಂತಾ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ
ಒಟ್ನಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಪೊಲಿಟಿಕಲ್ ವಾರ್‌ಗೆ ಸಾರ್ವಜನಿಕ ಸಭೆ ವೇದಿಕೆಯಾಗಿದ್ದು, ವಿಪರ್ಯಾಸವೇ ಆಗಿದ್ದು, ಕರೆದು ಕೆಣಕಿದ್ರಾ ಡಿಕೆಶಿ? ಆರ್‌ಆರ್‌ನಗರ ವಾರ್ ಎಲೆಕ್ಷನ್‌ಗಷ್ಟೇ ಸೀಮಿತವಾಗದೇ ಆಗಾಗ್ಗೆ ಬೆಂಕಿ ಹೊತ್ತಿಕೊಳ್ಳುವ ರಾಜಕಾರಣ ಏಕೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ. ಇದನ್ನೂ ಓದಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ 100% ಆರ್‌ಎಸ್‌ಎಸ್ ಬ್ಯಾನ್: ಎಂ. ಲಕ್ಷ್ಮಣ್
ರಾಯಚೂರು: ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು (RSS) ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು. ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್ ರಾಯಭಾರಿಗೆ ಪಾಕಿಸ್ತಾನ ಸಮನ್ಸ್
ಆರ್‌ಎಸ್‌ಎಸ್‌ನವರು ಭಾರತದ ತಾಲಿಬಾನಿಗಳು ಅನ್ನೋ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರದ ಕುರಿತು ಮಾತನಾಡಿ, ಸಿದ್ದರಾಮಯ್ಯ ಆರ್‌ಎಸ್‌ಎಸ್‌ನವರು ತಮ್ಮದು ದೊಡ್ಡ ಸಂಸ್ಥೆ ಅಂತ ಹೇಳುತ್ತಾರೆ, ಆದ್ರೂ ಕೂಡ ರಿಜಿಸ್ಟ್ರೇಷನ್ ಮಾಡಿಕೊಳ್ಳಲ್ಲಾ ಅಂದ್ರೆ ಅದು ಬಹಳ ಸೂಜಿಗದ ವಿಷಯ. ಅದು ಪರಿಶೀಲನೆ ಮಾಡಬೇಕು, ರಿಜಿಸ್ಟ್ರೇಷನ್ ಆಗಬೇಕು ಅಂದರೆ ಆಗಬೇಕು. ತಾಲಿಬಾನಿಗಳ ಮೈಂಡ್ ಸೆಟ್, ಆರ್‌ಎಸ್‌ಎಸ್ ಮೈಂಡ್ ಸೆಟ್ ಅಷ್ಟೇ ಇದೆ. ಧರ್ಮವನ್ನ ಸಂಕುಚಿತ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ 100% ಆರ್‌ಎಸ್‌ಎಸ್ ಬ್ಯಾನ್: ಎಂ. ಲಕ್ಷ್ಮಣ್
ಬೆಂಗಳೂರು: ಸ್ಥಳೀಯ ಶಾಸಕರಿಗೆ ತಾಳ್ಮೆ ಇಲ್ಲ. ಕಾರ್ಯಕ್ರಮ ಹಾಳು ಮಾಡಲೆಂದೇ ಆಗಮಿಸಿದ್ದರು. ಇಂತವರನ್ನು ಗೆಲ್ಲಿಸಿದ್ದು ನಿಮ್ಮ ತಪ್ಪು. ಮುಂದೆಯಾದರೂ ಸರಿಪಡಿಸಿಕೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುನಿರತ್ನ (Munirathna) ಅವರಿಗೆ ಟಾಂಗ್ ನೀಡಿದ್ದಾರೆ.
ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ (JP Park) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೇನು ಸರ್ಕಾರದ ಶಿಲಾನ್ಯಾಸ ಮಾಡುವ ಕಾರ್ಯಕ್ರಮ ಅಲ್ಲ. ಇದು ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮ. ಎಲ್ಲರಿಗೆ ಏನು ಗೌರವ ಕೊಡಬೇಕು ಅದು ಕೊಟ್ಟಿದ್ದೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ
ಆರ್‌ಎಸ್‌ಎಸ್ (RSS) ಸಂಸ್ಥೆಗೆ ಅಗೌರವ ತರುವ ಕೆಲಸ ಮುನಿರತ್ನ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಒಂದು ಇತಿಹಾಸ ಇದೆ ಅವರೇನು ಮಾಡಬೇಕು ಮಾಡುತ್ತಿದ್ದಾರೆ. ಅವರ ಹೆಸರನ್ನು ಕೆಡಿಸುವ ಕೆಲಸ ಇಲ್ಲಿ ನಡೆಯುತ್ತಿದೆ. ಜಿಬಿಎ ಸಭೆಗೆ ಬಂದಿಲ್ಲ. ಅಲ್ಲಿ ಬಂದು ಸಮಸ್ಯೆ ಹೇಳಿಲ್ಲ. ಇಲ್ಲಿ ಬಂದು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರು ನಾಗರೀಕರ ಜೊತೆ ನಡೆಯಬೇಕು ಎಂದು ಎಲ್ಲರಿಗೂ ಆಹ್ವಾನ ಕೊಟ್ಟಿದ್ದೇನೆ. ಬೆಳಗ್ಗೆಯಿಂದ ಎರಡು ತಾಸು ನಡೆದು ಸಮಸ್ಯೆ ಕೇಳಿದ್ದೇನೆ. ಎಲ್ಲರ ಮಾಹಿತಿ, ಫೋನ್ ನಂಬರ್ ತಗೊಂಡಿದ್ದೇನೆ ಅವರ ಸಮಸ್ಯೆ ಬಗೆಹರಿಸುತ್ತೇನೆ. ಅವರನ್ನು ಸಂಪರ್ಕ ಮಾಡುವ ಕೆಲಸ ಮಾಡುತ್ತೇನೆ. ಉಳಿದ ಜನರು 1533ಗೆ ಕರೆ ಮಾಡಿ ನಿಮ್ಮ ಸಮಸ್ಯೆ ಹೇಳಬಹುದು ಎಂದರು. ಇದನ್ನೂ ಓದಿ: ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ
ಗುತ್ತಿಗೆದಾರರ ಬಿಲ್ ಬಾಕಿ ಕ್ಲೀಯರ್ ಮಾಡಲು ಕಮಿಷನ್ ಕೇಳುತ್ತಿದ್ದಾರೆ ಎಂಬುದನ್ನು ಕೇಳಲ್ಪಟ್ಟೆ. ಜೆಪಿ ಪಾರ್ಕ್‌ನಲ್ಲೂ ಕೂಡ ಸಾಕಷ್ಟು ಕೆಲಸ ನಿಂತು ಹೋಗಿದೆ. ಶೌಚಾಲಯ, ಸ್ವಿಮ್ಮಿಂಗ್ ಪೂಲ್, ಟ್ರ‍್ಯಾಕ್ ಎಲ್ಲಾ ಸಮಸ್ಯೆ ಬಗೆಹರಿಯುತ್ತೆ. ಮಳೆ ನೀರು, ರಸ್ತೆ ಎಲ್ಲಾ ಸಮಸ್ಯೆಯನ್ನು ಬಗೆ ಹರಿಸುತ್ತೇನೆ. ಸಾರ್ವಜನಿಕರ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಅದಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಹೇಳಿದರು.
ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ವೇದಿಕೆಗೆ ಆಹ್ವಾನಿಸಿದರು. ಆಹ್ವಾನಿಸಿದ ಹಿನ್ನೆಲೆಯಲ್ಲಿ ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್ ಕೇಳಿದರು. ಆದರೆ ಡಿಕೆಶಿ ಮೈಕ್ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್ ಪಡೆದು, ಆರ್‌ಎಸ್‌ಎಸ್ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ನನಗೆ ಈ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನ ಇಲ್ಲ. ಆದರೆ ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರಣ ನಾನೊಬ್ಬ ಪ್ರಜೆಯಾಗಿ ಭಾಗವಹಿಸಿದ್ದೇನೆ ಎಂದು ಹೇಳಿ ವೇದಿಕೆಯಿಂದ ಇಳಿದು ಮತ್ತೆ ಜನರ ಮಧ್ಯೆ ಕುಳಿತರು.
ಸಭಾ ಕಾರ್ಯಕ್ರಮದಲ್ಲಿ ನಿರೂಪಕರು ಮುನಿರತ್ನ ಅವರನ್ನು ಸ್ವಾಗಿಸಿ ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ವೇದಿಕೆ ಏರಿದ ಮುನಿರತ್ನ, ನಾನೊಬ್ಬ ಜನಪ್ರತಿನಿಧಿಯಾಗಿದ್ದೇನೆ ನನಗೆ ಆಹ್ವಾನ ಇಲ್ಲ. ಈ ಕ್ಷೇತ್ರದ ಸಂಸದರಿಗೂ ಆಹ್ವಾನ ಇಲ್ಲ. ಇದು ಸರ್ಕಾರಿ ಕಾರ್ಯಕ್ರಮವೇ ಅಥವಾ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಅಸಮಾಧಾನ ಹೊರಹಾಕಿದರು. ಮುನಿರತ್ನ ಆಕ್ರೋಶ ಹೊರ ಹಾಕುತ್ತಿದ್ದಂತೆ ಅಧಿಕಾರಿಗಳು ಮತ್ತು ಪೊಲೀಸರು ಮುನಿರತ್ನ ಅವರನ್ನು ಸುತ್ತುವರೆದು ಮೈಕ್ ಪಡೆದುಕೊಂಡರು.
ಮುನಿರತ್ನ ಮಾತನಾಡುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು.
– ಜಾರಕಿಹೊಳಿ ಗುಂಪಿಗೆ ಆರಂಭಿಕ ಮೇಲುಗೈ – 6 ತಾಲೂಕಿನಲ್ಲಿ ಅವಿರೋಧ ಆಯ್ಕೆ
ಬೆಳಗಾವಿ: ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ (DCC Bank) ಶನಿವಾರ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 16 ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಇಳಿದಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ (Jarkiholi Brothers) ಗುಂಪು ಮೆಲುಗೈ ಸಾಧಿಸಿದೆ.
ಅ.19 ರಂದು ನಡೆಯಲಿರುವ ಮತದಾನಕ್ಕೆ ಈ ವರೆಗೂ ಒಟ್ಟು 64 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಗುಂಪು ಮೇಲುಗೈ ಸಾಧಿಸಿದೆ.
ಹಾಲಿ, ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13 ಜನರ ತಂಡವನ್ನು ಸಿದ್ಧಪಡಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೇರೆ ಕಡೆಗಳಲ್ಲಿ ತಮ್ಮವರನ್ನು ಅಖಾಡಕ್ಕಿಳಿಸಿದ್ದಾರೆ.
ರಮೇಶ್ ಕತ್ತಿ (Ramesh Katti) ಮತ್ತು ಲಕ್ಷ್ಮಣ ಸವದಿ (Laksham savdi) ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಗುಂಪಿನವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ
ಅವಿರೋಧ ಆಯ್ಕೆ: ಗೋಕಾಕ್‌ನಿಂದ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯರಗಟ್ಟಿಯಿಂದ ವಿಶ್ವಾಸ್ ವೈದ್ಯ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಮೂಡಲಗಿ ನೀಲಕಂಠ ಜಾರಕಿಹೊಳಿ ಗುಂಪಿನಲ್ಲಿದ್ದವರು ಅವಿರೋಧ ಆಯ್ಕೆಯಾದರೆ ಇತ್ತ ಯಾವುದೇ ಗುಂಪಿನಲ್ಲಿ ಗುರುತಿಸಿಕೊಳ್ಳದೇ ಚಿಕ್ಕೋಡಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಗಣೇಶ್ ಹುಕ್ಕೇರಿ ಕೂಡ ಆಯ್ಕೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ಮೂರು ಗಂಟೆಯವರೆಗೂ ಕಾದು ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಶಾಸಕ ವಿಶ್ವಾಸ್ ವೈದ್ಯ, ನೀಲಕಂಠ, ಗಣೇಶ್ ಹುಕ್ಕೇರಿ ಬೆಂಬಲಿಗರು ಗುಲಾಲ್ ಹಚ್ಚಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಾರಕಿಹೊಳಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.
ಒಂದು ಕಡೆ ಜಾರಕಿಹೊಳಿ ಬ್ರದರ್ಸ್ ಆರಂಭಿಕ ಹಂತದಲ್ಲಿ ಮೇಲುಗೈ ಸಾಧಿಸಿದರೂ ಠಕ್ಕರ್ ಕೊಡಲು ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಹೇಗಾದರೂ ಮಾಡಿ ಅಧ್ಯಕ್ಷಗಾದಿ ಹಿಡಿಯಬೇಕು ತಮ್ಮ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಪ್ಲ್ಯಾನ್ ಮಾಡ್ತಿದ್ದು ಅ.19ರ ವರೆಗೂ ಕಾದು ನೋಡಿ ಅಂತಿದ್ದಾರೆ.
ಇದೇ ಮೊದಲ ಬಾರಿಗೆ ಅಣ್ತಮ್ಮಂದಿರು ತಾವು ಸ್ಪರ್ಧೆ ಮಾಡುವುದನ್ನ ಬಿಟ್ಟು ತಮ್ಮ ಕುಡಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದು ಈ ಮೂಲಕ ಜಾರಕಿಹೊಳಿ ಮನೆತನದ ಎರಡನೇ ಪೀಳಿಗೆ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದೆ. ಈ ಕುರಿತು ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಾವು ಎಳೆದುಕೊಂಡು ಹೋಗುತ್ತಿರುವ ತೇರನ್ನು ಮಕ್ಕಳು ಎಳೆಯಬೇಕು ಜನರ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ಚುನಾವಣೆಗೆ ನಿಲ್ಲಿಸಿದ್ದಾಗಿ ಹೇಳಿದ್ದಾರೆ.
ತಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಎಂಟ್ರಿಯಾಗಿದ್ದಾರೆ. ಸಹಕಾರಿ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದು ಜಾರಕಿಹೊಳಿ ಸಹೋದರರ ಮತ್ತೊಂದು ದಾಳ ಅಂತಾ ಹೇಳಲಾಗುತ್ತಿದ್ದು ಬಾಲಚಂದ್ರ ಜಾರಕಿಹೊಳಿ ಕೂಡ ರಾಜಕಾರಣದಲ್ಲಿ ಎಲ್ಲವೂ ಮಾಡಬೇಕು ಅಂತಾ ಹೇಳಿದ್ದಾರೆ.
ಒಟ್ಟಿನಲ್ಲಿ ಸಾಕಷ್ಟು ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಕ್ಟೋಬರ್ 19ರಂದು ಮತದಾನ ನಡೆಯಲಿದ್ದು ಈಗಾಗಲೇ ಆರು ತಾಲೂಕಿನಲ್ಲಿ ಯಾವುದೇ ನಾಮ ಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧ ಆಯ್ಕೆ ಖಚಿತವಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇತ್ತ ಜಾರಕಿಹೊಳಿ ಬ್ರದರ್ಸ್ ಕಡೆಯಿಂದ ಡಿಸಿಸಿ ಬ್ಯಾಂಕ್ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಲಿಂಗಾಯತ ಅಸ್ತ್ರ ಪ್ರಯೋಗ ಆಗಿದ್ದು ಇದರಿಂದ ತಮ್ಮ ಗುಂಪು ಗೆದ್ದರೆ ಲಿಂಗಾಯತರೇ ಅಧ್ಯಕ್ಷ ಅಂತಾ ಬಾಲಚಂದ್ರ ಹೇಳಿದ್ದು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.
ಬೆಂಗಳೂರು: ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD DeveGowda) ಅವರ ಆರೋಗ್ಯ ವಿಚಾರಿಸಿದರು. ಜೊತೆಗೆ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.
ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ. pic.twitter.com/daFBQrz4QG
ಸದ್ಯಕ್ಕೆ ಆಸ್ಪತ್ರೆಯಲ್ಲೇ ಚಿಕಿತ್ಸೆ
ಇತ್ತೀಚೆಗೆ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Bengaluru Manipal Hospital) ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.
ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕರಾದ ದೇವೇಗೌಡರು ಚೇತರಿಸಿಕೊಂಡು ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಕ್ಷ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಹೆಚ್‌ಡಿಕೆ ಹೇಳಿದ್ದೇನು?
ಇನ್ನೂ ದೊಡ್ಡಗೌಡರ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ 3-4 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು 2 ದಿನಗಳ ಹಿಂದೆ ಹೇಳಿದ್ದರು.