Tag: bjp

  • ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ

    ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ

    ಬೆಂಗಳೂರು: ಎಲ್ಲಾ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ (Siddaramaiah) ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ , ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

    ಬಿಎಲ್‌ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹಿರಂಗವಾಗಿ ಹೇಳುವುದು ಬೇರೆ, ಮುಖ್ಯಮಂತ್ರಿಗಳ ಅಂತರಂಗದ ಅಪೇಕ್ಷೆ ಏನೆಂಬುದನ್ನು ಅವರು ಬಹಿರಂಗಪಡಿಸಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

    ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲಾ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲಾ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದೆ. ಸಿದ್ದರಾಮಯ್ಯನವರಿಗೆ ಆತುರವೇಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ

    ಜಾತಿ ಜನಗಣತಿಯಲ್ಲಿ ಕೆಲವೆಡೆ ವಿಕಲಚೇತನರನ್ನೂ ಬಳಸಿಕೊಳ್ಳುತ್ತಿದ್ದಾರೆ. ಸಮರ್ಪಕ ಸಿದ್ಧತೆಯೂ ಇಲ್ಲ. ಆತುರಾತುರವಾಗಿ ಮುಖ್ಯಮಂತ್ರಿಗಳೇ 15 ದಿನದಲ್ಲಿ ಮುಗಿಸಬೇಕೆನ್ನುತ್ತಾರೆ. ಈ ಆತುರ ಯಾಕೆ ಎಂಬುದು ಯಕ್ಷಪ್ರಶ್ನೆ. ಕೆಲವು ಶಕ್ತಿಗಳು ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿವೆ. ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೆಯೂ ಇಂಥ ಷಡ್ಯಂತ್ರ, ಪ್ರಯತ್ನ ನಡೆದಿತ್ತು. ಅದರಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮುಂದೆಯೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ

  • ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

    ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

    ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ (Election Commission of India) ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ (Bihar Election) ದಿನಾಂಕವನ್ನು ಪ್ರಕಟಿಸಲಿದೆ.

    ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

    ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ ಆಚರಿಸಲಾಗುವ ‘ಛಠ್ ಪೂಜೆ’ ಹಬ್ಬದ ನಂತರ ತಕ್ಷಣವೇ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು. ಇತರ ರಾಜ್ಯಗಳಲ್ಲಿ ಉದ್ಯೋಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಹಬ್ಬಕ್ಕಾಗಿ ಊರಿಗೆ ಮರಳುತ್ತಾರೆ.  ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲೇ ಚುನಾವಣೆ ನಡೆಸಬೇಕೆಂದು ಮನವಿ ಮಾಡಿವೆ. ಇದನ್ನೂ ಓದಿ:  ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬಿತ್ತು ಮರ – ಯುವತಿಯ ಮೃತದೇಹ ವಿಕ್ಟೋರಿಯಾಗೆ ರವಾನೆ

    ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ (NDA) ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇದನ್ನೂ ಓದಿ:  ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020 ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024 ರಲ್ಲಿ ಮಹಾಘಟಬಂಧನ್ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ಗಣತಿ ವಿಷಯದಲ್ಲಿ ಗೊಂದಲ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲಕಲ್ಲೋಲ: ವಿಜಯೇಂದ್ರ

    ಗಣತಿ ವಿಷಯದಲ್ಲಿ ಗೊಂದಲ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲಕಲ್ಲೋಲ: ವಿಜಯೇಂದ್ರ

    ಬೆಂಗಳೂರು: ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಆಕ್ಷೇಪಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರ್ಕಾರ ಈ ನಿರ್ಣಯ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ವಿಕಲಚೇತನರನ್ನೂ ಇದಕ್ಕೆ ಜೋಡಿಸಿದ್ದಾರೆ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ವೇಗೆ ಹೋದಾಗ ಬೆಂಗಳೂರಲ್ಲಿ ಕುರಿ, ಕೋಳಿ, ಚಿನ್ನ, ಫ್ರಿಡ್ಜ್ ಬಗ್ಗೆ ಪ್ರಶ್ನೆ ಕೇಳಬೇಡಿ: ಅಧಿಕಾರಿಗಳಿಗೆ ಡಿಸಿಎಂ ಮೌಖಿಕ ಸೂಚನೆ

    ಸರ್ಕಾರ ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ನ್ಯಾಯ ನೀಡಲಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲಿ ಗೊಂದಲ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಯಾವುದೇ ಪ್ರಧಾನಮಂತ್ರಿಗಳು ನಿರ್ಧಾರ ಮಾಡದೇ ಇರುವಂಥ ನಿರ್ಧಾರ ಇದಾಗಿದೆ. ಇಡೀ ದೇಶದಲ್ಲಿ ಜಾತಿ ಜನಗಣತಿ ಪ್ರಾರಂಭಿಸುವುದಾಗಿ ಪ್ರಕಟಿಸಿದ್ದಾರೆ. ಇದರ ನಡುವೆ ಕರ್ನಾಟಕದಲ್ಲಿ ಈ ರೀತಿ ಗೊಂದಲವನ್ನು ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.

    ಕ್ರಾಂತಿ ಕುರಿತು ಸಚಿವರ ಬಹಿರಂಗ ಹೇಳಿಕೆ
    ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ, ಈ ಜಾತಿ ಜನಗಣತಿಗೂ (Caste census) ಎಲ್ಲೋ ಒಂದು ಕಡೆ ಸಂಬಂಧ ಇದೆಯೇ ಎಂಬುದೂ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ಕಾಂಗ್ರೆಸ್ಸಿನ ಹಿರಿಯ ಸಚಿವರೇ ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಕುರಿತು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.

    ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಸಿದ್ದರಾಮಯ್ಯನವರು (Siddaramaiah) ರ‍್ಯಾಂಪ್ ವಾಕ್ ಮಾಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌ಗೆ ಅಡ್ರೆಸ್ ಇರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಬಿಹಾರ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ
    ಎಐಸಿಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಎನ್ನುತ್ತಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ವರಿಷ್ಠರೂ ಹೇಳಿಲ್ಲ. ಬಿಹಾರ ಚುನಾವಣೆ ಬಳಿಕ ಸಾಕಷ್ಟು ರಾಜಕೀಯ ಬದಲಾವಣೆಗಳು ರಾಜ್ಯದಲ್ಲಿ ಆಗಲಿದೆ. ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಆಗುವುದು ಸ್ಪಷ್ಟ ಎಂದು ಭವಿಷ್ಯ ನುಡಿದ್ದಾರೆ. ಇದನ್ನೂ ಓದಿ: ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗು – ಕೇಂದ್ರಕ್ಕೆ ರಾಜ್ಯ ಶಿಫಾರಸು ಮಾಡುವಂತೆ ಆಗ್ರಹ

  • ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು

    ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು

    ನವದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ಮೋದಿ ಸರ್ಕಾರದಿಂದ ದಾಳಿ ನಡೆಯುತ್ತಿದೆ ಎಂದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆಗೆ ಬಿಜೆಪಿ (BJP) ತಿರುಗೇಟು ನೀಡಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿರುವ ಕೆಲವು ಹೇಳಿಕೆಗಳು ಭಾರತದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತವೆ ಎಂದು ವಾಗ್ದಾಳಿ ನಡೆಸಿದೆ.

    ಈ ಬಗ್ಗೆ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ (Sudhanshu Trivedi) ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಇಂತಹ ಹೇಳಿಕೆ ಮೊದಲ ಬಾರಿಗೆ ನೀಡುತ್ತಿಲ್ಲ. 2017 ಮತ್ತು 2023ರ ನಡುವೆ ಕೊಲಂಬಿಯಾ ವಿಶ್ವವಿದ್ಯಾಲಯ, ಲಂಡನ್‌ನ ಚಾಥಮ್ ಹೌಸ್, ಸ್ಟ್ಯಾನ್‌ಫೋರ್ಡ್, ದುಬೈ, ಸಿಂಗಾಪುರ, ಮಲೇಷ್ಯಾ, ಬಹ್ರೇನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಭಾರತದ ವಿರುದ್ಧ ಇಂತಹದೇ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಇಂತಹ ಹೇಳಿಕೆಗಳು ಭಾರತ ವಿರೋಧಿ ಭಾವನೆಯನ್ನು ಪ್ರತಿಬಿಂಬಿಸುತ್ತವೆ. ಭಾರತದ ಸಮಸ್ಯೆಗಳಿಗೆ ಬ್ರಿಟಿಷರೇ ಕಾರಣ ಎಂದು 1931ರಲ್ಲಿ ಚಾಥಮ್ ಹೌಸ್‌ನಲ್ಲಿ ಮಹಾತ್ಮ ಗಾಂಧಿ ಮಾಡಿದ ಭಾಷಣವನ್ನು ಉಲ್ಲೇಖಿಸಿದ ಅವರು, ಕೊಲಂಬಿಯಾ ಮತ್ತು ಸ್ಟ್ಯಾನ್‌ಫೋರ್ಡ್ನಂತಹ ಸಂಸ್ಥೆಗಳಲ್ಲಿ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗಳು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ – ಕೊಲಂಬಿಯಾದಲ್ಲಿ ರಾಹುಲ್‌ ವಾಗ್ದಾಳಿ

    ಭಾರತದಲ್ಲಿ ತೀವ್ರ ಬಡತನವು 2.3% ಕ್ಕೆ ಇಳಿದಿದೆ ಎಂದು ತೋರಿಸುವ ಜುಲೈ 2025ರ ವಿಶ್ವ ಬ್ಯಾಂಕಿನ ವರದಿಯನ್ನು ಅವರು ಉಲ್ಲೇಖಿಸಿ, ಅಂತರರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ರಾಹುಲ್ ಗಾಂಧಿ ಈ ಸಾಧನೆಗಳನ್ನು ಗುರುತಿಸಲು ಅಥವಾ ಪ್ರಶಂಸಿಸಲು ವಿಫಲರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಪರಂಪರೆಯು ವಿದೇಶಿ ಸಂಪರ್ಕಗಳ ಮೇಲೆ ಅವಲಂಬಿತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್ ಗಾಂಧಿಯವರು ವಿದೇಶದ ವೇದಿಕೆಗಳಲ್ಲಿ ಭಾರತ ಸರ್ಕಾರದ ನೀತಿಗಳನ್ನು ಟೀಕಿಸುವ ಮೂಲಕ ದೇಶದ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಇದು ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಭಾರತದ ಆಂತರಿಕ ವಿಷಯಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಒಡ್ಡಿವೆ ಎಂದು ಕಿಡಿಕಾರಿದ್ದಾರೆ.

  • ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    – ಮೋದಿ ನನ್ನ ಸಂಬಂಧ ಬದಲಾವಣೆ ಮಾಡೋಕೆ ಆಗಲ್ಲ

    ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (H.D Deve Gowda) ಸ್ಪಷ್ಟಪಡಿಸಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ (Elections) ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನವೆಂಬರ್-ಡಿಸೆಂಬರ್ ಒಳಗೆ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್.ಅಶೋಕ್ ಭವಿಷ್ಯ

    ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ ಅಂತ ತಿಳಿಸಿದರು.


    ಕುಮಾರಸ್ವಾಮಿಯವರು 4 ತಿಂಗಳಿಂದ ನಮ್ಮ ರಾಜ್ಯದಲ್ಲಿ ಪ್ರವಾಸ ಮಾಡಿರಲಿಲ್ಲ. ಸ್ವಲ್ಪ ಆರೋಗ್ಯ ಸುಧಾರಣೆ ಆಗಬೇಕಿತ್ತು. ಆರೋಗ್ಯ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ. ಹೊರ ದೇಶದಿಂದ ಬಂದ ಡಾಕ್ಟರ್ ಪರಿಶೀಲನೆ ಮಾಡಿ ಯಾವುದೇ ಸಮಸ್ಯೆ ಇಲ್ಲ. ಅವರು ಎಷ್ಟು ಬೇಕಾದ್ರು ರಾಜಕೀಯದಲ್ಲಿ ಹೋರಾಟ ಮಾಡೋಕೆ ತೊಂದರೆ ಇಲ್ಲ ಎಂದಿದ್ದಾರೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡ್ತಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

  • ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ (Udit Raj ಹೇಳಿಕೆ ನೀಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

    ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

    ಕರ್ನಾಟಕದ ಉಪಮುಖ್ಯಮಂತ್ರಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್‌ಗೆ ನೋಟಿಸ್‌ ಕುರಿತು ಮಾತನಾಡಿ, ಯಾವುದೇ ಸಂಘರ್ಷ ನಡೆಯುತ್ತಿಲ್ಲ. ಇದು ಎಲ್ಲಾ ಪಕ್ಷಗಳಲ್ಲೂ ನಡೆಯುತ್ತದೆ. ಕೆಲವರು ತಮ್ಮ ಆಪ್ತರನ್ನು ಹೊಗಳುತ್ತಾರೆ. ಇತರರು ಹಾಗೆಯೇ ಮಾಡುತ್ತಾರೆ. ಹಾಗಾದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದರೆ, ಅದು ನಿಜವಾಗಿಯೂ ಸಂಘರ್ಷ ಇದೆ ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

  • ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ

    ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ

    ಉಡುಪಿ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿದ್ದಾರೆ.

    ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ, ದೇವಾಲಯದ ಆಡಳಿತ ಮಂಡಳಿಯಿಂದ ಅಣ್ಣಾಮಲೈ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

    ದೇವಾಲಯಕ್ಕೆ ಬಂದಿದ್ದ ಭಕ್ತರು ಅಣ್ಣಾಮಲೈ ನೋಡಲು ಮುಗಿಬಿದ್ದರು. ಅನೇಕರು ಅಣ್ಣಾಮಲೈ ಜೊತೆ ಸೆಲ್ಫಿ ತೆಗೆಸಿಕೊಂಡರು.

  • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ: ರಾಮಲಿಂಗಾರೆಡ್ಡಿ

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ: ರಾಮಲಿಂಗಾರೆಡ್ಡಿ

    ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ (Siddaramaiah) ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.

    ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ 5 ವರ್ಷ ಇರ್ತಾರೆ. ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅಂದುಕೊಂಡವರು. ಆದರೆ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ ಮೇಲೆ ಸಿಎಂ ಬದಲಾವಣೆ ಅನ್ನೋ ವಿಷಯವೇ ಇಲ್ಲ ಎಂದರು. ಇದನ್ನೂ ಓದಿ: ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್‌ ಉಡುಗೊರೆ – ರಾಜ್ಯಕ್ಕೆ 3705 ಕೋಟಿ ರೂ. ಕೊಡುಗೆ: ಪ್ರಹ್ಲಾದ್ ಜೋಶಿ‌

    ಸಿಎಂ ಅವರು ನಾನೇ ಇರುತ್ತೇನೆ ಅಂತ ಹೇಳಿದ್ದಾರೆ. ಡಿಕೆ ಶಿವಕುಮಾರ್ (DK Shivakumar) ಕೂಡಾ ಸಿದ್ದರಾಮಯ್ಯ ಇರುತ್ತಾರೆ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಅನ್ನೋ ಪ್ರಶ್ನೆಯೇ ಕೇಳೋ ಹಾಗೇ ಇಲ್ಲ. ನವೆಂಬರ್ ಕ್ರಾಂತಿ ಇಲ್ಲ. ಬರೀ ಬ್ರಾಂತಿ ಅಷ್ಟೇ. ನವೆಂಬರ್‌ಗೆ ಸಚಿವ ಸಂಪುಟ ಪುನರ್ ರಚನೆ ಆಗಬಹುದು. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಿರ್ಧಾರ ಮಾಡಿ ಯಾವಾಗ ಬೇಕಾದರೂ ಸಂಪುಟ ಪುನರ್ ರಚನೆ ಮಾಡಬಹುದು ಎಂದು ಹೇಳಿದರು.

    ಈಗ ಡಿಕೆ ಶಿವಕುಮಾರ್ ಬೆಂಗಳೂರು ಸಚಿವರು ಆಗಿದ್ದಾರೆ. ಈಗೇನು ಖಾಲಿ ಇಲ್ಲ. ಖಾಲಿ ಇದ್ದರೂ ಕೂಡ ನಾನೇನು ಕೇಳೋಕೆ ಹೋಗಲ್ಲ. ನಾನು ಯಾವತ್ತು ಮಂತ್ರಿ ಆಗಬೇಕು, ಇಂತಹ ಖಾತೆ ಬೇಕು, ಜಿಲ್ಲಾ ಉಸ್ತುವಾರಿ ಬೇಕು ಅಂತ ಕೇಳಿಲ್ಲ. ನನ್ನ ಸರ್ವೀಸ್‌ನಲ್ಲಿ ಕೇಳಿಲ್ಲ. ಈಗಲೂ ಕೇಳಿಲ್ಲ. ಮುಂದೆಯೂ ಕೇಳೊಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೆಂಗಳೂರು ರಸ್ತೆಗುಂಡಿಗಳಿಂದ ಕಾಂಗ್ರೆಸ್‌ಗೆ ಕೆಟ್ಟ ಹೆಸರು ಬಂದಿದೆ – ರಾಮಲಿಂಗಾರೆಡ್ಡಿ

  • ಬೆಂಗಳೂರು ರಸ್ತೆಗುಂಡಿಗಳಿಂದ ಕಾಂಗ್ರೆಸ್‌ಗೆ ಕೆಟ್ಟ ಹೆಸರು ಬಂದಿದೆ – ರಾಮಲಿಂಗಾರೆಡ್ಡಿ

    ಬೆಂಗಳೂರು ರಸ್ತೆಗುಂಡಿಗಳಿಂದ ಕಾಂಗ್ರೆಸ್‌ಗೆ ಕೆಟ್ಟ ಹೆಸರು ಬಂದಿದೆ – ರಾಮಲಿಂಗಾರೆಡ್ಡಿ

    -ಸ್ವಾತಂತ್ರ್ಯ ಪೂರ್ವ ಚಳುವಳಿಯಲ್ಲಿ RSS ಭಾಗಿಯಾಗಿಲ್ಲ

    ಬೆಂಗಳೂರು: ನಗರದಲ್ಲಿರುವ ರಸ್ತೆಗುಂಡಿಗಳಿಂದ (Patholes) ಕಾಂಗ್ರೆಸ್‌ಗೆ (Congress) ಕೆಟ್ಟ ಹೆಸರು ಬಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.

    ಬೆಂಗಳೂರು (Bengaluru) ರಸ್ತೆಗುಂಡಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗುಂಡಿಗಳು ಇಲ್ಲದಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಿಕೆಯದ್ದು ಮತ್ತು ರಾಜ್ಯ ಸರ್ಕಾರದ್ದು. ಬಿಜೆಪಿ ಸರ್ಕಾರ ಇದ್ದಾಗ ಗುಂಡಿಗಳ ಬಗ್ಗೆ ಹೈಕೋರ್ಟ್ ಮಾನಿಟರ್ ಮಾಡಿತ್ತು. ಎರಡು ವರ್ಷ ಹೈಕೋರ್ಟ್ (High Court) ಮಾನಿಟರ್ ಮಾಡಿದೆ. ಮುಖ್ಯ ಆಯುಕ್ತರನ್ನ ಕರೆಸಿ ಚೀಫ್ ಜಸ್ಟೀಸ್ ಮಾನಿಟರ್ ಮಾಡ್ತಿದ್ದರು. ಅದನ್ನ ನೋಡಿ ನಾವು ಗುಂಡಿ ಬೀಳದಂತೆ ನೋಡಿಕೊಳ್ಳಬೇಕಿತ್ತು. ರಸ್ತೆ ಗುಂಡಿಗಳಿಂದ ಬಿಜೆಪಿಗೂ ಹಿಂದೆ ಕೆಟ್ಟ ಹೆಸರು ಬಂದಿತ್ತು. ಈಗ ನಮಗೂ ಟೀಕೆ ಟಿಪ್ಪಣಿಗಳು ಬರುತ್ತಿವೆ ಎಂದರು.ಇದನ್ನೂ ಓದಿ: ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ರಸ್ತೆಗುಂಡಿಗಳು ಬೀಳದ ಹಾಗೇ ನೋಡೋ ಜವಾಬ್ದಾರಿ ನಮ್ಮದಾಗಿತ್ತು. ಸಿಎಂ, ಡಿಸಿಎಂ ಅಕ್ಟೋಬರ್ ಒಳಗೆ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅದರಂತೆ ಮುಚ್ಚುವ ಕೆಲಸ ಆಗುತ್ತದೆ ಎಂದು ಹೇಳಿದರು.

