Tag: BK Singh

  • ಆಳಂದ ಫೈಲ್ಸ್ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳ ತನಿಖೆಗೆ SIT ರಚನೆ

    ಆಳಂದ ಫೈಲ್ಸ್ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳ ತನಿಖೆಗೆ SIT ರಚನೆ

    ಬೆಂಗಳೂರು: ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ (Aland Assembly Constituency) ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಿ ಆದೇಶ ಹೊರಡಿಸಿದೆ.

    ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ. ಇದನ್ನೂ ಓದಿ: ಆಳಂದ ಫೈಲ್ಸ್‌ | ಆನ್‌ಲೈನ್‌ನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಇಂಚಿಚು ವಿವರ ನೀಡಿದ ಚುನಾವಣಾ ಆಯೋಗ

    ಸರ್ಕಾರದ ಆದೇಶದಲ್ಲಿ ಏನಿದೆ?
    2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ (Aland) ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಫೆಬ್ರವರಿ 21ರಂದು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 182, 419, 464, 465 ರಂತೆ ಪ್ರಕರಣ (ಮೊಕದ್ದಮೆ ಸಂಖ್ಯೆ: 26/2023) ದಾಖಲಾಗಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗಬಹುದಾದ ಇತರೇ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನ ರಚಿಸಲಾಗಿದೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ELECTION COMMISSION OF INDIA

    ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023ರ ಕಲಂ 2(ಯು) ಅಡಿಯಲ್ಲಿ ತನಿಖಾ ತಂಡಕ್ಕೆ ಪೊಲೀಸ್‌ ಠಾಣಾಧಿಕಾರ ನೀಡಲಾಗಿದೆ. ಈ ಎಸ್‌ಐಟಿ ತಂಡಕ್ಕೆ ಆಳಂದ ಪ್ರಕರಣ ಸೇರಿದಂತೆ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲೂ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳನ್ನು ತನಿಖೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಡಿಜಿ & ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ಅವಶ್ಯಕವಿರುವ ಇತರೇ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಒಸಗಿಸುವಂತೆ ಆದೇಶದಲ್ಲಿ ತಿಳಿಸಿದೆ.

    rahul gandhi 3

    ಅದರಂತೆ ತನಿಖಾ ತಂಡವು ಎಲ್ಲಾ ಆಮಾಯಗಳಲ್ಲಿ ಪ್ರಕರಣಗಳ ಸಮಗ್ರ ತನಿಖೆ ಕೈಗೊಂಡು, ಶೀಘ್ರದಲ್ಲೇ ತನಿಖೆಯನ್ನು ಪೂರ್ಣಗೊಳಿಸಬೇಕು. ಬಳಿಕ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

  • ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

    ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

    ಬೆಂಗಳೂರು: ಹಾಸನದ (Hassana) ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ (BK Singh) ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    ಪ್ರಕಟಣೆಯಲ್ಲಿ ಏನಿದೆ?
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಪ್‌ನಂತಹ ಮೆಸೆಂಜರ್ ಆಪ್ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.  ಇದನ್ನೂ ಓದಿ: ಚುನಾವಣಾ ಭರಾಟೆ ನಡುವೆ ಅಯೋಧ್ಯೆ ಭೇಟಿ – ರಾಮಲಲ್ಲಾನ ದರ್ಶನ ಪಡೆದ ಮೋದಿ

    ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ 63609 38947 ಈ ನಂಬರ್ ಅನ್ನು ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು.

    ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

     

    ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿ ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸಿಲರ್‌ಗಳು, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರು ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ.