Tag: bjp

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

  • ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    – ನಾನು ದುರ್ಬಲನಾಗಿದ್ದೇನೆ ಎಂಬ ಸಂದೇಶವನ್ನ ಮೋದಿ ಮಹಿಳೆಯರಿಗೆ ರವಾನಿಸಿದ್ದೀರಿ ಎಂದು ಟೀಕಿಸಿದ್ದಾರೆ

    ನವದೆಹಲಿ: ಅಫ್ಘಾನ್‌ ವಿದೇಶಾಂಗ ಸಚಿವ (Taliban Minister) ಅಮೀರ್ ಖಾನ್ ಮುತ್ತಕಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ ವಿಧಿಸಿದ ಕ್ರಮದ ವಿರುದ್ಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿಪಕ್ಷಗಳಿಂದ ಟೀಕೆ ವ್ಯಕ್ತವಾದ ಬೆನ್ನಲ್ಲೇ, ಸುದ್ದಿಗೋಷ್ಠಿಯಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

    ಈ ಕುರಿತು ಸ್ಪಷ್ಟನೆ ಬಿಡುಗಡೆ ಮಾಡಿರುವ ವಿದೇಶಾಂಗ ಸಚಿವಾಲಯ ಶುಕ್ರವಾರ ಅಫ್ಘಾನ್‌ ವಿದೇಶಾಂಗ ಸಚಿವರು ದೆಹಲಿಯಲ್ಲಿ ನಡೆಸಿದ ಮಾಧ್ಯಮ ಸಂವಾದದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಯಾವುದೇ ಪಾತ್ರವಿಲ್ಲ ಎಂದು ಹೇಳಿದೆ.

    ಮುತ್ತಕಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಯಾವುದೇ ಮಹಿಳಾ ಪತ್ರಕರ್ತರು ಉಪಸ್ಥಿತರಿರದಿದ್ದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ತಾಲಿಬಾನ್ ಸಚಿವರು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಕೇವಲ ಪುರುಷ ಪತ್ರಕರ್ತರು ಉಪಸ್ಥಿತರಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, ಮೋದಿಯವರೆ, ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನ ಹೊರಗಿಡಲು ಅವಕಾಶ ನೀಡುವ ಮೂಲಕ, ನಾನು ನಿಮ್ಮ ಬೆಂಬಲಕ್ಕೆ ನಿಲ್ಲಲಾರದಷ್ಟು ದುರ್ಬಲನಾಗಿದ್ದೇನೆ ಎಂಬ ಸಂದೇಶವನ್ನು ಭಾರತೀಯ ಮಹಿಳೆಯರಿಗೆ ರವಾನಿಸಿದ್ದೀರಿ ಎಂದು ಟೀಕಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯ ನಾರಿ ಶಕ್ತಿ ಘೋಷಣೆಯನ್ನೂ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ, ನಮ್ಮ ದೇಶದಲ್ಲಿ ಪ್ರತಿಯೊಬ್ಬ ಮಹಿಳೆಗೂ ಎಲ್ಲ ಸ್ಥಳಗಳಲ್ಲೂ ಭಾಗವಹಿಸುವ ಸಮಾನ ಹಕ್ಕಿದೆ. ಆದ್ರೆ, ಇಂತಹ ತಾರತಮ್ಯದ ಕುರಿತ ನಿಮ್ಮ ಮೌನವು, ನಿಮ್ಮ ನಾರಿ ಶಕ್ತಿ ಘೋಷಣೆಯ ಖಾಲಿತನವನ್ನ ಬಯಲುಮಾಡಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದರು.

  • ಮುಖ್ಯಮಂತ್ರಿ ಆಗೋಕೆ ನನಗೆ ಆತುರ ಇಲ್ಲ: ಡಿ.ಕೆ ಶಿವಕುಮಾರ್‌

    ಮುಖ್ಯಮಂತ್ರಿ ಆಗೋಕೆ ನನಗೆ ಆತುರ ಇಲ್ಲ: ಡಿ.ಕೆ ಶಿವಕುಮಾರ್‌

    ಬೆಂಗಳೂರು: ಮುಖ್ಯಮಂತ್ರಿ ಆಗೋಕೆ ನನಗೆ ಆತುರ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ವಿಪಕ್ಷಗಳ ನವೆಂಬರ್ ಕ್ರಾಂತಿ ಚರ್ಚೆ ವಿಚಾರಕ್ಕೆ ಬ್ರೇಕ್‌ ಹಾಕುವ ಯತ್ನ ಮಾಡಿದ್ದಾರೆ.

    ಲಾಲ್‌ ಬಾಗ್‌ನಲ್ಲಿ ಬೆಂಗಳೂರು (Bengaluru) ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕರ ಭೇಟಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ನವೆಂಬರ್ ಕ್ರಾಂತಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಆಗೋಕೆ ನನಗೆ ಆತುರ ಇಲ್ಲ. ಯಾರೋ ಪಬ್ಲಿಕ್ ನೀವು ಸಿಎಂ ಆಗೋ ಟೈಂ ಹತ್ತಿರ ಬರಲಿ ಅಂದ್ರು. ನಾನು ಅದಕ್ಕೆ ಪ್ರತಿಕ್ರಿಯಿಸಿಲ್ಲ. ನನ್ನ ಹೇಳಿಕೆಯನ್ನ ತಿರುಚುವ ಕೆಲಸ ಆಗ್ತಿದೆ ಎಂದಿದ್ದಾರೆ. ಇದನ್ನೂ ಓದಿ: 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅಸ್ತು – ಲಕ್ಷಾಂತರ ಜನಕ್ಕೆ ಗುಡ್‌ನ್ಯೂಸ್‌ ಕೊಟ್ಟ ಡಿಕೆಶಿ

    ಇದೇ ವೇಳೆ ಮಾಧ್ಯಮಗಳಿಗೆ ಸಲಹೆ ನೀಡಿದ ಅವರು, ಯಾರೋ ನಾಗರಿಕರು ಮುಖ್ಯಮಂತ್ರಿ ಆಗುವ ಸಮಯ ಹತ್ತಿರ ಬಂತಾ ಅಂತ ಕೇಳಿದ್ರು, ಅದಕ್ಕೆ ನಾನು ಉತ್ತರಿಸಿಲ್ಲ. ನನ್ನ ಮಾತು ಹತ್ರ ಬರ್ತಿದೆ ಅಂತ ತಿರುಚಿ ತೋರಿಸಬೇಡಿ. ಸುಳ್ಳು ನ್ಯೂಸ್ ಕ್ರಿಯೇಟ್ ಮಾಡ್ತಿರಾ? ಮೀಡಿಯಾದವರು ರಾಜಕಾರಣ ಮಾಡಬೇಡಿ ಎಂದು ಹೇಳಿದ್ದಾರೆ.

    ನಾನು ಮುಖ್ಯಮಂತ್ರಿ ಆಗೋ ಟೈಂ ಹತ್ತಿರ ಬಂದಿದೆ ಅಂತ ಹೇಳಿಲ್ಲ. ನನ್ನ ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಸುಳ್ಳು ಸುದ್ದಿ ಹಾಕಿದ್ರೆ ಮಾನನಷ್ಟ ಕೇಸ್ ಹಾಕ್ತೀನಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ?

  • ನಾವು ಅಧಿಕಾರಕ್ಕೆ ಬಂದ್ರೆ ಜಿಬಿಎ ರದ್ದು ಮಾಡ್ತೀವಿ: ಆರ್.ಅಶೋಕ್

    ನಾವು ಅಧಿಕಾರಕ್ಕೆ ಬಂದ್ರೆ ಜಿಬಿಎ ರದ್ದು ಮಾಡ್ತೀವಿ: ಆರ್.ಅಶೋಕ್

    ನಾವು (BJP) ಅಧಿಕಾರಕ್ಕೆ ಬಂದ್ರೆ ಜಿಬಿಎ (Greater Bengaluru Authority) ತೆಗೆದು, ಒಂದೇ ಕಾರ್ಪೋರೇಷನ್ ಮಾಡ್ತೀವಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದ್ದಾರೆ.

    ಬೆಂಗಳೂರಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಂಪೇಗೌಡ ಕಟ್ಟಿದ ನಾಡನ್ನ ಒಂದೇ ಮಾಡ್ತೀವಿ. ಜಿಬಿಎ ನಾವು ರದ್ದು ಮಾಡ್ತೀವಿ. ಅಧಿಕಾರ ವಿಕೇಂದ್ರೀಕರಣ ಅಂದರೆ 5 ಪಾಲಿಕೆ ಮಾಡಿದ ಹಾಗೇ ರಾಜ್ಯವನ್ನು ಭಾಗ ಮಾಡ್ತೀರಾ? 5 ಸಿಎಂ ಆಗೋಕೆ ಒಪ್ಪುತ್ತೀರಾ? ಬೆಂಗಳೂರು ಗೆಲ್ಲೋಕೆ ಆಗೊಲ್ಲ ಅಂತ ಕಾಂಗ್ರೆಸ್‍ಗೆ ಗೊತ್ತು. ಅದಕ್ಕೆ ಜಿಬಿಎ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಕೆಲವು ಶಾಸಕರು ಅನುಮತಿ ಪಡೆದು ಬೇರೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಜಿಬಿಎ ಮೊದಲ ಸಭೆ ಇವತ್ತು ಸರ್ಕಾರ ಮಾಡ್ತಿದೆ. ಸರ್ಕಾರ ಅಂತ ಹೇಳಬೇಕಾ ಅಂತ ಅನುಮಾನ ಬಂದಿದೆ. ಸರ್ಕಾರ ಅಂದರೆ ಕಾನೂನು, ಸಂವಿಧಾನ ಎಲ್ಲ ಇರಬೇಕು. ನಿನ್ನೆ ಸಭೆ ಇದೆ ಅಂತ ಫೋನ್ ಮಾಡಿದ್ರು. ಇವತ್ತು ಬೆಳಗ್ಗೆ 12 ಗಂಟೆಗೆ ಅಜೆಂಡಾ ಕೊಟ್ಟರು. ಸಂಜೆ 4 ಗಂಟೆಗೆ ಮೀಟಿಂಗ್ ಅಂತ ಹೇಳಿದ್ದಾರೆ. ಸಭೆ ಮಾಡಬೇಕಾದ್ರೆ 7 ದಿನ ಮುಂಚೆ ನೊಟೀಸ್ ಕೊಡಬೇಕು ಎಂದಿದ್ದಾರೆ.

    ಅಧಿವೇಶನದಲ್ಲಿ ಬಿಲ್ ಕೊಡಬೇಕಾದ್ರೆ ಮೊದಲು ಕೊಡ್ತಾರೆ. ಜಿಬಿಎ ಅಜೆಂಡಾ ಓದೋಕೆ ಆಗೊಲ್ಲ. 12 ಗಂಟೆಗೆ ಅಜೆಂಡಾ ಕೊಟ್ಟಿದ್ದಾರೆ. ಹೇಗೆ ನಾವು ಓದೋದು? ನೋಟಿಸ್ ಕೊಟ್ಟಿರೋದು ನಮಗೆ ಗೊತ್ತಿಲ್ಲ. ಇವರ ಯೋಗ್ಯತೆ ಏನು ಅಂತ ಗೊತ್ತಾಗ್ತಿದೆ. ಇವರಿಗೆ ಜವಾಬ್ದಾರಿ ಇದೆಯಾ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

  • ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಹುಬ್ಬಳ್ಳಿ: ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ (Quran) ಪಠಣ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಶಾಸಕ ಬೆಲ್ಲದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.

    ಧಾರವಾಡ (Dharwad) ಡಿಸಿ ಕಚೇರಿ ಎದುರು ಹೋಮ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಸರ್ಕಾರಿ ಕಚೇರಿ ಶುದ್ಧೀಕರಣ ಮಾಡೋದಾಗಿ ರುದ್ರಪಠಣ ಮಾಡಿ ಅರ್ಚಕರ ಮೂಲಕ ಹೋಮ ಮಾಡಿಸಿದ್ರು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಮುಲ್ಲಾ ಮೋಕ್ಷ ಹೋಮ ಎಂದು ಪ್ಲೆಕಾರ್ಡ್ ಹಿಡಿದು ಕಿಡಿಕಾರಿದ್ರು. ಕಾಂಗ್ರೆಸ್ ಶಾಸಕರಿಗೆ (Congress MLAs), ಸಚಿವರಿಗೆ ದೇವರು ಒಳ್ಳೆ ಬುದ್ಧಿಕೊಡಲಿ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಮಂಗಳಾರತಿ ನೆರವೇರಿಸಿದ್ರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಬಳಿಕ ಮಾತನಾಡಿ, ಸರ್ವರನ್ನೂ ಸಮನಾಗಿ ನೋಡುವ ಸಿದ್ಧಾರೂಢ ಮಠದಲ್ಲಿ ಕುರಾನ್ ಪಠಾಣ್ ಮಾಡುವ ಕೆಲಸ ಸಂತೋಷ್ ಲಾಡ್ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ನಡೆದಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

  • ದಾವಣಗೆರೆ | ರಾಮಜ್ಯೋತಿ ರಥಯಾತ್ರೆ ದುರಂತಕ್ಕೆ 35 ವರ್ಷ – ಫೈರಿಂಗ್‌ನಲ್ಲಿ ಮೃತಪಟ್ಟವರ ಬ್ಯಾನರ್‌ ತೆರವಿಗೆ ಭಾರೀ ವಿರೋಧ

    ದಾವಣಗೆರೆ | ರಾಮಜ್ಯೋತಿ ರಥಯಾತ್ರೆ ದುರಂತಕ್ಕೆ 35 ವರ್ಷ – ಫೈರಿಂಗ್‌ನಲ್ಲಿ ಮೃತಪಟ್ಟವರ ಬ್ಯಾನರ್‌ ತೆರವಿಗೆ ಭಾರೀ ವಿರೋಧ

    ದಾವಣಗೆರೆ: ನಗರದಲ್ಲಿ  (Davangere) ಶಿವಾಜಿ, ಐ ಲವ್ ಮಹಮ್ಮದ್, ರಾಮನ ಫ್ಲೆಕ್ಸ್ ವಿವಾದದ ಬಳಿಕ ಮತ್ತೊಂದು ಫ್ಲೆಕ್ಸ್ ವಿವಾದ ಮುನ್ನೆಲೆಗೆ ಬಂದಿದೆ.

    ಅಡ್ವಾಣಿ (L.K Advani) ನೇತೃತ್ವದ ರಾಮಜ್ಯೋತಿ ರಥಯಾತ್ರೆ (Ram Rath Yatra) ವೇಳೆ ನಗರದಲ್ಲಿ ನಡೆದಿದ್ದ ಫೈರಿಂಗ್‌ಗೆ 8 ಜನ ಬಲಿಯಾಗಿದ್ದರು. ಈ ಘಟನೆ ನಡೆದು ಇಂದಿಗೆ 35 ವರ್ಷಗಳು ಕಳೆದಿವೆ. ಈ ಹಿನ್ನಲೆ ವೆಂಕಟೇಶ್ವರ ವೃತ್ತದಲ್ಲಿ ಮೃತಪಟ್ಟವರ ಬ್ಯಾನರ್‌ ಹಾಕಿ ಹಿಂದೂ ಕಾರ್ಯಕರ್ತರು ಗೌರವ ನಮನ ಸಲ್ಲಿಸಿದ್ದರು. ಈ ವಿವಾದಾತ್ಮಕ ಫ್ಲೆಕ್ಸ್‌ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಪೊಲೀಸರ ನಡೆಗೆ ಹಿಂದೂ ಕಾರ್ಯಕರ್ತರು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆಯಾಗಿದ್ದ ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ

    ಶಾಂತಿಯಿಂದ ಗೌರವ ಅರ್ಪಣೆ ಮಾಡಿದ್ರೆ ಯಾಕೆ ವಿರೋಧ? ಐ ಲವ್ ಮಹಮ್ಮದ್ ಬ್ಯಾನರ್‌ಗೆ ಅವಕಾಶ ನೀಡ್ತಿರಿ. ಹಿಂದೂ ಹಬ್ಬಗಳಿಗೆ ತೊಂದರೆ ಕೊಡ್ತೀರಿ. ಮುಸ್ಲಿಮರ ಓಲೈಕೆಗಾಗಿ ಹಿಂದೂ ಹುತಾತ್ಮರ ಬ್ಯಾನರ್ ತೆಗೆಸಿದ್ದೀರಿ. ಶಿವಾಜಿ ಬ್ಯಾನರ್ ತೆಗೆಸಿದ್ರೆ, ಶ್ರೀ ರಾಮನ ಬ್ಯಾನರ್ ಕಿತ್ತಾಕಿದ್ದಾಗ ಸುಮ್ಮನಿದ್ರಿ. ಹಿಂದೂ ವಿರೋಧಿ ನಡೆ ನಿಲ್ಲದಿದ್ದರೆ ಸುನಾಮಿ ರೀತಿ ಬರ್ತಿವಿ ಎಂದು ಹಿಂದೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

    ರಾಮಮಂದಿರ ನಿರ್ಮಾಣದ ವಿಚಾರವಾಗಿ ದಾವಣಗೆರೆಯಲ್ಲಿ 1990ರಲ್ಲಿ ಅಡ್ವಾಣಿ ನೇತೃತ್ವದ ರಾಮಜ್ಯೋತಿ ರಥಯಾತ್ರೆ ನಡೆದಿತ್ತು. ಈ ವೇಳೆ ಕೋಮು ಗಲಭೆ ನಡೆದಿತ್ತು. ಆಗ ಫೈರಿಂಗ್‌ಗೆ 8 ಹೋರಾಟಗಾರರು ಮೃತಪಟ್ಟಿದ್ದರು. ಇದನ್ನೂ ಓದಿ: ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

  • ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    – ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ

    ಬೆಂಗಳೂರು: ಬಿಜೆಪಿ (BJP) ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ (Delhi) ಹೋಗಿ ಬೊಗಳಲಿ ಎಂದು ಸಚಿವ ಎನ್‌ಎಸ್ ಬೋಸರಾಜು (NS Boseraju) ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಾತಿಗಣತಿಗೆ ದಸರಾ ರಜೆ ವಿಸ್ತರಣೆ ಮಾಡಿರೋದಕ್ಕೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಪಿಟೇಷನ್ ಮೇಲೆ ಟೀಕೆ ಮಾಡುತ್ತಿದ್ದಾರೆ. ಜನರು ಸಂತೋಷದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿಯವರು ಮಾತ್ರ ಸಮೀಕ್ಷೆ ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿ ನೆರೆ ಬಂದಿದೆ. ಕೇಂದ್ರ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ. ಸಿಎಂ ವೈಮಾನಿಕ ಸಮೀಕ್ಷೆ ಮಾಡಿದ್ರೂ ವಿರೋಧ ಮಾಡುತ್ತಾರೆ. ಪ್ರವಾಹ ಬಂದಾಗ ರಸ್ತೆ ಮೂಲಕ ಸಮೀಕ್ಷೆ ಮಾಡಲು ಆಗುತ್ತಾ? ಮೋದಿ ಏನು ರಸ್ತೆ ಮೂಲಕ ನೆರೆ ಸಮೀಕ್ಷೆ ಮಾಡ್ತಾನಾ? ಅಂತ ಮೋದಿ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಬಿಜೆಪಿಯವರು ಇಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಬೇಕು. ಇವರಿಗೆ ಏನಾದ್ರೂ ನೀತಿ ನಿಯಮ ಇದೆಯಾ? ಬಿಜೆಪಿಯವರು ಬರೀ ಡ್ರಾಮ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲಾ ಸೃಷ್ಟಿ ಮಾಡುವವರು ಬಿಜೆಪಿಯವರು. ಸತೀಶ್ ಜಾರಕಿಹೊಳಿಯವರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಯತ್ನಾಳ್ ಅವರು ವಿಜಯೇಂದ್ರ ಕಳ್ಳ ಎಂದು ಹೇಳಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಏನು ಹೇಳುತ್ತೋ ಅದೇ ಆಗುತ್ತೆ. ಸಿಎಂ, ಡಿಸಿಎಂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಅಂತಾ ನೂರು ಸಾರಿ ಬಿಜೆಪಿಯವರು ಬೊಗಳುತ್ತಾರೆ. ಡೇಟ್ ಮೇಲೆ ಡೇಟ್ ಕೊಟ್ಟು ಬಿಜೆಪಿಯವರೇ ಹೇಳುತ್ತಿದ್ದಾರೆ. ದಸರಾ ಉದ್ಘಾಟನೆ ಮಾಡಲ್ಲ ಅಂತಾ ಬಿಜೆಪಿಯವರೇ ಹೇಳಿದ್ರು. ಬಿಜೆಪಿಯವರಿಗೇನು ನೀತಿನಿಯಮ ಇದೆಯಾ ಎಂದು ಕಿಡಿಕಾರಿದರು. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ವಿಜಯೇಂದ್ರ ಲೂಟಿ ಮಾಡಿ ಸಾವಿರ ಕೋಟಿ ಇಟ್ಕೊಂಡು ಸರ್ಕಾರ ಬೀಳಿಸ್ತಾನೆ ಅಂತಾ ಯತ್ನಾಳ್ ಹೇಳಿದ್ದಾರೆ. ಮೊದಲು ಬಿಜೆಪಿಯವರು ಅವರ ಮನೆ ಸರಿಪಡಿಸಿಕೊಳ್ಳಲಿ. ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಗುಡುಗಿದರು. ಇದನ್ನೂ ಓದಿ: Bengaluru| ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಮಿನಿ ಟ್ರಕ್

  • ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ (North Karnataka) ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ (State Govt) ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪತ್ರ ಬರೆದಿದ್ದಾರೆ.

    ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸಿಲ್ಲ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ಇತ್ತೀಚಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದರು. ಬಳಿಕ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8,500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

    ಸದ್ಯ ಸೂಕ್ತ ಪರಿಹಾರ ಸಿಗದ ಹಿನ್ನೆಲೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೆರೆ ಪೀಡಿತ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಅಡಿ ಪರಿಹಾರ ಘೋಷಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

  • ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ (Gangavathi) ನಗರದಲ್ಲಿ ನಡೆದಿದೆ.

    ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ.  ಇದನ್ನೂ ಓದಿ:  ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್‌ ಮರಳುತ್ತಿದ್ದಾಗ 7-8 ಜನ ಮಾರಾಕಾಸ್ತ್ರಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

  • ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    – 2001ರಿಂದ 13 ವರ್ಷ ಗುಜರಾತ್ ಸಿಎಂ, 2014ರಿಂದ ಪಿಎಂ ಆಗಿರುವ ಮೋದಿ

    ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ.

    2001ರಲ್ಲಿ ಅ.7ರಂದು ಗುಜರಾತ್ (Gujarat) ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ.ಇದನ್ನೂ ಓದಿ: ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

    ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಮೋದಿ, ತಾವು ಮೊದಲ ಸಲ ಸಿಎಂ ಹಾಗೂ ಪ್ರಧಾನಿ ಆಗಿ ಪ್ರಮಾಣವಚನ ಸ್ವೀಕರಿಸಿದ ಫೋಟೋ ಹಂಚಿಕೊಂಡಿದ್ದಾರೆ. ಜನರ ಜೀವನ ಸುಧಾರಿಸುವುದು ಮತ್ತು ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನನ್ನ ನಿರಂತರ ಪ್ರಯತ್ನವಾಗಿದೆ. ಭಾರತವಾಸಿಗಳ ನಿರಂತರ ಆಶೀರ್ವಾದದಿಂದಾಗಿ ನಾನು ಸರ್ಕಾರದ ಮುಖ್ಯಸ್ಥನಾಗಿ 25ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ. ಭಾರತದ ಜನರಿಗೆ ನನ್ನ ಕೃತಜ್ಞತೆಗಳು. ಇಷ್ಟು ವರ್ಷಗಳಿಂದ, ಜನರ ಜೀವನವನ್ನು ಸುಧಾರಿಸಲು ಮತ್ತು ನಮ್ಮೆಲ್ಲರನ್ನೂ ಪೋಷಿಸಿದ ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ನಾನು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಗುಜರಾತ್‌ನಲ್ಲಿ ಸತತ 3 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು (BJP) ಗೆಲುವಿನತ್ತ ಮುನ್ನಡೆಸಿದ ನಂತರ, ಅವರು ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟವನ್ನು ಸತತ 3 ರಾಷ್ಟ್ರೀಯ ಚುನಾವಣೆಗಳಲ್ಲಿ ಗೆಲ್ಲಿಸಿದ್ದಾರೆ. ಮೋದಿ ಎಂದಿಗೂ ಚುನಾವಣಾ ಸೋಲನ್ನು ಎದುರಿಸಿಲ್ಲ. 13 ವರ್ಷ ಮುಖ್ಯಮಂತ್ರಿ ಹಾಗೂ 11 ವರ್ಷ ಪ್ರಧಾನಮಂತ್ರಿಯಾಗಿ ಅತೀ ದೀರ್ಘಾವಧಿಗೆ ನಿರಂತರವಾಗಿ ಅಧಿಕಾರದಲ್ಲಿರುವ ಅಂದರೆ ಸರ್ಕಾರದ ಮುಖ್ಯಸ್ಥ ಆಗಿರುವ ಏಕೈಕ ವ್ಯಕ್ತಿ ಎಂಬ ಕೀರ್ತಿ ಮೋದಿ ಅವರಿಗಿದೆ.

    ಪ್ರಧಾನಿ ಮೋದಿ ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಹಿನ್ನೆಲೆ ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.ಇದನ್ನೂ ಓದಿ: ಮಧ್ಯಪ್ರದೇಶ | ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳು ಸಾವು