    ಇದೇ ವೇಳೆ ಆರ್‌ಎಸ್‌ಎಸ್‌ಗೆ (RSS) 100 ವರ್ಷ ಪೂರೈಕೆ ಬಗ್ಗೆ ಮಾತನಾಡಿ, ಆರ್‌ಎಸ್‌ಎಸ್ ದೊಡ್ಡ ಸಂಘಟನೆ ದೊಡ್ಡ ಮಾತಿಲ್ಲ. ಆದರೆ ಆರ್‌ಎಸ್‌ಎಸ್ ಅವರು ಸ್ವಾತಂತ್ರ‍್ಯ ಪೂರ್ವ ಚಳುವಳಿಯಲ್ಲಿ ಭಾಗಿಯಾಗೇ ಇಲ್ಲ. ಶಾಲಾ ಮಕ್ಕಳು ಸ್ವಾತಂತ್ರ‍್ಯ ಪೂರ್ವ ಚಳುವಳಿಯಲ್ಲಿ ಭಾಗಿಯಾಗಿದ್ದರು. ಇಷ್ಡು ದೊಡ್ಡ ಸಂಘಟನೆ ಚಳುವಳಿಯಲ್ಲಿ ಭಾಗಿಯಾಗದೇ ಇರೋದು ದುರಾದೃಷ್ಟ ಎಂದರು.

    100 ರೂಪಾಯಿ ನಾಣ್ಯ ಬಿಡುಗಡೆಗೆ ರಾಮಲಿಂಗಾರೆಡ್ಡಿ ವಿರೋಧ ವ್ಯಕ್ತಪಡಿಸಿದರು. ಆರ್‌ಎಸ್‌ಎಸ್ ಅವರು ಭಗವತ್ ಧ್ವಜಕ್ಕೆ ಗೌರವ ಕೊಟ್ಟು, ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿರಲಿಲ್ಲ. ಸ್ವಾತಂತ್ರ‍್ಯ ಬಂದು 52 ವರ್ಷಗಳ ಕಾಲ ನಾಗಪುರ ಮತ್ತು ಆರ್‌ಎಸ್‌ಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿರಲಿಲ್ಲ. ಅದಾದ ಮೇಲೆ ಜನರ ಒತ್ತಾಯಕ್ಕೆ ಮಣಿದು, ಟೀಕೆ ಟಿಪ್ಪಣಿಗಳು ಬಂದ ಮೇಲೆ ರಾಷ್ಟ್ರಧ್ವಜ ಹಾರಿಸಿದರು. ಈಗ ಸ್ವಾತಂತ್ರ‍್ಯ ದಿನ, ಗಣರಾಜ್ಯ ದಿನ ಆಚರಿಸುತ್ತಾರೆ. ಇದರಿಂದ ಆರ್‌ಎಸ್‌ಎಸ್ ಅವರ ರಾಷ್ಟ್ರಪ್ರೇಮ 52 ವರ್ಷಕ್ಕಿಂತ ಮುಂಚೆ ಹೇಗಿತ್ತು ಅಂತ ಗೊತ್ತಾಗುತ್ತದೆ ಅಂತ ಕಿಡಿಕಾರಿದರು.ಇದನ್ನೂ ಓದಿ:ವಿಜಯದಶಮಿ ದಿನವೇ ಬೆಂಗ್ಳೂರಲ್ಲಿ ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು

  • ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ

    ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ

    ಮೈಸೂರು: ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪುನರಾಚ್ಚರಿಸಿದ್ದಾರೆ.

    ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿ ಸಿಎಂ‌ ಆಗಲ್ಲ ಅಂದಿದ್ದರು. ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ: ಸಿದ್ದರಾಮಯ್ಯ

    ಹೈಕಮಾಂಡ್ (High Command) ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಮತ್ತು ಅವರು ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಹೇಳಿದರು.